MB Patil: ಬೆಂಗಳೂರಿನಲ್ಲಿ ‘ನಾಲೆಡ್ಜ್‌-ಹೆಲ್ತ್‌- ಇನ್ನೋವೇಶನ್ ಆ್ಯಂಡ್ ರೀಸರ್ಚ್‌ ಸಿಟಿ: ಸಚಿವ ಎಂ.ಬಿ.ಪಾಟೀಲ್‌ - Vistara News

ಕರ್ನಾಟಕ

MB Patil: ಬೆಂಗಳೂರಿನಲ್ಲಿ ‘ನಾಲೆಡ್ಜ್‌-ಹೆಲ್ತ್‌- ಇನ್ನೋವೇಶನ್ ಆ್ಯಂಡ್ ರೀಸರ್ಚ್‌ ಸಿಟಿ: ಸಚಿವ ಎಂ.ಬಿ.ಪಾಟೀಲ್‌

MB Patil: ಬೆಂಗಳೂರು ಹೊರವಲಯದಲ್ಲಿ ಸುಮಾರು 2000 ಎಕರೆ ಪ್ರದೇಶದಲ್ಲಿ ‘ನಾಲೆಡ್ಜ್‌ -ಹೆಲ್ತ್‌- ಇನ್ನೋವೇಶನ್ ಆ್ಯಂಡ್ ರೀಸರ್ಚ್‌’ ಸಿಟಿ ಸ್ಥಾಪಿಸಲು ಯೋಜಿಸಲಾಗಿದೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಸಚಿವ ಎಂ.ಬಿ. ಪಾಟೀಲ್‌ ತಿಳಿಸಿದ್ದಾರೆ.

VISTARANEWS.COM


on

Minister MB Patil
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ನಗರದ ಹೊರವಲಯದಲ್ಲಿ ಸುಮಾರು 2000 ಎಕರೆ ಪ್ರದೇಶದಲ್ಲಿ ‘ನಾಲೆಡ್ಜ್‌ -ಹೆಲ್ತ್‌- ಇನ್ನೋವೇಶನ್ ಅಂಡ್ ರೀಸರ್ಚ್‌’ ಸಿಟಿ ಸ್ಥಾಪಿಸುವ ಉದ್ದೇಶವಿದ್ದು, ಯೋಜನೆಗೆ ಶೀಘ್ರದಲ್ಲೇ ಚಾಲನೆ ನೀಡಲಾಗುವುದು ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲಸೌಕರ್ಯ ಅಭಿವೃದ್ಧಿ ಸಚಿವ ಎಂ.ಬಿ. ಪಾಟೀಲ್‌ (MB Patil) ಹೇಳಿದರು.

ಕಾಂಗ್ರೆಸ್‌ ಸರ್ಕಾರ 100 ದಿನ ಪೂರೈಸಿದ ಸಂದರ್ಭದಲ್ಲಿ ಇಲಾಖೆಯ ಸಾಧನೆಗಳು, ಕೈಗೊಂಡಿರುವ ಪ್ರಮುಖ ಕ್ರಮಗಳ ಬಗ್ಗೆ ಮಾಹಿತಿ ನೀಡಲು ವಿಧಾನಸೌಧದಲ್ಲಿ ಶುಕ್ರವಾರ ಕರೆದಿದ್ದ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು.

ಬೆಂಗಳೂರು ಹೊರವಲಯದಲ್ಲಿ ಸುಮಾರು 2000 ಎಕರೆ ಪ್ರದೇಶದಲ್ಲಿ ‘ನಾಲೆಡ್ಜ್‌ -ಹೆಲ್ತ್‌- ಇನ್ನೋವೇಶನ್ ಆ್ಯಂಡ್ ರೀಸರ್ಚ್‌’ ಸಿಟಿ ಸ್ಥಾಪಿಸಲು ಯೋಜಿಸಲಾಗಿದೆ. ಮೊದಲ ಹಂತದಲ್ಲಿ 1000 ಎಕರೆ ಪ್ರದೇಶವನ್ನು ಅಭಿವೃದ್ಧಿ ಪಡಿಸಲಾಗುವುದು. ಈ ಸಿಟಿಯಲ್ಲಿ ವಿಶ್ವದರ್ಜೆಯ ವಿಶ್ವವಿದ್ಯಾಲಯ, ಆಸ್ಪತ್ರೆ, ಆವಿಷ್ಕಾರ- ಸಂಶೋಧನಾ ಕೇಂದ್ರಗಳಿರಲಿವೆ. ಈ ಯೋಜನೆ ಜಾಗತಿಕ ವಲಯದಲ್ಲಿ ಬೆಂಗಳೂರಿನ ಹೆಸರನ್ನು ಮತ್ತಷ್ಟು ಎತ್ತರಕ್ಕೆ ಕೊಂಡೊಯ್ಯುವುದರಲ್ಲಿ ಸಂದೇಹವಿಲ್ಲ ಎಂದು ಅವರು ತಿಳಿಸಿದರು.

ಕೈಗಾರಿಕಾ ಪ್ರದೇಶಗಳ ಮೂಲ ಸೌಕರ್ಯಗಳ ಸುಧಾರಣೆಗಾಗಿ ನಾವು ಮತ್ತೊಂದು ದಿಟ್ಟ ಹೆಜ್ಜೆ ಇಡುತ್ತಿದ್ದೇವೆ. ಸ್ಥಳೀಯ ಕೈಗಾರಿಕಾ ಅಸೋಸಿಯೇಷನ್‌ಗಳಿಗೆ ಪ್ರದೇಶದ ನಿರ್ವಹಣೆಯ ಜವಾಬ್ದಾರಿ ವಹಿಸಲಾಗುವುದು. ಇದರಿಂದ ಮೂಲಸೌಕರ್ಯದ ಬಹುತೇಕ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಲು ಸಾಧ್ಯವಾಗಲಿದೆ ಎಂಬ ವಿಶ್ವಾಸವಿದೆ ಎಂದರು.

ಇದನ್ನೂ ಓದಿ | Cauvery Dispute: ಕಾವೇರಿ ನೀರಿನ ಸಮಸ್ಯೆಗೆ ಮೇಕೆದಾಟು ಯೋಜನೆಯೊಂದೇ ಪರಿಹಾರ ಎಂದ ಡಿ.ಕೆ.ಶಿವಕುಮಾರ್‌

ಸರ್ಕಾರ ಮತ್ತು ಉದ್ಯಮಗಳ ನಡುವಿನ ಅಂತರವನ್ನು ನೀಗಿಸುವ ನಿಟಿನಲ್ಲಿ ಕೈಗಾರಿಕಾ ಪ್ರತಿನಿಧಿಗಳೊಂದಿಗೆ ಸಂವಾದ ಪ್ರಾರಂಭಿಸಿದ್ದೇನೆ. ಸ್ಟಾರ್ಟಪ್‌ಗಳಿಂದ ಆರಂಭಿಸಿ ಸಂಘಟಿತ ಸಂಸ್ಥೆಗಳವರೆಗೆ, ಏರೋಸ್ಪೇಸ್‌ನಿಂದ ಎಲೆಕ್ಟ್ರಿಕ್ ವಾಹನಗಳ ಉತ್ಪಾದಕರ ಜತೆ ಮಾತುಕತೆ ಸಾಗಿದೆ. ಇದಲ್ಲದೇ ನೆದರ್‌ಲ್ಯಾಂಡ್‌, ಜರ್ಮನಿ, ತೈವಾನ್ ಮತ್ತು ಇಸ್ರೇಲ್‌ನ ರಾಜತಾಂತ್ರಿಕರೊಂದಿಗೂ ಸಂವಾದ ನಡೆಯುತ್ತಿದ್ದು, ಈ ಮೂಲಕ ಕೈಗಾರಿಕಾ ಪರಿಸರಕ್ಕೆ ಪೂರಕ ವಾತಾವರಣ ಸೃಷ್ಟಿಸುವ ಕೆಲಸ ಆಗುತ್ತಿದೆ ಎಂದು ಮಾಹಿತಿ ನೀಡಿದರು.

Minister MB Patils press meet in vidhanasoudha

‘ಇನ್ವೆಸ್ಟ್‌ ಕರ್ನಾಟಕ’ ವೇದಿಕೆ ಪುನಾರಚನೆ

ರಾಜ್ಯದಲ್ಲಿ ಸದೃಢ ಕೈಗಾರಿಕಾ ಪರಿಸರ ಸೃಷ್ಟಿ ಜತೆಗೆ ಬಂಡವಾಳ ಆಕರ್ಷಣೆಗೆ ‘ಇನ್ವೆಸ್ಟ್‌ ಕರ್ನಾಟಕ’ ವೇದಿಕೆಯನ್ನು ಪುನಾರಚಿಸಲಾಗುತ್ತಿದೆ. ಉದ್ಯಮದ ದಿಗ್ಗಜರು ಈ ಮಂಡಳಿಯ ಭಾಗವಾಗಿದ್ದಾರೆ. ವೆಂಚರ್ ಕ್ಯಾಪಿಟಲ್, ಪ್ರೈವೇಟ್ ಇಕ್ವಿಟಿ ಮತ್ತು ಮೂಲಸೌಕರ್ಯ ಅಭಿವೃದ್ಧಿಯಂತಹ ವಿವಿಧ ವಲಯಗಳ ಅನುಭವಿಗಳನ್ನು ಒಳಗೊಂಡ ‘ಕಾರ್ಯತಂತ್ರ ಹೂಡಿಕೆ ಸಮಿತಿ’ ರಚಿಸಲಾಗಿದೆ. ಇದಲ್ಲದೇ, ಸುಲಲಿತ ವ್ಯವಹಾರಕ್ಕೆ ಅನುವು ಮಾಡಲು ಅತ್ಯಾಧುನಿಕ ಏಕಗವಾಕ್ಷಿ ವ್ಯವಸ್ಥೆಯನ್ನು ರೂಪಿಸುವ ಕೆಲಸ ಆಗುತ್ತಿದೆ. ಈ ಸಂಬಂಧ ಹಲವಾರು ಸುತ್ತಿನ ಚರ್ಚೆಗಳು ನೆಡೆದಿದ್ದು, ಶೀಘ್ರದಲ್ಲೇ ಕ್ರಮ ವಹಿಸಲಾಗುತ್ತದೆ,”ಎಂದು ಇಲಾಖೆಯಲ್ಲಿ ಕೈಗೊಂಡಿರುವ ಹೊಸ ಕ್ರಮಗಳನ್ನು ವಿವರಿಸಿದರು.

