ಕೊಡಗು
Dalit woman murder: ಪ್ರೀತಿಸಿ ಮದುವೆಯಾದ ಮೂರೇ ದಿನಕ್ಕೆ ದಲಿತ ಯುವತಿ ಸಾವು, ಕೊಲೆ ಶಂಕೆ
ಮಡಿಕೇರಿ: ಒಕ್ಕಲಿಗ ಸಮುದಾಯದ ಯುವಕನನ್ನು ಪ್ರೀತಿಸಿ ಮದುವೆಯಾದ ದಲಿತ ಯುವತಿಯೊಬ್ಬಳು ಮೂರೇ ದಿನಕ್ಕೆ ಸಾವಿಗೀಡಾಗಿದ್ದಾಳೆ. ಪತಿ ಹಾಗೂ ಆತನ ಕುಟುಂಬದವರ ಹೇಳಿಕೆಗಳು ಸಂಶಯಾಸ್ಪದವಾಗಿದ್ದು, ಕೊಲೆ ನಡೆಸಿರುವ ಶಂಕೆ ವ್ಯಕ್ತವಾಗಿದೆ.
ಕೊಡಗು ಜಿಲ್ಲೆಯ ಕುಶಾಲನಗರ ತಾಲ್ಲೂಕಿನ ಹೆಬ್ಬಾಲೆ ಸಮೀಪದ 7ನೇ ಹೊಸಕೋಟೆ ಎಂಬಲ್ಲಿ ಈ ಘಟನೆ ನಡೆದಿದೆ. ಅಕ್ಷಿತಾ (18) ಕೊಲೆಯಾದ ಯುವತಿ. ನಿನ್ನೆ ಸಂಜೆ ಅನುಮಾನಾಸ್ಪದವಾಗಿ ಸಾವು ಸಂಭವಿಸಿದೆ. ಅದೇ ಗ್ರಾಮದ ಹೇಮಂತ್ ಎಂಬ ಒಕ್ಕಲಿಗ ಯುವಕನನ್ನು ಈಕೆ ಪ್ರೀತಿಸಿ ಮದುವೆಯಾಗಿದ್ದಳು. ಮೂರು ದಿನಗಳ ಹಿಂದೆ ಇಬ್ಬರೂ ದೇವಾಲಯದಲ್ಲಿ ಮದುವೆಯಾಗಿ ಬಂದಿದ್ದರು. ಇದರಿಂದ ಹೇಮಂತ್‌ನ ಪೋಷಕರಾದ ದಶರಥ ಮತ್ತು ಗಿರಿಜಾ ರೊಚ್ಚಿಗೆದ್ದಿದ್ದರು. ದಲಿತ ಯುವತಿ ತಮ್ಮ ಮಗನನ್ನು ಮದುವೆಯಾದುದು ಅವರಿಗೆ ಇಷ್ಟವಿರಲಿಲ್ಲ. ಆಕೆಯನ್ನು ಸಾಯಿಸಿಬಿಡುವುದಾಗಿ ಹೇಳಿದ್ದರು ಎಂದು ಅಕ್ಷಿತಾ ಕುಟುಂಬಸ್ಥರು ಆರೋಪಿಸಿದ್ದಾರೆ.
ಕುಶಾಲನಗರ ಗ್ರಾಮಾಂತರ ಪೊಲೀಸ್ ಠಾಣೆಗೆ ದೂರು ನೀಡಲಾಗಿದೆ. ಕುಶಾಲನಗರ ಸಮುದಾಯ ಆರೋಗ್ಯ ಕೇಂದ್ರಕ್ಕೆ ಮೃತದೇಹ ರವಾನಿಸಲಾಗಿದ್ದು, ಪರೀಕ್ಷೆ ನಡೆಸಲಾಗುತ್ತಿದೆ. ಪೊಲೀಸರು ತನಿಖೆ ಕೈಗೊಂಡಿದ್ದಾರೆ.
ಇದನ್ನೂ ಓದಿ: ಹತ್ರಾಸ್ ದಲಿತ ಯುವತಿ ಅತ್ಯಾಚಾರ ಪ್ರಕರಣ; ನಾಲ್ವರು ಆರೋಪಿಗಳಲ್ಲಿ ಮೂವರಿಗೆ ಖುಲಾಸೆ, ಒಬ್ಬನಿಗೆ ಮಾತ್ರ ಶಿಕ್ಷೆ
ಕರ್ನಾಟಕ
Robbery Case: ಅತ್ತ ಸರಸಕ್ಕಾಗಿ ಸರ ಕದ್ದ ಮೂವರು ಹೆಂಡಿರ ಮುದ್ದಿನ ಗಂಡ; ಇತ್ತ ದರೋಡೆಗಿಳಿದ ಆಟೊ ಚಾಲಕರಿಬ್ಬರ ಸೆರೆ
Auto Drivers: ಆಟೋ ಹತ್ತಿದ ಪ್ರಯಾಣಿಕನನ್ನು ಚಾಲಕರಿಬ್ಬರು ನಿರ್ಜನ ಪ್ರದೇಶಕ್ಕೆ ಕರೆದುಕೊಂಡು ಹೋಗಿ ಹಲ್ಲೆ ನಡೆಸಿ, ಹಣ ಸುಲಿಗೆ (Robbery Case) ಮಾಡಿದ ಘಟನೆ ಬೆಂಗಳೂರಿನಲ್ಲಿ ನಡೆದಿದೆ.
