ಕೊಡಗು: ಖಾಸಗಿ ಬಸ್‌ವೊಂದು ಚಾಲಕನ ನಿಯಂತ್ರಣ ತಪ್ಪಿ ಮಗುಚಿ ಬಿದ್ದ ಘಟನೆ ನಾಪೋಕ್ಲು (Kodagu Road Accident) ಸಮೀಪದ ಕೋಟೇರಿ ಬಳಿ ನಡೆದಿದೆ. ಚಾಲಕನ ಅತಿವೇಗದ ಚಾಲನೆ ಹಾಗೂ ರಸ್ತೆ ನಿರ್ಮಾಣ ಸಂದರ್ಭ ತಡೆಗೋಡೆ ನಿರ್ಮಾಣ ಮಾಡದಿರುವುದೇ ಅಪಘಾತಕ್ಕೆ ಕಾರಣ ಎನ್ನಲಾಗಿದೆ. ಲೋಕೋಪಯೋಗಿ ಇಲಾಖೆಯ ನಿರ್ಲಕ್ಷ್ಯದ ವಿರುದ್ಧ ಸ್ಥಳೀಯರು ಆಕ್ರೋಶ ಹೊರಹಾಕಿದ್ದಾರೆ.
ಕಕ್ಕಬ್ಬೆಯಿಂದ ನಾಪೋಕ್ಲು ಮಾರ್ಗವಾಗಿ ಮಡಿಕೇರಿಗೆ ಬರುತ್ತಿದ್ದಾಗ ಈ ಅಪಘಾತ ಸಂಭವಿಸಿದೆ. ಬಸ್‌ನಲ್ಲಿ ಶಾಲಾ ಮಕ್ಕಳೇ ಹೆಚ್ಚಾಗಿ ಪ್ರಯಾಣಿಸುತ್ತಿದ್ದರು ಎನ್ನಲಾಗಿದೆ. ಅಪಘಾತದಲ್ಲಿ ಸಣ್ಣಪುಟ್ಟ ಗಾಯಗಳಿಂದ ಎಲ್ಲ ಪ್ರಯಾಣಿಕರು ಪಾರಾಗಿದ್ದಾರೆ. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.
ಇದನ್ನೂ ಓದಿ: Boy drowned : ಹಸು ತೊಳೆಯಲು ಹೋದ ಬಾಲಕ ನೀರುಪಾಲು; ಚಿಕ್ಕಪ್ಪ ಕಾಲಿನಿಂದ ಒದ್ದಿದ್ದೇ ಸಾವಿಗೆ ಕಾರಣ?
ಬಸ್ ಹಳ್ಳಕ್ಕೆ ಪಲ್ಟಿ ಆಗುತ್ತಿದ್ದಂತೆ ಬಸ್‌ನಲ್ಲಿ ಸಿಲುಕಿದ್ದ ಪ್ರಯಾಣಿಕರನ್ನು ಸ್ಥಳೀಯರು ರಕ್ಷಣೆ ಮಾಡಿದ್ದಾರೆ. ಗಾಯಾಳುಗಳಿಗೆ ನಾಪೋಕ್ಲು ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಕೊಡಗಿನ ಇನ್ನಷ್ಟು ಸುದ್ದಿಗಾಗಿ ಈ ಲಿಂಕ್ ಕ್ಲಿಕ್ ಮಾಡಿ