ಕುಸಿಯುವ ಹಂತದಲ್ಲಿ ಕೊಡಗು ಜಿಲ್ಲಾಡಳಿತ ಕಚೇರಿಯ ತಡೆಗೋಡೆ; ರಾಷ್ಟ್ರೀಯ ಹೆದ್ದಾರಿ 275 ಬಂದ್ - Vistara News

ಕರ್ನಾಟಕ

ಕುಸಿಯುವ ಹಂತದಲ್ಲಿ ಕೊಡಗು ಜಿಲ್ಲಾಡಳಿತ ಕಚೇರಿಯ ತಡೆಗೋಡೆ; ರಾಷ್ಟ್ರೀಯ ಹೆದ್ದಾರಿ 275 ಬಂದ್

ಮಡಿಕೇರಿಯಿಂದ ಮಂಗಳೂರಿಗೆ ತೆರಳಲು ರಾಷ್ಟ್ರೀಯ ಹೆದ್ದಾರಿ 275ರಲ್ಲಿ ವಾಹನ ಸಂಚಾರಕ್ಕೆ ಮೇಕೇರಿ‌-ತಾಳತ್ಮನೆ ರಸ್ತೆ ಮೂಲಕ ಪರ್ಯಾಯ ವ್ಯವಸ್ಥೆ ಮಾಡಲಾಗಿದೆ. ಕಳಪೆ ಕಾಮಗಾರಿ ಬಗ್ಗೆ ಸಾರ್ವಜನಿಕವಾಗಿ ಟೀಕೆಗಳು ವ್ಯಕ್ತವಾಗಿವೆ.

VISTARANEWS.COM


on

ತಡೆಗೋಡೆ
ಮಡಿಕೇರಿ ಜಿಲ್ಲಾಡಳಿತ ಭವನದ ತಡೆಗೋಡೆಯ ಸ್ಲ್ಯಾಬ್‌ಗಳು ಗೊರಚಾಚಿವೆ.
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

| ಲೋಹಿತ್.ಎಂ.ಆರ್, ಕೊಡಗು
ಮುಂಗಾರು ಆರಂಭದ ದಿನಗಳಲ್ಲೇ ಭಾರಿ ಮಳೆಯಿಂದ ಕೊಡಗು ತತ್ತರಿಸಿ ಹೋಗಿದೆ. ಒಂದೆಡೆ ಪ್ರಾಕೃತಿಕ ವಿಕೋಪ ಸಂಭವಿಸುತ್ತಿದ್ದರೆ, ಮತ್ತೊಂದೆಡೆ ಮಾನವ ನಿರ್ಮಿತ ವಿಕೋಪಗಳು ಜಿಲ್ಲೆಯ ಜನರ ಆತಂಕಕ್ಕೆ ಕಾರಣವಾಗಿದೆ. ಇದೀಗ ಕೋಟ್ಯಂತರ ರೂಪಾಯಿ ಖರ್ಚು ಮಾಡಿದ್ದ ಕಾಮಗಾರಿಯಿಂದ ಜಿಲ್ಲಾಡಳಿತ ಭವನ‌ ಹಾಗೂ ರಾಷ್ಟ್ರೀಯ ಹೆದ್ದಾರಿಗೆ ಕಂಟಕ ಬಂದೊದಗಿದೆ.

ಮಡಿಕೇರಿ ಹೃದಯಭಾಗದ ಜಿಲ್ಲಾಡಳಿತ ಭವನದ ಕೆಳಭಾಗ ಹಾದು ಹೋಗಿರುವ ರಾಷ್ಟ್ರೀಯ ಹೆದ್ದಾರಿ ಬಳಿ‌ ಬರೋಬ್ಬರಿ 7 ಕೋಟಿ‌ ರೂ. ವೆಚ್ಚದಲ್ಲಿ ತಡೆಗೋಡೆ ನಿರ್ಮಾಣ ಮಾಡಲಾಗಿದೆ. ಇನ್ನೊಂದು ಸೋಜಿಗದ ಸಂಗತಿಯೆಂದರೆ ಜಿಲ್ಲಾಡಳಿತ ಭವನ ನಿರ್ಮಾಣಕ್ಕೆ ಖರ್ಚಾಗಿದ್ದು 4 ಕೋಟಿ ರೂಪಾಯಿ. ಆದರೆ, ಅದಕ್ಕೆ ನಿರ್ಮಾಣ ಮಾಡಲಾಗಿರುವ ತಡೆಗೋಡೆಗೆ 7 ಕೋಟಿ ರೂಪಾಯಿಯನ್ನು ಖರ್ಚು ಮಾಡಲಾಗಿದೆ. ಅದನ್ನೂ ಅವೈಜ್ಞಾನಿಕವಾಗಿ ಮತ್ತು ಕಳಪೆಯಾಗಿ ಮಾಡಲಾಗಿದ್ದು, ತಡೆಗೋಡೆಯ ಬ್ಲಾಕ್‌ಗಳು ಉಬ್ಬಿಕೊಂಡಿವೆ. ಕ್ಷಣ ಕ್ಷಣಕ್ಕೂ ಕುಸಿಯುವ ಆತಂಕ ಹೆಚ್ಚಾಗುತ್ತಿದೆ.

ಜರ್ಮನ್, ಇಸ್ರೇಲ್ ಟೆಕ್ನಾಲಜಿ ಬಳಸಿ ಮಾಡಿದ್ದ ತಡೆಗೋಡೆಯೊಳಗೆ ನೀರು ಸೇರಿಕೊಳ್ಳುತ್ತಿದೆ. ಹೀಗಾಗಿ ಸೇತುವೆ ಬೀಳುವ ಹಂತಕ್ಕೆ ಬಂದು ನಿಂತಿದೆ. ಆದರೆ, ಈ ಬಗ್ಗೆ ಕೆಲವು ದಿನಗಳ ಹಿಂದೆ ಹೇಳಿಕೆ ಕೊಟ್ಟಿದ್ದ ಅಧಿಕಾರಿಗಳು, “ಎಲ್ಲ ಸುರಕ್ಷತಾ ಕ್ರಮ ತೆಗೆದುಕೊಂಡು ತಡೆಗೋಡೆಯನ್ನು ಕಟ್ಟಲಾಗಿದೆ. ಹಾಗಾಗಿ ಈ ತಡೆ ಗೋಡೆಗೆ ಏನೂ ಆಗುವುದಿಲ್ಲ ಎಂದು ಸಮಜಾಯಿಷಿ ನೀಡಿದ್ದರು. ಆದರೆ, ಇದೀಗ ಈ ತಡೆಗೋಡೆ ಕುಸಿಯುವ ಹಂತಕ್ಕೆ ಬಂದಿರುವುದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ.

