Karnataka Budget 2024: ಇದೊಂದು ಅಭಿವೃದ್ಧಿ ಪರ ಬಜೆಟ್: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್‌ - Vistara News

ಕರ್ನಾಟಕ ಬಜೆಟ್

Karnataka Budget 2024: ಇದೊಂದು ಅಭಿವೃದ್ಧಿ ಪರ ಬಜೆಟ್: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್‌

Karnataka Budget 2024: 2024-25ನೇ ಸಾಲಿನಲ್ಲಿ ಮಹಿಳಾ ಉದ್ದೇಶಿತ ಯೋಜನೆಗಳಿಗೆ 86,423 ಕೋಟಿ ರೂ.ಗಳನ್ನು ಒದಗಿಸಲಾಗಿದೆ. ಇಲಾಖೆಯ ಬಹುತೇಕ ಬೇಡಿಕೆಗಳಿಗೆ ಸಿಎಂ ಸ್ಪಂದಿಸಿದ್ದಾರೆ ಎಂದು ಚಿವೆ ಲಕ್ಷ್ಮಿ ಹೆಬ್ಬಾಳ್ಕರ್‌ ಹೇಳಿದ್ದಾರೆ.

VISTARANEWS.COM


on

Laxmi Hebbalkar
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಐತಿಹಾಸಿಕ ಹಾಗೂ ರಚನಾತ್ಮಕ ಬಜೆಟ್ ಮಂಡಿಸಿದ್ದು, ರಾಜ್ಯದ ಅಭಿವೃದ್ಧಿಗೆ ಪೂರಕವಾಗಿದೆ. ಎಲ್ಲಾ ವರ್ಗದವರಿಗೆ ಸಲ್ಲುವ ಬಜೆಟ್ ಇದಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಹಾಗೂ ಹಿರಿಯ ನಾಗರೀಕರ ಸಬಲೀಕರಣ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್‌ ತಿಳಿಸಿದ್ದಾರೆ.

ರಾಜ್ಯ ಬಜೆಟ್‌ ಬಗ್ಗೆ ಪ್ರತಿಕ್ರಿಯಿಸಿದ ಅವರು, 2024-25ನೇ ಸಾಲಿನಲ್ಲಿ ಮಹಿಳಾ ಉದ್ದೇಶಿತ ಯೋಜನೆಗಳಿಗೆ 86,423 ಕೋಟಿ ರೂ.ಗಳನ್ನು ಒದಗಿಸಲಾಗಿದೆ. ಇಲಾಖೆಯ ಬಹುತೇಕ ಬೇಡಿಕೆಗಳಿಗೆ ಮುಖ್ಯಮಂತ್ರಿಗಳು ಸ್ಪಂದಿಸಿದ್ದಾರೆ. ಮಕ್ಕಳ ಉದ್ದೇಶಿತ ಯೋಜನೆಗಳಿಗೆ ಬಜೆಟ್‌ನಲ್ಲಿ 54,617 ಕೋಟಿ ರೂ.ಗಳನ್ನು ಒದಗಿಸಲಾಗಿದೆ ಎಂದರು.

ಇದನ್ನೂ ಓದಿ | Karnataka Budget 2024: ಬಜೆಟ್‌ನಲ್ಲೂ ಸಾರಿಗೆಗೆ ‘ಶಕ್ತಿ’ ನೀಡಿದ ಸಿದ್ದರಾಮಯ್ಯ; ಏನೆಲ್ಲ ಸಿಕ್ಕಿದೆ?

ಪ್ರಸಕ್ತ ಸಾಲಿನಲ್ಲಿ ಇಲಾಖೆ ನಿರೀಕ್ಷಿಸಿದಷ್ಟು ಬಜೆಟ್‌ ದಕ್ಕಿದ್ದು, ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಯೋಜನೆ ಗೃಹಲಕ್ಷ್ಮಿಗೆ ಈ ಸಾಲಿನಲ್ಲಿ 28,608 ಕೋಟಿ ರೂ. ಒದಗಿಸಲಾಗಿದೆ. ಇದರಿಂದ ಕುಟುಂಬ ನಿರ್ವಹಣೆಯ ಜೊತೆಗೆ ಆದಾಯೋತ್ಪನ್ನ ಚಟುವಟಿಕೆಗಳಲ್ಲಿ ತಮ್ಮನ್ನು ತೊಡಗಿಸಿಕೊಳ್ಳಲು ಮಹಿಳೆಯರಿಗೆ ಈ ಯೋಜನೆ ಅವಕಾಶ ಕಲ್ಪಿಸಲಾಗಿದೆ ಎಂದು ತಿಳಿಸಿದರು.

ಸ್ಮಾರ್ಟ್‌ ಫೋನ್‌ಗಳಿಗೆ 90 ಕೋಟಿ

ಅಂಗನವಾಡಿ ಕಾರ್ಯಕರ್ತೆಯರ ಮತ್ತು ಮೇಲ್ವಿಚಾರಕಿಯರ ಬಹುದಿನಗಳ ಬೇಡಿಕೆಯಾಗಿದ್ದ ಸ್ಮಾರ್ಟ್ ಫೋನ್‌ಗಾಗಿ 90 ಕೋಟಿ ರೂಪಾಯಿ ನೀಡಲಾಗಿದೆ. 90 ಕೋಟಿ ರೂ. ವೆಚ್ಚದಲ್ಲಿ 75,938 ಫೋನ್‌ಗಳನ್ನು ನೀಡಲಾಗುತ್ತಿದ್ದು, ಇದರಿಂದ ಅಂಗನವಾಡಿ ಮೂಲಕ ಕೈಗೊಳ್ಳುವ ಚಟುವಟಿಕೆಗಳನ್ನು ಸುಗಮಗೊಳ್ಳಲಿದೆ. ಮಕ್ಕಳ ಪ್ರಾರಂಭಿಕ ಶಿಕ್ಷಣ ಮತ್ತು ಆರೈಕೆಯಲ್ಲಿ ಸಾಮರ್ಥ್ಯ ಅಭಿವೃದ್ಧಿಗೆ 20,000 ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರ ತರಬೇತಿ ಕಾರ್ಯಾಗಾರಗಳನ್ನು ಆಯೋಜಿಸಲು 10 ಕೋಟಿ ರೂ. ಗಳನ್ನು ಒದಗಿಸಲಾಗಿದೆ ಎಂದು ಸಚಿವರು ಹರ್ಷ ವ್ಯಕ್ತಪಡಿಸಿದರು.

ರಾಜ್ಯದಲ್ಲಿ ಬಾಡಿಗೆ ಕಟ್ಟಡಗಳಲ್ಲಿ ಕಾರ್ಯನಿರ್ವಹಿಸುತ್ತಿರುವ 1,000 ಅಂಗನವಾಡಿಗಳಿಗೆ ಸ್ವಂತ ಕಟ್ಟಡಗಳನ್ನು 200 ಕೋಟಿ ರೂ.ಗಳ ವೆಚ್ಚದಲ್ಲಿ ನಿರ್ಮಿಸಲಾಗುವುದು. ಅಂಗನವಾಡಿ ಕಾರ್ಯಕರ್ತೆಯರಿಗೆ ಮತ್ತು ಸಹಾಯಕಿಯರಿಗೆ ಗ್ರಾಚ್ಯುಟಿ ಸವಲತ್ತುಗಳನ್ನು ನೀಡಲಾಗುವುದು. ಒಟ್ಟಾರೆ ಇದೊಂದು ಅತ್ಯಂತ ಸಮತೋಲಿತ, ಅಭಿವೃದ್ಧಿ ಪರ ಬಜೆಟ್ ಎಂದು ಹೆಬ್ಬಾಳಕರ್ ಪ್ರಶಂಸಿಸಿದ್ದಾರೆ.

ಇದನ್ನೂ ಓದಿ | Karnataka Budget 2024: ಏಳನೇ ವೇತನ ಆಯೋಗ ಶಿಫಾರಸು ಜಾರಿ; ಸರ್ಕಾರಿ ನೌಕರರಿಗೆ ಸಿಎಂ ಸಿಹಿ ಸುದ್ದಿ

ಉಡುಪಿ, ಬೆಳಗಾವಿಗೂ ಹೆಚ್ಚಿನ ಅನುದಾನ

ನನ್ನ ತವರು ಜಿಲ್ಲೆ ಬೆಳಗಾವಿ ಹಾಗೂ ಉಸ್ತುವಾರಿ ಹೊತ್ತಿರುವ ಉಡುಪಿ ಜಿಲ್ಲೆಗಳಿಗೆ ಬಜೆಟ್‌ನಲ್ಲಿ ಹೆಚ್ಚಿನ ಅನುದಾನ ನೀಡಲಾಗಿದೆ. ಇದಕ್ಕೆ ಮುಖ್ಯಮಂತ್ರಿಗಳಿಗೆ ಅಭಿನಂದನೆ ಸಲ್ಲಿಸುತ್ತೇನೆ ಎಂದು ಸಚಿವರು ಹೇಳಿದರು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ದಕ್ಷಿಣ ಕನ್ನಡ

Namaz On Road: ಮಂಗಳೂರಿನ ರಸ್ತೆಯಲ್ಲಿ ನಮಾಜ್ ಮಾಡಿದವರ ವಿರುದ್ಧ ಎಫ್‌ಐಆರ್‌

ಮೇ 24 ರಂದು ಮಂಗಳೂರಿನ ಕಂಕನಾಡಿಯ ಮಸೀದಿ ಎದುರು ರಸ್ತೆಯಲ್ಲಿ ಯುವಕರ ತಂಡ ನಮಾಜ್‌ ಮಾಡಿತ್ತು. ಇದಕ್ಕೆ ಆಕ್ಷೇಪ ವ್ಯಕ್ತವಾಗಿದ್ದರಿಂದ ಪೊಲೀಸರು ಸುಮೋಟೊ ಕೇಸ್‌ ದಾಖಲಿಸಿಕೊಂಡಿದ್ದಾರೆ.

