ಕಾರವಾರ: ಅರಬ್ಬೀ ಸಮುದ್ರಕ್ಕೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಭಗ್ನಪ್ರೇಮಿಯನ್ನು ಲೈಫ್‌ಗಾರ್ಡ್ ಸಿಬ್ಬಂದಿ ರಕ್ಷಣೆ ಮಾಡಿರುವ ಘಟನೆ ನಗರದ (Karwar News) ರವೀಂದ್ರನಾಥ ಟ್ಯಾಗೋರ್ ಬೀಚ್‌ನಲ್ಲಿ ಶುಕ್ರವಾರ ನಡೆದಿದೆ.
ಬಿಪ್ಲಾಬ್ ಮಂಡಲ್ ರಕ್ಷಣೆಗೊಳಗಾದ ಭಗ್ನಪ್ರೇಮಿ. ಪಶ್ಚಿಮ ಬಂಗಾಳ ಮೂಲದ ಕಟ್ಟಡ ಕಾರ್ಮಿಕ ಬಿಪ್ಲಾಬ್, ಕಾರವಾರದ ವೈದ್ಯಕೀಯ ಕಾಲೇಜಿನ ಎರಡನೇ ಹಂತದ ಕಟ್ಟಡ ಕಾಮಗಾರಿ ಕೆಲಸಕ್ಕೆ ಆಗಮಿಸಿದ್ದ. ತಾನು ಪ್ರೀತಿಸಿದ ಹುಡುಗಿ ಬೇರೊಬ್ಬರನ್ನು ಮದುವೆಯಾಗಿದ್ದಕ್ಕೆ ಯುವಕ ಆತ್ಮಹತ್ಯೆಗೆ ಯತ್ನಿಸಿದ್ದಾನೆ ಎನ್ನಲಾಗಿದೆ.
ಇದನ್ನೂ ಓದಿ | ಮನೆ ಮಾಲೀಕನಿಂದ ಲಕ್ಷಾಂತರ ರೂ. ವಂಚನೆ; ಸೆಲ್ಫಿ ವಿಡಿಯೊ ಮಾಡಿ ಆತ್ಮಹತ್ಯೆಗೆ ಯತ್ನಿಸಿದ ಮಹಿಳೆ
ಯುವಕ ಸಮುದ್ರಕ್ಕೆ ಹಾರಿದ್ದನ್ನು ಕಂಡ ಲೈಫ್‌ಗಾರ್ಡ್ ಮತ್ತು ಪ್ರವಾಸಿಮಿತ್ರ ಸಿಬ್ಬಂದಿ, ತಕ್ಷಣ ಆತನನ್ನು ರಕ್ಷಣೆ ಮಾಡಿದ್ದಾರೆ. ಬಳಿಕ ಯುವಕನಿಗೆ ಬುದ್ಧಿಮಾತು ಹೇಳಿ ಯುವಕನನ್ನು ಕಳುಹಿಸಿದ್ದಾರೆ.
ತಂದೆ-ತಾಯಿ, ಮಗಳು ನೇಣು ಬಿಗಿದು ಆತ್ಮಹತ್ಯೆ; ಅಕ್ಕ-ಬಾವನ ಕಿರುಕುಳವೇ ಕಾರಣ
ಚಾಮರಾಜನಗರ: ಒಂದೇ ಕುಟುಂಬದ ಮೂವರು ನೇಣು ಬಿಗಿದುಕೊಂಡು (Family suicide) ಆತ್ಮಹತ್ಯೆ ಮಾಡಿಕೊಂಡ ಘಟನೆ ಚಾಮರಾಜನಗರದಲ್ಲಿ (Chamaraja nagara news) ನಡೆದಿದೆ.
ಚಾಮರಾಜನಗರ ತಾಲೂಕಿನ ಬೇಡರಪುರ ಗ್ರಾಮದಲ್ಲಿ ನಡೆದ ಘಟನೆಯಲ್ಲಿ ಮೃತಪಟ್ಟವರನ್ನು ಮಹದೇವಸ್ವಾಮಿ (48), ಸವಿತಾ (40), ಸಿಂಚನಾ (13) ಎಂದು ಗುರುತಿಸಿದ್ದಾರೆ. ಮನೆಯಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಮೃತದೇಹಗಳು ಪತ್ತೆಯಾಗಿವೆ.
ಶುಕ್ರವಾರ ಬೆಳಗ್ಗೆ ಪಕ್ಕದ ಮನೆಯವರು ಮನೆಗೆ ಹೋದಾಗ ಮನೆಯಲ್ಲಿದ್ದ ಮೂವರೂ ನೇಣಿಗೆ ಶರಣಾಗಿರುವುದು ಬೆಳಕಿಗೆ ಬಂದಿದೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಆದರೆ, ಇವರ ಕುಟುಂಬಗಳ ನಡುವೆ ಆಸ್ತಿ ವಿಚಾರಕ್ಕೆ ಗಲಾಟೆ ನಡೆಯುತಿತ್ತು ಎಂದು ಹೇಳಲಾಗಿದೆ. ಆದರೆ, ಸಾವಿಗೆ ಅದೇ ಕಾರಣವಾಯಿತು ಎನ್ನಲಾಗಿದೆ.
ಇದನ್ನೂ ಓದಿ | ಬೆಂಗಳೂರಿನಲ್ಲಿ ಅಪಾರ್ಟ್‌ಮೆಂಟ್‌ನ 10ನೇ ಮಹಡಿಯಿಂದ ಬಿದ್ದು ಗೃಹಿಣಿ ಮೃತ್ಯು
ಡೆತ್ ನೋಟ್‌ನಲ್ಲಿ ಬರೆದಿದ್ದೇನು?
ಸಾವಿಗೆ ಮುನ್ನ ಬರೆದಿಟ್ಟಿರುವ ಡೆತ್ ನೋಟ್‌ನಲ್ಲಿ, ತಮ್ಮ ಅಕ್ಕ ಬಾವಂದಿತೇ ನಮ್ಮ ಸಾವಿಗೆ ಕಾರಣ ಎಂದು ಮಹದೇವಸ್ವಾಮಿ ಬರೆದಿದ್ದಾರೆ. ಅಕ್ಕ ಮಂಜುಳಾ ಬಾವ ಮಲ್ಲೇಶ್, ಮಹದೇವಪ್ಪ, ತಾಯಿ ದೇವಿರಮ್ಮ ಅವರಿಗೆ ಶಿಕ್ಷೆಯಾಗಬೇಕು. ನಮ್ಮ ಆಸ್ತಿಯನ್ನು ಯಾವ ಕಾರಣಕ್ಕೂ ಇವರಿಗೆ ನೀಡಬೇಡಿ ಎಂದು ಡೆತ್ ನೋಟ್ ನಲ್ಲಿ ಬರೆದಿದ್ದಾರೆ ಮೃತ ಮಹದೇವಸ್ವಾಮಿ. ಸದ್ಯ ಸ್ಥಳಕ್ಕೆ ಚಾಮರಾಜನಗರ ಗ್ರಾಮಾಂತರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.