Kempegowda Airport: ಸೆ.12ರಿಂದ ಕೆಂಪೇಗೌಡ ಏರ್‌ಪೋರ್ಟ್‌ ಟರ್ಮಿನಲ್ 2ರಿಂದ ವಿದೇಶಿ ವಿಮಾನ ಸೇವೆ ಆರಂಭ - Vistara News

ಕರ್ನಾಟಕ

Kempegowda Airport: ಸೆ.12ರಿಂದ ಕೆಂಪೇಗೌಡ ಏರ್‌ಪೋರ್ಟ್‌ ಟರ್ಮಿನಲ್ 2ರಿಂದ ವಿದೇಶಿ ವಿಮಾನ ಸೇವೆ ಆರಂಭ

Kempegowda Airport: ಸೆಪ್ಟೆಂಬರ್ 1 ರಿಂದ ವಿದೇಶಗಳಿಗೆ ವಿಮಾನಯಾನ ಸೇವೆ ಪ್ರಾರಂಭ ಮಾಡುವುದಾಗಿ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಅಧಿಕಾರಿಗಳು ತಿಳಿಸಿದ್ದರು. ಆದರೆ, ತಾಂತ್ರಿಕ ಕಾರಣದಿಂದ ಮುಂದೂಡಿಕೆ ಮಾಡಲಾಗಿತ್ತು.

VISTARANEWS.COM


on

kempegowda airport terminal 2
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ದೇವನಹಳ್ಳಿ: ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸುಮಾರು 5 ಸಾವಿರ ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಾಣವಾಗಿರುವ ಟರ್ಮಿನಲ್ 2, ವಿದೇಶಿ ವಿಮಾನಗಳ ಹಾರಾಟಕ್ಕೆ ಸಜ್ಜಾಗಿದೆ. ಸೆಪ್ಟೆಂಬರ್ 1ರಿಂದ ವಿದೇಶಿ ವಿಮಾನಯಾನ ಸೇವೆ ಪ್ರಾರಂಭ ಮಾಡುವುದಾಗಿ ಬಿಐಎಎಲ್ ತಿಳಿಸಿತ್ತು. ಆದರೆ ಕೆಲವು ತಾಂತ್ರಿಕ ಕಾರಣಗಳಿಂದ ಸಾಧ್ಯವಾಗಿರಲಿಲ್ಲ. ಇದೀಗ ಸೆ.12ರಿಂದ ಅಂತಾರಾಷ್ಟ್ರೀಯ ವಿಮಾನ ಸೇವೆ ಆರಂಭಿಸಲು ಮುಹೂರ್ತ ನಿಗದಿಯಾಗಿದೆ.

ಕಳೆದ ವರ್ಷ ನವೆಂಬರ್‌ 11ರಂದು ಪ್ರಧಾನಿ ನರೇಂದ್ರ ಮೋದಿ ಅವರು ಟರ್ಮಿನಲ್ 2 ಅನ್ನು ಉದ್ಘಾಟಿಸಿದ್ದರು. ನಂತರ ಕೇವಲ ಮೂರು ದೇಶಿಯ ವಿಮಾನಯಾನ ಸಂಸ್ಥೆಗಳು ಕಾರ್ಯಾಚರಣೆ ಮಾಡಲು ಅವಕಾಶ ಮಾಡಿಕೊಡಲಾಗಿತ್ತು. ಆದರೆ, ನಾಳೆಯಿಂದ ಅಂತಾರಾಷ್ಟ್ರೀಯ ವಿಮಾನಯಾನ ಸೇವೆ ಕೂಡ ಲಭ್ಯವಾಗಲಿದೆ.

ಈವರೆಗೆ ಟಿ-2ನಲ್ಲಿ ಆಕಾಸ್, ಏರ್ ಏಷ್ಯಾ, ಮತ್ತು ವಿಸ್ತಾರ ವಿಮಾನಯಾನ ಸಂಸ್ಥೆಗಳು ಮಾತ್ರ ಕಾರ್ಯ ನಿರ್ವಹಿಸುತ್ತಿದ್ದವು. ಇನ್ನುಮುಂದೆ ದೇಶಿಯ ವಿಮಾನಯಾನ ಸೇವೆಗಳ ಜತೆಗೆ ವಿದೇಶಿ ವಿಮಾನಯಾನ ಸಂಸ್ಥೆಗಳು ವಿಮಾನಯಾನ ಸೇವೆ ಒದಗಿಸಲಿವೆ.

ಇದನ್ನೂ ಓದಿ | DK Shivakumar: ಕರ್ನಾಟಕ ಹೂಡಿಕೆದಾರರ ನೆಚ್ಚಿನ ತಾಣ: ನೆದರ್ಲೆಂಡ್ಸ್‌ ನಿಯೋಗಕ್ಕೆ ಡಿಸಿಎಂ ಡಿಕೆಶಿ ಆಹ್ವಾನ

ವಿದೇಶಿ ವಿಮಾನಯಾನ ಹಾರಾಟಕ್ಕೆ ಎಲ್ಲಾ ರೀತಿಯ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ. ಟಿ1 ನಲ್ಲಿ ಇದ್ದಂತಹ ಕಸ್ಟಮ್ಸ್ ಅಧಿಕಾರಿಗಳ ಕಚೇರಿ, ಚಿಲ್ಲರೆ ಹಾಗೂ ಆಹಾರ ಮಳಿಗೆಗಳು ಸಹ ಸ್ಥಳಾಂತರ ಆಗಿವೆ. ಇನ್ನು ಬಿ.ಐ.ಎ.ಎಲ್ ಸಿಬ್ಬಂದಿ ಮೊದಲ ವಿಮಾನ ಹತ್ತಲು ಆಗಮಿಸುವ ಪ್ರಯಾಣಿಕರನ್ನು ಜಾನಪದ ಕಲಾತಂಡಗಳೊಂದಿಗೆ ಸ್ವಾಗತಿಸಲು ಸಜ್ಜಾಗಿದ್ದಾರೆ. ಜತೆಗೆ ಟಿ-1 ರಲ್ಲಿ ವಿದೇಶಿ ವಿಮಾನ ಹಾರಾಟ ಮುಂದುವರಿಯಲಿದೆ. ಮುಂದಿನ ದಿನಗಳಲ್ಲಿ ಟರ್ಮಿನಲ್‌-1 ರಲ್ಲಿ ಸಂಪೂರ್ಣವಾಗಿ ದೇಶಿಯ ವಿಮಾನಗಳು ಹಾರಾಟ ಮಾಡಲಿದ್ದು. ಟರ್ಮಿನಲ್‌ 2ರಲ್ಲಿ 27 ವಿದೇಶಿ ವಿಮಾನಗಳು ಸೇರಿದಂತೆ 2 ದೇಶಿ ವಿಮಾನಗಳು ಮಾತ್ರ ಹಾರಾಟ ಮಾಡಲಿವೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕ್ರೈಂ

Prajwal Revanna Case: ‌ಅತ್ಯಾಚಾರ ಸಂತ್ರಸ್ತೆ ಅಪಹರಣ ಕೇಸ್; ರೇವಣ್ಣ ಮುಂದಿರುವ ಆಯ್ಕೆಗಳೇನು?

Prajwal Revanna Case: ‌ಸಂತ್ರಸ್ತೆ ಅಪಹರಣ ಕೇಸ್‌ನಲ್ಲಿ ಎಚ್.ಡಿ. ರೇವಣ್ಣ ಅವರಿಗೆ ಸಂಕಷ್ಟ ಎದುರಾಗಿದೆ. ಅವರು ಜಾಮೀನಿಗಾಗಿ ಪ್ರಯತ್ನ ಮಾಡುತ್ತಿದ್ದಾರೆ. ಹೀಗಾಗಿ ಕೋರ್ಟ್‌ನಲ್ಲಿ ವಾದ ಮಂಡಿಸಲು ಅವರ ವಕೀಲರ ತಂಡ ಸಜ್ಜಾಗಿದೆ. ಇದು ರಾಜಕೀಯ ಪ್ರೇರಿತ ಪ್ರಕರಣವಾಗಿದ್ದು, ಸಂತ್ರಸ್ತೆಯನ್ನು ನಾನು ಕಿಡ್ನ್ಯಾಪ್‌ ಮಾಡಿಲ್ಲ ಎಂದು ವಾದ ಮಂಡಿಸುವುದು. ಇದಕ್ಕೆ ಪೂರಕ ಸಾಕ್ಷ್ಯಾಧಾರವನ್ನು ಒದಗಿಸಲು ಪ್ರಯತ್ನ ಮಾಡುವುದು. ಈ ಮೂಲಕ ನ್ಯಾಯಾಲಯಕ್ಕೆ ಮನವರಿಕೆ ಮಾಡಿ ಪರಪ್ಪನ ಅಗ್ರಹಾರ ಜೈಲಿಗೆ ಕಳುಹಿಸದಂತೆ ಜಾಮೀನು ಪಡೆದು ಬಚಾವ್ ಆಗುವ ಲೆಕ್ಕಾಚಾರಗಳು ಸಹ ನಡೆದಿವೆ.

VISTARANEWS.COM


on

Rape victim kidnapping in Prajwal Revanna Case What are the options before HD Revanna
Koo

ಬೆಂಗಳೂರು: ಹಾಸನ ಸಂಸದ (Hassan MP) ಪ್ರಜ್ವಲ್ ರೇವಣ್ಣ (Prajwal Revanna Case) ಅವರದ್ದು ಎನ್ನಲಾದ ಅಶ್ಲೀಲ ವಿಡಿಯೊ ಪೆನ್‌ಡ್ರೈವ್‌ ಪ್ರಕರಣ (Hassan Pen Drive Case) ಸಂಬಂಧ ಸಂತ್ರಸ್ತೆಯನ್ನು ಅಪಹರಣ ಮಾಡಿದ ಆರೋಪ ಹೊತ್ತಿರುವ ಮಾಜಿ ಸಿಎಂ ಎಚ್.ಡಿ. ರೇವಣ್ಣ (HD Revanna) ವಿರುದ್ಧದ ಕೇಸ್‌ಗೆ ಸಂಬಂಧಪಟ್ಟಂತೆ ಅವರಿಗೆ ಮುಂದೆ ಇರುವ ಆಯ್ಕೆ ಏನು ಎಂಬ ಪ್ರಶ್ನೆ ಎದುರಾಗಿದೆ. ಅಲ್ಲದೆ, ತನ್ನ ಅಪಹರಣ ಮಾಡಿಸಿದ್ದು ರೇವಣ್ಣ ಅವರೇ ಎಂದು ಸಂತ್ರಸ್ತೆ ಬಾಯಿಬಿಟ್ಟರೆ ಪರಪ್ಪನ ಅಗ್ರಹಾರವೇ ಗತಿಯಾಗಲಿದೆ ಎಂದು ಹೇಳಲಾಗುತ್ತಿದೆ.

