KempeGowda Jayanti: ಬೆಂಗಳೂರು ವಿಶ್ವಮಟ್ಟದಲ್ಲಿ ಖ್ಯಾತಿ ಪಡೆಯಲು ಕೆಂಪೇಗೌಡರು ಕಾರಣ: ಸಿದ್ದರಾಮಯ್ಯ - Vistara News

ಕರ್ನಾಟಕ

KempeGowda Jayanti: ಬೆಂಗಳೂರು ವಿಶ್ವಮಟ್ಟದಲ್ಲಿ ಖ್ಯಾತಿ ಪಡೆಯಲು ಕೆಂಪೇಗೌಡರು ಕಾರಣ: ಸಿದ್ದರಾಮಯ್ಯ

KempeGowda Jayanti: ಕೆಂಪೇಗೌಡರಿಗೆ ಬಹಳ ದೂರ ದೃಷ್ಟಿ ಇತ್ತು. ಯಾರಿಗೆ ದೂರದೃಷ್ಟಿ ಇರುವುದಿಲ್ಲವೋ ಯಾರಿಗೆ ಕನಸ್ಸು ಇರುವುದಿಲ್ಲವೋ, ಅಂತಹವರು ರಾಜ್ಯವನ್ನು ಉತ್ತಮವಾಗಿ ಆಳ್ವಿಕೆ ಮಾಡಲು ಸಾಧ್ಯವಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

VISTARANEWS.COM


on

KempeGowda Jayanti at Hassan
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಹಾಸನ: 2013ಕ್ಕೂ ಮುನ್ನ ಕೆಂಪೇಗೌಡ ಜಯಂತಿಯನ್ನು ಆಚರಣೆ ಮಾಡುತ್ತಿರಲಿಲ್ಲ. ಆಗ ಆಚರಣೆ ಮಾಡಬೇಕು ಎಂದು ತೀರ್ಮಾನ ಮಾಡಿ, ನಿರ್ಮಲಾನಂದನಾಥ ಸ್ವಾಮೀಜಿಗಳನ್ನು ಕೇಳಿದೆವು. ನಂತರ ವಿಧಾನಸೌಧ ಬ್ಯಾಂಕ್ವೆಟ್‌ ಹಾಲ್‌ನಲ್ಲಿ ಮೊದಲು ಜಯಂತಿಯನ್ನು (KempeGowda Jayanti) ಆಚರಣೆ ಮಾಡಿದ್ದೇ ನಾವು. ಬೆಂಗಳೂರು ಸಿಲಿಕಾನ್ ಸಿಟಿ, ಗಾರ್ಡನ್ ಸಿಟಿಯಾಗಿ ಅಂತಾರಾಷ್ಟ್ರೀಯ ಮಟ್ಟದಲ್ಲಿ ಖ್ಯಾತಿ, ಹೆಸರನ್ನು ಮಾಡಿದ್ದರೆ, ಅದಕ್ಕೆ ಬೆಂಗಳೂರು ಕಟ್ಟಿದಂತಹ ಕೆಂಪೇಗೌಡರು ಕಾರಣ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು.

ನಗರದ ಹಳೇ ತಾಲೂಕು ಕಚೇರಿ ಪಕ್ಕದಲ್ಲಿ ಮಂಗಳವಾರ ಆಯೋಜಿಸಿದ್ದ ಕೆಂಪೇಗೌಡ ಜಯಂತಿಯಲ್ಲಿ ಅವರು ಮಾತನಾಡಿ, ಬೆಂಗಳೂರಿನ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಕೆಂಪೇಗೌಡರ ಹೆಸರಿಟ್ಟಿದ್ದು ನಾವೇ, ಕೆಂಪೇಗೌಡರ ಹೆಸರಿನಲ್ಲಿ ಪ್ರಾಧಿಕಾರವನ್ನು ಮಾಡಿದ್ದೂ ನಾವೇ. ಅದಕ್ಕೆ ಐದು ಎಕರೆ ಜಾಗವನ್ನು ಕೊಟ್ಟಿದ್ದು ಕೂಡ ನಾವು. ಇವೆಲ್ಲಾ ಇತಿಹಾಸ, ಯಾರೂ ತಿರುಚುವುದಕ್ಕೆ ಆಗುವುದಿಲ್ಲ. ಕೆಲವರು ಪಠ್ಯಪುಸ್ತಕ ತಿರುಚಿದ ಹಾಗೆ ಇತಿಹಾಸವನ್ನು ತಿರುಚುತ್ತಾರೆ ಎಂದು ಹೇಳಿದರು.

ಇದನ್ನೂ ಓದಿ | Corruption: ಬಿಜೆಪಿ ಸರ್ಕಾರದ 4 ಹಗರಣಗಳ ತನಿಖೆ ನಿಶ್ಚಿತ: ಚಾಮರಾಜನಗರ ಆಕ್ಸಿಜನ್‌ ದುರಂತವೂ ಮರುತನಿಖೆ ಎಂದ ಸಿಎಂ ಸಿದ್ದರಾಮಯ್ಯ

ಕೆಂಪೇಗೌಡರು ಬಹಳ‌ ಕ್ರೀಯಾಶೀಲರು. ವಿಜಯನಗರದ ಕಾಲದಲ್ಲಿ‌ ಬೀದಿಯಲ್ಲಿ ಚಿನ್ನವನ್ನು ಅಳೆಯುತ್ತಿದ್ದರು. ಅದನ್ನು‌ ನೋಡಿದ ಕೆಂಪೇಗೌಡರಿಗೆ ಬೆಂಗಳೂರು ನಗರವನ್ನು ಕಟ್ಟುವುದಕ್ಕೆ ಮನಸ್ಸಾಗುತ್ತದೆ. 1531ರಲ್ಲಿ ಕೆಂಪೇಗೌಡರಿಗೆ ಪಟ್ಟಾಭಿಷೇಕ ಆಯಿತು. ನಂತರ ಬೆಂಗಳೂರನ್ನು ನಾಲ್ಕು ಹೆಬ್ಬಾಗಿಲುಗಳನ್ನಾಗಿ ವಿಭಾಗಿಸಿಕೊಂಡರು. ಹಲಸೂರು,‌ ಕೆಂಗೇರಿ, ಯಶವಂತಪುರ, ಯಲಹಂಕ ಎಂದು ಹೆಬ್ಬಾಗಿಲು ಮಾಡಿಕೊಂಡರು. ಕೆಂಪೇಗೌಡರಿಗೆ ಬಹಳ ದೂರ ದೃಷ್ಟಿ ಇತ್ತು. ಯಾರಿಗೆ ದೂರದೃಷ್ಟಿ ಇರಲ್ಲ, ಯಾರಿಗೆ ಕನಸ್ಸು ಇರುವುದಿಲ್ಲ, ಅವರಿಗೆ ರಾಜ್ಯವನ್ನು ಉತ್ತಮವಾಗಿ ಆಳ್ವಿಕೆ ಮಾಡುವುದಕ್ಕೆ ಸಾಧ್ಯವಿಲ್ಲ ಎಂದು ತಿಳಿಸಿದರು.

ರಾಜ್ಯದಲ್ಲಿ ನಾಡಪ್ರಭು ಕೆಂಪೇಗೌಡರ ಜಯಂತಿಯನ್ನು ರಾಜ್ಯ, ಜಿಲ್ಲಾ ಹಾಗೂ ತಾಲೂಕು ಮಟ್ಟದಲ್ಲಿ ಸರ್ಕಾರದ ವತಿಯಿಂದ ಆಚರಣೆ ಮಾಡಲಾಗುತ್ತಿದೆ. ಹಾಸನದಲ್ಲಿ ರಾಜ್ಯಮಟ್ಟದ ಕಾರ್ಯಕ್ರಮ ಆಯೋಜಿಸಲಾಗಿದ್ದು, ನಾಡಿನ ಎಲ್ಲಾ ಜನರಿಗೆ ಕೆಂಪೇಗೌಡ ಜಯಂತಿಯ ಶುಭಾಶಯಗಳನ್ನ ಕೋರುತ್ತೇನೆ ಎಂದು ಹೇಳಿದರು.

