Site icon Vistara News

Exam Scam: ಕೆಇಎ ಪರೀಕ್ಷಾ ಅಕ್ರಮ ಪ್ರಕರಣ ಸಿಐಡಿಗೆ ಹಸ್ತಾಂತರ

CID office

ಬೆಂಗಳೂರು: ಕೆಇಎ ಪರೀಕ್ಷಾ ಅಕ್ರಮ ಪ್ರಕರಣದ (Exam Scam) ತನಿಖೆಯನ್ನು ಸಿಐಡಿಗೆ ಹಸ್ತಾಂತರ ಮಾಡಲಾಗಿದೆ. ಪರೀಕ್ಷಾ ಅಕ್ರಮದ ಕಿಂಗ್‌ಪಿನ್‌ ಆರ್​.ಡಿ. ಪಾಟೀಲ್​ ಬಂಧನವಾದ ಬೆನ್ನಲ್ಲೇ ಗೃಹ ಇಲಾಖೆ ಸೂಚನೆ ಮೇರೆಗೆ ಪ್ರಕರಣದ ತನಿಖೆ ಹೊಣೆಯನ್ನು ಸಿಐಡಿಗೆ ನೀಡಲಾಗಿದೆ.

ಕೆಇಎ ಪರೀಕ್ಷಾ ಅಕ್ರಮ ಪ್ರಕರಣ ಸಂಬಂಧ ಯಾದಗಿರಿ ನಗರ ಠಾಣೆಯಲ್ಲಿ 5 ಪ್ರಕರಣಗಳು ದಾಖಲಾಗಿದ್ದವು. ತನಿಖೆಗಾಗಿ ರಾಜ್ಯ ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಎಡಿಜಿಪಿ ಆರ್.ಹೀತೇಂದ್ರ ಅವರು ಸಿಐಡಿ ತನಿಖಾಧಿಕಾರಿಗೆ ಪ್ರಕರಣದ ಕಡತಗಳನ್ನು ಹಸ್ತಾಂತರ ಮಾಡಿದ್ದಾರೆ.

ಕೆಇಎ ಪರೀಕ್ಷೆ ಅಕ್ರಮ ಆರೋಪಿ ಕಿಂಗ್​ಪಿನ್​ ಆರ್​.ಡಿ ಪಾಟೀಲ್​ ಕಳೆದ 12 ದಿನಗಳಿಂದ ನಾಪತ್ತೆಯಾಗಿದ್ದ. ನ 6. ರಂದು ಕಲಬುರಗಿ ನಗರದ ವರ್ಧಾ ಲೇಔಟ್‌ನ ಮಹಾಲಕ್ಷ್ಮಿ ಅಪಾರ್ಟ್ಮೆಂಟ್‌ನ ಕಾಂಪೌಂಡ್ ಹಾರಿ ಆರ್‌.ಡಿ. ಪಾಟೀಲ್ ಎಸ್ಕೇಪ್ ಆಗಿದ್ದ. ಆತನಿಗಾಗಿ ಪೊಲೀಸರು ಹುಡುಕಾಟ ನಡೆಸುತ್ತಿದ್ದರು. ಆದರೆ, ಶುಕ್ರವಾರ ಮಹಾರಾಷ್ಟ್ರದ ಸೊಲ್ಲಾಪುರಲ್ಲಿ ಸಿಕ್ಕಿಬಿದ್ದಿದ್ದ. ಸದ್ಯ ಆತನನ್ನು ಬಂಧಿಸಿ ಕಲಬುರಗಿಗೆ ತರಲಾಗಿದೆ.