VISTARANEWS.COM


on

Namaz on Road
Koo

ಮಂಗಳೂರು: ನಗರದ ರಸ್ತೆಯಲ್ಲಿ ನಮಾಜ್ (Namaz On Road) ಮಾಡಿದ ವಿಚಾರಕ್ಕೆ ಬಿಜೆಪಿ ನಾಯಕರು ಹಾಗೂ ಹಿಂದು ಸಂಘಟನೆಗಳು ಅಸಮಾಧಾನ ಹೊರಹಾಕಿದ ಬೆನ್ನಲ್ಲೇ ನಮಾಜ್ ಮಾಡಿದವರ ವಿರುದ್ಧ ಕದ್ರಿ ಪೊಲೀಸರು ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಐಪಿಸಿ ಕಲಂ 341, 283, 143 ಜೊತೆಗೆ 149ರಡಿ ಸುಮೋಟೊ ಪ್ರಕರಣ ದಾಖಲಾಗಿದೆ.

ಮೇ 24 ರಂದು ನಗರದ ಕಂಕನಾಡಿಯ ಮಸೀದಿ ಎದುರು ಯುವಕರ ತಂಡ ನಮಾಜ್‌ ಮಾಡಿತ್ತು. ಸಾರ್ವಜನಿಕ ಸ್ಥಳದಲ್ಲಿ ಓಡಾಡಲು ಹಾಗೂ ವಾಹನಗಳ ಸುಗಮ ಸಂಚಾರಕ್ಕೆ ಅಡಚಣೆ ಆಗಿತ್ತು. ಈ ದೃಶ್ಯ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗಿತ್ತು. ಈ ಘಟನೆ ಬಗ್ಗೆ ಹಿಂದು ಸಂಘಟನೆಗಳು ಹಾಗೂ ಬಿಜೆಪಿ ನಾಯಕರು ಕಿಡಿಕಾರಿದ್ದರು. ಅಲ್ಲದೇ ಇಂತಹ ಘಟನೆ ಮರುಕಳಿಸಿದರೆ ಸಾಮೂಹಿಕ ಹನುಮಾನ್ ಚಾಲೀಸಾ ಪಠಣ ಮಾಡುವುದಾಗಿ ವಿಶ್ವ ಹಿಂದೂ ಪರಿಷದ್‌ ಪ್ರಾಂತ ಸಹ ಕಾರ್ಯದರ್ಶಿ ಶರಣ್‌ ಪಂಪ್‌ವೆಲ್‌ ಎಚ್ಚರಿಕೆ ನೀಡಿದ್ದರು. ಇದರ ಬೆನ್ನಲ್ಲೇ ಪೊಲೀಸು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ರಸ್ತೆಯಲ್ಲಿ ನಮಾಜ್‌ ಮಾಡೋದು ನಿಲ್ಲಿಸದಿದ್ರೆ ಹನುಮಾನ್‌ ಚಾಲೀಸಾ ಪಠಣ: ವಿಹಿಂಪ ಎಚ್ಚರಿಕೆ

namaz in road mangalore

ಮಂಗಳೂರು: ಮಂಗಳೂರಿನ ಕಂಕನಾಡಿ ಬಳಿ ರಸ್ತೆಯಲ್ಲೇ ನಮಾಜ್ (Namaz in road) ಮಾಡಿದ ಪ್ರಕರಣಕ್ಕೆ ಸಂಬಂಧಿಸಿ ವಿಶ್ವ ಹಿಂದು ಪರಿಷತ್ತು (Vishwa Hindu Parishad) ಆಕ್ಷೇಪ ವ್ಯಕ್ತಪಡಿಸಿತ್ತು. ರಸ್ತೆ, ಸಾರ್ವಜನಿಕ ಸ್ಥಳಗಳಲ್ಲಿ ನಮಾಜ್ ತಡೆಯುವಂತೆ ಜಿಲ್ಲಾಡಳಿತಕ್ಕೆ ಮನವಿ ಮಾಡಿತ್ತು. ನಿಲ್ಲಿಸದಿದ್ದರೆ ಸಾಮೂಹಿಕವಾಗಿ ಹನುಮಾನ್ ಚಾಲೀಸಾ (Hanuman Chalisa) ಪಠಿಸಿ ಪ್ರತಿಭಟನೆ ನಡೆಸುವ ಎಚ್ಚರಿಕೆ ನೀಡಿತ್ತು.

ಮೊನ್ನೆ ಶುಕ್ರವಾರ ಮಂಗಳೂರಿನ ಕಂಕನಾಡಿಯಲ್ಲಿ ಮಸೀದಿ ಮುಂಭಾಗ ಇರುವ ರಸ್ತೆಯಲ್ಲೇ ನಮಾಜ್ ಮಾಡಲಾಗಿತ್ತು. ರಸ್ತೆಯಲ್ಲಿ ನಡೆದ ನಮಾಜ್ ವೀಡಿಯೋ ವೈರಲ್ ಆಗಿದ್ದು, ರಸ್ತೆಯಲ್ಲಿ ಹೋಗುತ್ತಿದ್ದ ವಾಹನಗಳು ನಮಾಜ್ ಗಮನಿಸಿ ಯೂಟರ್ನ್ ಮಾಡಿಕೊಂಡಿದ್ದವು. ಕದ್ರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿರುವ ಈ ಬೆಳವಣಿಗೆ ಬಗ್ಗೆ ವಿಹಿಂಪ ಆಕ್ಷೇಪಿಸಿತ್ತು.

“ಕೆಲವು ಕಡೆ ರಸ್ತೆ ಮತ್ತು ಸಾರ್ವಜನಿಕ ಜಾಗದಲ್ಲಿ ನಮಾಜ್ ಮಾಡುತ್ತಿರುವ ಘಟನೆಗಳು ನಡೆಯುತ್ತಿರುವುದು ಜಿಲ್ಲೆಯಲ್ಲಿ ಅಶಾಂತಿ ನಿರ್ಮಿಸಲು ಸಂಚು ರೂಪಿಸುತ್ತಿದ್ದಾರೆ. ತಕ್ಷಣ ಜಿಲ್ಲಾಡಳಿತ ಇವರ ವಿರುದ್ಧ ಕ್ರಮ ತೆಗೆದುಕೊಳ್ಳಬೇಕೆಂದು ಆಗ್ರಹಿಸುತ್ತೇವೆ. ಮುಂದಿನ ದಿನಗಳಲ್ಲಿ ಈ ರೀತಿಯ ಘಟನೆ ಮರುಕಳಿಸಿದರೆ ಅದೇ ಸ್ಥಳದಲ್ಲಿ ಸಾಮೂಹಿಕ ಹನುಮಾನ್ ಚಾಲೀಸಾ ಪಠಣ ಮಾಡುವುದರ ಮೂಲಕ ತಡೆಯುತ್ತೇವೆ ಎಂಬ ಎಚ್ಚರಿಕೆ ಕೊಡುತ್ತೇವೆ” ಎಂದು ವಿಶ್ವ ಹಿಂದೂ ಪರಿಷದ್ ಪ್ರಾಂತ ಸಹ ಕಾರ್ಯದರ್ಶಿ ಶರಣ್ ಪಂಪವೆಲ್ ಪ್ರಕಟಣೆಯಲ್ಲಿ ತಿಳಿಸಿದ್ದರು.

ಇದು ಪಾಕಿಸ್ತಾನವಲ್ಲ, ಹಿಂದೂಸ್ತಾನ: ಈಶ್ವರಪ್ಪ

“ರಸ್ತೆಯಲ್ಲಿ ನಮಾಜ್‌ ಮಾಡಲು, ಮುಸಲ್ಮಾನರು ಏನು ಬೇಕಾದರೂ ಮಾಡಬಹುದು ಎನ್ನಲು ಇದು ಪಾಕಿಸ್ತಾನ ಅಲ್ಲ, ಹಿಂದೂಸ್ತಾನ” ಎಂದು ಕೆ.ಎಸ್‌ ಈಶ್ವರಪ್ಪ ಗುಡುಗಿದ್ದಾರೆ. “ಮಂಗಳೂರು ಪಾಕಿಸ್ತಾನದ ಜಿಲ್ಲೆಯಲ್ಲ. ಮಂಗಳೂರು ಹಿಂದುತ್ವ ವೀರರ ಭೂಮಿ. ಇಲ್ಲಿ ರಸ್ತೆಯಲ್ಲಿ ನಮಾಜ್ ಮಾಡಲು ದುಷ್ಟ ಶಕ್ತಿಗಳು ಯಶಸ್ವಿಯಾಗಿದ್ದು ನೋವಾಗಿದೆ. ಕರ್ನಾಟಕದಲ್ಲಿ ಮುಖ್ಯಮಂತ್ರಿಗಳು, ಗೃಹ ಸಚಿವರು, ಸರಕಾರ ಸತ್ತಿದೆಯೋ ಬದುಕಿದೆಯೋ ಗೊತ್ತಾಗ್ತಿಲ್ಲ. ಒಬ್ಬ ಇದು ನಮ್ಮ ಸರ್ಕಾರ ಟಿಪ್ಪು ಸುಲ್ತಾನ್ ರಾಜ್ಯ ಅಂತಾನೆ. ಬಿಟ್ಟರೆ ಸಿಎಂ, ಗೃಹ ಸಚಿವರು, ಹಿಂದುಗಳ ಮನೆಗೆ ಬಂದು ನಮಾಜ್ ಮಾಡುತ್ತಾರೆ” ಎಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: Viral Video: ನಡು ರಸ್ತೆಯಲ್ಲಿ ಪಿಸ್ತೂಲ್‌ ತೋರಿಸಿ ವ್ಯಕ್ತಿ ಮೇಲೆ ಹಲ್ಲೆ; ಅಂತಾರಾಷ್ಟ್ರೀಯ ಮಟ್ಟದ ಶೂಟರ್‌ನಿಂದ ದಾಂಧಲೆ

