Site icon Vistara News

KAS Prelims Exam: ಕೆಎಎಸ್‌ ಪೂರ್ವಭಾವಿ ಪರೀಕ್ಷೆ ಮತ್ತೆ ಮುಂದೂಡಿಕೆ; ಆಗಸ್ಟ್‌ 27ಕ್ಕೆ ನಿಗದಿ

KAS prelims exam

ಬೆಂಗಳೂರು: 2023-24ನೇ ಸಾಲಿನ ಗೆಜೆಟೆಡ್ ಪ್ರೊಬೇಷನರ್ಸ್‌ ಗ್ರೂಪ್ ‘ಎ’ ಮತ್ತು ‘ಬಿ’ ವೃಂದದ ಒಟ್ಟು 384 ಹುದ್ದೆಗಳ ನೇಮಕಾತಿಗೆ ಆ.25ರಂದು ನಿಗದಿಯಾಗಿದ್ದ ಪೂರ್ವಭಾವಿ ಪರೀಕ್ಷೆ (KAS Prelims Exam) ಮತ್ತೆ ಮುಂದೂಡಿಕೆಯಾಗಿದೆ. ಒಂದೇ ದಿನ ಬ್ಯಾಂಕಿಂಗ್‌ ಪರೀಕ್ಷೆ ಹಾಗೂ ಕೆಎಎಸ್‌ ಪೂರ್ವಭಾವಿ ಪರೀಕ್ಷೆ ನಿಗದಿಯಾಗಿದ್ದರಿಂದ ಅಭ್ಯರ್ಥಿಗಳಿಗೆ ಸಮಸ್ಯೆಯಾಗಿತ್ತು. ಹೀಗಾಗಿ ಪರೀಕ್ಷಾ ದಿನಾಂಕ ಮುಂದೂಡುವಂತೆ ಅಭ್ಯರ್ಥಿಗಳು ಮನವಿ ಮಾಡಿದ್ದರು. ಇದರಿಂದ ಎರಡು ದಿನಗಳ ಕಾಲ ಕೆಎಎಸ್‌ ಪೂರ್ವಭಾವಿ ಪರೀಕ್ಷೆಯನ್ನು ಕೆಪಿಎಸ್‌ಸಿ ಮುಂದೂಡಿದೆ.

ಕೆಎಎಸ್‌ ಪೂರ್ವಭಾವಿ ಪರೀಕ್ಷೆಗೆ ಈಗಾಗಲೇ ಎಲ್ಲಾ ಪೂರ್ವಸಿದ್ಧತೆಗಳನ್ನು ಮಾಡಿಕೊಂಡಿರುವ ಕಾರಣದಿಂದ ಹಾಗೂ ಮುಖ್ಯ ಮಂತ್ರಿಗಳು ಕರ್ನಾಟಕ ಲೋಕಸೇವಾ ಆಯೋಗದೊಂದಿಗೆ ಸಮಾಲೋಚಿಸಿ ಅಲ್ಪಕಾಲ ಗೆಜೆಟೆಡ್ ಪ್ರೊಬೇಷನರ್ಸ್‌ ನೇಮಕಾತಿಯ ಪೂರ್ವಭಾವಿ ಪರೀಕ್ಷೆಯನ್ನು ಮುಂದೂಡಲು ಸೂಚಿಸಿರುವುದರಿಂದ ಆ. 27ರ ಮಂಗಳವಾರದಂದು ನಡೆಸಲು ತೀರ್ಮಾನಿಸಲಾಗಿದೆ ಎಂದು ಕೆಪಿಎಸ್‌ಸಿ ತಿಳಿಸಿದೆ.

ಆ.25ರಂದು ಕೆಎಎಸ್‌ ಪೂರ್ವಭಾವಿ ಪರೀಕ್ಷೆ ನಡೆಸಲು ಈಗಾಗಲೇ ಒಟ್ಟು 564 ಪರೀಕ್ಷಾ ಉಪಕೇಂದ್ರಗಳಿಂದ ಒಪ್ಪಿಗೆ ಪತ್ರಗಳನ್ನು ಪಡೆದು ಅಭ್ಯರ್ಥಿಗಳನ್ನು ಹಂಚಿಕೆ ಮಾಡಲಾಗಿತ್ತು. ಆದರೆ, ಅಂದು ಐ.ಬಿ.ಪಿ.ಎಸ್. ಪರೀಕ್ಷೆ ನಿಗದಿಯಾಗಿರುವ ಹಿನ್ನೆಲೆಯಲ್ಲಿ ಸಿಎಂ ಅವರೊಂದಿಗೆ ಚರ್ಚಿಸಿ ಕೆಎಎಸ್‌ ಪೂರ್ವಭಾವಿ ಪರೀಕ್ಷೆಯನ್ನು ಆ.27ಕ್ಕೆ ಮುಂದೂಡಿಕೆ ಮಾಡಲಾಗಿದೆ ಎಂದು ಮಾಹಿತಿ ನೀಡಿದೆ.

