ಬೆಂಗಳೂರು: ಸ್ಯಾಂಡಲ್‌ವುಡ್ ನಟ ಕಿಚ್ಚ ಸುದೀಪ್ ಅವರಿಗೆ ಬೆದರಿಕೆ ಪತ್ರ ಬಂದ ಹಿನ್ನೆಲೆಯಲ್ಲಿ ಪುಟ್ಟೇನಹಳ್ಳಿ ಪೊಲೀಸ್ ಠಾಣೆಗೆ ದೂರು ನೀಡಲಾಗಿದೆ.
ಬೆದರಿಕೆ ಪತ್ರ ಕಿಚ್ಚ ಸುದೀಪ್ ಅವರ ಮ್ಯಾನೇಜರ್ ಜಾಕ್ ಮಂಜುಗೆ ಸಿಕ್ಕಿದ್ದು, ಪೊಲೀಸರಿಗೆ ದೂರು ನೀಡಿದ್ದಾರೆ. ಸುದೀಪ್ ಖಾಸಗಿ ವಿಡಿಯೋ ಲೀಕ್ ಮಾಡುವುದಾಗಿ ಪತ್ರದಲ್ಲಿ ಉಲ್ಲೇಖಿಸಲಾಗಿದೆ. ಜೊತೆಗೆ ಕೆಲ ಅವಾಚ್ಯ ಶಬ್ದಗಳನ್ನು ಸಹ ಲೆಟರ್‌ನಲ್ಲಿ ದುಷ್ಕರ್ಮಿಗಳು ಬರೆದಿದ್ದಾರೆ. ಜಾಕ್ ಮಂಜು ದೂರಿನನ್ವಯ ಐಪಿಸಿ 504 (ಬೆದರಿಕೆ), 506 (ಪ್ರಾಣ ಬೆದರಿಕೆ) ಹಾಗೂ ಐಟಿ ಆಕ್ಟ್ ಅಡಿಯಲ್ಲಿ ಪೊಲೀಸರು ಕೇಸ್ ದಾಖಲಿಸಿಕೊಂಡಿದ್ದಾರೆ.
ಇಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಪತ್ರಿಕಾಗೋಷ್ಠಿ ಕರೆದಿದ್ದು, ಈ ಗೋಷ್ಠಿಯಲ್ಲಿ ಕಿಚ್ಚ ಸುದೀಪ್ ಅವರು ಬಿಜೆಪಿ ಪರ ಚುನಾವಣೆ ಪ್ರಚಾರದಲ್ಲಿ ಭಾಗವಹಿಸುವ ಬಗ್ಗೆ ಘೋಷಣೆ ಮಾಡುತ್ತಾರೆ ಎಂದು ಹೇಳಲಾಗಿದೆ. ಈ ಹಿನ್ನೆಲೆಯಲ್ಲಿ ಸುದೀಪ್ ಅವರಿಗೆ ಬೆದರಿಕೆ ಬಂದಿರಬಹುದೇ ಎಂಬ ಆಯಾಮವನ್ನು ಕೂಡ ಪರಿಶೀಲಿಸಲಾಗುತ್ತಿದೆ. ಸ್ವತಃ ಸುದೀಪ್ ಅವರು ಇನ್ನೂ ಈ ಕುರಿತು ಯಾವುದೇ ಸ್ಪಷ್ಟನೆ ನೀಡಿಲ್ಲ.
ಇದನ್ನೂ ಓದಿ: Kichcha Sudeep: ಕಿಚ್ಚ ಸುದೀಪ್ ಇಂದು ಬಿಜೆಪಿಗೆ? ಸುದ್ದಿಗೋಷ್ಠಿ ಕರೆದಿರುವ ಸಿಎಂ ಬೊಮ್ಮಾಯಿ