ಸದ್ಯ ಎಚ್.ಡಿ. ರೇವಣ್ಣ ಅವರ ಮುಂದೆ ಇರುವ ಆಯ್ಕೆ ಎಂದರೆ, ಎಸ್ಐಟಿ ಕಸ್ಟಡಿ ಮುಗಿಯುವವರೆಗೂ ತನಿಖೆಯನ್ನು ಎದುರಿಸುವುದಾಗಿದೆ. ಎಸ್ಐಟಿ ಕಸ್ಟಡಿ ಅಂತ್ಯವಾಗುವ ವೇಳೆಗೆ ಜಾಮೀನು ಕೋರಿ ಅದೇ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ.

ಇದು ರಾಜಕೀಯ ಪ್ರೇರಿತ ಪ್ರಕರಣವಾಗಿದ್ದು, ಸಂತ್ರಸ್ತೆಯನ್ನು ನಾನು ಕಿಡ್ನ್ಯಾಪ್‌ ಮಾಡಿಲ್ಲ ಎಂದು ವಾದ ಮಂಡಿಸುವುದು. ಇದಕ್ಕೆ ಪೂರಕ ಸಾಕ್ಷ್ಯಾಧಾರವನ್ನು ಒದಗಿಸಲು ಪ್ರಯತ್ನ ಮಾಡುವುದು. ಈ ಮೂಲಕ ನ್ಯಾಯಾಲಯಕ್ಕೆ ಮನವರಿಕೆ ಮಾಡಿ ಪರಪ್ಪನ ಅಗ್ರಹಾರ ಜೈಲಿಗೆ ಕಳುಹಿಸದಂತೆ ಜಾಮೀನು ಪಡೆದು ಬಚಾವ್ ಆಗುವ ಲೆಕ್ಕಾಚಾರಗಳು ಸಹ ನಡೆದಿವೆ. ಹಾಗಾಗಿ ಈಗ ಅಪಹರಣಕ್ಕೊಳಗಾಗಿದ್ದಾರೆ ಎಂಬ ಸಂತ್ರಸ್ತೆಯು ನೀಡುವ ಹೇಳಿಕೆ ಎಚ್.ಡಿ. ರೇವಣ್ಣ ಅವರ ಪಾಲಿಗೆ ಅತ್ಯಂತ ಮಹತ್ವದ್ದಾಗಿದೆ. ಅವರ ಹೇಳಿಕೆ ವಿರುದ್ಧವಾಗಿದ್ದರೆ ರೇವಣ್ಣ ಅವರಿಗೆ ಜೈಲೇ ಗತಿಯಾಗಿದೆ.

ಕೋರ್ಟ್‌ನಲ್ಲಿ ವಿಫಲವಾದರೆ ಜೈಲು ಪಕ್ಕಾ

ಇನ್ನು ಎಚ್‌.ಡಿ. ರೇವಣ್ಣ ಅವರು ಅಪಹರಣ ಪ್ರಕರಣಕ್ಕೆ ಸಂಬಂಧಪಟ್ಟಂತೆ ಸಮರ್ಪಕವಾಗಿ ವಾದ ಮಂಡಿಸುವಲ್ಲಿ ವಿಫಲರಾದಲ್ಲಿ ಹಾಗೂ ರೇವಣ್ಣ ವಿರುದ್ಧದ ಆರೋಪಗಳು ಮೇಲ್ನೋಟಕ್ಕೆ ಸಾಬೀತಾಗಿದೆ ಎಂಬುದಾಗಿ ಕೋರ್ಟ್ ನಿರ್ಧಾರಕ್ಕೆ ಬಂದಲ್ಲಿ ಸದ್ಯಕ್ಕೆ ಜೈಲುವಾಸ ಆಗಲಿದೆ. ಬಳಿಕ ಮೇಲ್ದರ್ಜೆಯ ಕೋರ್ಟ್‌ಗೆ ರೇವಣ್ಣ ಜಾಮೀನು ಕೋರಿ ಅರ್ಜಿ ಸಲ್ಲಿಸಬಹುದು.

ಪ್ರಜ್ವಲ್‌ ರೇವಣ್ಣ ಕೇಸಲ್ಲಿ ಎಚ್‌ಡಿಡಿ, ಎಚ್‌ಡಿಕೆ ಹೆಸರು ಬಳಸಂಗಿಲ್ಲ; ಕೋರ್ಟ್‌ ತಡೆಯಾಜ್ಞೆ

ಅಶ್ಲೀಲ ವಿಡಿಯೊ ಪೆನ್‌ಡ್ರೈವ್‌ ಪ್ರಕರಣ ಹಾಗೂ ಎಚ್.ಡಿ. ರೇವಣ್ಣ ವಿರುದ್ಧದ ಅಪಹರಣ ಕೇಸ್‌ಗೆ ಸಂಬಂಧಪಟ್ಟಂತೆ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಹಾಗೂ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರ ಹೆಸರನ್ನು ಬಳಸದಂತೆ ತಡೆಯಾಜ್ಞೆ ನೀಡಲಾಗಿದೆ.

ಉಭಯ ನಾಯಕರು ಸೆಷನ್ಸ್ ಕೋರ್ಟ್‌ನಿಂದ ತಡೆಯಾಜ್ಞೆ ತಂದಿದ್ದಾರೆ. ಪ್ರಕರಣಗಳ ಬಗ್ಗೆ ಸುದ್ದಿ ಪ್ರಸಾರ‌ ಮಾಡುವಾಗ ತಮ್ಮ ಹೆಸರುಗಳನ್ನು ಬಳಸದಂತೆ ತಡೆಯಾಜ್ಞೆಯನ್ನು ತಂದಿದ್ದಾರೆ. ಇಷ್ಟು ದಿನ ಪ್ರಕರಣದ ಸಂದರ್ಭದಲ್ಲಿ ದೇವೇಗೌಡರ ಕುಟುಂಬದ ಹೆಸರುಗಳನ್ನು ಕೆಲವರು ಪ್ರಸ್ತಾಪ ಮಾಡುತ್ತಿದ್ದರು. ಇದರಿಂದ ಅವರ ಕುಟುಂಬಕ್ಕೆ ತೀವ್ರ ಮುಜುಗರವಾಗಿತ್ತು. ಅಲ್ಲದೆ, ಎಚ್‌.ಡಿ. ಕುಮಾರಸ್ವಾಮಿ ಅವರು ನೇರವಾಗಿಯೇ ಇದರ ಬಗ್ಗೆ ಕಿಡಿಕಾರಿದ್ದರು.

ಅಪಹರಣ ಕೇಸ್‌ನಲ್ಲಿ ಸ್ವ-ಇಚ್ಚಾ ಹೇಳಿಕೆಗೆ ಸಹಿ ಹಾಕಲು NO ಎಂದ ಎಚ್‌.ಡಿ. ರೇವಣ್ಣ!

ಎಸ್‌ಐಟಿ ಅಧಿಕಾರಿಗಳು ತನಿಖೆಯನ್ನು ತೀವ್ರಗೊಳಿಸಿದ್ದು, ಸ್ವ-ಇಚ್ಛಾ ಹೇಳಿಕೆಯನ್ನು ದಾಖಲು ಮಾಡಿಕೊಳ್ಳಲು ಮುಂದಾಗಿದ್ದಾರೆ. ಆದರೆ, ಈ ಸ್ವ-ಇಚ್ಛಾ ಹೇಳಿಕೆಗೆ ಸಹಿ ಹಾಕಲು ಎಚ್.ಡಿ. ರೇವಣ್ಣ (HD Revanna) ನಿರಾಕರಿಸಿದ್ದಾರೆ. ನಿಮಗೆ ಬೇಕಾದಂತೆ ಬರೆದುಕೊಂಡಿದ್ದೀರಾ ಎಂದು ಆಕ್ರೋಶವನ್ನು ಹೊರಹಾಕಿದ್ದಾರೆ ಎಂದು ತಿಳಿದುಬಂದಿದೆ.

ಎಚ್.ಡಿ. ರೇವಣ್ಣ ಅವರನ್ನು ಐದು ದಿನಗಳ ಕಸ್ಟಡಿಗೆ ನೀಡಿ ಭಾನುವಾರ 17ನೇ ಎಸಿಎಂಎಂ ಕೋರ್ಟ್ ನ್ಯಾಯಾಧೀಶರು ಆದೇಶ ನೀಡಿದ್ದರು. ಈ ಹಿನ್ನೆಲೆಯಲ್ಲಿ ಎಸ್‌ಐಟಿ ಅಧಿಕಾರಿಗಳು ರೇವಣ್ಣ ಅವರ ವಿಚಾರಣೆಯನ್ನು ಮುಂದುವರಿಸಿದ್ದಾರೆ. ಅಪಹರಣ ಕೇಸ್‌ನಲ್ಲಿ ರೇವಣ್ಣ ಅವರಿಂದ ಸ್ವ-ಇಚ್ಛಾ ಹೇಳಿಕೆ ದಾಖಲು ಮಾಡಿಕೊಳ್ಳಲು ಮುಂದಾಗಲಾಗಿದೆ. ಈ ಸಂಬಂಧ ರೇವಣ್ಣ ಅವರಿಗೆ ಭಾನುವಾರವೇ ಒಂದಷ್ಟು ಪ್ರಶ್ನೆಗಳನ್ನು ಕೇಳಿ ಉತ್ತರ ಪಡೆಯುವ ಪ್ರಯತ್ನವನ್ನು ಅಧಿಕಾರಿಗಳೂ ಮಾಡಿದ್ದರು.

ಅಪಹರಣ ಕೇಸ್‌ ಬಗ್ಗೆ ಎಚ್.ಡಿ. ರೇವಣ್ಣ ಅವರಿಗೆ ಹಲವು ಪ್ರಶ್ನೆಗಳನ್ನು ಕೇಳಲಾಗಿತ್ತು. ಸತೀಶ್ ಬಾಬು ಪರಿಚಯವಿದ್ದಾರಾ? ಅವರ ಮೂಲಕ ಕಿಡ್ನ್ಯಾಪ್ ಮಾಡಿಸಲು ನೀವೇ ತಿಳಿಸಿದ್ದಿರಾ? ಅಪಹರಣ ಮಾಡಿದ್ದರ ಹಿಂದಿನ ಉದ್ದೇಶ ಏನು ಎಂಬಿತ್ಯಾದಿ ವಿಷಯಗಳ ಬಗ್ಗೆ ಪ್ರಶ್ನೆ ಮಾಡಿ ಉತ್ತರವನ್ನು ಪಡೆದುಕೊಂಡಿದ್ದರು. ಕೇಸ್‌ಗೆ ಸಂಬಂಧಿಸಿ ಕೆಲವು ಸಾಂದರ್ಭಿಕ ಪ್ರಶ್ನೆಗಳಿಗೆ ಹೇಳಿಕೆ ಪಡೆದು ಅದನ್ನು ಪೇಪರ್‌ನಲ್ಲಿ ನಮೂದಿಸಿ ಸ್ವ – ಇಚ್ಛಾ ಹೇಳಿಕೆಗೆ ಸಹಿ ಮಾಡುವಂತೆ ಹೇಳಿದ್ದಾರೆ. ಆದರೆ, ಅದಕ್ಕೆ ಸಹಿ ಹಾಕುವುದಿಲ್ಲ ಎಂದ ಎಚ್‌.ಡಿ. ರೇವಣ್ಣ ಹೇಳಿದ್ದಾರೆ.

