ಬೆಂಗಳೂರು: ಕನ್ನಡ ಸಾಹಿತ್ಯ ಪರಿಷತ್ತಿನ 2021ನೇ ಸಾಲಿನ ಸಾಲಿನ ವಿವಿಧ ಕೃತಿಗಳಿಗೆ ದತ್ತಿ ಪ್ರಶಸ್ತಿ (Kasapa Awards) ಪ್ರದಾನ ಸಮಾರಂಭವು ಮಾರ್ಚ್ 12ರ ಭಾನುವಾರ ಬೆಳಗ್ಗೆ 11 ಗಂಟೆಗೆ ಚಾಮರಾಜಪೇಟೆಯ ಕನ್ನಡ ಸಾಹಿತ್ಯ ಪರಿಷತ್ತಿನಲ್ಲಿ ನಡೆಯಲಿದೆ.
ಶ್ರೀ ಕೃಷ್ಣರಾಜ ಪರಿಷತ್ತಿನ ಮಂದಿರದಲ್ಲಿ ಪ್ರಶಸ್ತಿ ಪ್ರದಾನ ಸಮಾರಂಭವನ್ನು ಹಮ್ಮಿಕೊಳ್ಳಲಾಗಿದೆ. ಕನ್ನಡ ಸಾಹಿತ್ಯ ಪರಿಷತ್ತು 2021ರ ಜನವರಿಯಿಂದ ಡಿಸೆಂಬರ್ ಅಂತ್ಯದೊಳಗೆ ಪ್ರಕಟಗೊಂಡ ಕೃತಿಗಳಿಗಾಗಿ ಈ ಪ್ರಶಸ್ತಿಯನ್ನು ಪ್ರದಾನ ಮಾಡಲಾಗುತ್ತಿದೆ. ವಿವಿಧ 49 ವಿಭಾಗಗಳ ದತ್ತಿ ಪ್ರಶಸ್ತಿಗೆ 53 ಕೃತಿಗಳನ್ನು ಆಯ್ಕೆ ಮಾಡಲಾಗಿದೆ.
ಇದನ್ನೂ ಓದಿ: Kannada Sahitya Parishat : 2021ನೇ ಸಾಲಿನ 49 ದತ್ತಿ ಪ್ರಶಸ್ತಿಗಳಿಗೆ 53 ಕೃತಿಗಳ ಆಯ್ಕೆ; ಪಡೆದವರು ಯಾರು ಯಾರು?
ಬೆಂಗಳೂರು ಉತ್ತರ ವಿಶ್ವವಿದ್ಯಾಲಯದ ಕುಲಪತಿ ಡಾ. ನಿರಂಜನ ವಾನಳ್ಳಿ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ. ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ನಾಡೋಜ ಡಾ. ಮಹೇಶ ಜೋಶಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ. ಮುಖ್ಯಮಂತ್ರಿಗಳ ಕಾರ್ಯದರ್ಶಿ ಹಾಗೂ ಮಂಡ್ಯ ಜಿಲ್ಲೆಯ ಉಸ್ತುವಾರಿ ಕಾರ್ಯದರ್ಶಿ ಜಯರಾಂ ರಾಯಪುರ (ಭಾರತೀಯ ಕಂದಾಯ ಸೇವೆ, ಆದಾಯ ತೆರಿಗೆ) ಹಾಗೂ ಹಿರಿಯ ಸಾಹಿತಿ ಮತ್ತು ಸಂಸ್ಕೃತಿ ಚಿಂತಕ ಪ್ರೊ. ಕಾಳೇಗೌಡ ನಾಗವಾರ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ.