ಬೆಂಗಳೂರು: ಕೆಪಿಸಿಸಿ ಕಚೇರಿಯಲ್ಲಿ ಕಾಂಗ್ರೆಸ್ ನಾಯಕರ ವಿರುದ್ಧ ಅಸಮಾಧಾನ ಹೊರಹಾಕಿದ ಬೆನ್ನಲ್ಲೇ ಕೆ.ಜಿ.ಎಫ್ ಬಾಬು (ಯೂಸುಫ್ ಶರೀಫ್) ಅವರನ್ನು ಕಾಂಗ್ರೆಸ್ ಪಕ್ಷದಿಂದ ಅಮಾನತು ಮಾಡಲಾಗಿದೆ. ಪಕ್ಷದ ವಿರುದ್ಧವಾಗಿ ಹೇಳಿಕೆಗಳನ್ನು ನೀಡಿದ ಹಿನ್ನೆಲೆಯಲ್ಲಿ ಚಿಕ್ಕಪೇಟೆ ಕ್ಷೇತ್ರ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿ ಕೆ.ಜಿ.ಎಫ್ ಬಾಬು (KGF Babu) ಅವರನ್ನು ಅಮಾನತು ಮಾಡಿ ಕೆಪಿಸಿಸಿ ಶಿಸ್ತು ಪಾಲನಾ ಸಮಿತಿ ಅಧ್ಯಕ್ಷ ಕೆ. ರಹಮಾನ್ ಖಾನ್ ಆದೇಶ ಹೊರಡಿಸಿದ್ದಾರೆ.
ಮೂರು ತಿಂಗಳ ಹಿಂದೆಯೇ ಪಕ್ಷದ ನೀತಿ ವಿರುದ್ಧ ಮಾಧ್ಯಮದ ಮುಂದೆ ನಾನಾ ಹೇಳಿಕೆ ನೀಡಿದ್ದರ ಬಗ್ಗೆ ಮಾಹಿತಿ ದೊರೆತಿದೆ. ಶಿಸ್ತು ಸಮಿತಿಯಿಂದ ಕಾರಣ ಕೇಳಿ ನೋಟಿಸ್ ನೀಡಲಾಗಿದ್ದರೂ, ನೀವು ಸಮಂಜಸ ಉತ್ತರ ನೀಡಿಲ್ಲ. ಶುಕ್ರವಾರ ಕಾಂಗ್ರೆಸ್ ಕಚೇರಿಯಲ್ಲಿ ಅಧ್ಯಕ್ಷರ ಪೂರ್ವಾನುಮತಿ ಇಲ್ಲದೆ ಪಕ್ಷವನ್ನು ಉದ್ದೇಶಿಸಿ ವಿವಿಧ ಹೇಳಿಕೆ ನೀಡಿದ್ದೀರಿ. ನಿಮ್ಮ ಈ ನಡೆ ಪಕ್ಷಕ್ಕೆ ಹಾನಿಯುಂಟು ಮಾಡುತ್ತಿದೆ. ಇದನ್ನು ಗಂಭೀರವಾಗಿ ಪರಿಗಣಿಸಿ ಕೂಡಲೇ ನಿಮ್ಮನ್ನು ಪಕ್ಷದಿಂದ ಅಮಾನುತು ಗೊಳಿಸಲಾಗಿದೆ ಎಂದು ಅಮಾನತು ಆದೇಶದಲ್ಲಿ ತಿಳಿಸಲಾಗಿದೆ.
ಇದನ್ನೂ ಓದಿ | Siddaramaiah | ನಾನು ಹಿಂದು ವಿರೋಧಿಯಲ್ಲ, ಹಿಂದುತ್ವದ ವಿರೋಧಿ: ಮಾಜಿ ಸಿಎಂ ಸಿದ್ದರಾಮಯ್ಯ
ಕೆಪಿಸಿಸಿ ಕಚೇರಿಗೆ ಶುಕ್ರವಾರ ಮಧ್ಯಾಹ್ನ ಕೆಜಿಎಫ್ ಬಾಬು ತೆರಳಿ, ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹ್ಮದ್ ವಿರುದ್ಧ ಅಸಮಾಧಾನ ಹೊರಹಾಕಿದ್ದರು. ಕೆಪಿಸಿಸಿಯಲ್ಲಿ ಕಾರ್ಯಕರ್ತರು, ಮಹಿಳೆಯರು, ಯುವಕರು ಬಂದರೆ ಅವರಿಗೆ ಮರ್ಯಾದೆ ನೀಡುತ್ತಿಲ್ಲ, ನನಗೂ ಇದೇ ರೀತಿ ಮಾಡಿದ್ದಾರೆ. ಪಕ್ಷದಲ್ಲಿ ತಮಗೆ ಗೌರವ ಸಿಗುತ್ತಿಲ್ಲ ಎಂದು ಕಿಡಿಕಾರಿದ್ದರು. ಇದಕ್ಕೆ ಕೆಲ ಕಾಂಗ್ರೆಸ್ ನಾಯಕರು ಆಕ್ರೋಶ ವ್ಯಕ್ತಪಡಿಸಿ, ಕೆಜಿಎಫ್ ಬಾಬು ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ಗೆ ದೂರು ಸಲ್ಲಿಸಿದ್ದರು.
ಇದಾದ ನಂತರ ಸುದ್ದಿಗೋಷ್ಠಿಯಲ್ಲಿ ಕೆಜಿಎಫ್ ಬಾಬು ಮಾತನಾಡಿ, ರೌಡಿ, ಜಾತಿ ಆಧಾರಿತವಾಗಿ ಟಿಕೆಟ್ ಕೊಟ್ಟರೆ ಕಾಂಗ್ರೆಸ್‌ಗೆ 80 ಸ್ಥಾನ ಕೂಡ ಸಿಗುವುದಿಲ್ಲ. ಕಾಂಗ್ರೆಸ್‌ನಿಂದ ನನ್ನನ್ನು ತೆಗೆದರೆ ಪಕ್ಷಕ್ಕೆ 10ರಿಂದ 15 ಸೀಟ್ ಕೈ ತಪ್ಪುತ್ತದೆ. ಸಲೀಂ ಅಹ್ಮದ್‌ರನ್ನು ಕೆಪಿಸಿಸಿ ಕಾರ್ಯಾಧ್ಯಕ್ಷ ಸ್ಥಾನದಿಂದ ಬದಲಾಯಿಸಬೇಕು. ಸಲೀಂ ಅಹ್ಮದ್ ನಮ್ಮ ಮುಸ್ಲಿಂ ಅಲ್ಲ. ಅವಮಾನ ಮಾಡಿ ಪಕ್ಷದಿಂದ ನನ್ನನ್ನು ಪಕ್ಷದಿಂದ ತೆಗೆದರೆ ಕಾಂಗ್ರೆಸ್‌ಗೆ 10 ಸೀಟ್ ನಷ್ಟ ಮಾಡುತ್ತೇನೆ ಎಂದು ಎಚ್ಚರಿಕೆ ನೀಡಿದ್ದರು. ಹೀಗಾಗಿ ಕೆಪಿಸಿಸಿ ಶಿಸ್ತು ಸಮಿತಿ ಕೆಜಿಎಫ್ ಬಾಬುರನ್ನು ಅಮಾನತು ಮಾಡಲಾಗಿದೆ.
ಇದನ್ನೂ ಓದಿ | KGF Babu | ಕಾಂಗ್ರೆಸ್‌ಗೆ 80 ಸೀಟೂ ಸಿಗೋದಿಲ್ಲ ಎಂದ ಕೆಜಿಎಫ್ ಬಾಬು; ಕೈ ನಾಯಕರು, ಕಾರ್ಯಕರ್ತರ ಆಕ್ರೋಶ