ಹೊಸ ಕೈಗಾರಿಕಾ ನೀತಿ ರಚಿಸಲು ನಮ್ಮ ಸರ್ಕಾರ ಮುಂದಾಗಿದ್ದು, ಇದರಲ್ಲಿ ರಫ್ತಿಗೆ ಹೆಚ್ಚಿನ ಒತ್ತು ನೀಡಲಾಗುವುದು. ಎಲೆಕ್ಟ್ರಿಕ್ ವೆಹಿಕಲ್ ಮತ್ತು ವೇರ್‌ಹೌಸಿಂಗ್ ಮತ್ತು ಲಾಜಿಸ್ಟಿಕ್ಸ್ ವಲಯಗಳಿಗೆ ಈಗಾಗಲೇ ಕರಡು ರೂಪುಗೊಂಡಿವೆ. ಸದ್ಯ ಇತರ ರಾಜ್ಯಗಳ ಕೈಗಾರಿಕಾ ನೀತಿಯ ಅಧ್ಯಯನ ನಡೆಯುತ್ತಿದ್ದು, ಶೀಘ್ರದಲ್ಲೇ ಪ್ರಗತಿಪರ ನೀತಿಯನ್ನು ಹೊರತರಲಿದ್ದೇವೆ. ಜತೆಗೆ, ಆಕರ್ಷಕ ಪ್ರೋತ್ಸಾಹಕ ಪ್ಯಾಕೇಜ್‌ಗಳನ್ನು ಘೋಷಿಸಲಿದ್ದೇವೆ ಎಂದು ತಿಳಿಸಿದರು.

ಬೃಹತ್ ಮತ್ತು ಮಧ್ಯಮ ಕೈಗಾರಿಕೆಗಳ ಬೆಳವಣಿಗೆಗೆ ಉತ್ತೇಜಿಸಲು 10 ಆದ್ಯತಾ ವಲಯಗಳಲ್ಲಿ ‘ವಿಷನ್ ಗ್ರೂಪ್’ ರಚಿಸುತ್ತೇವೆ. ಏರೋಸ್ಪೇಸ್ ಮತ್ತು ಡಿಫೆನ್ಸ್, ಮೆಷಿನ್ ಟೂಲ್ಸ್, ಇಎಸ್‌ಡಿಎಂ, ಫಾರ್ಮಾಸ್ಯುಟಿಕಲ್ಸ್, ಕೋರ್ ಮ್ಯಾನುಫ್ಯಾಕ್ಚರಿಂಗ್, ಆಟೋಮೋಟಿವ್/ಎಲೆಕ್ಟ್ರಿಕ್ ವೆಹಿಕಲ್ಸ್, ಇಂಡಸ್ಟ್ರಿ 5.0, ಟೆಕ್ಸ್‌ಟೈಲ್ಸ್ ಮತ್ತು ಗ್ರೀನ್ ಮತ್ತು ಉದಯೋನ್ಮುಖ ತಂತ್ರಜ್ಞಾನ ಒಳಗೊಂಡಿದೆ ಎಂದರು.

60,000 ಕೋಟಿ ರೂ. ಹೂಡಿಕೆ ಒಪ್ಪಂದ

ಹೂಡಿಕೆದಾರರ ನೆಚ್ಚಿನ ತಾಣ ಕರ್ನಾಟಕ ಎನ್ನುವುದರಲ್ಲಿ ಎರಡು ಮಾತಿಲ್ಲ. ಅದಕ್ಕೆ ಸಾಕ್ಷಿಯಾಗಿ, ನೂರು ದಿನಗಳಲ್ಲಿ ಕರ್ನಾಟಕದಲ್ಲಿ ಬರೋಬ್ಬರಿ 60,000 ಕೋಟಿ ರೂ. ಬಂಡವಾಳ ಹೂಡಿಕೆ ಒಪ್ಪಂದ ಆಗಿದೆ. ಮುಖ್ಯವಾಗಿ ಇದರಿಂದ 30,000 ಹೊಸ ಉದ್ಯೋಗಗಳು ಸೃಷ್ಟಿಯಾಗಲಿವೆ ಎಂದು ಹೇಳಲು ಬಹಳ ಖುಷಿಯಾಗುತ್ತದೆ ಎಂದು ಸಚಿವರು ಹೇಳಿದರು.

ಫಾಕ್ಸ್‌ಕಾನ್, ಜೆಎಸ್‌ಡಬ್ಲ್ಯೂ ಎನರ್ಜಿ, ಟಾಟಾ ಎಲೆಕ್ಟ್ರಾನಿಕ್ಸ್‌ ಮತ್ತು ಐಬಿಸಿ ಮುಂತಾದ ಕಂಪನಿಗಳೊಂದಿಗಿನ ಫಲಪ್ರದ ಮಾತುಕತೆ ನಡೆಸಲಾಗಿದೆ. ಈ ಕಂಪನಿಗಳು ದೊಡ್ಡ ಮೊತ್ತದ ಹೂಡಿಕೆ ಒಪ್ಪಂದಗಳಿಗೆ ಸಹಿ ಮಾಡಿವೆ. ಈ ವಿವರಗಳನ್ನು ಈಗಾಗಲೇ ನಿಮ್ಮೊಂದಿಗೆ ಹಂಚಿಕೊಂಡಿದ್ದೇನೆ ಎಂದು ಅವರು ತಿಳಿಸಿದರು.

20ಕ್ಕೂ ಹೆಚ್ಚು ಸಂಭಾವ್ಯ ಹೂಡಿಕೆದಾರರ ಜತೆ ಮಾತುಕತೆ ನಡೆಯುತ್ತಿದ್ದು, ಇದು ಸಫಲವಾದರೆ ರಾಜ್ಯಕ್ಕೆ 1,00,000 ಕೋಟಿ ರೂಪಾಯಿ ಬಂಡವಾಳ ಹರಿದು ಬರಲಿದೆ. ಸಂಭಾವ್ಯ ಹೂಡಿಕೆದಾರರ ಪೈಕಿ ತೈವಾನ್, ಕೊರಿಯಾ ಮೂಲದ ಬಹುರಾಷ್ಟ್ರೀಯ ಕಂಪನಿಗಳು ಮತ್ತು ಸಾರ್ವಜನಿಕ ಮತ್ತು ಖಾಸಗಿ ವಲಯದ ಪ್ರಮುಖ ಕಂಪನಿಗಳು ಸೇರಿವೆ ಎಂದು ವಿವರ ನೀಡದರು.

ಮುಂದಿನ ಏಪ್ರಿಲ್‌ಗೆ ವಿಜಯಪುರ ವಿಮಾನ ನಿಲ್ದಾಣ ಉದ್ಘಾಟನೆ

ವಿಜಯಪುರ ವಿಮಾನ ನಿಲ್ದಾಣದ ಕಾಮಗಾರಿಗಳು ಭರದಿಂದ ಸಾಗಿದ್ದು, 2024ರ ಏಪ್ರಿಲ್ ವೇಳೆಗೆ ಉದ್ಘಾಟನೆ ಮಾಡಲು ಎಲ್ಲ ಕ್ರಮಗಳನ್ನೂ ಕೈಗೊಳ್ಳಲಾಗುತ್ತಿದೆ. ಇದರಿಂದ ವಿಜಯಪುರ, ಬಾಗಲಕೋಟೆ, ಯಾದಗಿರಿ, ರಾಯಚೂರು ಮತ್ತು ಕೊಪ್ಪಳ ಜಿಲ್ಲೆಗಳ ಆರ್ಥಿಕ ಬೆಳವಣಿಗೆಗೆ ಚೈತನ್ಯ ಬರಲಿದೆ. ಜತೆಗೆ, ಹಾಸನ ವಿಮಾನ ನಿಲ್ದಾಣ ಕಾಮಗಾರಿ ಪ್ರಗತಿಯಲ್ಲಿದೆ ಎಂದರು.

ಕೆಎಸ್‌ಐಐಡಿಸಿ ವತಿಯಿಂದ ಉತ್ತರ ಕನ್ನಡದ ತದಡಿಯಲ್ಲಿ 1,819 ಎಕರೆ ವಿಸ್ತಾರದಲ್ಲಿ ಸರ್ಕಾರ ಮತ್ತು ಖಾಸಗಿ ಸಹಭಾಗಿತ್ವದಲ್ಲಿ ಇಕೋ ಟೂರಿಸಂ ಪಾರ್ಕ್‌ ಸ್ಥಾಪಿಸಲು ಅಗತ್ಯ ಕ್ರಮ ವಹಿಸಲಾಗುತ್ತಿದೆ. ಅಲ್ಲದೇ, ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಸಮೀಪ 407 ಎಕರೆ ವಿಸ್ತೀರ್ಣದಲ್ಲಿ ದೆಹಲಿಯ ಏರೋ ಸಿಟಿ ಮಾದರಿಯಲ್ಲಿ ‘ಬಿಸಿನೆಸ್‌ ಪಾರ್ಕ್‌’ ಸ್ಥಾಪಿಸಲು ಯೋಜಿಸಲಾಗುತ್ತದೆ ಎಂದರು.

ಬೆಂಗಳೂರು ಸಬ್ಅರ್ಬನ್ ಯೋಜನೆಯ ಮೊದಲನೆಯ ಹಂತವು 149 ಕಿ.ಮೀ. ಇದ್ದು, 2ನೇ ಹಂತದಲ್ಲಿ 452 ಕಿ.ಮೀ.ಗಳಿಗೆ ವಿಸ್ತರಿಸಲು ಈಗಾಗಲೇ ಪ್ರಸ್ತಾವನೆ ಸಿದ್ಧಪಡಿಸಲಾಗಿದೆ. ಈ ಸಂಬಂಧ ಕೆ-ಆರ್‌ಐಡಿಇ ಸಂಸ್ಥೆಯು ಕೇಂದ್ರ ರೈಲ್ವೆ ಸಚಿವಾಲಯದ ಅನುಮತಿಯನ್ನು ನಿರೀಕ್ಷಿಸುತ್ತಿದೆ ಎಂದು ತಿಳಿಸಿದರು.