ಬೆಂಗಳೂರು: ನೀವೇನಾದರೂ ತಡರಾತ್ರಿ ಮೆಜೆಸ್ಟಿಕ್ (Majestic) ಬಳಿ ಆಟೋ (Auto Drivers) ಹತ್ತುವವರಿದ್ದರೆ ಸ್ವಲ್ಪ ಎಚ್ಚರವಾಗಿರಿ. ಯಾಕೆಂದರೆ ಇಲ್ಲೂ ಸಹ ದರೋಡೆಕೋರರು ಇರಬಹುದು. ಇಬ್ಬರು ಆಟೋ ಚಾಲಕರು ಆಟೋ ಹತ್ತಿದ ಗ್ರಾಹಕರ ಮೇಲೆ ಹಲ್ಲೆ ನಡೆಸಿ, ಬಳಿಕ ಸುಲಿಗೆ (Robbery Case) ಮಾಡಿರುವ ಘಟನೆ ನಡೆದಿದೆ.
ಅಲ್ಲಾ ಬಕಾಸ್ , ನದೀಮ್ ಖಾನ್ ಎಂಬ ಇಬ್ಬರು ಆಟೋ ಚಾಲಕರನ್ನು ಉಪ್ಪಾರಪೇಟೆ ಪೊಲೀಸರು ಬಂಧಿಸಿದ್ದಾರೆ. ಕಳೆದ 26ರಂದು ಉಪ್ಪಾರಪೇಟೆ ಠಾಣಾ ವ್ಯಾಪ್ತಿಯಲ್ಲಿ ಪ್ರಯಾಣಿರೊಬ್ಬರು ಬಾರ್‌ನಿಂದ ರೂಮ್‌ಗೆ ಬಿಡುವಂತೆ ಆಟೋ ಹತ್ತಿದ್ದಾರೆ. ಆಟೋ ಹತ್ತಿದ ಕೂಡಲೇ ಬಿಯರ್‌ಬೇಕು ಎಂದು ಕೇಳಿದ್ದಾರೆ. ನಂತರ ಈ ಚಾಲಕರು ಬಿಯರ್ ಕೊಡಿಸುತ್ತೇವೆ ಎಂದು ಹೇಳಿ ಐದಾರು ಕಿ.ಮೀ ಸುತ್ತಾಡಿಸಿದ್ದಾರೆ.
ಬಳಿಕ ಯಾರೂ ಇಲ್ಲದ ಸ್ಥಳಕ್ಕೆ ಕರೆದುಕೊಂಡು ಹೋಗಿ ಆ ವ್ಯಕ್ತಿಗೆ ಹೊಡೆದು, ಮೊಬೈಲ್, ಹಣವನ್ನು ಕದ್ದು ಪರಾರಿ ಆಗಿದ್ದರು. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆ ನಡೆಸಿ, ಇಬ್ಬರನ್ನು ಜೈಲಿಗೆ ಅಟ್ಟಿದ್ದಾರೆ. ಬಂಧಿತರಿಂದ ಒಂದು ಆಟೋ, ಎರಡು ಮೊಬೈಲ್, 4 ಸಾವಿರ ನಗದು ಜಪ್ತಿ ಮಾಡಲಾಗಿದೆ. ಉಪ್ಪಾರಪೇಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ತನಿಖೆಯನ್ನು ಮುಂದುವರಿಸಿದ್ದಾರೆ.
ಶೋಕಿ ಜೀವನಕ್ಕಾಗಿ ಕಳ್ಳತನಕ್ಕಿಳಿದಿದ್ದವನ ಬಂಧನ
ಶೋಕಿ ಜೀವನಕ್ಕಾಗಿ ಸರಗಳ್ಳತನ ಮಾಡುತ್ತಿದ್ದವನನ್ನು ಶೇಷಾದ್ರಿಪುರಂ ಪೊಲೀಸರು ಬಂಧಿಸಿದ್ದಾರೆ. ಅಚ್ಯುತ್ ಕುಮಾರ್ ಘನಿ ಬಂಧಿತ ಆರೋಪಿ ಆಗಿದ್ದು, ಇದುವರೆಗೂ 154 ಸರಗಳ್ಳತನ ಕೇಸ್ ದಾಖಲಾಗಿವೆ. ಅಚ್ಯುತ್ ಬಂಧನದಿಂದ 4 ಪ್ರಕರಣಗಳು ಬೆಳಕಿಗೆ ಬಂದಿವೆ.
2018ರಲ್ಲಿ ಕೆಂಗೇರಿ ಠಾಣಾ ವ್ಯಾಪ್ತಿಯಲ್ಲಿ ಸರಗಳ್ಳತನ ಮಾಡಿ ಎಸ್ಕೇಪ್ ಆಗುತ್ತಿದ್ದಾಗ ಪೊಲೀಸರು ಎರಡೂ ಕಾಲಿಗೆ ಗುಂಡು ಹೊಡೆದು ಬಂಧಿಸಿದ್ದರು. ಕಳೆದ ಆರು ತಿಂಗಳ ಹಿಂದಷ್ಟೇ ರಿಲೀಸ್ ಆಗಿದ್ದವನು ಮತ್ತೆ ಕಳ್ಳತನಕ್ಕಿಳಿದು ನಂದಿನಿ ಲೇಔಟ್ ಪೊಲೀಸರ ಕೈಗೆ ಸಿಕ್ಕಿ ಹಾಕಿಕೊಂಡಿದ್ದ. ಎರಡು ತಿಂಗಳ ಹಿಂದೆ ಮತ್ತೆ ಜಾಮೀನಿನ ಮೇಲೆ ಹೊರಗಡೆ ಬಂದಿದ್ದ ಈತ ನಾಲ್ಕು ಕಡೆಗಳಲ್ಲಿ ಸರಗಳ್ಳತನ ಮಾಡಿ ಪರಾರಿ ಆಗಿದ್ದ.
