Karwar News lifeguard rescues a man who attempted suicide by jumping into the sea in karwarKarwar News: ಸಮುದ್ರಕ್ಕೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಭಗ್ನಪ್ರೇಮಿಯ ರಕ್ಷಿಸಿದ ಲೈಫ್‌ಗಾರ್ಡ್ - Vistara News

ಉತ್ತರ ಕನ್ನಡ

Karwar News: ಸಮುದ್ರಕ್ಕೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಭಗ್ನಪ್ರೇಮಿಯ ರಕ್ಷಿಸಿದ ಲೈಫ್‌ಗಾರ್ಡ್

Karwar News: ಉತ್ತರ ಕನ್ನಡ ಜಿಲ್ಲೆಯ ಕಾರವಾರದ ರವೀಂದ್ರನಾಥ ಟ್ಯಾಗೋರ್ ಬೀಚ್‌ನಲ್ಲಿ ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿಯನ್ನು ರಕ್ಷಿಸಲಾಗಿದೆ.

VISTARANEWS.COM


on

Biplab who attempted suicide rescued
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಕಾರವಾರ: ಅರಬ್ಬೀ ಸಮುದ್ರಕ್ಕೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಭಗ್ನಪ್ರೇಮಿಯನ್ನು ಲೈಫ್‌ಗಾರ್ಡ್ ಸಿಬ್ಬಂದಿ ರಕ್ಷಣೆ ಮಾಡಿರುವ ಘಟನೆ ನಗರದ (Karwar News) ರವೀಂದ್ರನಾಥ ಟ್ಯಾಗೋರ್ ಬೀಚ್‌ನಲ್ಲಿ ಶುಕ್ರವಾರ ನಡೆದಿದೆ.

ಬಿಪ್ಲಾಬ್ ಮಂಡಲ್ ರಕ್ಷಣೆಗೊಳಗಾದ ಭಗ್ನ‌ಪ್ರೇಮಿ. ಪಶ್ಚಿಮ ಬಂಗಾಳ ಮೂಲದ ಕಟ್ಟಡ ಕಾರ್ಮಿಕ ಬಿಪ್ಲಾಬ್, ಕಾರವಾರದ ವೈದ್ಯಕೀಯ ಕಾಲೇಜಿನ ಎರಡನೇ ಹಂತದ ಕಟ್ಟಡ ಕಾಮಗಾರಿ ಕೆಲಸಕ್ಕೆ ಆಗಮಿಸಿದ್ದ. ತಾನು ಪ್ರೀತಿಸಿದ ಹುಡುಗಿ ಬೇರೊಬ್ಬರನ್ನು ಮದುವೆಯಾಗಿದ್ದಕ್ಕೆ ಯುವಕ ಆತ್ಮಹತ್ಯೆಗೆ ಯತ್ನಿಸಿದ್ದಾನೆ ಎನ್ನಲಾಗಿದೆ.

ಇದನ್ನೂ ಓದಿ | ಮನೆ ಮಾಲೀಕನಿಂದ ಲಕ್ಷಾಂತರ ರೂ. ವಂಚನೆ; ಸೆಲ್ಫಿ ವಿಡಿಯೊ ಮಾಡಿ ಆತ್ಮಹತ್ಯೆಗೆ ಯತ್ನಿಸಿದ ಮಹಿಳೆ

ಯುವಕ ಸಮುದ್ರಕ್ಕೆ ಹಾರಿದ್ದನ್ನು ಕಂಡ ಲೈಫ್‌ಗಾರ್ಡ್ ಮತ್ತು ಪ್ರವಾಸಿಮಿತ್ರ ಸಿಬ್ಬಂದಿ, ತಕ್ಷಣ ಆತನನ್ನು ರಕ್ಷಣೆ ಮಾಡಿದ್ದಾರೆ. ಬಳಿಕ ಯುವಕನಿಗೆ ಬುದ್ಧಿಮಾತು ಹೇಳಿ ಯುವಕನನ್ನು ಕಳುಹಿಸಿದ್ದಾರೆ.

ತಂದೆ-ತಾಯಿ, ಮಗಳು ನೇಣು ಬಿಗಿದು ಆತ್ಮಹತ್ಯೆ; ಅಕ್ಕ-ಬಾವನ ಕಿರುಕುಳವೇ ಕಾರಣ

sucide case

ಚಾಮರಾಜನಗರ: ಒಂದೇ ಕುಟುಂಬದ ಮೂವರು ನೇಣು ಬಿಗಿದುಕೊಂಡು (Family suicide) ಆತ್ಮಹತ್ಯೆ ಮಾಡಿಕೊಂಡ ಘಟನೆ ಚಾಮರಾಜನಗರದಲ್ಲಿ (Chamaraja nagara news) ನಡೆದಿದೆ.

ಚಾಮರಾಜನಗರ ತಾಲೂಕಿನ‌ ಬೇಡರಪುರ ಗ್ರಾಮದಲ್ಲಿ ನಡೆದ ಘಟನೆಯಲ್ಲಿ ಮೃತಪಟ್ಟವರನ್ನು ಮಹದೇವಸ್ವಾಮಿ (48), ಸವಿತಾ (40), ಸಿಂಚನಾ (13) ಎಂದು ಗುರುತಿಸಿದ್ದಾರೆ. ಮನೆಯಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಮೃತದೇಹಗಳು ಪತ್ತೆಯಾಗಿವೆ.

ಶುಕ್ರವಾರ ಬೆಳಗ್ಗೆ ಪಕ್ಕದ ಮನೆಯವರು ಮನೆಗೆ ಹೋದಾಗ ಮನೆಯಲ್ಲಿದ್ದ ಮೂವರೂ ನೇಣಿಗೆ ಶರಣಾಗಿರುವುದು ಬೆಳಕಿಗೆ ಬಂದಿದೆ. ಆತ್ಮಹತ್ಯೆಗೆ ನಿಖರ‌ ಕಾರಣ ತಿಳಿದುಬಂದಿಲ್ಲ. ಆದರೆ, ಇವರ ಕುಟುಂಬಗಳ ನಡುವೆ ಆಸ್ತಿ ವಿಚಾರಕ್ಕೆ ಗಲಾಟೆ ನಡೆಯುತಿತ್ತು ಎಂದು ಹೇಳಲಾಗಿದೆ. ಆದರೆ, ಸಾವಿಗೆ ಅದೇ ಕಾರಣವಾಯಿತು ಎನ್ನಲಾಗಿದೆ.