ಎಂಎಸ್‌ಐಎಲ್‌- ಸಮಗ್ರ ಬದಲಾವಣೆ

ಎಂಎಸ್‌ಐಲ್‌ನಲ್ಲಿ ಸಮಗ್ರ ಬದಲಾವಣೆ ತರಲಾಗುತ್ತಿದ್ದು, ರಾಜ್ಯಾದ್ಯಂತ ಉನ್ನತ ದರ್ಜೆಯ 100 ಮದ್ಯ ಮಾರಾಟ ಮಳಿಗೆಗಳನ್ನು ತೆರೆಯುವ ಯೋಜನೆ ರೂಪಿಸಲಾಗಿದೆ. ಮೊದಲ ಹಂತದಲ್ಲಿ 30 ಮಳಿಗೆಗಳನ್ನು ಆರಂಭಿಸಲಾಗುತ್ತಿದ್ದು, ಈ ಪೈಕಿ 10 ಮಳಿಗೆಗಳು ಬೆಂಗಳೂರು ನಗರದ ವಿವಿಧ ಭಾಗಗಳಲ್ಲಿ ತೆರೆಯಲಾಗುವುದು. ಅಲ್ಲದೇ, ಸಂಸ್ಥೆಯ ಚಿಟ್‌ ಫಂಡ್‌ನಲ್ಲೂ ಹಲವು ಸುಧಾರಣೆ ತರಲಾಗುತ್ತಿದ್ದು, ಜನರ ಹಣವನ್ನು ಅತ್ಯಂತ ಕಾಳಜಿಯಿಂದ ನಿರ್ವಹಿಸಲಾಗುತ್ತದೆ. ಜನಪ್ರಿಯ ‘ಲೇಖಕ್‌’ ನೋಟ್‌ ಪುಸ್ತಕದ ಬ್ರ್ಯಾಂಡ್‌ಗೆ ಹೊಸ ರೂಪ ನೀಡಲಾಗುತ್ತಿದೆ. ಅದೇ ರೀತಿ ಮೈಸೂರಿನ ಮಹಾರಾಜರು ಆರಂಭಿಸಿದ್ದ ‘ಮೈಸೂರು ಸ್ಯಾಂಡಲ್ ಸೋಪ್‌’ನ ಹಿರಿಮೆಯನ್ನು ಎತ್ತಿ ಹಿಡಿಯುವ ಕೆಲಸ‌ ಮಾಡಲು ಬದ್ಧರಾಗಿದ್ದೇವೆ ಎಂದು ಸಚಿವರು ಹೇಳಿದರು.

ಇದನ್ನೂ ಓದಿ | Cauvery Water Dispute: ಕಾವೇರಿ ನೀರು ಹಂಚಿಕೆ ಪ್ರಕರಣದ ವಿಚಾರಣೆ ಸೆ.6ಕ್ಕೆ ಮುಂದೂಡಿಕೆ, ನೀರು ನಿಲ್ಲಸಲಾಗಲ್ಲ ಎಂದ ಡಿಕೆಶಿ!

ಕರ್ನಾಟಕ ಮಾಡೆಲ್

‌ಚುನಾವಣೆ ಸಂದರ್ಭದಲ್ಲಿ ನೀಡಿದ್ದ 5 ಪ್ರಮುಖ ಭರವಸೆಗಳ ಪೈಕಿ ನಾಲ್ಕನ್ನು ಮೊದಲ 100 ದಿನಗಳಲ್ಲೇ ಈಡೇರಿಸಿದ್ದು ನಮ್ಮ ನೆಚ್ಚಿನ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದ ಸರ್ಕಾರದ ಸಾಧನೆ. ಐದು ಗ್ಯಾರಂಟಿಗಳ ಪೈಕಿ ನಾಲ್ಕು- ಮಹಿಳಾ ಸಬಲೀಕರಣಕ್ಕಾಗಿಯೇ ರೂಪಿಸಿದ್ದೇವೆ. ಈ ಮೂಲಕ ಇಡೀ ದೇಶಕ್ಕೆ ನಾವು ‘ಕರ್ನಾಟಕ ಮಾಡೆಲ್’ ಏನೆಂದು ಸಾಬೀತು ಪಡಿಸಿದ್ದೇವೆ. ಯಾವುದೇ ಸರ್ಕಾರದ ಮೊದಲ 100 ದಿನಗಳನ್ನು ಸಾಮಾನ್ಯವಾಗಿ ಅದರ ಭವಿಷ್ಯದ ದಿಕ್ಸೂಚಿ ಎಂದೇ ಪರಿಗಣಿಸಲಾಗುತ್ತದೆ, ಮುಂದಿನ ಪ್ರಯತ್ನಗಳಿಗೆ ಇದು ನೀಲನಕ್ಷೆ ಎಂದು ಹೇಳಿದರು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

Lok Sabha Election 2024

CM Siddaramaiah: ಲೋಕಸಭಾ ಚುನಾವಣೆಯಲ್ಲಿ ಸಿಎಂ ಸಿದ್ದರಾಮಯ್ಯ ಪ್ರಕಾರ ಕಾಂಗ್ರೆಸ್‌ಗೆ ಎಷ್ಟು ಸೀಟ್‌? ಸಂಪುಟ ಪುನಾರಚನೆ ಇಲ್ಲ!

CM Siddaramaiah: ಬಿಜೆಪಿಯವರಂತೆ 28 ಕ್ಷೇತ್ರಗಳನ್ನೂ ಗೆಲ್ಲುತ್ತೇವೆ ಎಂದು ನಾನು ಹೇಳುವುದಿಲ್ಲ. ಆದರೆ, ನಮ್ಮ ಕಾಂಗ್ರೆಸ್‌ ಪಕ್ಷವು ಕನಿಷ್ಠ 15 ಸ್ಥಾನ ಹಾಗೂ ಗರಿಷ್ಠ 20 ಸ್ಥಾನಗಳನ್ನು ಗೆದ್ದುಕೊಳ್ಳಲಿದೆ. ಸದ್ಯಕ್ಕೆ ಸಂಪುಟ ವಿಸ್ತರಣೆ, ಪುನರ್ ರಚನೆ ವಿಚಾರ ನಮ್ಮ ಮುಂದೆ ಇಲ್ಲ. ಆದರೆ, ಹೈಕಮಾಂಡ್ ನಿರ್ದೇಶನದಂತೆ ನಮ್ಮ ಪಕ್ಷದಲ್ಲಿ ನಿರ್ಧಾರಗಳನ್ನು ತೆಗೆದುಕೊಳ್ಳುತ್ತೇವೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.

VISTARANEWS.COM


on

how many seats will the Congress have in the Lok Sabha elections CM Siddaramaiah statement
Koo

ಬೆಂಗಳೂರು: ಸರ್ಕಾರಕ್ಕೆ ವರ್ಷ ಪೂರೈಸಿದ ಸಂದರ್ಭದಲ್ಲಿ ಬೆಂಗಳೂರು ಪ್ರೆಸ್‌ ಕ್ಲಬ್‌ನಲ್ಲಿ ಆಯೋಜಿಸಿದ್ದ ಮೀಟ್ ದ ಪ್ರೆಸ್‌ನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಅವರು ರಾಜ್ಯ ಸರ್ಕಾರದ ಸಾಧನೆಗಳನ್ನು ಹೇಳುತ್ತಾ ಬಂದರು. ಅಲ್ಲದೆ, ಈ ವೇಳೆ ಕೇಂದ್ರ ಸರ್ಕಾರದ ಬಗ್ಗೆಯೂ ಕಿಡಿಕಾರಿದರು. ಇದೇ ವೇಳೆ, ಲೋಕಸಭಾ ಚುನಾವಣೆ (Lok Sabha Election 2024) ಫಲಿತಾಂಶದ ಬಗ್ಗೆಯೂ ಮಾತನಾಡಿದ್ದು, ರಾಜ್ಯದಲ್ಲಿ ಕಾಂಗ್ರೆಸ್‌ ಕನಿಷ್ಠ 15 ಸ್ಥಾನ ಹಾಗೂ ಗರಿಷ್ಠ 20 ಸ್ಥಾನಗಳನ್ನು ಗೆಲ್ಲಲಿದೆ ಎಂದು ಭವಿಷ್ಯ ನುಡಿದರು.

ಈ ಬಗ್ಗೆ ಮಾಧ್ಯಮದವರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಬಿಜೆಪಿಯವರಂತೆ 28 ಕ್ಷೇತ್ರಗಳನ್ನೂ ಗೆಲ್ಲುತ್ತೇವೆ ಎಂದು ನಾನು ಹೇಳುವುದಿಲ್ಲ. ಆದರೆ, ನಮ್ಮ ಕಾಂಗ್ರೆಸ್‌ ಪಕ್ಷವು ಕನಿಷ್ಠ 15 ಸ್ಥಾನ ಹಾಗೂ ಗರಿಷ್ಠ 20 ಸ್ಥಾನಗಳನ್ನು ಗೆದ್ದುಕೊಳ್ಳಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಲೋಕಸಭಾ ಚುನಾವಣಾ ಫಲಿತಾಂಶದ ಬಳಿಕ ಸಂಪುಟ ಆಗುತ್ತಾ ಎನ್ನುವ ಪ್ರಶ್ನೆಗೆ ಉತ್ತರಿಸಿದ ಸಿಎಂ ಸಿದ್ದರಾಮಯ್ಯ, ಸದ್ಯಕ್ಕೆ ಸಂಪುಟ ವಿಸ್ತರಣೆ, ಪುನರ್ ರಚನೆ ವಿಚಾರ ನಮ್ಮ ಮುಂದೆ ಇಲ್ಲ. ಆದರೆ, ಹೈಕಮಾಂಡ್ ನಿರ್ದೇಶನದಂತೆ ನಮ್ಮ ಪಕ್ಷದಲ್ಲಿ ನಿರ್ಧಾರಗಳನ್ನು ತೆಗೆದುಕೊಳ್ಳುತ್ತೇವೆ ಎಂದು ತಿಳಿಸಿದರು.