ಇದನ್ನೂ ಓದಿ: Prajwal Revanna Case: ಪ್ರಜ್ವಲ್‌ ಕೇಸ್‌ನ ಸಂತ್ರಸ್ತೆಯರಿಗಾಗಿ ಆರಂಭಿಸಿದ ಹೆಲ್ಪ್‌ಲೈನ್‌ಗೆ ಬರ್ತಿವೆ ಹಲವು ಕರೆಗಳು

ಅಪಹರಣಕ್ಕೂ ನನಗೂ ಸಂಬಂಧವೇ ಇಲ್ಲ ಎಂದು ನಾನು ಈಗಾಗಲೇ ಹೇಳಿದ್ದೇನೆ. ಆದರೂ ನೀವುಗಳು ಬರೆದುಕೊಂಡಿದ್ದೀರಿ. ನಾನೇ ಮಾಡಿಸಿರುವ ಹಾಗೆ ಬರೆದುಕೊಂಡಿದ್ದೀರಿ. ನಾನು ಯಾವ ಹೇಳಿಕೆಗೂ ಸಹಿ ಹಾಕಲ್ಲ ಎಂದು ರೇವಣ್ಣ ನಿರಾಕರಣೆ ಮಾಡಿದ್ದಾರೆ.

Continue Reading

ಕರ್ನಾಟಕ

ನಾಳೆ ಎರಡನೇ ಹಂತದ ಮತದಾನ; ಮತದಾರರ ಪಟ್ಟಿಯಲ್ಲಿ ನಿಮ್ಮ ಹೆಸರನ್ನು ಮೊಬೈಲ್‌ನಲ್ಲೇ ಚೆಕ್ ಮಾಡಿ

Voter list: ಕರ್ನಾಟಕ ಸೇರಿ ದೇಶದ ಹಲವೆಡೆ ಮಂಗಳವಾರ ಮತದಾನ ನಡೆಯಲಿದ್ದು, ಮತದಾರರಾರೂ ತಮ್ಮ ಹಕ್ಕು ಚಲಾವಣೆಗೆ ಉತ್ಸಾಹಿತರಾಗಿದ್ದಾರೆ. ಯಾವುದಕ್ಕೂ ಮತಗಟ್ಟೆಗೆ ಹೊರಡುವ ಮುನ್ನ ಮತದಾನ ಪಟ್ಟಿಯಲ್ಲಿ ನಮ್ಮ ಹೆಸರು ಇದೆಯೇ ಇಲ್ಲವೇ ಎಂಬುದನ್ನು ಒಮ್ಮೆ ಚೆಕ್ ಮಾಡುವುದು ಉತ್ತಮ. ಮನೆಯಲ್ಲೇ ಕುಳಿತು ಪರಿಶೀಲಿಸುವುದು ಹೇಗೆ? ಇಲ್ಲಿದೆ ಮಾಹಿತಿ.

VISTARANEWS.COM


on

Lok Sabha Election-2024
Koo

ಬೆಂಗಳೂರು: ಲೋಕಸಭಾ ಚುನಾವಣೆಯ (lok sabha election) ಮೂರನೇ ಹಂತದ ಮತದಾನವು ಮಂಗಳವಾರ (ಮೇ 7) ನಡೆಯಲಿದೆ. ಕರ್ನಾಟದಲ್ಲಿ ಎರಡನೇ ಅಥವಾ ಕೊನೆಯ ಹಂತದ ಮತದಾನವೂ ಮಂಗಳವಾರವೇ ನಡೆಯಲಿದೆ. ಹೀಗಾಗಿ ಮತದಾರರ ಪಟ್ಟಿಯಲ್ಲೊಮ್ಮೆ (voter list) ನಮ್ಮ ಹೆಸರು ಇದೆಯೇ ಎಂಬುದನ್ನು ಪರಿಶೀಲಿಸಿಕೊಳ್ಳುವುದು ಉತ್ತಮ. ಇದಕ್ಕಾಗಿ ಮತಗಟ್ಟೆಗೆ (election booth) ಹೋಗಬೇಕಾದ ಅವಶ್ಯಕತೆ ಈಗಿಲ್ಲ. ಸ್ಮಾರ್ಟ್ ಫೋನ್ (smart phone) ಕೈಯಲ್ಲಿ ಇದ್ದರೆ ಸಾಕು ಮನೆಯಲ್ಲೇ ಕುಳಿತು ಮತದಾರರ ಪಟ್ಟಿಯಲ್ಲಿ ನಮ್ಮ ಹೆಸರು ಇದೆಯೇ ಇಲ್ಲವೇ ಎಂಬುದನ್ನು ಚೆಕ್ ಮಾಡಿಕೊಳ್ಳಬಹುದು.

ಚುನಾವಣಾ ಆಯೋಗದ ವೆಬ್‌ಸೈಟ್‌ನಲ್ಲಿ ಅಥವಾ ಮತದಾರರ ಸೇವಾ ಪೋರ್ಟಲ್ ನಲ್ಲಿರುವ ಆನ್ ಲೈನ್ ಮತದಾರರ ಪಟ್ಟಿಯಲ್ಲಿ ಹೆಸರು ಪರಿಶೀಲನೆ ನಡೆಸಿ ಮತಗಟ್ಟೆಯ ಕುರಿತಾದ ಸಂಪೂರ್ಣ ಮಾಹಿತಿ ಪಡೆದುಕೊಳ್ಳಲು ಈಗ ಅವಕಾಶವಿದೆ.

ಹೇಗೆ ನೋಡುವುದು?

ಸ್ಮಾರ್ಟ್ ಫೋನ್ ನಲ್ಲಿ ಚುನಾವಣಾ ಆಯೋಗದ ವೆಬ್ ಸೈಟ್ ನಲ್ಲಿ ಅಥವಾ ಮತದಾರರ ಸೇವಾ ಪೋರ್ಟಲ್ ಅನ್ನು ತೆರೆಯಿರಿ. ಬಳಿಕ ಅಲ್ಲಿ ಕೇಳಿರುವ ಅಗತ್ಯ ಮಾಹಿತಿಗಳನ್ನು ನಮೂದಿಸಿ. ಮುಖ್ಯವಾಗಿ ರಾಜ್ಯ, ಜಿಲ್ಲೆ, ವಿಧಾನಸಭಾ ಕ್ಷೇತ್ರವನ್ನು ಆಯ್ಕೆ ಮಾಡಿದ ಬಳಿಕ ಮತದಾರರ ಪಟ್ಟಿಯಲ್ಲಿ ದಾಖಲಾಗಿರುವಂತೆ ನಿಮ್ಮ ಪೂರ್ಣ ಹೆಸರು ಮತ್ತು ತಂದೆಯ ಹೆಸರನ್ನು ನಮೂದಿಸಬೇಕು. ಬಳಿಕ ಹುಟ್ಟಿದ ದಿನಾಂಕವನ್ನು ಹಾಕಿ ಎಪಿಕ್ (ಎಪಿಐಸಿ) ಸಂಖ್ಯೆಯನ್ನು ಹಾಕಿದ ಬಳಿಕ ಸರ್ಚ್ ಬಟನ್ ಒತ್ತಿದರೆ ಫಲಿತಾಂಶ ಪುಟ ತೆರೆದುಕೊಳ್ಳುತ್ತದೆ.

Lok Sabha Election-2024

ಏನು ಮಾಹಿತಿ ?

ನಿಮ್ಮ ಹೆಸರು ಈಗಾಗಲೇ ಮತದಾರರ ಪಟ್ಟಿಯಲ್ಲಿ ಇದ್ದರೆ ಎಪಿಕ್ ಸಂಖ್ಯೆ, ವಿಳಾಸ ಮತ್ತು ಮತಗಟ್ಟೆಯ ಸಂಪೂರ್ಣ ಮಾಹಿತಿ ಇಲ್ಲಿ ಲಭ್ಯವಾಗುತ್ತದೆ. ಮತಗಟ್ಟೆಯ ಸ್ಥಳವನ್ನು ಮ್ಯಾಪ್ ಮೂಲಕ ಕ್ಲಿಕ್ ಮಾಡಿ ನೋಡಲು ಅವಕಾಶವೂ ಇಲ್ಲಿ ಇದೆ.

ಎಸ್ ಎಂಎಸ್ ಮೂಲಕ ಪರಿಶೀಲಿಸಿ

ವೆಬ್ ಪೋರ್ಟಲ್ ಮಾತ್ರವಲ್ಲ ಈ ಎಲ್ಲ ಮಾಹಿತಿಯನ್ನು ಎಸ್ ಎಂಎಸ್ ಮೂಲಕವೂ ಪರಿಶೀಲನೆ ನಡೆಸಬಹುದು.
ಇದಕ್ಕಾಗಿ ಮೊಬೈಲ್ ಫೋನ್ ನಿಂದ 59191 ಕ್ಕೆ ಎಪಿಕ್ ಸಂಖ್ಯೆಯನ್ನು ಹೊಂದಿರುವ ಎಸ್ ಎಂಎಸ್ ಕಳುಹಿಸಿ ಅಥವಾ ಮತದಾರರ ಸಹಾಯವಾಣಿ 1800-111-950ಕ್ಕೆ ಕರೆ ಮಾಡಿ ಕೂಡ ಮಾಹಿತಿ ತಿಳಿದುಕೊಳ್ಳಬಹುದು.

ಯಾವಾಗ ಕೊನೆ ದಿನ?

ಮತದಾರರ ಪಟ್ಟಿಯಲ್ಲಿ ಹೆಸರು ಪರಿಶೀಲನೆಗೆ ಮತದಾನದ ಹಿಂದಿನ ದಿನ ಕೊನೆಯ ದಿನವಾಗಿದೆ. ಒಂದು ವೇಳೆ ಹೆಸರು ಇಲ್ಲದೇ ಇದ್ದರೆ ಹೊಸ ಮತದಾರರ ನೋಂದಣಿಗೆ ಅರ್ಜಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ಚುನಾವಣಾ ಆಯೋಗದ ವೆಬ್ ಸೈಟ್ ಅಥವಾ ಮತದಾರರ ಸೇವಾ ಪೋರ್ಟಲ್ ಗೆ ಭೇಟಿ ನೀಡಬಹುದು.

ಇದನ್ನೂ ಓದಿ: Lok Sabha Election 2024 : ಮತದಾನದ ಹಬ್ಬದಲ್ಲೂ ಲೂಟಿಗೆ ಇಳಿದ ಖಾಸಗಿ ಬಸ್‌! ವೋಟ್‌ ಹಾಕಲು ಬಸ್‌ ಏರುವವರಿಗೆ ಟಿಕೆಟ್ ದುಬಾರಿ!‌

Continue Reading

ಕ್ರೈಂ

Prajwal Revanna Case: ಕೆ.ಆರ್.‌ ನಗರ ಸಂತ್ರಸ್ತೆ ಕಿಡ್ನ್ಯಾಪ್‌ ಕೇಸ್‌ನ 2ನೇ ಆರೋಪಿ SIT ಕಸ್ಟಡಿಗೆ; ರೇವಣ್ಣಗೆ ಸಂಕಷ್ಟ?