Nirmalanandanatha Swamiji felicitated

ನಿರ್ಮಲಾನಂದನಾಥ ಸ್ವಾಮೀಜಿ ಮಾತನಾಡಿ, ಕೇವಲ ಒಂದು ಸಮುದಾಯಕ್ಕೆ ಸೀಮಿತವಾದ ಕೆಂಪೇಗೌಡ ಜಯಂತಿಯನ್ನು ರಾಜ್ಯ ಸರ್ಕಾರದ ಮೂಲಕ ಸರ್ವ ಸಮುದಾಯ, ಸರ್ವ ಧರ್ಮದವರೂ ಆಚರಣೆ ಮಾಡುವಂತೆ ಮಾಡಿದ ಕೀರ್ತಿ ಸಿಎಂ ಸಿದ್ದರಾಮಯ್ಯನವರಿಗೆ ಸಲ್ಲುತ್ತದೆ. ಬೆಂಗಳೂರಿಗೆ ಸೀಮಿತವಾಗಿದ್ದ ಕೆಂಪೇಗೌಡ ಜಯಂತಿಯನ್ನು ಈಗ ರಾಜ್ಯದ ಎಲ್ಲ ಜಿಲ್ಲೆಗಳಲ್ಲೂ ಮಾಡಲಾಗುತ್ತಿದೆ. ಇದರ ಕೀರ್ತಿಯೂ ಸಿದ್ದರಾಮಯ್ಯ ಅವರಿಗೇ ಸಲ್ಲುತ್ತದೆ. ರಾಜ್ಯದೆಲ್ಲೆಡೆ ಅಲ್ಲ, ಜಗತ್ತಿನೆಲ್ಲೆಡೆ ಈ ಕಾರ್ಯಕ್ರಮ ಆಗುತ್ತಿದೆ. ಈ ದೇಶಕ್ಕೆ ಪ್ರಧಾನಿಯನ್ನು ಕೊಟ್ಟಿದ್ದು ಇದೇ ಜಿಲ್ಲೆಯ ಹರದನಹಳ್ಳಿ ಗ್ರಾಮ ಎಂದು ಹೇಳಿದರು

ಸಹಕಾರ ಸಚಿವ ಕೆ.ಎನ್.ರಾಜಣ್ಣ ಮಾತನಾಡಿ, ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ಕಾರ್ಯಕ್ರಮಕ್ಕೆ ಬಂದಿಲ್ಲ. ಕಾರ್ಯಕ್ರಮದ ಯಶಸ್ಸಿಗಾಗಿ ಪತ್ರ ಬರೆದಿದ್ದಾರೆ, ಅವರಿಗೆ ಅಭಿನಂದನೆ ಸಲ್ಲಿಸುತ್ತೇನೆ. ಬೇಸಾಯವನ್ನು ಅವಲಂಬನೆ ಮಾಡಿರುವ ಸಮುದಾಯ, ಒಕ್ಕಲುತನ ಮಾಡುತ್ತಿರುವ ಎಲ್ಲಾ ಸಮಯದಾಯಗಳು ಆರ್ಥಿಕವಾಗಿ ಸಬಲವಾಗುತ್ತಿಲ್ಲ. ಸಾಲದ ಹೊರೆ ಪ್ರತಿ ವರ್ಷವೂ ಹೆಚ್ಚುತ್ತಿದೆ. ಕೃಷಿಗೆ ಹಾಕುವ ಬಂಡವಾಳವೂ ವಾಪಸ್‌ ಬಾರದ ದಯನೀಯ ಸ್ಥಿತಿಗೆ ರೈತ ತಲುಪುತ್ತಿದ್ದಾನೆ. ಗ್ರಾಮೀಣ ಭಾಗದ ಆರ್ಥಿಕ ಚಟುವಟಿಕೆಗಳು ಹೆಚ್ಚಾಗಬೇಕು. ರೈತ ಸ್ವಾಭಿಮಾನದ ಬದುಕನ್ನು ಕಟ್ಟಿಕೊಳ್ಳಬೇಕು ಎಂದು ಹೇಳಿದರು.

CM Siddaramaiah with Nirmalananda swamiji

ಹಾಸನ ಜಿಲ್ಲೆಯ ಮಣ್ಣು ದೇಶಕ್ಕೆ ಪ್ರಧಾನಿಯನ್ನು ಕೊಟ್ಟಿದೆ. ಈಗಾಗಲೇ ಹಾಸನದಲ್ಲಿ ಏರ್‌ಪೋರ್ಟ್ ಕಾಮಗಾರಿ ನಡೆಯುತ್ತಿದೆ. ಆ ಏರ್‌ಪೋರ್ಟ್‌ಗೆ ಎಚ್.ಡಿ.ದೇವೇಗೌಡರ ಹೆಸರು ಇಡಬೇಕು ಎಂಬ ಬೇಡಿಕೆ ಇದೆ. ಆ ವಿಚಾರಕ್ಕೆ ಸಂಬಂಧಿಸಿದಂತೆ ಸೂಕ್ತ ಸಮಯದಲ್ಲಿ ಸೂಕ್ತ ತೀರ್ಮಾನ ತೆಗೆದುಕೊಳ್ಳುತ್ತೇವೆ ಎಂದು ಹೇಳಿದರು.

ಇದನ್ನೂ ಓದಿ | Congress Guarantee: ಶಕ್ತಿ ಯೋಜನೆ ಎಫೆಕ್ಟ್: ಸಾರಿಗೆ ಇಲಾಖೆಗೆ ಬೂಸ್ಟ್‌; ಸರ್ಕಾರದ ಬೊಕ್ಕಸ ಖಾಲಿ!

ಕನ್ನಡ ಮತ್ತು ಸಂಸ್ಕೃತಿ‌ ಸಚಿವ ಶಿವರಾಜ ತಂಗಡಗಿ, ಶಾಸಕರಾದ ಎಚ್‌.ಪಿ. ಸ್ವರೂಪ್, ಕೆ.ಎಂ.ಶಿವಲಿಂಗೇಗೌಡ, ಸಿ.ಎನ್.ಬಾಲಕೃಷ್ಣ, ಎಚ್.ಕೆ.ಸುರೇಶ್, ಸಿಮೆಂಟ್ ಮಂಜು ಉಪಸ್ಥಿತರಿದ್ದರು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕರ್ನಾಟಕ

Koppala News: ಜಿಲ್ಲೆಯಲ್ಲಿ ಕಾನೂನುಬಾಹಿರ ಚಟುವಟಿಕೆ ತಡೆಯುವಲ್ಲಿ ಜಿಲ್ಲಾಡಳಿತ ವಿಫಲ; ಶಾಸಕ ಜನಾರ್ದನ ರೆಡ್ಡಿ ಆರೋಪ

Koppala News: ಜಿಲ್ಲೆಯಲ್ಲಿ ನಡೆಯುತ್ತಿರುವ ಮಿತಿಮೀರಿದ ಕಾನೂನು ಬಾಹಿರ ಚಟುವಟಿಕೆಗಳನ್ನು ನಿಯಂತ್ರಿಸುವಲ್ಲಿ ಜಿಲ್ಲಾಡಳಿತ ಸಂಪೂರ್ಣ ವಿಫಲವಾಗಿದೆ. ಮುಖ್ಯವಾಗಿ ಜಿಲ್ಲಾಧಿಕಾರಿ, ಜಿಲ್ಲಾ ಎಸ್ಪಿ ಆಡಳಿತ ನಿರ್ವಹಿಸುವಲ್ಲಿ ಪೂರ್ಣ ವಿಫಲರಾಗಿದ್ದಾರೆ ಎಂದು ಶಾಸಕ ಜಿ. ಜನಾರ್ದನ ರೆಡ್ಡಿ ಆರೋಪಿಸಿದ್ದಾರೆ.

