ಬೆಂಗಳೂರು: ಆಗಸ್ಟ್ 27ಕ್ಕೆ ನಿಗದಿಯಾಗಿರುವ ಕೆಎಎಸ್ ಪೂರ್ವಭಾವಿ ಪರೀಕ್ಷೆಯನ್ನು (KAS Prelims exam) ಮುಂದೂಡಬೇಕು ಎಂದು ಆಗ್ರಹಿಸಿ ನಗರದ ಫ್ರೀಡಂ ಪಾರ್ಕ್‌ನಲ್ಲಿ 50ಕ್ಕೂ ಹೆಚ್ಚು ಅಭ್ಯರ್ಥಿಗಳು ಶನಿವಾರ ಪ್ರತಿಭಟನೆ ನಡೆಸಿದರು. ಒಂದು ತಿಂಗಳು ಮೊದಲೇ ಪ್ರಶ್ನೆ ಪತ್ರಿಕೆ ಮುದ್ರಣವಾಗಿರುವ ಹಿನ್ನೆಲೆಯಲ್ಲಿ ಭ್ರಷ್ಟಾಚಾರಕ್ಕೆ ಎಡೆಮಾಡಿಕೊಟ್ಟಂತಾಗಿದೆ. ಇನ್ನು ವಾರದ ದಿನದಲ್ಲಿ (ಮಂಗಳವಾರ) ಪರೀಕ್ಷೆ ನಿಗದಿಯಾಗಿರುವುದರಿಂದ ಖಾಸಗಿ ಕಂಪನಿಗಳಲ್ಲಿ ಕೆಲಸ ಮಾಡುವವರಿಗೆ ತೊಂದರೆಯಾಗಿದೆ. ಹೀಗಾಗಿ ರಾಜ್ಯ ಸರ್ಕಾರವು ಪರೀಕ್ಷೆಯನ್ನು ಮುಂದೂಡಬೇಕು, ಇಲ್ಲವೇ ನಮಗೆ ದಯಾ ಮರಣಕ್ಕೆ ಅನುಮತಿ ನೀಡಬೇಕು ಎಂದು ಸಿಎಂ ಸಿದ್ದರಾಮಯ್ಯಗೆ ಅಭ್ಯರ್ಥಿಗಳು ಮನವಿ ಮಾಡಿದ್ದಾರೆ.
ಪ್ರತಿಭಟನಾನಿರತ ಅಭ್ಯರ್ಥಿ ಕಾಂತಕುಮಾರ್ ಪ್ರತಿಕ್ರಿಯಿಸಿ, ಆಗಸ್ಟ್ 27 ಕ್ಕೆ ಪರೀಕ್ಷೆ ನಿಗದಿಯಾಗಿದೆ. ವಾರದ ದಿನದಲ್ಲಿ ಪರೀಕ್ಷೆ ನಡೆಯುತ್ತಿದೆ. ಒಂದು ತಿಂಗಳಿಗಿಂತ ಮುಂಚಿತವಾಗಿ ಪ್ರಶ್ನೆ ಪತ್ರಿಕೆ ಮುದ್ರಿಸಿದ್ದಾರೆ. ಇದರಿಂದ ಭ್ರಷ್ಟಾಚಾರ ಮಾಡಲು ಅನುಕೂಲವಾಗಲಿದೆ. ತರಾತುರಿಯಲ್ಲಿ ಈ ಪರೀಕ್ಷೆ ನಡೆಸಲಾಗುತ್ತಿದ್ದು, ಸಿಎಂಗೆ ಸುಳ್ಳು ಸುದ್ದಿ ನೀಡಿ ದಾರಿ ತಪ್ಪಿಸಲಾಗುತ್ತಿದೆ. ಸಿಎಂ ಸಿದ್ದರಾಮಯ್ಯ ಅವರು ಪ್ರಶ್ನೆ ಪತ್ರಿಕೆ ಮರು ಮುದ್ರಣ ಮಾಡಿಸಿ, ಪರೀಕ್ಷೆ ನಡೆಸಲು ಕ್ರಮ ಕೈಗೊಳ್ಳಬೇಕು. ನಮ್ಮನ್ನ ಜೈಲಿಗೆ ಹಾಕಿ, ಇಲ್ಲವೇ ದಯಾಮರಣ ಕೊಡಿ ಎಂದು ಮನವಿ ಮಾಡಿದರು.