“ನಿಮ್ಮ ಮನೆಯಲ್ಲಿ ನಜಾಮ್ ಮಾಡಿಸಿ ಬೇಡ ಅನ್ನಲ್ಲ. ಎಲ್ಲ ಮುಸ್ಲಿಮರನ್ನು ಟೀಕೆ ಮಾಡುತ್ತಿಲ್ಲ, ಅರ್ಥ ಮಾಡಿಕೊಳ್ಳಿ. ಇವರು ಯಾರೋ ರಾಷ್ಟ್ರದ್ರೋಹಿಗಳು ಮಾಡುತ್ತಿರುವ ಕುತಂತ್ರ. ಇಂತಹವರನ್ನು ಒಳಗೆ ಹಾಕಿದರೆ ಇತರ ಮುಸ್ಲಿಮರಿಗೂ ಸಂತೋಷ ಆಗುತ್ತದೆ. ಮುಸ್ಲಿಂ ಸಮುದಾಯಕ್ಕೆ ಅಪಮಾನ ಆಗುತ್ತಿದೆ ಅಂತ ಅವರೂ ಹೇಳುತ್ತಿದ್ದಾರೆ. ತುಷ್ಟೀಕರಣ ನೀತಿ ಸರ್ಕಾರವನ್ನು ಸುಡುತ್ತೆ, ಭಸ್ಮ ಮಾಡುತ್ತೆ. ರಸ್ತೆಯಲ್ಲಿ ನಮಾಜ್ ಮಾಡಿದವರನ್ನು ತಕ್ಷಣ ಅರೆಸ್ಟ್ ಮಾಡಿ. ರಾಷ್ಟ್ರದ್ರೋಹದ ಕೃತ್ಯ ಕೇಸ್ ಹಾಕಿ” ಎಂದು ಅವರು ಆಗ್ರಹಿಸಿದ್ದಾರೆ.

Continue Reading

ಕರ್ನಾಟಕ

Karnataka Budget 2024: ದಿಕ್ಕು-ದೆಸೆ ಇಲ್ಲದ ಸಾಲದ ಹೊರೆಯ ಬಜೆಟ್: ಸಚಿವ ಪ್ರಲ್ಹಾದ್‌ ಜೋಶಿ

Karnataka Budget 2024: ರಾಜ್ಯ ಬಜೆಟ್‌ ಸಿಎಂ ಸಿದ್ದರಾಮಯ್ಯ ಅವರ ರಾಜಕೀಯ ಭಾಷಣದಂತೆ ಇತ್ತು ಎಂದು ಕೇಂದ್ರ ಸಚಿವ ಪ್ರಲ್ಹಾದ್‌ ಜೋಶಿ ಟೀಕಿಸಿದ್ದಾರೆ.

VISTARANEWS.COM


on

Union Minister Pralhad Joshi reacts to state budget
Koo

ಹುಬ್ಬಳ್ಳಿ: ಸಿಎಂ ಸಿದ್ದರಾಮಯ್ಯ ಮಂಡಿಸಿರುವ ರಾಜ್ಯ ಬಜೆಟ್ ಯಾವುದೇ ದಿಕ್ಕು-ದಿಸೆ ಇಲ್ಲದ ಒಂದು ದಾಖಲೆ ಪಟ್ಟಿಯಂತಿದೆ. 3.71 ಲಕ್ಷ ಕೋಟಿ ಬೃಹತ್ ಗಾತ್ರದ ಹೆಗ್ಗಳಿಕೆ ಬಿಟ್ಟರೆ, ಇದು ರಾಜ್ಯದ ಜನರ ಕಲ್ಯಾಣ ಮತ್ತು ಆರ್ಥಿಕ ಪ್ರಗತಿಗೆ ಪೂರಕವಾಗಿಲ್ಲ ಎಂದು ಕೇಂದ್ರ ಸಂಸದೀಯ ಸಚಿವ ಪ್ರಲ್ಹಾದ್ ಜೋಶಿ ಟೀಕಿಸಿದ್ದಾರೆ.

ರಾಜ್ಯ ಬಜೆಟ್‌ ಬಗ್ಗೆ ಪ್ರತಿಕ್ರಿಯಿಸಿರುವ ಅವರು, ಈ ಬಜೆಟ್ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ರಾಜಕೀಯ ಭಾಷಣದಂತೆ ಇತ್ತು. ಗ್ಯಾರಂಟಿಗಳಿಗೆ ವರ್ಷವಿಡೀ ಹೇಗೆ ಹಣ ಕ್ರೋಡೀಕರಣ ಎಂಬ ಅಂಶವಿದೆಯೇ ಹೊರತು ಮುಂದಿನ ವರ್ಷಗಳಲ್ಲಿ ರಾಜ್ಯವನ್ನು ಆರ್ಥಿಕ ಸಶಕ್ತಗೊಳಿಸಲು ಯಾವುದೇ ಯೋಜನೆಗಳ ಪ್ರಸ್ತಾಪವೇ ಇಲ್ಲ ಎಂದು ಹೇಳಿದ್ದಾರೆ.

ಹಿಂದಿನ ಸರ್ಕಾರದ ಪ್ರಸ್ತಾವನೆಗಳೇ ಈ ಬಜೆಟ್‌ನಲ್ಲಿವೆ ಅಷ್ಟೇ. ನೀರಾವರಿ ಯೋಜನೆಗಳಿಗೆ ಯಾವುದೇ ಹಣಕಾಸು ಪ್ರಸ್ತಾಪವಿಲ್ಲ. ಕೇಂದ್ರ ಸರ್ಕಾರದ ಅನುಮತಿ ನೇಪಹೇಳಿ ಜಾರಿಕೊಳ್ಳುವ ವ್ಯರ್ಥ ಪ್ರಯತ್ನವೇ ಸಿಎಂ ಸಿದ್ದರಾಮಯ್ಯ ಅವರ ಕಸರತ್ತು ಆಗಿದೆ ಎಂದು ಸಚಿವರು ಆರೋಪಿಸಿದ್ದಾರೆ.‌

ಇದನ್ನೂ ಓದಿ | Karnataka Budget 2024 : ಬಜೆಟ್‌ ಬಹಿಷ್ಕಾರ ಇತಿಹಾಸದಲ್ಲೇ ಮೊದಲಲ್ಲ! 2021ರಲ್ಲೇ ಸಿದ್ದು ಇತಿಹಾಸ ಸೃಷ್ಟಿಸಿದ್ದರು!

ಸಾಲದ ಹೊರೆಯ ಬಜೆಟ್

ಕಳೆದ ವರ್ಷಕ್ಕೆ ಹೋಲಿಸಿದರೆ ರೆವೆನ್ಯೂ ವೆಚ್ಚ 1 ಲಕ್ಷ ಕೋಟಿಗೂ ಮೀರಿದೆ. ತೆರಿಗೆದಾರರ ಮೇಲೆ ಅನಗತ್ಯ ಹೊರೆ ಹೇರಲಾಗಿದೆ. ಅಲ್ಲದೇ, ಕಳೆದ ಸರ್ಕಾರಕ್ಕಿಂತ ಶೇ.22ರಷ್ಟು ಸಾಲದ ಹೊರೆ ಇದರಲ್ಲಿದೆ. 1,05,246 ಕೋಟಿಗೂ ಅಧಿಕ ಸಾಲ ಈ ಬಜೆಟ್ ಒಳಗೊಂಡಿದೆ. ಹಾಗಾಗಿ ಇದೊಂದು ಸಾಲದ ಹೊರೆಯ ಬಜೆಟ್ ಆಗಿದೆ ಎಂದು ಸಚಿವ ಪ್ರಲ್ಹಾದ್ ಜೋಶಿ ಟೀಕಿಸಿದ್ದಾರೆ.

Continue Reading

ಕರ್ನಾಟಕ

Karnataka Budget 2024: ಸಾಲ ಶೂಲದ ಹರಿಕಾರ ಸಾಲರಾಮಯ್ಯ; ರಾಜ್ಯ ಬಜೆಟ್‌ ಬಗ್ಗೆ ಬಿಜೆಪಿ ಟೀಕೆ

Karnataka Budget 2024: ಕಾಂಗ್ರೆಸ್‌ ಸರ್ಕಾರ ಅಧಿಕಾರಕ್ಕೆ ಬಂದು ಕೇವಲ 9 ತಿಂಗಳಲ್ಲಿ 1,93,246 ಕೋಟಿ ರೂ. ಸಾಲ‌ ಮಾಡಿದೆ. ಅಂದರೆ ಪ್ರತಿಯೊಬ್ಬ ಕನ್ನಡಿಗನ ತಲೆ ಮೇಲೆ 28 ಸಾವಿರ ರೂ. ಸಾಲ ಹೇರಿದ್ದಾರೆ ಎಂದು ರಾಜ್ಯ ಬಿಜೆಪಿ ಆರೋಪಿಸಿದೆ.

VISTARANEWS.COM


on

Karnataka Budget 2024 new 1
Koo

ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರು ಮಂಡಿಸಿರುವ ಬಜೆಟ್‌ ಬಗ್ಗೆ ಸಾರ್ವಜನಿಕರು ಮತ್ತು ರಾಜಕೀಯ ನಾಯಕರಿಂದ ಮಿಶ್ರ ಪ್ರತಿಕ್ರಿಯೆಗಳು ವ್ಯಕ್ತವಾಗುತ್ತಿವೆ. ಇನ್ನು ಬಜೆಟ್‌ ಬಗ್ಗೆ ರಾಜ್ಯ ಬಿಜೆಪಿ ಪ್ರತಿಕ್ರಿಯಿಸಿ, ಸಾಲ ಶೂಲದ ಹರಿಕಾರ ಸಾಲರಾಮಯ್ಯ, ಸಾಲವೇ ಎಲ್ಲದಕ್ಕೂ ವಾಮಮಾರ್ಗ ಎಂದುಕೊಂಡಿರುವ ಈ ಶತಮಾನದ ನಕಲಿ ಅರ್ಥ ಶಾಸ್ತ್ರಜ್ಞ ಸಿದ್ದರಾಮಯ್ಯ ಅವರು ಕರ್ನಾಟಕವನ್ನು ಸಾಲ ರಾಜ್ಯವನ್ನಾಗಿ ಪರಿವರ್ತಿಸಿದ್ದಾರೆ ಎಂದು ಆಕ್ರೋಶ ಹೊರಹಾಕಿದೆ.