VISTARANEWS.COM


on

District administration failed to prevent illegal activities in the district MLA Janardhana Reddy alleges
Koo

ಗಂಗಾವತಿ: ಜಿಲ್ಲೆಯಲ್ಲಿ ನಡೆಯುತ್ತಿರುವ ಮಿತಿಮೀರಿದ ಕಾನೂನು ಬಾಹಿರ ಚಟುವಟಿಕೆಗಳನ್ನು ನಿಯಂತ್ರಿಸುವಲ್ಲಿ ಜಿಲ್ಲಾಡಳಿತ (Koppala News) ಸಂಪೂರ್ಣ ವಿಫಲವಾಗಿದೆ. ಮುಖ್ಯವಾಗಿ ಜಿಲ್ಲಾಧಿಕಾರಿ, ಜಿಲ್ಲಾ ಎಸ್ಪಿ ಆಡಳಿತ ನಿರ್ವಹಿಸುವಲ್ಲಿ ಪೂರ್ಣ ವಿಫಲರಾಗಿದ್ದಾರೆ ಎಂದು ಶಾಸಕ ಜಿ. ಜನಾರ್ದನ ರೆಡ್ಡಿ ಆರೋಪಿಸಿದರು.

ನಗರದಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜಿಲ್ಲೆಯಲ್ಲಿ ಮುಖ್ಯವಾಗಿ ನನ್ನ ಗಂಗಾವತಿ ಮತಕ್ಷೇತ್ರದ ವ್ಯಾಪ್ತಿಯಲ್ಲಿ ಮಿತಿ ಮೀರಿದ ಪ್ರಮಾಣದಲ್ಲಿ ಮಟ್ಕಾ, ಇಸ್ಪೀಟ್ ಜೂಜಾಟ, ಅಕ್ರಮ ಮರಳು ಸಾಗಾಣಿಕೆ, ಮುಖ್ಯವಾಗಿ ಯುವ ಜನರನ್ನು ಬಲಿ ತೆಗೆದುಕೊಳ್ಳುತ್ತಿರುವ ಡ್ರಗ್ಸ್ ಮಾಫಿಯ ಜೋರಾಗಿದೆ.

ಇದನ್ನೂ ಓದಿ: Job Recruitment: ಬ್ಯಾಂಕ್ ಆಫ್ ಬರೋಡಾದಲ್ಲಿ 627 ಹುದ್ದೆಗಳಿಗೆ ಅರ್ಜಿ ಆಹ್ವಾನ; 55 ಲಕ್ಷದವರೆಗೆ ಸಂಬಳ!

ಯುವ ಅಧಿಕಾರಿಗಳಾದ ಜಿಲ್ಲಾಧಿಕಾರಿ ನಲೀನ್ ಅತುಲ್, ಎಸ್ಪಿ ಯಶೋಧಾ ಒಂಟಗೋಡಿ ಅವರು ಉತ್ತಮ ಆಡಳಿತ ನೀಡುವ ವಿಶ್ವಾಸವಿತ್ತು. ಆದರೆ ಕಾನೂನು ಬಾಹಿರ ಕೃತ್ಯ ನಿಯಂತ್ರಣಕ್ಕೆ ಬರುತ್ತಿಲ್ಲ. ಹೀಗಾಗಿ ಗಂಗಾವತಿ ಉಪ ವಿಭಾಗದ ಎಲ್ಲಾ ಪೊಲೀಸ್ ಅಧಿಕಾರಿಗಳ ಸಾಮೂಹಿಕ ವರ್ಗಾವಣೆಯಂತ ಪ್ರಕ್ರಿಯೆ ನಡೆಯಬೇಕು.

ಕಾನೂನು ಬಾಹಿರ ಕೃತ್ಯಗಳಿಗೆ ಕಡಿವಾಣ ಹಾಕಬೇಕಿದ್ದ ಎಸ್ಪಿ ಯಶೋಧಾ ಒಂಟಗೋಡಿ ಅವರ ನೇತೃತ್ವದಲ್ಲಿನ ಪೊಲೀಸ್ ಇಲಾಖೆ ಸಂಪೂರ್ಣ ವೈಫಲ್ಯ ಅನುಭವಿಸುತ್ತಿದೆ. ಪರಿಣಾಮ ಕಾನೂನು ಬಾಹಿರ ಚಟುವಟಿಕೆಗಳು ನಿಯಂತ್ರಣಕ್ಕೆ ಬಾರದಂತಾಗಿವೆ ಎಂದು ಆರೋಪಿಸಿದರು.

ಒಂದು ವಾರದ ಗಡುವು

ನನ್ನ ಕ್ಷೇತ್ರದಲ್ಲಿ ನಡೆಯುತ್ತಿರುವ ಮಿತಿಮೀರಿದ ಕಾನೂನು ಬಾಹಿರ ಚಟುವಟಿಕೆಗಳು ಮತ್ತು ನಿಯಂತ್ರಿಸುವಲ್ಲಿ ವಿಫಲವಾಗಿರುವ ಪೊಲೀಸರ ಬಗ್ಗೆ ಬಗ್ಗೆ ಐಜಿ, ಡಿಜಿ ಸೇರಿದಂತೆ ಗೃಹ ಇಲಾಖೆ ಕಾರ್ಯದರ್ಶಿ ಮತ್ತು ಸಚಿವರ ಗಮನಕ್ಕೆ ತರಲಾಗುವುದು.

ಇದನ್ನೂ ಓದಿ: NEETPG 2024 : ಜೂ.23ಕ್ಕೆ ನೀಟ್‌ ಪಿಜಿ ಪರೀಕ್ಷೆ; ನಾಳೆಯಿಂದಲೇ ಪ್ರವೇಶ ಪತ್ರ ಬಿಡುಗಡೆ

ಕ್ಷೇತ್ರದಲ್ಲಿ ನಡೆಯುತ್ತಿರುವ ಕಾನೂನು ಬಾಹಿರ ಚಟುವಟಿಕೆಗಳನ್ನು ಕೂಡಲೆ ನಿಯಂತ್ರಿಸಲು ಪೊಲೀಸ್ ಇಲಾಖೆ ಮುಂದಾಗಬೇಕು, ಇದಕ್ಕಾಗಿ ಒಂದು ವಾರದ ಗಡುವು ನೀಡಲಾಗುವುದು. ನಿಯಂತ್ರಣ ಸಾಧ್ಯವಾಗದೇ ಹೋದಲ್ಲಿ ಸಾವಿರಾರು ಜನರೊಂದಿಗೆ ಜಿಲ್ಲಾಡಳಿತ ಭವನದ ಮುಂದೆ ಪ್ರತಿಭಟನೆ ನಡೆಸಲಾಗುವುದು ಎಂದು ಶಾಸಕ ಜಿ. ಜನಾರ್ದನ ರೆಡ್ಡಿ ಎಚ್ಚರಿಕೆ ನೀಡಿದರು.

Continue Reading

ಕರ್ನಾಟಕ

HD Kumaraswamy: ಕೊಬ್ಬರಿಗೆ 16-18 ಸಾವಿರ ಬೆಂಬಲ ಬೆಲೆ ಕೊಡಿಸುವೆ: ರೈತರಿಗೆ ಎಚ್‌ಡಿಕೆ ಭರವಸೆ

HD Kumaraswamy: ರೈತರನ್ನು ಹೇಗೆ ಉಳಿಸಬೇಕು ಎಂಬುವುದೇ ನನ್ನ ಯೋಚನೆ. ನಾನು ಕೃಷಿ ಸಚಿವ ಅಲ್ಲದೇ ಇರಬಹುದು, ಆದರೂ ಕೊಬ್ಬರಿ ಬೆಂಬಲ ಬೆಲೆ ಏರಿಸಲು ಅಗತ್ಯ ಕ್ರಮಕ್ಕೆ ಯತ್ನಿಸುವುದಾಗಿ ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ ತಿಳಿಸಿದ್ದಾರೆ.

