Kidnap Case: ಭಿಕ್ಷೆ ಬೇಡುತ್ತಿದ್ದ ಬಾಲಕಿ ಅಪಹರಣ;‌ ಸಿನಿಮೀಯವಾಗಿ ಸಿಕ್ಕಿಬಿದ್ದ ಮುಸ್ಲಿಂ ಯುವಕರು - Vistara News

ಕರ್ನಾಟಕ

Kidnap Case: ಭಿಕ್ಷೆ ಬೇಡುತ್ತಿದ್ದ ಬಾಲಕಿ ಅಪಹರಣ;‌ ಸಿನಿಮೀಯವಾಗಿ ಸಿಕ್ಕಿಬಿದ್ದ ಮುಸ್ಲಿಂ ಯುವಕರು

Kidnap Case : ಭಿಕ್ಷೆ ಬೇಡುವ ಬಾಲಕಿಯೊಬ್ಬಳನ್ನು ನಾಲ್ವರು ಕಿರಾತಕರು ಅಪಹರಣಕ್ಕೆ ಯತ್ನಿಸಿದ್ದಾರೆ. ಕೊನೆಗೆ ಅವರು ಜನರ ಕೈಗೆ ಸಿಕ್ಕಿಬಿದ್ದಿದ್ದಾರೆ. ಚಾಮರಾಜನಗರದ ಕೊಳ್ಳೇಗಾಲದಲ್ಲಿ ಈ ಘಟನೆ ನಡೆದಿದೆ.

VISTARANEWS.COM


on

Kollegala kidnap Case3
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಚಾಮರಾಜನಗರ: ನಾಲ್ವರು ಕಾಮಾಂಧ ಮುಸ್ಲಿಂ ಯುವಕರು (Muslim Youths) ಭಿಕ್ಷೆ ಬೇಡುತ್ತಿದ್ದ ಬಾಲಕಿಯೊಬ್ಬಳನ್ನು (Beggar Girl) ಅಪಹರಿಸಿ ಕೊನೆಗೆ (Kidnap Case) ಸಾರ್ವಜನಿಕರ ಕೈಗೆ ಸಿಕ್ಕಿಬಿದ್ದ ಭಯಾನಕ ಘಟನೆಯೊಂದು ಕೊಳ್ಳೇಗಾಲ ನಗರದಲ್ಲಿ ನಡೆದಿದೆ. ಈ ಕಿರಾತಕರು ಕೇರಳದ ಮಲಪ್ಪುರಂ ಜಿಲ್ಲೆಯವರೆಂದು ತಿಳಿದುಬಂದಿದ್ದು, ಮಾರ್ಗ ಮಧ್ಯೆ ಸ್ಥಳೀಯರು ತಡೆದು ಚೆನ್ನಾಗಿ ಥಳಿಸಿ ಪೊಲೀಸರ ವಶಕ್ಕೆ (publics beat kidnappers) ಒಪ್ಪಿಸಿದ್ದಾರೆ.

Kollegala kidnap Case3

ಕೇರಳದ ಮಲಪ್ಪುರಂನ ಈ ದುಷ್ಟರು ಪ್ರವಾಸಕ್ಕೆಂದು ಚಾಮರಾಜ ನಗರದಿಂದ ತಮಿಳುನಾಡಿಗೆ ಹೊರಟಿದ್ದರು. ದಾರಿ ಮಧ್ಯೆ ಅವರಿಗೆ ಕೊಳ್ಳೇಗಾಲದಲ್ಲಿ ಅಮಾಯಕಿಯಂತಿದ್ದ, ಭಿಕ್ಷೆ ಬೇಡುತ್ತಿದ್ದ ಬಾಲಕಿಯೊಬ್ಬಳು ಕಂಡಿದ್ದಾಳೆ. ಆಕೆಯ ಮೇಲೆ ಮೇಲೆ ಕಣ್ಣು ಹಾಕಿದ ದುಷ್ಟರು ಆಕೆಯನ್ನು ಯಾರಿಗೂ ಗೊತ್ತಾಗದಂತೆ ಕಾರಿನೊಳಗೆ ಎಳೆದುಕೊಂಡು ಅಪಹರಣ ಮಾಡಿದ್ದಾರೆ.

Kollegala kidnap Case3

ಮಧುವನಹಳ್ಳಿಯಲ್ಲಿ ಕಾರು ಡಿಕ್ಕಿಯಾಗಿ ಸಿಕ್ಕಿಬಿದ್ದರು

ನಾಲ್ವರು ಮುಸ್ಲಿಂ ಯುವಕರು ಹೀಗೆ ಬಾಲಕಿಯನ್ನು ಕಾರಿನಲ್ಲಿ ಎತ್ತಾಕಿಕೊಂಡು ಹೋಗುತ್ತಿದ್ದಾಗ ಅವರು ಪ್ರಯಾಣಿಸುತ್ತಿದ್ದ ಕಾರು ಕೊಳ್ಳೇಗಾಲ ತಾಲೂಕಿನ ಮಧುವನಹಳ್ಳಿ ಸಮೀಪ ಪಾದಚಾರಿಯೊಬ್ಬನಿಗೆ ಡಿಕ್ಕಿ ಹೊಡೆದಿದೆ. ಡಿಕ್ಕಿ ಹೊಡೆದ ಬಳಿಕವೂ ಕಾರು ಪರಾರಿ ಆಗಲು ಯತ್ನಿಸಿದಾಗ ಸ್ಥಳೀಯರು ತಡೆದಿದ್ದಾರೆ. ಈ ಸಂದರ್ಭದಲ್ಲಿ ಕಾರಿನಲ್ಲಿ ಬಾಲಕಿ ಇರುವುದು ಪತ್ತೆಯಾಗಿದೆ. ವಿಚಾರಿಸಿದಾಗ ಬಾಲಕಿಯನ್ನು ಅಪಹರಿಸಿರುವುದು ಗೊತ್ತಾಗಿದೆ. ಆಗ ಊರಿನವರು ಸೇರಿ ಚೆನ್ನಾಗಿ ಥಳಿಸಿ ಪೊಲೀಸರಿಗೆ ಒಪ್ಪಿಸಿದ್ದಾರೆ.

ಇದನ್ನೂ ಓದಿ: Kidnap Case : ಅಪ್ಪ-ಅಮ್ಮನ ಮರುಳು ಮಾಡಿ 12ರ ಬಾಲಕಿ ಜತೆ ಊರು ಬಿಟ್ಟ ಕೇಡಿ ದಿಲ್ಲಿಯಲ್ಲಿ ಅರೆಸ್ಟ್‌

ಬಾಲಕಿ ನರಸೀಪುರ ಮೂಲದವಳಾಗಿದ್ದು, ಕೊಳ್ಳೇಗಾಲದಲ್ಲಿ ಭಿಕ್ಷೆ ಬೇಡಿಕೊಂಡು ಜೀವನ ನಡೆಸುತ್ತಿದ್ದಳು. ಇದೀಗ ಆಕೆಯನ್ನು ಪೊಲೀಸರು ವಶಕ್ಕೆ ಪಡೆದು ರಿಮ್ಯಾಂಡ್‌ ಹೋಮ್‌ಗೆ ಕಳಹಿಸಿದ್ದಾರೆ.