ಇದನ್ನೂ ಓದಿ | ಕೊಡಗು ಜಿಲ್ಲೆಯಲ್ಲಿ ಮುಂದುವರಿದ ಭಾರಿ ಮಳೆ, ಕಾವೇರಿ ನದಿ ನೀರಿನ ಮಟ್ಟ ಏರಿಕೆ

ಇನ್ನು ತಡೆಗೋಡೆಯಲ್ಲಿ ಉಬ್ಬುಗಳು ಕಂಡು ಬಂದ ಹಿನ್ನೆಲೆಯಲ್ಲಿ ಅಧಿಕಾರಿಗಳು ಹಾಗೂ ತಜ್ಞರು ತಡೆಗೋಡೆಯ ಬ್ಲಾಕ್ ಕೊರೆದು ನೀರು ತೆಗೆಯಲು ಪೈಪ್‌ಗಳನ್ನು ಜೋಡಿಸಿದ್ದಾರೆ. ಇದು ಮತ್ತೊಂಡು ಎಡವಟ್ಟಿಗೆ ಕಾರಣವಾಗಿದ್ದಲ್ಲದೆ, ಅಷ್ಟು ದೊಡ್ಡ ತಡೆಗೋಡೆಗೆ ಮರದ ತುಂಡನ್ನು ಸಹ ಇಡಲಾಗಿದೆ. ಇದು ಸಾರ್ವಜನಿಕವಾಗಿ ವ್ಯಾಪಕ ಟೀಕೆಗೆ, ನಗೆಪಾಟಿಲಿಗೆ ಗುರಿಯಾಗಿದೆ. ಸದ್ಯದಲ್ಲೇ ತಡೆಗೋಡೆ ಬೀಳುವ ಸಂಭವ ಇರುವುದರಿಂದ ಮಡಿಕೇರಿಯ ಟೋಲ್‌ಗೇಟ್ ಬಳಿ ರಾಷ್ಟ್ರೀಯ ಹೆದ್ದಾರಿ 275ನ್ನು ಬಂದ್ ಮಾಡಲಾಗಿದ್ದು, ವಾಹನ ಸಂಚಾರಕ್ಕೆ ಮಡಿಕೇರಿಯಿಂದ ಮಂಗಳೂರಿಗೆ ತೆರಳಲು ಮೇಕೇರಿ‌-ತಾಳತ್ಮನೆ ರಸ್ತೆ ಮೂಲಕ ಪರ್ಯಾಯ ವ್ಯವಸ್ಥೆ ಮಾಡಲಾಗಿದೆ.

ಮೊದಲೇ ಹೇಳಿದರೂ ಕೇಳಲಿಲ್ಲ

7 ಕೋಟಿ ರೂಪಾಯಿ ವೆಚ್ಚದ ಜಿಲ್ಲಾಧಿಕಾರಿ ಕಚೇರಿಯ ತಡೆಗೋಡೆ ಮಳೆಯಿಂದ ಕುಸಿಯುವ ಸ್ಥಿತಿಯಲ್ಲಿದೆ. ಇದರಿಂದ ರಾಷ್ಟ್ರೀಯ ಹೆದ್ದಾರಿ 275 ಬಂದ್ ಮಾಡಿರುವುದರಿಂದ ವಾಹನ ಸಂಚಾರಕ್ಕೆ ತೊಂದರೆಯಾಗಿದೆ. ಜಿಲ್ಲೆಯಲ್ಲಿ ಬಹುತೇಕ ಕಡೆ ಕಳಪೆ ಕಾಮಗಾರಿಗಳು ನಡೆಯುತ್ತಿವೆ. ಜಿಲ್ಲಾಡಳಿತ ಕಚೇರಿ ಬಳಿಯ ಕಾಮಗಾರಿಯೇ ಕಳಪೆಯಾದರೆ ಇತರ ಕಾಮಗಾರಿಗಳ ಪರಿಸ್ಥಿತಿ ಏನು ಎಂಬುದು ತಿಳಿಯುತ್ತದೆ. ತಡೆಗೋಡೆ ಕಾಮಗಾರಿಗೆ ಮೊದಲೇ ವಿರೋಧಿಸಿದ್ದೆವು, ಆದರೆ ಅಧಿಕಾರಿಗಳು ಮಾತು ಕೇಳಿರಲಿಲ್ಲ. ಇದೀಗ ಸಮಸ್ಯೆ ಉದ್ಭವಿಸಿದೆ ಎಂದು
ಸಮಾಜ ಸೇವಕ ಪವನ್ ಪೆಮ್ಮಯ್ಯ ಆರೋಪಿಸಿದ್ದಾರೆ.

ಒಟ್ಟಿನಲ್ಲಿ ಅಧಿಕಾರಿಗಳ ನಿರ್ಲಕ್ಷ್ಯ ಹಾಗೂ ಗುತ್ತಿಗೆದಾರರ ಕಳಪೆ ಕಾಮಗಾರಿಯಿಂದ ಜಿಲ್ಲಾಡಳಿತ ಭವನಕ್ಕೆ ಕಂಟಕ ಎದುರಾಗಿದೆ. ಮತ್ತೊಂದೆಡೆ ತಡೆಗೋಡೆ ಕುಸಿದರೆ ರಾಷ್ಟ್ರೀಯ ಹೆದ್ದಾರಿ ಬಂದ್ ಆಗಲಿದೆ. ಅಲ್ಲದೆ ಕೆಳಭಾಗದ ಮನೆಗಳಿಗೆ ಅಪಾಯ ಇದೆ.