VISTARANEWS.COM


on

HD Kumaraswamy
Koo

ತುಮಕೂರು: ಕೇಂದ್ರದಲ್ಲಿ ಕೊಬ್ಬರಿ ಬೆಂಬ ಬೆಲೆ ನಿರ್ಧಾರಕ್ಕೆ ಮೂರು ನಿಯಮ ಇದೆ. ನನಗೆ ಎರಡ್ಮೂರು ತಿಂಗಳು ಸಮಯ ಕೊಡಿ, ಕೊಬ್ಬರಿಗೆ‌ (ಕ್ವಿಂಟಾಲ್) ಕನಿಷ್ಠ 16-18 ಸಾವಿರ ಬೆಂಬಲ ಬೆಲೆ ಕೊಡಿಸಿದಾಗಲೇ ನನಗೆ ಸಮಾಧಾನ. ರೈತರು ಸಾಲ ಮಾಡಿ ಆತ್ಮಹತ್ಯೆ ಮಾಡಿಕೊಳ್ಳೋದು‌ ಹೆಚ್ಚಾಗಿದೆ. ರೈತರನ್ನು ಹೇಗೆ ಉಳಿಸಬೇಕು ಎಂಬುವುದೇ ನನ್ನ ಯೋಚನೆ. ನಾನು ಕೃಷಿ ಸಚಿವ ಅಲ್ಲದೇ ಇರಬಹುದು, ಎರಡ್ಮೂರು ತಿಂಗಳಲ್ಲಿ ಬೇರೆ ಇಲಾಖೆಯವರು ಪರಿಚಯ ಆಗುತ್ತಾರೆ. ಆಗ ರಾಜ್ಯದ ರೈತರಿಗೆ ಅನುಕೂಲ ಆಗುವ ಕಾರ್ಯಕ್ರಮ ತರುತ್ತೇನೆ ಎಂದು ಕೇಂದ್ರ ಉಕ್ಕು ಮತ್ತು ಬೃಹತ್‌ ಕೈಗಾರಿಕಾ ಸಚಿವ ಎಚ್‌.ಡಿ.ಕುಮಾರಸ್ವಾಮಿ (HD Kumaraswamy) ಭರವಸೆ ನೀಡಿದರು.

ನಗರದಲ್ಲಿ ಆಯೋಜಿಸಿದ್ದ ಅಭಿನಂದನಾ ಸಮಾರಂಭದಲ್ಲಿ ಮಾತನಾಡಿದ ಅವರು, ನನಗೆ ಕೇಂದ್ರದಲ್ಲಿ ಎರಡು ದೊಡ್ಡ ಖಾತೆ ಕೊಟ್ಟಿದ್ದಾರೆ. ಎರಡೂ ತುಂಬಾ ಸೂಕ್ಷ್ಮವಾದ ಖಾತೆಗಳು. ನಾನು ಸೂಕ್ತವಾಗಿ ಕೆಲಸ ಮಾಡಿದರೆ ದೇಶದ ಆರ್ಥಿಕ ಸುಧಾರಣೆ, ಉದ್ಯೋಗ ಸೃಷ್ಟಿಗೆ ಅನುಕೂಲವಾಗಲಿದೆ. ನಾನು ವಿಶ್ರಾಂತಿ ತೆಗೆದುಕೊಳ್ಳದೇ ಸುತ್ತಾಡುತಿದ್ದೇನೆ. ಆದರೆ, ಅಭಿಮಾನಿಗಳನ್ನು ನೋಡಿ ನನ್ನ ಆಯಾಸ ಮರೆಯಾಗುತ್ತದೆ ಎಂದು ಹೇಳಿದರು.

ನಾನು ನನ್ನ ಇಲಾಖೆ ಕುರಿತು ಅಧ್ಯಯನ ಮಾಡಬೇಕಾಗಿದೆ. ನಾನು ಕೊನೇ ಬೆಂಚ್‌ ವಿದ್ಯಾರ್ಥಿ ಆಗಿದ್ದೆ. ಸರಿಯಾಗಿ ಓದಿರಲಿಲ್ಲ, ಈಗ ಇಲಾಖೆ ಬಗ್ಗೆ ಓದಿ, ತಿಳಿದುಕೊಳ್ಳಬೇಕಾಗಿದೆ. ನಾನು ನನ್ನ ವೈಯಕ್ತಿಕ ಆಸೆ, ಆಕಾಂಕ್ಷೆಗಳನ್ನು ಪೂರೈಸಲು ರಾಜಕಾರಣಿಯಾಗಿಲ್ಲ. ನಿಖಿಲ್ ಕುಮಾರಸ್ವಾಮಿ ನನ್ನ ಹೆಸರು ಎಲ್ಲೂ ದುರುಪಯೋಗಪಡಿಸಿಕೊಂಡಿಲ್ಲ. ನನ್ನಪ್ಪ ನನಗೆ ಆಸ್ತಿ ಮಾಡಿ ಇಟ್ಟಿಲ್ಲ ಎಂದು ಎಂದೂ ಕೇಳಿಲ್ಲ. 2006 ಮೊದಲ ಇನ್ಸಿಂಗ್ಸ್, ಈಗ ನರೇಂದ್ರ ಮೋದಿ ಅವರ ಸರ್ಕಾರದಲ್ಲಿ ಎರಡನೇ ಇನ್ನಿಂಗ್ಸ್ ಶುರುಮಾಡಿದ್ದೇನೆ ಎಂದು ಹೇಳಿದರು.

ರಾಜ್ಯದ ತೆರಿಗೆ ಹಣ ಕಾಂಗ್ರೆಸ್ ಸ್ವೇಚ್ಛಾಚಾರ ಮಾಡಿಕೊಂಡು ದುರುಪಯೋಗ ಮಾಡುತ್ತಿದೆ. ತಮ್ಮ ಕಾರ್ಯಕರ್ತರನ್ನು ಬೋರ್ಡ್ ಚೇರ್ಮನ್ ಮಾಡಿ ದುಂದು ವೆಚ್ಚ ಮಾಡುತ್ತಿದೆ. ಕರ್ನಾಟಕ ಅತ್ಯಂತ ಸಂಪದ್ಭರಿತ ರಾಜ್ಯ ಆದರೂ ತೈಲ ಬೆಲೆ ಏರಿಕೆ ಮಾಡಿದ್ದಾರೆ. ನಾನು ರಾಜ್ಯದ ರೈತರ ಸಾಲಮನ್ನಾ ಮಾಡಲು ನಿರ್ಧಾರ ಮಾಡಿದ್ದೆ. ಆಗ ಪೆಟ್ರೋಲ್ ಬೆಲೆ ಹೆಚ್ಚಿಸಲು ಉದ್ದೇಶಿಸಿದೆ, ಆದರೆ ಅನುಷ್ಠಾನಕ್ಕೆ ಬಂದಿರಲಿಲ್ಲ. ಸಿಎಂ ಸಿದ್ದರಾಮಯ್ಯ ನಾನು ತೈಲ ಬೆಲೆ ಏರಿಕೆ ಮಾಡಿದ್ದೆ ಎಂದು ಸುಳ್ಳು ಹೇಳುತ್ತಿದ್ದಾರೆ ಎಂದು ಕಿಡಿಕಾರಿದರು.

ಇದನ್ನೂ ಓದಿ | Petrol Diesel Price Hike: ಬಡವರ ಮೇಲೆ ತೆರಿಗೆ ಹಾಕಿ ಬೇರೆ ರಾಜ್ಯಗಳಿಗೆ ಹೋಲಿಸುವುದು ದ್ರೋಹ: ಬೊಮ್ಮಾಯಿ ಆಕ್ರೋಶ

