Site icon Vistara News

Karwar News: ಗೋವಾ ಮದ್ಯ ಅಕ್ರಮ ಸಾಗಾಟ; ಆರೋಪಿ ಸಹಿತ 15.52 ಲಕ್ಷ ಮೌಲ್ಯದ ಸ್ವತ್ತು ವಶ

Goa liquor karwar Majali Check Post

#image_title

ಕಾರವಾರ: ತಾಲೂಕಿನ ಮಾಜಾಳಿ ಚೆಕ್‌ಪೋಸ್ಟ್‌ನಲ್ಲಿ (Majali Check Post) ಕ್ರೂಸರ್ ವಾಹನದಲ್ಲಿ ಅಕ್ರಮವಾಗಿ ಗೋವಾ ಮದ್ಯ ಸಾಗಾಟ ಮಾಡುತ್ತಿದ್ದ ವೇಳೆ ಅಬಕಾರಿ ಅಧಿಕಾರಿಗಳು ಹಾಗೂ ರಾಜ್ಯ ವಿಚಕ್ಷಣ ದಳ ದಾಳಿ ನಡೆಸಿ ಸುಮಾರು 15.52 ಲಕ್ಷ ರೂಪಾಯಿ ಮೌಲ್ಯದ ಸ್ವತ್ತುಗಳನ್ನು ಜಪ್ತಿಪಡಿಸಿಕೊಂಡಿದ್ದು, ಒಬ್ಬ ಆರೋಪಿಯನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

ಆಂಧ್ರ ಪ್ರದೇಶದ ಮೇದಕ್ ಜಿಲ್ಲೆಯ ಬಗೀಲಿ ಅಜಯ ಗೌಡ ಬಂಧಿತ ಆರೋಪಿ. ರಾಜ್ಯ ವಿಧಾನಸಭಾ ಚುನಾವಣೆಗೆ ದಿನಾಂಕ ನಿಗದಿಯಾದ ಹಿನ್ನೆಲೆಯಲ್ಲಿ ರಾಜ್ಯದ ಗಡಿಯಲ್ಲಿ ಕಟ್ಟುನಿಟ್ಟಿನ ತಪಾಸಣೆ ಕೈಗೊಳ್ಳಲಾಗುತ್ತಿದೆ. ಅದರಂತೆ ಮಾಜಾಳಿ ಚೆಕ್‌ಪೋಸ್ಟ್‌ನಲ್ಲಿ ಅಬಕಾರಿ ಹಾಗೂ ವಿಚಕ್ಷಣ ದಳದ ಸಿಬ್ಬಂದಿ ವಾಹನಗಳನ್ನು ಪರಿಶೀಲನೆ ನಡೆಸುತ್ತಿದ್ದ ವೇಳೆ ಆಂಧ್ರಪ್ರದೇಶ ಮೂಲದ ಕ್ರೂಸರ್ ವಾಹನದಲ್ಲಿ ಅಕ್ರಮ ಗೋವಾ ಮದ್ಯ ಪತ್ತೆಯಾಗಿದೆ.

ಸುಮಾರು 17.5 ಲೀಟರ್ ಗೋವಾ ಮದ್ಯ, 3.75 ಲೀಟರ್ ಗೋವಾ ಫೆನ್ನಿ ಹಾಗೂ 3.75 ಲೀಟರ್ ಗೋವಾ ವೈನ್ ಪತ್ತೆಯಾಗಿದ್ದು ಇವುಗಳ ಅಂದಾಜು ಮೌಲ್ಯ 52 ಸಾವಿರ ರೂ. ಆಗಿದೆ. ಈ ವೇಳೆ ಅಕ್ರಮ ಮದ್ಯ ಸಾಗಾಟಕ್ಕೆ ಬಳಕೆ ಮಾಡಲಾದ 15 ಲಕ್ಷ ರೂ. ಮೌಲ್ಯದ ಕ್ರೂಸರ್ ವಾಹನ ಸೇರಿ ಒಟ್ಟು 15.52 ಲಕ್ಷ ಮೌಲ್ಯದ ಸ್ವತ್ತುಗಳನ್ನು ಜಪ್ತಿಪಡಿಸಿಕೊಂಡು ಆರೋಪಿತನ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.

ಇದನ್ನೂ ಓದಿ: High Court order: ತುಮಕೂರು ಗ್ರಾಮಾಂತರ ಜೆಡಿಸ್‌ ಶಾಸಕ ಗೌರಿಶಂಕರ್‌ ಶಾಸಕತ್ವದಿಂದ ಅನರ್ಹ: ಕೋರ್ಟ್‌ ಆದೇಶ

ಅಬಕಾರಿ ಉಪ ನಿರೀಕ್ಷಕ ಪಿ.ಕೆ. ಹಳದನಕರ ಕಾರವಾರ ಅಬಕಾರಿ ಠಾಣೆಯಲ್ಲಿ ಪ್ರಕರಣವನ್ನು ದಾಖಲಿಸಿದ್ದು, ಅಕ್ರಮ ಸಾಗಾಟದಾರರಿಗೆ ಗಡಿ ಭಾಗದಲ್ಲಿ ಕಟ್ಟುನಿಟ್ಟಿನ ನಿಗಾ ಇರಿಸಿರುವ ಸಂದೇಶ ರವಾನಿಸಿದ್ದಾರೆ.

Exit mobile version