ಗ್ಯಾರಂಟಿಗಳು ಜನರ ಮನೆ ಮನೆ ತಲುಪಿವೆ

ಬಿಜೆಪಿಯ ನಿರಂತರ ಅಪ ಪ್ರಚಾರದ ನಡುವೆಯೂ ಗ್ಯಾರಂಟಿಗಳು ಜನರ ಮನೆ ಮನೆ ತಲುಪಿವೆ. ಗ್ಯಾರಂಟಿಗಳ ಹೊರತಾಗಿ ಅಭಿವೃದ್ಧಿಗೂ ಹಣ ಮೀಸಲಿಟ್ಟು ಖರ್ಚು ಮಾಡಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅಂಕಿ ಅಂಶಗಳ ಸಮೇತ ವಿವರಿಸಿದರು.

how many seats will the Congress have in the Lok Sabha elections CM Siddaramaiah statement

ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, ವಿಧಾನಸಭೆ ಪ್ರತಿಪಕ್ಷ ನಾಯಕ ಆರ್. ಅಶೋಕ್‌ಗೆ ಆರ್ಥಿಕತೆ ಅರ್ಥ ಆಗಲ್ಲ. ಹೀಗಾಗಿ ಖಜಾನೆ ಖಾಲಿ ಆಗಿದೆ ಎಂದು ಪರಮ ಸುಳ್ಳು ಹೇಳುತ್ತಿದ್ದಾರೆ. ನಾವು ಗ್ಯಾರಂಟಿಯೇತರ ಅಭಿವೃದ್ಧಿ ಕಾರ್ಯಗಳಿಗೆ 54374 ಕೋಟಿ ರೂಪಾಯಿ ಖರ್ಚು ಮಾಡುವುದಾಗಿ ಬಜೆಟ್‌ನಲ್ಲಿ ಹೇಳಿದ್ದೆವು. ಆದರೆ, 56274 ಕೋಟಿ ರೂಪಾಯಿ ಖರ್ಚು ಮಾಡಿದೆವು. ಅಂದರೆ ಬಜೆಟ್‌ನಲ್ಲಿ ಹೇಳಿದ್ದಕ್ಕಿಂತ ಹೆಚ್ಚು ಖರ್ಚು ಮಾಡಿದ್ದೇವೆ ಎಂದು ಅಂಕಿ ಅಂಶಗಳ ಸಮೇತ ಸಿಎಂ ಸಿದ್ದರಾಮಯ್ಯ ವಿವರಿಸಿದರು.

ನೀರಾವರಿಗೆ 16360 ಕೋಟಿ ರೂಪಾಯಿ ಖರ್ಚು ಮಾಡುವುದಾಗಿ ಬಜೆಟ್‌ನಲ್ಲಿ ಹೇಳಿದ್ದೆವು. ಆದರೆ, 18198 ಕೋಟಿ ರೂಪಾಯಿ ಖರ್ಚು ಮಾಡಿದೆವು. ಹೇಳಿದ್ದಕ್ಕಿಂತ ಹೆಚ್ಚು ಖರ್ಚು ಮಾಡಿದ್ದೇವೆ. ಲೋಕೋಪಯೋಗಿ ಇಲಾಖೆಗೂ 9661 ಕೋಟಿ ರೂಪಾಯಿ ಖರ್ಚು ಮಾಡಿದ್ದೇವೆ. ಬಿಜೆಪಿಯವರ ಹೇಳಿಕೆಯಂತೆ ಖಜಾನೆ ಖಾಲಿ ಆಗಿದ್ದರೆ ಇಷ್ಟೆಲ್ಲ ಖರ್ಚು ಮಾಡಲು ಸಾಧ್ಯವಿತ್ತೇ ಎಂದು ಸಿಎಂ ಸಿದ್ದರಾಮಯ್ಯ ಪ್ರಶ್ನಿಸಿದರು.

ಸಮಾಜ ಕಲ್ಯಾಣಕ್ಕಾಗಿ ಪರಿಶಿಷ್ಟ ಜಾತಿ/ವರ್ಗದ ಗುತ್ತಿಗೆದಾರರಿಗೆ ಒಂದು ಕೋಟಿವರೆಗಿನ ಕಾಮಗಾರಿಗೆ ಮೀಸಲಾತಿ, ಹಿಂದುಳಿದವರಿಗೆ ಮೀಸಲಾತಿ ನೀಡಿದೆವು. SCSP/TSP ಕಾಯ್ದೆ ಮಾಡಿದ್ದು ನಮ್ಮ ಸರ್ಕಾರ. ಪ್ರಧಾನಿ ನರೇಂದ್ರ ಮೋದಿ ಭಾಷಣದಲ್ಲಿ ಸುಳ್ಳು ಹೇಳುವುದನ್ನು ಬಿಟ್ಟು ಈ ಕಾಯ್ದೆಯನ್ನು ಬಿಜೆಪಿ ಆಡಳಿತದ ಸರ್ಕಾರಗಳು ಏಕೆ ಜಾರಿ ಮಾಡಿಲ್ಲ ಎನ್ನುವುದಕ್ಕೆ ಉತ್ತರಿಸಲಿ ಎಂದು ಸಿಎಂ ಸಿದ್ದರಾಮಯ್ಯ ಸವಾಲು ಹಾಕಿದರು.

how many seats will the Congress have in the Lok Sabha elections CM Siddaramaiah statement

ಹಿಂದುಳಿದವರ ಮೀಸಲಾತಿ ಕಿತ್ತು ಮುಸ್ಲಿಮರಿಗೆ ಕೊಡ್ತಾರೆ ಎಂದು ಮತ್ತೊಂದು ಮೋದಿ ಸುಳ್ಳು ಹೇಳುತ್ತಿದ್ದಾರೆ. ಇದು ಅಪ್ಪಟ ಸುಳ್ಳು. ಚಿನ್ನಪ್ಪರೆಡ್ಡಿ ಆಯೋಗದ ವರದಿಯಂತೆ 30 ವರ್ಷದಿಂದ ರಾಜ್ಯದಲ್ಲಿ ಮುಸ್ಲಿಂ ಮೀಸಲಾತಿ ಜಾರಿಯಲ್ಲಿದೆ. ಬಸವರಾಜ ಬೊಮ್ಮಾಯಿ ಸರ್ಕಾರ ಕೂಡ ಸುಪ್ರೀಂ ಕೋರ್ಟ್‌ನಲ್ಲಿ ಅಫಿಡವಿಟ್ ಸಲ್ಲಿಸಿ ಮುಸ್ಲಿಮರ ಮೀಸಲಾತಿ ರದ್ದು ಮಾಡುವುದಿಲ್ಲ ಎಂದು ಒಪ್ಪಿಕೊಂಡಿತ್ತು. ಆದರೂ ಮೋದಿ ಭಾಷಣಗಳಲ್ಲಿ ಸುಳ್ಳು ಹೇಳುತ್ತಾ ತಿರುಗುತ್ತಿದ್ದಾರೆ. ನಾವು ಯಾರ ಮೀಸಲಾತಿಯನ್ನೂ ಕಿತ್ತುಕೊಂಡಿಲ್ಲ. ಹೀಗಾಗಿ ಮೋದಿ ಹೇಳುತ್ತಿರುವುದು ಅಪ್ಪಟ ಸುಳ್ಳು ಎಂದು ಸಿಎಂ ಸಿದ್ದರಾಮಯ್ಯ ಆರೋಪ ಮಾಡಿದರು.

ಚುನಾವಣೆಗಾಗಿ ಜನರನ್ನು ರೊಚ್ಚಿಗೆಬ್ಬಿಸಿ, ದಿಕ್ಕು ತಪ್ಪಿಸುವುದನ್ನು ಬಿಜೆಪಿ ಮತ್ತು ಮೋದಿ ನಿಲ್ಲಿಸಬೇಕು. ಜನ ಬಿಜೆಪಿಯ ಸುಳ್ಳಿಗಳ ಬಗ್ಗೆ ಎಚ್ಚೆತ್ತುಕೊಂಡಿದ್ದಾರೆ. ಆರೋಗ್ಯ, ಶಿಕ್ಷಣ, ನೀರಾವರಿ, ಸಮಾಜ ಕಲ್ಯಾಣ, ಕೃಷಿ ಸೇರಿ ಎಲ್ಲಾ ಇಲಾಖೆಗಳಲ್ಲೂ ಅಭಿವೃದ್ಧಿ ಕೆಲಸಗಳು ಯಥೇಚ್ಚವಾಗಿ ನಡೆಯುತ್ತಿವೆ ಎಂದು ಸಿಎಂ ಸಿದ್ದರಾಮಯ್ಯ ವಿವರಿಸಿದರು.

ಬಿಜೆಪಿಯ ಬೆಲೆ ಏರಿಕೆಯಿಂದ ಸಂಕಷ್ಟದಲ್ಲಿ ನರಳುತ್ತಿದ್ದ ಮಧ್ಯಮ ವರ್ಗ ಮತ್ತು ಬಡವರ ಕೊಳ್ಳುವ ಶಕ್ತಿ ಹೆಚ್ಚಿಸಲು ಗ್ಯಾರಂಟಿಗಳನ್ನು ಜಾರಿ ಮಾಡಿದೆವು ಎಂದು ಸಿಎಂ ಸಿದ್ದರಾಮಯ್ಯ ವಿವರಿಸಿದರು.

ಐದೂ ಗ್ಯಾರಂಟಿ ಜಾರಿ ಮಾಡಿದ್ದೇವೆ

ಪ್ರಮಾಣವಚನ ಸ್ವೀಕರಿಸಿದ ದಿನದಿಂದಲೇ ಚುನಾವಣೆಯಲ್ಲಿ ಕೊಟ್ಟ ಆಶ್ವಾಸನೆ, ಗ್ಯಾರಂಟಿಗಳ ಜಾರಿಗೆ ಕ್ರಮ ತೆಗೆದುಕೊಂಡು ಐದಕ್ಕೆ ಐದೂ ಜಾರಿ ಮಾಡಿದ್ದೇವೆ. ಅನ್ನಭಾಗ್ಯ ಯೋಜನೆಗೆ ನಾವು ಹಣ ಕೊಟ್ಟರೂ ಅಕ್ಕಿ ಕೊಡದೆ ಕೇಂದ್ರ ಸರ್ಕಾರ ಸತಾಯಿಸಿತು. ಅಕ್ಕಿ ಸಂಗ್ರಹ ಇದ್ದರೂ ಕೊಡಲಿಲ್ಲ. ಅಕ್ಕಿ ಕೊಡದೆ ಇರಲು ಮೇಲಿನಿಂದ ಆದೇಶ ಇದೆ ಎಂದು ಅಧಿಕಾರಿಗಳು ತಿಳಿಸಿದರು. ಮಧ್ಯವರ್ತಿಗಳ ಹಾವಳಿ ಇಲ್ಲದಂತೆ ನೇರ ನಾಡಿನ ಜನತೆಯ ಖಾತೆಗೆ ಹಣ ಜಮೆ ಮಾಡಿದೆವು ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

ಇದನ್ನೂ ಓದಿ: CET Result: ದ್ವಿತೀಯ ಪಿಯು 2ನೇ ಪರೀಕ್ಷೆ ಬಳಿಕವೇ ಸಿಇಟಿ ಫಲಿತಾಂಶ; ಮೇ 30 ಅಥವಾ 31ಕ್ಕೆ ಪ್ರಕಟ?