ಗ್ಯಾರಂಟಿ ಯೋಜನೆ ಅನುಷ್ಠಾನಕ್ಕೆ ಹಣ ಕೊರತೆ ಉಂಟಾಗಿದೆ. ಹಾಗಾಗಿ ತೈಲ ಬೆಲೆ ಏರಿಕೆ ಮಾಡಿದ್ದಾರೆ. ಗ್ಯಾರಂಟಿ ಕೊಟ್ಟಿದ್ದು ತಪ್ಪು ಎಂದು ನಾನು ಹೇಳಿಲ್ಲ, ಖಜಾನೆ ಹೇಗೆ ಖಾಲಿ ಆಯ್ತು ಎಂದು ಪ್ರಶ್ನೆ ಮಾಡುತ್ತೇನೆ. ವಾಲ್ಮೀಕಿ ನಿಗಮದಲ್ಲಿನ 180 ಕೋಟಿ ಹಣದಲ್ಲಿ 82 ಕೋಟಿ ರೂಪಾಯಿಯನ್ನು ಲೂಟಿ ಮಾಡಿದ್ದಾರೆ. ಈ ರೀತಿ ಲೂಟಿ ಮಾಡದೇ ಇದ್ದರೆ ಪೆಟ್ರೋಲ್ ಬೆಲೆ ಹೆಚ್ಚಿಗೆ ಮಾಡೋ ಪ್ರಮೇಯ ಬರುತ್ತಿರಲಿಲ್ಲ. ವರ್ಷಕ್ಕೆ 500 ಕೋಟಿ ಸೆಸ್‌ನಿಂದ ಸಂಗ್ರಹ ಆಗಬಹುದು, ಇಷ್ಟು ಹಣಕ್ಕಾಗಿ ಬೆಲೆ ಹೆಚ್ಚಳ ಮಾಡಬೇಕಿತ್ತಾ? ಬೋರ್ಡ್ ಚೇರ್ಮನ್ ನೇಮಕ ವಿಳಂಬ ಮಾಡಿದ್ದಿದ್ದರೆ ಏನಾಗುತ್ತಿತ್ತು. ಅವರಿಗೆ ಗೂಟದ ಕಾರು ಕೊಟ್ಟು ದುಂದು ವೆಚ್ಚ ನಿಲ್ಲಿಸಿದ್ದರೆ ಏನಾಗ್ತಿತ್ತು, ಕಾಡು ಗೊಲ್ಲರನ್ನು ಎಸ್ಟಿಗೆ ಸೇರಿಸುವ ನನ್ನ ಪ್ರಯತ್ನ ಮುಂದುವರಿಸುತ್ತೇನೆ ಎಂದು ಹೇಳಿದರು.

Continue Reading

ಕರ್ನಾಟಕ

Petrol Diesel Price Hike: ಕೇಂದ್ರ ಸರ್ಕಾರ ಹಣ ಕೊಟ್ಟಿದ್ರೆ ತೆರಿಗೆ ಹೆಚ್ಚಿಸುವ ಅಗತ್ಯವೇ ಇರ್ತಿರಲಿಲ್ಲ: ಸಿಎಂ ಸಿದ್ದರಾಮಯ್ಯ

Petrol Diesel Price Hike: ಜಿಎಸ್‌ಟಿಯಲ್ಲಿ ಕೇಂದ್ರ ಸರ್ಕಾರ ಏಕಸ್ವಾಮ್ಯ ಮಾಡಿಕೊಂಡಿರುವುದರಿಂದ ರಾಜ್ಯಗಳ ಪರಮಾಧಿಕಾರವಾಗಿದ್ದ ತೆರಿಗೆ ಸಂಗ್ರಹದ ಅವಕಾಶಗಳು ಇಲ್ಲವಾಗಿವೆ. ಪೆಟ್ರೋಲ್, ಡೀಸೆಲ್ ಮೇಲಿನ ತೆರಿಗೆ ಹೆಚ್ಚಳದ ಬಳಿಕವೂ ಬಿಜೆಪಿ ಆಡಳಿತದ ರಾಜ್ಯಗಳಿಗಿಂತ ನಮ್ಮ ರಾಜ್ಯದಲ್ಲಿ ಇಂಧನ ಬೆಲೆ ಕಡಿಮೆ ಇದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

VISTARANEWS.COM


on

Petrol Diesel Price Hike
Koo

ಬೆಂಗಳೂರು: ಪೆಟ್ರೋಲ್, ಡೀಸೆಲ್ ಮೇಲಿನ ತೆರಿಗೆ (Petrol Diesel Price Hike) ಹೆಚ್ಚಳದ ಬಳಿಕವೂ ಬಿಜೆಪಿ ಆಡಳಿತದ ರಾಜ್ಯಗಳಿಗಿಂತ, ದಕ್ಷಿಣ ಭಾರತದ ರಾಜ್ಯಗಳಿಗಿಂತ ನಮ್ಮ ರಾಜ್ಯದಲ್ಲಿ ಇಂಧನ ಬೆಲೆ ಕಡಿಮೆ ಇದೆ. ತೆರಿಗೆ ಹೆಚ್ಚಳದ ಅನಿವಾರ್ಯತೆಯನ್ನು ಮೋದಿ ಸರ್ಕಾರವೇ ಸೃಷ್ಟಿಸಿದೆ, ರಾಜ್ಯದ ಪಾಲಿನ ಹಣವನ್ನು ಕೊಡದೇ ಇರುವುದರಿಂದ ತೆರಿಗೆ ಹೆಚ್ಚಳ ಮಾಡುವ ಅನಿವಾರ್ಯತೆ ಸೃಷ್ಟಿಯಾಗಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.

ಗೃಹ ಕಚೇರಿ ಕೃಷ್ಣಾದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, 2015ರ ಬಳಿಕ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆ ಅರ್ಧಕ್ಕರ್ಧ ಕಡಿಮೆ ಆದಾಗಲೂ ಅವರ ಲಾಭವನ್ನು ದೇಶದ ಜನರಿಗೆ ನೀಡದೆ, ಮೋದಿ ಸರ್ಕಾರ ಇಂಧನ ಬೆಲೆಯನ್ನು ನಿರಂತರವಾಗಿ ಏರಿಸುತ್ತಾ ಹೋಗಿದ್ದರ ಅಂಕಿ ಅಂಶಗಳನ್ನು ಮುಖ್ಯಮಂತ್ರಿಗಳು ವಿವರಿಸಿದರು.

ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ಮೌಲ್ಯವರ್ಧಿತ ತೆರಿಗೆ ಹೆಚ್ಚಳದಿಂದ ಸಂಗ್ರಹವಾಗುವ ಅಂದಾಜು ಮೂರು ಸಾವಿರ ಕೋಟಿ ರೂಪಾಯಿಗಳು ರಾಜ್ಯದ ಖಜಾನೆಗೆ ಸಂದಾಯವಾಗುತ್ತದೆ. ಆ ಹಣ ಜನರ ಕಲ್ಯಾಣ ಕಾರ್ಯಕ್ರಮಗಳಿಗೆ ವಿನಿಯೋಗವಾಗುತ್ತದೆಯೇ ಹೊರತು ನಮ್ಮ ಜೇಬಿಗೆ ಹೋಗುವುದಿಲ್ಲ ಎಂದರು.

ಇದನ್ನೂ ಓದಿ | Petrol Diesel Price Hike: ಬಡವರ ಮೇಲೆ ತೆರಿಗೆ ಹಾಕಿ ಬೇರೆ ರಾಜ್ಯಗಳಿಗೆ ಹೋಲಿಸುವುದು ದ್ರೋಹ: ಬೊಮ್ಮಾಯಿ ಆಕ್ರೋಶ

ಹಿಂದಿನ ಬಿಜೆಪಿ ಸರ್ಕಾರದಲ್ಲಿ ರಾಜ್ಯದ ಪ್ರತಿಯೊಂದು ಯೋಜನೆಗಳಲ್ಲಿಯೂ ಶೇ. 40 ತೆರಿಗೆ ಹಣ ಬಿಜೆಪಿ ನಾಯಕರ ಜೇಬಿಗೆ ಹೋಗುತ್ತಿತ್ತು. ಈ ರೀತಿ ಅಂದಾಜು ಒಂದೂವರೆ ಲಕ್ಷ ಕೋಟಿ ರೂಪಾಯಿಗಳಷ್ಟು ರಾಜ್ಯದ ಜನರ ಬೆವರಗಳಿಕೆಯ ತೆರಿಗೆ ಹಣವನ್ನು ಈ ಬಿಜೆಪಿ ನಾಯಕರ ತಮ್ಮ ಜೇಬಿಗೆ ತುಂಬಿಸಿಕೊಂಡಿದ್ದಾರೆ ಎಂದು ಆರೋಪಿಸಿದರು.

