ಬೆಂಗಳೂರು: ಸಿಇಟಿ-2023ಕ್ಕೆ ಆನ್‌ಲೈನ್ ಮೂಲಕ ಸಲ್ಲಿಸಿರುವ ಅರ್ಜಿಯಲ್ಲಿನ ಮಾಹಿತಿ ತಿದ್ದುಪಡಿ ಮಾಡಲು ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ಕಟ್ಟಕಡೆಯ ಅವಕಾಶ ನೀಡಿದೆ. ಅಭ್ಯರ್ಥಿಗಳು ಮೇ 21ರ ಸಂಜೆ 6ರಿಂದ 24ರ ರಾತ್ರಿ 11.59 ರವರೆಗೆ ಮಾಹಿತಿ ತಿದ್ದುಪಡಿ ಮಾಡಬಹುದು ಎಂದು ಕೆಇಎ ಮಾಹಿತಿ ನೀಡಿದೆ.
ಈ ಬಗ್ಗೆ ಕೆಇಎ ಕಾಯನಿರ್ವಾಹಕ ನಿರ್ದೇಶಕಿ ರಮ್ಯಾ ಅವರು ಮಂಗಳವಾರ ಮಾಹಿತಿ ನೀಡಿದ್ದು, ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳು ಮೇ 21ರಿಂದ 24 ರವರೆಗೆ ಮಾಹಿತಿ ತಿದ್ದುಪಡಿ ಮಾಡಬಹುದು. ಸಿಇಟಿ-2023ರ ಫಲಿತಾಂಶ ಪ್ರಕಟಿಸುವ ಮುನ್ನ ಇದು ತಿದ್ದುಪಡಿಗೆ ಕೊನೆಯ ಅವಕಾಶ ಎಂದು ಅವರು ಸ್ಪಷ್ಟಪಡಿಸಿದ್ದಾರೆ.
ಇದನ್ನೂ ಓದಿ | Unique ID for doctors : ಎಲ್ಲ ವೈದ್ಯರಿಗೆ ವಿಶಿಷ್ಟ ಐಡಿ ಕಡ್ಡಾಯ, ಏನಿದು?
ಸಿಇಟಿ-2023ರ ಫಲಿತಾಂಶ ಘೋಷಣೆಯಾದ ಮೇಲೆ ಯಾವುದೇ ಕಾರಣಕ್ಕೂ ಅರ್ಜಿಯಲ್ಲಿನ ಮಾಹಿತಿ ತಿದ್ದುಪಡಿ ಮಾಡಲು ಅಥವಾ ಮೀಸಲಾತಿಗೆ ಕ್ಲೇಮ್ ಮಾಡಲು ಅವಕಾಶವಿರುವುದಿಲ್ಲ ಎಂದು ತಿಳಿಸಿದ್ದಾರೆ. ಆದ್ದರಿಂದ ಅಭ್ಯರ್ಥಿಗಳು ಮತ್ತು ಪೋಷಕರು ತಮಗೆ ಸಂಬಂಧಿಸಿದ ಅರ್ಜಿಗಳಲ್ಲಿ ಮಾಡಿರುವ ಕ್ಲೇಮ್ / ಮಾಹಿತಿಯನ್ನು ತಪ್ಪದೇ ಕಡ್ಡಾಯವಾಗಿ ಪರಿಶೀಲಿಸಿಕೊಳ್ಳಬೇಕು ಎಂದು ಸೂಚಿಸಿದ್ದಾರೆ.
ವಿವರಕ್ಕೆ ಅಭ್ಯರ್ಥಿಗಳು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ವೆಬ್‌ಸೈಟ್ http://kea.kar.nic.in ನೋಡಬಹುದು.
ಮೇ 20 ಮತ್ತು 21ರಂದು ಸಿಇಟಿ
ಬೆಂಗಳೂರು: ವೃತ್ತಿಪರ ಕೋರ್ಸ್‌ಗಳ ಪ್ರವೇಶಾತಿಗೆ ನಡೆಯುವ ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ (ಕೆಸಿಇಟಿ) ಈ ಬಾರಿ ಮೇ 20 ಮತ್ತು 21ರಂದು ನಡೆಯಲಿದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಪ್ರಕಟಿಸಿದೆ. ಹೊರನಾಡು ಮತ್ತು ಗಡಿನಾಡು ವಿದ್ಯಾರ್ಥಿಗಳಿಗೆ ನಡೆಸುವ ಕಡ್ಡಾಯ ಕನ್ನಡ ಪರೀಕ್ಷೆ ಮೇ 22ರಂದು ನಡೆಯಲಿದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕಿ ರಮ್ಯಾ ಮಾಹಿತಿ ನೀಡಿದ್ದಾರೆ.