Site icon Vistara News

68ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ವಿಜೇತರಿಗೆ ಕೆಎಫ್‌ಸಿಸಿ ಸನ್ಮಾನ

ಕೆಎಫ್‌ಸಿಸಿ

ಬೆಂಗಳೂರು: 68ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪಡೆದ ವಿಜೇತರಿಗೆ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ (ಕೆಎಫ್‌ಸಿಸಿ) ವತಿಯಿಂದ ಅಧ್ಯಕ್ಷ ಭಾ.ಮಾ.ಹರೀಶ್ ನೇತೃತ್ವದಲ್ಲಿ ಸೋಮವಾರ ಸನ್ಮಾನ ಮಾಡಲಾಯಿತು.

ಡೊಳ್ಳು ಸಿನಿಮಾ ನಿರ್ಮಾಪಕ ಪವನ್ ಒಡೆಯರ್ ಹಾಗೂ ಅಪೇಕ್ಷಾ ಪುರೋಹಿತ್ ದಂಪತಿ, ಚಿತ್ರದ ನಿರ್ದೇಶಕ ಸಾಗರ್ ಪುರಾಣಿಕ್ ಹಾಗೂ ‘ತಲೆದಂಡ’ ಚಿತ್ರದ ನಿರ್ಮಾಪಕಿ ಡಾ. ಹೇಮಾಮಾಲಿನಿ ಕೃಪಾಕರ್ ಸೇರಿ ಪ್ರಶಸ್ತಿ ವಿಜೇತರನ್ನು ಸನ್ಮಾನಿಸಲಾಯಿತು.

68ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಯಲ್ಲಿ ಕನ್ನಡಕ್ಕೆ ಮೂರು ಪ್ರಶಸ್ತಿಗಳು ಲಭಿಸಿವೆ. ವಿಶಿಷ್ಟ ಕಥಾಹಂದರದ ‘ಡೊಳ್ಳು’ ಸಿನಿಮಾಗೆ ಅತ್ಯುತ್ತಮ ಕನ್ನಡ ಪ್ರಾದೇಶಿಕ ಸಿನಿಮಾ ಹಾಗೂ ಸಿಂಕ್ ಸೌಂಡ್ ವಿಭಾಗದಲ್ಲಿ ರಾಷ್ಟ್ರಪ್ರಶಸ್ತಿ ದೊರೆತಿದೆ. ‘ತಲೆದಂಡ’ ಚಿತ್ರಕ್ಕೆ ಪರಿಸರ ಕಾಳಜಿಯ ಕಥಾವಸ್ತುವುಳ್ಳ ರಾಷ್ಟ್ರ ಪ್ರಶಸ್ತಿಯ ಗರಿ ಒಲಿದಿದೆ. ‘ಅತ್ಯುತ್ತಮ ಕಲೆ ಹಾಗೂ ಸಾಂಸ್ಕೃತಿಕ ಸಿನಿಮಾ’ ವಿಭಾಗದಲ್ಲಿ ಗಿರೀಶ್​ ಕಾಸರವಳ್ಳಿ ನಿರ್ದೇಶನದ ‘ನಾದದ ನವನೀತ’ ಚಿತ್ರ ಪ್ರಶಸ್ತಿಗೆ ಭಾಜನವಾಗಿದೆ. ಸನ್ಮಾನ ಸಮಾರಂಭದಲ್ಲಿ ಫಿಲ್ಮಂ ಚೇಂಬರ್ ಪದಾಧಿಕಾರಿಗಳು, ಮಾಜಿ ಅಧ್ಯಕ್ಷ ಚಿನ್ನೇಗೌಡ ಮತ್ತಿತರರು ಇದ್ದರು.

ಇದನ್ನೂ ಓದಿ | ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಘೋಷಣೆ; ಅತ್ಯುತ್ತಮ ನಟ ಪ್ರಶಸ್ತಿ ಹಂಚಿಕೊಂಡ ಅಜಯ್‌ ದೇವಗನ್‌, ಸೂರ್ಯ

Exit mobile version