ಮೂಲತಃ ಧಾರವಾಡ ಜಿಲ್ಲೆಯ ಕೋಳಿವಾಡದವನಾದ ಈತ 2015ರಲ್ಲಿ ಬೆಂಗಳೂರಿಗೆ ಬಂದು ಅಚ್ಯುತ್ ಕುಮಾರ್ ಘನಿ ಎಂದು ಹೆಸರು ಬದಲಿಸಿಕೊಂಡಿದ್ದ. ಇದುವರೆಗೂ ಮೂರು ಮದುವೆ ಆಗಿರುವ ಈ ಖದೀಮ ಶೋಕಿ ಜೀವನಕ್ಕಾಗಿ ಸರಗಳ್ಳತನ ಮಾಡುತ್ತಿದ್ದ ಎಂದು ತನಿಖೆಯಲ್ಲಿ ತಿಳಿದು ಬಂದಿದೆ. ದಾವಣಗೆರೆ, ಗದಗ, ಸಿ.ಕೆ. ಅಚ್ಚುಕಟ್ಟು, ತಲಘಟ್ಟಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬೇಕಾಗಿದ್ದ ಆರೋಪಿಯಾಗಿದ್ದಾನೆ. ಸದ್ಯ ಶೇಷಾದ್ರಿಪುರ ಪೊಲೀಸರು ಬಂಧಿಸಿದ್ದು, 302 ಗ್ರಾಂ ಚಿನ್ನಾಭರಣವನ್ನು ವಶಕ್ಕೆ ಪಡೆದುಕೊಂಡಿದ್ದಾರೆ.
ಗಾಂಜಾ ಮಾರಾಟ ಮಾಡುತ್ತಿದ್ದ ಮೂವರ ಬಂಧನ
ಕೊಡಗು: ಗಾಂಜಾ ಮಾರಾಟ ಮಾಡುತ್ತಿದ್ದ ಅಸ್ಸಾಂ ಮೂಲದ ಮೂವರು ಆರೋಪಿಗಳನ್ನು ಮಾಲು ಸಹಿತ ಬಂಧಿಸುವಲ್ಲಿ ನಾಪೋಕ್ಲು ಪೊಲೀಸರು ಯಶಸ್ವಿಯಾಗಿದ್ದಾರೆ. ಸೈಫುಲ್ ಇಸ್ಲಾಂ (27), ಅನಾರ್ ಹುಸೈನ್ (37), ಜಹೀರ್ ಅಲಿ (28) ಬಂಧಿತ ಆರೋಪಿಗಳಾಗಿದ್ದಾರೆ. ಕೊಡಗಿನ ಮಡಿಕೇರಿ ತಾಲೂಕಿನ ನಾಪೋಕ್ಲು ಪೊಲೀಸ್ ಠಾಣಾ ವ್ಯಾಪ್ತಿಯ ಕೈಕಾಡು ಗ್ರಾಮದಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದರು.
ಇದನ್ನೂ ಓದಿ: Honey bee attack : ಹೆಜ್ಜೇನು ದಾಳಿ ವೇಳೆ ಬಾವಿಗೆ ಹಾರಿ ಜೀವ ಉಳಿಸಿಕೊಂಡ 79ರ ವೃದ್ಧ; ಕಡಿತಕ್ಕೆ ಇಬ್ಬರು ಗಂಭೀರ
ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ. ಅಂದಾಜು 3.50 ಲಕ್ಷ ರೂಪಾಯಿ ವೆಚ್ಚದ 2.150 ಕೆ.ಜಿ ಗಾಂಜಾವನ್ನು ವಶಪಡಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ. ಜಿಲ್ಲಾ ಪೊಲೀಸ್ ಅಧೀಕ್ಷಕರಾದ ರಾಮರಾಜನ್ ಮತ್ತು ಹೆಚ್ಚುವರಿ ಪೊಲೀಸ್ ಉಪ ಅಧೀಕ್ಷಕರಾದ ಸುಂದರ್ ರಾಜ್ ನಿರ್ದೇಶನದಂತೆ ಡಿವೈಎಸ್‌ಪಿ ಜಗದೀಶ್, ವೃತ ನಿರೀಕ್ಷಕ ಶೇಖರ್ ಮಾರ್ಗದರ್ಶನದಲ್ಲಿ ನಡೆದ ಕಾರ್ಯಾಚರಣೆಯಲ್ಲಿ ನಾಪೋಕ್ಲು ಠಾಣಾಧಿಕಾರಿ ಮಂಜುನಾಥ್, ಸಿಬ್ಬಂದಿಗಳಾದ ಕೆ.ಎಂ. ಅಬ್ದುಲ್ ಶಮೀಲ್, ಶಿವಪ್ರಸಾದ್, ಹರ್ಷ, ಪ್ರಸನ್ನ, ಮಧುಸೂದನ್, ಎಚ್.ಸಿ. ಕಾಳೆಯಪ್ಪ, ಪಂಚಲಿಂಗಪ್ಪ ಸತ್ತಿಗೇರಿ, ಮಹದೇವ ನಾಯಕ, ನವೀನ್, ಶರತ್, ಮಹೇಶ್, ರಾಮಕೃಷ್ಣ, ರವಿಕುಮಾರ್, ಗಿರೀಶ್, ವೆಂಕಟೇಶ್, ಲವಕುಮಾರ್, ಚಾಲಕ ಷರೀಫ್ ಪಾಲ್ಗೊಂಡಿದ್ದರು.
