Site icon Vistara News

Kidwai Hospital | ಕಿದ್ವಾಯಿ ನೂತನ ನಿರ್ದೇಶಕರಾಗಿ ಡಾ.ವಿ‌.ಲೋಕೇಶ್ ನೇಮಕ

Kidwai Hosptail

ಬೆಂಗಳೂರು: ಕಿದ್ವಾಯಿ ಸ್ಮಾರಕ ಗಂಥಿ ಸಂಸ್ಥೆಯ (Kidwai Hospital) ನೂತನ ನಿರ್ದೇಶಕರಾಗಿ ಡಾ.ವಿ‌.ಲೋಕೇಶ್ ಅವರನ್ನು ರಾಜ್ಯ ಸರ್ಕಾರ ನೇಮಕ ಮಾಡಿ ಆದೇಶಿಸಿದೆ.

ಕಳೆದ 28 ವರ್ಷಗಳಿಂದ ರೇಡಿಯೇಷನ್ ಆಂಕಾಲಜಿ ವಿಭಾಗದಲ್ಲಿ ವಿವಿಧ ವೃಂದದಲ್ಲಿ ಕಾರ್ಯನಿರ್ವಹಿಸಿದ್ದಾರೆ. ವೈದ್ಯಕೀಯ ಕ್ಷೇತ್ರದಲ್ಲಿನ ಸೇವೆ ಅಮೋಘ ಸಾಧನೆಯನ್ನು ಪರಿಗಣಿಸಿ ಡಾ‌.ವಿ.ಲೋಕೇಶ್ ಅವರನ್ನು ರಾಜ್ಯ ಸರ್ಕಾರ ಕಿದ್ವಾಯಿ ಸ್ಮಾರಕ ಗಂಥಿ ಸಂಸ್ಥೆಯ ನಿರ್ದೇಶಕರನ್ನಾಗಿ ಆಯ್ಕೆ ಮಾಡಿದೆ.

ಡಾ.ಸಿ.ರಾಮಚಂದ್ರ ಅವರ ಅವಧಿ ಮುಗಿದ ಹಿನ್ನೆಲೆಯಲ್ಲಿ ನೂತನ ನಿರ್ದೇಶಕರಾಗಿ ಲೋಕೇಶ್‌ ಅವರನ್ನು ಆಯ್ಕೆ ಮಾಡಲಾಗಿದೆ. ಅಕ್ಟೋಬರ್‌ 17ರಂದೇ ನಿರ್ದೇಶಕರ ಹುದ್ದೆಗೆ ವರದಿ ಮಾಡಿಕೊಂಡಿದ್ದಾರೆ.

ಇದನ್ನೂ ಓದಿ | Good News | 11,133 ಪೌರ ಕಾರ್ಮಿಕರ ಕಾಯಂಗೆ ರಾಜ್ಯ ಸಚಿವ ಸಂಪುಟ ಅನುಮೋದನೆ

Exit mobile version