ಕರ್ನಾಟಕ ಸರ್ಕಾರವಾಗಲಿ, ಕರ್ನಾಟಕ ಲೋಕಸೇವಾ ಆಯೋಗವಾಗಲಿ ತಾವೊಂದು ನೇಮಕಾತಿ ಅಥವಾ ಪರೀಕ್ಷೆ ನಡೆಸಬೇಕಾದರೆ ವಿದ್ಯಾರ್ಥಿ ಸ್ನೇಹಿ ನಿರ್ಧಾರಗಳನ್ನು ಕೈಗೊಳ್ಳುವುದು ಸಹಜ ನ್ಯಾಯದ ಪ್ರತೀಕ, ಆದರೆ ಈ ತಿಂಗಳ 27ರಂದು 2023-24 ರ ಕೆಎಎಸ್ ಪೂರ್ವಭಾವಿ ಪರೀಕ್ಷೆ ನಡೆಸಲು ತರಾತುರಿಯಲ್ಲಿ ದಿನಾಂಕ ಪ್ರಕಟಿಸಿರುವ ಕೆ.ಪಿ.ಎಸ್.ಸಿ ನಡೆ ಹಲವಾರು… pic.twitter.com/X1wXd5IXX4
— Vijayendra Yediyurappa (@BYVijayendra) August 22, 2024
ಅಭ್ಯರ್ಥಿ ತೇಜಸ್ ಮಾತನಾಡಿ, ನಾವು ಅನುಮತಿ ಕೇಳಿದ್ದಾಗ ಬೇರೆ ಕಾರ್ಯಕ್ರಮ ಇದೆ ಎಂದಿದ್ದರು. 10 ರಿಂದ 2 ಗಂಟೆ ವರೆಗೆ ಅವಕಾಶ ನೀಡಿದರು. ಆದರೆ ಇಲ್ಲಿ ಯಾವುದೇ ಪ್ರತಿಭಟನೆ ಕೂಡ ಇಲ್ಲ. ಪ್ರತಿಭಟನಾಕಾರರಿಗಿಂತ ಹೆಚ್ಚಾಗಿ ಪೊಲೀಸರ ನಿಯೋಜನೆ ಆಗಿದೆ ಎಂದು ಹೇಳಿದರು.
ಅಭ್ಯರ್ಥಿ ಯಮುನಾ ಮಾತನಾಡಿ, ಸರ್ಕಾರದ ಪರವಾಗಿ ಇಲ್ಲಿ ಯಾರೂ ಬಂದಿಲ್ಲ. ಪರೀಕ್ಷೆ ಮುಂದೂಡಿಲ್ಲ ಅಂದರೆ ದಯಾಮರಣ ಕೊಡಿ. ಪರೀಕ್ಷೆಗೆ ಸಾಕಷ್ಟು ಸಮಯ ಇಲ್ಲ, ಮಾನಸಿಕವಾಗಿ ಸಾಕಷ್ಟು ಕಷ್ಟವಾಗುತ್ತಿದೆ ಎಂದು ಅಳಲು ತೋಡಿಕೊಂಡಿದ್ದಾರೆ.
ರಾಜ್ಯ ಸರ್ಕಾರವು ಪರೀಕ್ಷೆಯನ್ನು ಮುಂದೂಡಬೇಕು, ಇಲ್ಲವೇ ನಮಗೆ ದಯಾ ಮರಣಕ್ಕೆ ಅನುಮತಿ ನೀಡಬೇಕು ಎಂದು ಪಟ್ಟು ಹಿಡಿದಿದ್ದರಿಂದ ಪ್ರತಿಭಟನಾಕಾರರನ್ನು ಪೊಲೀಸರು ವಶಕ್ಕೆ ಪಡೆದರು.