ಇದನ್ನೂ ಓದಿ | Rajasthan Crime: ಬಾಲಕಿ ಮೇಲೆ ಸಬ್‌ ಇನ್ಸ್‌ಪೆಕ್ಟರ್‌ ಲೈಂಗಿಕ ದೌರ್ಜನ್ಯ; ಕಾಯುವ ಕೈಗಳೇ…

ಅಕ್ಟೋಬರ್‌ 28 ಮತ್ತು 29ರಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ (Karnataka Examination authority-KEA) ನಡೆಸಿದ ನಿಗಮ ಮತ್ತು ಮಂಡಳಿ ನೇಮಕಾತಿ ಪರೀಕ್ಷೆಯ (Exam Scam) ವೇಳೆ ಕೆಲ ಅಭ್ಯರ್ಥಿಗಳು ಬ್ಲೂ ಟೂತ್‌ ಬಳಸಿ ಸಿಕ್ಕಿಬಿದ್ದಿದ್ದರು. ನಂತರ ಪರೀಕ್ಷಾ ಅಕ್ರಮದ ಬಗ್ಗೆ ವ್ಯಾಪಕ ಆಕ್ರೋಶ ವ್ಯಕ್ತವಾಗಿತ್ತು. ಪ್ರಕರಣದಲ್ಲಿ ಹಲವರ ಬಂಧನವಾಗಿದ್ದು, ವಿಚಾರಣೆ ನಡೆಯುತ್ತಿದೆ.

ಅಭಿನವ ಹಾಲಶ್ರೀ ಸ್ವಾಮೀಜಿ ಪರಪ್ಪನ ಅಗ್ರಹಾರ ಜೈಲಿನಿಂದ ಬಿಡುಗಡೆ

ಬೆಂಗಳೂರು: ಉದ್ಯಮಿ ಗೋವಿಂದ ಪೂಜಾರಿ (Govinda Poojari) ಅವರಿಗೆ ಬೈಂದೂರು ಕ್ಷೇತ್ರದ ಬಿಜೆಪಿ ಟಿಕೆಟ್‌ (Bynduru BJP Ticket) ಕೊಡಿಸುವುದಾಗಿ ನಂಬಿಸಿ ಐದು ಕೋಟಿ ರೂ. ವಂಚನೆ ಮಾಡಿದ ಪ್ರಕರಣದಲ್ಲಿ (Chaitra Fraud Case) ಮೂರನೇ ಆರೋಪಿಯಾಗಿರುವ ಹಿರೇಹಡಗಲಿಯ ಹಾಲ ಸ್ವಾಮಿ ಮಠದ ಶ್ರೀ ಅಭಿನವ ಹಾಲಶ್ರೀ ಸ್ವಾಮೀಜಿ (Halashri swameeji) ಅವರನ್ನು ಪರಪ್ಪನ ಅಗ್ರಹಾರ ಜೈಲಿನಿಂದ ಬಿಡುಗಡೆ ಮಾಡಲಾಗಿದೆ.

ವಂಚನೆ ಪ್ರಕರಣದಲ್ಲಿ ಜೈಲು ಸೇರಿದ್ದ ಸ್ವಾಮೀಜಿಗೆ ರಾಜ್ಯ ಹೈಕೋರ್ಟ್‌ ನವೆಂಬರ್‌ 8ರಂದು ಜಾಮೀನು ನೀಡಿತ್ತು. ಇದಾದ ಬಳಿಕ ಶೂರಿಟಿ, ಇಬ್ಬರು ವ್ಯಕ್ತಿಗಳ ಬಾಂಡ್‌ ಸೇರಿದಂತೆ ಹಲವು ಷರತ್ತುಗಳನ್ನು ಪೂರೈಸಿದ ಬಳಿಕ ಶನಿವಾರ ಅವರನ್ನು ಜೈಲಿನಿಂದ ಬಿಡುಗಡೆ ಮಾಡಲಾಗಿದೆ.

ಹಾಲಶ್ರೀ ಸ್ವಾಮೀಜಿ ಅವರು ಜೈಲಿನಿಂದ ಬಿಡುಗಡೆಯಾಗುತ್ತಿದ್ದಂತೆಯೇ ಶ್ರೀರಾಮ ಸೇನೆಯ ಸಂಚಾಲಕ ಪ್ರಮೋದ್‌ ಮುತಾಲಿಕ್‌ ಅವರು ಕೇಸರಿ ಶಾಲು ಹಾಕಿ ಸ್ವಾಗತ ಮಾಡಿದರು.

