Site icon Vistara News

Kasaragod News: ಕಾಸರಗೋಡು ಕನ್ನಡಿಗರಿಗೆ ಕರ್ನಾಟಕ ಸರ್ಕಾರ ಧ್ವನಿಯಾಗಿದೆ: ಕೆ.ವಿ.ಪ್ರಭಾಕರ್

Government is the voice of Kasaragod Kannadigas says KV Prabhakar

ಕಾಸರಗೋಡು: ಕಾಸರಗೋಡು ಕನ್ನಡಿಗರಿಗೆ ಸರ್ಕಾರ ಧ್ವನಿಯಾಗಿದೆ ಎಂದು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ಕೆ.ವಿ. ಪ್ರಭಾಕರ್ (Kasaragod News) ತಿಳಿಸಿದರು.

ಕಾಸರಗೋಡು ಬಳಿಯ ಸೀತಂಗೋಳಿನ ಅಲೈಡ್ ಕನ್ವೆನ್ಷನ್ ಹಾಲ್‌ನಲ್ಲಿ ಕಾಸರಗೋಡು ಜಿಲ್ಲಾ ಕನ್ನಡ ಪತ್ರಕರ್ತರ ಕ್ಷೇಮಾಭಿವೃದ್ಧಿ ಸಂಘವು, ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ, ಗಡಿ ಅಭಿವೃದ್ಧಿ ಪ್ರಾಧಿಕಾರ, ಪ್ರವಾಸೋದ್ಯಮ ಇಲಾಖೆ ಸಹಯೋಗದಲ್ಲಿ ಹಮ್ಮಿಕೊಳ್ಳಲಾಗಿದ್ದ ದತ್ತಿ ನಿಧಿ ಪ್ರಶಸ್ತಿ ಪ್ರದಾನ ಸಮಾರಂಭವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಹೊರನಾಡಿನ ಕನ್ನಡಿಗರ ಅಭಿಮಾನ ದೊಡ್ಡದು. ವಿಶೇಷವಾಗಿ ಕಾಸರಗೋಡು ಕನ್ನಡಿಗರ ಭಾವನೆ ಅರ್ಥವಾಗುತ್ತದೆ. ನಿಮ್ಮ ಜತೆಯಲ್ಲಿ ಕರ್ನಾಟಕ ಸರ್ಕಾರ ಸದಾ ಇದೆ. ನಿಮ್ಮ ಬೇಡಿಕೆಗಳನ್ನು ಈಡೇರಿಸುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಲಾಗುವುದು ಎಂದು ಅವರು ಭರವಸೆ ನೀಡಿದರು.

ಇದನ್ನೂ ಓದಿ: Uttara Kannada News: ಬಡ ಮೀನುಗಾರನ ಮಗಳು ಸಿಎ ಪರೀಕ್ಷೆಯಲ್ಲಿ ಪಾಸ್‌; ಸ್ಫೂರ್ತಿಯುತ ಸಾಧನೆ

ಗಡಿನಾಡಿನ ಕಾಸರಗೋಡು ಪತ್ರಕರ್ತರ ಬಸ್ ಪಾಸ್ ಕೊಡಿಸುವ ಭರವಸೆ ನೀಡಿದ ಕೆ.ವಿ. ಪ್ರಭಾಕರ್ ಅವರು, ಕಾಸರಗೋಡು ಕನ್ನಡ ಪತ್ರಕರ್ತರ ಕ್ಷೇಮಾಭಿವೃದ್ಧಿ ನಿಧಿಗೆ ಸಿಎಂ ಜತೆಗೆ ಮಾತನಾಡಿ ಅನುದಾನ ಒದಗಿಸುವುದಾಗಿ ತಿಳಿಸಿದರು. ‌

ಕಾರ್ಯಕ್ರಮದಲ್ಲಿ ಬೆಳಗಾವಿಯ ಕನ್ನಡ ಹೋರಾಟಗಾರ ಅಶೋಕ ಚಂದರಗಿ ಅವರಿಗೆ ಸಿ.ಸೋಮಶೇಖರ ದತ್ತಿ ಪ್ರಶಸ್ತಿಯನ್ನು ಪ್ರದಾನ ಮಾಡಲಾಯಿತು. ಬಳಿಕ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಿದವು.

ಇದನ್ನೂ ಓದಿ: Bengaluru News: ಮಕ್ಕಳು ಪ್ರಶ್ನೆ ಮಾಡುವ ಸಾಮರ್ಥ್ಯ ಬೆಳಸಿಕೊಳ್ಳಿ: ಐಶ್ವರ್ಯ ಡಿಕೆಎಸ್ ಹೆಗ್ಡೆ

ಈ ಸಂದರ್ಭದಲ್ಲಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು, ಶಾಸಕ ಎ.ಕೆ.ಎಂ. ಅಶ್ರಫ್, ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ಸೋಮಣ್ಣ ಬೇವಿನಮರದ, ಕಾರ್ಯದರ್ಶಿ ಪ್ರಕಾಶ್ ಮತ್ತಿಹಳ್ಳಿ, ಕೆಯುಡಬ್ಲ್ಯೂಜೆ ಕೇರಳ ಘಟಕ ಅಧ್ಯಕ್ಷ ಅಬ್ದುಲ್ ರೆಹಮಾನ್ ಸುಬ್ಬಯ್ಯಕಟ್ಟಿ ಹಾಗೂ ಇತರರು ಉಪಸ್ಥಿತರಿದ್ದರು.

Exit mobile version