ಇದನ್ನೂ ಓದಿ | ಬೆಂಗಳೂರಿನಲ್ಲಿ ಅಪಾರ್ಟ್‌ಮೆಂಟ್‌ನ 10ನೇ ಮಹಡಿಯಿಂದ ಬಿದ್ದು ಗೃಹಿಣಿ ಮೃತ್ಯು

ಡೆತ್‌ ನೋಟ್‌ನಲ್ಲಿ ಬರೆದಿದ್ದೇನು?

ಸಾವಿಗೆ ಮುನ್ನ ಬರೆದಿಟ್ಟಿರುವ ಡೆತ್‌ ನೋಟ್‌ನಲ್ಲಿ, ತಮ್ಮ ಅಕ್ಕ ಬಾವಂದಿತೇ ನಮ್ಮ ಸಾವಿಗೆ ಕಾರಣ ಎಂದು ಮಹದೇವಸ್ವಾಮಿ ಬರೆದಿದ್ದಾರೆ. ಅಕ್ಕ ಮಂಜುಳಾ ಬಾವ ಮಲ್ಲೇಶ್, ಮಹದೇವಪ್ಪ, ತಾಯಿ ದೇವಿರಮ್ಮ ಅವರಿಗೆ ಶಿಕ್ಷೆಯಾಗಬೇಕು. ನಮ್ಮ ಆಸ್ತಿಯನ್ನು ಯಾವ ಕಾರಣಕ್ಕೂ ಇವರಿಗೆ ನೀಡಬೇಡಿ ಎಂದು ಡೆತ್ ನೋಟ್ ನಲ್ಲಿ ಬರೆದಿದ್ದಾರೆ ಮೃತ ಮಹದೇವಸ್ವಾಮಿ. ಸದ್ಯ ಸ್ಥಳಕ್ಕೆ ಚಾಮರಾಜನಗರ ಗ್ರಾಮಾಂತರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಮಳೆ

Karnataka Weather : ಕರಾವಳಿಯಲ್ಲಿ ಬಿರುಗಾಳಿ ಮಳೆ; ಕಡಲಿಗಿಳಿಯದಂತೆ ಮೀನುಗಾರರಿಗೆ ಅಲರ್ಟ್!‌

karnataka Weather Forecast : ಒಳನಾಡು ಹಾಗೂ ಮಲೆನಾಡು, ಕರಾವಳಿಯಲ್ಲಿ ಮಳೆ (Rain News) ಅಬ್ಬರ ಜೋರಾಗಿ ಇರಲಿದ್ದು, ಮೀನುಗಾರರಿಗೆ ಕಡಲಿಗಿಳಿಯದಂತೆ ಎಚ್ಚರಿಕೆ (Fisher Waring) ನೀಡಲಾಗಿದೆ. ಬಿರುಗಾಳಿಯು 55 ಕಿ.ಮೀ ವೇಗದಲ್ಲಿ ಬೀಸಲಿದ್ದು, ಈ ವೇಳೆ ಸಮುದ್ರಕ್ಕೆ ಇಳಿಯಬಾರೆಂದು ಸೂಚಿಸಲಾಗಿದೆ.

VISTARANEWS.COM


on

By

karnataka weather Forecast
Koo

ಬೆಂಗಳೂರು: ರಾಜ್ಯಾದ್ಯಂತ ವರುಣಾರ್ಭಟ ಮುಂದುವರಿದಿದ್ದು, ಗುಡುಗು, ಮಿಂಚು ಸಹಿತ (Rain News) ಬಿರುಗಾಳಿಯೊಂದಿಗೆ ಮಳೆಯಾಗಲಿದೆ. ಕರಾವಳಿಯ ಉಡುಪಿ, ಉತ್ತರ ಕನ್ನಡ ಜಿಲ್ಲೆಯ ಹೆಚ್ಚಿನ ಸ್ಥಳಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಗಾಳಿ ವೇಗವು ಗಂಟೆಗೆ 40-50 ಕಿ.ಮೀ ವ್ಯಾಪ್ತಿಯಲ್ಲಿ (Karnataka Weather Forecast) ಬೀಸಲಿದೆ.

ಇನ್ನೂ ದಕ್ಷಿಣ ಒಳನಾಡಿನ ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಮಗಳೂರು, ದಾವಣಗೆರೆ, ಹಾಸನ, ಕೋಲಾರ, ಮಂಡ್ಯ, ರಾಮನಗರ ಮತ್ತು ಶಿವಮೊಗ್ಗದಲ್ಲೂ ವ್ಯಾಪಕ ಮಳೆಯಾಗಲಿದೆ.

ಉತ್ತರ ಒಳನಾಡಿನ ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕಲಬುರಗಿ ಮತ್ತು ವಿಜಯಪುರ ಜಿಲ್ಲೆಗಳಲ್ಲಿ ಕೆಲವು ಸ್ಥಳಗಳಲ್ಲಿ ಗುಡುಗು ಸಹಿತ ಗಾಳಿಯೊಂದಿಗೆ (40-50 ಕಿಮೀ) ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.

ಬಳ್ಳಾರಿ, ಚಿತ್ರದುರ್ಗ, ಚಿಕ್ಕಬಳ್ಳಾಪುರದ ಹಲವು ಕಡೆಗಳಲ್ಲಿ ಗಾಳಿಯು ರಭಸವಾಗಿ ಬೀಸಲಿದ್ದು, ಗುಡುಗು ಸಹಿತ ಮಳೆ ಲಘು ಮಳೆಯಾಗಲಿದೆ. ತುಮಕೂರು ಮತ್ತು ವಿಜಯನಗರ ಸೇರಿದಂತೆ ಬೀದರ್, ಕೊಪ್ಪಳ, ರಾಯಚೂರು ಮತ್ತು ಯಾದಗಿರಿಯಲ್ಲೂ ಗಾಳಿ ಸಹಿತ ಭಾರಿ ಮಳೆಯಾಗಲಿದೆ.

Karnataka Weather Forecast

ಇದನ್ನೂ ಓದಿ: SSLC Toper: ಓದೋಕೂ ಬರದವ ಎಸ್‌ಎಸ್‌ಎಲ್‌ಸಿ ಟಾಪರ್‌ ಆಗಿ ಜವಾನನಾದ! ಜಡ್ಜ್‌ ದೂರಿನಿಂದ ಹೊರ ಬಿತ್ತು ಅಸಲಿಯತ್ತು!

ಯೆಲ್ಲೋ ಅಲರ್ಟ್‌

ಗುಡುಗು ಸಹಿತ ಭಾರೀ ಮಳೆಯೊಂದಿಗೆ 40-50 ಕಿ.ಮೀ ವ್ಯಾಪ್ತಿಯಲ್ಲಿ ಬಿರುಗಾಳಿ ಬೀಸಲಿದ್ದು, ಹಳದಿ ಎಚ್ಚರಿಕೆ ನೀಡಲಾಗಿದೆ. ದಕ್ಷಿಣ ಕನ್ನಡ, ಉಡುಪಿ, ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಕೊಡಗು ಮತ್ತು ಮೈಸೂರು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ನೀಡಲಾಗಿದೆ.

ಮೀನುಗಾರರಿಗೆ ಅಲರ್ಟ್‌

ಮೇ 24ರಂದು ಕರ್ನಾಟಕ ಕರಾವಳಿ ಭಾಗದ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದೆ. ಗಾಳಿಯ ವೇಗವು ಗಂಟೆಗೆ 45 ಕಿ.ಮೀ ನಿಂದ 55 ಕಿ.ಮೀ ವೇಗದಲ್ಲಿ ಬೀಸುವ ಸಾಧ್ಯತೆ ಇದೆ. ಹಾಗಾಗಿ ಮೀನುಗಾರರು ಸಮುದ್ರ ಪ್ರದೇಶಗಳಿಗೆ ತೆರಳದಂತೆ ಸೂಚಿಸಲಾಗಿದೆ. ಪ್ರವಾಸಿಗರು ಕಡಲ ತೀರಕ್ಕೆ ಹೋಗದಂತೆ ಎಚ್ಚರಿಸಲಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಮಳೆ

Karnataka Rain : ಮಳೆ ಅವಘಡಕ್ಕೆ ಜನರು ತತ್ತರ; ಧರೆಗುರುಳಿದ ಮರಗಳು, ಕುಸಿದು ಬಿದ್ದ ಮನೆಗಳು

Rain News : ರಾಜ್ಯದ ಹಲವೆಡೆ ಮಳೆಯು (Karnataka Rain) ಅಬ್ಬರಿಸುತ್ತಿದೆ. ಮೈಸೂರಿನ ಹುಣಸೂರಿನಲ್ಲಿ ಜೋರು ಮಳೆಗೆ ಮನೆ ಕುಸಿದು ಬಿದ್ದರೆ, ಬೆಳಗಾವಿಯಲ್ಲಿ ಗಾಳಿ ಮಳೆಗೆ ಶಾಲೆಯ ಶೆಡ್‌
(Karnataka Weather Forecast) ಹಾರಿ ಹೋಗಿದೆ. ಯಾದಗಿರಿ, ಧಾರವಾಡದಲ್ಲಿ ಮರಗಳು ಧರೆಗುರುಳಿದ್ದವು.

VISTARANEWS.COM


on

By

Karnataka rain
Koo

ಮೈಸೂರು: ಮೈಸೂರಿನ ಹುಣಸೂರು ಭಾಗದಲ್ಲಿ ವರುಣನ (Rain News) ಅಬ್ಬರ ಜೋರಾಗಿದೆ. ಕಳೆದ ನಾಲ್ಕೈದು ದಿನಗಳಿಂದ ಸುರಿಯುತ್ತಿರುವ ಮಳೆಗೆ (Karnataka Rain) ತಾಲೂಕಿನ ಹಲವು ಗ್ರಾಮಗಳಲ್ಲಿ ಅಪಾರ ಪ್ರಮಾಣದಲ್ಲಿ ಹಾನಿಯಾಗಿದೆ. ಕಾಳೇನಹಳ್ಳಿಯಲ್ಲಿ ಶ್ರೀನಿವಾಸ್ ಎಂಬುವರಿಗೆ ಸೇರಿದ ಮನೆಯು ಕುಸಿದು ಬಿದ್ದಿದೆ. ಅದೃಷ್ಟವಶಾತ್ ಯಾವುದೇ ಅಪಾಯ ಸಂಭವಿಸಿಲ್ಲ. ಜೋರಾಗಿ ಸುರಿದ ಮಳೆಗೆ ಮನೆಯಲ್ಲಿದ್ದ ವಸ್ತುಗಳೆಲ್ಲ ನಾಶವಾಗಿದೆ. ವಾಸಕ್ಕೆ ಮನೆಯಿಲ್ಲದ ಪರಿಸ್ಥಿತಿ ನಿರ್ಮಾಣವಾಗಿದ್ದು, ಕುಟುಂಬಸ್ಥರು ಪರಿಹಾರಕ್ಕಾಗಿ ಮನವಿ ಮಾಡಿದ್ದಾರೆ.

ಇತ್ತ ಹನಗೋಡಿನಲ್ಲಿ ಭಾರಿ ಮಳೆಗೆ ಜನರು ತತ್ತರಿಸಿದ್ದರು. ಹುಣಸೂರು ತಾಲೂಕಿನ ಹನಗೋಡಿ ಗ್ರಾಮದಲ್ಲಿ ವಾರದಿಂದ ಸುರಿಯುತ್ತಿರುವ ಮಳೆಗೆ ಮನೆ ಅಂಗಡಿಗಳಿಗೆ ನೀರು ನುಗ್ಗಿ ಸಂಪೂರ್ಣ ಜಲಾವೃತಗೊಂಡಿತ್ತು. ಬಸ್ ನಿಲ್ದಾಣ ಕೆರೆಯಂತಾಗಿತ್ತು. ಚರಂಡಿಗಳ ವ್ಯವಸ್ಥೆ ಸರಿಯಿಲ್ಲದೆ ನೀರು ಹೋಗದೆ ನಿಂತಲ್ಲೇ ನಿಂತು ಜನರಿಗೆ ತೊಂದರೆಯಾಗಿತ್ತು.