ಈ ವೇಳೆ ಮಾತನಾಡಿದ ಅಭಿನವ ಹಾಲಶ್ರೀ ಅವರು, ʻʻಪ್ರತ್ಯಕ್ಷವಾಗಿ ಕಂಡರು ಪ್ರಮಾಣಿಸಿ ನೋಡಬೇಕು. ಪ್ರಕರಣದ ತನಿಖೆ ವೇಳೆ ಅದನ್ನು ಪರಿಗಣಿಸಬೇಕು. ಮುಂದೊಂದು ದಿನ ಈ ಪ್ರಕರಣದ ಬಗ್ಗೆ ಮಾತನಾಡುತ್ತೇನೆʼʼ ಎಂದು ಹೇಳಿದರು.

ʻʻನಮ್ಮನ್ನ ನಂಬಿ ಅರಾಧಿಸುವ ಸಮಾಜಕ್ಕೆ, ನಮ್ಮ ಮೇಲೆ ನಂಬಿಕೆಯಿಟ್ಟಿರುವ ಭಕ್ತ ಸಮೂಹದ ಆಶಯಕ್ಕೆ ಯಾವುದೇ ಧಕ್ಕೆ ಬರದಂತೆ ಬದುಕು ಕಟ್ಟಿಕೊಂಡು ಬಂದಿದ್ದೇನೆ. ಮುಂದೆಯೂ ಅದೇ ರೀತಿ ಬದುಕು ಸಾಗಿಸುತ್ತೇನೆʼʼ ಎಂದು ಪರಪ್ಪನ ಅಗ್ರಹಾರ ಜೈಲಿನ ಬಳಿ ಮಾಧ್ಯಮಗಳಿಗೆ ಹೇಳಿಕೆ ನೀಡಿದರು ಹಾಲಶ್ರೀ.

ಅವರು ಬೆಂಗಳೂರಿನಿಂದ ಹಿರೇಹಡಗಲಿಗೆ ನೇರವಾಗಿ ಹೋಗುತ್ತಾರಾ ಅಥವಾ ಕೆಲವು ದಿನ ಭಕ್ತರ ಮನೆಯಲ್ಲಿದ್ದು ಬಳಿಕ ಮಠಕ್ಕೆ ಹೋಗುತ್ತಾರೆಯೇ ಎನ್ನುವುದರ ಬಗ್ಗೆ ಖಾತ್ರಿಯಾಗಿಲ್ಲ.

ಇದನ್ನೂ ಓದಿ | Halli Hyda Pyateg Banda: ʻಹಳ್ಳಿ ಹೈದ ಪ್ಯಾಟೆಗ್‌ ಬಂದʼ ಮಾಜಿ ಸ್ಪರ್ಧಿ ಕಳ್ಳತನ‌ ಪ್ರಕರಣದಲ್ಲಿ ಸೆರೆ!

ಬೈಂದೂರು ಕ್ಷೇತ್ರದ ಬಿಜೆಪಿ ಟಿಕೆಟ್‌ ಕೊಡಿಸುವುದಾಗಿ ಚೈತ್ರಾ ಮತ್ತು ಗ್ಯಾಂಗ್‌ ಉದ್ಯಮಿ ಗೋವಿಂದ ಪೂಜಾರಿ ಅವರನ್ನು ವಂಚಿಸಿದ ಪ್ರಕರಣದಲ್ಲಿ ಹಾಲಶ್ರೀ ಸ್ವಾಮೀಜಿ ಮೂರನೇ ಆರೋಪಿಯಾಗಿದ್ದಾರೆ. ಚೈತ್ರಾ ಮತ್ತು ಇತರ ಆರು ಮಂದಿ ಆರೋಪಿಗಳು ನಾನಾ ಕಾರಣ ಹೇಳಿ ಗೋವಿಂದ ಪೂಜಾರಿಯಿಂದ 3.5 ಕೋಟಿ ರೂ. ಸುಲಿಗೆ ಮಾಡಿದ್ದರೆ ಮೂರನೇ ಆರೋಪಿಯಾಗಿರುವ ಅಭಿನವ ಹಾಲಶ್ರೀ ಸ್ವಾಮೀಜಿ 1.5 ಕೋಟಿ ರೂ. ಪಡೆದುಕೊಂಡಿದ್ದಾರೆ ಎಂದು ಗೋವಿಂದ ಪೂಜಾರಿ ಹೇಳಿದ್ದರು.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Exit mobile version