ನಮ್ಮ ಕಾಲದಲ್ಲಿ ಭ್ರಷ್ಟಾಚಾರ ಸಂಪೂರ್ಣವಾಗಿ ನಿಂತಿದೆ ಎಂದು ಹೇಳೋದಿಲ್ಲ. ಆದರೆ ಪ್ರಮಾಣ ಕಡಿಮೆ ಮಾಡಲು ನಿಷ್ಠುರವಾಗಿ ಕ್ರಮ ತೆಗೆದುಕೊಳ್ಳುತ್ತಿದ್ದೇವೆ. 40% ತನಿಖೆಗೆ ಶುರು ಮಾಡಿಸಿದ್ದೇವೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು.

Continue Reading

ದೇಶ

Liquid Nitrogen Paan: ನೀವು ಲಿಕ್ವಿಡ್ ನೈಟ್ರೋಜನ್‌ ಪಾನ್‌ ಸೇವಿಸ್ತೀರಾ? ಹಾಗಿದ್ರೆ ಎಚ್ಚರ.. ಎಚ್ಚರ

Liquid Nitrogen Paan: ಬಾಲಕಿಯೊಬ್ಬಳು ಪಾನ್‌ ಸೇವಿಸಿ ಪ್ರಾಣಕ್ಕೆ ಅಪಾಯವನ್ನು ತಂದೊಡ್ಡಿಕೊಂಡಿದ್ದಾಳೆ. ಬೆಂಗಳೂರಿ(Bangalore)ನಲ್ಲಿ ಈ ಘಟನೆ ನಡೆದಿದ್ದು, ಮದುವೆಯ ಆರತಕ್ಷತೆ ಸಮಾರಂಭದಲ್ಲಿ 12 ವರ್ಷದ ಬಾಲಕಿಯೊಬ್ಬಳು ಲಿಕ್ವಿಡ್ ನೈಟ್ರೋಜನ್ ತುಂಬಿದ ಪಾನ್ ಸೇವಿಸಿ ಆಸ್ಪತ್ರೆಗೆ ದಾಖಲಾಗಿದ್ದಾಳೆ.ಈ ಘಟನೆ ಎಚ್‌ಎಸ್‌ಆರ್ ಲೇಔಟ್‌ನಲ್ಲಿ ನಡೆದಿದ್ದು, ಆಕೆಯ ಹೊಟ್ಟೆಯಲ್ಲಿ ರಂಧ್ರವಾಗಿರುವುದನ್ನು ವೈದ್ಯರು ಗಮನಿಸಿ ಶಾಕ್‌ ಆಗಿದ್ದಾರೆ.

VISTARANEWS.COM


on

Liquid Nitrogen Paan
Koo

ಬೆಂಗಳೂರು: ಪಾನ್‌(ಬೀಡಾ)(Liquid Nitrogen Paan) ಸೇವಿಸೋದಂದ್ರೆ ಬಹುತೇಕ ಎಲ್ಲರಿಗೂ ಇಷ್ಟ ಇರುತ್ತದೆ. ಮೊದಲೆಲ್ಲಾ ವಯಸ್ಸಾದವರು ಪಾನ್‌ ಸೇವಿಸೋ ಅಭ್ಯಾಸ ಇಟ್ಟುಕೊಂಡಿದ್ದರು. ಈಗೀಗ ಯುವಕರೂ ಪಾನ್‌ ಹಾಕುವ ಶೋಕಿ ರೂಢಿಸಿಕೊಂಡಿದ್ದಾರೆ. ಇದೀಗ ಬಾಲಕಿಯೊಬ್ಬಳು ಪಾನ್‌ ಸೇವಿಸಿ ಪ್ರಾಣಕ್ಕೆ ಅಪಾಯವನ್ನು ತಂದೊಡ್ಡಿಕೊಂಡಿದ್ದಾಳೆ. ಬೆಂಗಳೂರಿ(Bangalore)ನಲ್ಲಿ ಈ ಘಟನೆ ನಡೆದಿದ್ದು, ಮದುವೆಯ ಆರತಕ್ಷತೆ ಸಮಾರಂಭದಲ್ಲಿ 12 ವರ್ಷದ ಬಾಲಕಿಯೊಬ್ಬಳು ಲಿಕ್ವಿಡ್ ನೈಟ್ರೋಜನ್ ತುಂಬಿದ ಪಾನ್ ಸೇವಿಸಿ ಆಸ್ಪತ್ರೆಗೆ ದಾಖಲಾಗಿದ್ದಾಳೆ.

ಘಟನೆ ಎಚ್‌ಎಸ್‌ಆರ್ ಲೇಔಟ್‌ನಲ್ಲಿ ನಡೆದಿದ್ದು, ಆಕೆಯ ಹೊಟ್ಟೆಯಲ್ಲಿ ರಂಧ್ರವಾಗಿರುವುದನ್ನು ವೈದ್ಯರು ಗಮನಿಸಿ ಶಾಕ್‌ ಆಗಿದ್ದಾರೆ. ಬಾಯಲ್ಲಿ ಹಾಕಿದ ಕೂಡಲೇ ಹೊಗೆ ತರಿಸುವ ಈ ಲಿಕ್ವಿಡ್ ನೈಟ್ರೋಜನ್ ಪಾನ್ ಇತ್ತೀಚೆಗೆ ಟ್ರೆಂಡ್ ಆಗಿದೆ. ಆದರೆ, ಟ್ರೆಂಡಿ ಫುಡ್‌ಗಳು ಕೆಲವೊಮ್ಮೆ ಹೇಗೆ ಪ್ರಾಣಕ್ಕೆ ಕುತ್ತಾಗಬಹುದು ಎಂಬುದಕ್ಕೆ ಈ ಘಟನೆಯೇ ಸಾಕ್ಷಿ..

ಬಾಲಕಿಯನ್ನು ಇಂಟ್ರಾಆಪರೇಟಿವ್ OGD ಸ್ಕೋಪಿಯೊಂದಿಗೆ ಪರಿಶೋಧನಾತ್ಮಕ ಲ್ಯಾಪರೊಟಮಿಗೆ ಒಳಪಡಿಸಲಾಯಿತು. ಅಲ್ಲಿ ಅನ್ನನಾಳ, ಹೊಟ್ಟೆ ಮತ್ತು ಡ್ಯುವೋಡೆನಮ್ ಅನ್ನು ಪರೀಕ್ಷಿಸಲು ಎಂಡೋಸ್ಕೋಪ್ ಬಳಸಲಾಯಿತು. ಈ ಸಂದರ್ಭದಲ್ಲಿ ಹೊಟ್ಟೆಯಲ್ಲಿ ಸುಮಾರು 4×5 ಸೆಂ.ಮೀ ಅಳತೆಯ ಅನಾರೋಗ್ಯಕರ ಪ್ಯಾಚ್ ಕಂಡುಬಂದಿದೆ. ಇದೀಗ ಶಸ್ತ್ರ ಚಿಕಿತ್ಸೆ ಯಶಸ್ವಿ ಆಗಿದ್ದು, ಬಾಲಕಿ ವೈದ್ಯರ ನಿಗಾದಲ್ಲಿದ್ದಾಳೆ.

ಏನಿದು ಲಿಕ್ವಿಡ್‌ ನೈಟ್ರೋಜನ್‌ ಪಾನ್‌?

ಬಾಯಲ್ಲಿ ಪಾನ್ ಹಾಕಿಕೊಂಡ ಕೂಡಲೇ ಹೊಗೆ ಬರುವಂತಹ ಟ್ರೆಂಡಿ ಪಾನ್‌ ಈ ಲಿಕ್ವಿಡ್ ನೈಟ್ರೋಜನ್ ಪಾನ್. ಪಾನ್‌ನಲ್ಲಿ ದ್ರವರೂಪದಲ್ಲಿ ಸಾರಜನಕವನ್ನು ತುಂಬಲಾಗುತ್ತದೆ. ಇದನ್ನು ಸೇವಿಸಿದಾಗ ಬಾಯಲ್ಲಿ ಹೊಗೆ ಬರಲು ಶುರು ಆಗುತ್ತದೆ. ಇದು ಬಾಯಿಯ ಚರ್ಮವನ್ನು ಹಾನಿಗೊಳಿಸುತ್ತದೆ ಮತ್ತು ತೀವ್ರ ಆರೋಗ್ಯ ಸಮಸ್ಯೆಯನ್ನುಂಟು ಮಾಡುತ್ತದೆ. ಈ ಆವಿಯನ್ನು ಉಸಿರಾಡುವುದರಿಂದ ಉಸಿರಾಟದ ಸಮಸ್ಯೆ ಎದುರಾಗುತ್ತದೆ ಎಂದು ವೈದ್ಯರು ತಿಳಿಸಿದ್ದಾರೆ.

ಲಿಕ್ವಿಡ್ ನೈಟ್ರೋಜನ್ ಜಗತ್ತಿನಲ್ಲಿಯೇ ಅತಿ ತಣ್ಣನೆಯ ವಸ್ತುವಾಗಿದ್ದು, ಅದನ್ನು ಸಾರಜನಕದ ದ್ರವೀಕರಣದಿಂದ ಮಾಡಲಾಗುತ್ತದೆ. ಅದರ ತಂಪಿನಲ್ಲಿ ಎಷ್ಟೊಂದು ತೀಕ್ಷ್ಣತೆ ಇರುತ್ತದೆ ಎಂದರೆ ಅಂಗೈ ಮೇಲೆ ಸುರಿದುಕೊಂಡರೆ ಅಂಗೈ ತೂತಾಗುತ್ತದೆ. ಇದನ್ನು ಸೇವಿಸುವುದರಿಂದ ಇದು ಅಂಗಾಂಶಗಳಿಗೆ ಆಮ್ಲಜನಕದ ಪೂರೈಕೆಯನ್ನು ಕಡಿತಗೊಳಿಸುವ ಮೂಲಕ ಉಸಿರುಕಟ್ಟುವಿಕೆಗೆ ಕಾರಣವಾಗುತ್ತದೆ. ಸ್ಮೋಕ್‌ ಬಿಸ್ಕತ್‌, ಬಿಯರ್‌, ಐಸ್‌ ಕ್ರೀಂಗಳಲ್ಲಿ ಇದನ್ನು ಬಳಸಲಾಗುತ್ತಿದೆ. ಈಗಾಗಲೇ ತಮಿಳುನಾಡು ಇದರ ನೇರ ಬಳಕೆಯನ್ನು ನಿಷೇಧಿಸಿದ್ದು, ಕರ್ನಾಟಕದಲ್ಲೂ ಬ್ಯಾನ್ ಮಾಡುವಂತೆ ಹಲವರು ಒತ್ತಾಯಿಸುತ್ತಿದ್ದಾರೆ.