Kollegala kidnap Case3
ಅಪಹರಣಕ್ಕೆ ಬಳಸಿದ ಕಾರು

ಅಪಹರಣಕ್ಕೆ ಯತ್ನಿಸಿದ ಕೇರಳದ ಮಲಪ್ಪುರಂ ಜಿಲ್ಲೆಯ ಈ ಕಿರಾತಕ ಯುವಕರನ್ನು ಆದಿಲ್. ಅಯೂಬ್ ಸಾದಿಕ್. ಉಮರ್ ಎಂದು ಗುರುತಿಸಲಾಗಿದೆ. ಇವರನ್ನು ಕೊಳ್ಳೇಗಾಲ ಪೊಲೀಸರು ಬಂಧಿಸಿದ್ದಾರೆ. ಅಪರಹಣಕ್ಕೆ ಬಳಸಿದ್ದ ಕೆ ಎಲ್ 54 ಎಂ 6962 ಕಾರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕರ್ನಾಟಕ

Jain Diksha: ಕೋಟ್ಯಂತರ ರೂ. ಆಸ್ತಿ ತ್ಯಜಿಸಿ ಜೈನ ಸನ್ಯಾಸ ದೀಕ್ಷೆ ಪಡೆದ ಬೆಂಗಳೂರಿನ ಉದ್ಯಮಿಯ ಪತ್ನಿ, 11 ವರ್ಷದ ಮಗ!

Jain Diksha: ಬೆಂಗಳೂರು ಮೂಲದ ಉದ್ಯಮಿಯ ಪತ್ನಿ ಹಾಗೂ 11 ವರ್ಷದ ಮಗ ಜೈನ ಸನ್ಯಾಸ ಸ್ವೀಕರಿಸಿದ್ದಾರೆ. ಸದ್ಯ ಅವರು ಗುಜರಾತ್‌ನ ಸೂರತ್‌ನಲ್ಲಿ ನೆಲೆಸಿದ್ದಾರೆ.

VISTARANEWS.COM


on

Jain Diksha
Koo

ಬೆಂಗಳೂರು: ಈಗಿನ ಕಾಲದಲ್ಲಿ ತಂದೆಯಿಂದ ಕೋಟ್ಯಂತರ ರೂ. ಮೌಲ್ಯದ ಆಸ್ತಿ ಬಂದರೆ ಯಾರು ಬೇಡವೆನ್ನುತ್ತಾರೆ ಹೇಳಿ? ಸಾಕಷ್ಟು ಹಣವಿದ್ದರೆ ಯಾವುದೇ ಕೆಲಸ, ಒತ್ತಡವಿಲ್ಲದೆ ಆರಾಮವಾಗಿ ಜೀವನ ಕಳೆಯಬಹುದು ಎಂದುಕೊಳ್ಳುವವರು ಹೆಚ್ಚಾಗಿದ್ದಾರೆ. ಆದರೆ, ಇಲ್ಲೊಂದು ಕುಟುಂಬದ ತಾಯಿ-ಮಗ ಮಾತ್ರ, ಕೋಟ್ಯಂತರ ರೂ. ಆಸ್ತಿ ತ್ಯಜಿಸಿ ಜೈನ ಸನ್ಯಾಸ ದೀಕ್ಷೆ ಪಡೆದಿರುವುದು ಕಂಡುಬಂದಿದೆ.

ಹೌದು, ಬೆಂಗಳೂರು ಮೂಲದ ಉದ್ಯಮಿ ಮನೀಶ್‌ ಎಂಬುವವರ ಪತ್ನಿ ಸ್ವೀಟಿ (30) ಹಾಗೂ 11 ವರ್ಷದ ಮಗ ಹೃಧನ್ ಇತ್ತೀಚೆಗೆ ಜೈನ ಸನ್ಯಾಸ ದೀಕ್ಷೆ ಪಡೆದಿದ್ದಾರೆ. ತಾಯಿ-ಮಗನ ದೀಕ್ಷಾ ಸಮಾರಂಭವು ಗುಜರಾತ್‌ನ ಸೂರತ್‌ನಲ್ಲಿ ಜನವರಿಯಲ್ಲಿ ಬಹಳ ವಿಜೃಂಭಣೆಯಿಂದ ನಡೆದಿದೆ. ಇವರಿಬ್ಬರೂ ಈಗ ಸೂರತ್‌ನಲ್ಲಿ ನೆಲೆಸಿದ್ದಾರೆ.

ಜೈನ ದೀಕ್ಷೆಯ ನಂತರ ತಾಯಿ ಸ್ವೀಟಿಗೆ ಭಾವಶುದ್ಧಿ ರೇಖಾ ಶ್ರೀ ಜಿ ಹಾಗೂ ಮಗ ಹೃದನ್‌ಗೆ ಹಿತಶಯ್ ರತನವಿಜಯ್ ಜಿ. ಎಂದು ಮರು ನಾಮಕರಣ ಮಾಡಲಾಗಿದೆ. ಇದೀಗ ತಾಯಿ-ಮಗ ದೀಕ್ಷೆ ಸ್ವೀಕಾರ ಮಾಡಿರುವ ವಿಡಿಯೊವನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಳ್ಳಲಾಗಿದೆ. ಸದ್ಯ ಈ ವಿಡಿಯೊ ಎಲ್ಲೆಡೆ ವೈರಲ್‌ ಆಗಿದೆ.

ಸನ್ಯಾಸ ದೀಕ್ಷೆ ಸ್ವೀಕರಿಸುವಾಗ ಮಗನ ತಲೆಯನ್ನು ತಾಯಿ ನೇವರಿಸುತ್ತಾ ಭಾವುಕರಾಗಿದ್ದಾರೆ. ಪರಸ್ಪರ ಹಣೆಗೆ ಕುಂಕುಮ ಇಟ್ಟುಕೊಂಡು, ಅಕ್ಷತೆ ಹಾಕಿಕೊಂಡಿದ್ದು, ನಂತರ ಇಬ್ಬರೂ ಶ್ವೇತ ವಸ್ತ್ರಗಳಲ್ಲಿ ಕಾಣಿಸಿಕೊಂಡಿರುವುದು ವಿಡಿಯೊದಲ್ಲಿದೆ.

ಕುಟುಂಬದ ಸಂಬಂಧಿ ವಿವೇಕ್‌ ಪ್ರತಿಕ್ರಿಯಿಸಿ, ಭಾವಶುದ್ಧಿ ರೇಖಾ ಶ್ರೀ ಜಿ ಅವರು ಗರ್ಭಿಣಿಯಾಗಿದ್ದಾಗಲೇ ಸನ್ಯಾಸಿಯಾಗಲು ಬಯಸಿದ್ದರು. ಅದೇ ಸಮಯದಲ್ಲಿ, ತನ್ನ ಮಗು ಕೂಡ ತನ್ನನ್ನು ಅನುಸರಿಸಿ ಜೈನ ಸನ್ಯಾಸಿಯಾಗಬೇಕೆಂದು ನಿರ್ಧರಿಸಿದ್ದರು. ನಂತರ ಮಗ ಕೂಡ ತಾಯಿ ಹಾದಿಯಲ್ಲೇ ನಡೆಯುವುದಾಗಿ ಹೇಳಿದ್ದ. ಭಾವಶುದ್ಧಿ ರೇಖಾ ಶ್ರೀ ಜಿ ಅವರ ಸಂಕಲ್ಪ ಕೇಳಿದ ನಂತರ ಅವರ ಪತಿ ಮನೀಶ್ ಕೂಡ ಬೆಂಬಲಿಸಿದರು. ಅವರು ದೀಕ್ಷೆ ಪಡೆದಿರುವುದು ಮನೀಶ್ ಮತ್ತು ಕುಟುಂಬದ ಇತರರಿಗೆ ಹೆಮ್ಮೆಯ ವಿಷಯವಾಗಿದೆ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ | Akshay Kumar: ಜೈನ ಸನ್ಯಾಸಿಯ 180 ದಿನಗಳ ಉಪವಾಸ ಬ್ರೇಕ್‌ ಮಾಡಿದ ಅಕ್ಷಯ್ ಕುಮಾರ್!