ಈ ಬಗ್ಗೆ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪ್ರತಿಕ್ರಿಯಿಸಿರುವ ರಾಜ್ಯ ಬಿಜೆಪಿ, ಅಧಿಕಾರಕ್ಕೆ ಬಂದು ಕೇವಲ 9 ತಿಂಗಳಲ್ಲಿ 1,93,246 ಕೋಟಿ ರೂ. ಸಾಲ‌ ಮಾಡಿದ್ದಾರೆ. ಅಂದರೆ ಪ್ರತಿಯೊಬ್ಬ ಕನ್ನಡಿಗನ ತಲೆ ಮೇಲೆ 28 ಸಾವಿರ ರೂ. ಸಾಲ ಹೇರಿದ್ದಾರೆ. ಸಾಲರಾಮಯ್ಯನವರು ಒಂದು ಸಮುದಾಯದ ತುಷ್ಟೀಕರಣಕ್ಕಾಗಿ ಲಕ್ಷಾಂತರ ಕೋಟಿ ಸಾಲ ಮಾಡಿ ಕನ್ನಡಿಗರನ್ನು ಸಂಪೂರ್ಣವಾಗಿ ಮುಳುಗಿಸಿದ್ದಾರೆ. ಸಾಲದ ಸುಳಿಗೆ ಕರುನಾಡು ಸಿಲುಕಿದೆ. ಕರ್ನಾಟಕ ಅಭಿವೃದ್ಧಿಯಲ್ಲಿ 20 ವರ್ಷ ಹಿಂದಕ್ಕೆ ಬಿದ್ದಿದೆ. ಆರ್ಥಿಕತೆ ಹಳ್ಳ ಹಿಡಿದಿದೆ ಎಂದು ಕಿಡಿಕಾರಿದೆ.

ಇದನ್ನೂ ಓದಿ | Karnataka Budget Session 2024: ಬಿಜೆಪಿಯವರ ತಲೆಯಲ್ಲಿ ಏನೂ ಇಲ್ಲ; ಬಡವರ ಕೊಳ್ಳುವ ಶಕ್ತಿ ಹೆಚ್ಚಿಸುವ ಬಜೆಟ್‌ ಎಂದ ಸಿದ್ದರಾಮಯ್ಯ

ನಯಾಪೈಸೆ ಪ್ರಯೋಜನ ಇಲ್ಲದ ಬಜೆಟ್‌, ಉತ್ತರಕ್ಕೆ ಒಂದು ರೂ. ಕೂಡಾ ಇಲ್ಲ; ಬಿ.ವೈ ವಿಜಯೇಂದ್ರ

Karnataka-Budget-2024-BY-Vijayendra

ಬೆಂಗಳೂರು: ಮುಖ್ಯಮಂತ್ರಿಗಳು ಮತ್ತು ರಾಜ್ಯದ ಹಣಕಾಸು ಸಚಿವರಾದ ಸಿದ್ದರಾಮಯ್ಯನವರು (CM Siddaramaiah) ಇಂದು ಮಂಡಿಸಿದ ರಾಜ್ಯ ಬಜೆಟ್‌ (Karnataka Budget 2024) ಬಜೆಟ್ ರೈತವಿರೋಧಿ, ರಾಜ್ಯದ ಅಭಿವೃದ್ಧಿ ದೃಷ್ಟಿಯಿಂದ ಶೂನ್ಯ ಪ್ರಗತಿಯ ಬಜೆಟ್ ಇದು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ (BY Vijayendra) ಅವರು ವಿಶ್ಲೇಷಿಸಿದ್ದಾರೆ. ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳ ಜೊತೆ ಇಂದು ಮಾತನಾಡಿದ ಅವರು, ರಾಜ್ಯವನ್ನು 20 ವರ್ಷಗಳಷ್ಟು ಹಿಂದಕ್ಕೆ ತೆಗೆದುಕೊಂಡು ಹೋಗುವ ಬಜೆಟ್ ಇದು ಎಂದು ಟೀಕಿಸಿದರು.

ಯುವಕರಿಗೆ ಯಾವುದೇ ಒಂದು ಕಾರ್ಯಕ್ರಮಗಳನ್ನು, ಯೋಜನೆಗಳನ್ನು ಘೋಷಣೆ ಮಾಡಿಲ್ಲ. ತಮ್ಮ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಮತ್ತು ತಮ್ಮ ವೈಫಲ್ಯಗಳನ್ನು ಮುಚ್ಚಿ ಹಾಕಿಕೊಳ್ಳಲು ಇವತ್ತು ಸನ್ಮಾನ್ಯ ಸಿದ್ದರಾಮಯ್ಯನವರು ತಮ್ಮ ಸಮಯ ವ್ಯರ್ಥ ಮಾಡಿದ್ದಾರೆ ಎಂದು ತಿಳಿಸಿದರು.

ಇದನ್ನೂ ಓದಿ: Karnataka Budget 2024 : ಸಿದ್ದು ಬಜೆಟ್‌ನ ಘೋಷಣೆಗಳ ಸಂಪೂರ್ಣ ಪಟ್ಟಿ; ಇದನ್ನು ಓದಿದ್ರೆ ಸಾಕು!

ಈ ಬಜೆಟ್‍ನ ಪಾವಿತ್ರ್ಯತೆಯನ್ನು ಹಾಳು ಮಾಡಿದ್ದಾರೆ ಎಂದು ಆಕ್ಷೇಪಿಸಿದ ಅವರು, ಮೊನ್ನೆ ದೆಹಲಿ ಚಲೋ ಮಾಡಿದ್ದರು. ದೆಹಲಿಯಲ್ಲಿ ರಾಜ್ಯ ಸರಕಾರದ ಗೌರವವನ್ನು ಹರಾಜು ಹಾಕುವ ಕೆಲಸ ಆಗಿತ್ತು. ಇವತ್ತು ಕೂಡ ಮುಖ್ಯಮಂತ್ರಿಗಳು ತಮ್ಮ ಬಜೆಟ್‍ನಲ್ಲಿ ಕೇಂದ್ರ ಸರಕಾರವನ್ನು ದೂರುವ ಕೆಲಸ ಮಾಡಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಉತ್ತರ ಕರ್ನಾಟಕದ ಅಭಿವೃದ್ಧಿಗೆ ಒಂದು ರೂಪಾಯಿ ಇಲ್ಲ..

ಉತ್ತರ ಕರ್ನಾಟಕದ ಅಭಿವೃದ್ಧಿಗೆ ಒಂದು ರೂಪಾಯಿಯನ್ನೂ ಕೊಡದ ಬಜೆಟ್ ಇದಾಗಿದೆ. ಸಂಕಷ್ಟದಲ್ಲಿರುವ ರೈತರು ಬಜೆಟ್ ಮೂಲಕ ಪರಿಹಾರದ ನಿರೀಕ್ಷೆಯಲ್ಲಿದ್ದರು. ಇದರಡಿ ಮಹಿಳೆಯರಿಗೂ ಅನುಕೂಲ ಆಗುವುದಿಲ್ಲ. ಇವರು ತಮ್ಮ ಪ್ರಣಾಳಿಕೆಯಲ್ಲಿ ನೇಕಾರರ ಬಗ್ಗೆ ಮಾತನಾಡಿದ್ದರು. ನೇಕಾರರ ಪರವಾಗಿ ಯಾವುದೇ ಒಂದು ಯೋಜನೆಯನ್ನು ಘೋಷಣೆ ಮಾಡಿಲ್ಲ. ಯೋಜನೆ ಘೋಷಿಸುವುದು ಇರಲಿ; ಆ ನೇಕಾರರ ಹೆಸರನ್ನೂ ಉಲ್ಲೇಖಿಸಿಲ್ಲ ಎಂದು ವಿಜಯೇಂದ್ರ ಅವರು ಟೀಕಿಸಿದರು.

ಅಂಗನವಾಡಿ ಕಾರ್ಯಕರ್ತೆಯರ ಗೌರವಧನ ಹೆಚ್ಚಳವಿಲ್ಲ!

ಅಂಗನವಾಡಿ ಕಾರ್ಯಕರ್ತೆಯರ ಗೌರವಧನ ಹೆಚ್ಚಳದ ಭರವಸೆ ನೀಡಿದ್ದರು. ಅದರ ಬಗ್ಗೆಯೂ ಉಲ್ಲೇಖ ಮಾಡಿಲ್ಲ. ‘ನುಡಿದಂತೆ ನಡೆದ ಸರಕಾರ’ ಎಂದು ಕೊಚ್ಚಿಕೊಳ್ಳುತ್ತಾರೆ. ‘ನುಡಿದಂತೆ ನಡೆದ ಸರಕಾರ’ ಎಂದು ತಮ್ಮ ಬೆನ್ನನ್ನು ತಾವೇ ತಟ್ಟಿಕೊಳ್ಳುತ್ತಿದ್ದು, ರಾಜ್ಯದ ರೈತರು, ಬಡವರು, ದೀನದಲಿತರು, ನೇಕಾರರು, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಸೇರಿ ಎಲ್ಲ ವರ್ಗಕ್ಕೂ ನಿರಾಸೆ ಮೂಡಿಸಿದ ಬಜೆಟ್ ಇದು ಎಂದು ತಿಳಿಸಿದರು.

ಕೃಷಿ ಬೆಳೆ ಸಾಲ ಮನ್ನಾದ ಉಲ್ಲೇಖವೇ ಇಲ್ಲ

ಬರಗಾಲದ ಸಂದರ್ಭದಲ್ಲೂ ಕೃಷಿ ಮತ್ತು ಬೆಳೆ ಸಾಲದ ಮನ್ನಾ ಕುರಿತು ಉಲ್ಲೇಖ ಮಾಡಿಲ್ಲ. ಸರಕಾರಿ ನೌಕರರ ಮೂಗಿಗೆ ತುಪ್ಪ ಹಚ್ಚುವ ಕೆಲಸವನ್ನು ಇವರು ಮಾಡಿದ್ದಾರೆ. ಬರಗಾಲದ ಸಂದರ್ಭದಲ್ಲಿ ಯಾವುದೇ ರೀತಿಯ ಅನುಕೂಲ ಆಗದ ಬಜೆಟ್, ನಿಶ್ಚಿತವಾಗಿ ಇದು ಕರಾಳ ದಿನ ಎಂದರೂ ತಪ್ಪಾಗಲಾರದು ಎಂದು ನುಡಿದರು.