ವಿಶೇಷ ಸಾಂದರ್ಭಿಕ ರಜೆ ಮಂಜೂರು ಮಾಡಲು ಪತ್ರ

ಆ.27 ಕಾರ್ಯ ನಿರ್ವಹಣಾ (working day) ದಿನವಾಗಿರುವುದರಿಂದ ಈಗಾಗಲೇ ಅಭ್ಯರ್ಥಿಗಳನ್ನು ಹಂಚಿಕೆ ಮಾಡಲಾದ 564 ಪರೀಕ್ಷಾ ಉಪಕೇಂದ್ರಗಳಿಗೆ ಒಂದು ದಿವಸದ ವಿಶೇಷ/ಸಾರ್ವತ್ರಿಕ ರಜೆಯನ್ನು ಘೋಷಿಸಿ, ಕೆಎಎಸ್‌ ಪೂರ್ವಭಾವಿ ಪರೀಕ್ಷೆಯನ್ನು ನಡೆಸುವಂತೆ ಅನುವು ಮಾಡಿಕೊಡಬೇಕು ಹಾಗೂ ಹುದ್ದೆಗೆ ಅರ್ಜಿ ಸಲ್ಲಿಸಿರುವ ರಾಜ್ಯ ಸರ್ಕಾರದ ಸೇವಾನಿರತ ಅಭ್ಯರ್ಥಿಗಳಿಗೆ ವಿಶೇಷ ಸಾಂದರ್ಭಿಕ ರಜೆಯನ್ನು ಮಂಜೂರು ಮಾಡಬೇಕು ಎಂದು ಕೆಪಿಎಸ್‌ಸಿ ಕಾರ್ಯದರ್ಶಿ ರಾಕೇಶ್‌ ಕುಮಾರ್‌ ಅವರು ಸಿಬ್ಬಂದಿ ಮತ್ತು ಆಡಳಿತ ಸುಧಾರಣೆಯ ಸರ್ಕಾರದ ಕಾರ್ಯದರ್ಶಿ ರಣದೀಪ್‌ ಡಿ. ಅವರಿಗೆ ಪತ್ರ ಬರೆದಿದ್ದಾರೆ.

ಇದನ್ನೂ ಓದಿ | Government Job: ಅಂತಾರಾಷ್ಟ್ರೀಯ ಕ್ರೀಡಾಕೂಟ ಪದಕ ಗೆದ್ದ 12 ಕ್ರೀಡಾಪಟುಗಳಿಗೆ ಸರ್ಕಾರಿ ಉದ್ಯೋಗ

Jobs Alert: ಪ್ರೌಢಶಾಲೆ, ಪಿಯು ಕಾಲೇಜುಗಳ ಬೋಧಕ ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್

teacher jobs alert

ಬೆಂಗಳೂರು: ಖಾಸಗಿ ಅನುದಾನಿತ ಪ್ರೌಢಶಾಲೆಗಳು ಹಾಗೂ ಪದವಿ ಪೂರ್ವ ಕಾಲೇಜುಗಳಲ್ಲಿ ಖಾಲಿ ಇರುವ ಬೋಧಕ (Teacher) ಹುದ್ದೆಗಳನ್ನು ಭರ್ತಿ ಮಾಡಲು (Jobs Alert) ಆರ್ಥಿಕ ಇಲಾಖೆ ಒಪ್ಪಿಗೆ ನೀಡಿದೆ. ಶಿಕ್ಷಕ, ಉಪನ್ಯಾಸಕ ಹುದ್ದೆಗಳ ಶೋಧದಲ್ಲಿರುವವರಿಗೆ ಇದು ಗುಡ್ ನ್ಯೂಸ್ (Good news) ಆಗಿದೆ.

ಆಡಳಿತ ಇಲಾಖೆಯ ಪ್ರಸ್ತಾವನೆಯನ್ನು ಪರಿಶೀಲಿಸಲಾಗಿದೆ. 1987ರಿಂದ 1994-95ರ ಶೈಕ್ಷಣಿಕ ಅವಧಿಯಲ್ಲಿ ಪ್ರಾರಂಭಗೊಂಡು ಈಗಾಗಲೇ ವೇತನಾನುದಾನಕ್ಕೆ ಒಳಪಟ್ಟ ಖಾಸಗಿ ಅನುದಾನಿತ ಪ್ರೌಢಶಾಲೆಗಳು, ಪದವಿ ಪೂರ್ವ ಕಾಲೇಜುಗಳು ಹಾಗೂ ಪದವಿ ಕಾಲೇಜುಗಳಲ್ಲಿ ದಿನಾಂಕ:01-01-2016ರಿಂದ ದಿನಾಂಕ:31-12-2020ರವರೆಗೆ ನಿವೃತ್ತಿ, ನಿಧನ, ರಾಜೀನಾಮೆ ಹಾಗೂ ಮತ್ತಿತರ ಕಾರಣಗಳಿಂದ ಖಾಲಿಯಾಗಿರುವ ಬೋಧಕ ಹುದ್ದೆಗಳನ್ನು ಈ ಕೆಳಕಂಡ ಷರತ್ತುಗಳಿಗೊಳಪಟ್ಟು ಭರ್ತಿಮಾಡಿಕೊಳ್ಳಲು ಆರ್ಥಿಕ ಇಲಾಖೆಯು ಸಹಮತಿಸಿದೆ.