ಇದನ್ನೂ ಓದಿ:Mrs India Karnataka: ಮಿಸಸ್ ಕರ್ನಾಟಕ ಮಂಗಳೂರು ಗ್ರ್ಯಾಂಡ್ ಫಿನಾಲೆ; ಸಾಂಪ್ರದಾಯಿಕ, ಮಾಡರ್ನ್ ಉಡುಗೆಯಲ್ಲಿ ಮಿಂಚಿದ ನಾರಿಯರು

ಕೆಲವು ತಿಂಗಳ ಹಿಂದೆ ದಾವಣಗೆರೆಯಲ್ಲೂ ಇಂತಹದ್ದೇ ಒಂ ಘಟನೆ ವರದಿ ಆಗಿತ್ತು. ವಸ್ತುಪ್ರದರ್ಶನದಲ್ಲಿ ಬಾಲಕನೊಬ್ಬ ‘ಸ್ಮೋಕ್ ಬಿಸ್ಕೆಟ್’ ಸೇವಿಸಿದ ಬಳಿಕ ಅತೀವ್ರ ಹೊಟ್ಟೆನೋವು ಕಾಣಿಸಿಕೊಂಡು ಆಸ್ಪತ್ರೆಗೆ ದಾಖಲಾಗಿದ್ದ. ಇದರ ವಿಡಿಯೋ ಕೂಡ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು. ಘಟನೆ ಬಳಿಕ ಲಿಕ್ವಿಡ್ ನೈಟ್ರೋಜನ್ ಬಳಕೆ ನಿಷೇಧ ಕುರಿತು ಹಲವರು ದ್ವನಿಯೆತ್ತಿದ್ದರು. ಇದರ ಬೆನ್ನಲ್ಲೇ ತಮಿಳುನಾಡು ಸರ್ಕಾರ ಅದನ್ನು ಬ್ಯಾನ್‌ ಮಾಡಿತ್ತು.

Continue Reading

ಮಂಡ್ಯ

Road Accident : ಬಸ್‌ ಗುದ್ದಿದ ರಭಸಕ್ಕೆ ಕಾರು ಛಿದ್ರ ಛಿದ್ರ; ಚಾಲಕ ಸ್ಪಾಟ್‌ ಡೆತ್‌, ನಾಲ್ವರಿಗೆ ಗಾಯ

Road Accident : ಮಂಡ್ಯದಲ್ಲಿ ಕೆಎಸ್‌ಆರ್‌ಟಿಸಿ ಹಾಗೂ ಕಾರು ನಡುವೆ ಮುಖಾಮುಖಿ ಡಿಕ್ಕಿಯಾಗಿದೆ. ಡಿಕ್ಕಿ ರಭಸಕ್ಕೆ ಕಾರು ಸಂಪೂರ್ಣ ಛಿದ್ರ ಛಿದ್ರಗೊಂಡಿದೆ. ಅಪಘಾತದಲ್ಲಿ ಕಾರು ಚಾಲಕ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

VISTARANEWS.COM


on

By

road Accident in Mandya
Koo

ಮಂಡ್ಯ: ಕೆಎಸ್‌ಆರ್‌ಟಿಸಿ ಬಸ್‌ ಹಾಗೂ ಕಾರಿನ ನಡುವೆ ಭೀಕರ ಅಪಘಾತ (Road Accident ) ಸಂಭವಿಸಿದ್ದು, ಕಾರು ಚಾಲಕ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ಕೆ.ಎಂ.ದೊಡ್ಡಿ ರಸ್ತೆಯ ಬೋರಾಪುರದಲ್ಲಿ ಅಪಘಾತ ನಡೆದಿದೆ.

ಮದ್ದೂರಿನಿಂದ ಮಳವಳ್ಳಿ ಕಡೆಗೆ ಸ್ವಿಫ್ಟ್ ಕಾರು ತೆರಳುತ್ತಿತ್ತು. ಕೆಎಸ್‌ಆರ್‌ಟಿಸಿ ಬಸ್‌ ಮಳವಳ್ಳಿಯಿಂದ ಮದ್ದೂರು ಕಡೆಗೆ ಬರುತ್ತಿದ್ದಾಗ ಈ ಅಪಘಾತ ಸಂಭವಿಸಿದೆ. ಅಪಘಾತದ ರಭಸಕ್ಕೆ ಕಾರು ಸಂಪೂರ್ಣ ಛಿದ್ರಗೊಂಡಿದೆ. ಬಸ್‌ನ ಮುಂಭಾಗ ಜಖಂಗೊಂಡಿದೆ.

ಕಾರಿನಲ್ಲಿ ಐವರು ಪ್ರಯಾಣ ಮಾಡುತ್ತಿದ್ದರು. ಅಪಘಾತದಲ್ಲಿ ಸ್ಥಳದಲ್ಲೇ ಕಾರು ಚಾಲಕ ಮೃತಪಟ್ಟರೆ, ನಾಲ್ವರು ಗಾಯಗೊಂಡಿದ್ದಾರೆ. ಕಾರಿನಲ್ಲಿ ಸಿಲುಕಿದ್ದ ಗಾಯಾಳುಗಳನ್ನು ಸ್ಥಳೀಯರು ರಕ್ಷಿಸಿದ್ದು, ಮದ್ದೂರು ತಾಲೂಕು ಆಸ್ಪತ್ರೆಗೆ ದಾಖಲು ಮಾಡಿದ್ದಾರೆ. ಇನ್ನೂ ಬಸ್ಸಿನಲ್ಲಿದ್ದ ಪ್ರಯಾಣಿಕರಿಗೆ ಹಾಗೂ ಚಾಲಕ, ನಿರ್ವಾಹಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಈ ಅಪಘಾತದಿಂದಾಗಿ ಬೋರಾಪುರ ರಸ್ತೆಯಲ್ಲಿ ಟ್ರಾಫಿಕ್‌ ಜಾಮ್‌ ಉಂಟಾಗಿತ್ತು.

ವಿಚಾರ ತಿಳಿಯುತ್ತಿದ್ದಂತೆ ಸ್ಥಳಕ್ಕಾಗಮಿಸಿದ ಮದ್ದೂರು ಪಟ್ಟಣ ಠಾಣೆ ಪೊಲೀಸರು, ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನಿಸಿದರು. ಛಿದ್ರಗೊಂಡಿದ್ದ ಕಾರನ್ನು ತೆರವು ಮಾಡಿದ್ದರು. ಮದ್ದೂರು ಪಟ್ಟಣ ಠಾಣಾ ವ್ಯಾಪ್ತಿಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: Karnataka Rain : ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ; ಸಮುದ್ರಕ್ಕಿಳಿಯದಂತೆ ಮೀನುಗಾರರಿಗೆ ಎಚ್ಚರಿಕೆ

Drowned in water.. road Accident

ಉಡುಪಿಯಲ್ಲಿ ಟಿಪ್ಪರ್‌ಗೆ ಸ್ಕೂಟರ್‌ ಡಿಕ್ಕಿ; ಸವಾರ ಸಾವು

ಉಡುಪಿಯ ಕಾರ್ಕಳ ಸಮೀಪದ ಬಳ್ಳಿ ರಸ್ತೆ ಅಪಘಾತದಲ್ಲಿ ದ್ವಿಚಕ್ರ ವಾಹನ ಸವಾರ ಸ್ಥಳದಲ್ಲೆ ಮೃತಪಟ್ಟಿದ್ದಾರೆ. ಕಮಲ್ (32) ಮೃತ ದುರ್ದೈವಿ. ಟಿಪ್ಪರ್‌ಗೆ ಸ್ಕೂಟರ್‌ ಡಿಕ್ಕಿ ಹೊಡೆದ ಪರಿಣಾಮ ಕಮಲ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಇನ್ನೊರ್ವ ಸ್ಕೂಟರ್ ಸವಾರ ಪ್ರಸನ್ನ ಎಂಬಾತ ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದೆ.

ನೈಸ್ ರಸ್ತೆಯಲ್ಲಿ ಹಿಟ್ ಆ್ಯಂಡ್ ರನ್‌ಗೆ ಸವಾರ ಸಾವು

ಬೆಂಗಳೂರಿನ ನೈಸ್‌ ರಸ್ತೆಯಲ್ಲಿ ಹಿಟ್ ಆ್ಯಂಡ್ ರನ್‌ಗೆ ಬೈಕ್‌ ಸವಾರ ಮೃತಪಟ್ಟಿದ್ದಾನೆ. ವಿನಾಯಕ ಎಸ್ ಪಲ್ಲೆದ್ (20) ಮೃತ ದುರ್ದೈವಿ. ಹಿಂಬದಿ ಸವಾರ ಗಿರೀಶ್ (22) ಎಂಬಾತ ಗಂಭೀರ ಗಾಯಗೊಂಡಿದ್ದಾರೆ. ನೈಸ್ ರಸ್ತೆಯ ಮಂಗನಹಳ್ಳಿಯ ಗೊಲ್ಲರಹಟ್ಟಿಯಲ್ಲಿ ಘಟನೆ ನಡೆದಿದೆ. ಜ್ಞಾನಭಾರತಿ ಸಂಚಾರಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಶಿಕ್ಷಣ

CET Result: ದ್ವಿತೀಯ ಪಿಯು 2ನೇ ಪರೀಕ್ಷೆ ಬಳಿಕವೇ ಸಿಇಟಿ ಫಲಿತಾಂಶ; ಮೇ 30 ಅಥವಾ 31ಕ್ಕೆ ಪ್ರಕಟ?