ಈ ಹಿಂದೆ, ಗುಜರಾತ್‌ನ ಶ್ರೀಮಂತ ಜೈನ ದಂಪತಿ ಸುಮಾರು 200 ಕೋಟಿ ರೂ. ಆಸ್ತಿ ತ್ಯಜಿಸಿ ಸನ್ಯಾಸ ದೀಕ್ಷೆ ಪಡೆದಿದ್ದರು. ಭಾವೇಶ್ ಭಂಡಾರಿ ಮತ್ತು ಪತ್ನಿ ಫೆಬ್ರವರಿಯಲ್ಲಿ ಸನ್ಯಾಸ ಜೀವನಕ್ಕೆ ಕಾಲಿಟ್ಟಿದ್ದರು. ದಂಪತಿಗೆ ಒಬ್ಬ ಮಗ ಮತ್ತು ಮಗಳಿದ್ದು, ಅವರು ಕೂಡ 2022ರಲ್ಲಿಯೇ ದೀಕ್ಷೆ ತೆಗೆದುಕೊಂಡಿದ್ದರು.

Continue Reading

ಹಾಸನ

Hassan Pen Drive Case: ಪ್ರಜ್ವಲ್‌ ರೇವಣ್ಣರ ಡಿಪ್ಲೊಮ್ಯಾಟಿಕ್‌ ಪಾಸ್‌ಪೋರ್ಟ್‌ ರದ್ದು ಕೋರಿ ಪ್ರಧಾನಿ ಮೋದಿಗೆ ಸಿದ್ದರಾಮಯ್ಯ ಪತ್ರ!

Hassan Pen Drive Case: ಪ್ರಜ್ವಲ್‌ ರೇವಣ್ಣ ವಿಚಾರದಲ್ಲಿ ಪ್ರಕರಣವು ರಾಜಕೀಯವಾಗಿ ಭಾರಿ ತಿರುವುಗಳನ್ನು ಪಡೆದುಕೊಳ್ಳುತ್ತಿದೆ. ಈ ನಿಟ್ಟಿನಲ್ಲಿ ಸಿಎಂ ಸಿದ್ದರಾಮಯ್ಯ ಮತ್ತೊಂದು ದಾಳ ಉರುಳಿಸಿದ್ದಾರೆ. ಪ್ರಜ್ವಲ್‌ ವಿದೇಶದಲ್ಲಿ ಇರುವುದರಿಂದ ಅವರನ್ನು ಬಂಧಿಸಿ ಎಸ್ಐಟಿ ತನಿಖೆಗೆ ಒಪ್ಪಿಸಬೇಕಿದೆ. ಹೀಗಾಗಿ ಅವರ ಡಿಪ್ಲೊಮ್ಯಾಟಿಕ್‌ ಪಾಸ್‌ಪೋರ್ಟ್‌ ಅನ್ನು ಕೇಂದ್ರ ರದ್ದು ಮಾಡಬೇಕು ಎಂದು ಕೋರುವ ಮೂಲಕ ಹೊಸ ದಾಳ ಉರುಳಿಸಿದ್ದಾರೆ. ಈಗ ಕೇಂದ್ರ ಸರ್ಕಾರ ಮುಂದಿನ ಕ್ರಮವನ್ನು ಕೈಗೊಳ್ಳದೇ ಇದ್ದಲ್ಲಿ ಲೋಕಸಭಾ ಚುನಾವಣೆ ಪ್ರಚಾರದ ವೇಳೆ ಅಸ್ತ್ರವನ್ನಾಗಿ ಮಾಡಿಕೊಳ್ಳಲು ತೀರ್ಮಾನಿಸಿದೆ. ಹೀಗಾಗಿ ಕಾಂಗ್ರೆಸ್‌ಗೆ ಅಸ್ತ್ರ ಕೊಡದಿರಲು ಕೇಂದ್ರ ಸರ್ಕಾರವು ಪ್ರಜ್ವಲ್‌ ರೇವಣ್ಣ ಅವರ ಡಿಪ್ಲೊಮ್ಯಾಟಿಕ್‌ ಪಾಸ್‌ಪೋರ್ಟ್‌ ಅನ್ನು ರದ್ದು ಮಾಡುವ ಸಂಭವ ಜಾಸ್ತಿ ಇದೆ ಎನ್ನಲಾಗಿದೆ.

VISTARANEWS.COM


on

Hassan Pen Drive case Siddaramaiah writes to PM Modi seeking cancellation of Prajwal Revanna diplomatic passport
Koo

ಬೆಂಗಳೂರು: ಹಾಸನ ಸಂಸದ (Hassan MP), ಜೆಡಿಎಸ್‌ ಮುಖಂಡ (JDS Leader), ಮಾಜಿ ಸಚಿವ ಎಚ್.ಡಿ. ರೇವಣ್ಣ ಪುತ್ರ ಪ್ರಜ್ವಲ್ ರೇವಣ್ಣ (Prajwal Revanna) ಅವರ ಅಶ್ಲೀಲ ವಿಡಿಯೊ ಎನ್ನಲಾದ ಪೆನ್‌ಡ್ರೈವ್‌ ಪ್ರಕರಣಕ್ಕೆ (Hassan Pen Drive Case) ಸಂಬಂಧಪಟ್ಟಂತೆ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಸಿಎಂ ಸಿದ್ದರಾಮಯ್ಯ ಪತ್ರ ಬರೆದಿದ್ದಾರೆ. ಪ್ರಜ್ವಲ್‌ ರೇವಣ್ಣ ಅವರ ಡಿಪ್ಲೊಮ್ಯಾಟಿಕ್‌ ಪಾಸ್‌ಪೋರ್ಟ್‌ ಅನ್ನು ರದ್ದು ಮಾಡುವಂತೆ ಕ್ರಮ ಕೈಗೊಳ್ಳಲು ಮನವಿ ಮಾಡಿದ್ದಾರೆ.

ಪ್ರಜ್ವಲ್‌ ರೇವಣ್ಣ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿರುವ ಸಿಎಂ ಸಿದ್ದರಾಮಯ್ಯ, ಒಬ್ಬ ಹಾಲಿ ಸಂಸದ ಪ್ರಜ್ವಲ್‌ ರೇವಣ್ಣ ಅವರು ಅಸಂಖ್ಯಾತ ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯವನ್ನು ಎಸೆಗಿದ್ದಾರೆ. ಈ ಪ್ರಕರಣದ ಮಹತ್ವದ ಬಗ್ಗೆ ನೀವು ತಿಳಿದಿರಲೇಬೇಕಿತ್ತು. ಅಲ್ಲದೆ, ಪ್ರಜ್ವಲ್‌ 2024ರ ಲೋಕಸಭಾ ಚುನಾವಣೆಯಲ್ಲಿ ನಿಮ್ಮ ಎನ್‌ಡಿಎ ಅಭ್ಯರ್ಥಿಯೂ ಆಗಿದ್ದಾರೆ. ಜತೆಗೆ ಇಂಥ ಭಯಾನಕ ಹಾಗೂ ನಾಚಿಕೆಗೇಡಿನ ಪ್ರಕರಣ ಪ್ರಜ್ವಲ್‌ ಮೇಲಿದೆ. ಅಲ್ಲದೆ, ಈ ಪ್ರಕರಣವು ದೇಶದ ಜನತೆಯ ಆತ್ಮಸಾಕ್ಷಿಯನ್ನೇ ಕದಡಿಬಿಟ್ಟಿದೆ. ಹೀಗಾಗಿ ಪ್ರಜ್ವಲ್‌ ರೇವಣ್ಣ ಅವರ ಡಿಪ್ಲೊಮ್ಯಾಟಿಕ್‌ ಪಾಸ್‌ಪೋರ್ಟ್‌ ಅನ್ನು ರದ್ದು ಮಾಡಬೇಕು ಎಂದು ಪತ್ರ ಬರೆದು ಮನವಿ ಮಾಡಿದ್ದಾರೆ.