Prajwal Revanna Case: ಕೆ.ಆರ್.‌ ನಗರದ ಸಂತ್ರಸ್ತೆ ಅಪಹರಣ ಪ್ರಕರಣದಲ್ಲಿ ಹೆಚ್ಚಿನ‌ ವಿಚಾರಣೆ ಬೇಕಿದ್ದ ಹಿನ್ನೆಲೆಯಲ್ಲಿ ಆರೋಪಿಯನ್ನು 10 ದಿನ ಕಸ್ಟಡಿಗೆ ನೀಡುವಂತೆ ಎಸ್.ಐ.ಟಿ ಪರ ವಕೀಲರು ಮನವಿ ಮಾಡಿದ್ದರು. ಆದರೆ, ಆರೋಪಿ ಪರ ವಕೀಲರು ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದರು. ಎರಡೂ ಕಡೆಯ ವಾದವನ್ನು ಆಲಿಸಿದ ನ್ಯಾಯಾಧೀಶರಾದ ರವೀಂದ್ರ ಕುಮಾರ್ ಬಿ. ಕಟ್ಟಿಮನಿ, ಸತೀಶ್‌ ಬಾಬಣ್ಣನನ್ನು ಎಂಟು ದಿನದ ವರೆಗೆ ಎಸ್‌ಐಟಿ ಕಸ್ಟಡಿಗೆ ನೀಡಿ ಆದೇಶವನ್ನು ಹೊರಡಿಸಿದ್ದಾರೆ.

VISTARANEWS.COM


on

Prajwal Revanna Case 2nd accused in KR Nagar victim abduction case sent to SIT custody Trouble for Revanna
Koo

ಬೆಂಗಳೂರು: ಹಾಸನ ಸಂಸದ (Hassan MP) ಪ್ರಜ್ವಲ್ ರೇವಣ್ಣ (Prajwal Revanna Case) ಅವರದ್ದು ಎನ್ನಲಾದ ಅಶ್ಲೀಲ ವಿಡಿಯೊ ಪೆನ್‌ಡ್ರೈವ್‌ ಪ್ರಕರಣಕ್ಕೆ (Hassan Pen Drive Case) ಸಂಬಂಧಪಟ್ಟಂತೆ ಎಚ್.ಡಿ. ರೇವಣ್ಣ ವಿರುದ್ಧದ ಅಪಹರಣ ಕೇಸ್‌ನಲ್ಲಿ 2ನೇ ಆರೋಪಿ ಸತೀಶ್ ಬಾಬಣ್ಣನನ್ನು ಎಂಟು ದಿನ ಎಸ್‌ಐಟಿ ಕಸ್ಟಡಿಗೆ ನೀಡಿ ಸಿಟಿ ಸಿವಿಲ್ ಕೋರ್ಟ್‌ನ 17ನೇ ಎಸಿಎಂಎಂ ನ್ಯಾಯಾಲಯವು ಆದೇಶಿಸಿದೆ.

ಪ್ರಜ್ವಲ್‌ ರೇವಣ್ಣ ವಿಡಿಯೊ ಕೇಸ್‌ನಲ್ಲಿ ಸಂತ್ರಸ್ತೆಯಾಗಿರುವ ಮೈಸೂರಿನ ಕೆ.ಆರ್.‌ ನಗರದ ಮಹಿಳೆಯ ಅಪಹರಣ ಕೇಸ್‌ಗೆ ಸಂಬಂಧಿ ಎಸ್‌ಐಟಿ ಈಗ ಎರಡನೇ ಆರೋಪಿಯನ್ನು ಕಸ್ಟಡಿಗೆ ಪಡೆದುಕೊಂಡಿದ್ದಾರೆ. ಈ ಪ್ರಕರಣದಲ್ಲಿ ಎರಡನೇ ಆರೋಪಿಯಾಗಿ ನ್ಯಾಯಾಂಗ ಬಂಧನದಲ್ಲಿರುವ ಸತೀಶ್ ಬಾಬಣ್ಣ ಎಂಬಾತನನ್ನು ವಶಕ್ಕೆ ಪಡೆದು ಹೆಚ್ಚಿನ ವಿಚಾರಣೆಯನ್ನು ನಡೆಸಲು ಸಿಟಿ ಸಿವಿಲ್ ಕೋರ್ಟ್‌ನ 17ನೇ ಎಸಿಎಂಎಂ ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು.

ಈ ಪ್ರಕರಣದಲ್ಲಿ ಹೆಚ್ಚಿನ‌ ವಿಚಾರಣೆ ಬೇಕಿದ್ದ ಹಿನ್ನೆಲೆಯಲ್ಲಿ ಆರೋಪಿಯನ್ನು 10 ದಿನ ಕಸ್ಟಡಿಗೆ ನೀಡುವಂತೆ ಎಸ್.ಐ.ಟಿ ಪರ ವಕೀಲರು ಮನವಿ ಮಾಡಿದ್ದರು. ಆದರೆ, ಆರೋಪಿ ಪರ ವಕೀಲರು ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದರು. ಎರಡೂ ಕಡೆಯ ವಾದವನ್ನು ಆಲಿಸಿದ ನ್ಯಾಯಾಧೀಶರಾದ ರವೀಂದ್ರ ಕುಮಾರ್ ಬಿ. ಕಟ್ಟಿಮನಿ, ಸತೀಶ್‌ ಬಾಬಣ್ಣನನ್ನು ಎಂಟು ದಿನದ ವರೆಗೆ ಎಸ್‌ಐಟಿ ಕಸ್ಟಡಿಗೆ ನೀಡಿ ಆದೇಶವನ್ನು ಹೊರಡಿಸಿದ್ದಾರೆ.

ಈಗ ಸತೀಶ್‌ ಬಾಬಣ್ಣನನ್ನು ಹೆಚ್ಚಿನ ವಿಚಾರಣೆಗೊಳಪಡಿಸಲಿರುವ ಎಸ್‌ಐಟಿ ಅಧಿಕಾರಿಗಳು, ಸಂತ್ರಸ್ತ ಮಹಿಳೆ ಅಪಹರಣದ ಹಿಂದೆ ಯಾರಿದ್ದಾರೆ? ಯಾರು ಸೂಚನೆ ನೀಡಿದ್ದಾರೆ? ಎಚ್.ಡಿ. ರೇವಣ್ಣ ಸೂಚನೆ ಕೊಟ್ಟಿದ್ದಾರಾ? ಅವರ ಪಾತ್ರವೇನು ಎಂಬ ಬಗ್ಗೆ ಪ್ರಶ್ನೆ ಕೇಳಲಿದ್ದಾರೆ. ಎಲ್ಲಿಯಾದರೂ ವಿರುದ್ಧವಾಗಿ ಹೇಳಿಕೆ ನೀಡಿದರೆ ರೇವಣ್ಣ ಅವರಿಗೆ ಸಂಕಷ್ಟ ಎದುರಾಗಲಿದೆ.

ಏನಿದು ಅಪಹರಣ ಕೇಸ್‌?

ಪ್ರಜ್ವಲ್ ರೇವಣ್ಣ ಅವರಿಂದ ನನ್ನ ತಾಯಿ ಲೈಂಗಿಕ ದೌರ್ಜನ್ಯಕ್ಕೆ ಒಳಪಟ್ಟಿದ್ದರು.‌ ಈ ಸಂಬಂಧ ಫೋಟೊಗಳು ಬಹಿರಂಗ ಆಗಿದ್ದವು. ಬಳಿಕ ನನ್ನ ತಾಯಿ ನಾಪತ್ತೆ ಆಗಿದ್ದಾರೆ. ಎ1 ಶಾಸಕ ಎಚ್.ಡಿ. ರೇವಣ್ಣ ಹಾಗೂ ಎ2 ಸತೀಶ್‌ ಬಾಬು ಅಪಹರಣ ಮಾಡಿಸಿದ್ದಾರೆ ಎಂದು ಸಂತ್ರಸ್ತೆಯ ಪುತ್ರ ದೂರು ನೀಡಿದ್ದರು. ಪ್ರಜ್ವಲ್‌ ರೇವಣ್ಣ ಮನೆಗೆಲಸದಾಕೆ ಮೇಲೆ ಬಲವಂತವಾಗಿ ಲೈಂಗಿಕ ದೌರ್ಜನ್ಯ ನಡೆಸಿದ್ದಾರೆ ಎಂಬ ಕೇಸ್‌ ದಾಖಲಾಗಿತ್ತು. ಶಾಸಕ ಎಚ್‌.ಡಿ.ರೇವಣ್ಣ ಸಲಹೆ ಮೇರೆಗೆ ಮಹಿಳೆಯನ್ನು ಸತೀಶ್‌ ಬಾಬು ಅಪಹರಣ ಮಾಡಿದ್ದ ಎಂಬ ಆರೋಪ ಕೇಳಿ ಬಂದಿತ್ತು. ಹೀಗಾಗಿ ರೇವಣ್ಣ ಮನೆ ಕೆಲಸದ ಮಹಿಳೆಯ ಪುತ್ರ ನೀಡಿದ ದೂರಿನ ಮೇರೆಗೆ ಕಿಡ್ನ್ಯಾಪ್‌ ಪ್ರಕರಣ ದಾಖಲಾಗಿತ್ತು. ಈ ಕೇಸ್‌ನಲ್ಲಿ ಸತೀಶ್‌ ಬಾಬುನನ್ನು ಬಂಧಿಸಲಾಗಿದೆ.

ಎಚ್‌.ಡಿ. ರೇವಣ್ಣ ನಿವಾಸದಲ್ಲಿ ಸ್ಥಳ ಮಹಜರು: ವಕೀಲರ ಅಸಮಾಧಾನ

ಎಚ್.ಡಿ. ರೇವಣ್ಣ ನಿವಾಸದಲ್ಲಿ ನಡೆದಿದೆ ಎನ್ನಲಾದ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿ ಬಸವನಗುಡಿಯ ನಿವಾಸದಲ್ಲಿ ಮಹಜರು ಮಾಡಲಾಗಿದೆ.

ಸಿಐಡಿ ಸೈಬರ್‌ಸೆಲ್‌ನಲ್ಲಿ ದಾಖಲಾಗಿದ್ದ ಅತ್ಯಾಚಾರ ಪ್ರಕರಣದ ಸ್ಥಳವನ್ನು ಎಸ್‌ಐಟಿ ಅಧಿಕಾರಿಗಳು ಮಹಜರು ಮಾಡಿದ್ದಾರೆ. ಈಗಾಗಲೇ ನ್ಯಾಯಾಧೀಶರ ಎದುರು ಕಳೆದ ಶುಕ್ರವಾರ (ಮೇ 3) ಸಿಎಆರ್‌ಪಿಸಿ 164 ಅಡಿಯಲ್ಲಿ ಸಂತ್ರಸ್ತ ಮಹಿಳೆ ತಮ್ಮ ಹೇಳಿಕೆಯನ್ನು ದಾಖಲಿಸಿದ್ದರು. ವಿಚಾರಣೆ ವೇಳೆ ತನ್ನನ್ನು ಹಾಸನದ ಎಂಪಿ ಕ್ವಾಟ್ರರ್ಸ್‌ ಮಾತ್ರವಲ್ಲದೆ ಬೆಂಗಳೂರಿನ ನಿವಾಸದಲ್ಲಿ ಸಹ ಅತ್ಯಾಚಾರ ಎಸಗಿದ್ದಾರೆ ಎಂದು ಹೇಳಿದ್ದರು. ಹೀಗಾಗಿ ಅತ್ಯಾಚಾರ ಪ್ರಕರಣದ ಬಗ್ಗೆ ಬೆಂಗಳೂರಿನಲ್ಲಿರುವ ಎಚ್.ಡಿ. ರೇವಣ್ಣ ಅವರ ಬಸವನಗುಡಿ ನಿವಾಸದೆದುರು ಮಹಜರು ಮಾಡಲಾಗುತ್ತಿದೆ.