ಕೆಎಎಸ್ ಪೂರ್ವಭಾವಿ ಪರೀಕ್ಷೆ ಮುಂದೂಡಲು ಸಾಧ್ಯವಿಲ್ಲ: ಸಿಎಂ ಸ್ಪಷ್ಟನೆ
ಬೆಂಗಳೂರು: ಕೆಎಎಸ್ ಪೂರ್ವಭಾವಿ ಪರೀಕ್ಷೆ (KAS Prelims Exam) ಮುಂದೂಡುವಂತೆ ಒತ್ತಾಯಿಸಿ ನಗರದ ಫ್ರೀಡಂ ಪಾರ್ಕ್‌ನಲ್ಲಿ ಸಾವಿರಾರು ಅಭ್ಯರ್ಥಿಗಳು ಶನಿವಾರ ಪ್ರತಿಭಟನೆ ನಡೆಸಿದ್ದಾರೆ. ತರಾತುರಿಯಲ್ಲಿ ಆ.27ಕ್ಕೆ ಪರೀಕ್ಷೆಯನ್ನು ಕೆಪಿಎಸ್‌ಸಿ ನಿಗದಿ ಮಾಡಿದೆ. ಇದರಿಂದ ಅಭ್ಯರ್ಥಿಗಳಿಗೆ ತೊಂದರೆಯಾಗಿದ್ದು, ಪೂರ್ವಭಾವಿ ಪರೀಕ್ಷೆಯನ್ನು ಸರ್ಕಾರ ಮುಂದೂಡಿಕೆ ಮಾಡಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದ್ದಾರೆ. ಆದರೆ, ನಾವು ಯಾವುದೇ ಕಾರಣಕ್ಕೂ ಪರೀಕ್ಷೆಯನ್ನು ಮುಂದಕ್ಕೆ ಹಾಕಲು ಆಗೋದಿಲ್ಲ ಎಂದು ಸಿದ್ದರಾಮಯ್ಯ ಸ್ಪಷ್ಟನೆ ನೀಡಿದ್ದಾರೆ.
ನಾನು 39 ವರ್ಷದ ಕೆಎಎಸ್ ಪೂರ್ವಭಾವಿ ಪರೀಕ್ಷೆಯ ಅಭ್ಯರ್ಥಿ ನನಗೆ ಇದೇ ಕೊನೆಯ ಅವಕಾಶ
— AKSSA OFFICIAL (@AKSSAofficial) August 23, 2024
ನಾನು ಖಾಸಗಿ ಕ್ಷೇತ್ರದ ನೌಕರನಾಗಿದ್ದು ಪರೀಕ್ಷೆಯನ್ನು ಕೆಲಸದ ದಿನ ಆಗಸ್ಟ್ 27 ರಂದು ನಿಗದಿ ಮಾಡಿದ್ದೀರಿ
ನಾನು ಅವಕಾಶ ವಂಚಿತನಾಗುತ್ತಿದ್ದೇನೆ ;ಅಭ್ಯರ್ಥಿಯ ಅಳಲು
ಪರೀಕ್ಷೆ ಮುಂದೂಡಿ ನಮ್ಮ ಹಕ್ಕುಗಳನ್ನು ರಕ್ಷಿಸಿ @CMofKarnataka#postponekas pic.twitter.com/hK0gOH1g3c
ಕೆಎಎಸ್ ಪರೀಕ್ಷೆ ಗೊಂದಲದ ಬಗ್ಗೆ ನಗರದಲ್ಲಿ ಸುದ್ದಿಗಾರರೊಂದಿಗೆ ಪ್ರತಿಕ್ರಿಯಿಸಿರುವ ಸಿಎಂ ಸಿದ್ದರಾಮಯ್ಯ ಅವರು, ಪರೀಕ್ಷೆಯಲ್ಲಿ ಗೊಂದಲ ಏನೂ ಇಲ್ಲ. ಎಕ್ಸಾಂ ಮುಂದಕ್ಕೆ ಹಾಕಬೇಕು ಎಂದು ಅಭ್ಯರ್ಥಿಗಳು ಹೇಳುತ್ತಿದ್ದಾರೆ. ಆದರೆ, ನಾವು ಮುಂದಕ್ಕೆ ಹಾಕಲು ಆಗೋದಿಲ್ಲ. ಒಂದು ಪೇಪರ್ ಮಾತ್ರ ಕೃಷ್ಣ ಜನ್ಮಾಷ್ಠಮಿ ದಿನ ಇದೆ. ಅದನ್ನು ಮುಂದಕ್ಕೆ ಹಾಕುತ್ತೇವೆ ಎಂದು ಸ್ಪಷ್ಟನೆ ನೀಡಿದ್ದಾರೆ.