ಪ್ರಜ್ವಲ್‌ ರೇವಣ್ಣ ಅವರ ಮೇಲೆ ಕ್ರಮವಾಗಬೇಕಾದರೆ, ಅವರನ್ನು ಕರೆತರಬೇಕಾದರೆ ಅವರ ಡಿಪ್ಲೊಮ್ಯಾಟಿಕ್‌ ಪಾಸ್‌ಪೋರ್ಟ್‌ ಅನ್ನು ರದ್ದು ಮಾಡಬೇಕು. ಈ ನಿಟ್ಟಿನಲ್ಲಿ ಕೇಂದ್ರ ಗೃಹ ಇಲಾಖೆ ಹಾಗೂ ವಿದೇಶಾಂಗ ವ್ಯವಹಾರಗಳ ಖಾತೆಯ ಅಧಿಕಾರಿಗಳಿಗೆ ಸೂಚನೆ ನೀಡಬೇಕು ಎಂದು ಸಿಎಂ ಸಿದ್ದರಾಮಯ್ಯ ಪತ್ರದಲ್ಲಿ ಕೋರಿದ್ದಾರೆ.

Hassan Pen Drive case Siddaramaiah writes to PM Modi seeking cancellation of Prajwal Revanna diplomatic passport

ಪ್ರಜ್ವಲ್‌ಗೆ ಮತ್ತಷ್ಟು ಸಂಕಷ್ಟ ಶುರು

ಪ್ರಜ್ವಲ್‌ ರೇವಣ್ಣ ವಿಚಾರದಲ್ಲಿ ಪ್ರಕರಣವು ರಾಜಕೀಯವಾಗಿ ಭಾರಿ ತಿರುವುಗಳನ್ನು ಪಡೆದುಕೊಳ್ಳುತ್ತಿದೆ. ಈ ನಿಟ್ಟಿನಲ್ಲಿ ಸಿಎಂ ಸಿದ್ದರಾಮಯ್ಯ ಮತ್ತೊಂದು ದಾಳ ಉರುಳಿಸಿದ್ದಾರೆ. ಪ್ರಜ್ವಲ್‌ ವಿದೇಶದಲ್ಲಿ ಇರುವುದರಿಂದ ಅವರನ್ನು ಬಂಧಿಸಿ ಎಸ್ಐಟಿ ತನಿಖೆಗೆ ಒಪ್ಪಿಸಬೇಕಿದೆ. ಹೀಗಾಗಿ ಅವರ ಡಿಪ್ಲೊಮ್ಯಾಟಿಕ್‌ ಪಾಸ್‌ಪೋರ್ಟ್‌ ಅನ್ನು ಕೇಂದ್ರ ರದ್ದು ಮಾಡಬೇಕು ಎಂದು ಕೋರುವ ಮೂಲಕ ಹೊಸ ದಾಳ ಉರುಳಿಸಿದ್ದಾರೆ. ಈಗ ಕೇಂದ್ರ ಸರ್ಕಾರ ಮುಂದಿನ ಕ್ರಮವನ್ನು ಕೈಗೊಳ್ಳದೇ ಇದ್ದಲ್ಲಿ ಲೋಕಸಭಾ ಚುನಾವಣೆ ಪ್ರಚಾರದ ವೇಳೆ ಅಸ್ತ್ರವನ್ನಾಗಿ ಮಾಡಿಕೊಳ್ಳಲು ತೀರ್ಮಾನಿಸಿದೆ. ಹೀಗಾಗಿ ಕಾಂಗ್ರೆಸ್‌ಗೆ ಅಸ್ತ್ರ ಕೊಡದಿರಲು ಕೇಂದ್ರ ಸರ್ಕಾರವು ಪ್ರಜ್ವಲ್‌ ರೇವಣ್ಣ ಅವರ ಡಿಪ್ಲೊಮ್ಯಾಟಿಕ್‌ ಪಾಸ್‌ಪೋರ್ಟ್‌ ಅನ್ನು ರದ್ದು ಮಾಡುವ ಸಂಭವ ಜಾಸ್ತಿ ಇದೆ ಎನ್ನಲಾಗಿದೆ.

ಏನಿದು ಡಿಪ್ಲೊಮ್ಯಾಟಿಕ್‌ ಪಾಸ್‌ಪೋರ್ಟ್?‌ (diplomatic passport)

ಡಿಪ್ಲೊಮ್ಯಾಟಿಕ್‌ ಪಾಸ್‌ಪೋರ್ಟ್‌ ಅನ್ನು ಟೈಪ್‌ ಡಿ (Type D) ಪಾಸ್‌ ಪೋರ್ಟ್‌ ಎಂದೂ ಕರೆಯುತ್ತಾರೆ. ಭಾರತೀಯ ರಾಜತಾಂತ್ರಿಕರು, ಸರ್ಕಾರಿ ಅಧಿಕಾರಿಗಳು ಹಾಗೂ ಭಾರತ ಸರ್ಕಾರದ ಪರ ಪ್ರತಿನಿಧಿಸುವ ವ್ಯಕ್ತಿಗಳಿಗೆ ಇದನ್ನು ನೀಡಲಾಗುತ್ತದೆ. ಭಾರತ ಸರ್ಕಾರದ ಪರ ಅಧಿಕೃತ ವಿದೇಶ ಪ್ರಯಾಣದ ಸಂದರ್ಭ ಬಳಸುತ್ತಾರೆ.

ಡಿಪ್ಲೊಮ್ಯಾಟಿಕ್‌ ಪಾಸ್‌ಪೋರ್ಟ್‌ 28 ಪುಟಗಳನ್ನು ಒಳಗೊಂಡಿರುತ್ತದೆ. ಸಾಮಾನ್ಯ ಪಾಸ್‌ಪೋರ್ಟ್‌ ಕಡು ನೀಲಿ ಕವರ್‌ ಅನ್ನು ಹೊಂದಿದ್ದರೆ, ಇದು ಮರೂನ್‌ ಬಣ್ಣದಲ್ಲಿ ಇರುತ್ತದೆ. ಸಾಮಾನ್ಯ ಪಾಸ್‌ಪೋರ್ಟ್‌ ವಯಸ್ಕರಿಗೆ 10 ವರ್ಷ ಹಾಗೂ ಅಪ್ರಾಪ್ತರಿಗೆ 5 ವರ್ಷ ವ್ಯಾಲಿಡಿಟಿಯನ್ನು ಹೊಂದಿರುತ್ತದೆ. ಡಿಪ್ಲೊಮ್ಯಾಟಿಕ್‌ ಪಾಸ್‌ಪೋರ್ಟ್‌ 5 ಅಥವಾ ಕಡಿಮೆ ಅವಧಿಗೆ ಬಿಡುಗಡೆಯಾಗುತ್ತದೆ.

ಡಿಪ್ಲೊಮ್ಯಾಟಿಕ್‌ ಪಾಸ್‌ಪೋರ್ಟ್‌ಗೆ ಅರ್ಜಿ ಸಲ್ಲಿಸುವುದು ಹೇಗೆ?

ದಿಲ್ಲಿಯಲ್ಲಿ ವಿದೇಶಾಂಗ ಇಲಾಖೆಯ ಪಾಸ್‌ಪೋರ್ಟ್‌ ಸೇವಾ ಪ್ರೋಗ್ರಾಮ್‌ ವಿಭಾಗದಲ್ಲಿ ಮಾತ್ರ ಡಿಪ್ಲೊಮ್ಯಾಟಿಕ್‌ ಪಾಸ್‌ ಪೋರ್ಟ್‌ ಬಗ್ಗೆ ಅರ್ಜಿ ಸಲ್ಲಿಸಬೇಕಾಗುತ್ತದೆ.