ಇದನ್ನೂ ಓದಿ | Rain News | ರಾಜ್ಯದಲ್ಲಿ ಮುಂದುವರಿದ ಧಾರಾಕಾರ ಮಳೆ; ಹಲವೆಡೆ ಪ್ರವಾಹ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಬೆಂಗಳೂರು

Bengaluru News: ದೇಶದ ಸರ್ವಾಂಗೀಣ ಅಭಿವೃದ್ಧಿ ಆಗಿದ್ದೇ ಮೋದಿಯಿಂದ: ಗೋವಿಂದ ಕಾರಜೋಳ

Bengaluru News: ಪಿಎಂ ನರೇಂದ್ರ ಮೋದಿ ಅವರ 10 ವರ್ಷಗಳ ಆಡಳಿತದಲ್ಲಿ ಅಸಾಧಾರಣ ಅಭಿವೃದ್ಧಿ ಆಗಿದ್ದು, ಪ್ರಪಂಚದ ಎಲ್ಲ ದೇಶಗಳ ಪ್ರೀತಿ, ವಿಶ್ವಾಸ, ಗೌರವವನ್ನು ಭಾರತ ಪಡೆಯುವಂತಾಗಿದೆ. ಭಾರತದ ಜತೆ ವ್ಯಾಪಾರ, ವಹಿವಾಟು, ಸ್ನೇಹಕ್ಕಾಗಿ ಪ್ರಪಂಚದ ಅನೇಕ ದೇಶಗಳು ಹಾತೊರೆಯುತ್ತಿವೆ. ಇದೆಲ್ಲಕ್ಕೂ ಮೋದಿ ಅವರ ಆಡಳಿತವೇ ಕಾರಣ ಎಂದು ಮಾಜಿ ಡಿಸಿಎಂ ಗೋವಿಂದ ಕಾರಜೋಳ ತಿಳಿಸಿದ್ದಾರೆ.

VISTARANEWS.COM


on

Former DCM Govinda Karajola pressmeet
Koo

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ (PM Narendra Modi) ಅವರ ಅಭಿವೃದ್ಧಿ ಎಂಬುದು ಕೇವಲ ಭಾಷಣಕ್ಕೆ ಸೀಮಿತ ಆಗಲಿಲ್ಲ. ದೇಶದ ಸರ್ವಾಂಗೀಣ ಅಭಿವೃದ್ಧಿಗೆ ಅವರು ಕಾರಣಕರ್ತರಾಗಿದ್ದಾರೆ ಎಂದು ಮಾಜಿ ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ (Bengaluru News) ತಿಳಿಸಿದರು.

ನಗರದ ಬಿಜೆಪಿ ಲೋಕಸಭಾ ಚುನಾವಣಾ 2024ರ ಮಾಧ್ಯಮ ಕೇಂದ್ರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ 10 ವರ್ಷಗಳ ಆಡಳಿತದಲ್ಲಿ ಅಸಾಧಾರಣ ಅಭಿವೃದ್ಧಿ ಆಗಿದೆ. ಪ್ರಪಂಚದ ಎಲ್ಲ ದೇಶಗಳ ಪ್ರೀತಿ, ವಿಶ್ವಾಸ, ಗೌರವವನ್ನು ಭಾರತ ಪಡೆಯುವಂತಾಗಿದೆ. ಭಾರತದ ಜತೆ ವ್ಯಾಪಾರ, ವಹಿವಾಟು, ಸ್ನೇಹಕ್ಕಾಗಿ ಪ್ರಪಂಚದ ಅನೇಕ ದೇಶಗಳು ಹಾತೊರೆಯುತ್ತಿವೆ. ಇದೆಲ್ಲಕ್ಕೂ ಮೋದಿ ಅವರ ಆಡಳಿತವೇ ಕಾರಣ ಎಂದು ತಿಳಿಸಿದರು.

ಇದನ್ನೂ ಓದಿ: SBI Debit Cards: ಎಸ್‌ಬಿಐ ಡೆಬಿಟ್‌ ಕಾರ್ಡ್‌ದಾರರಿಗೆ ಬ್ಯಾಡ್‌ ನ್ಯೂಸ್‌; ನಿಮ್ಮ ಜೇಬಿಗೆ ಬೀಳಲಿದೆ ಕತ್ತರಿ!

ನನ್ನ ಜೀವನದಲ್ಲಿ ಇದೊಂದು ಸುವರ್ಣಾವಕಾಶ ಎಂದು ಭಾವಿಸುವೆ. ನರೇಂದ್ರ ಮೋದಿ ಅವರು ಕಳೆದ 23 ವರ್ಷಗಳಿಂದ ಸಾಂವಿಧಾನಿಕ ಹುದ್ದೆಯಲ್ಲಿದ್ದು, ಗುಜರಾತ್ ಮುಖ್ಯಮಂತ್ರಿಗಳಾಗಿ, ದೇಶದ ಪ್ರಧಾನಮಂತ್ರಿಗಳಾಗಿ ದೇಶದ ಅಭಿವೃದ್ಧಿ ಮಾಡಿದ್ದಾರೆ. ಅಲ್ಲದೆ ಕಳಂಕರಹಿತ ರಾಜಕಾರಣ ಮಾಡಿದ ಏಕೈಕ ಶ್ರೇಷ್ಠ ವ್ಯಕ್ತಿ ಎಂದು ಹೇಳಿದರು.

ದೇಶಕ್ಕೆ ಸ್ವಾತಂತ್ರ್ಯ ಬಂದ ಬಳಿಕ ಒಂದೇ ಪಕ್ಷದವರು 60 ವರ್ಷಗಳ ಕಾಲ ಆಡಳಿತ ಮಾಡಿದ್ದಾರೆ. ಅವರು ಕಳಂಕ ಹೊತ್ತುಕೊಂಡರು. ಆದರೆ ಮೋದಿ ಅವರು ದೇಶದ ಅಭಿವೃದ್ಧಿ ಮಾಡಿ ಪ್ರಪಂಚದ ಅನೇಕ ದೇಶಗಳ ಪ್ರೀತಿ, ವಿಶ್ವಾಸ ಗಳಿಸಿದ್ದಾರೆ. ಅವರ ಜತೆ ಲೋಕಸಭಾ ಸದಸ್ಯನಾಗಿ ಕೆಲಸ ಮಾಡುವ ಅವಕಾಶ ನನಗೆ ಲಭಿಸುತ್ತಿರುವುದು ಜೀವನದ ಸುವರ್ಣಾವಕಾಶ ಎನ್ನಲು ಕಾರಣ ಎಂದು ವಿವರಿಸಿದರು.

