ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ನಿರ್ಮಾಣವಾದ, ನಾಡಪ್ರಭು ಕೆಂಪೇಗೌಡ 108 ಅಡಿ ಎತ್ತರದ ಪ್ರಗತಿ ಪ್ರತಿಮೆಯನ್ನು ಇಂದು ಪ್ರಧಾನಿ ನರೇಂದ್ರ ಮೋದಿ ಅನಾವರಣಗೊಳಿಸಿದ್ದಾರೆ. 2020ರಲ್ಲಿ ಅಂದಿನ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರು ಈ ಪ್ರತಿಮೆ ನಿರ್ಮಾಣಕ್ಕೆ ಶಂಕುಸ್ಥಾಪಿಸಿದ್ದರು. ಎರಡು ವರ್ಷಗಳ ಬಳಿಕ ಇದೀಗ ಉದ್ಘಾಟನೆಗೊಂಡಿದೆ. ನಗರ ಸಂಸ್ಥಾಪಕರ ಪ್ರತಿಮೆಗಳಲ್ಲೆಲ್ಲಾ ಅತೀ ಎತ್ತರದ ಕಂಚಿನ ಪ್ರತಿಮೆ ಇದಾಗಿದ್ದು, 64 ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಿಸಲಾಗಿದೆ. 218 ಟನ್ ತೂಕವಿದ್ದು, ಅದರಲ್ಲಿ ಪ್ರತಿಮೆಯ ಖಡ್ಗವೇ 4 ಟನ್ ತೂಕವಿದೆ.
ಇಂಥ ವಿಶೇಷವಾದ ಪ್ರತಿಮೆಯನ್ನು ಇಂದು ಪ್ರಧಾನಿ ನರೇಂದ್ರ ಮೋದಿ ಉದ್ಘಾಟನೆ ಮಾಡುವ ವೇಳೆ ರಾಜ್ಯ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಆದಿಚುಂಚನಗಿರಿ ಮಠದ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ, ತುಮಕೂರಿನ ಶಿರಾ ಸ್ಫಟಿಕಪುರಿ ಮಹಾಸಂಸ್ಥಾನದ ಶ್ರೀ ನಂಜಾವಧೂತ ಸ್ವಾಮೀಜಿ, ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ, ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್, ಸಚಿವರಾದ ಸುಧಾಕರ್, ಅಶ್ವತ್ಥನಾರಾಯಣ್ ಇತರರು ಈ ಸಂದರ್ಭದಲ್ಲಿ ಇದ್ದರು. ಕೆಂಪೇಗೌಡ ಪ್ರತಿಮೆ ಅನಾವರಣ ಸಂದರ್ಭದ ಫೋಟೋಗಳು ಇಲ್ಲಿವೆ.
ಇದನ್ನೂ ಓದಿ: Modi in Bengaluru | ಆದಿಚುಂಚನಗಿರಿ ಶ್ರೀಗಳ ಮಾತಿಗೆ ಮೋದಿ ಮೆಚ್ಚುಗೆ; ಕೈ ಮುಗಿದು ಚಪ್ಪಾಳೆ