Kempegowda Jayanti: ಕೆಂಪೇಗೌಡರು ಯಾವುದೇ ಜಾತಿಗೆ ಸೀಮಿತರಾದವರಲ್ಲ; ಸಿದ್ದರಾಮಯ್ಯ - Vistara News

ಕರ್ನಾಟಕ

Kempegowda Jayanti: ಕೆಂಪೇಗೌಡರು ಯಾವುದೇ ಜಾತಿಗೆ ಸೀಮಿತರಾದವರಲ್ಲ; ಸಿದ್ದರಾಮಯ್ಯ

Kempegowda Jayanti: ಬೆಂಗಳೂರಿನ ಕಂಠೀರವ ಒಳಾಂಗಣ ಕ್ರೀಡಾಂಗಣದಲ್ಲಿ ಗುರುವಾರ ನಾಡಪ್ರಭು ಕೆಂಪೇಗೌಡ ಪಾರಂಪರಿಕ ತಾಣ ಅಭಿವೃದ್ಧಿ ಪ್ರಾಧಿಕಾರ, ಬಿಬಿಎಂಪಿ ಹಾಗೂ ಕನ್ನಡ ಸಂಸ್ಕೃತಿ ಇಲಾಖೆ ವತಿಯಿಂದ ಆಯೋಜಿಸಲಾಗಿದ್ದ ನಾಡಪ್ರಭು ಕೆಂಪೇಗೌಡರ 515ನೇ ಜಯಂತಿ ಕಾರ್ಯಕ್ರಮವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಅವರು ಕೆಂಪೇಗೌಡರ ಕಾರ್ಯವನ್ನು ಶ್ಲಾಘಿಸಿದರು.

VISTARANEWS.COM


on

Kempegowda Jayanti All people of the society should live secular says CM Siddaramaiah
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಕೆಂಪೇಗೌಡರು (Kempegowda Jayanti) ಯಾವುದೇ ಜಾತಿಗೆ ಸೀಮಿತವಾದವರಲ್ಲ. ಜಾತ್ಯತೀತರಾಗಿ ಅವರು ಬದುಕಿದಂತೆ ಸಮಾಜದ ಎಲ್ಲಾ ಜನರು ಬದುಕಿ ಅವರನ್ನು ಸ್ಮರಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ತಿಳಿಸಿದರು.

ನಾಡಪ್ರಭು ಕೆಂಪೇಗೌಡ ಪಾರಂಪರಿಕ ತಾಣ ಅಭಿವೃದ್ಧಿ ಪ್ರಾಧಿಕಾರ, ಬಿಬಿಎಂಪಿ ಹಾಗೂ ಕನ್ನಡ ಸಂಸ್ಕೃತಿ ಇಲಾಖೆ ಕಂಠೀರವ ಒಳಾಂಗಣ ಕ್ರೀಡಾಂಗಣದಲ್ಲಿ ಗುರುವಾರ ಆಯೋಜಿಸಲಾಗಿದ್ದ ನಾಡಪ್ರಭು ಕೆಂಪೇಗೌಡರ 515 ನೇ ಜಯಂತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಇದನ್ನೂ ಓದಿ: Kempegowda Jayanti: ಕೆಂಪೇಗೌಡರ ಆಡಳಿತವೇ ನಮಗೆ ಪ್ರೇರಣೆ; ಸಿಎಂ ಸಿದ್ದರಾಮಯ್ಯ

ನಾಡಿನ ಜನತೆ ಕೆಂಪೇಗೌಡರ ದಿನಾಚರಣೆಯನ್ನು ಆಚರಿಸಿ ಸಂಭ್ರಮಿಸುವುದಲ್ಲದೇ ಕೆಂಪೇಗೌಡರು ಸಮಾಜಮುಖಿಯಾಗಿ ಕೆಲಸ ಮಾಡಿದಂತೆ ಪ್ರತಿಯೊಬ್ಬರೂ ಸಮಾಜಮುಖಿಯಾಗಿ, ವಿಶ್ವಮಾನವರಾಗಲು ಪ್ರಾಮಾಣಿಕ ಪ್ರಯತ್ನ ಮಾಡಬೇಕೆಂಬ ಕಾರಣದಿಂದ ಕೆಂಪೇಗೌಡರ ಜಯಂತಿ ಆಚರಿಸಲಾಗುತ್ತಿದೆ ಎಂದರು.

ಕೆಂಪೇಗೌಡರು ಜಾತ್ಯತೀತ ವ್ಯಕ್ತಿ

ಕೆಂಪೇಗೌಡರು ನಮ್ಮೆಲ್ಲರಿಗೂ ಪ್ರೇರಣೆಯಾಗಬೇಕು. ಅವರು ಈ ನಾಡಿನ ದೊರೆಯಾಗಿ ಮಾದರಿ ಆಡಳಿತವನ್ನು ನೀಡಿದ್ದರು. ರೈತ ಸಮುದಾಯದಲ್ಲಿ ಜನಿಸಿದ್ದರೂ ಕೂಡ ಅವರ ಆಡಳಿತದ ಅವಧಿಯಲ್ಲಿ ಜಾತಿ, ಧರ್ಮ ಎಂದು ವಿಂಗಡಣೆ ಮಾಡಲಿಲ್ಲ. ಎಲ್ಲಾ ಜನಾಂಗ, ಜಾತಿಯವರನ್ನು ಅಭಿವೃದ್ಧಿಗೊಳಿಸಲು ಪ್ರಯತ್ನಿಸಿದರು. ಅವರ ಆಡಳಿತ ಕಾಲದಲ್ಲಿ ಅವರು ಕೈಗೊಂಡ ಅಭಿವೃದ್ಧಿಯನ್ನು ನೋಡಿದರೆ ಅವರೊಬ್ಬ ಜಾತ್ಯಾತೀತ ವ್ಯಕ್ತಿಯಾಗಿದ್ದರು ಎಂದು ತಿಳಿಯುತ್ತದೆ. ಕೆಂಪೇಗೌಡರು ಕೃಷ್ಣದೇವರಾಯರ ಕಾಲದಲ್ಲಿ ಬೆಂಗಳೂರು ಪ್ರಾಂತ್ಯದ ಆಡಳಿತಗಾರರಾಗಿದ್ದರು ಎಂದರು.

ಎಲ್ಲರಲ್ಲೂ ಆರ್ಥಿಕ ಸಾಮಾಜಿಕ ಶಕ್ತಿಯನ್ನು ತುಂಬಿದರು

ಇತಿಹಾಸವನ್ನು ಮರೆತವರು ಇತಿಹಾಸವನ್ನು ಸೃಷ್ಟಿ ಮಾಡಲಾರರು ಎಂದು ಬಾಬಾ ಸಾಹೇಬ್ ಅಂಬೇಡ್ಕರ್ ಹೇಳಿದ್ದರು. ಇತಿಹಾಸವನ್ನು ಅರಿತು ತಪ್ಪುಗಳನ್ನು ತಿದ್ದಿಕೊಂಡು ಮನುಷ್ಯರಾಗಿ ಬಾಳುವ ಪ್ರಯತ್ನ ಮಾಡಬೇಕು ಎಂದರು. ಸಮಾಜದಲ್ಲಿ ಬೇರೆ ಬೇರೆ ಜಾತಿ, ಧರ್ಮಗಳಿದ್ದರೂ ಮಾನವರಾಗಿ ಬದುಕಬೇಕು. ಕೆಂಪೇಗೌಡರು ಅವರ ಆಡಳಿತಾವಧಿಯಲ್ಲಿ ಜಾತಿ ಮಾಡಲಿಲ್ಲ. ಬೆಂಗಳೂರು ಈ ಮಟ್ಟಕ್ಕೆ ಬೆಳೆದಿದ್ದರೆ ಅದಕ್ಕೆ ಕೆಂಪೇಗೌಡರು ಕಾರಣ ಎಂದರು.