ಕರ್ನಾಟಕ
Drugs Case : ಅಕ್ರಮ ಗಾಂಜಾ ಮಾರಾಟ; ಮೂವರು ಆರೋಪಿಗಳು ಮಾಲು ಸಮೇತ ಬಂಧನ
ಕೊಡಗು ಜಿಲ್ಲೆಯ ನಾಪೋಕ್ಲುವಿನಲ್ಲಿ ಗಾಂಜಾ ಸಾಗಾಟಕ್ಕೆ (Drugs Case) ಯತ್ನಿಸುತ್ತಿದ್ದ ಮೂವರನ್ನು ಬಂಧಿಸಲಾಗಿದೆ. ಇವರ ಕೈಯಿಂದ 3.5 ಲಕ್ಷ ಮೌಲ್ಯದ ಗಾಂಜಾ ವಶವಾಗಿದೆ.
ಮಡಿಕೇರಿ: ಅಕ್ರಮವಾಗಿ ಗಾಂಜಾ ಮಾರಾಟ (Drugs Case) ಮಾಡುತ್ತಿದ್ದ ಅಸ್ಸಾಂ ಮೂಲದ ಮೂವರು ಆರೋಪಿಗಳನ್ನು ಮಾಲು ಸಹಿತ ಬಂಧಿಸುವಲ್ಲಿ ನಾಪೋಕ್ಲು ಪೊಲೀಸರು ಯಶಸ್ವಿಯಾಗಿದ್ದಾರೆ.
ಕೊಡಗು ಜಿಲ್ಲೆ ಮಡಿಕೇರಿ ತಾಲೂಕಿನ ನಾಪೋಕ್ಲು ಪೊಲೀಸ್ ಠಾಣಾ ವ್ಯಾಪ್ತಿಯ ಕೈಕಾಡು ಗ್ರಾಮದಲ್ಲಿ ಅಕ್ರಮವಾಗಿ ಗಾಂಜಾ ಮಾರಾಟ ಮಾಡುತ್ತಿರುವ ಬಗ್ಗೆ ದೊರೆತ ಖಚಿತ ಮಾಹಿತಿ ಮೇರೆಗೆ ದಾಳಿನಡೆಸಿದ ಪೊಲೀಸರು ಅಸ್ಸಾಂ ಮೂಲದ ಸೈಫುಲ್ ಇಸ್ಲಾಂ (27), ಅನಾರ್ ಹುಸೈನ್ (37), ಜಹೀರ್ ಅಲಿ (28) ಎಂಬ ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಆರೋಪಿಗಳಿಂದ ಅಂದಾಜು ಸುಮಾರು 3.50 ಲಕ್ಷರೂ ವೆಚ್ಚದ 2.150 ಕೆಜಿ ಗಾಂಜಾವನ್ನು ವಶಪಡಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ.
ಜಿಲ್ಲಾ ಪೊಲೀಸ್ ಅಧೀಕ್ಷಕರಾದ ರಾಮರಾಜನ್ ಮತ್ತು ಹೆಚ್ಚುವರಿ ಪೊಲೀಸ್ ಉಪ ಅಧೀಕ್ಷರಾದ ಸುಂದರ್ ರಾಜ್ ನಿರ್ದೇಶನದಂತೆ ಡಿ ವೈ ಎಸ್ ಪಿ ಜಗದೀಶ್, ವೃತ ನಿರೀಕ್ಷಕ ಶೇಖರ್ ಮಾರ್ಗದರ್ಶನದಲ್ಲಿ ನಡೆದ ಕಾರ್ಯಾಚರಣೆಯಲ್ಲಿ ನಾಪೋಕ್ಲು ಠಾಣಾಧಿಕಾರಿ ಮಂಜುನಾಥ್, ಸಿಬ್ಬಂದಿಗಳಾದ ಕೆ.ಎಂ. ಅಬ್ದುಲ್ ಶಮೀಲ್, ಶಿವಪ್ರಸಾದ್, ಹರ್ಷ, ಪ್ರಸನ್ನ, ಮಧುಸೂದನ್,ಎಚ್. ಸಿ.ಕಾಳೆಯಪ್ಪ, ಪಂಚಲಿಂಗಪ್ಪ ಸತ್ತಿಗೇರಿ, ಮಹದೇವ ನಾಯಕ, ನವೀನ್, ಶರತ್, ಮಹೇಶ್, ರಾಮಕೃಷ್ಣ, ರವಿಕುಮಾರ್, ಗಿರೀಶ್, ವೆಂಕಟೇಶ್, ಲವಕುಮಾರ್,ಚಾಲಕ ಷರೀಫ್ ಪಾಲ್ಗೊಂಡಿದ್ದರು.
ಪರೀಕ್ಷೆ ಭಯದಿಂದ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿ ಆತ್ಮಹತ್ಯೆ; ನದಿಯಲ್ಲಿ ಶವ ಪತ್ತೆ
ಕಡಬ (ಮಂಗಳೂರು): ಮಾರ್ಚ್ 31ರಿಂದ ರಾಜ್ಯದಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷೆ ಆರಂಭಗೊಳ್ಳುತ್ತಿದೆ. ಶಿಕ್ಷಣ ಇಲಾಖೆ ಮತ್ತು ವಿದ್ಯಾರ್ಥಿಗಳು ಇದಕ್ಕೆ ಎಲ್ಲ ರೀತಿಯಲ್ಲಿ ಸಿದ್ಧತೆಗಳನ್ನು ಮಾಡಿಕೊಂಡಿದ್ದಾರೆ. ಇಷ್ಟರ ನಡುವೆಯೇ ಪರೀಕ್ಷೆ ಭಯದಿಂದ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಯೊಬ್ಬ ಆತ್ಮಹತ್ಯೆ (Student death) ಮಾಡಿಕೊಂಡಿದ್ದಾನೆ.
ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಕೋಡಿಂಬಾಳ ಗುಂಡಿಮಜಲ್ ಗ್ರಾಮದಲ್ಲಿ ಅದ್ವೈತ್ ಶೆಟ್ಟಿ (15) ಎಂಬ ಬಾಲಕ ಪ್ರಾಣ ಕಳೆದುಕೊಂಡಿದ್ದಾನೆ. ಎಸ್ಸೆಸ್ಸೆಲ್ಸಿ ಪರೀಕ್ಷೆಗೆ ಸಿದ್ಧತೆ ನಡೆಸಿಕೊಳ್ಳುತ್ತಿದ್ದ ಅದ್ವೈತ್ ಬುಧವಾರ ಸಂಜೆಯಿಂದ ನಾಪತ್ತೆಯಾಗಿದ್ದ. ಮನೆಯಿಂದ ಹೊರಗೆ ಹೋದವನು ಕಣ್ಮರೆಯಾಗಿದ್ದ ಆತನಿಗಾಗಿ ಮನೆಯವರು ರಾತ್ರಿ ಇಡೀ ಹುಡುಕಾಟ ನಡೆಸಿದರು. ಬೆಳಗ್ಗೆವರೆಗೂ ಬಾಲಕ ಪತ್ತೆಯಾಗಿರಲಿಲ್ಲ.
ಗುರುವಾರ ಮುಂಜಾನೆಯೂ ಹುಡುಕಾಟ ಮುಂದುವರಿದಾಗ ಕುಮಾರಧಾರಾ ನದಿಯ ನಾಕೂರು ಗಯಾ ಎಂಬಲ್ಲಿ ನದಿಯ ಪಕ್ಕದಲ್ಲಿ ಸ್ಕೂಲ್ ಬ್ಯಾಗ್ ಪತ್ತೆಯಾಯಿತು. ಬಳಿಕ ಪುತ್ತೂರು ಅಗ್ನಿಶಾಮಕ ದಳದಿಂದ ನದಿಯಲ್ಲಿ ಶೋಧ ಕಾರ್ಯ ನಡೆಸಲಾಯಿತು. ಈ ವೇಳೆ ನದಿಯಲ್ಲಿ ಮೃತದೇಹ ಪತ್ತೆಯಾಯಿತು.
ಕಡಬ ಹಾಗೂ ಬೆಳ್ಳಾರೆ ಪೊಲೀಸರು ಆಗಮಿಸಿದ್ದು, ಪೋಷಕರ ಬಳಿ ವಿವರಣೆ ಪಡೆದಿದ್ದಾರೆ. ಮನೆಯವರಿಗೂ ಈ ಸಾವಿನ ಬಗ್ಗೆ ಹೆಚ್ಚಿನ ಮಾಹಿತಿ ಇಲ್ಲ. ಮಾರ್ಚ್ 31ರಂದು ಎಸ್ಸೆಸ್ಸೆಲ್ಸಿ ಪರೀಕ್ಷೆ ಆರಂಭವಾಗಲಿರುವುದರಿಂದ ಅದರ ಭಯದಿಂದಲೇ ಪ್ರಾಣ ಕಳೆದುಕೊಂಡಿರಬಹುದು ಎಂದು ಶಂಕಿಸಲಾಗಿದೆ.
ಇದನ್ನೂ ಓದಿ : Bhoota kola: ಕಡಬದಲ್ಲಿ ದೈವ ನರ್ತನ ಮಾಡುತ್ತಿದ್ದಾಗಲೇ ಕುಸಿದು ಬಿದ್ದು ಮೃತಪಟ್ಟ ದೈವ ನರ್ತಕ
ಕರ್ನಾಟಕ
Fire Accident: ಚಲಿಸುತ್ತಿದ್ದ ಲಾರಿಯಲ್ಲಿ ಕಾಣಿಸಿಕೊಂಡ ಆಕಸ್ಮಿಕ ಬೆಂಕಿ; ಪ್ರಾಣಾಪಾಯದಿಂದ ಚಾಲಕ ಪಾರು
Fire Accident: ಇತ್ತೀಚೆಗೆ ಕಾರು, ಬೈಕ್ ಸೇರಿದಂತೆ ಬಸ್‌ಗಳಲ್ಲಿ ದಿಢೀರ್ ಬೆಂಕಿ ಕಾಣಿಸಿಕೊಳ್ಳುತ್ತಿರುವ ಪ್ರಕರಣಗಳು ವರದಿ ಆಗುತ್ತಿದೆ. ಈಗ ಚಲಿಸುತ್ತಿದ್ದ ಲಾರಿಯಲ್ಲಿ ಬೆಂಕಿ ಕಾಣಿಸಿಕೊಂಡಿದ್ದು ನೋಡನೋಡುತ್ತಿದ್ದ ಸುಟ್ಟು ಕರಕಲಾದ ಘಟನೆ ಕುಶಾಲನಗರ (kushalnagara) ಸಮೀಪ ನಡೆದಿದೆ.
ಕೊಡಗು: ಇಲ್ಲಿನ ಕುಶಾಲನಗರದ ಜಿಎಂಪಿ ಶಾಲೆ (GMP school) ಎದುರಿನ ಬಿಎಂ ರಸ್ತೆಯಲ್ಲಿ ಗುರುವಾರ (ಮಾ.23) ನಸುಕಿನ ಜಾವ ಚಲಿಸುತ್ತಿದ್ದ ಲಾರಿಯಲ್ಲಿ ಆಕಸ್ಮಿಕ ಬೆಂಕಿ (Fire Accident) ಕಾಣಿಸಿಕೊಂಡಿದ್ದು, ಲಾರಿಯು ಸುಟ್ಟು ಕರಕಲಾಗಿದೆ.