ಮೋದಿ ಅವರ ನೇತೃತ್ವದ ಕಾರ್ಯಕ್ರಮಗಳು, ಮುಖ್ಯಮಂತ್ರಿಗಳಾಗಿದ್ದ ಬಿ.ಎಸ್.ಯಡಿಯೂರಪ್ಪ, ಬಸವರಾಜ ಬೊಮ್ಮಾಯಿ ಅವರ ಕಾಲದ ಅಭಿವೃದ್ಧಿ ಕಾರ್ಯಗಳನ್ನು ತಿಳಿಸುವ ಮೂಲಕ ಮತಯಾಚನೆ ಮಾಡಲಿದ್ದೇವೆ. ಜೆಡಿಎಸ್ ಪಕ್ಷವು ಎನ್‍ಡಿಎ ತೆಕ್ಕೆಗೆ ಬಂದಿರುವುದು ಸಂತಸದ ವಿಚಾರ ಎಂದು ತಿಳಿಸಿದರು.

ಇದನ್ನೂ ಓದಿ: Rameswaram cafe: ರಾಮೇಶ್ವರಂ ಕೆಫೆ ಬಾಂಬ್ ಬ್ಲಾಸ್ಟ್; ಮುಖ್ಯ ಸಂಚುಕೋರ NIA ಬಲೆಗೆ

ಈ ಸಂದರ್ಭದಲ್ಲಿ ರಾಜ್ಯ ಮುಖ್ಯ ವಕ್ತಾರ ಅಶ್ವತ್ಥನಾರಾಯಣ, ವಿಧಾನಪರಿಷತ್ ಸದಸ್ಯ ಛಲವಾದಿ ನಾರಾಯಣಸ್ವಾಮಿ, ಮುಖಂಡರಾದ ರುದ್ರಯ್ಯ, ಲಕ್ಷ್ಮೀನಾರಾಯಣ್, ರಾಜ್ಯ ವಕ್ತಾರರಾದ ಮೋಹನ್ ವಿಶ್ವ, ಸುರಭಿ ಹೋದಿಗೆರೆ, ವೆಂಕಟೇಶ್ ದೊಡ್ಡೇರಿ ಇದ್ದರು.

Continue Reading

ಪ್ರಮುಖ ಸುದ್ದಿ

Women Slapped : ಪಿಟಿಐ ಪತ್ರಕರ್ತೆಯ ಕಪಾಳಕ್ಕೆ ಬಾರಿಸಿದ ಎಎನ್​ಐ ವರದಿಗಾರ; ಇಲ್ಲಿದೆ ಆತಂಕಕಾರಿ ವಿಡಿಯೊ

Women Slapped : ಉಪಮುಖ್ಯಮಂತ್ರಿ ಡಿಕೆ. ಶಿವಕುಮಾರ್ ಅವರ ಪತ್ರಿಕಾಗೋಷ್ಠಿ ಸಂದರ್ಭದಲ್ಲಿ ಈ ಘಟನೆ ನಡೆದಿದ್ದು ವಿವಾದಕ್ಕೆ ಕಾರಣವಾಗಿದೆ.

VISTARANEWS.COM


on

Women Slapped
Koo

ಬೆಂಗಳೂರು: ಪ್ರೆಸ್ ಟ್ರಸ್ಟ್ ಆಫ್ ಇಂಡಿಯಾದ (PTI) ಮಹಿಳಾ ವರದಿಗಾರರ (Female Journalist) ಮೇಲೆ ಮತ್ತೊಂದು ಸುದ್ದಿ ಸಂಸ್ಥೆ ಎಎನ್ಐನಲ್ಲಿ (ANI) ಕೆಲಸ ಮಾಡುತ್ತಿರುವ ಪತ್ರಕರ್ತನೊಬ್ಬ (Male Journalist) ದೈಹಿಕವಾಗಿ ಹಲ್ಲೆ ನಡೆಸಿದ ಘಟನೆ ಗುರುವಾರ ನಡೆದಿದೆ. ಉಪ ಮುಖ್ಯಮಂತ್ರಿ ಡಿ . ಕೆ. ಶಿವಕುಮಾರ್ ಅವರು ನಡೆಸಿದ ಪತ್ರಿಕಾಗೋಷ್ಠಿ ಸಂದರ್ಭದಲ್ಲಿ ಈ ಘಟನೆ ನಡೆದಿದೆ.

ಇಬ್ಬರೂ ವರದಿಗಾರರು ತೀವ್ರ ವಾಗ್ವಾದ ನಡೆಸಿದ್ದು, ಅಂತಿಮವಾಗಿ ಎಎನ್ಐ ವರದಿಗಾರ ಪಿಟಿಐ ವರದಿಗಾರ್ತಿಗೆ ಕಪಾಳಮೋಕ್ಷ ಮಾಡಿದ್ದಾರೆ. ಇತರ ಸುದ್ದಿ ಸಂಸ್ಥೆಗೆ ಸೇರಿದವರು ಎಎನ್ಐ ವರದಿಗಾರನನ್ನು ದೂರ ತಳ್ಳಿ ಇನ್ನಷ್ಟು ಗಲಾಟೆಯಾಗದಂತೆ ನೋಡಿಕೊಂಡಿದ್ದಾರೆ. ಇವೆಲ್ಲವು ವಿಡಿಯೊದಲ್ಲಿ ದಾಖಲಾಗಿದೆ.

“ಬೆಂಗಳೂರಿನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಪಿಟಿಐ ಯುವ ವರದಿಗಾರ್ತಿಯೊಬ್ಬರ ಮೇಲೆ ದೈಹಿಕ ಹಲ್ಲೆ ಮತ್ತು ಅವಾಚ್ಯ ಶಬ್ದಗಳಿಂದ ನಿಂದಿಸಿ, ಲೈಂಗಿಕ ಕಿರುಕುಳ ನೀಡಲಾಗಿದೆ. ಇದು ಎಎನ್ಐ ವರದಿಗಾರನ ಅಸಹ್ಯಕರ ವರ್ತನೆ. ಎಎನ್ಐ ತನ್ನ ಸಿಬ್ಬಂದಿಯ ಇಂತಹ ನಡವಳಿಕೆಯನ್ನು ಖಂಡಿಸುತ್ತದೆಯೇ? ಎಂದು ಪಿಟಿಐ ವಿಡಿಯೊ ಸಮೇತ ಟ್ವೀಟ್ ಮಾಡಿದೆ.