ದೂರದೃಷ್ಟಿ ಇಟ್ಟುಕೊಂಡು ಆರ್ಥಿಕ, ಸಾಮಾಜಿಕ ಬೆಳವಣಿಗೆ ಯಾವ ರೀತಿಯಾಗಬೇಕೆಂದು ಅರಿತು, ಎಲ್ಲರಿಗೂ ಆರ್ಥಿಕ, ಸಾಮಾಜಿಕ ಶಕ್ತಿಯನ್ನು ತುಂಬುವ ಪ್ರಯತ್ನವನ್ನು ಮಾಡಿದರು. ಆರ್ಥಿಕವಾಗಿ ಬೆಂಗಳೂರು ಬೆಳೆಯಬೇಕೆಂದು ನಗರದಲ್ಲಿ ಕೆರೆಗಳು, ದೇವಾಲಯಗಳು, ಪೇಟೆಗಳನ್ನು ನಿರ್ಮಾಣ ಮಾಡಿದರು. ಅಂಥ ವ್ಯಕ್ತಿಯನ್ನು ಸ್ಮರಿಸುವುದು ಪ್ರತಿಯೊಬ್ಬರ ಕರ್ತವ್ಯ ಎಂದು ಹೇಳಿದರು.

ಇದೇ ಸಂದರ್ಭದಲ್ಲಿ ಮುಖ್ಯಮಂತ್ರಿಗಳು ಪ್ರಶಸ್ತಿ ಪುರಸ್ಕೃತರನ್ನು ಅಭಿನಂದಿಸಿದರು.

ಇದನ್ನೂ ಓದಿ: KMH CUP: ʼಕೆಎಂಎಚ್‌ ಕಪ್‌ʼ ಕ್ರಿಕೆಟ್‌ಗೆ ನಟಿ ಭಾವನಾ ರಾಮಣ್ಣ ರಾಯಭಾರಿ

ಕಾರ್ಯಕ್ರಮದಲ್ಲಿ ಆದಿಚುಂಚನಗಿರಿ ಮಹಾಸಂಸ್ಥಾನದ ಮಠದ ನಿರ್ಮಲಾನಂದನಾಥ ಸ್ವಾಮೀಜಿ, ವಿಶ್ವ ಒಕ್ಕಲಿಗರ ಮಹಾಸಂಸ್ಥಾನದ ಚಂದ್ರಶೇಖರ್ ಸ್ವಾಮೀಜಿ, ಗುರುಗುಂಡ ಬ್ರಹ್ಮೇಶ್ವರ ಸ್ವಾಮಿ ಮಹಾಸಂಸ್ತಾನ ಮಠದ ನಂಜಾವಧೂತ ಸ್ವಾಮೀಜಿ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಸಚಿವರಾದ ಶಿವರಾಜ್ ತಂಗಡಗಿ, ಕೆ.ಎಚ್. ಮುನಿಯಪ್ಪ, ಕೃಷ್ಣಬೈರೇಗೌಡ, ಶಾಸಕ ರಿಜ್ವಾನ್ ಅರ್ಷದ್, ವಿಧಾನ ಪರಿಷತ್‌ ಸದಸ್ಯ ಸಲೀಂ ಅಹ್ಮದ್, ರಾಮೋಜಿ ಗೌಡ, ಪುಟ್ಟಣ್ಣ, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು, ಶಾಸಕ ವಿಶ್ವನಾಥ್, ಒಕ್ಕಲಿಗರ ಸಂಘದ ಅಧ್ಯಕ್ಷ ಹನುಮಂತಯ್ಯ ಹಾಗೂ ಇತರರು ಉಪಸ್ಥಿತರಿದ್ದರು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕ್ರಿಕೆಟ್

T20 World Cup 2024: ಟಿ20 ವಿಶ್ವಕಪ್​ ಮುಡಿಗೇರಿಸಿಕೊಂಡ ಭಾರತ; ರಾಜ್ಯದ ವಿವಿಧೆಡೆ ಸಂಭ್ರಮಾಚರಣೆ ಹೀಗಿತ್ತು

T20 World Cup 2024: ಬಾರ್ಬಡೋಸ್​ನ ಕೆನ್ಸಿಂಗ್ಟನ್ ಓವಲ್​ನಲ್ಲಿ ಜೂನ್ 29ರಂದು ನಡೆದ ಟಿ20 ವಿಶ್ವಕಪ್​ 2024 ಫೈನಲ್​ನಲ್ಲಿ ಟೀಮ್ ಇಂಡಿಯಾ ದಕ್ಷಿಣ ಆಫ್ರಿಕಾವನ್ನು ಏಳು ರನ್​ಗಳ ಅಂತರದಿಂದ ಸೋಲಿಸುವ ಮೂಲಕ ಚಾಂಪಿಯನ್ ಆಗಿ ಹೊರ ಹೊಮ್ಮಿದೆ. ಈ ಹಿನ್ನೆಲೆಯಲ್ಲಿ ದೇಶಾದ್ಯಂತ ಸಂಭ್ರಮಾಚರಣೆ ಮುಗಿಲು ಮುಟ್ಟಿದೆ. ರಾಜ್ಯದ ವಿವಿಧ ಭಾಗಳಲ್ಲಿ ನಡೆಸಿದ ಸಂಭ್ರಮಾಚರಣೆಯ ಝಳಕ್‌ ಇಲ್ಲಿದೆ.

VISTARANEWS.COM


on

T20 World Cup 2024
Koo

ಬೆಂಗಳೂರು: ಬಾರ್ಬಡೋಸ್​ನ ಕೆನ್ಸಿಂಗ್ಟನ್ ಓವಲ್​ನಲ್ಲಿ ಜೂನ್ 29ರಂದು ನಡೆದ ಟಿ20 ವಿಶ್ವಕಪ್​ 2024 (T20 World Cup 2024) ಫೈನಲ್​ನಲ್ಲಿ ಟೀಮ್ ಇಂಡಿಯಾ ದಕ್ಷಿಣ ಆಫ್ರಿಕಾವನ್ನು ಏಳು ರನ್​ಗಳ ಅಂತರದಿಂದ ಸೋಲಿಸುವ ಮೂಲಕ ಚಾಂಪಿಯನ್ ಆಗಿ ಹೊರ ಹೊಮ್ಮಿದೆ. ಈ ಹಿನ್ನೆಲೆಯಲ್ಲಿ ದೇಶಾದ್ಯಂತ ಸಂಭ್ರಮಾಚರಣೆ ಮುಗಿಲು ಮುಟ್ಟಿದೆ. ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧ ಭಾಗಗಳಲ್ಲಿ ಕ್ರಿಕೆಟ್‌ ಅಭಿಮಾನಿಗಳು ಟೀಮ್‌ ಇಂಡಿಯಾ ಗೆಲುವುವನ್ನು ಕೊಂಡಾಡಿದರು.

ಬೆಂಗಳೂರು: ಬೆಂಗಳೂರಿನ ಹಲವು ಭಾಗಗಳಲ್ಲಿ ಕ್ರಿಕೆಟ್ ಅಭಿಮಾನಿಗಳ ಸಡಗರ ಮುಗಿಲು ಮುಟ್ಟಿತ್ತು‌. ಎಂ.ಜಿ. ರಸ್ತೆ, ಬ್ರಿಗೇಡ್ ರೋಡ್, ಕೋರಮಂಗಲ ಸೇರಿದಂತೆ ಬೆಂಗಳೂರಿನ ಹಲವು ಭಾಗಗಳಲ್ಲಿ ಕ್ರಿಕೆಟ್ ಅಭಿಮಾನಿಗಳು ಪಟಾಕಿ ಸಿಡಿಸಿ, ಘೋಷಣೆ ಕೂಗಿ ಮತ್ತು ತ್ರಿವರ್ಣ ಧ್ವಜ ಹಾರಿಸಿ, ಹಾಡುಗಳಿಗೆ ಕುಣಿದು ಸಂಭ್ರಮ ಆಚರಿಸಿ ಭಾರತ ತಂಡಕ್ಕೆ ಅಭಿನಂದನೆ‌ ಸಲ್ಲಿಸಿದರು.