ಕೊಯಮತ್ತೂರಿನಿಂದ ಮಂಗಳೂರಿಗೆ ಗುಜರಿ ಸಾಗಿಸುತ್ತಿದ್ದ ಲಾರಿ (Lorry) ಇದಾಗಿದ್ದು, ಬೆಂಕಿ ಕಾಣಿಸಿಕೊಳ್ಳುತ್ತಿದ್ದಂತೆ ಲಾರಿ ಚಾಲಕ ಹೊರಗೆ ಬಂದಿದ್ದಾರೆ. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಘಟನೆ ಬಗ್ಗೆ ತಿಳಿಯುತ್ತಿದ್ದಂತೆ ಎರಡು ಅಗ್ನಿಶಾಮಕ ತಂಡದಿಂದ ಬೆಂಕಿ ನಂದಿಸುವಲ್ಲಿ ಯಶಸ್ವಿಯಾದರು. ಕುಶಾಲನಗರ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಪ್ರಕರಣ ದಾಖಲಾಗಿದೆ.
ಮೂರೇ ತಿಂಗಳಲ್ಲಿ ಬೆಂಕಿಗಾಹುತಿಯಾದ ಹತ್ತಾರು ವಾಹನಗಳು
ಜನವರಿ 2, ಚಾಮರಾಜನಗರದ ಗುಂಡ್ಲುಪೇಟೆ
ಬಂಡೀಪುರ, ಗೋಪಾಲಸ್ವಾಮಿ ಬೆಟ್ಟಕ್ಕೆ ತೆರಳಿ ವಾಪಸಾಗುತ್ತಿದ್ದ ವೇಳೆ ಗುಂಡ್ಲುಪೇಟೆ ತಾಲೂಕಿನ ಹೊನ್ನೇಗೌಡನಹಳ್ಳಿ ಗೋಪಾಲಪುರ ರಸ್ತೆಯಲ್ಲಿ ಕಾರೊಂದು ಧಗಧಗನೆ (Car Fire) ಹೊತ್ತಿ ಉರಿದಿತ್ತು. ಹೊಸ ವರ್ಷಾಚರಣೆಗಾಗಿ ಕೇರಳದಿಂದ ಪ್ರವಾಸಿಗರು ಕಾರಿನಲ್ಲಿ ಬಂದಿದ್ದರು. ಈ ವೇಳೆ ಬೆಂಕಿ ಕಾಣಿಸಿಕೊಂಡಿದ್ದು ಕಾರಿನಲ್ಲಿದ್ದ ಏಳು ಜನ ಓಡಿ ಹೋಗಿದ್ದಾರೆ. ಅದೃಷ್ಟವಶಾತ್ ಪ್ರಾಣಾಪಾಯದಿಂದ ಎಲ್ಲರೂ ಪಾರಾಗಿದ್ದರು. ರಸ್ತೆಯಲ್ಲಿ ಹರಡಿದ್ದ ಹುರುಳಿ ಸೊಪ್ಪು ಕಾರಿನಡಿ ಸಿಲುಕಿ ಎಂಜಿನ್‌ಗೆ ತಗುಲಿದ ಪರಿಣಾಮ ಬೆಂಕಿ ಹೊತ್ತಿಕೊಂಡಿದೆ ಎನ್ನಲಾಗಿತ್ತು.
ಜನವರಿ 5, ಚಿಕ್ಕೋಡಿಯಲ್ಲಿ ಹೊತ್ತಿ ಉರಿದ ಬಸ್
ಬೆಳಗಾವಿ ಜಿಲ್ಲೆ ಚಿಕ್ಕೋಡಿಯ ಹುಕ್ಕೇರಿ ತಾಲೂಕಿನ ಉಳ್ಳಾಗಡ್ಡಿ ಖಾನಾಪುರದ ಬಳಿ ಎನ್‌ಎಚ್ 4ರಲ್ಲಿ ಚಲಿಸುತ್ತಿದ್ದ ಬಸ್‌ನಲ್ಲಿ ಆಕಸ್ಮಿಕವಾಗಿ ಬೆಂಕಿ (Fire Accident) ಕಾಣಿಸಿಕೊಂಡ ಘಟನೆ ಜನವರಿ 5ರಂದು ನಡೆದಿತ್ತು. ನೋಡ ನೋಡುತ್ತಿದ್ದಂತೆ ರಸ್ತೆ ಮಧ್ಯದಲ್ಲಿಯೇ ಬಸ್ ಹೊತ್ತಿ ಉರಿದಿತ್ತು. ಸಂಕೇಶ್ವರದಿಂದ ಬೆಳಗಾವಿಗೆ ಹೊರಟಿದ್ದ ಸರ್ಕಾರಿ ಬಸ್‌ನಲ್ಲಿ ಬೆಂಕಿ ಕಾಣಿಸುತ್ತಿದ್ದಂತೆ ಚಾಲಕ ತನ್ನ ಸಮಯ ಪ್ರಜ್ಞೆ ಮೆರೆದಿದ್ದರು, ಬಸ್ ನಿಲ್ಲಿಸಿ ಪ್ರಯಾಣಿಕರನ್ನು ಕೆಳಗಿಳಿಸಿದ್ದರು. ಇದರಿಂದಾಗಿ ಎಲ್ಲರೂ ಪ್ರಾಣಾಪಾಯದಿಂದ ಪಾರಾಗಿದ್ದರು.