ಪ್ರಜ್ವಲ್ ರೇವಣ್ಣ ಬೆಡ್‌ರೂಮ್‌ನಲ್ಲಿ ಅಧಿಕಾರಿಗಳಿಗೆ ದೂರುದಾರೆ ಮಾಹಿತಿ ನೀಡಿದ್ದಾರೆ. ಎಲ್ಲೆಲ್ಲಿ? ಏನೇನು ನಡೆದಿತ್ತು ಎಂಬ ಬಗ್ಗೆ ಸಂತ್ರಸ್ತೆಯಿಂದ ನೇರವಾಗಿ ಮಾಹಿತಿ ಪಡೆದು ಹೇಳಿಕೆಯಂತೆ ಮಹಜರು ಪ್ರಕ್ರಿಯೆಯನ್ನು ನಡೆಸಲಾಗಿದೆ.

ನೋಟಿಸ್ ಕೊಟ್ಟು ನಮ್ಮನ್ನು ಮನೆಯ ಒಳಗೆ ಬಿಟ್ಟಿಲ್ಲ: ವಕೀಲ ಗೋಪಾಲ್

ಎಚ್‌.ಡಿ. ರೇವಣ್ಣ ಪರ ವಕೀಲ ಗೋಪಾಲ್ ಪ್ರತಿಕ್ರಿಯೆ ನೀಡಿ, ಈಗಾಗಲೇ ಹಲವಾರು ವಿಚಾರಗಳು ಎಲ್ಲರಿಗೂ ತಿಳಿದಿದೆ. ನಮ್ಮ‌ ಕಕ್ಷಿದಾರ ಎಚ್.ಡಿ. ರೇವಣ್ಣ ಅವರ ಹೊಳೆನರಸೀಪುರ ಮನೆಯಲ್ಲಿ ಮಹಜರು ನಡೆದಿದೆ. ಎರಡು ಪ್ರಕರಣಗಳಲ್ಲಿ ಮಹಜರು ಪ್ರಕ್ರಿಯೆ ನಡೆಸಲಾಗಿದೆ. ಮಹಜರು ಮಾಡುವ ಸಂದರ್ಭದಲ್ಲಿ ನೋಟಿಸ್ ಕೊಡಬೇಕು. ಮನೆಯಲ್ಲಿ ಯಾರೂ ಇಲ್ಲದ ಸಂದರ್ಭದಲ್ಲಿ‌ ಮಹಜರು ಪ್ರಕ್ರಿಯೆ ಮಾಡಲಾಗಿದೆ. ಭವಾನಿ ರೇವಣ್ಣ ಅವರು ಮಹಜರು ಪ್ರಕ್ರಿಯೆಗೆ ಅನುಮತಿ ನೀಡಿದ್ದಾರೆ. ಹೊಳೆನರಸೀಪುರದಲ್ಲಿ ಮಹಜರು ನಡೆದಾಗ ನೋಟಿಸ್ ನೀಡಿದರು. ನನ್ನ ಕಡೆಯಿಂದ ಅವರಿಗೆ ಸಹಕಾರ ನೀಡಿದ್ದೇನೆ. ಹೊಳೆನರಸೀಪುರ ಮಹಜರು ಸಂದರ್ಭದಲ್ಲಿ 4-5-2024ರಲ್ಲಿ ಬಸವನಗುಡಿ ಮನೆಯಲ್ಲಿ ಮಹಜರು ಮಾಡಲು‌ ಸಹಕಾರ ಕೇಳಿದರು. ಈ ಬಗ್ಗೆ ಎಸ್‌ಐಟಿಯಿಂದ ನೋಟಿಸ್ ನೀಡಲಾಗಿದೆ. ನೋಟಿಸ್ ಕೊಟ್ಟು, ನಮ್ಮನ್ನು ಮನೆಯ ಒಳಗೆ ಬಿಟ್ಟಿಲ್ಲ. ಬಸವನಗುಡಿಯ ಮನೆಯ‌‌ ಮಹಜರು ಸಂದರ್ಭದಲ್ಲಿ ನನಗೆ‌ ಮನೆಯೊಳಗೆ ಅನುಮತಿ ನೀಡಿಲ್ಲ ಎಂದು ಹೇಳಿದರು.

ಪ್ರಜ್ವಲ್‌ ರೇವಣ್ಣ ಕೇಸಲ್ಲಿ ಎಚ್‌ಡಿಡಿ, ಎಚ್‌ಡಿಕೆ ಹೆಸರು ಬಳಸಂಗಿಲ್ಲ; ಕೋರ್ಟ್‌ ತಡೆಯಾಜ್ಞೆ

ಅಶ್ಲೀಲ ವಿಡಿಯೊ ಪೆನ್‌ಡ್ರೈವ್‌ ಪ್ರಕರಣ ಹಾಗೂ ಎಚ್.ಡಿ. ರೇವಣ್ಣ ವಿರುದ್ಧದ ಅಪಹರಣ ಕೇಸ್‌ಗೆ ಸಂಬಂಧಪಟ್ಟಂತೆ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಹಾಗೂ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರ ಹೆಸರನ್ನು ಬಳಸದಂತೆ ತಡೆಯಾಜ್ಞೆ ನೀಡಲಾಗಿದೆ.

ಉಭಯ ನಾಯಕರು ಸೆಷನ್ಸ್ ಕೋರ್ಟ್‌ನಿಂದ ತಡೆಯಾಜ್ಞೆ ತಂದಿದ್ದಾರೆ. ಪ್ರಕರಣಗಳ ಬಗ್ಗೆ ಸುದ್ದಿ ಪ್ರಸಾರ‌ ಮಾಡುವಾಗ ತಮ್ಮ ಹೆಸರುಗಳನ್ನು ಬಳಸದಂತೆ ತಡೆಯಾಜ್ಞೆಯನ್ನು ತಂದಿದ್ದಾರೆ. ಇಷ್ಟು ದಿನ ಪ್ರಕರಣದ ಸಂದರ್ಭದಲ್ಲಿ ದೇವೇಗೌಡರ ಕುಟುಂಬದ ಹೆಸರುಗಳನ್ನು ಕೆಲವರು ಪ್ರಸ್ತಾಪ ಮಾಡುತ್ತಿದ್ದರು. ಇದರಿಂದ ಅವರ ಕುಟುಂಬಕ್ಕೆ ತೀವ್ರ ಮುಜುಗರವಾಗಿತ್ತು. ಅಲ್ಲದೆ, ಎಚ್‌.ಡಿ. ಕುಮಾರಸ್ವಾಮಿ ಅವರು ನೇರವಾಗಿಯೇ ಇದರ ಬಗ್ಗೆ ಕಿಡಿಕಾರಿದ್ದರು.

ಅಪಹರಣ ಕೇಸ್‌ನಲ್ಲಿ ಸ್ವ-ಇಚ್ಚಾ ಹೇಳಿಕೆಗೆ ಸಹಿ ಹಾಕಲು NO ಎಂದ ಎಚ್‌.ಡಿ. ರೇವಣ್ಣ!

ಎಸ್‌ಐಟಿ ಅಧಿಕಾರಿಗಳು ತನಿಖೆಯನ್ನು ತೀವ್ರಗೊಳಿಸಿದ್ದು, ಸ್ವ-ಇಚ್ಛಾ ಹೇಳಿಕೆಯನ್ನು ದಾಖಲು ಮಾಡಿಕೊಳ್ಳಲು ಮುಂದಾಗಿದ್ದಾರೆ. ಆದರೆ, ಈ ಸ್ವ-ಇಚ್ಛಾ ಹೇಳಿಕೆಗೆ ಸಹಿ ಹಾಕಲು ಎಚ್.ಡಿ. ರೇವಣ್ಣ (HD Revanna) ನಿರಾಕರಿಸಿದ್ದಾರೆ. ನಿಮಗೆ ಬೇಕಾದಂತೆ ಬರೆದುಕೊಂಡಿದ್ದೀರಾ ಎಂದು ಆಕ್ರೋಶವನ್ನು ಹೊರಹಾಕಿದ್ದಾರೆ ಎಂದು ತಿಳಿದುಬಂದಿದೆ.

ಎಚ್.ಡಿ. ರೇವಣ್ಣ ಅವರನ್ನು ಐದು ದಿನಗಳ ಕಸ್ಟಡಿಗೆ ನೀಡಿ ಭಾನುವಾರ 17ನೇ ಎಸಿಎಂಎಂ ಕೋರ್ಟ್ ನ್ಯಾಯಾಧೀಶರು ಆದೇಶ ನೀಡಿದ್ದರು. ಈ ಹಿನ್ನೆಲೆಯಲ್ಲಿ ಎಸ್‌ಐಟಿ ಅಧಿಕಾರಿಗಳು ರೇವಣ್ಣ ಅವರ ವಿಚಾರಣೆಯನ್ನು ಮುಂದುವರಿಸಿದ್ದಾರೆ. ಅಪಹರಣ ಕೇಸ್‌ನಲ್ಲಿ ರೇವಣ್ಣ ಅವರಿಂದ ಸ್ವ-ಇಚ್ಛಾ ಹೇಳಿಕೆ ದಾಖಲು ಮಾಡಿಕೊಳ್ಳಲು ಮುಂದಾಗಲಾಗಿದೆ. ಈ ಸಂಬಂಧ ರೇವಣ್ಣ ಅವರಿಗೆ ಭಾನುವಾರವೇ ಒಂದಷ್ಟು ಪ್ರಶ್ನೆಗಳನ್ನು ಕೇಳಿ ಉತ್ತರ ಪಡೆಯುವ ಪ್ರಯತ್ನವನ್ನು ಅಧಿಕಾರಿಗಳೂ ಮಾಡಿದ್ದರು.