ಬೆಳಗಾವಿ: ಭಾರತ ತಂಡ ಎರಡನೇ ಬಾರಿಗೆ ಟಿ-20 ವಿಶ್ವಕಪ್ ಗೆದ್ದ ಹಿನ್ನೆಲೆಯಲ್ಲಿ ಬೆಳಗಾವಿಯ ಸಮಾದೇವಿ ಗಲ್ಲಿಯಲ್ಲಿ ಕ್ರಿಕೆಟ್ ಪ್ರೇಮಿಗಳು ಭಾರತ ಧ್ವಜ, ಭಗವಾಧ್ವಜ ಪ್ರದರ್ಶಿಸಿ ಖುಷಿಪಟ್ಟರು. ಜತೆಗೆ ಡಿಜೆಗೆ ಸಖತ್‌ ಸ್ಟೆಪ್ ಹಾಕಿ ಕ್ರೀಡಾ ಪ್ರೇಮಿಗಳು ಸಂಭ್ರಮಿಸಿದರು. ಕನ್ನಡ, ಹಿಂದಿ ಹಾಡುಗಳ ನಡುವೆ ಯುವ ಜನತೆಯ ಡ್ಯಾನ್ಸ್‌ ಗಮನ ಸೆಳೆಯಿತು.

ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಭಟ್ಕಳದಲ್ಲಿ ಭಾರತದ ಗೆಲುವನ್ನು ಕ್ರಿಕೆಟ್ ಪ್ರೇಮಿಗಳು ಸಂಭ್ರಮಿಸಿದರು. ಭಟ್ಕಳದ ಸಂಶುದ್ದೀನ್ ವೃತ್ತದಲ್ಲಿ ತಡರಾತ್ರಿ ಸಂಭ್ರಮಾಚರಣೆ ನಡೆಯಿತು. ನೂರಾರು ಸಂಖ್ಯೆಯಲ್ಲಿ ಹೆದ್ದಾರಿಯಲ್ಲಿ ಜಮಾಯಿಸಿದ ಕ್ರಿಕೆಟ್ ಪ್ರೇಮಿಗಳು ಸಂಚರಿಸುತ್ತಿದ್ದ ವಾಹನಗಳ ಎದುರು ಕುಣಿದು ಕುಪ್ಪಳಿಸಿದರು. ಭಾರತದ ಬಾವುಟ ಹಿಡಿದ ಯುವಕರು, ಮಕ್ಕಳು, ಕ್ರಿಕೆಟ್ ಪ್ರೇಮಿಗಳ ಸಂಭ್ರಮ ಮುಗಿಲು ಮುಟ್ಟಿತು. ಸಂಭ್ರಮಾಚರಣೆ ಹಿನ್ನೆಲೆಯಲ್ಲಿ ಕೆಲಕಾಲ ಹೆದ್ದಾರಿ ಸಂಚಾರ ಅಸ್ತವ್ಯಸ್ತಗೊಂಡ ಪ್ರಸಂಗವೂ ನಡೆಯಿತು. ಕ್ರಿಕೆಟ್ ಪ್ರೇಮಿಗಳನ್ನು ನಿಯಂತ್ರಿಸಲು ಪೊಲೀಸರ ಹರಸಾಹಸ ಪಡಬೇಕಾಯಿತು. ಕೊನೆಗೆ ವಾಹನ ಸಂಚಾರಕ್ಕೆ ಅಡ್ಡಿಯಾಗದಂತೆ ಕ್ರಿಕೆಟ್ ಪ್ರೇಮಿಗಳನ್ನು ಪೊಲೀಸರು ಚದುರಿಸಿದರು.

ವಿಜಯನಗರ: ವಿಜಯನಗರ ಜಿಲ್ಲೆಯ ಹೊಸಪೇಟೆ ನಗರದಲ್ಲಿಯೂ ಸಂಭ್ರಮ ಮನೆ ಮಾಡಿತು. ಹೊಸಪೇಟೆ ನಗರದ ಡಾ. ಪುನೀತ್‌ ರಾಜ್‌ಕುಮಾರ್ ಸರ್ಕಲ್‌ನಲ್ಲಿ ಅಭಿಮಾನಿಗಳು ʼಇಂಡಿಯಾ ಇಂಡಿಯಾʼ ಎಂದು ಘೋಷಣೆ ಕೂಗಿ ಸಂಭ್ರಮಾಚರಣೆ ನಡೆಸಿದರು.

ಧಾರವಾಡ: ಧಾರವಾಡದ ಶ್ರೀನಗರ ವೃತ್ತದಲ್ಲಿ ಗುಂಪುಗೂಡಿದ ಯುವಕರ ತಂಡ ಭಾರತ ಗೆದ್ದ ತಕ್ಷಣವೇ ಟೀಮ್‌ ಇಂಡಿಯಾಕ್ಕೆ ಜಯಘೋಷ ಮೊಳಗಿಸಿತು. ʼಭಾರತ ಮಾತಾ ಕೀ ಜೈʼ ಎಂದು ಘೋಷಣೆಯೂ ಕೇಳಿ ಬಂತು.

ಮೈಸೂರು: ಮೈಸೂರಿನಲ್ಲಿ ಕ್ರಿಕೆಟ್ ಪ್ರೇಮಿಗಳು ಪಟಾಕಿ ಸಿಡಿಸಿ, ಸಿಹಿ ಹಂಚಿಕೆ ಮಾಡುವ ಮೂಲಕ ಭಾರತದ ಗೆಲುವನ್ನು ಇನ್ನಷ್ಟು ಸಿಹಿಯಾಗಿಸಿದರು. ಭಾರತ ದ್ವಜವನ್ನು ಹಿಡಿದು ದ್ವಿಚಕ್ರ ವಾಹನದ ಮೂಲಕ ಮುಖ್ಯ ರಸ್ತೆಗಳಲ್ಲಿ ಸಾಗಿ ʼಜಿತಾಗಾ ಭೈ ಜಿತೇಗಾ ಭಾರತ್ ಟೀಂ ಜೀತೇಗಾʼ ಎಂಬ ಘೋಷಣೆ ಕೂಗಿದರು. ಈ ಸಂದರ್ಭದಲ್ಲಿ ವಿಕ್ರಂ ಅಯ್ಯಂಗಾರ್, ಕಿರಣ್, ಸುದೀಂದ್ರ, ಬೆಲ್ಲ ರಾಜಣ್ಣ ಮಂಜುನಾಥ್, ಸಚಿನ್ ನಾಯಕ್ ಮತ್ತಿತರರು ಪಾಲ್ಗೊಂಡಿದ್ದರು.

ಶಿವಮೊಗ್ಗ: ಶಿವಮೊಗ್ಗದಲ್ಲಿ ಪಟಾಕಿ ಸಿಡಿಸಿ ಸಂಭ್ರಮಾಚರಣೆ ನಡೆಸಲಾಯಿತು. ಶಿವಮೊಗ್ಗ ನಗರದ ಗೋಪಿ ವೃತ್ತದಲ್ಲಿ ಭಾರತದ ಧ್ವಜ ಹಿಡಿದು ಕ್ರೀಡಾಭಿಮಾನಿಗಳು ಸಂಭ್ರಮಿಸಿದರು. ಹೀಗೆ ರಾಜುದ ವಿವಿಧ ಕಡೆ ಅಭಿಮಾನಿಗಳು ಸಂಭ್ರಮಾಚರಿಸಿದರು.

ಕಲಬುರಗಿ: ಕಲಬುರಗಿಯಲ್ಲಿ ಯುವಕರು ಸಂಭ್ರಮಾಚರಿಸಿದರು. ಕಲಬುರಗಿಯ ಸರ್ದಾರ್ ವಲ್ಲಾಭಾಯಿ ಪಟೇಲ್ ವೃತ್ತದಲ್ಲಿ ರಾತ್ರೋರಾತ್ರಿ ರಸ್ತೆಗಿಳಿದು ಕಾರು– ಬೈಕ್‌ಗಳಲ್ಲಿ ಪ್ರಮುಖ ರಸ್ತೆಗಳಲ್ಲಿ ಸುತ್ತುತ್ತ ‘ಇಂಡಿಯಾ–ಇಂಡಿಯಾ’, ‘ಕೊಹ್ಲಿ–ಕೊಹ್ಲಿ’ ಎಂದು ಘೋಷಣೆ ಕೂಗಿದರು. ನೂರಾರು ಕ್ರಿಕೆಟ್‌ ಅಭಿಮಾನಿಗಳು ಪಟಾಕಿ ಸಿಡಿಸಿ ವಿಜಯೋತ್ಸವ ಆಚರಿಸಿದರು. ತ್ರಿವರ್ಣ ಧ್ವಜ ಹಿಡಿದು ಜೈಕಾರ ಹಾಕಿದರು.

