ಕೊಡಗು: ಅರಣ್ಯ ಇಲಾಖೆಯ 10 ದಿನಗಳ ಕಾರ್ಯಾಚರಣೆ ಯಶಸ್ವಿಯಾಗಿದ್ದು, ಜಾನುವಾರುಗಳ ಮೇಲೆ ದಾಳಿ ನಡೆಸುತ್ತಿದ್ದ ಹುಲಿಯನ್ನು (Tiger captured) ವಿರಾಜಪೇಟೆ ತಾಲೂಕಿನ ಮಾಲ್ದಾರೆಯಲ್ಲಿ ಕೊನೆಗೂ ಮಂಗಳವಾರ ಸೆರೆಹಿಡಿಯಲಾಗಿದೆ.
ಜಿಲ್ಲೆಯ ಸಿದ್ದಾಪುರ ವ್ಯಾಪ್ತಿಯಲ್ಲಿ ಜಾನುವಾರುಗಳ ಮೇಲೆ ದಾಳಿ ನಡೆಸುವ ಮೂಲಕ ವ್ಯಾಘ್ರ ಆತಂಕ ಹುಟ್ಟಿಸಿತ್ತು. ಹೀಗಾಗಿ ಹುಲಿ ಸೆರೆಗೆ 10 ದಿನಗಳಿಂದ ಅರಣ್ಯ ಇಲಾಖೆ ಸಿಬ್ಬಂದಿ ಕಾರ್ಯಾಚರಣೆ ನಡೆಸುತ್ತಿದ್ದರು. ನಾಲ್ಕು ಆನೆಗಳನ್ನು ಬಳಸಿ ಕಾರ್ಯಾಚರಣೆ ನಡೆಸಿ, ಅರಿವಳಿಕೆ ಮದ್ದು ನೀಡುವ ಮೂಲಕ ಹುಲಿಯನ್ನು ಮಾಲ್ದಾರೆಯಲ್ಲಿ ಸೆರೆ ಹಿಡಿಯಲಾಗಿದೆ.
ಹುಲಿ ಸೆರೆಗೆ ಕಾರ್ಯಾಚರಣೆ ನಡೆಸುತ್ತಿದ್ದರಿಂದ ಮಾಲ್ದಾರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ವಾಹನ ಸಂಚಾರ ನಿಷೇಧಿಸಲಾಗಿತ್ತು. ಈಗ ಹುಲಿ ಸೆರೆಯಾಗಿರುವುದರಿಂದ ಸ್ಥಳೀಯರು ನಿಟ್ಟುಸಿರು ಬಿಟ್ಟಿದ್ದಾರೆ.
ಇದನ್ನೂ ಓದಿ | ಮುರುಘಾ ಮಠದಲ್ಲಿದ್ದ 40 ಕೃಷ್ಣ ಮೃಗ, ಜಿಂಕೆಗಳು ನಾಪತ್ತೆ: ಕೊಲ್ಲಿಸಿದರಾ? ಮಾರಾಟ ಮಾಡಿದರಾ? ತನಿಖೆಗೆ ಆಗ್ರಹ