ಅಪಹರಣ ಕೇಸ್‌ ಬಗ್ಗೆ ಎಚ್.ಡಿ. ರೇವಣ್ಣ ಅವರಿಗೆ ಹಲವು ಪ್ರಶ್ನೆಗಳನ್ನು ಕೇಳಲಾಗಿತ್ತು. ಸತೀಶ್ ಬಾಬು ಪರಿಚಯವಿದ್ದಾರಾ? ಅವರ ಮೂಲಕ ಕಿಡ್ನ್ಯಾಪ್ ಮಾಡಿಸಲು ನೀವೇ ತಿಳಿಸಿದ್ದಿರಾ? ಅಪಹರಣ ಮಾಡಿದ್ದರ ಹಿಂದಿನ ಉದ್ದೇಶ ಏನು ಎಂಬಿತ್ಯಾದಿ ವಿಷಯಗಳ ಬಗ್ಗೆ ಪ್ರಶ್ನೆ ಮಾಡಿ ಉತ್ತರವನ್ನು ಪಡೆದುಕೊಂಡಿದ್ದರು. ಕೇಸ್‌ಗೆ ಸಂಬಂಧಿಸಿ ಕೆಲವು ಸಾಂದರ್ಭಿಕ ಪ್ರಶ್ನೆಗಳಿಗೆ ಹೇಳಿಕೆ ಪಡೆದು ಅದನ್ನು ಪೇಪರ್‌ನಲ್ಲಿ ನಮೂದಿಸಿ ಸ್ವ ಇಚ್ಛಾ ಹೇಳಿಕೆಗೆ ಸಹಿ ಮಾಡುವಂತೆ ಹೇಳಿದ್ದಾರೆ. ಆದರೆ, ಅದಕ್ಕೆ ಸಹಿ ಹಾಕುವುದಿಲ್ಲ ಎಂದ ಎಚ್‌.ಡಿ. ರೇವಣ್ಣ ಹೇಳಿದ್ದಾರೆ.

ಇದನ್ನೂ ಓದಿ: Prajwal Revanna Case: ಪ್ರಜ್ವಲ್‌ ಕೇಸ್‌ನ ಸಂತ್ರಸ್ತೆಯರಿಗಾಗಿ ಆರಂಭಿಸಿದ ಹೆಲ್ಪ್‌ಲೈನ್‌ಗೆ ಬರ್ತಿವೆ ಹಲವು ಕರೆಗಳು

ಅಪರಹಣಕ್ಕೂ ನನಗೂ ಸಂಬಂಧವೇ ಇಲ್ಲ ಎಂದು ನಾನು ಈಗಾಗಲೇ ಹೇಳಿದ್ದೇನೆ. ಆದರೂ ನೀವುಗಳು ಬರೆದುಕೊಂಡಿದ್ದೀರಿ. ನಾನೇ ಮಾಡಿಸಿರುವ ಹಾಗೆ ಬರೆದುಕೊಂಡಿದ್ದೀರಿ. ನಾನು ಯಾವ ಹೇಳಿಕೆಗೂ ಸಹಿ ಹಾಕಲ್ಲ ಎಂದು ರೇವಣ್ಣ ನಿರಾಕರಣೆ ಮಾಡಿದ್ದಾರೆ.

Continue Reading

ಪ್ರಮುಖ ಸುದ್ದಿ

CM Siddaramaiah: ಚುನಾವಣೆಯಲ್ಲಿ ʼಕೈʼ ಬಲಪಡಿಸಿ; ನಾಡಿನ ಮಹಿಳೆಯರಿಗೆ ಸಿಎಂ ಬಹಿರಂಗ ಪತ್ರ

CM Siddaramaiah: ಮಹಿಳೆಯರ ಸಬಲೀಕರಣ ಕಾಂಗ್ರೆಸ್‌ ಸರ್ಕಾರದ ಉದ್ಧೇಶವಾಗಿದ್ದು, ಮಹಿಳೆಯರು ತಮ್ಮ ಕೈ ಬಲಪಡಿಸುವವರ ಕೈ ಹಿಡಿಯಬೇಕು ಎಂದು ಸಿಎಂ ಸಿದ್ದರಾಮಯ್ಯ ಕೋರಿದ್ದಾರೆ.

VISTARANEWS.COM


on

CM Siddaramaiah
Koo

ಬೆಂಗಳೂರು: ಕರ್ನಾಟಕದಲ್ಲಿ ಮೇ 7ರಂದು ಎರಡನೇ ಹಂತದ ಲೋಕಸಭಾ ಚುನಾವಣೆಯ ಮತದಾನ ನಡೆಯುವ ಹಿನ್ನೆಲೆಯಲ್ಲಿ ರಾಜ್ಯದ ಮಹಿಳೆಯರಿಗೆ ಸಿಎಂ ಸಿದ್ದರಾಮಯ್ಯ (CM Siddaramaiah) ಅವರು ಬಹಿರಂಗ ಪತ್ರ ಪರೆದಿದ್ದಾರೆ. ಕಾಂಗ್ರೆಸ್‌ ಸರ್ಕಾರ ಅಧಿಕಾರಕ್ಕೆ ಬಂದ ಕೂಡಲೇ ತಾವು ನೀಡಿದ್ದ ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡುವ ಮೂಲಕ, ನುಡಿದಂತೆ ನಡೆದಿದ್ದೇವೆ ಎಂದು ಹೇಳಿರುವ ಅವರು, ಈ ಬಾರಿ ಚುನಾವಣೆಯಲ್ಲಿ ಕಾಂಗ್ರೆಸ್‌ ಬೆಂಬಲಿಸುವಂತೆ ಮಹಿಳೆಯರಲ್ಲಿ ಕೋರಿದ್ದಾರೆ.

ಮಹಿಳೆಯರ ಸಬಲೀಕರಣದ ಕೆಲಸ ದೀರ್ಘಕಾಲೀನವಾದುದು. ಈ ಪ್ರಯತ್ನ ಮುಂದುವರಿದುಕೊಂಡು ಹೋಗಬೇಕಾದರೆ ಮಹಿಳೆಯರು ತಮ್ಮ ಕೈ ಬಲಪಡಿಸುವವರ ಕೈ ಹಿಡಿಯಬೇಕು ಎಂದು ಸಿಎಂ ಕೋರಿದ್ದಾರೆ. ಸಿದ್ದರಾಮಯ್ಯ ಅವರು ನಾಡಿನ ಮಹಿಳೆಯರಿಗೆ ಬರೆದಿರುವ ಪತ್ರದ ಯಥಾವತ್‌ ಮಾಹಿತಿ ಇಲ್ಲಿದೆ.

ನನ್ನ ಪ್ರೀತಿಯ ತಾಯಂದಿರೇ ಮತ್ತು ಅಕ್ಕ-ತಂಗಿಯರೇ,

ಹದಿನೆಂಟನೇ ಲೋಕಸಭಾ ಚುನಾವಣೆಯಲ್ಲಿ ನಿರ್ಧಾರವಾಗಲಿರುವುದು ರಾಜಕೀಯ ಪಕ್ಷಗಳ ಸೋಲು-ಗೆಲುವುಗಳು ಮಾತ್ರ ಅಲ್ಲ, ಈ ಚುನಾವಣೆ ಮಹಿಳೆಯರ ಪರವಾದ ಸರ್ಕಾರದ ಕಾರ್ಯಕ್ರಮಗಳ ಸೋಲು-ಗೆಲುವನ್ನು ಕೂಡಾ ನಿರ್ಧರಿಸಲಿದೆ. ‘‘ಮಹಿಳೆಯರು ಸ್ವಾತಂತ್ರ್ಯಕ್ಕೆ ಅರ್ಹರಲ್ಲ’’ ಎಂದು ಖಡಾಖಂಡಿತವಾಗಿ ಸಾರಿದ ಮನುಶಾಸ್ತ್ರವನ್ನು ನಂಬಿರುವ ಭಾರತೀಯ ಜನತಾ ಪಕ್ಷ ಮತ್ತು ಮಹಿಳೆಯರಿಗೆ ಸಮಾನ ಅವಕಾಶ ಮತ್ತು ಸ್ಥಾನಮಾನ ನೀಡಬೇಕೆಂದು ಸಾರಿದ ಸಂವಿಧಾನಕ್ಕೆ ಬದ್ಧವಾಗಿರುವ ಕಾಂಗ್ರೆಸ್ ಪಕ್ಷಗಳ ನಡುವೆ ಇಂದಿನ ಮಹಿಳೆಯರು ಆಯ್ಕೆ ಮಾಡಬೇಕಾಗಿದೆ.

ಭಾರತೀಯ ಜನತಾ ಪಕ್ಷ ಮತ್ತು ಅದರ ಮಾತೃಸಂಸ್ಥೆಯಾದ ಆರ್‌ಎಸ್‌ಎಸ್‌ನ ಸಿದ್ಧಾಂತ ಮತ್ತು ನಡವಳಿಕೆ ಸ್ಪಷ್ಟವಾಗಿ ಮಹಿಳಾ ವಿರೋಧಿಯಾದುದು. ಗುಜರಾತ್‌ನಿಂದ ಮಣಿಪುರದವರೆಗೆ ಇದಕ್ಕೆ ನಿದರ್ಶನಗಳನ್ನು ಕಾಣಬಹುದು. ಕರ್ನಾಟಕದಲ್ಲಿ ಸ್ತ್ರೀಪೀಡಕರ ಜತೆಗೆ ಬಿಜೆಪಿ ಕೈಜೋಡಿಸಿರುವುದು ಇತ್ತೀಚಿನ ಉದಾಹರಣೆ. ಕಾಯಾ ವಾಚಾ ಮನಸಾ ಬಿಜೆಪಿ ಮಹಿಳಾ ವಿರೋಧಿ ಪಕ್ಷ.

ನಮ್ಮ ಸರ್ಕಾರ ‘ʼಗೃಹಲಕ್ಷ್ಮಿ’ʼ ಮತ್ತು ‘ʼಶಕ್ತಿʼ ಯೋಜನೆಗಳನ್ನು ಶುರುಮಾಡಿದ ದಿನದಿಂದಲೂ ಬಿಜೆಪಿ ನಾಯಕರು ಇದರ ವಿರುದ್ಧ ಅಪಪ್ರಚಾರದ ಆಂದೋಲನವನ್ನು ಪ್ರಾರಂಭಿಸಿದ್ದಾರೆ. ಗ್ಯಾರಂಟಿ ಯೋಜನೆಗಳಿಂದ ಸರ್ಕಾರದ ಖಜಾನೆ ಖಾಲಿಯಾಗುತ್ತಿದೆ ಎಂದು ಕೆಲವರು ಆರೋಪಿಸಿದರೆ, ಇನ್ನು ಕೆಲವರು ಇನ್ನೂ ಮುಂದಕ್ಕೆ ಹೋಗಿ ಈ ರೀತಿಯ ನೆರವು ನೀಡಿದರೆ ಹೆಣ್ಣುಮಕ್ಕಳು ಮನೆಬಿಟ್ಟು ಹಾದಿ ತಪ್ಪುತ್ತಾರೆ ಎಂದು ತೀರಾ ಕ್ಷುಲ್ಲಕತನದ ಆರೋಪ ಮಾಡಿದ್ದಾರೆ.