ಪ್ರಯೋಜನವೇನು?: ಡಿಪ್ಲೊಮ್ಯಾಟಿಕ್‌ ಪಾಸ್‌ಪೋರ್ಟ್‌ ಭಾರತ ಸರ್ಕಾರವನ್ನು ರಾಜತಾಂತ್ರಿಕ ಉದ್ದೇಶಗಳಿಗೆ ವಿದೇಶಗಳಲ್ಲಿ ಪ್ರತಿನಿಧಿಸುವವರಿಗೆ ಅಧಿಕೃತ ಗುರುತಿನ ದೃಢೀಕರಣವಾಗಿ ಬಳಕೆಯಾಗುತ್ತದೆ. ಇದು ಅವರಿಗೆ ಗುರುತು ಮತ್ತು ಅಧಿಕೃತ ಸ್ಥಾನಮಾನವನ್ನು ಒದಗಿಸುತ್ತದೆ.

ಇದನ್ನೂ ಓದಿ: Hassan Pen Drive Case: SIT ತನಿಖೆಗೆ ಸಂತ್ರಸ್ತೆಯರ ಹಿಂದೇಟು; ವಿಚಾರಣೆ ಅಂತ ತೊಂದರೆ ಕೊಟ್ಟರೆ ಸೂಸೈಡ್‌ ಬೆದರಿಕೆ!

ಡಿಪ್ಲೊಮ್ಯಾಟಿಕ್‌ ಇಮ್ಯುನಿಟಿ: ಈ ಪಾಸ್‌ಪೋರ್ಟ್‌ ಇರುವವರಿಗೆ ಅಂತಾರಾಷ್ಟ್ರೀಯ ಕಾನೂನು ಅಡಿಯಲ್ಲಿ ಕೆಲವು ವಿಶೇಷ ಸೌಲಭ್ಯಗಳು, ಮಾನ್ಯತೆಗಳು ಸಿಗುತ್ತದೆ. ಆತಿಥೇಯ ರಾಷ್ಟ್ರದಲ್ಲಿ ಅರೆಸ್ಟ್‌, ವಶಕ್ಕೆ ತೆಗೆದುಕೊಳ್ಳುವುದು ಸಾಧ್ಯವಾಗುವುದಿಲ್ಲ.

ವೀಸಾ ಸೌಲಭ್ಯ: ಈ ಪಾಸ್‌ಪೋರ್ಟ್‌ ಇರುವವರಿಗೆ ಹಲವು ದೇಶಗಳು ವೀಸಾ ವಿಸ್ತರಿಸುತ್ತವೆ. ವೀಸಾ ಮನ್ನಾ ಸೌಲಭ್ಯವೂ ಸಿಗಬಹುದು. ಅಧಿಕೃತ ಪ್ರವಾಸ ಕಾರ್ಯಕ್ರಮಗಳು ಸುಗಮವಾಗುತ್ತದೆ. ಭಾರತೀಯ ರಾಯಭಾರ ಕಚೇರಿಯ ಸಂಪರ್ಕ ಸೌಲಭ್ಯಗಳು ಸಿಗುತ್ತದೆ.

Continue Reading

ಧಾರ್ಮಿಕ

Ballari News: ಬಾಯಿಯೊಳಗೆ ತ್ರಿಶೂಲ; ಬೆನ್ನಿಗೆ ಕೊಕ್ಕೆ ಕಟ್ಟಿಕೊಂಡು ಕಾರು, ರಿಕ್ಷಾ ಎಳೆದ ಭಕ್ತರು!

Ballari News: ಕಂಪ್ಲಿ ಕೋಟೆಯ ಮೀನುಗಾರರ ಕಾಲೋನಿಯಲ್ಲಿ ಮೀನುಗಾರ ಸಮುದಾಯದ ಆರಾಧ್ಯ ದೈವ ಶ್ರೀ ಕಾಳಮ್ಮ ದೇವಿಯ ಪೂಜಾ ಮಹೋತ್ಸವವು ಮಂಗಳವಾರ ಅದ್ಧೂರಿಯಾಗಿ ಜರುಗಿತು. ಹರಕೆ ತೀರಿಸುವ ಭಕ್ತರ ಆಚರಣೆಗಳು ಗಮನ ಸೆಳೆದವು.

VISTARANEWS.COM


on

Kalamma Devi Pooja Mahotsava in Kampli
Koo

ಕಂಪ್ಲಿ: ಕಂಪ್ಲಿ ಕೋಟೆಯ ಮೀನುಗಾರರ ಕಾಲೋನಿಯಲ್ಲಿ ಮೀನುಗಾರ ಸಮುದಾಯದ ಆರಾಧ್ಯ ದೈವ ಶ್ರೀ ಕಾಳಮ್ಮ ದೇವಿಯ ಪೂಜಾ ಮಹೋತ್ಸವವು ಮಂಗಳವಾರ ಅದ್ಧೂರಿಯಾಗಿ (Ballari News) ಜರುಗಿತು.

ಸೋಮವಾರ ಸಂಜೆ ಗಂಗೆಸ್ಥಳ ಮತ್ತು ಅಗ್ನಿ ಕುಂಭೋತ್ಸವ ಸೇರಿದಂತೆ ವಿವಿಧ ರೀತಿಯ ಧಾರ್ಮಿಕ ಕಾರ್ಯಕ್ರಮಗಳು ಶ್ರದ್ಧಾಭಕ್ತಿಯಿಂದ ಜರುಗಿದವು. ಮೆರವಣಿಗೆಯಲ್ಲಿ ಮೂವರು ಭಕ್ತಾದಿಗಳು ಬಾಯಿಗೆ 12 ಅಡಿ ಉದ್ದದ ತ್ರಿಶೂಲ ಅಸ್ತ್ರವನ್ನು ಹಾಕಿಸಿಕೊಂಡು ಕಲ್ಲುಗುಂಡು, ಇಬ್ಬರು ಭಕ್ತಾದಿಗಳು ಆಟೋರಿಕ್ಷಾ, ಇಬ್ಬರು ಭಕ್ತರು ಕಾರುಗಳನ್ನು ತಮ್ಮ ಬೆನ್ನುಗಳಿಗೆ ಹಾಕಿದ್ದ ಕಬ್ಬಿಣದ ಕೊಕ್ಕೆಗಳಿಂದ ಎಳೆದು ತಮ್ಮ ಹರಕೆ ತೀರಿಸಿದರು. ಟ್ರ್ಯಾಕ್ಟರ್‌ಗೆ ಹಾಕಲಾಗಿದ್ದ ಬೊಂಬುಗಳಿಗೆ ತಮ್ಮ ಬೆನ್ನಿಗೆ ಹಾಕಲಾಗಿದ್ದ ಕೊಕ್ಕೆಯಿಂದ ಜೋತು ಬೀಳುವ ಮೂಲಕ ಭಕ್ತಿ ಸಮರ್ಪಿಸಿದರು.