ಇಂತಹ ಲೂಟಿಕೋರ, ಭ್ರಷ್ಟ, ಜನವಿರೋಧಿ ಬಿಜೆಪಿ ನಾಯಕರಿಗೆ ಜನಕಲ್ಯಾಣಕ್ಕಾಗಿ ಸ್ಪಲ್ಪ ಪ್ರಮಾಣದ ತೆರಿಗೆ ಹೆಚ್ಚಿಸಿದ್ದನ್ನು ಪ್ರಶ್ನಿಸುವ ಯೋಗ್ಯತೆ ಎಲ್ಲಿದೆ ಎಂದು ಪ್ರಶ್ನಿಸಿದರ ಅವರು, ಗ್ಯಾರಂಟಿ ಯೋಜನೆಗಳಿಗಾಗಿ ರಾಜ್ಯ ಸರ್ಕಾರ 60 ಸಾವಿರ ಕೋಟಿ ರೂಪಾಯಿಗಳನ್ನು ವ್ಯಯ ಮಾಡುತ್ತಿದೆ. ಇಷ್ಟೂ ಹಣ ರಾಜ್ಯದ ಎಲ್ಲಾ ಜಾತಿ-ಸಮುದಾಯಗಳ ಬಡವರು ಮತ್ತು ಮಧ್ಯಮ ವರ್ಗದವರಿಗೆ ಹೋಗುತ್ತದೆ. ಸದ್ಯದ ಅಲ್ಪ ಪ್ರಮಾಣದ ಡೀಸೆಲ್-ಪೆಟ್ರೋಲ್ ತೆರಿಗೆ ಹೆಚ್ಚಳದಿಂದ ನಮಗೆ ಹೆಚ್ಚುವರಿಯಾಗಿ ಸಂಪನ್ಮೂಲ ಸಂಗ್ರಹ ಆಗುವುದು ಕೇವಲ 3 ಸಾವಿರ ಕೋಟಿ ರೂಪಾಯಿ ಮಾತ್ರ. ಆದರೆ ಗ್ಯಾರಂಟಿಗಳಿಗೆ ನಾವು ಕೊಡುತ್ತಿರುವುದು 60 ಸಾವಿರ ಕೋಟಿ ರೂಪಾಯಿ. ಹೀಗಾಗಿ ಆರ್.ಅಶೋಕ್ ಅವರ ಪೆದ್ದುತನದ ಮಾತುಗಳಿಗೆ ಅರ್ಥವಿಲ್ಲ. ಆರ್.ಅಶೋಕ್‌ಗೆ ಇದೆಲ್ಲಾ ಅರ್ಥ ಆಗಲ್ಲ , ಅರ್ಥ ಮಾಡಿಕೊಳ್ಳುವ ಸಾಮರ್ಥ್ಯವೂ ಇಲ್ಲ ಎಂದು ವ್ಯಂಗ್ಯವಾಡಿದರು.

ಬರಗಾಲದ ಬಗ್ಗೆ ಪರಿಹಾರ ತೆಗೆದುಕೊಳ್ಳಲು ಸುಪ್ರೀಂ ಕೋರ್ಟಿಗೆ ಹೋಗಬೇಕಾಗಿ ಬಂತು. ಕೋರ್ಟು ಸೂಚನೆ ನೀಡಿದ ನಂತರ 18 ಸಾವಿರ ಕೋಟಿ ಕೇಳಿದರೆ 3454 ಕೋಟಿ ರೂ. ಪರಿಹಾರ ನೀಡಿದ್ದಾರೆ. ಬಿಜೆಪಿಯವರು ಬಡವರು, ದಲಿತರು, ಜನಸಾಮಾನ್ಯರ ಕಾರ್ಯಕ್ರಮಗಳ ಕಲ್ಯಾಣ ಕಾರ್ಯಕ್ರಮಗಳಿಗೆ ವಿರುದ್ಧವಿದ್ದಾರೆ. ಬಸ್‌ನಲ್ಲಿ ಉಚಿತ ಪ್ರಯಾಣ, ತಿಂಗಳಿಗೆ ಎರಡು ಸಾವಿರ ನೀಡಿದರೆ ಅವರ ಆರ್ಥಿಕ ಶಕ್ತಿ ಹೆಚ್ಚಾಗುವುದಿಲ್ಲವೇ? ಉಚಿತ ವಿದ್ಯುತ್‌ ನೀಡಿದರೆ ಅವರಿಗೆ ಉಳಿತಾಯವಾಗುವುದಿಲ್ಲವೇ? ಹೆಚ್ಚುವರಿ ಅಕ್ಕಿ ಕೇಳಿದರೆ, ಕೊಟ್ಟಿಲ್ಲ. ಯಾರಾದರೂ ಮಾತಾಡಿದರೇ? ಎಂದು ಪ್ರಶ್ನಿಸಿದರು.

ಈ ಬೆಲೆ ಏರಿಕೆಯಿಂದ ಸುಮಾರು 3,000 ಕೋಟಿ ರೂ. ಸಂಪನ್ಮೂಲ ದೊರೆಯಲಿದೆ. ಗ್ಯಾರಂಟಿ ಯೋಜನೆಗಳಿಗೆ 60,000 ಕೋಟಿ ರೂ. ಅಗತ್ಯವಿದೆ. ಸರ್ಕಾರ ಪಾಪರ್‌ ಆಗಿದೆ ಎಂದು ವಿರೋಧ ಪಕ್ಷದ ನಾಯಕರು ಹೇಗೆ ಹೇಳುತ್ತಾರೆ? ನಾವು ಯಾರದ್ದಾದರೂ ಸಂಬಳ ನಿಲ್ಲಿಸಿದ್ದೇವೆಯೇ? ಆಯವ್ಯಯದಲ್ಲಿ ಘೋಷಿಸಿದ ಕಾರ್ಯಕ್ರಮಗಳಿಗೆ ಅನುದಾನ ಒದಗಿಸದೇ ಸ್ಥಗಿತ ಗೊಳಿಸಿದ್ದೇವೆಯೇ ಎಂದರು.

ಇದನ್ನೂ ಓದಿ | Rahul Gandhi: ರಾಹುಲ್ ಗಾಂಧಿ ಬಗ್ಗೆ ವಿವಾದಾದ್ಮಕ ವಿಡಿಯೊ; ಯುಟ್ಯೂಬರ್‌ ವಿರುದ್ಧ ಎಫ್‌ಐಆರ್‌

ತೈಲ ಬೆಲೆ ಏರಿಕೆಯನ್ನು ಸಮರ್ಥಿಸಿಕೊಂಡ ಮುಖ್ಯಮಂತ್ರಿಯವರು, ಬೆಲೆ ಏರಿಕೆಯ ಹೊರತಾಗಿಯೂ ರಾಜ್ಯದ ಪೆಟ್ರೋಲ್‌, ಡೀಸೆಲ್‌ ಬೆಲೆ ನೆರೆಯ ರಾಜ್ಯಗಳು ಹಾಗೂ ಬಿಜೆಪಿ ಆಡಳಿತದ ರಾಜ್ಯಗಳಿಗಿಂತ ಕಡಿಮೆ ಎಂದು ಸಮರ್ಥಿಸಿಕೊಂಡರು.

Continue Reading

ಉದ್ಯೋಗ

Job Recruitment: ಕರ್ನಾಟಕ ಗ್ರಾಮೀಣ ಬ್ಯಾಂಕ್‌ನಲ್ಲಿ 586 ಹುದ್ದೆಗಳಿಗೆ ಅರ್ಜಿ ಆಹ್ವಾನ

ಕರ್ನಾಟಕ ಗ್ರಾಮೀಣ ಬ್ಯಾಂಕ್ ನಲ್ಲಿ ರಾಜ್ಯದಾದ್ಯಂತ ಖಾಲಿ ಇರುವ ಆಫೀಸ್ ಅಸಿಸ್ಟೆಂಟ್​, ಆಫೀಸರ್ ಒಟ್ಟು 586 ಹುದ್ದೆಗಳಿಗೆ (Job Recruitment) ಅರ್ಜಿ ಆಹ್ವಾನಿಸಲಾಗಿದ್ದು, ಆಸಕ್ತ ಅಭ್ಯರ್ಥಿಗಳು ಜೂನ್ 27ರೊಳಗಾಗಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಇದಕ್ಕೆ ಸಂಬಂಧಿಸಿದ ನಿಯಮ, ಅರ್ಹತೆ ವಿವರ ಇಂತಿದೆ.