CET Result: ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಸಿಇಟಿ ಪರೀಕ್ಷೆಯನ್ನು ಏಪ್ರಿಲ್ 18, 19ರಂದು ನಡೆಸಿತ್ತು. ಇದರ ಫಲಿತಾಂಶವು ಲೋಕಸಭಾ ಚುನಾವಣೆಯ ರಿಸಲ್ಟ್‌ ಬಳಿಕವೇ ಘೋಷಣೆಯಾಗಲಿದೆ ಎಂದು ಹೇಳಲಾಗುತ್ತಿತ್ತು. ಆದರೆ, ಈಗ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಪ್ರಸನ್ನ ಸ್ಪಷ್ಟನೆ ನೀಡಿದ್ದು, ದ್ವಿತೀಯ ಪಿಯುಸಿ 2ನೇ ಪರೀಕ್ಷೆ ಫಲಿತಾಂಶ ನಂತರವೇ ಸಿಇಟಿ ಫಲಿತಾಂಶವನ್ನು ಪ್ರಕಟ ಮಾಡಲಾಗುವುದು ಎಂದು ಹೇಳಿದ್ದಾರೆ. ಮೊದಲ ಎರಡು ಪರೀಕ್ಷೆಗಳ ಪೈಕಿ ಯಾವುದರಲ್ಲಿ ಹೆಚ್ಚು ಅಂಕ ಬಂದಿದೆಯೊ ಅವುಗಳನ್ನೇ ಸಿಇಟಿ ರ‍್ಯಾಂಕ್‌ಗೆ ಪರಿಗಣನೆ ಮಾಡಲಾಗುತ್ತದೆ.

VISTARANEWS.COM


on

CET result only after II PU 2nd exam Published on May 30 or 31
Koo

ಬೆಂಗಳೂರು: 2024-25ನೇ ಸಾಲಿನ ಇಂಜಿನಿಯರಿಂಗ್, ಆರ್ಕಿಟೆಕ್ಚರ್, ಕೃಷಿ ವಿಜ್ಞಾನ, ವೆಟರಿನರಿ, ಬಿ-ಫಾರ್ಮ್‌, ಇತರ ವೃತ್ತಿಪರ ಕೋರ್ಸ್‌ಗಳ ಪ್ರವೇಶಾತಿಗೆ ನಡೆಸಿದ ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆಯ ರಿಸಲ್ಟ್‌ಗಾಗಿ (CET Result) ಲಕ್ಷಾಂತರ ವಿದ್ಯಾರ್ಥಿಗಳು ಕಾಯುತ್ತಿದ್ದಾರೆ. ದ್ವಿತೀಯ ಪಿಯು 2ನೇ ಪರೀಕ್ಷೆ ಬಳಿಕವೇ ಸಿಇಟಿ ಫಲಿತಾಂಶ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರವು (ಕೆಇಎ) ಸ್ಪಷ್ಟನೆ ನೀಡಿದೆ. ಹೀಗಾಗಿ ಮೇ 30 ಇಲ್ಲವೇ ಮೇ 31ಕ್ಕೆ ಪ್ರಕಟವಾಗುವ ಸಾಧ್ಯತೆ ದಟ್ಟವಾಗಿದೆ.

ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಸಿಇಟಿ ಪರೀಕ್ಷೆಯನ್ನು ಏಪ್ರಿಲ್ 18, 19ರಂದು ನಡೆಸಿತ್ತು. ಇದರ ಫಲಿತಾಂಶವು ಲೋಕಸಭಾ ಚುನಾವಣೆಯ ರಿಸಲ್ಟ್‌ ಬಳಿಕವೇ ಘೋಷಣೆಯಾಗಲಿದೆ ಎಂದು ಹೇಳಲಾಗುತ್ತಿತ್ತು. ಆದರೆ, ಈಗ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಪ್ರಸನ್ನ ಸ್ಪಷ್ಟನೆ ನೀಡಿದ್ದು, ದ್ವಿತೀಯ ಪಿಯುಸಿ 2ನೇ ಪರೀಕ್ಷೆ ಫಲಿತಾಂಶ ನಂತರವೇ ಸಿಇಟಿ ಫಲಿತಾಂಶವನ್ನು ಪ್ರಕಟ ಮಾಡಲಾಗುವುದು ಎಂದು ಹೇಳಿದ್ದಾರೆ.

ಪ್ರಸಕ್ತ ಸಾಲಿನಲ್ಲಿ ದ್ವಿತೀಯ ಪಿಯುಸಿಗೆ ಮೂರು ಪರೀಕ್ಷೆಗಳನ್ನು ನಡೆಸಲಾಗುತ್ತಿದ್ದು, ಮೊದಲ ಎರಡು ಪರೀಕ್ಷೆಗಳ ಪೈಕಿ ಯಾವುದರಲ್ಲಿ ಹೆಚ್ಚು ಅಂಕ ಬಂದಿದೆಯೊ ಅವುಗಳನ್ನೇ ಸಿಇಟಿ ರ‍್ಯಾಂಕ್‌ಗೆ ಪರಿಗಣನೆ ಮಾಡಲಾಗುವುದು ಎಂದು ಹೇಳಲಾಗಿದೆ. ಹೀಗಾಗಿ ಎರಡನೇ ಪರೀಕ್ಷೆಯ ಫಲಿತಾಂಶಕ್ಕಾಗಿ ಕೆಇಎ ಕಾಯುವುದು ಅನಿವಾರ್ಯವಾಗಿದೆ.

ಅಧಿಕಾರಿಗಳ ಎಡವಟ್ಟು

ರಾಜ್ಯದಲ್ಲಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಪ್ರತಿ ವರ್ಷ ವೃತ್ತಿಪರ ಕೋಸ್‌ಗಳಿಗೆ ಸಾಮಾನ್ಯ ಪ್ರವೇಶ ಪರೀಕ್ಷೆಯನ್ನು ನಡೆಸಲಾಗುತ್ತದೆ. ಆದರೆ, ಈ ಬಾರಿಯ ಸಿಇಟಿ ಪರೀಕ್ಷೆ ಗೊಂದಲದ ಗೂಡಾಗಿತ್ತು. ಪರೀಕ್ಷೆಯಲ್ಲಿ 4 ವಿಷಯಗಳಲ್ಲಿ ಸುಮಾರು 50ಕ್ಕೂ ಹೆಚ್ಚು ಔಟ್‌ ಆಫ್‌ ಸಿಲಬಸ್‌ (Out of Syllabus) ಪ್ರಶ್ನೆಗಳನ್ನು ಕೇಳಲಾಗಿತ್ತು. ರಸಾಯನ ಶಾಸ್ತ್ರ ವಿಷಯದಲ್ಲಿ 6, ಭೌತಶಾಸ್ತ್ರ ವಿಷಯದಲ್ಲಿ 5, ಪ್ರಶ್ನೆಗಳು, ಜೀವಶಾಸ್ತ್ರ ಪರೀಕ್ಷೆಯಲ್ಲಿ 11 ಪ್ರಶ್ನೆಗಳು, ಗಣಿತದಲ್ಲಿ 9 ಪ್ರಶ್ನೆಗಳು ಪಠ್ಯಕ್ರಮದಿಂದ ಹೊರತಾಗಿದ್ದವು. ಇದಕ್ಕೆ ವ್ಯಾಪಕ ಆಕ್ರೋಶವೂ ವ್ಯಕ್ತವಾಗಿದ್ದವು. ಬಳಿಕ ಆ 50 ಪ್ರಶ್ನೆಗಳನ್ನು ಕೈಬಿಟ್ಟು ಉಳಿದ ಪ್ರಶ್ನೆಗಳ ಮೌಲ್ಯ ಮಾಪನ ಮಾಡಲಾಗಿದೆ.

ಸದ್ಯ ಸಿಇಟಿ ಪರೀಕ್ಷೆಯ ಉತ್ತರ ಪತ್ರಿಕೆಯನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಮೌಲ್ಯಮಾಪನ ಮಾಡಿ ಸಿದ್ಧಪಡಿಸಿದೆ. ಇದರ ಜತೆಗೆ ಶೇ. 50ರಷ್ಟು ದ್ವಿತೀಯ ಪಿಯುಸಿ ಅಂಕ ಮತ್ತು ಬಿಎಸ್‌ಸಿ ಸೀಟು ಹಂಚಿಕೆಗಾಗಿ ಜಿಕೆವಿಕೆ ನಡೆಸುವ ಪ್ರಾಯೋಗಿಕ ಪರೀಕ್ಷೆ ಫಲಿತಾಂಶದ ಅಂಕ ಸೇರಿಸಬೇಕಾಗಿರುವುದರಿಂದ ಕೆಇಎ ಅದಕ್ಕಾಗಿ ಕಾಯುತ್ತಿದೆ.

ಮೇ 30ಕ್ಕೆ ಪಿಯು ಪರೀಕ್ಷೆ-2ರ ಫಲಿತಾಂಶ?

ಜೆಕೆವಿಕೆಯ ಪ್ರಾಯೋಗಿಕ ಪರೀಕ್ಷೆ ಮೇ 25ರಂದು ನಡೆಯಲಿದ್ದು, ಫಲಿತಾಂಶ ಮೇ 30ರಂದು ಪ್ರಕಟವಾಗಲಿದೆ. ಇತ್ತ ದ್ವಿತೀಯ ಪಿಯು ಪರೀಕ್ಷೆ-2ರ ಫಲಿತಾಂಶವೂ ಇನ್ನಷ್ಟೇ ಹೊರ ಬರಬೇಕಿದೆ. ಇದರ ಫಲಿತಾಂಶ ಮೇ 30ರಂದು ಹೊರಬರುವ ನಿರೀಕ್ಷೆ ಇದೆ.

ಈ ಬಾರಿ 3.49 ಲಕ್ಷ ವಿದ್ಯಾರ್ಥಿಗಳು ಸಿಇಟಿ ಪರೀಕ್ಷೆ ಬರೆದಿದ್ದರು. ಪ್ರತಿ ವರ್ಷ ಮೇ, ಜೂನ್‌ನಲ್ಲಿ ಪರೀಕ್ಷೆ ನಡೆದರೆ ಈ ಬಾರಿ ಏಪ್ರಿಲ್‌ನಲ್ಲೇ ಪರೀಕ್ಷೆ ನಡೆಸಲಾಗಿತ್ತು. ಆದರೆ, ಅಧಿಕಾರಿಗಳ ಎಡವಟ್ಟಿನಿಂದ ಫಲಿತಾಂಶ ವಿಳಂಬವಾಗಿದೆ ಎಂಬ ದೂರುಗಳೂ ಕೇಳಿ ಬರುತ್ತಿವೆ.