ಬಿಜೆಪಿ ನಾಯಕರ ವಿರೋಧಕ್ಕೆ ಮುಖ್ಯ ಕಾರಣ ಮಹಿಳೆಯರ ಸಬಲೀಕರಣವಾಗಬಾರದೆಂಬ ದುಷ್ಟ ಉದ್ದೇಶ. ಮಹಿಳಾ ಸಬಲೀಕರಣವನ್ನು ಕಾಂಗ್ರೆಸ್ ಪಕ್ಷ ಎಂದೂ ರಾಜಕೀಯ ಕಾರ್ಯಕ್ರಮವಾಗಿ ನೋಡಿಲ್ಲ, ಅದು ನಮ್ಮ ಪಾಲಿಗೆ ಸಾಮಾಜಿಕ ಜವಾಬ್ದಾರಿ. ನಮ್ಮ ಪಕ್ಷ ಮತ್ತು ಸರ್ಕಾರ ಮಹಿಳಾ ಪರವಾಗಿ ನಿಂತಿರುವುದಕ್ಕೆ 2013-18ರ ಅವಧಿಯ ನಮ್ಮ ಹಳೆಯ ಸರ್ಕಾರ ಮತ್ತು ಕಳೆದ ಹತ್ತು ತಿಂಗಳ ಅವಧಿಯ ನಮ್ಮ ಹೊಸ ಸರ್ಕಾರದ ಸಾಧನೆಗಳು ಸಾಕ್ಷಿ.

ಐದು ವರ್ಷಗಳ ನಮ್ಮ ಹಿಂದಿನ ಸರ್ಕಾರದ ಅವಧಿಯಲ್ಲಿ ಮಹಿಳೆಯರ ಸುರಕ್ಷತೆ ಮತ್ತು ಸಬಲೀಕರಣಕ್ಕೆ ಆದ್ಯತೆ ನೀಡಿ ಹಲವಾರು ಯೋಜನೆಗಳನ್ನು ಜಾರಿಗೊಳಿಸಿದ್ದೆವು. ಸ್ನಾತಕೋತ್ತರ ಪದವಿವರೆಗೆ ಹೆಣ್ಣು ಮಕ್ಕಳಿಗೆ ಉಚಿತ ಶಿಕ್ಷಣ, ಸ್ತ್ರೀ ಶಕ್ತಿ ಸಂಘಗಳ ಆವರ್ತ ನಿಧಿ 5000 ರೂ.ಗಳಿಂದ 25 ಸಾವಿರಕ್ಕೆ ಏರಿಕೆ, ಗರ್ಭಿಣಿ ಮತ್ತು ಬಾಣಂತಿಯರಿಗೆ ಪೌಷ್ಟಿಕ ಆಹಾರ ನೀಡುವ ಮಾತೃಪೂರ್ಣ, ತಾಯಿ ಮತ್ತು ಮಗುವಿಗಾಗಿಯೇ 20 ವಿಶೇಷ ಆಸ್ಪತ್ರೆಗಳ ಪ್ರಾರಂಭ, ಮಹಿಳಾ ಉದ್ಯಮಿಗಳಿಗೆ ಆರು ಪ್ರತ್ಯೇಕ ಕೈಗಾರಿಕಾ ಪಾರ್ಕ್… ಹೀಗೆ ಮಹಿಳೆಯರ ಹಿತವನ್ನೇ ಗುರಿಯಾಗಿಟ್ಟುಕೊಂಡು ಜಾರಿಗೊಳಿಸಿರುವ ಯೋಜನೆಗಳ ಫಲವನ್ನು ನೀವು ಪಡೆದಿದ್ದೀರಿ.

ನಮ್ಮ ಈಗಿನ ಸರ್ಕಾರದಲ್ಲಿ ಗ್ಯಾರಂಟಿ ಯೋಜನೆಗಳು ಸೇರಿದಂತೆ ಒಟ್ಟು ಯೋಜನೆಗಳಲ್ಲಿ ಮಹಿಳೆಯರ ಅಭಿವೃದ್ದಿಗೆ ಆದ್ಯತೆ ನೀಡಿದ್ದೇವೆ. ನಮ್ಮ ಗ್ಯಾರಂಟಿ ಯೋಜನೆಗಳಲ್ಲಿ ಒಂದಾಗಿರುವ ಗೃಹಲಕ್ಷ್ಮಿ ಯೋಜನೆಯಡಿ ರಾಜ್ಯದ 1.21 ಕೋಟಿ ಮನೆ ಯಜಮಾನಿಗೆ ತಿಂಗಳಿಗೆ ರೂ.2000 ಜಮೆ ಆಗುತ್ತಿದೆ. ಶಕ್ತಿ ಯೋಜನೆಯಡಿ ಇಲ್ಲಿಯ ವರೆಗೆ 201 ಕೋಟಿಗೂ ಅಧಿಕ ಬಾರಿ ಮಹಿಳೆಯರು ಉಚಿತವಾಗಿ ಬಸ್ ಪ್ರಯಾಣ ಮಾಡಿದ್ದಾರೆ. ಗ್ರಾಮೀಣ ಮಹಿಳೆಯರ ಮಕ್ಕಳ ಪಾಲನೆ ಮತ್ತು ಪೋಷಣೆಗೆ ಅನುಕೂಲವಾಗಲಿ ಎಂಬ ಉದ್ದೇಶದೊಂದಿಗೆ ರಾಜ್ಯದಲ್ಲಿ 4,000 ಕೂಸಿನ ಮನೆಗಳ ಸ್ಥಾಪಿಸಿದ್ದೇವೆ, ಶುಚಿ ಯೋಜನೆಯಡಿ 19,27,355 ಹೆಣ್ಣು ಮಕ್ಕಳಿಗೆ ಸ್ಯಾನಿಟರಿ ಪ್ಯಾಡ್ ನೀಡಿದ್ದೇವೆ. ಮಹಿಳಾ ಉದ್ದೇಶಿತ ಕಾರ್ಯಕ್ರಮಗಳಿಗೆ ಪ್ರಸಕ್ತ ಸಾಲಿನ ಬಜೆಟ್‌ನಲ್ಲಿ ರೂ.86,423 ಕೋಟಿ ಅನುದಾನ ಒದಗಿಸಲಾಗಿದೆ.

ಕೇಂದ್ರದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದರೆ ಆರ್ಥಿಕವಾಗಿ ಹಿಂದುಳಿದಿರುವ ಕುಟುಂಬಗಳ ಯಜಮಾನಿಗೆ ಪ್ರತಿವರ್ಷ ಒಂದು ಲಕ್ಷ ರೂಪಾಯಿ ನೆರವು ನೀಡುವ ಮಹಾಲಕ್ಷ್ಮಿ ಯೋಜನೆಯನ್ನು ಪ್ರಣಾಳಿಕೆಯಲ್ಲಿ ಘೋಷಿಸಿದ್ದೇವೆ. ಇದರ ಜೊತೆಯಲ್ಲಿ ದೇಶದ ಎಲ್ಲ ಸರ್ಕಾರಿ ಉದ್ಯೋಗಗಳಲ್ಲಿ ಮಹಿಳೆಯರಿಗೆ ಶೇಕಡಾ 50ರಷ್ಟು ಮೀಸಲಾತಿ, ಆಶಾ, ಅಂಗನವಾಡಿ ಮತ್ತು ಮಧ್ಯಾಹ್ನದ ಬಿಸಿ ಊಟದ ಕಾರ್ಯಕರ್ತೆಯರ ವೇತನ ದ್ವಿಗುಣ, ಪ್ರತಿ ಜಿಲ್ಲಾ ಕೇಂದ್ರದಲ್ಲಿ ಸಾವಿತ್ರಿ ಬಾಯಿ ಪುಲೆ ಅವರ ಹೆಸರಲ್ಲಿ ಕನಿಷ್ಠ ಒಂದು ಮಹಿಳಾ ಹಾಸ್ಟೆಲ್ ಸ್ಥಾಪನೆಯೂ ಸೇರಿದಂತೆ ಪ್ರಣಾಳಿಕೆಯಲ್ಲಿ ನೀಡಿರುವ ಮಹಿಳಾ ಪರ ಯೋಜನೆಗಳನ್ನೆಲ್ಲವನ್ನೂ ಖಂಡಿತ ಜಾರಿಗೆ ತರಲಿದ್ದೇವೆ.

ಇಂದಿರಾಗಾಂಧಿ ಎಂಬ ಉಕ್ಕಿನ ಮಹಿಳೆಯನ್ನು ದೇಶಕ್ಕೆ ಕೊಟ್ಟ ಪಕ್ಷ ಕಾಂಗ್ರೆಸ್. ಅವರು ಪಕ್ಷದ ಅಧ್ಯಕ್ಷೆಯಾಗಿ ಮತ್ತು ದೇಶದ ಪ್ರಧಾನಿಯಾಗಿ ಸುಮಾರು ಮೂರು ದಶಕಗಳ ಕಾಲ ದೇಶಕ್ಕೆ ಮಾಡಿರುವ ಸೇವೆ ಅನುಪಮವಾದುದು. ಪಕ್ಷದ ಸಾರಥ್ಯ ವಹಿಸಿಕೊಂಡ ದಿನದಿಂದ ಸೋನಿಯಾ ಗಾಂಧಿಯವರು ಮಹಿಳೆಯರ ಸಬಲೀಕರಣಕ್ಕಾಗಿ ಪಕ್ಷ ಮತ್ತು ಸರ್ಕಾರದ ಮಟ್ಟದಲ್ಲಿ ಪ್ರಯತ್ನ ನಡೆಸಿದ್ದಾರೆ. ಇವರು ಪ್ರಾರಂಭದಿಂದಲೇ ಮಹಿಳೆಯರ ರಾಜಕೀಯ ಮೀಸಲಾತಿ ಪರ ದನಿ ಎತ್ತುತ್ತಾ ಬಂದಿದ್ದಾರೆ.

ಪಂಚಾಯತ್ ರಾಜ್ ಮತ್ತು ಸ್ಥಳೀಯ ಸಂಸ್ಥೆಗಳಲ್ಲಿ ಮಹಿಳೆಯರಿಗೆ ಶೇಕಡಾ 50ರಷ್ಟು ಮೀಸಲಾತಿಯನ್ನು ಕರ್ನಾಟಕದಲ್ಲಿ ಜಾರಿಗೆ ತಂದಿರುವ ಶ್ರೇಯಸ್ಸು ನಮಗೆ ಸಲ್ಲಬೇಕು. ಈಗಿನ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಲು ನಮ್ಮ ಪಕ್ಷ ಆರು ಮಹಿಳೆಯರಿಗೆ ಅವಕಾಶ ಕಲ್ಪಿಸಿದೆ. ರಾಜ್ಯದ ಮಟ್ಟಿಗೆ ಇದೊಂದು ದಾಖಲೆ. ಪಕ್ಷಭೇದ ಮರೆತು ಇವರನ್ನು ಗೆಲ್ಲಿಸುವ ಮೂಲಕ ಮಹಿಳಾ ಶಕ್ತಿಯ ಪ್ರದರ್ಶನವನ್ನು ಜಗತ್ತಿಗೆ ತೋರಿಸಬೇಕಾಗಿದೆ. ಇದರಿಂದ ಮುಂದಿನ ದಿನಗಳಲ್ಲಿ ಬೇರೆ ರಾಜಕೀಯ ಪಕ್ಷಗಳು ಕೂಡಾ ಮಹಿಳೆಯರಿಗೆ ಅವಕಾಶ ನೀಡಲು ಒತ್ತಡ ಹೇರಿದಂತಾಗುತ್ತದೆ.