VISTARANEWS.COM


on

By

Job Recruitment
Koo

ಬೆಂಗಳೂರು: ಕರ್ನಾಟಕ (karnataka) ಗ್ರಾಮೀಣ ಬ್ಯಾಂಕ್‌ನಲ್ಲಿ (Karnataka Gramina Bank) ಖಾಲಿ ಇರುವ ಒಟ್ಟು 586 ಆಫೀಸ್ ಅಸಿಸ್ಟೆಂಟ್ (office assistant)​, ಆಫೀಸರ್ (officer) ಹುದ್ದೆಗಳಿಗೆ ನೇಮಕಾತಿಯನ್ನು (Job Recruitment) ಘೋಷಿಸಿದೆ. ಆಸಕ್ತ ಅಭ್ಯರ್ಥಿಗಳು 2024ರ ಜೂನ್ 27ರೊಳಗಾಗಿ ವೆಬ್ ಸೈಟ್ ಮೂಲಕ ಆನ್ ಲೈನ್ ನಲ್ಲಿ ಅರ್ಜಿ ಸಲ್ಲಿಸಬಹುದು. ಬ್ಯಾಂಕಿಂಗ್ ಕ್ಷೇತ್ರದಲ್ಲಿ ಉದ್ಯೋಗ ಹುಡುಕುತ್ತಿರುವ ಆಸಕ್ತರಿಗೆ ಇದೊಂದು ಸುವರ್ಣ ಅವಕಾಶವಾಗಿದ್ದು, ಅಭ್ಯರ್ಥಿಗಳಿಗೆ ಆನ್ ಲೈನ್ ಮೂಲಕ ಮಾತ್ರ ಅರ್ಜಿ ಸಲ್ಲಿಸಲು ಅವಕಾಶವಿದೆ.

ಹುದ್ದೆಯ ವಿವರ

ಕರ್ನಾಟಕ ಗ್ರಾಮೀಣ ಬ್ಯಾಂಕ್‌ನಲ್ಲಿ 386, ಕರ್ನಾಟಕ ವಿಕಾಸ್ ಗ್ರಾಮೀಣ ಬ್ಯಾಂಕ್ 200 ಸೇರಿ ಒಟ್ಟು 586 ಹುದ್ದೆಗಳಲ್ಲಿ ಆಫೀಸ್ ಅಸಿಸ್ಟೆಂಟ್ 200, ಆಫೀಸರ್ ಸ್ಕೇಲ್-1(ಅಸಿಸ್ಟೆಂಟ್ ಮ್ಯಾನೇಜರ್) 386 ಸ್ಥಾನಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಕರ್ನಾಟಕದಾದ್ಯಂತ ಹುದ್ದೆಗಳು ಖಾಲಿ ಇದೆ. ಆಯ್ಕೆಯಾಗುವ ಅಭ್ಯರ್ಥಿಗಳಿಗೆ ವೇತನ ನಿಗದಿಪಡಿಸಿಲ್ಲ. ಅನುಭವ ಮತ್ತು ಕಾರ್ಯಕ್ಷಮತೆಯ ಆಧಾರದ ಮೇಲೆ ಸಂಬಳ ಕೊಡಲಾಗುತ್ತದೆ.

ಅರ್ಹತೆ ಏನು?

ಕರ್ನಾಟಕ ಗ್ರಾಮೀಣ ಬ್ಯಾಂಕ್ ನೇಮಕಾತಿ ಅಧಿಸೂಚನೆ ಪ್ರಕಾರ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ಪದವಿ ಪೂರ್ಣಗೊಳಿಸಿರಬೇಕು. ಆಫೀಸ್ ಅಸಿಸ್ಟೆಂಟ್ ಹುದ್ದಗೆ 18ರಿಂದ 28 ವರ್ಷ ಮತ್ತು ಆಫೀಸರ್ ಸ್ಕೇಲ್-1 (ಅಸಿಸ್ಟೆಂಟ್ ಮ್ಯಾನೇಜರ್) ಹುದ್ದೆಗೆ 18ರಿಂದ 30 ವರ್ಷದೊಳಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಎಸ್ ಸಿ ಮತ್ತು ಎಸ್ ಟಿ ಅಭ್ಯರ್ಥಿ ಗಳಿಗೆ 5 ವರ್ಷ, ಒಬಿಸಿ (ಎನ್ ಸಿಎಲ್ ) ಅಭ್ಯರ್ಥಿ ಗಳಿಗೆ 3 ವರ್ಷ, ಪಿಡಬ್ಲ್ಯೂ ಬಿಡಿ ಅಭ್ಯರ್ಥಿಗಳಿಗೆ 10 ವರ್ಷ ಸಡಿಲಿಕೆ ಇದೆ.

ಅರ್ಜಿ ಶುಲ್ಕ

ಆಫೀಸರ್ (ಸ್ಕೇಲ್ I) ಹುದ್ದೆಗಳಿಗೆ ಎಸ್‌ಸಿ ಮತ್ತು ಎಸ್ ಟಿ, ಪಿಡಬ್ಲ್ಯೂ ಬಿಡಿ ಅಭ್ಯರ್ಥಿಗಳಿಗೆ 175 ರೂ., ಇತರ ಅಭ್ಯರ್ಥಿಗಳಿಗೆ 850 ರೂ. ಶುಲ್ಕ ವಿಧಿಸಲಾಗಿದೆ. ಆಫೀಸ್ ಅಸಿಸ್ಟೆಂಟ್ (ಮಲ್ಟಿಪರ್ಪಸ್​) ಹುದ್ದೆಗಳಿಗೆ ಎಸ್ ಸಿ/ಎಸ್ ಟಿ/ಪಿಡಬ್ಲ್ಯೂ ಬಿಡಿ/ಇಎಸ್ ಎಂ/ಡಿಇಎಸ್ ಎಂ ಅಭ್ಯರ್ಥಿಗಳಿಗೆ 175 ರೂ., ಇತರ ಅಭ್ಯರ್ಥಿಗಳಿಗೆ 850 ರೂ. ಶುಲ್ಕ ವಿಧಿಸಲಾಗಿದ್ದು, ಆನ್‌ಲೈನ್ ಮೂಲಕ ಪಾವತಿ ಮಾಡಬೇಕಾಗುತ್ತದೆ.

ಇದನ್ನೂ ಓದಿ: Job Recruitment: ಬ್ಯಾಂಕ್ ಆಫ್ ಬರೋಡಾದಲ್ಲಿ 627 ಹುದ್ದೆಗಳಿಗೆ ಅರ್ಜಿ ಆಹ್ವಾನ; 55 ಲಕ್ಷದವರೆಗೆ ಸಂಬಳ!

ಅರ್ಜಿ ಪ್ರಕ್ರಿಯೆ

ಅಭ್ಯರ್ಥಿಗಳು ಆನ್​ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ನೇರವಾಗಿ ನೋಂದಣಿ ಮಾಡಿಕೊಳ್ಳಲು ವೆಬ್ ಸೈಟ್ https://ibpsonline.ibps.in/rrb13oamay24/ ಅನ್ನು ಕ್ಲಿಕ್ ಮಾಡಿ.

ಆಯ್ಕೆ ಪ್ರಕ್ರಿಯೆ

ಆಯ್ಕೆ ಪ್ರಕ್ರಿಯೆಯಲ್ಲಿ ಮೊದಲು ಅರ್ಹ ಅಭ್ಯರ್ಥಿಗಳಿಗೆ ಪೂರ್ವ ಭಾವಿ ಪರೀಕ್ಷೆ ನಡೆಸಲಾಗುತ್ತದೆ. ಬಳಿಕ ಮುಖ್ಯ ಪರೀಕ್ಷೆ ನಡೆಸಿ ಆಯ್ಕೆಯಾದವರಿಗೆ ಸಂದರ್ಶನ ನಡೆಸಲಾಗುತ್ತದೆ. ಉತ್ತಮ ಪ್ರದರ್ಶನ ನೀಡಿದ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.

