Site icon Vistara News

Kempegowda Airport: ಕಸ್ಟಮ್ಸ್‌ ಅಧಿಕಾರಿಗಳ ಕಾರ್ಯಾಚರಣೆ; ಅಕ್ರಮವಾಗಿ ಸಾಗುತ್ತಿದ್ದ ಅಪರೂಪದ 18 ಹಾವು, ಪ್ರಾಣಿಗಳ ವಶ

ದೇವನಹಳ್ಳಿ: ವಿದೇಶದಿಂದ ಅಕ್ರಮವಾಗಿ ಸಾಗಿಸುತ್ತಿದ್ದ ಹಾವು ಮತ್ತು ಪ್ರಾಣಿಗಳನ್ನು ವಶಕ್ಕೆ ಪಡೆದು, ಓರ್ವ ಮಹಿಳೆ ಸೇರಿದಂತೆ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ. ಕೆಂಪೇಗೌಡ ಅಂತಾರಾಷ್ಟ್ರೀಯ ಏರ್‌ಪೋರ್ಟ್‌ನ (Kempegowda Airport) ಕಸ್ಟಮ್ಸ್‌ ಅಧಿಕಾರಿಗಳು ಕಾರ್ಯಾಚರಣೆ ನಡೆಸಿದ್ದಾರೆ.

Kempegowda Airport

ಬ್ಯಾಂಕಾಕ್‌ನಿಂದ ಬಂದಿದ್ದ ಈ ಆರೋಪಿಗಳು, ಅಕ್ರಮವಾಗಿ 18 ಹಾವು ಮತ್ತು ಪ್ರಾಣಿಗಳನ್ನು ಸಾಗಾಟ ಮಾಡಿ ಹೆಚ್ಚಿನ ಹಣಕ್ಕೆ ಮಾರಾಟ ಮಾಡಲು ಯತ್ನಿಸಿದ್ದಾರೆ. ಯಾವುದೇ ಅನುಮತಿಯಿಲ್ಲದೆ ಸಾಗಿಸುತ್ತಿದ್ದ ಹಳದಿ ಮತ್ತು ಹಸಿರು ಬಣ್ಣದ ಆನಕೊಂಡ, ಹಳದಿ ಬಣ್ಣದ ಅಮೇಜಾನ್ ಗಿಳಿ, ನೈಲ್ ಮಾನಿಟರ್ ಸೇರಿದಂತೆ ಹಲವು ಅಪರೂಪದ ಪ್ರಾಣಿಗಳನ್ನು ವಶಕ್ಕೆ ಪಡೆಯಲಾಗಿದೆ.

Kempegowda Airport

ಇದನ್ನೂ ಓದಿ: Pathaan Movie: ಮೂರು ದಿನಗಳಲ್ಲಿ ಭಾರತದಲ್ಲಿ 150 ಕೋಟಿ ರೂ. ಕ್ಲಬ್‌ ಸೇರಿದ ʻಪಠಾಣ್‌ʼ

ವಶಕ್ಕೆ ಪಡೆದ ಎಲ್ಲ ಪ್ರಾಣಿಗಳನ್ನು ಬನ್ನೇರುಘಟ್ಟದ ಜೈವಿಕ ಉದ್ಯಾನವನಕ್ಕೆ ರವಾನೆ ಮಾಡಲಾಗಿದೆ. ಮೂವರು ಆರೋಪಿಗಳ‌ ವಿರುದ್ಧ ಅರಣ್ಯ ಕಾಯ್ದೆಯಡಿ ಪ್ರಕರಣ ದಾಖಲಿಸಿ ತನಿಖೆ ನಡೆಸಲಾಗುತ್ತಿದೆ. ದೇವನಹಳ್ಳಿ ಸಮೀಪದ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಪ್ರಕರಣ ಬೆಳಕಿಗೆ ಬಂದಿದೆ.

Exit mobile version