ಇದನ್ನೂ ಓದಿ: Job Alert: ನೈವೇಲಿ ಲಿಗ್ನೈಟ್ ಕಾರ್ಪೋರೇಷನ್‌ನಲ್ಲಿದೆ ಉದ್ಯೋಗಾವಕಾಶ; ಪದವಿ ಪಡೆದವರು ಅರ್ಜಿ ಸಲ್ಲಿಸಿ

ಮೆರವಣಿಗೆಯು ಶ್ರೀ ಕಾಳಮ್ಮ ದೇವಸ್ಥಾನದಿಂದ ಶ್ರೀ ಸುಂಕಲಮ್ಮ ದೇವಸ್ಥಾನದ ವರೆಗೂ ಜರುಗಿತು. ಭಕ್ತಾದಿಗಳು ರಸ್ತೆಯುದ್ದಕ್ಕೂ ತಮ್ಮ ಬೆನ್ನಿಗೆ ಹಾಕಲಾಗಿದ್ದ ಕೊಕ್ಕೆಯಿಂದ ತಮ್ಮ ಹರಕೆಯಂತೆ ಸುಡು ಬಿಸಿಲ ಮಧ್ಯೆಯು ಗುಂಡು, ಆಟೋ, ಕಾರುಗಳನ್ನು ಎಳೆದೊಯ್ದು ಭಕ್ತಿ ಸಮರ್ಪಿಸಿದರು.

ಪಟ್ಟಣದ ಸೇರಿದಂತೆ ತಾಲೂಕಿನ ವಿವಿಧೆಡೆಗಳಿಂದ ಆಗಮಿಸಿದ್ದಂತಹ ಭಕ್ತರು ವಿಶೇಷ ಆಚರಣೆಯನ್ನು ನೋಡಿ ಕಣ್ ತುಂಬಿಕೊಳ್ಳುವ ಮೂಲಕ ಆಶ್ಚರ್ಯ ಚಕಿತರಾದರು. ಕಾರ್ಯಕ್ರಮದ ಪೌರೋಹಿತ್ಯವನ್ನು ಮಾರೆಪ್ಪ ಪೂಜಾರಿ ವಹಿಸಿದ್ದರು.

ಇದನ್ನೂ ಓದಿ: Koppala News: ಗ್ರಾಮೀಣ ಭಾಗದಲ್ಲಿ ಕುಡಿಯುವ ನೀರು ಸಿಗುವಂತೆ ಕ್ರಮ ಕೈಗೊಳ್ಳಲು ಜಿ.ಪಂ ಸಿಇಒ ಸೂಚನೆ

ಈ ಸಂದರ್ಭದಲ್ಲಿ ಮೀನುಗಾರ ಸಹಕಾರ ಸಂಘದ ಅಧ್ಯಕ್ಷ ಚೆನ್ನರಾಜು, ಉಪಾಧ್ಯಕ್ಷ ಷಣ್ಮುಖಪ್ಪ, ಮುಖಂಡರಾದ ಮಾರೆಪ್ಪ ಪೂಜಾರಿ, ಸ್ವಾಮಿ ದೊರೆ, ಎ. ಗಣೇಶ್, ಎಸ್.ಜಿ.ಪೂಜಾರಿ, ಗುರುಮೂರ್ತಿ, ಪಣಿಯಪ್ಪ, ಆರ್. ಕೃಷ್ಣ ಪೂಜಾರಿ, ಎಸ್.ಆರ್. ಸುರೇಶ್ ಸೇರಿದಂತೆ ಸರ್ವ ಸಮುದಾಯಗಳ ಸದ್ಭಕ್ತರು ಪಾಲ್ಗೊಂಡಿದ್ದರು.

Continue Reading

ಕರ್ನಾಟಕ

Lok Sabha Election: 60 ವರ್ಷ ದೇಶವಾಳಿದ ನಕಲಿ ಗಾಂಧಿ ಕಂಪನಿಯಲ್ಲಿ ಪ್ರಧಾನಿ ಅಭ್ಯರ್ಥಿಗೆ ಬರ: ಜೋಶಿ ಲೇವಡಿ

Lok Sabha Election 2024: ಈಗಿನ ಗಾಂಧಿ ಕಂಪನಿಯಲ್ಲಿ ಪ್ರಧಾನಿ ಅಭ್ಯರ್ಥಿಯೇ ಇಲ್ಲ. ರಾಹುಲ್ ಗಾಂಧಿ ಪ್ರಧಾನಿ ಅಭ್ಯರ್ಥಿಯನ್ನಾಗಿ ಘೋಷಿಸುವ ಧೈರ್ಯವೂ ಕಾಂಗ್ರೆಸ್ಸಿಗಿಲ್ಲ ಎಂದು ಕೇಂದ್ರ ಸಚಿವ ಪ್ರಲ್ಹಾದ್‌ ಜೋಶಿ ಹೇಳಿದ್ದಾರೆ.

VISTARANEWS.COM


on

Union Minister Pralhad Joshi election campaign in Sattur
Koo

ಹುಬ್ಬಳ್ಳಿ: ಭಾರತವನ್ನು 60 ವರ್ಷಗಳ ಸುದೀರ್ಘ ಕಾಲ ಗಾಂಧಿ ಕುಟುಂಬವೇ ಆಳಿದ್ದು, ನಕಲಿ ಗಾಂಧಿ ಕಂಪನಿಯದ್ದೇ ಕಾರುಬಾರಿತ್ತು. ಹಾಗಿದ್ದರೂ ಅಭಿವೃದ್ಧಿ ಮಾತ್ರ ಶೂನ್ಯ ಎಂದು ಕೇಂದ್ರ ಸಚಿವ ಪ್ರಲ್ಹಾದ್‌ ಜೋಶಿ (Lok Sabha Election 2024) ಆರೋಪಿಸಿದರು.

ಧಾರವಾಡ ಪಶ್ಚಿಮ ವಿಧಾನಸಭಾ ಕ್ಷೇತ್ರದ ಸತ್ತೂರಿನಲ್ಲಿ ಲೋಕಸಭೆ ಚುನಾವಣೆ ಪ್ರಚಾರ ಸಭೆಯಲ್ಲಿ ಮಾತನಾಡಿದ ಅವರು, ಗಾಂಧಿ ಕುಟುಂಬದಲ್ಲಿ ಅಂದಿಗೂ-ಇಂದಿಗೂ ಬಹು ವ್ಯತ್ಯಾಸವಿದೆ ಎಂದು ಹೇಳಿದರು.

ಈಗಿನ ಗಾಂಧಿ ಕಂಪನಿಯಲ್ಲಿ ಪ್ರಧಾನಿ ಅಭ್ಯರ್ಥಿಯೇ ಇಲ್ಲ

ಈಗಿನ ಗಾಂಧಿ ಕಂಪನಿಯಲ್ಲಿ ಪ್ರಧಾನಿ ಅಭ್ಯರ್ಥಿಯೇ ಇಲ್ಲ. ರಾಹುಲ್ ಗಾಂಧಿ ಪ್ರಧಾನಿ ಅಭ್ಯರ್ಥಿಯನ್ನಾಗಿ ಘೋಷಿಸುವ ಧೈರ್ಯವೂ ಕಾಂಗ್ರೆಸ್ಸಿಗಿಲ್ಲ. ರಾಹುಲ್ ರನ್ನು ಪ್ರಧಾನಿ ಅಭ್ಯರ್ಥಿ ಎಂದರೆ ಬರುವ ವೋಟು ಬರುವುದಿಲ್ಲ ಎಂಬ ಭಯ ಕಾಂಗ್ರೆಸ್‌ಗೆ ಎಂದು ಜೋಶಿ ಲೇವಡಿ ಮಾಡಿದರು.

ಇದನ್ನೂ ಓದಿ: E-Pass Mandatory: ಊಟಿ, ಕೊಡೈಕೆನಾಲ್‌ ಪ್ರವಾಸ ಹೊರಟಿದ್ದೀರಾ? ಹಾಗಿದ್ದರೆ ಗಮನಿಸಿ

ಒಂದು ಸುರಕ್ಷಿತ, ಸುಭದ್ರ ದೇಶಕ್ಕೆ ರಕ್ಷಣಾ ನೀತಿ, ಬಲಿಷ್ಠ ಆರ್ಥಿಕ ನೀತಿಗೆ ಯೋಚಿಸಬೇಕು. ಆದರೆ, ಕಾಂಗ್ರೆಸ್‌ಗೆ ದೇಶ ರಕ್ಷಣೆ ಬೇಕಿಲ್ಲ. ಬರೀ ಅಧಿಕಾರ, ವೋಟ್ ಬ್ಯಾಂಕ್ ಮತ್ತು ತುಷ್ಟೀಕರಣಕ್ಕೇ ಮಹತ್ವ ಕೊಡುತ್ತದೆ ಎಂದು ಆರೋಪಿಸಿದರು.