ಅಭ್ಯರ್ಥಿಗಳ ಬೇಡಿಕೆ ಏನು?
ಮಂಗಳವಾರ ಪರೀಕ್ಷೆ ನಡೆಯುವುದರಿಂದ ಖಾಸಗಿ ಕಂಪನಿಗಳ ಉದ್ಯೋಗಿಗಳಿಗೆ ರಜೆ ಸಿಗುವುದಿಲ್ಲ. ಅಲ್ಲದೇ ಅಭ್ಯರ್ಥಿಗಳಿರುವ ಸ್ಥಳದಿಂದ 200, 300 ಕಿ.ಮೀ. ದೂರದ ನಗರಗಳಲ್ಲಿ ಪರೀಕ್ಷಾ ಕೇಂದ್ರ ಹಾಕಿದ್ದಾರೆ. ಇದರಿಂದ ದೂರದ ಊರುಗಳ ಅಭ್ಯರ್ಥಿಗಳು ಒಂದು ದಿನ ಮೊದಲೇ ಪ್ರಯಾಣ ಬೆಳೆಸಬೇಕು. ಇನ್ನು ಮಂಗಳವಾರ ರಜೆ ಇಲ್ಲದ ಕಾರಣ ಅಂಧ ವಿದ್ಯಾರ್ಥಿಗಳಿಗೆ ಪರೀಕ್ಷೆ ಬರೆಯಲು ರೈಟರ್ ಸಿಗುವುದಿಲ್ಲ. ಹೀಗಾಗಿ ರಜೆ ದಿನಗಳನ್ನು ನೋಡಿಕೊಂಡು ಪರೀಕ್ಷೆಗೆ ದಿನಾಂಕ ನಿಗದಿ ಮಾಡಿ ಎಂದು ಆಕ್ರೋಶ ಹೊರ ಹಾಕಿದ್ದಾರೆ.
ವಿಶೇಷ ಸಾರ್ವತ್ರಿಕ ರಜೆ ಘೋಷಣೆ
2023-24ನೇ ಸಾಲಿನ ಗೆಜೆಟೆಡ್ ಪ್ರೊಬೇಷನರ್ಸ್ ಗ್ರೂಪ್ ಎ ಮತ್ತು ಗ್ರೂಪ್ ಬಿ ವೃಂದದ ಹುದ್ದೆಗಳ ನೇಮಕಾತಿಯ ಪೂರ್ವಭಾವಿ ಪರೀಕ್ಷೆ ನಡೆಯುವ ಹಿನ್ನೆಲೆಯಲ್ಲಿ ಆ.27ರಂದು ಪರೀಕ್ಷೆಗೆ ಅನುವಾಗುವ 214 ಸರ್ಕಾರಿ, 189 ಅನುದಾನಿತ ಮತ್ತು 161 ಶಾಸಗಿ ಶಾಲಾ-ಕಾಲೇಜುಗಳು ಸೇರಿದಂತೆ, ಒಟ್ಟಾರೆ 564 ಪರೀಕ್ಷಾ ಉಪ ಕೇಂದ್ರಗಳಿಗೆ, ಅನ್ವಯಿಸಿದಂತೆ ಒಂದು ದಿನದ ವಿಶೇಷ/ ಸಾರ್ವತ್ರಿಕ ರಜೆಯನ್ನು ರಾಜ್ಯ ಸರ್ಕಾರ ಘೋಷಿಸಿದೆ.