ಇದನ್ನೂ ಓದಿ: T20 World Cup 2024 : ಒಂದೇ ಒಂದು ಸೋಲು ಕಾಣದೆ ವಿಶ್ವ ಕಪ್ ಗೆದ್ದು ಇತಿಹಾಸ ಸೃಷ್ಟಿಸಿದ ಭಾರತ ತಂಡ

Continue Reading

ಮಳೆ

Karnataka Weather : ಜುಲೈ ಮೊದಲ ವಾರ ಮತ್ತಷ್ಟು ಅಬ್ಬರಿಸಲಿದೆ ಗುಡುಗು ಸಹಿತ ಮಳೆ!

Rain News : ಜೂ.30ರಂದು ಕರಾವಳಿ ಹಾಗೂ ಮಲೆನಾಡು ಭಾಗದಲ್ಲಿ ಭಾರಿ ಮಳೆಯಾಗುವ ನಿರೀಕ್ಷೆ ಇದ್ದು, ಐಎಂಡಿ ಯೆಲ್ಲೋ ಅಲರ್ಟ್‌ ಘೋಷಣೆ (Karnataka Weather Forecast) ಮಾಡಿದೆ. ಜುಲೈ ಮೊದಲ ವಾರ ಮತ್ತಷ್ಟು ತೀವ್ರಗೊಳ್ಳಲಿದ್ದು, ಜು.3ರವರೆಗೆ ಸಮುದ್ರಕ್ಕೆ ಇಳಿಯದಂತೆ ಮೀನುಗಾರರಿಗೆ ಎಚ್ಚರಿಕೆ ನೀಡಲಾಗಿದೆ.

VISTARANEWS.COM


on

By

karnataka weather Forecast
ಸಾಂದರ್ಭಿಕ ಚಿತ್ರ
Koo

ಬೆಂಗಳೂರು: ಭಾನುವಾರ ಕರಾವಳಿಯಲ್ಲಿ ವ್ಯಾಪಕವಾಗಿ ಮಧ್ಯಮದಿಂದ ಭಾರಿ ಮಳೆಯಾಗುವ (Karnataka Weather Forecast) ಸಾಧ್ಯತೆಯಿದೆ. ಮಲೆನಾಡು ಭಾಗಗಳಲ್ಲಿ ಚದುರಿದಂತೆ ಹಗುರದಿಂದ ಸಾಧಾರಣ ಮಳೆಯಾಗುವ (Rain News) ನಿರೀಕ್ಷೆಯಿದೆ. ಉತ್ತರ ಒಳನಾಡಿನಲ್ಲಿ ಪ್ರತ್ಯೇಕವಾಗಿ ಚದುರಿದಂತೆ ಹಗುರದಿಂದ ಮಧ್ಯಮ ಮಳೆಯಾದರೆ, ದಕ್ಷಿಣ ಒಳನಾಡಿನಲ್ಲಿ ಸಣ್ಣ ಪ್ರಮಾಣದಲ್ಲಿ ಮಳೆಯಾಗಲಿದೆ. ರಾಜ್ಯದ ಪ್ರತ್ಯೇಕ ಸ್ಥಳಗಳಲ್ಲಿ ಗುಡುಗು ಮಿಂಚು ಸಹಿತ ಗಂಟೆಗೆ 30-40 ಕಿ.ಮೀ ಗಾಳಿ ಬೀಸುವ ನಿರೀಕ್ಷೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು ನೀಡಿದೆ.

ದಕ್ಷಿಣ ಒಳನಾಡಿನ ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ಮೈಸೂರು ಸೇರಿದಂತೆ ರಾಮನಗರ, ತುಮಕೂರು, ವಿಜಯನಗರದಲ್ಲಿ ಪ್ರತ್ಯೇಕವಾಗಿ ಹಗುರದಿಂದ ಕೂಡಿದ ಮಳೆಯಾಗುವ ಸಾಧ್ಯತೆಯಿದೆ. ಬೆಂಗಳೂರಿನಲ್ಲಿ ಒಣಹವೆ ಮುಂದುವರಿಯುವ ಸಾಧ್ಯತೆ ಇದೆ. ಗರಿಷ್ಠ ಉಷ್ಣಾಂಶ 27 ಡಿಗ್ರಿ ಸೆಲ್ಸಿಯಸ್ , ಕನಿಷ್ಠ ಉಷ್ಣಾಂಶ 21 ಡಿಗ್ರಿ ಸೆಲ್ಸಿಯಸ್ ಇರಲಿದೆ.

ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಹಾವೇರಿ, ಬೀದರ್, ಕಲಬುರಗಿ ಮತ್ತು ವಿಜಯಪುರದಲ್ಲಿ ಸಾಧಾರಣ ಮಳೆಯಾಗಲಿದೆ. ಉಳಿದಂತೆ ಗದಗ, ಕೊಪ್ಪಳ, ರಾಯಚೂರು, ಯಾದಗಿರಿ, ಬಾಗಲಕೋಟೆ ಸಣ್ಣ ಪ್ರಮಾಣದಲ್ಲಿ ಮಳೆಯ ಸಿಂಚನವಾಗಲಿದೆ.

ಇನ್ನೂ ಮಲೆನಾಡಿನ ಚಿಕ್ಕಮಗಳೂರು, ಕೊಡಗು, ಹಾಸನದಲ್ಲಿ ಸಾಧಾರಣ ಮಳೆಯಾಗಲಿದ್ದು, ಶಿವಮೊಗ್ಗದಲ್ಲಿ ಪ್ರತ್ಯೇಕ ಸ್ಥಳಗಳಲ್ಲಿ ಭಾರಿ ಮಳೆಯಾಗುವ ನಿರೀಕ್ಷೆಯಿದೆ. ಕರಾವಳಿಯ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿಯಲ್ಲಿ ಸಾಧಾರಣದಿಂದ ಭಾರಿ ಮಳೆಯಾಗುವ ಸಾಧ್ಯತೆಯಿದೆ.

ಇದನ್ನೂ ಓದಿ: DCET 2024 : ಡಿಸಿಇಟಿ ಫಲಿತಾಂಶ ಪ್ರಕಟಿಸಿದ ಕರ್ನಾಟಕ ಪರೀಕ್ಷಾ ಪ್ರಾಧಿಕಾರ

ಯೆಲ್ಲೋ ಅಲರ್ಟ್‌ ಘೋಷಣೆ

ಕರಾವಳಿ ಹಾಗೂ ಮಲೆನಾಡು ಭಾಗದಲ್ಲಿ ಮಳೆಯ ಆರ್ಭಟ ಮುಂದುವರಿದಿದೆ. ಭಾರಿ ಮಳೆಯೊಂದಿಗೆ ಗುಡುಗು ಇರಲಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಚಿಕ್ಕಮಗಳೂರು, ಕೊಡಗು ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಇನ್ನೂ ಕರ್ನಾಟಕ ಕರಾವಳಿಯಲ್ಲಿ ಗಂಟೆಗೆ 35 ಕಿ.ಮೀ ನಿಂದ 45 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯಿದೆ. ಹೀಗಾಗಿ ಜುಲೈ 3ರವರೆಗೆ ಮೀನುಗಾರರು ಮೀನುಗಾರಿಗೆ ತೆರಳದಂತೆ ಸೂಚಿಸಲಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಬೆಂಗಳೂರು

UGCET 2024: ಯುಜಿಸಿಇಟಿ ದಾಖಲೆಗಳ ಆನ್‌ಲೈನ್‌ ಪರಿಶೀಲನೆ; ವಿದ್ಯಾರ್ಥಿಗಳೇ ನಿಮ್ಮ status ಚೆಕ್ ಮಾಡಿಕೊಳ್ಳಿ

UGCET 2024: ಎಂಜಿನಿಯರಿಂಗ್, ವೈದ್ಯಕೀಯ ಕೋರ್ಸ್‌ ಸೇರಿದಂತೆ ಇತರ ವೃತ್ತಿಪರ ಕೋರ್ಸ್ ಸೇರಲು ಬಯಸಿ, ಅಭ್ಯರ್ಥಿಗಳು ಯುಜಿಸಿಇಟಿ-2024 (UGCET-2024) ಆನ್‌ಲೈನ್ ಅರ್ಜಿಯಲ್ಲಿ ಕ್ಲೇಮ್ ಮಾಡಿದ್ದ ವಿವಿಧ ಮೀಸಲಾತಿಗಳನ್ನು ಪರಿಗಣಿಸಿ ಆನ್‌ಲೈನ್ ಮೂಲಕ ಪರಿಶೀಲನೆ ನಡೆಸಿದ್ದು, ಈ ಮಾಹಿತಿಯನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ವೆಬ್‌ಸೈಟ್‌ನಲ್ಲಿ ಪ್ರಕಟಿಸಿದೆ.