ಇದನ್ನೂ ಓದಿ: Accident Case : ಇಳಿಜಾರಿನಲ್ಲಿ ತಪ್ಪಿದ ಕಂಟ್ರೋಲ್‌; ಟ್ರ್ಯಾಕ್ಟರ್‌ ಪಲ್ಟಿಯಾಗಿ ಯುವಕ ಮೃತ್ಯು

ಗಾಳಿ ಮಳೆಗೆ ಹಾರಿ ಹೋದ ಶಾಲೆಯ ಶೆಡ್‌

ಬೆಳಗಾವಿ ಜಿಲ್ಲೆಯ ಕಾಗವಾಡ ತಾಲೂಕಿನ ಜುಗೂಳ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಜೋರು ಗಾಳಿ ಮಳೆಗೆ ಶೆಡ್ ಹಾರಿ ಹೋಗಿತ್ತು. ಶಾಲೆಗೆ ರಜೆ ಇದ್ದಿದ್ದರಿಂದ ಭಾರಿ ಅನಾಹುತ ತಪ್ಪಿತ್ತು. ಶಾಲೆಯ ಶೆಡ್ ಹಾರಿ ಅಕ್ಕಪಕ್ಕದ ಮನೆಗಳು ಹಾಗೂ ವಿದ್ಯುತ್ ತಂತಿಗಳು ಮೇಲೆ ಬಿದ್ದು ಹಾನಿಯಾಗಿತ್ತು.

ಯಾದಗಿರಿಯಲ್ಲಿ ಧರೆಗುರುಳಿದ ಮರಗಳು

ಯಾದಗಿರಿಯಲ್ಲಿ ಬಿರುಗಾಳಿ ಸಹಿತ ಮಳೆಗೆ ಬೃಹತ್ ಮರಗಳು ಧರೆಗುರುಳಿದ್ದವು. ಸತತ ಒಂದು ಗಂಟೆಗೂ ಹೆಚ್ಚು ಸಮಯ ಸುರಿದ ಮಳೆಗೆ ಮರಗಳ ಮೇಲ್ಭಾಗದ ರಂಬೆ, ಕೊಂಬೆಗಳು ಸಂಪೂರ್ಣ ಗಾಳಿಗೆ ಮುರಿದು ಬೋಳಾಗಿದ್ದವು. ಕೆಲವೆಡೆ ಮನೆ ಮುಂದೆ ಇದ್ದ ಮರಗಳು ನೆಲಕ್ಕುರುಳಿದ್ದವು. ಭಾರಿ ಮಳೆಗೆ ಸುಭಾಷ್ ವೃತ್ತದ ಸಮೀಪದ ಪಿಡ್ಲೂಡಿ ಕಚೇರಿ ಆವರಣದೊಳಗೆ ಮಳೆ ನೀರು ನುಗ್ಗಿತ್ತು. ಯಾದಗಿರಿ ಶಾಸಕ ಚನ್ನಾರೆಡ್ಡಿ ಪಾಟೀಲ ತುನ್ನೂರು ಅವರ ಜನಸಂಪರ್ಕದ ಕಚೇರಿ ಆವರಣದಲ್ಲಿ ಮರಗಳು ಧರೆಗುರುಳಿದ್ದವು.

ಯಾದಗಿರಿಯಲ್ಲಿ ಬಿರುಗಾಳಿ ಸಹಿತ ಭಾರೀ ಮಳೆಗೆ ಆರು ಜನರ ಕುಟುಂಬವೊಂದು ಪ್ರಾಣಾಪಾಯದಿಂದ ಜಸ್ಟ್ ಮಿಸ್ ಆಗಿದೆ. ಯಾದಗಿರಿಯ ಮಾತಾಮಣಿಕೇಶ್ವರಿ ನಗರದಲ್ಲಿ ಭಾರೀ ಮಳೆ ಗಾಳಿಗೆ ಮನೆಗೆ ಹಾಕಿದ ಟಿನ್ ಶೆಡ್ ಹಾರಿಹೋಗಿದೆ. ಮಳೆ ಗಾಳಿ ಜೋರಾಗುತ್ತಿದ್ದಂತೆ ಇಡೀ ಕುಟುಂಬ ಮನೆಯಿಂದ ಹೊರಬಂದು ಬಚಾವ್ ಆಗಿದ್ದಾರೆ. ಮನೆಯಿಂದ ಹೊರ ಬಂದ ಕೆಲವೇ ಕ್ಷಣದಲ್ಲಿ ಟಿನ್ ಶೆಡ್ ಕುಸಿದು ಬಿದ್ದಿದೆ. ಇತ್ತ ದಿನಸಿ ಸಾಮಾನು ಸೇರಿದಂತೆ ಎಲ್ಲ ವಸ್ತುಗಳು ಹಾಳಾಗಿವೆ.

ಧಾರಾವಾಡದಲ್ಲಿ ಧಾರಾಕಾರ ಮಳೆಗೆ ರಸ್ತೆ ಮೇಲೆ ನಿಂತ ನೀರು

ಧಾರವಾಡದಲ್ಲಿ ಗುರುವಾರದಂದು ಅರ್ಧ ಗಂಟೆಗೂ ಹೆಚ್ಚು ಸಮಯ ಮಳೆಯಾಗಿತ್ತು. ಎರಡು ದಿನದಿಂದ ಬ್ರೇಕ್‌ ಕೊಟ್ಟಿದ್ದ ಮಳೆಯು ಗುರುವಾರ ದಿಢೀರ್‌ ಅಪ್ಪಳಿಸಿತ್ತು. ಪರಿಣಾಮ ವಾಹನ ಸಂಚಾರ ಅಸ್ತವ್ಯಸ್ತವಾಗಿತ್ತು. ಧಾರವಾಡ ಹೊರವಲಯದ ಕೆಎಂಎಫ್ ಬಳಿ ಧಾರಾಕಾರ ಮಳೆಗೆ ರಸ್ತೆಯಲ್ಲೇ ನೀರು ನಿಂತಿತ್ತು. ಬಿಆರ್‌ಟಿಎಸ್ ಕಾರಿಡಾರ್‌ನಿಂದ ಹರಿದು ಹೋಗದೇ ಇರುವುದೇ ಕಾರಣ ಎಂದು ಸ್ಥಳೀಯರು ಆಕ್ರೋಶಿಸಿದರು.