ಇದನ್ನೂ ಓದಿ | Karnataka Budget 2024: ರಾಜ್ಯ ಬಜೆಟ್‌ನಲ್ಲಿ ಯಾವ ಜಿಲ್ಲೆಗೆ ಏನು ಸಿಕ್ಕಿದೆ?; ಇಲ್ಲಿದೆ ಮಾಹಿತಿ

ಸಿದ್ದರಾಮಯ್ಯ ಅವರಿಂದ ಇಂಥ ಬಜೆಟ್‌ ನಿರೀಕ್ಷೆ ಮಾಡಿರಲಿಲ್ಲ

15ನೇ ಬಜೆಟ್ ಮಂಡಿಸುತ್ತಿರುವ ಒಬ್ಬ ಅನುಭವಿ ಮುಖ್ಯಮಂತ್ರಿ ಈ ರೀತಿ ಬಜೆಟ್ ಮಂಡಿಸಬಹುದೆಂದು ಯಾರೂ ನಿರೀಕ್ಷೆ ಮಾಡಿರಲಿಲ್ಲ. ನಿಜವಾಗಲೂ ರಾಜ್ಯದ ಅಭಿವೃದ್ಧಿಯ ದೃಷ್ಟಿಯಿಂದ ಒಂದು ದುರಂತವೇ ಸರಿ ಎಂದ ಅವರು, ರೈತರನ್ನೂ ಕಡೆಗಣಿಸಿದ್ದಾರೆ; ಮಹಿಳೆಯರನ್ನೂ ಕಡೆಗಣಿಸಿದ್ದಾರೆ; ನೇಕಾರರನ್ನೂ ಕಡೆಗಣಿಸಿದ್ದಾರೆ, ಯುವಕರನ್ನೂ ಕಡೆಗಣಿಸಿದ್ದಾರೆ; ಉತ್ತರ ಕರ್ನಾಟಕದ ಅಭಿವೃದ್ಧಿಯನ್ನೂ ಕಡೆಗಣಿಸಿದ ಸರಕಾರ ಬಹುಶಃ ರಾಜ್ಯದ ಜನರ ಪಾಲಿಗೆ ಬದುಕಿದ್ದೂ ಸತ್ತಂತೆ ಎಂದು ಹೇಳಿದರು.

Continue Reading

ಕರ್ನಾಟಕ

Karnataka Budget 2024: ರಾಜ್ಯ ಬಜೆಟ್‌ನಲ್ಲಿ ಯಾವ ಜಿಲ್ಲೆಗೆ ಏನು ಸಿಕ್ಕಿದೆ?; ಇಲ್ಲಿದೆ ಮಾಹಿತಿ

Karnataka Budget 2024: ರಾಜ್ಯ ಬಜೆಟ್‌ನಲ್ಲಿ ಯಾವ ಜಿಲ್ಲೆಗೆ ಯಾವ ಯೋಜನೆ ಸಿಕ್ಕಿದೆ, ಎಷ್ಟು ಅನುದಾನ ನೀಡಲಾಗಿದೆ ಎಂಬ ಮಾಹಿತಿ ಇಲ್ಲಿ ನೀಡಲಾಗಿದೆ.

VISTARANEWS.COM


on

Karnataka Budget 2024 new
Koo

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 3.71 ಲಕ್ಷ ಕೋಟಿ ರೂ. ಗಾತ್ರದ ಬಜೆಟ್‌ ಅನ್ನು ಶುಕ್ರವಾರ ಮಂಡಿಸಿದ್ದು, ಕೃಷಿ, ಮೂಲಸೌಕರ್ಯ, ಆರೋಗ್ಯ, ಪ್ರವಾಸೋದ್ಯಮ ಸೇರಿ ವಿವಿಧ ವಲಯಗಳಿಗೆ ಅನುದಾನ ಹಂಚಿಕೆ ಮಾಡಲಾಗಿದೆ. ಈ ಬಜೆಟ್‌ನಲ್ಲಿ (Karnataka Budget 2024) ಯಾವ ಜಿಲ್ಲೆಗೆ ಏನು ಸಿಕ್ಕಿದೆ? ಯಾವ ಪ್ರಮುಖ ಯೋಜನೆಗಳು ದಕ್ಕಿವೆ ಎಂಬುವುದರ ಕುರಿತ ಜಿಲ್ಲಾವಾರು ವಿವರ ಇಲ್ಲಿದೆ.

ಬೆಂಗಳೂರು

  • ಬೆಂಗಳೂರಿನಲ್ಲಿ ಸುಸಜ್ಜಿತವಾದ ಅಂತಾರಾಷ್ಟೀಯ ಮಟ್ಟದ ವಾಣಿಜ್ಯ ಪುಷ್ಪ ಮಾರುಕಟ್ಟೆ ಸಾರ್ವಜನಿಕ ಖಾಸಗಿ ಸಹಭಾಗಿತ್ವದಲ್ಲಿ ಸ್ಥಾಪನೆ.
  • ಬೆಂಗಳೂರಿನ ಕೆ.ಸಿ. ಜನರಲ್‌ ಆಸ್ಪತ್ರೆ ಆವರಣದಲ್ಲಿ ತಾಯಿ ಮತ್ತು ಮಕ್ಕಳ ಆಸ್ಪತ್ರೆ ಕಟ್ಟಡ ಮತ್ತಿತರ ಮೂಲಸೌಕರ್ಯ ಕಾಮಗಾರಿಗಳಿಗೆ 150 ಕೋಟಿ ರೂ.
  • ಬೆಂಗಳೂರಿನಲ್ಲಿ ಮುಂದಿನ ಎರಡು ವರ್ಷಗಳಲ್ಲಿ HUB and Spoke ಮಾದರಿಯಲ್ಲಿ 430 ಪ್ರಯೋಗಾಲಯಗಳ ಸ್ಥಾಹನೆಗೆ 20 ಕೋಟಿ ರೂ. ಅನುದಾನ
  • ಬೆ೦ಗಳೂರಿನ ನೆಫ್ರೋ-ಯುರಾಲಜಿ ಸಂಸ್ಥೆಯ ಶಸ್ತ್ರ ಚಿಕಿತ್ಸಾ ವಿಭಾಗದಲ್ಲಿ 20 ಕೋಟಿ ರೂ. ವೆಚ್ಚದಲ್ಲಿ ರೋಬೋಟಿಕ್‌ ಶಸ್ತ್ರಚಿಕಿತ್ಸಾ ಸೌಲಭ್ಯ.
  • ಬೆ೦ಗಳೂರು ಸಮೀಪ ಸುಮಾರು 2000 ಎಕರೆ ಪ್ರದೇಶದಲ್ಲಿ Knowledge Health Care, Innovation and Research City (KHIR) ಅನ್ನು ಅಭಿವೃದ್ಧಿಗೆ ಕ್ರಮ. 40,000 ಕೋಟಿ ರೂ.ಗಳ ಹೂಡಿಕೆ ಹಾಗೂ 80,000 ಜನರಿಗೆ ಉದ್ಯೋಗ ದೊರೆಯುವ ನಿರೀಕ್ಷೆ.
  • ಬೆಂಗಳೂರಿನ ಉತ್ತರ ತಾಲ್ಲೂಕಿನಲ್ಲಿ 70 ಎಕರೆ ಪ್ರದೇಶದಲ್ಲಿ ಸಾರ್ವಜನಿಕ- ಖಾಸಗಿ ಸಹಭಾಗಿತ್ವದಲ್ಲಿ ಕ್ರೀಡಾ ನಗರ (Sports City)ಸ್ಥಾಪನೆ ಹಾಗೂ ನಾಲ್ಕು ಅತ್ಯಾಧುನಿಕ ಕ್ರೀಡ ಸಂಕೀರ್ಣಗಳ ನಿರ್ಮಾಣ.
  • ಬೆ೦ಗಳೂರಿನ ಪೊಲೀಸ್‌ ಸುಲಿವನ್‌ ಮೈದಾನದಲ್ಲಿ 3 ಕೋಟಿ ರೂ. ವೆಚ್ಚದಲ್ಲಿ ಆಸ್ಟ್ರೋ ಟರ್ಫ್‌ ಹಾಕಿ ಅಂಕಣ ನಿರ್ಮಾಣ.
  • 20 ಜಿಲ್ಲಾ ಆಸ್ಪತ್ರೆಗಳಲ್ಲಿ Digital Mammography ಯಂತ್ರಗಳನ್ನು ಮತ್ತು ಕೆ.ಸಿ. ಜನರಲ್‌ ಆಸ್ಪತ್ರೆ ಬೆ೦ಗಳೂರು ಹಾಗೂ ಉಡುಪಿ, ಕೋಲಾರ ಮತ್ತು ದಾವಣಗೆರೆ ಜಿಲ್ಲಾ ಆಸ್ಪತ್ರೆಗಳಿಗೆ Colposcopy ಉಪಕರಣ ಖರೀದಿಗೆ 21 ಕೋಟಿ ರೂ. ಅನುದಾನ
  • ಬೆ೦ಗಳೂರು ಗ್ರಾಮಾ೦ತರ ಜಿಲ್ಲೆಯ ಶ್ರೀ ಘಾಟಿ ಸುಬ್ರಹ್ಮಣ್ಯಸ್ವಾಮಿ ದೇವಾಲಯ ಹಾಗೂ ಕೊಪ್ಪಳ ಜಿಲ್ಲೆಯ ಹುಲಿಗೆಮ್ಮ ದೇವಾಲಯ ಅಭಿವೃದ್ಧಿಗೆ ಪ್ರತ್ಯೇಕ ಪ್ರಾಧಿಕಾರ ರಚನೆ.