ಜನವರಿ 29, ನಂದಿ ಬೆಟ್ಟ
ನಂದಿ ಬೆಟ್ಟಕ್ಕೆ ವೀಕೆಂಡ್ ಟ್ರಿಪ್‌ಗೆ ಬಂದಿದ್ದ ಪ್ರವಾಸಿಗರೊಬ್ಬರ ಕಾರಿನ ಎಂಜಿನ್‌ನಲ್ಲಿ ದಿಢೀರ್ ಬೆಂಕಿ ಕಾಣಿಸಿಕೊಂಡಿದ್ದು, ನೋಡನೋಡುತ್ತಲೇ ಸುಟ್ಟು (Fire Accident) ಕರಕಲಾಗಿತ್ತು. ಬೆಟ್ಟ ಹತ್ತುವಾಗ ಎಂಜಿನ್‌ನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಕಾರಿನಿಂದ ಹೊಗೆ ಬರುತ್ತಿದ್ದರೂ ಬೆಟ್ಟ ಹತ್ತಿಸಲು ಕಾರು ಚಾಲಕ ಮುಂದಾಗಿದ್ದರು. ಈ ವೇಳೆ ಬೈಕ್ ಸವಾರರೊಬ್ಬರು ಬೆಂಕಿ ಕಾಣಿಸಿಕೊಂಡಿದೆ ಎಂದು ಹೇಳಿದ್ದು, ತಕ್ಷಣ ಎಚ್ಚೆತ್ತುಕೊಂಡ ಕಾರಿನಲ್ಲಿದ್ದವರು ಜಿಗಿದು ಪ್ರಾಣಾಪಾಯದಿಂದ ಪಾರಾಗಿದ್ದರು.
ಜನವರಿ 30, ಭದ್ರಾವತಿ ಬೈಪಾಸ್ ಬಳಿ ಕಾರು ಭಸ್ಮ
ಶಿವಮೊಗ್ಗದ ಭದ್ರಾವತಿಯ ಬೈಪಾಸ್ ರಸ್ತೆಯಲ್ಲಿ ಕಾರೊಂದು ನಡುರಸ್ತೆಯಲ್ಲೇ ಹೊತ್ತಿ ಉರಿದಿತ್ತು. (Car burnt). ಉಜ್ಜನೀಪುರದ ಹೊಳೆ ಬ್ರಿಡ್ಜ್ ಸಮೀಪ ರಸ್ತೆಯಲ್ಲಿ ಘಟನೆ ನಡೆದಿತ್ತು. ಭದ್ರಾವತಿಯ ಓಲ್ಡ್ ಟೌನ್ ನಿವಾಸಿಯಾಗಿರುವ ಶ್ರೀಕಾಂತ್ ಅವರ ಕಾರು ಇದಾಗಿದ್ದು, ಕಾರು ಚಲಾಯಿಸುವಾಗ ಮುಂಭಾಗದಲ್ಲಿ ಏಕಾಏಕಿ ಹೊಗೆ ಕಾಣಿಸಿಕೊಂಡಿತ್ತು. ಶ್ರೀಕಾಂತ್ ಅವರು ಹೊಗೆಯನ್ನು ಕಂಡ ಕೂಡಲೇ ತಕ್ಷಣವೇ ಕಾರಿನಿಂದ ಇಳಿದು, ಅಗ್ನಿಶಾಮಕದಳಕ್ಕೆ ಮಾಹಿತಿ ನೀಡಿದ್ದರು.
ಫೆಬ್ರವರಿ 12, ಸಾಗರದದಲ್ಲೂ ಹೊತ್ತಿ ಉರಿದಿದ್ದ ಕಾರು
ಶಿವಮೊಗ್ಗ ಜಿಲ್ಲೆಯ ಸಾಗರ ನಗರದ ಎಲ್ಐಸಿ ಕಚೇರಿ ಮುಂಭಾಗ ಭಾನುವಾರ ಮಧ್ಯಾಹ್ನ ಈ ಅಗ್ನಿಅವಘಡ ಸಂಭವಿಸಿದ್ದು, ಕಾರಿನಲ್ಲಿದ್ದ ಚಾಲಕ ಪಾರಾಗಿದ್ದರು. ಸೊರಬ ತಾಲೂಕಿನ ಉಳವಿಯ ವಿಜಯ್ ಎಂಬುವರಿಗೆ ಸೇರಿದ ಕಾರು ಬಿ.ಎಚ್.ರಸ್ತೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಾಗುತ್ತಿದ್ದಾಗ ಬೆಂಕಿ ಕಾಣಸಿಕೊಂಡಿತ್ತು. ತಕ್ಷಣವೇ ಎಚ್ಚೆತ್ತುಕೊಂಡ ಚಾಲಕ ವಿಜಯ್ ಕಾರಿನಿಂದ ಕೆಳಗೆ ಇಳಿದಿದ್ದರು. ಕಾರಿನ ಇಂಜಿನ್, ಬ್ಯಾಟರಿ ಹಾಗೂ ಕಾರಿನ ಮುಂಭಾಗ ಸುಟ್ಟು ಕರಕಲಾಗಿದೆ. ಸ್ಥಳೀಯರೇ ಮುಂದೆ ನಿಂತು ನೀರು ಹಾಯಿಸಿ ಬೆಂಕಿಯನ್ನು ನಿಯಂತ್ರಿಸಿದ್ದರು.