ಪಿಟಿಐ ಈ ಘಟನೆಯನ್ನು ಖಂಡಿಸಿದೆ ಮತ್ತು ವೀಡಿಯೊದಲ್ಲಿ ಕಾಣಿಸಿಕೊಂಡ ತಮ್ಮ ಉದ್ಯೋಗಿಯ ವಿರುದ್ಧ ಕ್ರಮ ಕೈಗೊಳ್ಳುವಂತೆ ಎಎನ್ಐ ಆಡಳಿತ ಮಂಡಳಿಗೆ ಮನವಿ ಮಾಡಿದೆ. ಎಫ್ಐಆರ್ ಕೂಡ ದಾಖಲಾಗಿದ್ದು, ರಾಷ್ಟ್ರೀಯ ಮಹಿಳಾ ಆಯೋಗಕ್ಕೆ ದೂರು ನೀಡುವುದಾಗಿ ಸುದ್ದಿ ಸಂಸ್ಥೆ ತಿಳಿಸಿದೆ.

ಇದನ್ನೂ ಓದಿ : Xiaomi Car: ಎಲೆಕ್ಟ್ರಿಕ್​ ಕಾರು ಮಾರುಕಟ್ಟೆಗೆ ಇಳಿಸಿದ ಮೊಬೈಲ್ ಕಂಪನಿ ರೆಡ್​ಮಿ

“ನಮ್ಮ ಆಡಳಿತ ಮಂಡಳಿ ಮತ್ತು ಪತ್ರಕರ್ತೆಯ ಸಹೋದ್ಯೋಗಿಗಳು ಆಕ್ರೋಶಗೊಂಡಿದ್ದಾರೆ ಮತ್ತು ಈ ಅಪ್ರಚೋದಿತ ಹಲ್ಲೆಯನ್ನು ಬಲವಾಗಿ ಖಂಡಿಸಿದ್ದಾರೆ. ಪಿಟಿಐ ತನ್ನ ಉದ್ಯೋಗಿಗಳನ್ನು ರಕ್ಷಿಸಲು ಬದ್ಧವಾಗಿದೆ. ಆಘಾತಕಾರಿ ಘಟನೆಯ ಬಗ್ಗೆ ಎಫ್ಐಆರ್ ದಾಖಲಿಸಲಾಗಿದೆ. ಪಿಟಿಐ ರಾಷ್ಟ್ರೀಯ ಮಹಿಳಾ ಆಯೋಗಕ್ಕೂ ದೂರು ಸಲ್ಲಿಸಿದ್ದೇವೆ” ಎಂದು ಪಿಟಿಐ ಹೇಳಿಕೆ ಬಿಡುಗಡೆ ಮಾಡಿದೆ.

ಘಟನೆಯ ಬಗ್ಗೆ ಅನೇಕ ನಾಯಕರು ಕಳವಳ ವ್ಯಕ್ತಪಡಿಸಿದರು ಮತ್ತು ಆರೋಪಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ನಟಿ ಮತ್ತು ಬಿಜೆಪಿ ನಾಯಕಿ ಖುಷ್ಬೂ ಸುಂದರ್, “ಇಂದು ಬೆಂಗಳೂರಿನಲ್ಲಿ ಪಿಟಿಐ ಪತ್ರಕರ್ತೆಯನ್ನು ದೈಹಿಕವಾಗಿ ಮತ್ತು ಮೌಖಿಕವಾಗಿ ನಿಂದಿಸಿದ ಪುರುಷ ಪತ್ರಕರ್ತನ ನಡವಳಿಕೆಯನ್ನು ನಾನು ತೀವ್ರವಾಗಿ ಖಂಡಿಸುತ್ತೇನೆ. ತಕ್ಷಣ ಕ್ರಮ ಕೈಗೊಳ್ಳಬೇಕೆಂದು ಬಯಸುತ್ತೇನೆ ಎಂದು ಬರೆದಿದ್ದಾರೆ.

ಏತನ್ಮಧ್ಯೆ, ಎಎನ್ಐ ವರದಿಗಾರ ತನ್ನ ಮೇಲೆ ಮೊದಲು ಮಹಿಳಾ ಪತ್ರಕರ್ತೆ ಹಲ್ಲೆ ನಡೆಸಿದ್ದರು ಎಂದು ಪ್ರತಿ ಎಫ್ಐಆರ್ ದಾಖಲಿಸಲಿದ್ದಾರೆ. ಅದಕ್ಕೆ ಪೂರಕವಾಗಿ ಪರಚಿದ ಮುಖದ ಚಿತ್ರ ಹಾಕಿದ್ದಾರೆ. ಆದಾಗ್ಯೂ, ಎಎನ್ಐ ಪತ್ರಕರ್ತ ನವೀನ್ ಕಪೂರ್ ನೀಡಿದ ಸ್ಪಷ್ಟೀಕರಣದ ಪ್ರಕಾರ, ಉದ್ಯೋಗದಾತರು ಅವರನ್ನು ತಾತ್ಕಾಲಿಕವಾಗಿ ಕರ್ತವ್ಯದಿಂದ ಅಮಾನತುಗೊಳಿಸಿದ್ದಾರೆ.

Continue Reading

ಕರ್ನಾಟಕ

Road Accident: ಟಾಟಾ ಏಸ್ ವಾಹನ ಪಲ್ಟಿ; ಇಬ್ಬರ ಸಾವು, ಐವರಿಗೆ ಗಂಭೀರ ಗಾಯ

Road Accident: ಟಾಟಾ ಏಸ್‌ ವಾಹನದ ಟೈರ್‌ ಬ್ಲಾಸ್ಟ್ ಆಗಿ ಪಲ್ಟಿ ಹೊಡೆದ ಪರಿಣಾಮ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಐವರು ಗಂಭೀರವಾಗಿ ಗಾಯಗೊಂಡಿದ್ದಾರೆ. ರಾಣೇಬೆನ್ನೂರು ತಾಲೂಕಿನ ಹಲಗೇರಿ ಬಳಿ ಈ ಘಟನೆ ನಡೆದಿದೆ.

