ಕೊಡಗು : ಮಾಜಿ ಮುಖ್ಯಮಂತ್ರಿ ಹಾಗೂ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರ ಕಾರಿಗೆ ಮೊಟ್ಟೆ ಎಸೆದ ವಿಚಾರಕ್ಕೆ ಸಂಬಂಧಿಸಿದಂತೆ ಮುಂದುವರಿದ ಪ್ರತಿಭಟನೆಗಳ ಹಿನ್ನೆಲೆಯಲ್ಲಿ ಆ.26ರಂದು ಕೊಡಗು ಜಿಲ್ಲೆಯಲ್ಲಿ ಬುಧವಾರ (ಆ.24) 144 ಸೆಕ್ಷನ್ ಜಾರಿ ಮಾಡಲಾಗಿದೆ.
ಕಾಂಗ್ರೆಸ್ ಮತ್ತು ಬಿಜೆಪಿ ಎರಡೂ ಪಕ್ಷಗಳು ಜಿಲ್ಲೆಯಲ್ಲಿ ಪ್ರತಿಭಟನೆ ಮಾಡಲು ನಿರ್ಧರಿಸಿದ್ದವು. ಈ ಹಿನ್ನೆಲೆಯಲ್ಲಿ ಅಹಿತಕರ ಘಟನೆ ನಡೆಯದಂತೆ ಆಗಸ್ಟ್ 26 ಬೆಳಗ್ಗೆ 6 ಗಂಟೆಯಿಂದ ಆಗಸ್ಟ್ 27ರ ಸಂಜೆ 6 ಗಂಟೆವರೆಗೆ ನಿಷೇಧಾಜ್ಞೆ ಜಾರಿ ಆಗಿದೆ. ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿ ಎಂದು ಕೊಡಗು ಜಿಲ್ಲಾಧಿಕಾರಿ ಡಾ.ಬಿ.ಸಿ ಸತೀಶ ಆದೇಶ ಹೊರಡಿಸಿದ್ದಾರೆ. ಅಲ್ಲದೆ ಇದೇ ಅವಧಿಯಲ್ಲಿ ಕೊಡಗಿನಲ್ಲಿ ಮದ್ಯ ಮಾರಾಟಕ್ಕೂ ನಿಷೇಧಿಸಲಾಗಿದೆ. ಯಾವುದೇ ರಾಜಕೀಯ ಸಭೆ ಸಮಾರಂಭ ನಡೆಯುವಂತಿಲ್ಲ. ಮತ್ತು ಪೂರ್ವ ನಿಯೋಜಿತ ಕಾರ್ಯಕ್ರಮಗಳಿಗೆ ಯಾವುದೇ ನಿರ್ಬಂಧ ಇಲ್ಲ ಎಂದು ಆದೇಶ ನೀಡಿದ್ದಾರೆ.
ಇದನ್ನೂ ಓದಿ | ಗುಂಪು ಘರ್ಷಣೆ; ಹುಲಿಹೈದರ್ ಗ್ರಾಮದಲ್ಲಿ ಆ.25ರವರೆಗೆ 144 ಸೆಕ್ಷನ್ ವಿಸ್ತರಣೆ