ಮೋದಿ ನೇತೃತ್ವದ ಭಾರತ ಬಲಿಷ್ಠ

ನರೇಂದ್ರ ಮೋದಿ ಅವರು ಪ್ರಧಾನಿಯಾದ ಮೇಲೆ ಭಾರತ ಬಲಿಷ್ಠವಾಗುತ್ತಿದೆ. ಜಾಗತಿಕವಾಗಿ ತನ್ನ ತಾಕತ್ತನ್ನು ಪ್ರದರ್ಶಿಸಿದೆ ಎಂದು ಪ್ರತಿಪಾದಿಸಿದರು.

ಹಿಂತಿರುಗಿ ನೋಡದ ಭಾರತ

ಆರ್ಥಿಕವಾಗಿ ಭಾರತ ಹಿಂತಿರುಗಿ ನೋಡದಂತೆ ಸಶಕ್ತವಾಗಿದೆ. ಅಭಿವೃದ್ಧಿಯಲ್ಲೂ ಮುಂದಿದೆ. ಅಂತಾರಾಷ್ಟ್ರೀಯ ಮಟ್ಟದಲ್ಲಿ ಇದು “ಮೋದಿ ಇಂಡಿಯಾ” ಎಂದು ಗುರುತಿಸುವಷ್ಟರ ಮಟ್ಟಿಗೆ ಪ್ರಗತಿ ಸಾಧಿಸಿದೆ ಎಂದು ಹೇಳಿದರು.

ಇದನ್ನೂ ಓದಿ: T20 World Cup 2024: ಟಿ20 ವಿಶ್ವಕಪ್​ಗೆ ತಂಡ ಪ್ರಕಟಿಸಿದ ಆಸ್ಟ್ರೇಲಿಯಾ; ಅನುಭವಿ ಸ್ಮಿತ್​ಗೆ ಅವಕಾಶವಿಲ್ಲ

ಕಾಂಗ್ರೆಸ್ 60 ವರ್ಷದ ಆಡಳಿತದಲ್ಲಿ 60000 ಕಿ.ಮೀ. ರಾಷ್ಟ್ರೀಯ ಹೆದ್ದಾರಿ ನಿರ್ಮಿಸಿತ್ತು. ಆದರೆ ವಾಜಪೇಯಿ ಅವರು ಐದೇ ವರ್ಷದಲ್ಲಿ 30000 ಕಿ.ಮೀ. ಹೆದ್ದಾರಿ ನಿರ್ಮಿಸಿದರು. ಇನ್ನು ಪ್ರಧಾನಿ ಮೋದಿ ಹತ್ತೇ ವರ್ಷದಲ್ಲಿ 4 ಲೈನ್, 6 ಲೈನ್, 8 ಲೈನ್, 10 ಲೈನ್ ಎಲ್ಲಾ ಸೇರಿ ಒಟ್ಟು 60000 ಕಿ.ಮೀ. ರಾಷ್ಟ್ರೀಯ ಹೆದ್ದಾರಿ ನಿರ್ಮಿಸಿದ್ದಾರೆ ಎಂದು ಸಚಿವ ಜೋಶಿ ವಿವರಿಸಿದರು.

ಭಯೋತ್ಪಾದನೆಗೆ ಬೀಗ

ಹಿಂದೆ ದೇಶಾದ್ಯಂತ ಬಾಂಬ್‌ಗಳು ಹಾರುತ್ತಿದ್ದವು. ಸೈನಿಕರನ್ನು, ಅಮಾಯಕ ಜನರನ್ನು ಕಳೆದುಕೊಂಡು ಮೇಣದ ಬತ್ತಿ ಹಚ್ಚಿ ಸುಮ್ಮನಾಗುವ ಕಾಲವಿತ್ತು. ಇದೀಗ ಈ ದಿನಗಳಿಲ್ಲ. ಭಯೋತ್ಪಾದಕರು ತಯಾರಾಗುವ ತಾಣದಲ್ಲೇ ಹೊಡೆದುರುಳಿಸುವಷ್ಟು ಸಾಮರ್ಥ್ಯವನ್ನು ಮೋದಿ ಭಾರತ ಹೊಂದಿದೆ ಎಂದರು.

ಸರ್ವ ವರ್ಗದ ಜನರ ಏಳಿಗೆಗಾಗಿ ಶ್ರಮಿಸುತ್ತಿರುವ ಪ್ರಧಾನಿ ನರೇಂದ್ರ ಮೋದಿಯವರು ಬಡತನ ನಿರ್ಮೂಲನೆಗಾಗಿ ಸಾಕಷ್ಟು ಯೋಜನೆಗಳನ್ನು ಜಾರಿಗೊಳಿಸಿದ್ದಾರೆ ಎಂದರು.

ಇದನ್ನೂ ಓದಿ: IPL 2024 Points Table: 3ನೇ ಸ್ಥಾನಕ್ಕೇರಿದ ಲಕ್ನೋ; ಕುಸಿತ ಕಂಡ ಹಾಲಿ ಚಾಂಪಿಯನ್​ ಚೆನ್ನೈ

ಸಭೆಯಲ್ಲಿ ಮುಖಂಡರಾದ ನೀಲವ್ವ ಅರವಳದ, ಶಿವಣ್ಣ ಬಡವಣ್ಣನವರ, ಮಂಜುಳಾ ಸಾಕರೆಪುಂಡಲಿಕ ತಳವಾರ, ಮೈಲಾರ ಉಪ್ಪಿನ, ಮಾರುತಿ ಇಂಗನಳ್ಳಿ, ಶಂಕ್ರಣ್ಣ ನವಲೂರು, ಮಾಲತಿ ಹುಲಿಕಟ್ಟಿ ಹಾಗೂ ಪಕ್ಷದ ಮುಖಂಡರು, ಕಾರ್ಯಕರ್ತರು ಮತ್ತು ಇತರರು ಉಪಸ್ಥಿತರಿದ್ದರು.

Continue Reading
Advertisement
Jain Diksha
ಕರ್ನಾಟಕ40 seconds ago

Jain Diksha: ಕೋಟ್ಯಂತರ ರೂ. ಆಸ್ತಿ ತ್ಯಜಿಸಿ ಜೈನ ಸನ್ಯಾಸ ದೀಕ್ಷೆ ಪಡೆದ ಬೆಂಗಳೂರಿನ ಉದ್ಯಮಿಯ ಪತ್ನಿ, 11 ವರ್ಷದ ಮಗ!

Goldy Brar
ದೇಶ5 mins ago

Goldy Brar: ಸಿಧು ಮೂಸೆವಾಲಾ ಹತ್ಯೆ ರೂವಾರಿ ಗೋಲ್ಡಿ ಬ್ರಾರ್‌ ಅಮೆರಿಕದಲ್ಲಿ ಕೊಲೆ; ಕೊಂದಿದ್ದು ಯಾರು?

Hassan Pen Drive case Siddaramaiah writes to PM Modi seeking cancellation of Prajwal Revanna diplomatic passport
ಹಾಸನ14 mins ago

Hassan Pen Drive Case: ಪ್ರಜ್ವಲ್‌ ರೇವಣ್ಣರ ಡಿಪ್ಲೊಮ್ಯಾಟಿಕ್‌ ಪಾಸ್‌ಪೋರ್ಟ್‌ ರದ್ದು ಕೋರಿ ಪ್ರಧಾನಿ ಮೋದಿಗೆ ಸಿದ್ದರಾಮಯ್ಯ ಪತ್ರ!