VISTARANEWS.COM


on

Tata Ace vehicle overturned Two persons dead five seriously injured
Koo

ಹಾವೇರಿ: ಟಾಟಾ ಏಸ್‌ ವಾಹನದ ಟೈರ್‌ ಬ್ಲಾಸ್ಟ್ ಆಗಿ ಪಲ್ಟಿ ಹೊಡೆದ ಪರಿಣಾಮ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಐವರಿಗೆ ಗಂಭೀರವಾಗಿ ಗಾಯಗೊಂಡಿದ್ದಾರೆ. ರಾಣೇಬೆನ್ನೂರು ತಾಲೂಕಿನ ಹಲಗೇರಿ ಬಳಿ (Road Accident) ಗುರುವಾರ ಸಂಜೆ ಈ ಘಟನೆ ನಡೆದಿದೆ.

ಲಕ್ಷ್ಮಣ ಗುಡ್ಡಪ್ಪ ಕುಳಗಟ್ಟಿ (50), ಸೈನಾಜಬೇಗಂ ಅಮಾನುಲ್ಲಾ (30) ಮೃತ ದುರ್ದೈವಿಗಳು. ಗದಿಗೆಮ್ಮ ಕುಳಗಟ್ಟಿ (40), ಬೀರಪ್ಪ ಬುಳ್ಳಾಪುರ (80), ಅಮಾನುಲ್ಲಾ ದಿವಾನ ಅಜ್ಜಣ್ಣನವರ (38), ಅನಿಶಾಬಾನು ದಿವಾನ ಅಜ್ಜಣ್ಣನವರ (11), ಜೀಶಾನ ಗುಡ್ಡಮ್ಮನವರ (9) ಎಂಬುವವರಿಗೆ ಗಂಭೀರ ಗಾಯಗಳಾಗಿವೆ.

ಇದನ್ನೂ ಓದಿ: SBI Debit Cards: ಎಸ್‌ಬಿಐ ಡೆಬಿಟ್‌ ಕಾರ್ಡ್‌ದಾರರಿಗೆ ಬ್ಯಾಡ್‌ ನ್ಯೂಸ್‌; ನಿಮ್ಮ ಜೇಬಿಗೆ ಬೀಳಲಿದೆ ಕತ್ತರಿ!

ಚಿಕ್ಕಕಬ್ಬಾರ ಗ್ರಾಮದಿಂದ ರಾಣೆಬೆನ್ನೂರಿನ ಎಪಿಎಂಸಿಗೆ ಸೂರ್ಯಕಾಂತಿ ಸಾಗಿಸುತ್ತಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ. ಗಾಯಾಳುಗಳನ್ನು ತಾಲೂಕು ಸರ್ಕಾರಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಘಟನಾ ಸ್ಥಳಕ್ಕೆ ಹಲಗೇರಿ ಠಾಣೆಯ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದರು.

Continue Reading

ಬೆಂಗಳೂರು

Bengaluru News: ಭಯೋತ್ಪಾದನೆ ವಿಚಾರದಲ್ಲಿ ರಾಜ್ಯ ಸರ್ಕಾರದ ನಿರ್ಲಕ್ಷ್ಯ: ಮಾಳವಿಕಾ ಅವಿನಾಶ್ ಟೀಕೆ

Bengaluru News: ಭಯೋತ್ಪಾದನೆ ಚಟುವಟಿಕೆಗಳು ನಡೆಯುತ್ತಿದ್ದರೂ ಏನೂ ಆಗಿಲ್ಲವೇನೋ ಎಂಬ ಸ್ಥಿತಿಯಲ್ಲಿ ರಾಜ್ಯದ ಕಾಂಗ್ರೆಸ್ ಸರ್ಕಾರ ಇದೆ ಎಂದು ಬಿಜೆಪಿ ರಾಜ್ಯ ಉಪಾಧ್ಯಕ್ಷೆ ಮಾಳವಿಕಾ ಅವಿನಾಶ್ ಟೀಕಿಸಿದ್ದಾರೆ.

VISTARANEWS.COM


on

BJP State Vice President Malavika Avinash latest statement
Koo

ಬೆಂಗಳೂರು: ಕರ್ನಾಟಕವು (Karnataka) ಅತ್ಯಂತ ದುರ್ದೈವದ ಪರಿಸ್ಥಿತಿಯಲ್ಲಿದೆ ಎಂದು ಬಿಜೆಪಿ ರಾಜ್ಯ ಉಪಾಧ್ಯಕ್ಷೆ ಮಾಳವಿಕಾ ಅವಿನಾಶ್ ಕಳವಳ (Bengaluru News) ವ್ಯಕ್ತಪಡಿಸಿದರು.

ಬಿಜೆಪಿ ಲೋಕಸಭಾ ಚುನಾವಣಾ 2024ರ ಮಾಧ್ಯಮ ಕೇಂದ್ರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಭಯೋತ್ಪಾದನೆಯ ಚಟುವಟಿಕೆಗಳು ನಡೆಯುತ್ತಿದ್ದರೂ ಏನೂ ಆಗಿಲ್ಲವೇನೋ ಎಂಬ ಸ್ಥಿತಿಯಲ್ಲಿ ರಾಜ್ಯದ ಕಾಂಗ್ರೆಸ್ ಸರ್ಕಾರ ಇದೆ ಎಂದು ಟೀಕಿಸಿದರು.

ಇತ್ತೀಚೆಗೆ ರಾಮೇಶ್ವರಂ ಕೆಫೆಯಲ್ಲಿ ನಡೆದ ಸ್ಫೋಟ ಮತ್ತು ಆ ಸ್ಫೋಟದ ಕುರಿತು ಎನ್‍ಐಎ ತನಿಖೆ ನಡೆಯುತ್ತಿದೆ. ಮೊದಲಿಗೆ ಪೊಲೀಸ್ ತನಿಖೆ ನಡೆಯುತ್ತಿತ್ತು. ಇದೀಗ ಸಿಸಿಬಿ ಮತ್ತು ಎನ್‍ಐಎ ತನಿಖೆ ನಡೆಯುತ್ತಿದೆ ಎಂದು ವಿವರಿಸಿದರು.