ಇದನ್ನೂ ಓದಿ: KEA : ಸಿಇಟಿ ಪರೀಕ್ಷೆಯಲ್ಲಿ ಸಾಲು ಸಾಲು ವಿವಾದ; ಕೆಇಎ ಎಕ್ಸಿಕ್ಯುಟಿವ್‌ ಡೈರೆಕ್ಟರ್‌ ರಮ್ಯಾ ಎತ್ತಂಗಡಿ

ರಿಸಲ್ಟ್‌ ಚೆಕ್‌ ಮಾಡುವ ವಿಧಾನ

ರಿಸಲ್ಟ್‌ ಪ್ರಕಟವಾದ ಬಳಿಕ ಚೆಕ್‌ ಮಾಡುವ ವಿಧಾನದ ಹಂತ ಹಂತದ ಮಾಹಿತಿ ಇಲ್ಲಿದೆ.

  • ಕರ್ನಾಟಕ ಎಕ್ಸಾಮಿನೇಷನ್‌ ಅಥಾರಿಟಿ ಅಫೀಶಿಯಲ್ ವೆಬ್‌ಸೈಟ್‌ https://cetonline.karnataka.gov.in/kea/ಗೆ ಭೇಟಿ ನೀಡಿ.
  • ಅಥವಾ ಇಲ್ಲಿ ಕ್ಲಿಕ್‌ ಮಾಡಿ.
  • ಈ ಓಪನ್‌ ಆದ ಪುಟದ ಮೇಲ್ಭಾಗದಲ್ಲಿರುವ ʼಪ್ರವೇಶʼ ಆಯ್ಕೆಯನ್ನು ಕ್ಲಿಕ್‌ ಮಾಡಿ ಬಳಿಕ ʼಯುಜಿಸಿಇಟಿ 2024′ ಆಪ್ಶನ್‌ ಸೆಲೆಕ್ಟ್‌ ಮಾಡಿ.
  • ಇತ್ತೀಚಿನ ಪ್ರಕಟಣೆಗಳು ಎಂದಿರುವ ಕೆಳಗಡೆ ‘ಯುಜಿಸಿಇಟಿ 2024’ ಫಲಿತಾಂಶದ ಲಿಂಕ್ ನೀಡಲಾಗಿರುತ್ತದೆ. ಅದನ್ನು ಕ್ಲಿಕ್ ಮಾಡಿ.
  • ಈಗ ತೆರೆದುಕೊಳ್ಳುವ ಹೊಸ ಪುಟದಲ್ಲಿ ಅಭ್ಯರ್ಥಿಗಳು ತಮ್ಮ ರಿಜಿಸ್ಟರ್ ನಂಬರ್ ಮತ್ತು ಜನ್ಮ ದಿನಾಂಕ ಮಾಹಿತಿ ನೀಡಿ, ‘Submit’ ಬಟನ್‌ ಕ್ಲಿಕ್‌ ಮಾಡಿದರೆ ಫಲಿತಾಂಶ ಕಾಣಿಸುತ್ತದೆ.
Continue Reading
Advertisement
how many seats will the Congress have in the Lok Sabha elections CM Siddaramaiah statement
Lok Sabha Election 202414 mins ago

CM Siddaramaiah: ಲೋಕಸಭಾ ಚುನಾವಣೆಯಲ್ಲಿ ಸಿಎಂ ಸಿದ್ದರಾಮಯ್ಯ ಪ್ರಕಾರ ಕಾಂಗ್ರೆಸ್‌ಗೆ ಎಷ್ಟು ಸೀಟ್‌? ಸಂಪುಟ ಪುನಾರಚನೆ ಇಲ್ಲ!

Yami Gautam welcome baby boy
ಬಾಲಿವುಡ್20 mins ago

Yami Gautam: ನಟಿ ಯಾಮಿ ಗೌತಮ್‌ಗೆ ಗಂಡು ಮಗು; ಕಂದಮ್ಮನ ಹೆಸರೇನು?

Liquid Nitrogen Paan
ದೇಶ23 mins ago

Liquid Nitrogen Paan: ನೀವು ಲಿಕ್ವಿಡ್ ನೈಟ್ರೋಜನ್‌ ಪಾನ್‌ ಸೇವಿಸ್ತೀರಾ? ಹಾಗಿದ್ರೆ ಎಚ್ಚರ.. ಎಚ್ಚರ

road Accident in Mandya
ಮಂಡ್ಯ30 mins ago

Road Accident : ಬಸ್‌ ಗುದ್ದಿದ ರಭಸಕ್ಕೆ ಕಾರು ಛಿದ್ರ ಛಿದ್ರ; ಚಾಲಕ ಸ್ಪಾಟ್‌ ಡೆತ್‌, ನಾಲ್ವರಿಗೆ ಗಾಯ

CET result only after II PU 2nd exam Published on May 30 or 31
ಶಿಕ್ಷಣ30 mins ago

CET Result: ದ್ವಿತೀಯ ಪಿಯು 2ನೇ ಪರೀಕ್ಷೆ ಬಳಿಕವೇ ಸಿಇಟಿ ಫಲಿತಾಂಶ; ಮೇ 30 ಅಥವಾ 31ಕ್ಕೆ ಪ್ರಕಟ?

pretha maduve
ಧಾರ್ಮಿಕ32 mins ago

Pretha Maduve: ವಧುವಿನ ಆತ್ಮಕ್ಕೆ ದೊರೆತ ವರ, ಆಷಾಢದಲ್ಲಿ ʻಪ್ರೇತ ಮದುವೆ’ ಫಿಕ್ಸ್

Kannada New Movie Hondisi Bareyiri in youtube
ಸಿನಿಮಾ44 mins ago

Kannada New Movie: ಯೂಟ್ಯೂಬ್‌ನಲ್ಲಿ ಉಚಿತವಾಗಿ ನೋಡಬಹುದು ʻಹೊಂದಿಸಿ ಬರೆಯಿರಿʼ; ಆದರೆ ಇರಲಿದೆ ಬ್ಯಾಂಕ್ ಡಿಟೇಲ್ಸ್‌!

Prajwal should appear before SIT and face probe says Nikhil Kumaraswamy
ಕರ್ನಾಟಕ52 mins ago

Nikhil Kumaraswamy: ಪ್ರಜ್ವಲ್‌ ಎಸ್‌ಐಟಿ ಮುಂದೆ ಹಾಜರಾಗಿ ತನಿಖೆ ಎದುರಿಸುವುದೇ ಸೂಕ್ತ: ನಿಖಿಲ್‌ ಕುಮಾರಸ್ವಾಮಿ

Karnataka Rain
ಮಳೆ55 mins ago

Karnataka Rain : ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ; ಸಮುದ್ರಕ್ಕಿಳಿಯದಂತೆ ಮೀನುಗಾರರಿಗೆ ಎಚ್ಚರಿಕೆ

Survival Story
ವಿದೇಶ1 hour ago

Survival Story: ಆ 17 ದಿನಗಳು…ಥೈಲ್ಯಾಂಡ್‌ನ ಥಾಮ್ ಲುವಾಂಗ್ ಗುಹೆಯಲ್ಲಿ ಸಿಕ್ಕಿಬಿದ್ದ 13 ಮಂದಿಯ ರಕ್ಷಣೆಯ ರೋಚಕ ಕಹಾನಿ

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Rain
ಮಳೆ55 mins ago

Karnataka Rain : ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ; ಸಮುದ್ರಕ್ಕಿಳಿಯದಂತೆ ಮೀನುಗಾರರಿಗೆ ಎಚ್ಚರಿಕೆ

Karnataka Rain
ಮಳೆ23 hours ago

Karnataka Rain : ಒಂದೇ ಮಳೆಗೆ ಹೊಳೆಯಂತಾದ ಬೆಂಗಳೂರು ರಸ್ತೆಗಳು! ಕಳಸದಲ್ಲೂ ಮುಂದುವರಿದ ಅಬ್ಬರ

Karnataka rain
ಮಳೆ23 hours ago

Karnataka Rain : ವಿಜಯನಗರದಲ್ಲಿ ಸಿಡಿಲಿಗೆ ಜಾನುವಾರು ಬಲಿ; ಬೆಂಗಳೂರು ಸೇರಿ ಹಲವೆಡೆ ಭಾರಿ ಮಳೆ

Karnataka Rain
ಮಳೆ1 day ago

Karnataka Rain: ಧಾರಾಕಾರ ಮಳೆಗೆ ಕಾಂಪೌಂಡ್ ಕುಸಿದು 4 ಬೈಕ್‌ಗಳು ಜಖಂ; ಮದುವೆ ಮಂಟಪಕ್ಕೆ ನುಗ್ಗಿದ ನೀರು‌

Prajwal Revanna Case JDS calls CD Shivakumar pen drive gang
ರಾಜಕೀಯ3 days ago

Prajwal Revanna Case: CD ಶಿವಕುಮಾರ್ ಪೆನ್ ಡ್ರೈವ್ ಗ್ಯಾಂಗ್ ಎಂದ ಕುಟುಕಿದ ಜೆಡಿಎಸ್‌!

Karnataka weather Forecast
ಮಳೆ3 days ago

Karnataka Weather : ಮೈಸೂರು, ಮಂಡ್ಯ ಸೇರಿ ಈ 7 ಜಿಲ್ಲೆಗಳಲ್ಲಿ ವ್ಯಾಪಕ ಮಳೆ ಸಂಭವ

Dina Bhavishya
ಭವಿಷ್ಯ3 days ago

Dina Bhavishya : ಈ ರಾಶಿಯ ಪ್ರೇಮಿಗಳಿಗೆ ಮನೆಯಿಂದ ಸಿಗುತ್ತೆ ಗ್ರೀನ್‌ ಸಿಗ್ನಲ್‌

Karnataka Weather Forecast
ಮಳೆ4 days ago

Karnataka Weather : ಭಾರಿ ಮಳೆಗೆ ಕೊಟ್ಟೂರು ಬಸ್ ಸ್ಟ್ಯಾಂಡ್‌ ಜಲಾವೃತ; ‌ ತಾಯಿ-ಮಗ ಗ್ರೇಟ್‌ ಎಸ್ಕೇಪ್‌

Drowned in water
ಹಾಸನ4 days ago

Drowned in water : ಕೆರೆಯಲ್ಲಿ ಈಜಲು ಹೋದ ನಾಲ್ವರು ನೀರುಪಾಲು; ಓರ್ವ ಬಾಲಕ ಪಾರು

Suspicious Case
ಬೆಂಗಳೂರು4 days ago

Suspicious Case : ಬಾತ್‌ ರೂಂನಲ್ಲಿತ್ತು ಕಾಲೇಜು ಹುಡುಗಿ ಡೆಡ್‌ ಬಾಡಿ; ಕುತ್ತಿಗೆ ಕೊಯ್ದು ಸಾಯಿಸಿದವರು ಯಾರು?

ಟ್ರೆಂಡಿಂಗ್‌