Prajwal Revanna related post By Rashmi Goutham
ಕ್ರೈಂ15 mins ago

Prajwal Revanna: ಮಹಿಳೆ ಹಸಿದಾಗ ಬಾಯಿಗೆ ಆಹಾರ ಹಾಕಿ…ʻಅದಲ್ಲʼ! ನಟಿಯ ಪೋಸ್ಟ್‌ ವೈರಲ್‌!

Diabetic Chutney
ಲೈಫ್‌ಸ್ಟೈಲ್18 mins ago

Diabetic Chutney: ಡಯಬಿಟಿಕ್‌ ಚಟ್ನಿ ನಿಮಗೆ ಗೊತ್ತೆ? ಇದು ಮಧುಮೇಹಿಗಳಿಗೆ ಉಪಯುಕ್ತ

Bathroom Cleaning Tips
ಲೈಫ್‌ಸ್ಟೈಲ್23 mins ago

Bathroom Cleaning Tips: ಬಾತ್‌ರೂಮ್‌ ಕನ್ನಡಿ ಕೊಳಕಾಗಿದೆಯೇ? ಚಿಂತೆ ಬಿಡಿ, ಈ ಟಿಪ್ಸ್ ಬಳಸಿ

Kalamma Devi Pooja Mahotsava in Kampli
ಧಾರ್ಮಿಕ27 mins ago

Ballari News: ಬಾಯಿಯೊಳಗೆ ತ್ರಿಶೂಲ; ಬೆನ್ನಿಗೆ ಕೊಕ್ಕೆ ಕಟ್ಟಿಕೊಂಡು ಕಾರು, ರಿಕ್ಷಾ ಎಳೆದ ಭಕ್ತರು!

Union Minister Pralhad Joshi election campaign in Sattur
ಕರ್ನಾಟಕ38 mins ago

Lok Sabha Election: 60 ವರ್ಷ ದೇಶವಾಳಿದ ನಕಲಿ ಗಾಂಧಿ ಕಂಪನಿಯಲ್ಲಿ ಪ್ರಧಾನಿ ಅಭ್ಯರ್ಥಿಗೆ ಬರ: ಜೋಶಿ ಲೇವಡಿ

IPL 2024
ಕ್ರೀಡೆ42 mins ago

IPL 2024: ನಾಯಕ ಹಾರ್ದಿಕ್​ ಪಾಂಡ್ಯ ಸೇರಿ ಮುಂಬೈ ತಂಡದ ಆಟಗಾರರಿಗೆ ಬಿತ್ತು ಭಾರೀ ದಂಡ

Salman Khan
ಸಿನಿಮಾ50 mins ago

Salman Khan: ಸಲ್ಮಾನ್‌ ಖಾನ್‌ ಮನೆ ಮೇಲೆ ಫೈರಿಂಗ್‌ ಕೇಸ್‌; ಪೊಲೀಸ್‌ ಕಸ್ಟಡಿಯಲ್ಲಿದ್ದ ಆರೋಪಿ ಆತ್ಮಹತ್ಯೆ

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ5 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

dina bhavishya read your daily horoscope predictions for April 30 2024
ಭವಿಷ್ಯ1 day ago

Dina Bhavishya: ಈ ರಾಶಿಗಳ ಉದ್ಯೋಗಿಗಳಿಗೆ ಇಂದು ಒತ್ತಡ ಹೆಚ್ಚಲಿದೆ!

PM Narendra modi in Bagalakote and Attack on Congress
Lok Sabha Election 20242 days ago

PM Narendra Modi: ಒಬಿಸಿಗೆ ಇದ್ದ ಮೀಸಲಾತಿ ಪ್ರಮಾಣಕ್ಕೆ ಮುಸ್ಲಿಮರನ್ನು ಸೇರಿಸಲು ಕಾಂಗ್ರೆಸ್‌ ಷಡ್ಯಂತ್ರ: ಮೋದಿ ವಾಗ್ದಾಳಿ

PM Narendra modi in Bagalakote for Election Campaign and here is Live telecast
Lok Sabha Election 20242 days ago

PM Narendra Modi Live: ಇಂದು ಬಾಗಲಕೋಟೆಯಲ್ಲಿ ನರೇಂದ್ರ ಮೋದಿ ಹವಾ; ಲೈವ್‌ಗಾಗಿ ಇಲ್ಲಿ ವೀಕ್ಷಿಸಿ

dina bhavishya read your daily horoscope predictions for April 29 2024
ಭವಿಷ್ಯ2 days ago

Dina Bhavishya : ಈ ರಾಶಿಯವರಿಗೆ ಇಂದು ಸಂತೋಷವೇ ಸಂತೋಷ! ಹೂಡಿಕೆಯಲ್ಲಿ ಲಾಭ ಯಾರಿಗೆ?

Narendra Modi
Lok Sabha Election 20243 days ago

PM Narendra Modi: ಇವಿಎಂ ದೂರುವ ಕಾಂಗ್ರೆಸ್‌ಗೆ ಸೋಲಿನ ಭೀತಿ; ಕರ್ನಾಟಕದಲ್ಲಿ 1 ಸೀಟನ್ನೂ ಗೆಲ್ಲಲ್ಲವೆಂದ ಮೋದಿ!

PM Narendra Modi in Sirsi
Lok Sabha Election 20243 days ago

PM Narendra Modi: ಕಾಂಗ್ರೆಸ್ ರಾಮ ವಿರೋಧಿ; ಮನೆಗೆ ಹೋಗಿ ಕರೆದರೂ ಮಂದಿರ ಉದ್ಘಾಟನೆಗೆ ಬರಲಿಲ್ಲ: ಮೋದಿ ಟೀಕೆ

If Congress comes to power all your assets will belong to Government says PM Narendra Modi
Lok Sabha Election 20243 days ago

Narendra Modi: ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ನೀವು ಕಷ್ಟಪಟ್ಟು ಸಂಪಾದಿಸಿದ ಆಸ್ತಿಯೆಲ್ಲ ಅನ್ಯರ ಪಾಲು: ಮೋದಿ ಎಚ್ಚರಿಕೆ

Congress ties with Aurangzeb supporters and Girls killed under his rule says Narendra Modi
Lok Sabha Election 20243 days ago

Narendra Modi: ಔರಂಗಜೇಬ್ ಬೆಂಬಲಿಗರ ಜತೆ ಕಾಂಗ್ರೆಸ್ ದೋಸ್ತಿ; ಇವರ ಆಡಳಿತದಲ್ಲಿ ಹೆಣ್ಣು ಮಕ್ಕಳ ಹತ್ಯೆ: ಮೋದಿ ವಾಗ್ದಾಳಿ

Modi in Karnataka stay in Belagavi tomorrow and Huge gatherings at five places
Latest3 days ago

Narendra Modi Live : ಪ್ರಧಾನಿ ಮೋದಿಯ ಬೆಳಗಾವಿ ಪ್ರಚಾರ ಸಭೆಯ ನೇರ ಪ್ರಸಾರವನ್ನು ಇಲ್ಲಿ ವೀಕ್ಷಿಸಿ…

Dina Bhavishya
ಭವಿಷ್ಯ3 days ago

Dina Bhavishya : ಈ ರಾಶಿಯವರಿಗೆ ದಿನದ ಮಟ್ಟಿಗೆ ಖರ್ಚು ಹೆಚ್ಚು

ಟ್ರೆಂಡಿಂಗ್‌