ಇದನ್ನೂ ಓದಿ: Karnataka Weather : ಕಲಬುರಗಿಯಲ್ಲಿ 40ರ ಗಡಿದಾಟಿದ ತಾಪಮಾನ; 4 ಜಿಲ್ಲೆಗಳಿಗೆ ಹೀಟ್‌ ವೇವ್‌ ಅಲರ್ಟ್‌

ಎನ್‍ಐಎ, ಶಿವಮೊಗ್ಗ ಮತ್ತು ಬೆಂಗಳೂರಿನಲ್ಲಿ ನಿನ್ನೆ ದಾಳಿ ನಡೆಸಿದೆ. ಶಿವಮೊಗ್ಗದವರಾದ ಇಬ್ಬರು ಪ್ರಮುಖ ಆರೋಪಿಗಳ ಕುರಿತು ಮಾಹಿತಿ ಲಭಿಸಿದೆ. ಇಲ್ಲಿನ ಸ್ಫೋಟಕ್ಕೂ ಮಂಗಳೂರಿನ ಸ್ಫೋಟಕ್ಕೂ ಸಂಬಂಧ ಇದೆ ಎಂದು ತಿಳಿಸಿದರೂ, ಮುಖ್ಯಮಂತ್ರಿಯವರು ಅದನ್ನು ಅಲ್ಲಗಳೆದಿದ್ದಾರೆ ಎಂದು ಆರೋಪಿಸಿದ ಅವರು, ಭಯೋತ್ಪಾದನೆ ನಿಗ್ರಹಕ್ಕೆ ಪ್ರಯತ್ನ ಮಾಡದೆ ಸರ್ಕಾರವು ಜನರನ್ನು ಸಂಕಷ್ಟಕ್ಕೆ ಸಿಲುಕಿಸುತ್ತಿದೆ ಎಂದು ತಿಳಿಸಿದರು.

ತರಬೇತಿ ಪಡೆದದವರೇ ರಾಮೇಶ್ವರಂ ಕೆಫೆ ಸ್ಫೋಟ ಮಾಡಿದ್ದಾರೆ. ಇದಕ್ಕೆ ಪೂರ್ವ ತಯಾರಿ ಮಾಡಿಕೊಂಡಿದ್ದರು. ಇದನ್ನು ಗಂಭೀರವಾಗಿ ಪರಿಗಣಿಸಬೇಕಿದ್ದ ಸರ್ಕಾರವು ತುಷ್ಟೀಕರಣದ ರಾಜಕಾರಣ ಮಾಡುತ್ತಿರುವಂತಿದೆ ಎಂದು ಆರೋಪಿಸಿದರು.

ಇದನ್ನೂ ಓದಿ: IPL 2024 : ಐಪಿಎಲ್ ಇತಿಹಾಸದಲ್ಲಿ ವಿಭಿನ್ನ ಸಾಧನೆ ಮಾಡಿದ ಎಸ್​ಆರ್​​ಎಚ್​​ ಬೌಲರ್​ ಉನಾದ್ಕಟ್​

ಈ ಸಂದರ್ಭದಲ್ಲಿ ವಿಧಾನಪರಿಷತ್ ಸದಸ್ಯೆ ಭಾರತಿ ಶೆಟ್ಟಿ, ಬೆಂಗಳೂರು ಉತ್ತರ ಮಹಿಳಾ ಮೋರ್ಚಾ ಜಿಲ್ಲಾಧ್ಯಕ್ಷೆ ಆಶಾ ರಾವ್, ಬೆಂಗಳೂರು ಕೇಂದ್ರ ಮಹಿಳಾ ಮೋರ್ಚಾ ಜಿಲ್ಲಾಧ್ಯಕ್ಷೆ ರೇಖಾ ಗೋವಿಂದ ಮತ್ತು ಬಿಬಿಎಂಪಿ ಮಾಜಿ ಸದಸ್ಯೆ ಹೇಮಲತಾ ಶೇಟ್ ಉಪಸ್ಥಿತರಿದ್ದರು.

Continue Reading
Advertisement
Dolly Chaiwala
ವೈರಲ್ ನ್ಯೂಸ್28 mins ago

Dolly Chaiwala: ಅಬ್ಬಬ್ಬಾ ಲಾಟರಿ: ಬಿಲ್ ಗೇಟ್ಸ್ ಭೇಟಿ ಆಯ್ತು; ಈಗ ಮಾಲ್ಡೀವ್ಸ್‌ನಲ್ಲಿ ಡಾಲಿ ಚಾಯ್‌ವಾಲಾ ಮಿಂಚು

Mukthar Ansari
ಪ್ರಮುಖ ಸುದ್ದಿ41 mins ago

Mukhtar Ansari : ಗ್ಯಾಂಗ್​ಸ್ಟರ್​ ರಾಜಕಾರಣಿ ಮುಖ್ತಾರ್ ಅನ್ಸಾರಿ ಹೃದಯಾಘಾತದಿಂದ ನಿಧನ

Former DCM Govinda Karajola pressmeet
ಬೆಂಗಳೂರು54 mins ago

Bengaluru News: ದೇಶದ ಸರ್ವಾಂಗೀಣ ಅಭಿವೃದ್ಧಿ ಆಗಿದ್ದೇ ಮೋದಿಯಿಂದ: ಗೋವಿಂದ ಕಾರಜೋಳ

crime news
ಕ್ರೈಂ1 hour ago

5 ವರ್ಷದ ಬಾಲಕಿ ಮೇಲೆ ಅತ್ಯಾಚಾರ ಎಸಗಿ ಕೊಂದ ಪಾಪಿ; ಸಿನಿಮೀಯ ರೀತಿಯಲ್ಲಿ ಬಂಧಿಸಿದ ಪೊಲೀಸರು

Women Slapped
ಪ್ರಮುಖ ಸುದ್ದಿ1 hour ago

Women Slapped : ಪಿಟಿಐ ಪತ್ರಕರ್ತೆಯ ಕಪಾಳಕ್ಕೆ ಬಾರಿಸಿದ ಎಎನ್​ಐ ವರದಿಗಾರ; ಇಲ್ಲಿದೆ ಆತಂಕಕಾರಿ ವಿಡಿಯೊ

Tata Ace vehicle overturned Two persons dead five seriously injured
ಕರ್ನಾಟಕ1 hour ago