ಮಂಗಳೂರು

ವಾಟರ್‌ ಮೆಟ್ರೋ ಸಾಂದರ್ಭಿಕ ಚಿತ್ರ
  • ಮ೦ಗಳೂರು ಬಂದರಿನಿಂದ ಬೆ೦ಗಳೂರುವರೆಗೆ ಹಾಗೂ ಬೀದರ್‌ನಿಂದ ಬೆ೦ಗಳೂರು ನಡುವೆ ಆರ್ಥಿಕ ಅಭಿವೃದ್ಧಿ ಕಾರಿಡಾರ್‌ ನಿರ್ಮಾಣಕ್ಕೆ ಕ್ರಮ.
  • ಹಳೆ ಮಂಗಳೂರು, ಕಾರವಾರ ಮತ್ತು ರಾಜ್ಯದ 11 ಕಿರು ಬಂದರುಗಳಲ್ಲಿ ಹೂಳೆತ್ತುವ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲು ಕ್ರಮ.
  • ಹಳೇ ಮಂಗಳೂರು ಬಂದರಿನಲ್ಲಿ 350 ಮೀ. ಉದ್ದದ ಕೋಸ್ಟಲ್‌ ಬರ್ತ್‌ ನಿರ್ಮಾಣ ಕಾಮಗಾರಿ 2024-25ನೇ ಸಾಲಿನಲ್ಲಿ ಪೂರ್ಣಗೊಳಿಸಲು ಕ್ರಮ.
  • ಮಂಗಳೂರಿನ ಗುರುಪುರ ಹಾಗೂ ನೇತ್ರಾವತಿ ನದಿಗಳಲ್ಲಿ ಜಲಮೆಟ್ರೋ ಸೇವೆಗಳನ್ನು ಪರಿಚಯಿಸಲು ಕಾರ್ಯಸಾಧ್ಯತಾ ವರದಿ ತಯಾರಿಸಲು ಕ್ರಮ ದ್ವೀಪಗಳ ಸಮಗ್ರ ಅಭಿವೃದ್ಧಿಗೆ ಮಾಸ್ಟರ್‌ ಪ್ಲಾನ್‌ ತಯಾರಿಸಲು ಕ್ರಮ.
  • ಮಂಗಳೂರಿನಲ್ಲಿ 35 ಕೋಟಿ ರೂ. ವೆಚ್ಚದಲ್ಲಿ ಅತ್ಯಾಧುನಿಕ ಕೃಷಿ ಸಂಕೀರ್ಣ ಸ್ಥಾಪನೆ.

ಇದನ್ನೂ ಓದಿ | Karnataka Budget 2024 : ಕಡಲ ತೀರ ವ್ಯಾಪಾರಕ್ಕೆ ಒತ್ತು; 1,017 ಕೋಟಿ ರೂಪಾಯಿ ಅನುದಾನ

ಶಿವಮೊಗ್ಗ

  • ಶಿವಮೊಗ್ಗದ ಸೋಗಾನೆ, ವಿಜಯಪುರದ ಇಟ್ಟಂಗಿಹಾಳ ಮತ್ತು ಬೆ೦ಗಳೂರು ಗ್ರಾಮಾಂತರದ ಪೂಜೇನಹಳ್ಳಿಯಲ್ಲಿ ಆಹಾರ ಪಾರ್ಕ್‌ ಸ್ಥಾಪನೆ.
  • ಶಿವಮೊಗ್ಗ ಜಿಲ್ಲೆಯಲ್ಲಿ 100 ಕೋಟಿ ರೂ.ಗಳ ವೆಚ್ಚದಲ್ಲಿ ಹೊಸ ಹೈ-ಸೆಕ್ಕೂರಿಟ ಕಾರಾಗೃಹ ನಿರ್ಮಾಣ

ಚಿಕ್ಕಮಗಳೂರು

ಚಿಕ್ಕಮಗಳೂರು ಜಿಲ್ಲೆಯಲ್ಲಿ ಸಾರ್ವಜನಿಕ ಖಾಸಗಿ ಸಹಭಾಗಿತ್ವದಲ್ಲಿ ಸ್ಪೈಸ್‌ ಪಾರ್ಕ್‌ ಅಭಿವೃದ್ಧಿ.

ವಿಜಯಪುರ

ವಿಜಯಪುರ ಜಿಲ್ಲೆಯ ಆಲಮೇಲದಲ್ಲಿ ತೋಟಗಾರಿಕೆ ಕಾಲೇಜು ಸ್ಥಾಪನೆ

ರಾಮನಗರ

ರಾಮನಗರ ಮತ್ತು ಶಿಡ್ಲಘಟ್ಟದಲ್ಲಿ 250 ಕೋಟ ರೂ. ವೆಚ್ಚದಲ್ಲಿ ಅತ್ಯಾಧುನಿಕ ರೇಷ್ಮೆ ಮಾರುಕಟ್ಟೆ ನಿರ್ಮಾಣದ ಎರಡನೇ ಹ೦ತ ಕಾಮಗಾರಿ ಕೈಗೆತ್ತಿಕೊಳ್ಳಲು ಕ್ರಮ.

ಪುತ್ತೂರು

ಪುತ್ತೂರು ಪಶುವೈದ್ಯಕೀಯ ಕಾಲೇಜು ಕಾರ್ಯಾರಂಭಕ್ಕೆ ಕ್ರಮ.

ರಾಯಚೂರು

ಒಟ್ಟು 130 ಕೋಟಿ ರೂ. ವೆಚ್ಚದಲ್ಲಿ 7 ಶೀತಲಗೃಹ ನಿರ್ಮಾಣ. ರಾಯಚೂರು ಹಾಗೂ ರಾಣೆಬೆನ್ನೂರಿನಲ್ಲಿ ಒಣಮೆಣಸಿನಕಾಯಿ ಮಾರುಕಟ್ಟೆ ಪ್ರಾರಂಭ.

ಕೊಪ್ಪಳ

  • ಕೊಪ್ಪಳ ಜಿಲ್ಲೆಯ ನವಲಿ ಬಳಿ ಸಮತೋಲನಾ ಜಲಾಶಯ ನಿರ್ಮಾಣ ಯೋಜನೆಯ 15,600 ಕೋಟಿ ರೂ. ಮೊತ್ತದ ವಿವರವಾದ ಯೋಜನಾ ವರದಿ ಸಿದ್ಧ ಯೋಜನೆಯ ಅನುಷ್ಠಾನ ಸಂಬಂಧ ಆಂಧ್ರ ಪ್ರದೇಶ ಮತ್ತು ತೆಲಂಗಾಣ ರಾಜ್ಯಗಳೊಂದಿಗೆ ಸಮಾಲೋಚನೆ ಪ್ರಾರಂಭ.

ಮಂಡ್ಯ

  • ಕೆ.ಆರ್‌.ಎಸ್‌ನ ಬೃಂದಾವನ ಉದ್ಯಾನವನವನ್ನು ವಿಶ್ವದರ್ಜೆಯ ಪ್ರವಾಸೋದ್ಯಮ ಆಕರ್ಷಣೀಯ ಕೇಂದ್ರವನ್ನಾಗಿ ಉನ್ನತೀಕರಣ.
  • ಮಂಡ್ಯದ ಮೈಶುಗರ್‌ ಕಾರ್ಲಾನೆಯ ಆವರಣದಲ್ಲಿ ಹೊಸ ಸಕ್ಕರೆ ಕಾರ್ಖಾನೆ ನಿರ್ಮಾಣ.

ಧಾರವಾಡ

ಧಾರವಾಡದಲ್ಲಿರುವ ವಾಲ್ಮಿ ಸಂಸ್ಥೆಯನ್ನು Centre of Excellence in Water Management ಆಗಿ ಉನ್ನತೀಕರಿಸಲು ಕ್ರಮ.

ಯಲಗುರ್ಬಾ

ಯಲಬುರ್ಗಾ-ಕುಕನೂರು ತಾಲ್ಲೂಕಿನಲ್ಲಿ 970 ಕೋಟಿ ರೂ. ವೆಚ್ಚದಲ್ಲಿ 38 ಕೆರೆಗಳನ್ನು ತುಂಬಿಸುವ ಯೋಜನೆ ಹಾಗೂ ಮಸ್ಕಿ ತಾಲ್ಲೂಕಿನ ಪಾಮನಕಲ್ಲೂರು ಹಾಗೂ ಇತರ ಪ್ರದೇಶಗಳಿಗೆ ಅಂದಾಜು 990 ಕೋಟಿ ರೂ. ಮೊತ್ತದಲ್ಲಿ ನೀರಾವರಿ ಸೌಲಭ್ಯ ಕಲ್ಪಿಸುವ ಯೋಜನೆ ಅನುಷ್ಠಾನ.

ಕಲಬುರಗಿ

  • ಕಲಬುರಗಿ ನಗರಕ್ಕೆ ಕುಡಿಯುವ ನೀರು ಸರಬರಾಜಿಗಾಗಿ ಬೆಣ್ಣೆತೊರಾ ಜಲಾಶಯಕ್ಕೆ ಭೀಮಾ ಮತ್ತು ಕಾಗಿಣಾ ನದಿಗಳಿಂದ ನೀರು ತುಂಬಿಸುವ 365 ಕೋಟ ರೂ. ಮೊತ್ತದ ಯೋಜನೆ ಜಾರಿ.
  • ಕಲಬುರಗಿ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ಮಕ್ಕಳ ಆರೋಗ್ಯ ಘಟಕ ಸ್ಥಾಪನೆ.
  • ಕಲಬುರಗಿಯ ಕೆ.ಜಿ.ಟಿ.ಟಿ.ಐ.ನಲ್ಲಿ 16 ಕೋಟಿ ರೂ. ವೆಚ್ಚದಲ್ಲಿ ಸಿ.ಎನ್‌.ಸಿ (Computer Numerical Control) ಯಂತ್ರವನ್ನು ಕೇಂದ್ರೀಕರಿಸುವ ಮೊದಲ ಶ್ರೇಷ್ಟತಾ ಕೇಂದ್ರ ಸ್ಥಾಪನೆ.
  • ಕಲಬುರಗಿ, ಶಿವಮೊಗ್ಗ. ಹುಬ್ಬಳ್ಳಿ ಮತ್ತು ತುಮಕೂರಿನಲ್ಲಿ ಒಟ್ಟಾರೆ 12 ಕೋಟಿ ರೂ. ವೆಚ್ಚದಲ್ಲಿ ಉದಯೋನ್ಮುಖ ತಂತ್ರಜ್ಞಾನಗಳಲ್ಲಿ ಕೌಶಲ್ಯ ಮತ್ತು ನಾವೀನ್ಯತಾ ಕೇಂದ್ರ ಸ್ಥಾಪನೆ.
  • ಕಲಬುರಗಿಯಲ್ಲಿ ವಚನ ಮಂಟಪ ಸ್ಥಾಪನೆಗೆ ಕ್ರಮ.

