Site icon Vistara News

KAS Exam: ಕೆಎಎಸ್‌ ಆಕಾಂಕ್ಷಿಗಳಿಗೆ ಗುಡ್‌ನ್ಯೂಸ್‌; ಪರೀಕ್ಷೆ ಬರೆಯಲು ಒಂದು ಬಾರಿ ಹೆಚ್ಚುವರಿ ಅವಕಾಶ

KAS Exam

ಬೆಂಗಳೂರು: ಕೆಎಎಸ್‌ ಹುದ್ದೆ ಆಕಾಂಕ್ಷಿಗಳಿಗೆ ಕೆಪಿಎಸ್‌ಸಿ ಗುಡ್‌ ನ್ಯೂಸ್‌ (Job News) ನೀಡಿದೆ. 2023-24 ಸಾಲಿಗೆ ಗೆಜೆಟೆಡ್ ಪ್ರೊಬೇಷನರ್ಸ್ ಹುದ್ದೆಗಳನ್ನು ಭರ್ತಿ ಮಾಡಲು ಕೆಪಿಎಸ್‌ಸಿ ಹೊರಡಿಸಿರುವ ಅಧಿಸೂಚನೆಯಲ್ಲಿ 2017-18ನೇ ಸಾಲಿನ ಗೆಜೆಟೆಡ್ ಪ್ರೊಬೇಷನರಿ (KAS Exam) ನೇಮಕಾತಿ ಪರೀಕ್ಷೆಗೆ ಅರ್ಜಿ ಸಲ್ಲಿಸಿದ್ದ ಎಲ್ಲಾ ಅಭ್ಯರ್ಥಿಗಳಿಗೆ ಒಂದು ಬಾರಿಗೆ ಸೀಮಿತಗೊಳಿಸಿ (One time measure) ಅರ್ಜಿ ಸಲ್ಲಿಸಲು ಹೆಚ್ಚುವರಿ ವಿಶೇಷ ಅವಕಾಶವನ್ನು ನೀಡಲಾಗಿದೆ.

ಈ ಬಗ್ಗೆ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ ಆದೇಶ ಹೊರಡಿಸಿದ್ದು, ಕೆಲವು ಗೆಜೆಟೆಡ್ ಪ್ರೊಬೇಷನರ್ಸ್ ಹುದ್ದೆ ಆಕಾಂಕ್ಷಿಗಳು ಸರ್ಕಾರಕ್ಕೆ ಮನವಿಗಳನ್ನು ಸಲ್ಲಿಸಿ, ರಾಜ್ಯ ಸರ್ಕಾರವು 2023-24ನೇ ಸಾಲಿಗೆ ಈಗಾಗಲೇ ಕೆಎಎಸ್ ಪರೀಕ್ಷೆ ಬರೆಯಲು ಒಂದು ಬಾರಿ ಎಂಬಂತೆ ಮೂರು ವರ್ಷಗಳ ವಯೋಮಿತಿ ಸಡಿಲಿಕೆ ನೀಡಿದ್ದು, ಇದರಿಂದ ಕೆಲವು ಅಭ್ಯರ್ಥಿಗಳಿಗೆ ಮಾತ್ರ ಅವಕಾಶ ದೊರೆಯಲಿದೆ. ಉಳಿದ ಅಭ್ಯರ್ಥಿಗಳು ಅವಕಾಶ ವಂಚಿತರಾಗುತ್ತಿರುವ ಹಿನ್ನಲೆಯಲ್ಲಿ, 2017-18 ನೇ ಸಾಲಿನ ಗೆಜೆಟೆಡ್ ಪ್ರೊಬೇಷನರಿ ಪರೀಕ್ಷೆ ನೇಮಕಾತಿಗೆ ಅರ್ಜಿ ಸಲ್ಲಿಸಿದ್ದ ಎಲ್ಲಾ ಅಭ್ಯರ್ಥಿಗಳಿಗೆ 2023-24 ನೇ ಸಾಲಿನ ಅಧಿಸೂಚನೆಯಲ್ಲಿ ಪರೀಕ್ಷೆ ಬರೆಯಲು ವಯಸ್ಸಿನ ನಿರ್ಬಂಧವಿಲ್ಲದೆ ಹೆಚ್ಚುವರಿ ವಿಶೇಷ ಅವಕಾಶ ನೀಡುವಂತೆ ಕೋರಿದ್ದಾರೆ.