VISTARANEWS.COM


on

UGCET 2024 Online verification of UGCET records Information publish on karnataka examination authority website
Koo

ಬೆಂಗಳೂರು: ಎಂಜಿನಿಯರಿಂಗ್, ವೈದ್ಯಕೀಯ ಕೋರ್ಸ್‌ ಸೇರಿದಂತೆ ಇತರ ವೃತ್ತಿಪರ ಕೋರ್ಸ್ ಸೇರಲು ಬಯಸಿ, ಅಭ್ಯರ್ಥಿಗಳು ಯುಜಿಸಿಇಟಿ 2024 (UGCET-2024) ಆನ್‌ಲೈನ್ ಅರ್ಜಿಯಲ್ಲಿ ಕ್ಲೇಮ್ ಮಾಡಿದ್ದ ವಿವಿಧ ಮೀಸಲಾತಿಗಳನ್ನು ಪರಿಗಣಿಸಿ ಆನ್‌ಲೈನ್ ಮೂಲಕ ಪರಿಶೀಲನೆ ನಡೆಸಿದ್ದು, ಈ ಮಾಹಿತಿಯನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ವೆಬ್‌ಸೈಟ್‌ನಲ್ಲಿ ಪ್ರಕಟಿಸಿದೆ.

ಇದನ್ನೂ ಓದಿ: IPS officers promoted: ಡಿಜಿಪಿಯಾಗಿ ಮಾಲಿನಿ ಕೃಷ್ಣಮೂರ್ತಿ, ಪ್ರಣಬ್ ಮೊಹಂತಿಗೆ ಮುಂಬಡ್ತಿ

ಅಭ್ಯರ್ಥಿಗಳು ಆನ್‌ಲೈನ್ ಅರ್ಜಿಯಲ್ಲಿ ನಮೂದಿಸಿದ SATS (ಸ್ಯಾಟ್ಸ್) ಸಂಖ್ಯೆ ಆಧರಿಸಿ ಅಭ್ಯರ್ಥಿಗಳ ವ್ಯಾಸಂಗ, ಕನ್ನಡ ಮಾಧ್ಯಮ, ಗ್ರಾಮೀಣ ವ್ಯಾಸಂಗದ ವಿವರಗಳನ್ನು ಪರಿಶೀಲಿಸಲಾಗಿದೆ. ಅದೇ ರೀತಿಯಾಗಿ RD (ಆರ್‌ಡಿ) ಸಂಖ್ಯೆ ಆಧರಿಸಿ ಮೀಸಲಾತಿ (ಎಸ್‌ಸಿ, ಎಸ್‌ಟಿ, ಪ್ರವರ್ಗ-1, 2ಎ, 2ಬಿ, 3ಎ, 3ಬಿ) 371(ಜೆ), ಧಾರ್ಮಿಕ ಅಲ್ಪಸಂಖ್ಯಾತ, ಎನ್‌ಸಿಎಲ್‌ಸಿ (Non Creamy Layer Certificate) ಮತ್ತು ಇತರೆ ಮಾಹಿತಿಯನ್ನು ಆಯಾ ಇಲಾಖೆಯ ವೆಬ್‌ಸರ್ವೀಸ್ ಮೂಲಕ ಪರಿಶೀಲಿಸಲಾಗಿದೆ ಎಂದು ಕೆಇಎ ಕಾರ್ಯನಿರ್ವಾಹಕ ನಿರ್ದೇಶಕ ಎಚ್.ಪ್ರಸನ್ನ ಮಾಹಿತಿ ನೀಡಿದ್ದಾರೆ.

ಅರ್ಹತಾ ಕಂಡಿಕೆ ಇ, ಎಫ್, ಜಿ, ಎಚ್ ಮತ್ತು ಒ ಕ್ಲಾಸ್‌ಗಳಿಗೆ ಅನ್ವಯಿಸುವಂತೆ ಆಯಾ ಇಲಾಖೆಯವರು ಪರಿಶೀಲನೆ ನಂತರ ನೀಡಿದ ಅರ್ಹತೆಯನ್ನು ಪರಿಗಣಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.

SATS ಮತ್ತು RD ಸಂಖ್ಯೆ ಆಧರಿಸಿ ಮಾಡಲಾಗಿರುವ ಪರಿಶೀಲನೆಯ ವಿವರಗಳನ್ನು ಪ್ರಾಧಿಕಾರದ ವೆಬ್‌ಸೈಟ್‌ನ ಲಿಂಕ್‌ನಲ್ಲಿ ನೀಡಲಾಗಿದೆ. ಅಭ್ಯರ್ಥಿಗಳು ನಿಗದಿತ ಲಿಂಕ್‌ನಲ್ಲಿ ತಮ್ಮ ಅರ್ಜಿ ಸಂಖ್ಯೆ ಮತ್ತು ಜನ್ಮ ದಿನಾಂಕ ನಮೂದಿಸಿ ವಿವರಗಳನ್ನು ನೋಡಬಹುದು. ವೆರಿಫಿಕೇಶನ್ ಸ್ಲಿಪ್ ಡೌನ್‌ಲೋಡ್ ಮಾಡಿಕೊಳ್ಳಲು ಪ್ರಾಧಿಕಾರದ ವೆಬ್‌ಸೈಟಿನಲ್ಲಿ ಲಿಂಕ್‌ನ್ನು ಸದ್ಯದಲ್ಲಿಯೇ ಸಕ್ರಿಯಗೊಳಿಸಲಾಗುವುದು ಎಂದು ಅವರು ತಿಳಿಸಿದ್ದಾರೆ.

ಮುಂದಿನ ಹಂತಗಳು:

ಅಭ್ಯರ್ಥಿಗಳು ಪ್ರಕಟಿಸಲಾಗುವ ವೇಳಾಪಟ್ಟಿಯನುಸಾರ ವೆರಿಫಿಕೇಶನ್ ಸ್ಲಿಪ್ ಡೌನ್‌ಲೋಡ್ ಮಾಡಿಕೊಳ್ಳಬೇಕು. ಆದ್ಯತಾ ಕ್ರಮದಲ್ಲಿ ಆಸಕ್ತಿ ಇರುವ ಕಾಲೇಜು ಮತ್ತು ಕೋರ್ಸ್‌ಗಳ ಪಟ್ಟಿ ಮಾಡಿಕೊಳ್ಳಬೇಕು. ಮೊದಲನೇ ಸುತ್ತಿನ ವೇಳಾಪಟ್ಟಿ ಪ್ರಕಟಿಸಿದ ನಂತರ ಪ್ರಾಧಿಕಾರದ ವೆಬ್‌ಸೈಟ್‌ನ ಲಿಂಕ್‌ನಲ್ಲಿ ಆಯ್ಕೆಗಳನ್ನು ಆದ್ಯತಾ ಕ್ರಮದಲ್ಲಿ ದಾಖಲಿಸಬಹುದು ಎಂದು ಅವರು ವಿವರಿಸಿದ್ದಾರೆ.