ಚಿಕ್ಕಮಗಳೂರಿನ ಕೊಪ್ಪ ತಾಲೂಕಿನ ಬಸರೀಕಟ್ಟೆ, ತರೀಕೆರೆಯಲ್ಲೂ ಭಾರೀ ಮಳೆಯಾಗಿದ್ದು ರಸ್ತೆಯಲ್ಲಿ ಎರಡು ಅಡಿ ನೀರು ನಿಂತಿತ್ತು. ತರೀಕೆರೆ ಪಟ್ಟಣದ ಗಣಪತಿ ಪೆಂಡಾಲ್ ಮುಂಭಾಗ ಕಾರು, ಬೈಕ್‌ಗಳು ಅರ್ಧದಷ್ಟು ಮುಳುಗಿತ್ತು. ಎನ್ಆರ್‌ ಪುರ ತಾಲೂಕಿನ ಬಾಳೆಹೊನ್ನೂರಿನಲ್ಲೂ ಮಳೆಯಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಚಿಕ್ಕಮಗಳೂರು

Accident Case : ಇಳಿಜಾರಿನಲ್ಲಿ ತಪ್ಪಿದ ಕಂಟ್ರೋಲ್‌; ಟ್ರ್ಯಾಕ್ಟರ್‌ ಪಲ್ಟಿಯಾಗಿ ಯುವಕ ಮೃತ್ಯು

Accident Case : ಗೊಬ್ಬರ ಚೀಲಗಳನ್ನು ಹೊತ್ತು ಬರುತ್ತಿದ್ದ ಟ್ರ್ಯಾಕ್ಟರ್‌ ಇಳಿಜಾರಿನಲ್ಲಿ ಪಲ್ಟಿಯಾಗಿದ್ದು, ಅದರಡಿ ಸಿಲುಕಿದ ಯುವಕನೊರ್ವ ದಾರುಣವಾಗಿ ಮೃತಪಟ್ಟಿದ್ದಾನೆ. ಇತ್ತ ಮೀನುಗಾರಿಕಾ ಬೋಟ್‌ಗೆ ಟೂರಿಸ್ಟ್‌ ಬೋಟ್‌ ಡಿಕ್ಕಿ ಹೊಡೆದಿದ್ದು, ಬಾಲಕನೊರ್ವ ಗಾಯಗೊಂಡಿದ್ದಾನೆ.

VISTARANEWS.COM


on

By

Accident Case
Koo

ಚಿಕ್ಕಮಗಳೂರು: ಗೊಬ್ಬರ ತುಂಬಿಕೊಂಡು ಹೋಗುತ್ತಿದ್ದ ಟ್ರ್ಯಾಕ್ಟರ್‌ ಪಲ್ಟಿಯಾಗಿ ಯುವಕನೊರ್ವ (Road Accident) ದಾರುಣವಾಗಿ ಮೃತಪಟ್ಟಿದ್ದಾನೆ. ಚಿಕ್ಕಮಗಳೂರಿನ ಮೂಡಿಗೆರೆ ತಾಲೂಕಿನ ಒಕ್ಕಳ್ಳಿ ಬಳಿ ಘಟನೆ ನಡೆದಿದೆ. ರಸ್ತೆಯ ಇಳಿಜಾರಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಟ್ರ್ಯಾಕ್ಟರ್ ಪಲ್ಟಿಯಾಗಿದೆ. ಪರಿಣಾಮ ಟ್ರ್ಯಾಕ್ಟರ್‌ನಲ್ಲಿದ್ದ ಸತೀಶ್ (28) ಎಂಬಾತ ಸ್ಥಳದಲ್ಲೇ ಮೃತಪಟ್ಟಿದ್ದಾನೆ.

ಬಣಕಲ್‌ನಿಂದ ಸಾರಗೋಡು ಗ್ರಾಮಕ್ಕೆ ಟ್ರ್ಯಾಕ್ಟರ್‌ನಲ್ಲಿ 50ಕ್ಕೂ ಹೆಚ್ಚು ಗೊಬ್ಬರದ ಚೀಲಗಳನ್ನು ತುಂಬಿಕೊಂಡು ಹೋಗಲಾಗುತ್ತಿತ್ತು. ಈ ವೇಳೆ ಇಳಿಜಾರಿನಲ್ಲಿ ಭಾರ ತಡೆಯಲು ಆಗದೆ ಟ್ರ್ಯಾಕ್ಟರ್‌ ಪಲ್ಟಿ ಹೊಡೆದಿದೆ. ಪಲ್ಟಿಯಾದ ರಭಸಕ್ಕೆ ಟ್ರ್ಯಾಕ್ಟರ್‌ ಸಂಪೂರ್ಣ ಉಲ್ಟಾ ಹೊಡೆದಿದೆ. ಅದೃಷ್ಟವಶಾತ್ ಟ್ರ್ಯಾಕ್ಟರ್ ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಸತೀಶ್‌ ಟ್ರ್ಯಾಕ್ಟರ್‌ನಡಿ ಸಿಲುಕಿ ಮೃತಪಟ್ಟಿದ್ದಾನೆ. ಬಣಕಲ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನಿಸಲಾಗಿದೆ.

ಮೀನುಗಾರಿಕಾ ಬೋಟ್‌ಗೆ ಟೂರಿಸ್ಟ್ ಬೋಟ್ ಡಿಕ್ಕಿ; ಪಾರಾದ ತಂದೆ-ಮಗ

ಮೀನುಗಾರಿಕಾ ಬೋಟ್‌ಗೆ ಟೂರಿಸ್ಟ್ ಬೋಟ್ ಡಿಕ್ಕಿಯಾಗಿದ್ದು, ಸ್ವಲ್ಪದರಲ್ಲೇ ಪ್ರಾಣಾಪಾಯದಿಂದ ತಂದೆ- ಮಗ ಪಾರಾಗಿದ್ದಾರೆ. ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರದ ತನ್ಮಡಗಿಯ ಶರಾವತಿ ನದಿಯಲ್ಲಿ ಘಟನೆ ನಡೆದಿದೆ. ಮೀನುಗಾರಿಕಾ ಬೋಟ್‌ನಲ್ಲಿದ್ದ ಸಮರ್ಥ ಅಂಬಿಗ (16) ಎಂಬಾತ ಎಡಗೈಗೆ ಗಂಭೀರ ಗಾಯವಾಗಿದೆ.