ಈ ಅಂಶಗಳನ್ನು ಸರ್ಕಾರವು ಪರಿಶೀಲಿಸಿ 2023-24 ನೇ ಸಾಲಿಗೆ ಗೆಜೆಟೆಡ್ ಪ್ರೊಬೇಷನರ್ಸ್ ಹುದ್ದೆಗಳನ್ನು ಭರ್ತಿ ಮಾಡಲು ಕರ್ನಾಟಕ ಲೋಕಸೇವಾ ಆಯೋಗವು ಫೆಬ್ರವರಿ 26ರಂದು ಹೊರಡಿಸಿರುವ ಅಧಿಸೂಚನೆಯಲ್ಲಿ 2017-18 ನೇ ಸಾಲಿನ ಗೆಜೆಟೆಡ್ ಪ್ರೊಬೇಷನರಿ (ಕೆಎಎಸ್) ನೇಮಕಾತಿ ಪರೀಕ್ಷೆಗೆ ಅರ್ಜಿ ಸಲ್ಲಿಸಿದ್ದ ಎಲ್ಲಾ ಅಭ್ಯರ್ಥಿಗಳಿಗೆ ವಯಸ್ಸಿನ ನಿರ್ಬಂಧವಿಲ್ಲದೆ ಒಂದು ಬಾರಿಗೆ ಸೀಮಿತಗೊಳಿಸಿ (One time measure) ಅರ್ಜಿ ಸಲ್ಲಿಸಲು ಹೆಚ್ಚುವರಿ ವಿಶೇಷ ಅವಕಾಶವನ್ನು ನೀಡಲು ತೀರ್ಮಾನಿಸಿದೆ ಎಂದು ತಿಳಿಸಿದೆ.

ಕೆಎಎಸ್‌ ಸೇರಿ ಇತರ ಗೆಜೆಟೆಡ್‌ ಪ್ರೊಬೇಷನರಿ 384 ಹುದ್ದೆಗಳ ನೇಮಕಾತಿಗೆ ಜುಲೈ 21ರಂದು ನಡೆಸಲಾಗುವುದು ಎಂದು ಈಗಾಗಲೇ ಕೆಪಿಎಸ್‌ಸಿ ತಿಳಿಸಿದೆ. ಅಭ್ಯರ್ಥಿಗಳ ಮನವಿ ಮೇರೆಗೆ ಪರೀಕ್ಷಾ ದಿನಾಂಕ ಮುಂದೂಡಲಾಗಿತ್ತು.

ಇದನ್ನೂ ಓದಿ | Job Recruitment: ಎಚ್‌ಎಎಲ್‌ನಲ್ಲಿ ಉದ್ಯೋಗ; ನಾಳೆಯೇ ಕೊನೆಯ ದಿನಾಂಕ

Job Recruitment: ನಮ್ಮ ಮೆಟ್ರೋದಲ್ಲಿದೆ ಉದ್ಯೋಗ ಅವಕಾಶ; ಕೂಡಲೇ ಅರ್ಜಿ ಸಲ್ಲಿಸಿ

ಬೆಂಗಳೂರು: ಸ್ಟೇಷನ್ ಕಂಟ್ರೋಲರ್ / ಟ್ರೈನ್ ಆಪರೇಟರ್ ಹುದ್ದೆಗಳಿಗೆ ಬೆಂಗಳೂರು (bengaluru) ಮೆಟ್ರೋ ರೈಲು (metro train) ಕಾರ್ಪೋರೇಷನ್ ಲಿಮಿಟೆಡ್ (Bengaluru Metro Rail Corporation Limited)​ ಅರ್ಹ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಿದೆ. ಒಟ್ಟು 69 ಹುದ್ದೆಗಳಿದ್ದು ಆಸಕ್ತ ಅಭ್ಯರ್ಥಿಗಳು ಆನ್ ಲೈನ್ ಅಥವಾ ಆಫ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.

ಈ ಕುರಿತು ಬೆಂಗಳೂರು ಮೆಟ್ರೋದ ಅಧಿಕೃತ ವೆಬ್​ಸೈಟ್​ bmrc.co.in ಅಲ್ಲಿ ಸಂಪೂರ್ಣ ಮಾಹಿತಿ ಲಭ್ಯವಿದೆ. ಹುದ್ದೆಯ ಕುರಿತು ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತು ಸಂಪೂರ್ಣ ವಿವರ ಇಲ್ಲಿದೆ.

ಹುದ್ದೆಯ ವಿವರ

ಬೆಂಗಳೂರು ಮೆಟ್ರೋ ರೈಲು ಕಾರ್ಪೋರೇಷನ್ ಲಿಮಿಟೆಡ್ ನ ಒಟ್ಟು 69 ಸ್ಟೇಷನ್ ಕಂಟ್ರೋಲರ್ / ಟ್ರೈನ್ ಆಪರೇಟರ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಆಯ್ಕೆಯಾದ ಅಭ್ಯರ್ಥಿಗಳಿಗೆ ಬೆಂಗಳೂರಿನಲ್ಲೇ ಪೋಸ್ಟಿಂಗ್ ನೀಡಲಾಗುತ್ತದೆ. ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಬೆಂಗಳೂರು ಮೆಟ್ರೋ ರೈಲು ಕಾರ್ಪೋರೇಷನ್ ಲಿಮಿಟೆಡ್ ನೇಮಕಾತಿ ಅಧಿಸೂಚನೆ ಪ್ರಕಾರ, ಮಾಸಿಕ 35,000- 82,660 ರೂ. ಸಂಬಳ ನೀಡಲಾಗುತ್ತದೆ.