ಮುಂದುವರಿದು ಪರೀಕ್ಷಾ ಉಪ ಕೇಂದ್ರಗಳಲ್ಲಿ ಆ.27ರಂದು ಯಾವುದೇ ಶೈಕ್ಷಣಿಕ ಪರೀಕ್ಷೆಗಳು ಹಾಗೂ ಇನ್ನಿತರೆ ಪೂರ್ವನಿರ್ಧರಿತ ಕಾರ್ಯಕ್ರಮಗಳು ನಿಗದಿಯಾಗಿದ್ದಲ್ಲಿ ಸೂಕ್ತ ಕ್ರಮಕೈಗೊಂಡು ಪ್ರಸಕ್ತ ಸಾಲಿನ ಗೆಜೆಟೆಡ್ ಪ್ರೊಬೇಷನರ್ಸ್ ಪೂರ್ವಭಾವಿ ಪರೀಕ್ಷೆ ನಡೆಸಲು ಅಡಚಣೆಯಾಗದಿರುವುದನ್ನು ಸಂಬಂಧಿತ ಶೈಕ್ಷಣಿಕ ಸಂಸ್ಥೆಗಳ ಮುಖ್ಯಸ್ಥರು/ಆಡಳಿತ ಮಂಡಳಿಯು ಖಾತರಿ ಪಡಿಸಿಕೊಳ್ಳಬೇಕು. ಇನ್ನು ಸಂಬಂಧಪಟ್ಟ ಜಿಲ್ಲೆಗಳ ಜಿಲ್ಲಾಧಿಕಾರಿಗಳು ಪರೀಕ್ಷೆಗೆ ಯಾವುದೇ ಅಡಚಣೆ ಉಂಟಾಗದಂತೆ ಪಾರದರ್ಶಕವಾಗಿ ಮತ್ತು ಸುಸೂತ್ರವಾಗಿ ನಡೆಸಲು ಸಂಪೂರ್ಣ ಸಹಕಾರ ನೀಡಬೇಕು ಎಂದು ಸೂಚಿಸಲಾಗಿದೆ.
ಇನ್ನು ಪರೀಕ್ಷೆಗೆ ಅರ್ಜಿ ಸಲ್ಲಿಸಿರುವ ರಾಜ್ಯ ಸರ್ಕಾರದ, ಶಾಲಾ ಕಾಲೇಜುಗಳ (ಅನುದಾನಿತ ಶಿಕ್ಷಣ ಸಂಸ್ಥೆಗಳು ಒಳಗೊಂಡಂತೆ) ಹಾಗೂ ಸರ್ಕಾರಿ ಸ್ವಾಮ್ಯದ ಸಂಸ್ಥೆಗಳ ಸೇವಾ ನಿರತ ಅಭ್ಯರ್ಥಿಗಳಿಗೆ, ಪರೀಕ್ಷಾ ಪ್ರವೇಶ ಪತ್ರವನ್ನು ರಜಾ ಮಂಜೂರು ಮಾಡುವ ಸಂಬಂಧಿತ ಪ್ರಾಧಿಕಾರಕ್ಕೆ ಕಡ್ಡಾಯವಾಗಿ ಒದಗಿಸಿ, ಷರತ್ತಿಗೊಳಪಟ್ಟು ಒಂದು ದಿನದ ವಿಶೇಷ ಸಾಂದರ್ಭಿಕ ರಜೆಯನ್ನು ನೀಡಲು ತಿಳಿಸಲಾಗಿದೆ.
Bus Fare Hike: ಶೀಘ್ರದಲ್ಲೇ ಏರಲಿದೆ ಬಸ್ ಟಿಕೆಟ್ ದರ; ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸಮರ್ಥನೆ!
ಹಾಲ್ ಟಿಕೆಟ್ ಬಿಡುಗಡೆ
ಆ.27 ರಂದು ಕೆಎಎಸ್ ಪೂರ್ವಭಾವಿ ಪರೀಕ್ಷೆ ನಡೆಯುವ ಹಿನ್ನೆಲೆಯಲ್ಲಿ ಪ್ರವೇಶ ಪತ್ರವನ್ನು ಕೆಪಿಎಸ್‌ಸಿ ಬಿಡುಗಡೆ ಮಾಡಿದೆ. ಕೆಪಿಎಸ್‌ಸಿ ವೆಬ್‌ಸೈಟ್‌ನಲ್ಲಿ ಪ್ರವೇಶ ಪತ್ರ ಡೌನ್ ಲೋಡ್ ಮಾಡಿಕೊಳ್ಳಬಹುದಾಗಿದೆ.