ಇದನ್ನೂ ಓದಿ: VSK Media Awards 2024: ಬೆಂಗಳೂರಿನಲ್ಲಿ ಜೂ.30 ರಂದು “ವಿಎಸ್‌ಕೆ ಮಾಧ್ಯಮ ಪ್ರಶಸ್ತಿ” ಪ್ರದಾನ

ಅರ್ಹತಾ ಕಂಡಿಕೆಗಳಾದ ಬಿ, ಸಿ, ಡಿ, ಐ, ಜೆ, ಕೆ, ಎಲ್, ಎಂ, ಎನ್, ಜೆಡ್, ಗಳನ್ನು ನಮೂದಿಸಿರುವ ಅಭ್ಯರ್ಥಿಗಳಿಗೆ ಆಫ್‌ಲೈನ್ ಪರಿಶೀಲನೆಗೆ ಹಾಜರಾಗಲು ಪ್ರತ್ಯೇಕ ವೇಳಾಪಟ್ಟಿ ನೀಡಿ ಪರಿಶೀಲನೆ ಮಾಡಲಾಗಿರುತ್ತದೆ. ಅರ್ಹ ಅಭ್ಯರ್ಥಿಗಳಿಗೆ ವೆರಿಫಿಕೇಶನ್ ಸ್ಲಿಪ್ ನೀಡಲಾಗಿದೆ. ಈ ಅಭ್ಯರ್ಥಿಗಳು ಮೇಲಿನ ಲಿಂಕ್‌ ಅನ್ನು ಪರಿಶೀಲಿಸಬೇಕಾಗಿಲ್ಲ. ಆಫ್‌ಲೈನ್ ಪರಿಶೀಲನೆಗೆ ಗೈರು ಹಾಜರಾಗಿರುವ ಅಭ್ಯರ್ಥಿಗಳು ಸೀಟು ಹಂಚಿಕೆಗೆ ಅರ್ಹತೆ ಹೊಂದಿರುವುದಿಲ್ಲ ಎಂದು ಸ್ಪಷ್ಟಪಡಿಸಲಾಗಿದೆ.

DCET 2024: ಡಿಸಿಇಟಿ ಫಲಿತಾಂಶ ಪ್ರಕಟಿಸಿದ ಕರ್ನಾಟಕ ಪರೀಕ್ಷಾ ಪ್ರಾಧಿಕಾರ

ಡಿಸಿಇಟಿ-2024ರ (DCET 2024) ಪರೀಕ್ಷೆ ಫಲಿತಾಂಶವನ್ನು (Result) ಕೆಇಎ (KEA) ಶನಿವಾರ ಮಧ್ಯಾಹ್ನ ತನ್ನ ವೆಬ್ ಸೈಟಿನಲ್ಲಿ ಪ್ರಕಟಿಸಿದೆ. ಒಟ್ಟು 17,483 ಅಭ್ಯರ್ಥಿಗಳು ಪರೀಕ್ಷೆ ತೆಗೆದುಕೊಂಡಿದ್ದರು. ಡಿಪ್ಲೊಮಾ ಪರೀಕ್ಷೆಯಲ್ಲಿ ನಿಗದಿತ ಅರ್ಹತೆ ಹೊಂದಿದ್ದು, ಡಿಸಿಇಟಿ ಪರೀಕ್ಷೆಗೆ ಹಾಜರಾಗಿ ರ‍್ಯಾಂಕ್ ಪ್ರಕಟವಾಗಿರದಿದ್ದರೆ ಅಂತಹ ಅಭ್ಯರ್ಥಿಗಳು ಡಿಪ್ಲೊಮಾ ಅಂಕ ಮತ್ತು ಅಂಕಪಟ್ಟಿಯನ್ನು ಪಿಡಿಎಫ್ ಫಾರ್ಮ್ಯಟ್‌ನಲ್ಲಿ ಪ್ರಾಧಿಕಾರದ ಇಮೇಲ್ ಸಲ್ಲಿಸಿದಲ್ಲಿ ಅರ್ಹತೆಯನ್ನು ಪರಿಶೀಲಿಸಿ, ನಿಯಮಾನುಸಾರ ರ‍್ಯಾಂಕ್ ನೀಡಲಾಗುತ್ತದೆ.

ಡಿಸಿಇಟಿ: ಜು.2ರಿಂದ 4ರವರೆಗೆ ದಾಖಲಾತಿ ಪರಿಶೀಲನೆ

ಮೂರನೇ ಸೆಮಿಸ್ಟರ್ ಇಂಜಿನಿಯರಿಂಗ್ ಕೋರ್ಸುಗಳ ಪ್ರವೇಶಾತಿಗೆ ಹಾಗು ಮೊದಲನೇ ವರ್ಷದ ಆರ್ಕಿಟೆಕ್ಚರ್ ಕೋರ್ಸಿಗೆ ಅರ್ಹತೆಯನ್ನು ಪಡೆಯುವುದಕ್ಕಾಗಿ ಜು.2ರಿಂದ 4ವರೆಗೆ ಸರ್ಕಾರಿ ಮತ್ತು ಅನುದಾನಿತ ಪಾಲಿಟೆಕ್ನಿಕ್ ಕಾಲೇಜುಗಳಲ್ಲಿ ಡಿಸಿಇಟಿ ರ‍್ಯಾಂಕ್‌ ಪಡೆದ ಅಭ್ಯರ್ಥಿಗಳ ದಾಖಲೆಗಳ ಪರಿಶೀಲನೆ ನಡೆಸಲಾಗುತ್ತದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಎಚ್. ಪ್ರಸನ್ನ ತಿಳಿಸಿದ್ದಾರೆ.

ಇದನ್ನೂ ಓದಿ: WhatsApp: ಇನ್ನು ಮುಂದೆ ಈ ಫೋನ್‌ಗಳಲ್ಲಿ ವಾಟ್ಸ್ಯಾಪ್‌ ಸಿಗೋಲ್ಲ! ನಿಮ್ಮ ಫೋನೂ ಇದೆಯಾ ನೋಡಿ

ದಾಖಲಾತಿ ಪರಿಶೀಲನೆ ನಡೆಸುವ ಕಾಲೇಜುಗಳ ಪಟ್ಟಿಯನ್ನು ಕೆಇಎ ವೆಬ್‌ಸೈಟ್‌ನಲ್ಲಿ ಪ್ರಕಟಿಸಿದ್ದು, ಅಭ್ಯರ್ಥಿಗಳು ತಮಗೆ ಹತ್ತಿರ ಇರುವ ಯಾವುದಾದರೊಂದು ಕಾಲೇಜಿಗೆ ಖುದ್ದು ಹೋಗಬೇಕು. ಆನ್ ಲೈನ್ ಅರ್ಜಿ ಸಲ್ಲಿಸುವಾಗ ಕೋರಿರುವ ಕ್ಲೇಮುಗಳಿಗೆ ಪೂರಕವಾದ ಎಲ್ಲಾ ಶೈಕ್ಷಣಿಕ ಮೂಲ ದಾಖಲೆಗಳನ್ನು ಮತ್ತು ವಿಶೇಷ ಪ್ರವರ್ಗದ (ಎನ್ ಸಿಸಿ, ಕ್ರೀಡೆ, ಸೈನಿಕರು, ಮಾಜಿ ಸೈನಿಕರು, ಸಿಎಪಿಎಫ್, ಮಾಜಿ-ಸಿಎಪಿಎಫ್- ಕ್ಲೇಮ್ ಮಾಡಿದ್ದಲ್ಲಿ ಮಾತ್ರ ಅರ್ಹತೆ) ಪ್ರಮಾಣ ಪತ್ರಗಳನ್ನು ಕಡ್ಡಾಯವಾಗಿ ತೆಗೆದುಕೊಂಡು ಹೋಗಬೇಕು.

Continue Reading

ಉತ್ತರ ಕನ್ನಡ

Uttara Kannada News: ಕೂಸಿನ ಮನೆ ಯೋಜನೆ ಯಶಸ್ವಿಗೊಳಿಸಿ: ಉಮಾ ಮಹಾದೇವನ್

Uttara Kannada News: ಕಾರವಾರದ ಜಿಲ್ಲಾ ಪಂಚಾಯಿತಿಯ ಸಭಾಂಗಣದಲ್ಲಿ ಶುಕ್ರವಾರ ಗ್ರಾಮೀಣಾಭಿವೃದ್ದಿ ಮತ್ತು ಪಂಚಾಯತ್‌ ರಾಜ್ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಉಮಾ ಮಹಾದೇವನ್ ದಾಸಗುಪ್ತ ಅಧ್ಯಕ್ಷತೆಯಲ್ಲಿ ಪ್ರಗತಿ ಪರಿಶೀಲನಾ ಸಭೆ ಜರುಗಿತು.