ಸಮರ್ಥ ತನ್ನ ತಂದೆ ವಾಮನ ಅಂಬಿಗ ಜತೆ ಮೀನುಗಾರಿಕೆಗೆ ತೆರಳಿದ್ದ. ಸಾಂಪ್ರದಾಯಿಕ ಮೀನುಗಾರಿಕೆ ನಡೆಸುತ್ತಿದ್ದ ವೇಳೆ ಹಿಂಬದಿಯಿಂದ ಬಂದ ಟೂರಿಸ್ಟ್ ಬೋಟ್ ಡಿಕ್ಕಿ ಹೊಡೆದಿದೆ. ಪರಿಣಾಮ ಗಾಯಗೊಂಡ ಬಾಲಕನಿಗೆ ಹೊನ್ನಾವರ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಹೊನ್ನಾವರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಇದನ್ನೂ ಓದಿ: Road Accident : ಬೈಕ್‌ ಸ್ಕಿಡ್‌ ಆಗಿ ಕಂದಕಕ್ಕೆ ಬಿದ್ದ ಸವಾರ ಮೃತ್ಯು; ಕೆರೆಗೆ ಕಾರು ಹಾರಿಸಿ ಪ್ರಾಣಬಿಟ್ಟ ಚಾಲಕ

ಡಿಸೇಲ್‌ ಖಾಲಿ ಮಾರ್ಗ ಮಧ್ಯದಲ್ಲೇ ನಿಂತ ಕೆಎಸ್‌ಆರ್‌ಟಿಸಿ ಬಸ್

ಕುಂದಾಪುರ- ಶಿವಮೊಗ್ಗ- ಬೆಂಗಳೂರು ಮಾರ್ಗದ ಕೆಎಸ್‌ಆರ್‌ಟಿಸಿ ಬಸ್‌ವೊಂದು ಹೊಸನಗರ ಘಾಟ್‌ನ ಮಾಸ್ತಿಕಟ್ಟೆ ಬಳಿ ಡಿಸೇಲ್‌ ಖಾಲಿ ಆಗಿ ಮಾರ್ಗ ಮಧ್ಯದಲ್ಲೇ ನಿಂತು ಹೋದ ಘಟನೆ ನಡೆದಿದೆ. ಡಿಸೇಲ್ ಖಾಲಿ ಆದ ಕಾರಣ ಮಾರ್ಗ ಮಧ್ಯದಲ್ಲೇ ಬಸ್ ನಿಲ್ಲಿಸಿದ ಬಸ್ ಚಾಲಕ, ಪ್ರಯಾಣಿಕರಿಂದ ಬಸ್ ತಳ್ಳಿಸಿದ್ದಾರೆ. ನಂತರ ಪುರುಷರಿಗೆ ಟಿಕೆಟ್‌ನ ಅರ್ಧ ಹಣ ಕೊಟ್ಟು ಖಾಸಗಿ ಬಸ್‌ನಲ್ಲಿ ಕಳುಹಿಸಿದ್ದಾರೆ. ಶಕ್ತಿ ಯೋಜನೆಯಲ್ಲಿ ಪ್ರಯಾಣ ಮಾಡಿದ ಮಹಿಳೆಯರಿಗೆ ತೊಂದರೆಯುಂಟಾಯ್ತು. ಇದರಿಂದಾಗಿ ಅಧಿಕಾರಿಗಳಿಗೆ ಪ್ರಯಾಣಿಕರು ಹಿಡಿಶಾಪ ಹಾಕಿದರು. ಸ್ಥಳೀಯ ಜನರ ಸಹಾಯದಿಂದ ಬೇರೆ ಬಸ್‌ನಲ್ಲಿ ಪ್ರಯಾಣಿಸಿದರು.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಉತ್ತರ ಕನ್ನಡ

Assault Case: ಯುವತಿಯ ಪ್ರಿಯಕರನ ಕುತ್ತಿಗೆಗೆ ಚಾಕುವಿನಿಂದ ಇರಿದ ಮಾಜಿ ಪ್ರಿಯಕರ!

Assault Case: ತಾನು ಪ್ರೀತಿಸುತ್ತಿದ್ದ ಯುವತಿ ತನ್ನ ಪ್ರೀತಿ ನಿರಾಕರಿಸಿ ಬೇರೊಬ್ಬ ಯುವಕನನ್ನು ಪ್ರೀತಿಸುತ್ತಿರುವುದಕ್ಕೆ ಕೋಪಗೊಂಡ ಮಾಜಿ ಪ್ರಿಯಕರ ಹಾಲಿ ಪ್ರಿಯಕರನ ಕುತ್ತಿಗೆಗೆ ಚಾಕುವಿನಿಂದ ಇರಿದು ಹಲ್ಲೆ ಮಾಡಿರುವ ಘಟನೆ ಕುಮಟಾ ಪಟ್ಟಣ ಮಣಕಿ ಮೈದಾನದಲ್ಲಿ ನಡೆದಿದೆ.

VISTARANEWS.COM


on

young womans lover was stabbed in the neck by an ex lover
ಚಾಕು ಇರಿತಕ್ಕೆ ಒಳಗಾದ ಯುವಕ ಸಂತೋಷ ಅಂಬಿಗ.
Koo

ಕಾರವಾರ: ತಾನು ಪ್ರೀತಿಸುತ್ತಿದ್ದ ಯುವತಿ ತನ್ನ ಪ್ರೀತಿ ನಿರಾಕರಿಸಿ ಬೇರೊಬ್ಬ ಯುವಕನನ್ನು ಪ್ರೀತಿಸುತ್ತಿರುವುದಕ್ಕೆ ಕೋಪಗೊಂಡ ಮಾಜಿ ಪ್ರಿಯಕರ ಹಾಲಿ ಪ್ರಿಯಕರನ ಕುತ್ತಿಗೆಗೆ ಚಾಕುವಿನಿಂದ ಇರಿದು ಹಲ್ಲೆ (Assault Case) ಮಾಡಿರುವ ಘಟನೆ ಕುಮಟಾ ಪಟ್ಟಣ ಮಣಕಿ ಮೈದಾನದಲ್ಲಿ ನಡೆದಿದೆ.