Continue Reading
Advertisement
District administration failed to prevent illegal activities in the district MLA Janardhana Reddy alleges
ಕರ್ನಾಟಕ4 mins ago

Koppala News: ಜಿಲ್ಲೆಯಲ್ಲಿ ಕಾನೂನುಬಾಹಿರ ಚಟುವಟಿಕೆ ತಡೆಯುವಲ್ಲಿ ಜಿಲ್ಲಾಡಳಿತ ವಿಫಲ; ಶಾಸಕ ಜನಾರ್ದನ ರೆಡ್ಡಿ ಆರೋಪ

Pushpa 2
ಸಿನಿಮಾ8 mins ago

Pushpa 2: ಪುಷ್ಪ 2 ಸಿನಿಮಾ ಬಿಡುಗಡೆ 5 ತಿಂಗಳು ಮುಂದೂಡಿಕೆ; ಇಲ್ಲಿದೆ ಹೊಸ ಡೇಟ್

HD Kumaraswamy
ಕರ್ನಾಟಕ28 mins ago

HD Kumaraswamy: ಕೊಬ್ಬರಿಗೆ 16-18 ಸಾವಿರ ಬೆಂಬಲ ಬೆಲೆ ಕೊಡಿಸುವೆ: ರೈತರಿಗೆ ಎಚ್‌ಡಿಕೆ ಭರವಸೆ

Narendra Modi
ದೇಶ38 mins ago

ಪೋಪ್‌-ಮೋದಿ ಭೇಟಿಯನ್ನು ಲೇವಡಿ ಮಾಡಲು ಹೋದ ಕಾಂಗ್ರೆಸ್‌ಗೆ ಮುಖಭಂಗ; ಕ್ರೈಸ್ತರ ಕ್ಷಮೆ ಕೇಳಿದ್ದೇಕೆ?

Health Tips Kannada
Latest45 mins ago

Health Tips Kannada: ನೆನಪಿಡಿ, ನಾಲಿಗೆ ಬಯಸುವ ಆಹಾರಗಳನ್ನೆಲ್ಲ ನಿಮ್ಮ ಮಿದುಳು ಬಯಸದು!

Petrol Diesel Price Hike
ಕರ್ನಾಟಕ1 hour ago

Petrol Diesel Price Hike: ಕೇಂದ್ರ ಸರ್ಕಾರ ಹಣ ಕೊಟ್ಟಿದ್ರೆ ತೆರಿಗೆ ಹೆಚ್ಚಿಸುವ ಅಗತ್ಯವೇ ಇರ್ತಿರಲಿಲ್ಲ: ಸಿಎಂ ಸಿದ್ದರಾಮಯ್ಯ

International Yoga Day 2024
Latest1 hour ago

International Yoga Day 2024: ಕುತ್ತಿಗೆ ನೋವಿನ ನಿವಾರಣೆಗೆ ಯಾವ ಆಸನಗಳು ಸೂಕ್ತ?

Job Recruitment
ಉದ್ಯೋಗ1 hour ago

Job Recruitment: ಕರ್ನಾಟಕ ಗ್ರಾಮೀಣ ಬ್ಯಾಂಕ್‌ನಲ್ಲಿ 586 ಹುದ್ದೆಗಳಿಗೆ ಅರ್ಜಿ ಆಹ್ವಾನ

Rahul Gandhi
ದೇಶ2 hours ago

Rahul Gandhi: ರಾಯ್‌ಬರೇಲಿಯನ್ನೇ ಆಯ್ಕೆ ಮಾಡಿಕೊಂಡ ರಾಹುಲ್‌ ಗಾಂಧಿ; ವಯನಾಡಿನಲ್ಲಿ ಪ್ರಿಯಾಂಕಾ ಸ್ಪರ್ಧೆ!

Rahul Gandhi
ಕರ್ನಾಟಕ2 hours ago

Rahul Gandhi: ರಾಹುಲ್ ಗಾಂಧಿ ಬಗ್ಗೆ ವಿವಾದಾದ್ಮಕ ವಿಡಿಯೊ; ಯುಟ್ಯೂಬರ್‌ ವಿರುದ್ಧ ಎಫ್‌ಐಆರ್‌

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Actor Darshan
ಮೈಸೂರು8 hours ago

Actor Darshan : ಕೊಲೆ ಕೇಸ್‌ ಬೆನ್ನಲ್ಲೇ ನಟ ದರ್ಶನ್‌ ಸೇರಿ ಪತ್ನಿ ವಿಜಯಲಕ್ಷ್ಮಿಗೆ ಬಾರ್ ಹೆಡೆಡ್ ಗೂಸ್ ಸಂಕಷ್ಟ!

Bakrid 2024
ಬೆಂಗಳೂರು9 hours ago

Bakrid 2024 : ಮತ್ತೊಂದು ಧರ್ಮವನ್ನೂ ಪ್ರೀತಿಸಿ; ಬಕ್ರೀದ್‌ ಪ್ರಾರ್ಥನೆಯಲ್ಲಿ ಸಿಎಂ ಸಿದ್ದರಾಮಯ್ಯ ಕರೆ

Renukaswamy murder case The location of the accused is complete
ಸಿನಿಮಾ1 day ago

Renuka Swamy murder : ಭೀಕರವಾಗಿ ಕೊಂದರೂ ಆರೋಪಿಗಳಿಗೆ ಕಾಡುತ್ತಿಲ್ವಾ ಪಾಪಪ್ರಜ್ಞೆ? ನಗುತ್ತಲೇ ಹೊರಬಂದ ಪವಿತ್ರಾ ಗೌಡ, ಪವನ್‌

Renuka swamy murder
ಚಿತ್ರದುರ್ಗ1 day ago

Renuka swamy Murder : ರೇಣುಕಾಸ್ವಾಮಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ ಬಾಳೆಹೊನ್ನೂರು ಶ್ರೀಗಳು

Vijayanagara News
ವಿಜಯನಗರ1 day ago

Vijayanagara News : ಕೆಲಸಕ್ಕೆ ಚಕ್ಕರ್, ಸಂಬಳಕ್ಕೆ ಹಾಜರ್! ಹಾರಕನಾಳು ಗ್ರಾಪಂ ಪಿಡಿಓಗಾಗಿ ಗ್ರಾಮಸ್ಥರ ಹುಡುಕಾಟ

Actor Darshan
ಯಾದಗಿರಿ2 days ago

Actor Darshan : ಬಾಸ್‌ ಅಂತ ಯಾಕ್‌ ಬಕೆಟ್‌ ಹಿಡಿಯುತ್ತೀರಾ ಅಂದವನಿಗೆ ದರ್ಶನ್ ಅಭಿಮಾನಿಯಿಂದ ಜೀವ ಬೆದರಿಕೆ!

Karnataka Weather Forecast
ಮಳೆ3 days ago

Karnataka Weather : ಕರಾವಳಿ, ಉತ್ತರ ಒಳನಾಡಿನಲ್ಲಿ ವರುಣಾರ್ಭಟ; ನಾಳೆಯು ಹಲವೆಡೆ ಸಿಕ್ಕಾಪಟ್ಟೆ ಮಳೆ

Actor Darshan
ಬೆಂಗಳೂರು3 days ago

Actor Darshan : ರೇಣುಕಾಸ್ವಾಮಿಯನ್ನು ಕಿಡ್ನ್ಯಾಪ್ ಮಾಡಿ ಕರೆತರುವ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆ!

actor Darshan
ಬೆಂಗಳೂರು3 days ago

Actor Darshan : ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ಮತ್ತಿಬ್ಬರು ಸರೆಂಡರ್‌; ಆರೋಪಿಗಳ ಸಂಖ್ಯೆ 16ಕ್ಕೆ ಏರಿಕೆ

Actor Darshan
ಸಿನಿಮಾ3 days ago

Actor Darshan : ರೇಣುಕಾಸ್ವಾಮಿ ‌ಮೃತದೇಹ ಬಿಸಾಡಿ ಬಳಿಕ ಸಾಕ್ಷ್ಯಇದ್ದ 2 ಮೊಬೈಲ್‌ಗಳನ್ನು ಮೋರಿಗೆ ಎಸೆದ್ರಾ ಆರೋಪಿಗಳು?

ಟ್ರೆಂಡಿಂಗ್‌