ಅರ್ಹತೆ ಏನು?

ಮೆಟ್ರಿಕ್ಯುಲೇಷನ್, ಎಲೆಕ್ಟ್ರಿಕಲ್ ಎಂಜಿನಿಯರಿಂಗ್/ ಎಲೆಕ್ಟ್ರಿಕಲ್ ಆಂಡ್ ಎಲೆಕ್ಟ್ರಾನಿಕ್ಸ್ ಎಂಜಿನಿಯರಿಂಗ್/ ಟೆಲಿಕಮ್ಯುನಿಕೇಷನ್ಸ್/ ಎಲೆಕ್ಟ್ರಾನಿಕ್ಸ್ ಆಂಡ್ ಕಮ್ಯುನಿಕೇಶನ್ ಎಂಜಿನಿಯರಿಂಗ್/ ಎಲೆಕ್ಟ್ರಿಕಲ್ ಪವರ್ ಸಿಸ್ಟಮ್ಸ್/ ಇಂಡಸ್ಟ್ರಿಯಲ್ ಎಲೆಕ್ಟ್ರಾನಿಕ್ಸ್/ ಮೆಕ್ಯಾನಿಕಲ್ ಎಂಜಿನಿಯರಿಂಗ್​​ನಲ್ಲಿ ಡಿಪ್ಲೊಮಾ ಪೂರ್ಣಗೊಳಿಸಿರುವವರು ಅರ್ಜಿ ಸಲ್ಲಿಸಬಹುದು.

ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ವಯಸ್ಸು 2024ರ ಜೂನ್ 14ಕ್ಕೆ ಗರಿಷ್ಠ 45 ವರ್ಷ ಮೀರಿರಬಾರದು. ಮೀಸಲಾತಿ ಅನುಸಾರ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ.

ಇದನ್ನೂ ಓದಿ: Job Recruitment: ಕರ್ನಾಟಕ ಗ್ರಾಮೀಣ ಬ್ಯಾಂಕ್‌ನಲ್ಲಿ 586 ಹುದ್ದೆಗಳಿಗೆ ಅರ್ಜಿ ಆಹ್ವಾನ

ಆಯ್ಕೆ ಪ್ರಕ್ರಿಯೆ

ಅರ್ಹರಾದ ಅಭ್ಯರ್ಥಿಗಳಿಗೆ ಲಿಖಿತ ಪರೀಕ್ಷೆ ನಡೆಸಲಾಗುತ್ತದೆ. ಬಳಿಕ ಸೈಕೋಮೆಟ್ರಿಕ್ ಟೆಸ್ಟ್ ನಡೆಸಿ ದಾಖಲಾತಿಗಳನ್ನು ಪರಿಶೀಲನೆ ನಡೆಸಿದ ಬಳಿಕ ಸೂಕ್ತವೆನಿಸುವ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.

ಅರ್ಜಿ ಪ್ರಕ್ರಿಯೆ

ಆಸಕ್ತ ಅಭ್ಯರ್ಥಿಗಳು 2024ರ ಜುಲೈ 10ರೊಳಗೆ ಅರ್ಜಿ ಸಲ್ಲಿಸಬೇಕು. ಆಫ್ ಲೈನ್ ಮೂಲಕ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಭರ್ತಿ ಮಾಡಿದ ಅರ್ಜಿ ನಮೂನೆಯನ್ನು ಅಗತ್ಯ ದಾಖಲಾತಿಗಳೊಂದಿಗೆ ಜನರಲ್ ಮ್ಯಾನೇಜರ್ (HR), ಬೆಂಗಳೂರು ಮೆಟ್ರೋ ರೈಲು ಕಾರ್ಪೊರೇಷನ್ ಲಿಮಿಟೆಡ್, 3ನೇ ಮಹಡಿ, ಬಿಎಂಟಿಸಿ ಕಾಂಪ್ಲೆಕ್ಸ್, ಕೆ.ಹೆಚ್. ರಸ್ತೆ, ಶಾಂತಿನಗರ, ಬೆಂಗಳೂರು- 560027 ಇವರಿಗೆ ಸಲ್ಲಿಸಬೇಕು. ಆನ್ ;ಲೈನ್ ಮೂಲಕ ಅರ್ಜಿ ಸಲ್ಲಿಸುವವರು https://recruitr.bmrc.co.in/frminstructions.aspx ಈ ಲಿಂಕ್ ಕ್ಲಿಕ್ ಮಾಡಿ ನೇರವಾಗಿ ಅರ್ಜಿ ಸಲ್ಲಿಸಬಹುದು.

Exit mobile version