ಧಾರವಾಡ

ಧಾರವಾಡ ಜಿಲ್ಲೆಯಲ್ಲಿ ಬೆಣ್ಣೆಹಳ್ಳದಿಂದ ಪ್ರವಾಹ ಪೀಡಿತ ಗ್ರಾಮಗಳಿಗೆ ತಡೆಗೋಡೆ ನಿರ್ಮಾಣ.

ಮೈಸೂರು

  • ಮೈಸೂರಿನಲ್ಲಿರುವ 40 ಹಾಸಿಗೆ ಸಾಮರ್ಥ್ಯದ Nephro-Urology ಆಸ್ಪತ್ರೆಯ 100 ಹಾಸಿಗೆ ಸಾಮರ್ಥ್ಯದ ಆಸ್ಪತ್ರೆಯನ್ನಾಗಿ ಉನ್ನತೀಕರಣ.
  • ಮೈಸೂರು ವೈದ್ಯಕೀಯ ಮಹಾವಿದ್ಯಾಲಯ ಶತಮಾನೋತ್ಸವದ ಸವಿನೆನಪಿಗಾಗಿ ಕೆ.ಆರ್‌. ಆಸ್ಪತ್ರೆ ಆವರಣದಲ್ಲಿ 75 ಕೋಟ ರೂ. ವೆಚ್ಚದಲ್ಲಿ ಸುಸಜ್ಜಿತ ಹೊರ ರೋಗಿ ವಿಭಾಗದ ಕಟ್ಟಡ ನಿರ್ಮಾಣಕ್ಕೆ ಕ್ರಮ.
  • 1600 ಕೋಟಿ ರೂ. ವೆಚ್ಚದಲ್ಲಿ ಮೈಸೂರು ವಿಮಾನ ನಿಲ್ದಾಣ ರನ್‌ವೇ ವಿಸ್ತರಣೆ; ವಿಜಯಪುರ ಹಾಗೂ ಹಾಸನ ವಿಮಾನ ನಿಲ್ದಾಣ ಕಾಮಗಾರಿ ಪೂರ್ಣಗೊಳಿಸಲು, ರಾಯಚೂರು ಹಾಗೂ ಕಾರವಾರ ವಿಮಾನ ನಿಲ್ದಾಣ ನಿರ್ಮಾಣಕ್ಕೆ ಕ್ರಮ.
  • ಮೈಸೂರು, ಕಿತ್ತೂರು ಕರ್ನಾಟಕ, ಕಲ್ಯಾಣ ಕರ್ನಾಟಕ ವಿಭಾಗಗಳಲ್ಲಿ ನೂತನ ಜವಳಿ ಪಾರ್ಕ್‌ಗಳ ಪ್ರಾರಂಭ; 10,000 ಉದ್ಯೋಗ ಸೃಷ್ಟಿ ಬಳ್ಳಾರಿಯಲ್ಲಿ ಜೀನ್ಸ್‌ ಅಪಾರೆಲ್‌ ಪಾರ್ಕ್‌ ಹಾಗೂ ಸಾಮಾನ್ಯ ಸೌಲಭ್ಯ ಕೇಂದ್ರವನ್ನು ಅಭಿವೃದ್ಧಿಗೆ ಕ್ರಮ.
  • ನಂಜನಗೂಡು ತಾಲ್ಲೂಕಿನ ಬದನವಾಳು ಗ್ರಾಮದಲ್ಲಿ ಖಾದಿ ಚಟುವಟಕೆ ಪ್ರೋತ್ಸಾಹಕ್ಕೆ ಕ್ರಮ

ಕೊಡಗು

  • ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆಯಲ್ಲಿ Viral Research & Diagnostic Laboratory (VRDL)ಅನ್ನು ಸ್ಥಾಪಿಸಲಾಗುವುದು.
  • ವಿರಾಜಪೇಟೆಯಲ್ಲಿ 12 ಕೋಟ ರೂ. ವೆಚ್ಚದಲ್ಲಿ ಹೊಸ ನ್ಯಾಯಾಲಯ ಸಂಕೀರ್ಣ ನಿರ್ಮಾಣ.

ಬಳ್ಳಾರಿ

  • ಬಳ್ಳಾರಿ ಜಿಲ್ಲೆಯ ಸಂಡೂರಿನಲ್ಲಿ ಸ್ಕಿಲ್‌ ಅಕಾಡೆಮಿ ಸ್ಥಾಪನೆ.
  • ಬಳ್ಳಾರಿ, ಕಲಬುರಗಿ, ತಳಕಲ್‌ ಮತ್ತು ಮೈಸೂರಿನ ವರುಣಾದಲ್ಲಿ 350 ಕೋಟಿ ವೆಚ್ಚದಲ್ಲಿ ಜಿ.ಟಿ.ಟಿ.ಸಿ. ಬಹು ಕೌಶಲ್ಯ ಅಭಿವೃದ್ಧಿ ಕೇಂದ್ರಗಳ ಸ್ಥಾಪನೆ.
  • ಬಳ್ಳಾರಿ, ಚಿತ್ರದುರ್ಗ, ರೋಣದಲ್ಲಿ ಒಟ್ಟು 150 ಕೋಟಿ ರೂ. ವೆಚ್ಚದಲ್ಲಿ ಹೊಸ ಜಿ.ಟಿ.ಟಿ.ಸಿಗಳ ಪ್ರಾರಂಭ.

ಬೆಳಗಾವಿ

  • ಬೆಳಗಾವಿ ನಗರ ಪರಿಮಿತಿಯಲ್ಲಿ 450 ಕೋಟ ರೂ. ವೆಚ್ಚದಲ್ಲಿ 4.50 ಕಿ.ಮೀ ಉದ್ದದ ಮೇಲ್ಲೇತುವೆ (Elevated Corridor)ನಿರ್ಮಾಣಕ್ಕೆ ಕ್ರಮ.

ಉತ್ತರ ಕನ್ನಡ

  • ಉತ್ತರ ಕನ್ನಡ ಜಿಲ್ಲೆಯ ಕೇಣಿಯಲ್ಲಿ ಹೊಸ ಆಳಸಮುದ್ರ ಸರ್ವಋತು ಬಂದರು, ಪಾವಿನಕುರ್ವೆಯಲ್ಲಿ ಪಿ.ಪಿ.ಪಿ. ಮಾದರಿಯಲ್ಲಿ ಎರಡನೇ ಬೃಹತ್‌ ಬಂದರಿನ ಅಭಿವೃದ್ಧಿಗೆ ಕ್ರಮ.
  • ಕಾರವಾರ, ಮಲ್ಪೆ ಮತ್ತು ಹಳೇ ಮಂಗಳೂರು ಬಂದರುಗಳಲ್ಲಿ ನಾಲ್ಕು ಬರ್ತ್‌ಗಳ ಅಭಿವೃದ್ಧಿ

ಚಿತ್ರದುರ್ಗ

ಹಿರೇಕೆರೂರು ತಾಲ್ಲೂಕಿನಲ್ಲಿ ವಚನಕಾರ ಸರ್ವಜ್ಞನ ಸ್ಮಾರಕ ನಿರ್ಮಾಣ. ಮಾಜಿ ಮುಖ್ಯಮಂತ್ರಿ ಎಸ್‌. ಬಂಗಾರಪ್ಪ ಸ್ಮಾರಕ ನಿರ್ಮಾಣಕ್ಕೆ ಕ್ರಮ.

ಕೊಪ್ಪಳ

Anjanadri hills
  • ಕೊಪ್ಪಳ ಜಿಲ್ಲೆ ಅಂಜನಾದ್ರಿ ಬೆಟ್ಟ ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿ ಪ್ರವಾಸಿ ಸೌಲಭ್ಯ ಅಭಿವೃದ್ಧಿಪಪಡಿಸಲು 100 ಕೋಟಿ ರೂ. ಅನುದಾನ.
  • ಬಂಡೀಪುರ, ದಾಂಡೇಲಿ ಮತ್ತು ಕಬಿನಿಯಲ್ಲಿ 25 ಕೋಟಿ ರೂ. ವೆಚ್ಚದಲ್ಲಿ ಇಂಟರ್‌ಪ್ರಿಟೇಷನ್‌ ಸೆ೦ಟರ್‌ ನಿರ್ಮಾಣ.

ಇದನ್ನೂ ಓದಿ | Karnataka Budget 2024: ಬಜೆಟ್‌ನಲ್ಲೂ ಸಾರಿಗೆಗೆ ‘ಶಕ್ತಿ’ ನೀಡಿದ ಸಿದ್ದರಾಮಯ್ಯ; ಏನೆಲ್ಲ ಸಿಕ್ಕಿದೆ?