ಆರೋಪಿ ರಾಜೇಶ ಅಂಬಿಗ.

ಸಂತೋಷ ಅಂಬಿಗ ಎಂಬಾತನೆ ಚಾಕು ಇರಿತಕ್ಕೆ ಒಳಗಾದ ಯುವಕನಾಗಿದ್ದು, ರಾಜೇಶ ಅಂಬಿಗ ಎಂಬಾತ ಹಲ್ಲೆ ಮಾಡಿದ ಆರೋಪಿಯಾಗಿದ್ದಾನೆ. ರಾಜೇಶ ಅಂಬಿಗ ಯುವತಿಯೋರ್ವಳನ್ನು ಪ್ರೀತಿ ಮಾಡುತ್ತಿದ್ದು, ಇಬ್ಬರೂ ಚೆನ್ನಾಗಿಯೇ ಇದ್ದರು ಎನ್ನಲಾಗಿದೆ. ಕಳೆದ ‌ಒಂದು ವರ್ಷದಿಂದ ರಾಜೇಶನ ನಡವಳಿಕೆ ಸರಿಯಿಲ್ಲದ ಕಾರಣ ಆಕೆ ರಾಜೇಶ ಪ್ರೀತಿಯನ್ನು ನಿರಾಕರಣೆ ಮಾಡಿದ್ದಳು ಎನ್ನಲಾಗಿದೆ. ನಂತರದಲ್ಲಿ ಇದೀಗ ಹಲ್ಲೆಗೆ ಒಳಗಾದ ಸಂತೋಷ ಅಂಬಿಗ ಈ ಹಿಂದೆ ರಾಜೇಶ ಪ್ರೀತಿ ಮಾಡುತ್ತಿದ್ದ ಯುವತಿಯನ್ನ ಪ್ರೀತಿ ಮಾಡಲು ಆರಂಭಿಸಿ ವಿವಾಹ ಕೂಡ ನಿಶ್ಚಯವಾಗಿತ್ತು ಎನ್ನಲಾಗಿದೆ.

ಇದನ್ನೂ ಓದಿ: Murder Case: ನಟಿ, ಕಾಂಗ್ರೆಸ್ ನಾಯಕಿ ವಿದ್ಯಾ ಹತ್ಯೆ ಆರೋಪಿ ಪತಿಯ ಬಂಧನ

ಇದೇ ವಿಚಾರಕ್ಕೆ ಸಿಟ್ಟಾದ ರಾಜೇಶ ಅಂಬಿಗ ಬುಧವಾರ ಸಂತೋಷ ಅಂಬಿಗನಿಗೆ ಪೋನ್ ಮಾಡಿ ಮಾತನಾಡಬೇಕೆಂದು ಒಬ್ಬನನ್ನೇ ಮಣಕಿ ಮೈದಾನಕ್ಕೆ ಕರೆಸಿಕೊಂಡಿದ್ದಾನೆ. ಆದರೆ ಸಂತೋಷ ಬರುವಾಗ ತನ್ನ ಜತೆ ಒಂದಿಬ್ಬರು ಸ್ನೇಹಿತರನ್ನ ಕರೆದುಕೊಂಡು ಬಂದಿದ್ದು, ಈ ವೇಳೆ ರಾಜೇಶ, ಸಂತೋಷನ ಕಣ್ಣಿಗೆ ಖಾರದ ಪುಡಿ ಎರಚಿ ಕುತ್ತಿಗೆಗೆ ಚಾಕುವಿನಿಂದ ಇರಿದಿದ್ದಾನೆ‌ ಎಂದು ತಿಳಿದುಬಂದಿದೆ‌. ಘಟನೆಯಿಂದ ಸಂತೋಷ ಅಂಬಿಗ ಗಂಭೀರವಾಗಿ ಗಾಯಗೊಂಡಿದ್ದು, ಕುಮಟಾ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಬಗ್ಗೆ ಕುಮಟಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Continue Reading
Advertisement
Maarige Daari
ಪ್ರಮುಖ ಸುದ್ದಿ9 mins ago

Maarige Daari : ‘ಮಾರಿಗೆ ದಾರಿ” ಫಸ್ಟ್ ಲುಕ್ ಟೀಸರ್ ಬಿಡುಗಡೆ, ಇಲ್ಲಿದೆ ವಿಡಿಯೊ

Mansoon
ಪ್ರಮುಖ ಸುದ್ದಿ21 mins ago

Monsoon : ಮಳೆ ವರದಿ; ಕರ್ನಾಟಕದಲ್ಲಿ ಜೂನ್ 1ರಂದೇ ಮಾನ್ಸೂನ್ ಮಳೆ ಆರಂಭ

bbmp waste disposal
ಬೆಂಗಳೂರು37 mins ago

Waste Disposal: ಕಸ ವಿಲೇವಾರಿ ಇನ್ನು ಬಿಬಿಎಂಪಿ ಕೆಲಸ ಅಲ್ಲ! ಅದಕ್ಕಾಗಿಯೇ ಬರುತ್ತಿದೆ ಹೊಸ ಸಂಸ್ಥೆ

Aishwarya Rai
Latest42 mins ago

Aishwarya Rai : ಮುದ್ದಿನ ಮಗಳು ಆರಾಧ್ಯಳ ಜತೆ ಅಮ್ಮನ ಬರ್ತ್​​ಡೇ ಆಚರಿಸಿದ ಐಶ್ವರ್ಯಾ ರೈ; ಇಲ್ಲಿವೆ ಚಿತ್ರಗಳು

Drowned in water
ಕಲಬುರಗಿ43 mins ago

Drowned in water : ಕುಡಿದ ಮತ್ತಿನಲ್ಲಿ ಈಜಲು ಹೋದ ಯುವಕ ನೀರುಪಾಲು; ಸಾವಿನ ಕೊನೆ ಕ್ಷಣ ಮೊಬೈಲ್‌ನಲ್ಲಿ ಸೆರೆ