Road Accident: ಟಾಟಾ ಏಸ್ ವಾಹನ ಪಲ್ಟಿ; ಇಬ್ಬರ ಸಾವು, ಐವರಿಗೆ ಗಂಭೀರ ಗಾಯ

Xiaomi Car in China
ಪ್ರಮುಖ ಸುದ್ದಿ2 hours ago

Xiaomi Car: ಎಲೆಕ್ಟ್ರಿಕ್​ ಕಾರು ಮಾರುಕಟ್ಟೆಗೆ ಇಳಿಸಿದ ಮೊಬೈಲ್ ಕಂಪನಿ ರೆಡ್​ಮಿ

viral video
ವೈರಲ್ ನ್ಯೂಸ್2 hours ago

Viral Video: ಶಾಲೆಗೆ ಕುಡಿದು ಬಂದ ಶಿಕ್ಷಕನಿಗೆ ʼಪಾಠʼ ಕಲಿಸಿದ ವಿದ್ಯಾರ್ಥಿಗಳು; ಹೇಗೆಂದು ನೀವೇ ನೋಡಿ

BJP State Vice President Malavika Avinash latest statement
ಬೆಂಗಳೂರು2 hours ago

Bengaluru News: ಭಯೋತ್ಪಾದನೆ ವಿಚಾರದಲ್ಲಿ ರಾಜ್ಯ ಸರ್ಕಾರದ ನಿರ್ಲಕ್ಷ್ಯ: ಮಾಳವಿಕಾ ಅವಿನಾಶ್ ಟೀಕೆ

Lok Sabha Election 2024 Prajwal Revanna gets Rs 40 crore worth asset
Lok Sabha Election 20242 hours ago

Lok Sabha Election 2024: ಪ್ರಜ್ವಲ್‌ ರೇವಣ್ಣ 40 ಕೋಟಿ ರೂ. ಒಡೆಯ; ಇದೆ ಕೆಜಿಗಟ್ಟಲೆ ಚಿನ್ನ!

Sharmitha Gowda in bikini
ಕಿರುತೆರೆ6 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ6 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ5 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ4 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ6 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ5 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ3 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ4 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Lok Sabha Election 2024 DK Brothers hold roadshow in Ramanagara and DK Suresh file nomination
Lok Sabha Election 202410 hours ago

Lok Sabha Election 2024: ರಾಮನಗರದಲ್ಲಿ ಡಿಕೆ ಬ್ರದರ್ಸ್‌ ಶಕ್ತಿ ಪ್ರದರ್ಶನ, ರೋಡ್‌ ಶೋ ಮಾಡಿ ನಾಮಪತ್ರ ಸಲ್ಲಿಸಿದ ಡಿಕೆಸು

Lok Sabha Election 2024 personal prestige will not be allowed DK Shivakumar warns Kolar leaders
Lok Sabha Election 202411 hours ago

Lok Sabha Election 2024: ಯಾರ ವೈಯಕ್ತಿಕ ಪ್ರತಿಷ್ಠೆಗೂ ಅವಕಾಶ ನೀಡಲ್ಲ; ಕೋಲಾರ ನಾಯಕರಿಗೆ ಡಿಕೆಶಿ ಖಡಕ್‌ ಎಚ್ಚರಿಕೆ

dina bhavishya read your daily horoscope predictions for March 28 2024
ಭವಿಷ್ಯ19 hours ago

Dina Bhavishya : ಇಂದು ಈ ರಾಶಿಯವರಿಗೆ ಒತ್ತಡ ಹೆಚ್ಚು; ಜಾಗ್ರತೆ ವಹಿಸುವುದು ಉತ್ತಮ!

R Ashok Pressmeet and attack on CM Siddaramaiah Congress Government
Lok Sabha Election 20241 day ago

Lok Sabha Election 2024: ಬೈ ಬೈ ಬೆಂಗಳೂರು ಎನ್ನುತ್ತಿರುವ ಜನ; ಸರ್ಕಾರದ ವಿರುದ್ಧ ಹರಿಹಾಯ್ದ ಆರ್.‌ ಅಶೋಕ್

Tejaswini Gowda resigns from BJP Council Impact on BJP
Lok Sabha Election 20241 day ago

Tejaswini Gowda: ಬಿಜೆಪಿ ಪರಿಷತ್‌ ಸ್ಥಾನಕ್ಕೆ ರಾಜೀನಾಮೆ ಕೊಟ್ಟ ತೇಜಸ್ವಿನಿ ಗೌಡ! ಬಿಜೆಪಿಗೆ ಎಫೆಕ್ಟ್?

Lok Sabha Election 2024 Gokarna priest shalls to make DK Shivakumar CM Whats wrong says Shivakumar
Lok Sabha Election 20241 day ago

Lok Sabha Election 2024: ಡಿಕೆಶಿ ಸಿಎಂ ಆಗಲಿ ಎಂದು ಗೋಕರ್ಣ ಅರ್ಚಕರಿಂದ ಸಂಕಲ್ಪ; ತಪ್ಪೇನು ಎಂದ ಶಿವಕುಮಾರ್

Dina Bhavishya
ಭವಿಷ್ಯ2 days ago

Dina Bhavishya : ಉತ್ಸಾಹದಲ್ಲಿ ಆಶ್ವಾಸನೆ ಕೊಟ್ಟು ಅಪಾಯದ ಸುಳಿಗೆ ಸಿಲುಕಬೇಡಿ

BBMP marshals harass street vendors in Jayanagar
ಬೆಂಗಳೂರು2 days ago

BBMP Marshals : ಜಯನಗರದ ಬೀದಿಯಲ್ಲಿ ಬ್ಯಾಗ್‌ ಮಾರುತ್ತಿದ್ದ ವೃದ್ಧನ ಮೇಲೆ ದರ್ಪ ಮೆರೆದ ಮಾರ್ಷಲ್ಸ್‌

Dina Bhavishya
ಭವಿಷ್ಯ3 days ago

Dina Bhavishya : ಆಪ್ತರ ವರ್ತನೆಯು ಈ ರಾಶಿಯವರ ಮನಸ್ಸಿಗೆ ನೋವು ತರಲಿದೆ

Lok Sabha Election 2024 Sanganna Karadi rebels quell and assure to support koppala BJP Candidate
Lok Sabha Election 20243 days ago

Lok Sabha Election 2024: ರಾಜ್ಯಸಭೆ ಇಲ್ಲವೇ ಪರಿಷತ್‌ ಸ್ಥಾನದ ಭರವಸೆ; ತಣ್ಣಗಾದ ಕರಡಿ! ಅಭ್ಯರ್ಥಿ ಪರ ಪ್ರಚಾರಕ್ಕೆ ಜೈ

ಟ್ರೆಂಡಿಂಗ್‌