ಬೆಂಗಳೂರು: ರಾಜ್ಯಾದ್ಯಂತ ಗರಿಷ್ಠ ಹಾಗೂ ಕನಿಷ್ಠ ಉಷ್ಣಾಂಶವು ಸಾಮಾನ್ಯಕ್ಕಿಂತ 2 ಡಿಗ್ರಿ ಸೆಲ್ಸಿಯಸ್ ಹೆಚ್ಚಾಗುವ ಸಾಧ್ಯತೆ ಇದೆ. ಹೀಗಾಗಿ ಕೆಲವೆಡೆ ಭಾರಿ ಮಳೆ ಎಚ್ಚರಿಕೆ (Rain News) ಇದ್ದರೂ ಬಹುತೇಕ ಕಡೆಗಳಲ್ಲಿ ಸೆಕೆಯ ವಾತಾವರಣವೇ (Karnataka Weather Forecast) ಇರಲಿದೆ.
ಕರಾವಳಿ ಮತ್ತು ದಕ್ಷಿಣ ಒಳನಾಡಿನ ಹಲವು ಕಡೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಒಳನಾಡಲ್ಲಿ ಮಳೆ ಬದಲು ಒಣಹವೆಯೇ ಮೇಲುಗೈ ಸಾಧಿಸಲಿದೆ. ಕೊಡಗು ಜಿಲ್ಲೆಯಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇರುವುದರಿಂದ ಐಎಂಡಿ ಯೆಲ್ಲೋ ಅಲರ್ಟ್ ನೀಡಿದೆ.
ಮುಂದಿನ 24 ಗಂಟೆಯಲ್ಲಿ ಒಳನಾಡು ಹಾಗೂ ಕರಾವಳಿಯ ಒಂದೆರಡು ಕಡೆಗಳಲ್ಲಿ ಗರಿಷ್ಠ ತಾಪಮಾನವು ಸಾಮಾನ್ಯಕ್ಕಿಂತ 2 ಡಿಗ್ರಿ ಸೆಲ್ಸಿಯಸ್ ಹೆಚ್ಚಾಗುವ ಸಾಧ್ಯತೆ ಇದೆ. ಜತೆಗೆ ಕೆಲವೆಡೆ ಕನಿಷ್ಠ ತಾಪಮಾನವು ಸಾಮಾನ್ಯಕ್ಕಿಂತ 2 ಡಿ.ಸೆ ಹೆಚ್ಚಾಗುವ ಸಾಧ್ಯತೆ.
ಇದನ್ನೂ ಓದಿ: Drugs Case : ಗಾಂಜಾ ರಿಕವರಿಗೆ ತೆರಳಿದ್ದ ಜಿಗಣಿ ಪೊಲೀಸರು ಒರಿಸ್ಸಾದಲ್ಲಿ ಅರೆಸ್ಟ್!
ಇಲ್ಲೆಲ್ಲ ಭಾರಿ ಮಳೆ
ಇನ್ನು ಬೆಂಗಳೂರಲ್ಲಿ ಬೆಳಗ್ಗೆ ಬಿಸಿಲಿನಿಂದ ಕೂಡಿದರೆ, ಮಧ್ಯಾಹ್ನ ಮೋಡ ಕವಿದ ವಾತಾವರಣ ಇರಲಿದೆ. ಸಂಜೆ ಅಥವಾ ರಾತ್ರಿಯಂದು ಪ್ರತ್ಯೇಕ ಕಡೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ. ದಕ್ಷಿಣ ಒಳನಾಡಿನ ಮೈಸೂರು, ಚಾಮರಾಜನಗರ, ಮಂಡ್ಯ, ತುಮಕೂರು, ದಾವಣಗೆರೆ ಮತ್ತು ಚಿತ್ರದುರ್ಗದಲ್ಲಿ ಸಾಧಾರಣದೊಂದಿಗೆ ಭಾರಿ ಮಳೆಯಾಗಬಹುದು.
ಉತ್ತರ ಒಳನಾಡಿನ ಹಾವೇರಿ, ವಿಜಯನಗರ, ಬಳ್ಳಾರಿ, ಕೊಪ್ಪಳ, ಬಾಗಲಕೋಟೆ, ವಿಜಯಪುರ, ರಾಯಚೂರು ಹಾಗೂ ಗದಗದಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಧಾರವಾಡ, ಬೆಳಗಾವಿ, ಯಾದಗಿರಿ ಮತ್ತು ಕಲಬುರಗಿಯಲ್ಲಿ ಚದುರಿದಂತೆ ಹಗುರವಾದ ಮಳೆಯಾಗುವ ಸಾಧ್ಯತೆಯಿದೆ. ಬೀದರ್ ಜಿಲ್ಲೆಯಲ್ಲಿ ಒಣಹವೆ ಮುಂದುವರಿಯುವ ಸಾಧ್ಯತೆ ಇದೆ.
ಮಲೆನಾಡಿನ ಹಾಸನ, ಕೊಡಗು, ಚಿಕ್ಕಮಗಳೂರು, ಶಿವಮೊಗ್ಗ ಹಾಗೂ ಕರಾವಳಿಯ ದಕ್ಷಿಣ ಕನ್ನಡದಲ್ಲಿ ಭಾರಿ ಮಳೆಯಾಗುವ ಮುನ್ಸೂಚನೆಯನ್ನು ನೀಡಲಾಗಿದೆ. ಉತ್ತರ ಕನ್ನಡ, ಉಡುಪಿಯಲ್ಲಿ ಸಾಧಾರಣ ಮಳೆಯಾಗಲಿದೆ.
ಇನ್ನು ನ.2ರಂದು ಕರಾವಳಿ ಹಾಗೂ ದಕ್ಷಿನ ಒಳನಾಡಿನ ಒಂದೆರಡು ಕಡೆಗಳಲ್ಲಿ ಮಳೆಯಾಗಿರುವ ವರದಿ ಆಗಿದೆ. ಉತ್ತರ ಒಳನಾಡಿನಲ್ಲಿ ಒಣಹವೆ ಇತ್ತು. ಪುತ್ತೂರಲ್ಲಿ 3, ಪಣಂಬೂರಲ್ಲಿ 2, ಮಂಗಳೂರು ವಿಮಾನ ನಿಲ್ದಾಣ ಮಾಣಿ, ಧರ್ಮಸ್ಥಳ, ಬೆಳ್ತಂಗಡಿ, ಉಪ್ಪಿನಂಗಡಿ, ರಾಮನಗರ, ಸಿ.ಆರ್.ಪಟ್ಟಣದಲ್ಲಿ ತಲಾ 1 ಸೆಂ.ಮೀ ಮಳೆಯಾಗಿರುವ ವರದಿ ಆಗಿದೆ. ವಿಜಯಪುರದಲ್ಲಿ ಕನಿಷ್ಠ ಉಷ್ಣಾಂಶ 16.6 ಡಿ.ಸೆ ದಾಖಲಾಗಿದೆ.
ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ. ಜತೆಗೆ ರಾಜ್ಯದ ಇನ್ನಷ್ಟು ಸುದ್ದಿಗಾಗಿ ಈ ಲಿಂಕ್ ಕ್ಲಿಕ್ ಮಾಡಿ.