Viral Video
ಪ್ರಮುಖ ಸುದ್ದಿ1 hour ago

Viral Video: ಚಲಿಸುವ ಬೈಕ್​ನಲ್ಲಿ ಆಲಿಂಗನ, ಬಿಸಿ ಚುಂಬನ; ಲಜ್ಜೆಯಿಲ್ಲದ ಜೋಡಿಯ ಸ್ಟಂಟ್​ ವಿಡಿಯೊ ವೈರಲ್​

suspicious death Self Harming By Hight court lawyer
ಕ್ರೈಂ2 hours ago

Suspicious Death: ವಕೀಲೆಯ ಅನುಮಾನಾಸ್ಪದ ಸಾವಿನ ಪ್ರಕರಣ; ಪೋಸ್ಟ್ ಮಾರ್ಟಮ್ ರಿಪೋರ್ಟ್ ಹೇಳಿದ್ದೇನು?

bulldozer justice
ಪ್ರಮುಖ ಸುದ್ದಿ2 hours ago

Bulldozer justice : ಅಸ್ಸಾಂ ಸರ್ಕಾರಕ್ಕೆ ತಿರುಗುಬಾಣವಾದ ಬುಲ್ದೋಜರ್ ನ್ಯಾಯ! ನೆಲಸಮಗೊಳಿಸಿದ ಮನೆ ಮಾಲೀಕರಿಗೆ 30 ಲಕ್ಷ ಪರಿಹಾರ!

assault case koratagere
ಕ್ರೈಂ2 hours ago

Assault Case: ಗೃಹ ಸಚಿವರ ಕ್ಷೇತ್ರದಲ್ಲಿ ಭೂಸೇನೆ ಯೋಧನ ಮೇಲೆಯೇ ಮಾರಣಾಂತಿಕ ಹಲ್ಲೆ; ಇಲ್ಲಿ ಕೇಳೋರೇ ಇಲ್ವಾ?

Rameshwaram Cafe
ಪ್ರಮುಖ ಸುದ್ದಿ2 hours ago

Rameshwaram Cafe : ಅವಧಿ ಮುಗಿದ ವಸ್ತುಗಳಲ್ಲಿ ತಿಂಡಿ ತಯಾರಿ, ರಾಮೇಶ್ವರಂ ಕೆಫೆ ಮೇಲೆ ಆಹಾರ ಸುರಕ್ಷತಾ ಅಧಿಕಾರಿಗಳ ದಾಳಿ

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

dina bhavishya read your daily horoscope predictions for May 23 2024
ಭವಿಷ್ಯ1 day ago

Dina Bhavishya : 12 ರಾಶಿಯವರ ಇಂದಿನ ಭವಿಷ್ಯ ಹೇಗಿದೆ? ಯಾರಿಗೆ ಶುಭ, ಯಾರಿಗೆ ಅಶುಭ ಫಲ?

Karnataka Weather Forecast
ಮಳೆ2 days ago

Karnataka Weather : ಮುಂದುವರಿಯಲಿದೆ ವರುಣಾರ್ಭಟ; ಬೆಂಗಳೂರಲ್ಲೂ ಭಾರಿ ಮಳೆ ನಿರೀಕ್ಷೆ!

Karnataka Rain
ಮಳೆ3 days ago

Karnataka Rain : ಭಾರಿ ಮಳೆಗೆ ಕರೆಂಟ್‌ ಕಟ್‌, ಕತ್ತಲಲ್ಲೇ ರೋಗಿಗಳಿಗೆ ಟ್ರೀಟ್‌ಮೆಂಟ್‌; ಮರ ಬಿದ್ದರೂ ಪಾರಾದ ತಾಯಿ-ಮಗ

Love Case Father throws hot water on man who loved his daughter for coming home
ಕೊಡಗು3 days ago

Love Case : ಮನೆಗೆ ಬಂದ ಪ್ರೇಮಿಗೆ ಕೊತ ಕೊತ ಕುದಿಯುವ ನೀರು ಎರಚಿದ ಯುವತಿ ತಂದೆ!

Contaminated Water
ಮೈಸೂರು3 days ago

Contaminated Water : ಡಿ ಸಾಲುಂಡಿಯಲ್ಲಿ ಕಲುಷಿತ ನೀರು ಸೇವಿಸಿ ಅಸ್ವಸ್ಥಗೊಂಡಿದ್ದ ಯುವಕ ಸಾವು

Karnataka Rain
ಮಳೆ4 days ago

Karnataka Rain : ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ; ಸಮುದ್ರಕ್ಕಿಳಿಯದಂತೆ ಮೀನುಗಾರರಿಗೆ ಎಚ್ಚರಿಕೆ

Karnataka Rain
ಮಳೆ5 days ago

Karnataka Rain : ಒಂದೇ ಮಳೆಗೆ ಹೊಳೆಯಂತಾದ ಬೆಂಗಳೂರು ರಸ್ತೆಗಳು! ಕಳಸದಲ್ಲೂ ಮುಂದುವರಿದ ಅಬ್ಬರ

Karnataka rain
ಮಳೆ5 days ago

Karnataka Rain : ವಿಜಯನಗರದಲ್ಲಿ ಸಿಡಿಲಿಗೆ ಜಾನುವಾರು ಬಲಿ; ಬೆಂಗಳೂರು ಸೇರಿ ಹಲವೆಡೆ ಭಾರಿ ಮಳೆ

Karnataka Rain
ಮಳೆ5 days ago

Karnataka Rain: ಧಾರಾಕಾರ ಮಳೆಗೆ ಕಾಂಪೌಂಡ್ ಕುಸಿದು 4 ಬೈಕ್‌ಗಳು ಜಖಂ; ಮದುವೆ ಮಂಟಪಕ್ಕೆ ನುಗ್ಗಿದ ನೀರು‌

Prajwal Revanna Case JDS calls CD Shivakumar pen drive gang
ರಾಜಕೀಯ7 days ago

Prajwal Revanna Case: CD ಶಿವಕುಮಾರ್ ಪೆನ್ ಡ್ರೈವ್ ಗ್ಯಾಂಗ್ ಎಂದ ಕುಟುಕಿದ ಜೆಡಿಎಸ್‌!

ಟ್ರೆಂಡಿಂಗ್‌