ಬೀದರ್‌

  • ಬೀದರ್‌ ಹಾಗೂ ವಿಜಯಪುರದಲ್ಲಿ ಕರೇಜ್‌ ಎಂದು ಪ್ರಸಿದ್ಧವಾಗಿರುವ ಪುರಾತನ ನೀರು ಸರಬರಾಜು ವ್ಯವಸ್ಥೆಯ ಪುನಶ್ಚೇತನಕ್ಕೆ 15 ಕೋಟಿ ರೂ. ನೆರವು.
  • ಬೀದರ್‌ ಜಿಲ್ಲೆಯ ಹೊನ್ನಿಕೇರಿ ಮೀಸಲು ಅರಣ್ಯ ಮತ್ತು ಇತರೆ ಜೀವವೈವಿಧ್ಯ ಪ್ರದೇಶಗಳಲ್ಲಿ ಪರಿಸರ ಪ್ರವಾಸೋದ್ಯಮ ಮತ್ತು ಸ೦ರಕ್ಷಣಾತ್ಮಕ ಕಾರ್ಯಕ್ರಮಗಳಿಗೆ 15 ಕೋಟ ರೂ. ಅನುದಾನ.
  • ಬೀದರ್‌ ಮತ್ತು ವಿಜಯಪುರ ಜಿಲ್ಲೆಗಳಲ್ಲಿ ಹೊಸ ಜಿಲ್ಲಾಡಳಿತ ಕಛೇರಿ ಹಾಗೂ ಅಗತ್ಯವಿರುವ ತಾಲ್ಲೂಕುಗಳಲ್ಲಿ ತಾಲ್ಲೂಕಾ ಆಡಳಿತ ಕಚೇರಿ ನಿರ್ಮಾಣ.

ಇದನ್ನೂ ಓದಿ | Karnataka Budget 2024 : 10 ಪ್ರವಾಸಿ ತಾಣಗಳಲ್ಲಿ ಕೇಬಲ್‌ ಕಾರ್‌, ಅಂಜನಾದ್ರಿ ಬೆಟ್ಟಕ್ಕೆ ಹೊಸ ಲುಕ್‌

Continue Reading
Advertisement
Stray dogs attack in Shira 4 children one woman injured
ಪ್ರಮುಖ ಸುದ್ದಿ2 hours ago

Stray Dogs Attack: ಶಿರಾದಲ್ಲಿ ಬೀದಿ ನಾಯಿಗಳ ದಾಳಿ: 4 ಮಕ್ಕಳು, ಒಬ್ಬ ಮಹಿಳೆಗೆ ಗಂಭೀರ ಗಾಯ

Somnath Bharti
ದೇಶ2 hours ago

Somnath Bharti: ಮೋದಿ 3ನೇ ಸಲ ಪ್ರಧಾನಿಯಾದರೆ ತಲೆ ಬೋಳಿಸಿಕೊಳ್ಳುವೆ ಎಂದ ಆಪ್‌ ನಾಯಕ!

T 20 world cup
ಕ್ರೀಡೆ2 hours ago

T20 World Cup : ಪಂದ್ಯದಲ್ಲಿ ಬಾಂಗ್ಲಾದೇಶ ವಿರುದ್ಧ 60 ರನ್​ ಭರ್ಜರಿ ವಿಜಯ ಸಾಧಿಸಿದ ಭಾರತ

Exit Poll
ಪ್ರಮುಖ ಸುದ್ದಿ3 hours ago

Exit Poll 2024 : ಆ್ಯಕ್ಸಿಸ್​ ಮೈ ಇಂಡಿಯಾ ಪ್ರಕಾರ ಎನ್​ಡಿಎಗೆ 401 ಸೀಟು

Poll Of Polls
ದೇಶ3 hours ago

Poll Of Polls: ಎನ್‌ಡಿಎಗೆ 350+ ಸೀಟು, ದಕ್ಷಿಣದಲ್ಲೂ ಬಿಜೆಪಿಗೆ ಸ್ವೀಟು, ಇಂಡಿಯಾ ‌ಕೂಟಕ್ಕೆ ಹಿನ್ನಡೆಯ ಏಟು!

Exit Poll 2024
ಪ್ರಮುಖ ಸುದ್ದಿ4 hours ago

Exit Poll 2024 : ಟಿಎಂಸಿಯ ಭದ್ರಕೋಟೆಗೆ ಕಮಲ ಪಕ್ಷದ ಲಗ್ಗೆ; ಮಮತಾ ಬ್ಯಾನರ್ಜಿಗೆ ಮುಖಭಂಗ?

Bangalore rain
ಪ್ರಮುಖ ಸುದ್ದಿ5 hours ago

Bangalore Rain: ರಾಜಧಾನಿಯಲ್ಲಿ ಮಳೆ ಆರ್ಭಟ; ಬೆಂಗಳೂರು-ಹೊಸೂರು ಹೆದ್ದಾರಿ ಜಲಾವೃತ, ಮನೆಗಳಿಗೆ ನುಗ್ಗಿದ ನೀರು

Dinesh Karthik
ಪ್ರಮುಖ ಸುದ್ದಿ5 hours ago

Dinesh Karthik: ಜನ್ಮದಿನದಂದೇ ಕ್ರಿಕೆಟ್‌ ಬದುಕಿಗೆ ದಿನೇಶ್‌ ಕಾರ್ತಿಕ್‌ ಭಾವುಕ ವಿದಾಯ; ಕೊಡುಗೆ ನೆನೆದ ಆರ್‌ಸಿಬಿ ಫ್ಯಾನ್ಸ್

Exit Poll
ಪ್ರಮುಖ ಸುದ್ದಿ5 hours ago

Exit Poll 2024 : ಭರ್ಜರಿ ಗೆಲುವಿನ ಮುನ್ಸೂಚನೆ ಸಿಕ್ಕಿದ ತಕ್ಷಣ ಮತದಾರರಿಗೆ ಧನ್ಯವಾದ ತಿಳಿಸಿದ ಮೋದಿ

Exit Poll 2024
ದೇಶ5 hours ago

Exit Poll 2024 : ಮತಗಟ್ಟೆ ಸಮೀಕ್ಷೆಗಳನ್ನು ನಾವು ನಂಬಲ್ಲ; ಡಿಕೆಶಿ, ಎಂಬಿ ಪಾಟೀಲ್ ಸ್ಪಷ್ಟ ನುಡಿ

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Liquor ban
ಬೆಂಗಳೂರು9 hours ago

Liquor Ban : ಮುಂದಿನ ಏಳು ದಿನಗಳಲ್ಲಿ ನಾಲ್ಕೂವರೆ ದಿನ ಬಾರ್ ಕ್ಲೋಸ್; ಎಣ್ಣೆ ಸಿಗೋದು ಯಾವ ದಿನ?

Assault Case in Shivamogga
ಕ್ರೈಂ3 days ago

Assault Case : ಶಿವಮೊಗ್ಗದಲ್ಲಿ ಮತ್ತೆ ಬಾಲ ಬಿಚ್ಚಿದ ಪುಂಡರು; ಗಾಂಜಾ ನಶೆಯಲ್ಲಿ ವಾಹನಗಳು ಪೀಸ್‌ ಪೀಸ್‌

Karnataka weather Forecast
ಮಳೆ4 days ago

Karnataka Weather : ಚಿಕ್ಕಮಗಳೂರಲ್ಲಿ ಭಾರಿ ಮಳೆ; ಯಾದಗಿರಿಯಲ್ಲಿ ಕರೆಂಟ್‌ ಕಟ್‌, ಜನರೇಟರ್‌ನಿಂದ ಮೊಬೈಲ್‌ಗಳಿಗೆ ಚಾರ್ಜಿಂಗ್‌!

tumkur murder
ತುಮಕೂರು5 days ago

Tumkur Murder : ಮಗುವಿನ ಮುಂದೆಯೇ ಹೆಂಡತಿಯ ಕತ್ತು, ದೇಹವನ್ನು ಕತ್ತರಿಸಿ ಬಿಸಾಡಿದ ದುಷ್ಟ

Karnataka Weather Forecast
ಮಳೆ5 days ago

Karnataka Weather : ಕಡಲತೀರದಲ್ಲಿ ಅಲೆಗಳ ಅಬ್ಬರ, ಪ್ರವಾಸಿಗರಿಗೆ ಕಟ್ಟೆಚ್ಚರ; ನಾಳೆಯೂ ಗಾಳಿ ಸಹಿತ ಮಳೆ ಅಬ್ಬರ

Karnataka Rain
ಮಳೆ6 days ago

Karnataka Rain : ಯಾದಗಿರಿಯಲ್ಲಿ ಬಿರುಗಾಳಿ ಸಹಿತ ಮಳೆ; ಸಿಡಿಲು ಬಡಿದು ಎಮ್ಮೆಗಳು ಸಾವು

Basavanagudi News
ಬೆಂಗಳೂರು6 days ago

Basavanagudi News : ಪೂಜಾ ಸಾಮಗ್ರಿಗೆ ಒನ್‌ ಟು ಡಬಲ್‌ ರೇಟ್‌; ದೊಡ್ಡ ಗಣಪತಿ ದೇಗುಲದಲ್ಲಿ ಕೈ ಕೈ ಮಿಲಾಯಿಸಿದ ಭಕ್ತರು-ವ್ಯಾಪಾರಿಗಳು

Karnataka Rain
ಮಳೆ1 week ago

Karnataka Rain : ಭಾರಿ ಮಳೆಗೆ ರಸ್ತೆ ಕಾಣದೆ ರಾಜಕಾಲುವೆಗೆ ಉರುಳಿದ ಆಟೋ; ಚಾಲಕ ಸ್ಥಳದಲ್ಲೇ ಸಾವು

dina bhavishya read your daily horoscope predictions for May 23 2024
ಭವಿಷ್ಯ1 week ago

Dina Bhavishya : 12 ರಾಶಿಯವರ ಇಂದಿನ ಭವಿಷ್ಯ ಹೇಗಿದೆ? ಯಾರಿಗೆ ಶುಭ, ಯಾರಿಗೆ ಅಶುಭ ಫಲ?

Karnataka Weather Forecast
ಮಳೆ2 weeks ago

Karnataka Weather : ಮುಂದುವರಿಯಲಿದೆ ವರುಣಾರ್ಭಟ; ಬೆಂಗಳೂರಲ್ಲೂ ಭಾರಿ ಮಳೆ ನಿರೀಕ್ಷೆ!

ಟ್ರೆಂಡಿಂಗ್‌