VISTARANEWS.COM


on

Progress review meeting at Karwar ZP office
Koo

ಕಾರವಾರ: ಕೂಸಿನ ಮನೆಯು ದೇಶದಲ್ಲಿಯೇ ವಿನೂತನ ಪ್ರಯೋಗವಾಗಿದ್ದು, ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಯೋಜನೆಯಾಗಿದೆ. ನಗರ ಪ್ರದೇಶಗಳಲ್ಲಿ ಇರುವಂತೆ ಗ್ರಾಮೀಣ ಪ್ರದೇಶಗಳಲ್ಲಿಯೂ ಶಿಶು ಪಾಲನಾ ಕೇಂದ್ರಗಳ ಅವಶ್ಯಕತೆಯನ್ನು ಅರಿತು ಈ ಯೋಜನೆಯನ್ನು ಜಾರಿಗೆ ತರಲಾಗಿದ್ದು, ಅಧಿಕಾರಿಗಳೆಲ್ಲರೂ ಕೂಸಿನ ಮನೆ ಯೋಜನೆ ಯಶಸ್ಸಿಗೆ ಕೈಜೋಡಿಸಬೇಕು ಎಂದು ಗ್ರಾಮೀಣಾಭಿವೃದ್ದಿ ಮತ್ತು ಪಂಚಾಯತ್‌ ರಾಜ್ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಉಮಾ ಮಹಾದೇವನ್ ದಾಸಗುಪ್ತ (Uttara Kannada News) ಹೇಳಿದರು.

ಕಾರವಾರದ ಜಿಲ್ಲಾ ಪಂಚಾಯಿತಿಯ ಸಭಾಂಗಣದಲ್ಲಿ ಶುಕ್ರವಾರ ನಡೆದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಮಹಾತ್ಮಾ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತರಿ ಯೋಜನೆಯಡಿ ಗ್ರಾಮೀಣ ಪ್ರದೇಶಗಳಲ್ಲಿ ಕೂಲಿ ಕೆಲಸಕ್ಕೆ ಬರುವ ಕಾರ್ಮಿಕರ ಕಂದಮ್ಮಗಳ ಆರೈಕೆಗೆ ಕೂಸಿನ ಮನೆ ಆಸರೆಯಾಗಿದೆ. ಇಲ್ಲಿ ಮಗುವಿಗೆ ಆಹಾರ, ಆರೋಗ್ಯ ಸೇರಿದಂತೆ ಲಾಲನೆ-ಪಾಲನೆಯನ್ನು ಮಾಡಲಾಗುತ್ತದೆ.

ದೇಶದ ಭವಿಷ್ಯವಾದ ಮಕ್ಕಳಿಗೆ ಬಾಲ್ಯಾವಸ್ಥೆಯಲ್ಲಿ ಉತ್ತಮ ಆರೈಕೆ, ಪೌಷ್ಟಿಕಾಂಶಯುಕ್ತ ಆಹಾರ, ಕಲಿಕೆಗೆ ಉತ್ತಮ ಅಡಿಪಾಯದ ಅವಶ್ಯಕತೆಯಿದೆ. ಮಕ್ಕಳನ್ನು ಸಾಕಲು ಬಡ ಕುಟುಂಬಗಳಿಗಿರುವ ಅನಾನುಕೂಲಗಳನ್ನು ನೀಗಿಸಲು ಮತ್ತು ಕೆಲಸಕ್ಕೆಂದು ಹೋಗುವ ಮಹಿಳೆಯರಿಗೆ ಮಕ್ಕಳನ್ನು ಎಲ್ಲಿ ಬಿಡುವುದೆಂಬ ಚಿಂತೆಗೆ ಕೂಸಿನ ಮನೆ ಉತ್ತರವಾಗಿದೆ ಎಂದರು.

ಇದನ್ನೂ ಓದಿ: IPS officers promoted: ಡಿಜಿಪಿಯಾಗಿ ಮಾಲಿನಿ ಕೃಷ್ಣಮೂರ್ತಿ, ಪ್ರಣಬ್ ಮೊಹಂತಿಗೆ ಮುಂಬಡ್ತಿ

ಪ್ರತಿ ಗ್ರಾಮಕ್ಕೆ ಒಂದರಂತೆ ಸಾರ್ವಜನಿಕ ಗ್ರಂಥಾಲಯ ನಿರ್ಮಿಸಲು ಇಲಾಖೆ ಸಿದ್ದವಿದೆ. ಖಾಲಿ ಇರುವ ಕಟ್ಟಡ ಅಥವಾ ಸ್ಥಳ ಗುರುತಿಸಿ ಎಂದು ಅಧಿಕಾರಿಗಳಿಗೆ ಸೂಚಿಸಿದ ಅವರು, ವಸತಿ ಶಾಲೆಗಳಲ್ಲಿ ಮಕ್ಕಳ ಕಲಿಕೆಗೆ ಬೇಕಾಗುವಷ್ಟು ಪುಸ್ತಕಗಳು, ಕಂಪ್ಯೂಟರ್, ಇಂಟರ್ನೆಟ್ ವ್ಯವಸ್ಥೆ, ವಿದ್ಯಾರ್ಥಿಗಳಿಗೆ ಓದಲು ಅನುಕೂಲವಾಗುವಂತೆ ಸ್ಟಡಿ ಟೇಬಲ್, ಚೇರ್, ಬೆಳಕಿನ ವ್ಯವಸ್ಥೆ ಕಡ್ಡಾಯವಾಗಿ ಇರುವಂತೆ ನೋಡಿಕೊಳ್ಳುವಂತೆ ಅವರು ಸೂಚಿಸಿದರು.

ಜಿಲ್ಲೆಯ ಯಲ್ಲಾಪುರ ತಾಲೂಕಿನ ಇಡಗುಂದಿ ಗ್ರಾ.ಪಂ. ವ್ಯಾಪ್ತಿಯ ಲಿಂಗದಬೈಲ್ ಗ್ರಾಮದಲ್ಲಿ ಸಂಜೀವಿನಿ ಎನ್.ಆರ್.ಎಲ್.ಎಂ. ಮತ್ತು ಮನರೇಗಾ ಯೋಜನೆಯಡಿ ರೂಪುಗೊಂಡ ಸಿದ್ದಿ ಸಮುದಾಯದ ಡಮಾಮಿ ಕಮ್ಯೂನಿಟಿ ಹೋಮ್ ಸ್ಟೇ ರಾಷ್ಟ್ರೀಯ ಮಟ್ಟದಲ್ಲಿ ಪ್ರಶಂಸೆ ಪಡೆಯುತ್ತಿರುವ ಬಗ್ಗೆ ಸಿಇಒ ಈಶ್ವರ್ ಕಾಂದೂ ಹರ್ಷ ವ್ಯಕ್ತಪಡಿಸಿದರು.

ಬಳಿಕ ಕಾರವಾರ ತಾಲೂಕಿನ ಚಿತ್ತಾಕುಲ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿನ ಎನ್‌ಆರ್‌ಎಲ್‌ಎಂ ಮತ್ತು ಮನರೇಗಾ ಅಡಿ ಸ್ಥಾಪಿಸಿರುವ ಸಮುದಾಯ ಕೋಳಿ ಸಾಕಾಣಿಕೆ ಘಟಕ, ಹಣಕೋಣ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿರುವ ಭೀಮಕೋಲ್ ಅಮೃತ ಸರೋವರ ಮತ್ತು ಡಿಜಿಟಲ್ ಲೈಬ್ರರಿ ಹಾಗೂ ತೋಡೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿರುವ ಕೂಸಿನ ಮನೆಗೆ ಭೇಟಿ ನೀಡಿ, ಪರಿಶೀಲಿಸಿ, ಉತ್ತಮ ಕಾರ್ಯ ನಿರ್ವಹಿಸುತ್ತಿರುವುದಕ್ಕೆ ಮೆಚ್ಚುಗೆ ವ್ಯಕ್ತಪಡಿಸಿ, ಅಗತ್ಯ ಸಲಹೆ ಸೂಚನೆಗಳನ್ನು ನೀಡಿದರು.