ಷರತ್ತುಗಳು:

ಹುದ್ದೆಗಳನ್ನು ಭರ್ತಿ ಮಾಡಿಕೊಂಡ ನಂತರ ನೇಮಕಾತಿ ಅನುಮೋದನೆಗಾಗಿ ಆರ್ಥಿಕ ಇಲಾಖೆಯ ಅನಧಿಕೃತ ಟಿಪ್ಪಣಿ ಸಂಖ್ಯೆ:ಆಇ 384 ವೆಚ್ಚ-8/2013, ದಿನಾಂಕ:09-04- 2013ರಲ್ಲಿನ ಚೆಕ್‌ಲಿಸ್ಟ್ ಅನುಬಂಧ-3ರನ್ವಯ ಸಂಪೂರ್ಣ ಮಾಹಿತಿ/ದಾಖಲೆಗಳೊಂದಿಗೆ ಆರ್ಥಿಕ ಇಲಾಖೆಗೆ ಪ್ರಸ್ತಾವನೆ ಸಲ್ಲಿಸುವುದು. ಮೇಲ್ಕಂಡಂತೆ ಖಾಲಿ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳುವ ಸಂದರ್ಭದಲ್ಲಿ ಜಾರಿಯಲ್ಲಿರುವ ಅನುದಾನ ಸಂಹಿತೆ ಮತ್ತು ಸರ್ಕಾರದ ಆದೇಶ ಮತ್ತು ಸುತ್ತೋಲೆಗಳ ನಿಯಮಗಳನ್ನು ಪಾಲಿಸಿರುವುದನ್ನು ಖಚಿತಪಡಿಸಿಕೊಳ್ಳುವುದು.

ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳುವಾಗ ನಿಯಮಾನುಸಾರ ರೋಸ್ಟರ್ ಬಿಂದು ಮತ್ತು ಕಲ್ಯಾಣ ಕರ್ನಾಟಕದ ಮೀಸಲಾತಿಗಳನ್ನು ಕಡ್ಡಾಯವಾಗಿ ಪಾಲಿಸತಕ್ಕದ್ದು. 2016-2017 ರಿಂದ 2023-24ನೇ ಸಾಲಿನವರೆಗೆ ವಿದ್ಯಾರ್ಥಿಗಳ ದಾಖಲಾತಿ, ಪರೀಕ್ಷಾ ಫಲಿತಾಂಶ ಮತ್ತು ಖಚಿತಪಡಿಸಿಕೊಳ್ಳುವುದು. ಮೂಲಭೂತ ಸೌಕರ್ಯಗಳು ಉತ್ತಮವಾಗಿರುವುದನ್ನು ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳುವ ಶಾಲಾ/ಕಾಲೇಜುಗಳು ಪ್ರಾರಂಭವಾದಾಗಿನಿಂದ ಅವಿಚ್ಛಿನ್ನವಾಗಿ ನಡೆಯುತ್ತಿರುವುದನ್ನು ಖಚಿತಪಡಿಸಿಕೊಳ್ಳಬೇಕು.

ಅನುದಾನಿತ ಶಾಲೆಗಳು ಮತ್ತು ಕಾಲೇಜುಗಳು ಆನ್‌ಲೈನ್ ಮೂಲಕ ವಿವರಗಳು ಮತ್ತು ದಾಖಲೆಗಳನ್ನು ಸಲ್ಲಿಸಲು ತಂತ್ರಾಂಶವನ್ನು ಅಭಿವೃದ್ಧಿಪಡಿಸುವುದು. ಈ ತಂತ್ರಾಂಶದ ಮೂಲಕ ಪ್ರಸ್ತಾವನೆಗಳನ್ನು ವ್ಯವಹರಿಸುವುದು. ಅನುದಾನಿತ ಪದವಿಪೂರ್ವ ಕಾಲೇಜುಗಳಲ್ಲಿನ ಹುದ್ದೆಗಳನ್ನು ಅನುಮೋದಿಸಲು ಪ್ರತ್ಯಾಯೋಜಿಸಲಾದ ಆದೇಶ ಸಂಖ್ಯೆ: ಇಡಿ 16 ಟಿಪಿಯು 2011. ದಿನಾಂಕ:30-09-2011 ಅನ್ನು ಹಿಂಪಡೆದು, ಹುದ್ದೆಗಳ ಅನುಮೋದನೆಗಾಗಿ ಆರ್ಥಿಕ ಇಲಾಖೆಗೆ ಪ್ರಸ್ತಾವನೆಗಳನ್ನು ಸಲ್ಲಿಸುವುದು.

Exit mobile version