ಇದನ್ನೂ ಓದಿ | Lok Sabha Election 2024: ಮತ್ತೆ ಮೋದಿ ಪ್ರಧಾನಿಯಾಗಲು ಸಾಧ್ಯವೇ ಇಲ್ಲ: ಸಿಎಂ ಸಿದ್ದರಾಮಯ್ಯ ಹೀಗೆ ಹೇಳಿದ್ದು ಏಕೆ?

ಸುಮಾರು ಐದು ಸಾವಿರ ವರ್ಷಗಳಿಂದ ನಿರಂತರವಾಗಿ ತಾರತಮ್ಯ, ಶೋಷಣೆ ಮತ್ತು ಅವಕಾಶಗಳ ವಂಚನೆಗೆ ತುತ್ತಾಗಿರುವ ಮಹಿಳೆಯರ ಸಬಲೀಕರಣದ ಕೆಲಸ ದೀರ್ಘಕಾಲೀನವಾದುದು. ಈ ಪ್ರಯತ್ನ ಮುಂದುವರಿದುಕೊಂಡು ಹೋಗಬೇಕಾದರೆ ಮಹಿಳೆಯರು ತಮ್ಮ ಕೈ ಬಲಪಡಿಸುವವರ ಕೈ ಹಿಡಿಯಬೇಕು, ಬೆಂಬಲಿಸಬೇಕು. ಇಂತಹದ್ದೊಂದು ಅವಕಾಶವನ್ನು ಈ ಲೋಕಸಭಾ ಚುನಾವಣೆ ಮಹಿಳೆಯರಿಗೆ ನೀಡಿದೆ. ಈ ಚುನಾವಣೆಯಲ್ಲಿ ನಿಮ್ಮ ಬೆಂಬಲದ ಬಲವನ್ನು ನಮ್ಮ ಪಕ್ಷದ ಅಭ್ಯರ್ಥಿಗಳಿಗೆ ನೀಡಿ ಗೆಲ್ಲಿಸಿ. ನಮ್ಮನ್ನು ಹರಸಿ, ಹಾರೈಸಬೇಕೆಂದು ಕೋರುತ್ತೇನೆ. ಕಾಂಗ್ರೆಸ್ ಪಕ್ಷದ ಗೆಲುವಿನಲ್ಲಿಯೇ ಮಹಿಳೆಯರ ಗೆಲುವಿದೆ ಎಂದು ಪತ್ರದಲ್ಲಿ ಸಿಎಂ ತಿಳಿಸಿದ್ದಾರೆ.

Continue Reading
Advertisement
Press Freedom
Latest42 seconds ago

Press Freedom: ಚೀನಾ ಸೇರಿದಂತೆ ಈ ದೇಶಗಳು ಪತ್ರಕರ್ತರಿಗೆ ಸುರಕ್ಷಿತವಲ್ಲ

Rape victim kidnapping in Prajwal Revanna Case What are the options before HD Revanna
ಕ್ರೈಂ1 min ago

Prajwal Revanna Case: ‌ಅತ್ಯಾಚಾರ ಸಂತ್ರಸ್ತೆ ಅಪಹರಣ ಕೇಸ್; ರೇವಣ್ಣ ಮುಂದಿರುವ ಆಯ್ಕೆಗಳೇನು?

Anand Mahindra
ಪ್ರಮುಖ ಸುದ್ದಿ10 mins ago

Anand Mahindra: ತಂದೆ ಸಾವಿನ ಬಳಿಕ ಕಷ್ಟದಲ್ಲಿದ್ದ ಬಾಲಕನ ಶಿಕ್ಷಣಕ್ಕೆ ಆನಂದ್‌ ಮಹೀಂದ್ರಾ ನೆರವು!

Asha Sobhana
ಕ್ರೀಡೆ20 mins ago

Asha Sobhana : ಭಾರತ ತಂಡಕ್ಕೆ ಪದಾರ್ಪಣೆ ಮಾಡಿದ ಆರ್​ಸಿಬಿ ಆಟಗಾರ್ತಿ

Lok Sabha Election-2024
ಕರ್ನಾಟಕ45 mins ago

ನಾಳೆ ಎರಡನೇ ಹಂತದ ಮತದಾನ; ಮತದಾರರ ಪಟ್ಟಿಯಲ್ಲಿ ನಿಮ್ಮ ಹೆಸರನ್ನು ಮೊಬೈಲ್‌ನಲ್ಲೇ ಚೆಕ್ ಮಾಡಿ

Prajwal Revanna Case 2nd accused in KR Nagar victim abduction case sent to SIT custody Trouble for Revanna
ಕ್ರೈಂ1 hour ago

Prajwal Revanna Case: ಕೆ.ಆರ್.‌ ನಗರ ಸಂತ್ರಸ್ತೆ ಕಿಡ್ನ್ಯಾಪ್‌ ಕೇಸ್‌ನ 2ನೇ ಆರೋಪಿ SIT ಕಸ್ಟಡಿಗೆ; ರೇವಣ್ಣಗೆ ಸಂಕಷ್ಟ?

IPL 2024
ಕ್ರೀಡೆ1 hour ago

IPL 2024 : ಪೃಥ್ವಿ ಶಾ ಗರ್ಲ್​​ ಫ್ರೆಂಡ್​​​ ನಿಧಿಯನ್ನು ತಬ್ಬಿ ಅಭಿನಂದಿಸಿದ ಶಾರುಖ್​ ಖಾನ್​​

CM Siddaramaiah
ಪ್ರಮುಖ ಸುದ್ದಿ2 hours ago

CM Siddaramaiah: ಚುನಾವಣೆಯಲ್ಲಿ ʼಕೈʼ ಬಲಪಡಿಸಿ; ನಾಡಿನ ಮಹಿಳೆಯರಿಗೆ ಸಿಎಂ ಬಹಿರಂಗ ಪತ್ರ

Arvind Kejriwal
ದೇಶ2 hours ago

Arvind Kejriwal: ಖಲಿಸ್ತಾನಿ ಉಗ್ರರಿಂದ ದೇಣಿಗೆ; ಕೇಜ್ರಿವಾಲ್‌ ವಿರುದ್ಧ ಎನ್‌ಐಎ ತನಿಖೆಗೆ ಶಿಫಾರಸು!

karnataka weather forecast
ಮಳೆ2 hours ago

Karnataka Weather : ಬೆಂಗಳೂರು ಸೇರಿ ಹಲವೆಡೆ ಮತ್ತೆ ಅಬ್ಬರಿಸುತ್ತಿರುವ ಮಳೆ; ಇನ್ನೊಂದು ವಾರ ಅಲರ್ಟ್‌

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Prajwal Revanna Case 2nd accused in KR Nagar victim abduction case sent to SIT custody Trouble for Revanna
ಕ್ರೈಂ1 hour ago

Prajwal Revanna Case: ಕೆ.ಆರ್.‌ ನಗರ ಸಂತ್ರಸ್ತೆ ಕಿಡ್ನ್ಯಾಪ್‌ ಕೇಸ್‌ನ 2ನೇ ಆರೋಪಿ SIT ಕಸ್ಟಡಿಗೆ; ರೇವಣ್ಣಗೆ ಸಂಕಷ್ಟ?

karnataka weather forecast
ಮಳೆ2 hours ago

Karnataka Weather : ಬೆಂಗಳೂರು ಸೇರಿ ಹಲವೆಡೆ ಮತ್ತೆ ಅಬ್ಬರಿಸುತ್ತಿರುವ ಮಳೆ; ಇನ್ನೊಂದು ವಾರ ಅಲರ್ಟ್‌

Prajwal Revanna Case DK Shivakumar behind Prajwal video leak Devaraje Gowda demands CBI probe
ಕ್ರೈಂ2 hours ago

Prajwal Revanna Case: ಪ್ರಜ್ವಲ್‌ ವಿಡಿಯೊ ಲೀಕ್‌ ಹಿಂದೆ ಇರೋದು ಡಿಕೆಶಿ; ದಾಖಲೆ ತೋರಿಸಿ, ಸಿಬಿಐಗೆ ಕೇಸ್‌ ವಹಿಸಲು ದೇವರಾಜೇಗೌಡ ಆಗ್ರಹ

Dina bhavishya
ಭವಿಷ್ಯ15 hours ago

Dina Bhavishya : ಈ ರಾಶಿಯವರಿಗೆ ಇಂದು ಹುಡುಕಿಕೊಂಡು ಬರಲಿವೆ ಹೊಸ ಅವಕಾಶಗಳು

Prajwal Revanna Case HD Revanna sent to judicial custody Shift to Parappana Agrahara
ಕ್ರೈಂ1 day ago

Prajwal Revanna Case: ಎಸ್‌ಐಟಿ ಕಸ್ಟಡಿಗೆ ಮಾಜಿ ಸಚಿವ ಎಚ್‌.ಡಿ. ರೇವಣ್ಣ; ಮತ್ತೆ ತೀವ್ರ ವಿಚಾರಣೆ

Prajwal Revanna Case No evidence against me its a conspiracy says HD Revanna
ಕರ್ನಾಟಕ1 day ago

Prajwal Revanna Case: ನನ್ನ ವಿರುದ್ಧ ಯಾವುದೇ ಸಾಕ್ಷಿಗಳಿಲ್ಲ, ಇದೊಂದು ಷಡ್ಯಂತ್ರ: ಎಚ್‌.ಡಿ. ರೇವಣ್ಣ ಫಸ್ಟ್‌ ರಿಯಾಕ್ಷನ್‌!

Narendra Modi
ದೇಶ1 day ago

Narendra Modi: ರಾಮನಗರಿ ಅಯೋಧ್ಯೆಯಲ್ಲಿ ಮೋದಿ ಭರ್ಜರಿ ರೋಡ್‌ ಶೋ; ಲೈವ್‌ ಇಲ್ಲಿ ವೀಕ್ಷಿಸಿ

Dina Bhavishya
ಭವಿಷ್ಯ2 days ago

Dina Bhavishya : ಈ ರಾಶಿಯವರಿಗೆ ಆಪ್ತರಿಂದ ಸಿಗಲಿದೆ ಸಿಹಿ ಸುದ್ದಿ

Dina Bhavishya
ಭವಿಷ್ಯ3 days ago

Dina Bhavishya: ವೀಕೆಂಡ್‌ನಲ್ಲೂ ಬಾಸ್‌ ಕಾಟ ತಪ್ಪಲ್ಲ; ಈ ರಾಶಿಯವರಿಗೆ ಇಡೀ ದಿನ ಕೆಲಸದ ಒತ್ತಡ

Bengaluru Rains
ಮಳೆ3 days ago

Bengaluru Rains:‌ ಅಬ್ಬಾಬ್ಬ ಲಾಟ್ರಿ.. ಕಂಗ್ರಾಜುಲೇಷನ್ ಬ್ರದರ್.. ಬೆಂಗಳೂರು ಮಳೆಗೆ ನೆಟ್ಟಿಗರ ವಿಷ್‌, ಫುಲ್ ಖುಷ್‌

ಟ್ರೆಂಡಿಂಗ್‌