ಇದನ್ನೂ ಓದಿ: Kannada New Movie: ರಾಧಿಕಾ ಕುಮಾರಸ್ವಾಮಿ ಅಭಿನಯದ ‘ಅಜಾಗ್ರತ’ ಸಿನಿಮಾ ಡೈರೆಕ್ಟರ್‌ಗೆ ನಿರ್ಮಾಪಕರಿಂದ ದುಬಾರಿ ಕಾರ್‌ ಗಿಫ್ಟ್‌!

ಈ ಸಂದರ್ಭದಲ್ಲಿ ಕಾರವಾರ ಉಪ ವಿಭಾಗಾಧಿಕಾರಿ ಕನಿಷ್ಕ, ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು, ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಉಪಸ್ಥಿತರಿದ್ದರು.

Continue Reading
Advertisement
swim benefits
ಆರೋಗ್ಯ34 mins ago

Swim Benefits: ನಿತ್ಯವೂ ಈಜಿದರೆ ಸಾಕು; ಇದಕ್ಕಿಂತ ದೊಡ್ಡ ಬೇರೆ ವ್ಯಾಯಾಮ ಇನ್ನೊಂದು ಬೇಡ!

T20 World Cup 2024
ಕ್ರಿಕೆಟ್34 mins ago

T20 World Cup 2024: ಟಿ20 ವಿಶ್ವಕಪ್​ ಮುಡಿಗೇರಿಸಿಕೊಂಡ ಭಾರತ; ರಾಜ್ಯದ ವಿವಿಧೆಡೆ ಸಂಭ್ರಮಾಚರಣೆ ಹೀಗಿತ್ತು

tamanna bhatia gold
ಸಿನಿಮಾ1 hour ago

Actress Tamanna Bhatia: ಬೆಂಗಳೂರಿನ ಶಾಲೆಯಲ್ಲಿ ನಟಿ ತಮನ್ನಾ ಭಾಟಿಯಾ ಬಗ್ಗೆ ಪಾಠ; ಪೋಷಕರ ಆಕ್ಷೇಪ

Viral Video
Latest1 hour ago

Viral Video: ಮನೆಯ ಹೊರಗೆ ತಾಯಿಯ ಜೊತೆ ಆಡುತ್ತಿದ್ದ ಮಗುವಿನ ಮೇಲೆ ಕಾರು ಹತ್ತಿಸಿದ ಚಾಲಕ!

Parenting Tips
ಶಿಕ್ಷಣ1 hour ago

Parenting Tips: ಕಾಲೇಜಿಗೆ ಹೊರಡಲು ಸಿದ್ಧವಾಗಿರುವ ಮಕ್ಕಳಿಗೆ ಪೋಷಕರು ತಿಳಿಸಲೇಬೇಕಾದ ಸಂಗತಿಗಳಿವು!

ದಶಮುಖ back to school
ಅಂಕಣ1 hour ago

ದಶಮುಖ ಅಂಕಣ: ಮಳೆಯ ನಡುವೆ ಮರಳಿ ಶಾಲೆಗೆ!

T20 World Cup 2024
ಪ್ರಮುಖ ಸುದ್ದಿ2 hours ago

T20 World Cup 2024 : ಗೆಲುವಿನ ಸಂಭ್ರಮದಲ್ಲಿ ಪಾಂಡ್ಯ ಕೆನ್ನೆಗೆ ಮುತ್ತಿಟ್ಟ ನಾಯಕ ರೋಹಿತ್; ಇಲ್ಲಿದೆ ವಿಡಿಯೊ

Railway Rules
Latest2 hours ago

Railway Rules: ರೈಲು ಪ್ರಯಾಣಿಕರು ತಿಳಿದುಕೊಳ್ಳಲೇಬೇಕಾದ ನಿಯಮಗಳು

T20 World Cup 2024
ಪ್ರಮುಖ ಸುದ್ದಿ2 hours ago

T20 World Cup 2024 : ಒಂದೇ ಒಂದು ಸೋಲು ಕಾಣದೆ ವಿಶ್ವ ಕಪ್ ಗೆದ್ದು ಇತಿಹಾಸ ಸೃಷ್ಟಿಸಿದ ಭಾರತ ತಂಡ

karnataka weather Forecast
ಮಳೆ2 hours ago

Karnataka Weather : ಜುಲೈ ಮೊದಲ ವಾರ ಮತ್ತಷ್ಟು ಅಬ್ಬರಿಸಲಿದೆ ಗುಡುಗು ಸಹಿತ ಮಳೆ!

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka weather Forecast
ಮಳೆ16 hours ago

Karnataka Weather : ಮಳೆಗೆ ಸ್ಕಿಡ್‌ ಆಗಿ ಹೇಮಾವತಿ ನದಿಗೆ ಹಾರಿದ ಕಾರು; ಕರಾವಳಿಗೆ ಎಚ್ಚರಿಕೆ ಕೊಟ್ಟ ತಜ್ಞರು

karnataka Rain
ಮಳೆ22 hours ago

Karnataka Rain: ಭಾರಿ ಮಳೆಗೆ ಮನೆಗಳ ಗೋಡೆ ಕುಸಿತ; ಕೂದಲೆಳೆ ಅಂತರದಲ್ಲಿ ವೃದ್ಧ ಪಾರು

karnataka Weather Forecast
ಮಳೆ2 days ago

Karnataka Weather : ಅಬ್ಬಬ್ಬಾ.. ಮುಲ್ಕಿಯಲ್ಲಿ 30 ಸೆಂ.ಮೀ ಮಳೆ ದಾಖಲು; ವಾರಾಂತ್ಯದಲ್ಲೂ ಭಾರಿ ವರ್ಷಧಾರೆ

karnataka Rain
ಮಳೆ2 days ago

Karnataka Rain : ಭಾರಿ ಮಳೆಗೆ ಪಾತಾಳ ಸೇರಿದ ಬಾವಿ; ಅಲೆಗಳ ಹೊಡೆತಕ್ಕೆ ಸಮುದ್ರಪಾಲಾದ ಮನೆ

Karnataka Weather Forecast
ಮಳೆ3 days ago

Karnataka Weather : ಭಾರಿ ಮಳೆ ಹಿನ್ನೆಲೆ ದಕ್ಷಿಣ ಕನ್ನಡಕ್ಕೆ ರೆಡ್ ಅಲರ್ಟ್; ಶುಕ್ರವಾರವೂ ಶಾಲೆಗಳಿಗೆ ರಜೆ ಘೋಷಣೆ

karnataka Weather Forecast
ಮಳೆ3 days ago

Karnataka Weather : ಭಾರಿ ಮಳೆಗೆ ಸೇತುವೆಯಿಂದ ಹೊಳೆಗೆ ಬಿದ್ದ ಕಾರು; ಮರ ಹಿಡಿದು ಪ್ರಾಣ ಉಳಿಸಿಕೊಂಡ ಸವಾರರು

Heart Attack
ಕೊಡಗು3 days ago

Heart Attack : ಕೊಡಗಿನಲ್ಲಿ ಹೃದಯಾಘಾತಕ್ಕೆ ಯುವತಿ ಬಲಿ; ಹೆಚ್ಚಾಯ್ತು ಅಲ್ಪಾಯುಷ್ಯದ ಭಯ

karnataka Rains Effected
ಮಳೆ3 days ago

Karnataka Rain : ಧಾರಾಕಾರ ಮಳೆಗೆ ಸಡಿಲಗೊಂಡ ಗುಡ್ಡಗಳು; ಧರೆ ಕುಸಿದು ಮಣ್ಣಿನಡಿ ಸಿಲುಕಿದ ಇಬ್ಬರು ಮಕ್ಕಳು

karnataka Weather Forecast
ಮಳೆ6 days ago

Karnataka Weather : ಕರಾವಳಿಯಲ್ಲಿ ಮುಂದುವರಿದ ವರುಣಾರ್ಭಟ; ಸಾಂಪ್ರದಾಯಿಕ ಮೀನುಗಾರಿಕೆಗೂ ಬ್ರೇಕ್

karnataka weather Forecast
ಮಳೆ1 week ago

Karnataka Weather : ರಭಸವಾಗಿ ಹರಿಯುವ ನೀರಲ್ಲಿ ಸಿಲುಕಿದ ಬೊಲೆರೋ; ಬಿರುಗಾಳಿ ಸಹಿತ ಮಳೆ ಎಚ್ಚರಿಕೆ

ಟ್ರೆಂಡಿಂಗ್‌