ಫೆಬ್ರವರಿ 12, ಬೆಂಗಳೂರು ಪ್ಯಾಲೇಸ್ ಗ್ರೌಂಡ್ ಐಷಾರಾಮಿ ಕಾರುಗಳಿಗೆ ಬೆಂಕಿ
ಬೆಂಗಳೂರಿನ ಪ್ಯಾಲೇಸ್ ಗ್ರೌಂಡ್ ಬಳಿ ಫೆಬ್ರವರಿ 12ರಂದು ಕಾರುಗಳು ಹೊತ್ತಿ ಉರಿದಿತ್ತು. ಐಷಾರಾಮಿ ಕಾರು ಸೇರಿ ಎರಡರಿಂದ ಮೂರು ಕಾರು ಸುಟ್ಟು ಕರಕಲಾಗಿದ್ದು, ಕಸಕ್ಕೆ ಬೆಂಕಿ ತಗುಲಿರಬಹುದು ಅಥವಾ ಕಾರಿನಲ್ಲಿ ಬ್ಯಾಟರಿ ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ಹತ್ತಿರುವ ಸಾಧ್ಯತೆ ಇದೆ ಎಂದು ಶಂಕಿಸಲಾಗಿತ್ತು.
ಮಾರ್ಚ್ 11, ಹೊನ್ನಾವರ-ಸಾಗರ ರಾಜ್ಯ ಹೆದ್ದಾರಿ 206
ಹೊನ್ನಾವರ-ಸಾಗರ ರಾಜ್ಯ ಹೆದ್ದಾರಿ 206ರ ಮೂರುಕಟ್ಟೆ ಬಳಿ ಚಲಿಸುತ್ತಿದ್ದಾಗಲೇ ಆಕಸ್ಮಿಕ ಬೆಂಕಿ ಕಾಣಿಸಿಕೊಂಡು ಕಾರು ಸುಟ್ಟು ಕರಕಲಾದ ಘಟನೆ ನಡೆದಿತ್ತು. ಹೊನ್ನಾವರದಿಂದ ಚಿಕ್ಕೊಳ್ಳಿಗೆ ತೆರಳುತ್ತಿದ್ದ ವೇಳೆ ಏಕಾಏಕಿ ಕಾರಿನಲ್ಲಿ ಕಾಣಿಸಿಕೊಂಡಿತ್ತು. ತಕ್ಷಣವೇ ಕಾರನ್ನು ಹೆದ್ದಾರಿ ಪಕ್ಕ ನಿಲ್ಲಿಸಿ ಜಗದೀಶ ಹಾಗೂ ಸ್ನೇಹಿತರು ಹೊರಬಂದಿದ್ದಾರೆ. ನಂತರ ನೋಡನೋಡುತ್ತಿದ್ದಂತೆ ಬೆಂಕಿ ಸಂಪೂರ್ಣ ವ್ಯಾಪಿಸಿ ಕಾರು ಸುಟ್ಟು ಕರಕಲಾಗಿದೆ.
ಇದನ್ನೂ ಓದಿ: Sri Charukeerthi Bhattaraka Swamiji: ಶ್ರವಣಬೆಳಗೊಳದ ಶ್ರೀ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ ವಿಧಿವಶ
ಮಾರ್ಚ್ 14, ಬೆಂಗಳೂರು ಜೆ.ಸಿ ರಸ್ತೆ
ಬೆಂಗಳೂರಿನ ಜೆ.ಸಿ ರಸ್ತೆಯಲ್ಲಿ ಚಲಿಸುತ್ತಿದ್ದ ಕಾರೊಂದು ಬೆಂಕಿಗೆ (Fire Accident) ಆಹುತಿಯಾಗಿತ್ತು. ಕಾರಿನ ಎಂಜಿನ್‌ನಲ್ಲಿ ಏಕಾಏಕಿ ಬೆಂಕಿ ಕಾಣಿಕೊಂಡು ಕ್ಷಣಾರ್ಧದಲ್ಲಿಯೇ ಬೆಂಕಿಯ ಕೆನ್ನಾಲಿಗೆಗೆ ಸುಟ್ಟು ಕರಕಲಾಗಿತ್ತು. ಸಣ್ಣ ಹೊಗೆ ಕಾಣಿಸಿಕೊಳ್ಳುತ್ತಿದ್ದಂತೆ ಕಾರಿನಲ್ಲಿದ್ದವರು ಇಳಿದು ಓಡಿ ಪಾರಾಗಿದ್ದರು.
ರಾಜ್ಯದ ಪ್ರಮುಖ ಸುದ್ದಿಗಾಗಿ ಈ ಲಿಂಕ್ ಕ್ಲಿಕ್ ಮಾಡಿ
ಕರ್ನಾಟಕ
Harrassment : ಕಾಫಿ ತೋಟದೊಳಗೆ ಎಳೆದೊಯ್ದು ಯುವತಿಯ ಅತ್ಯಾಚಾರ ಯತ್ನ; ಒಬ್ಬ ಆರೋಪಿ ಸೆರೆ, ಇನ್ನಿಬ್ಬರು ಪರಾರಿ
ಮೂವರು ದುಷ್ಕರ್ಮಿಗಳು ಯುವತಿಯೊಬ್ಬಳ ಮೇಲೆ ಅತ್ಯಾಚಾರ (Harrassment) ಮಾಡಲೆಂದು ಎಳೆದೊಯ್ದಾಗ ಸ್ಥಳೀಯರು ಆಕೆಯನ್ನು ರಕ್ಷಿಸಿದ್ದಾರೆ. ಮೂವರಲ್ಲಿ ಒಬ್ಬನನ್ನು ಪೊಲೀಸರ ವಶಕ್ಕೆ ಒಪ್ಪಿಸಲಾಗಿದೆ.
ಮಡಿಕೇರಿ: ದುಷ್ಕರ್ಮಿಗಳ ತಂಡವೊಂದು ಯುವತಿಯೊಬ್ಬಳನ್ನು ಕಾಫಿ ತೋಟಕ್ಕೆ ಎಳೆದೊಯ್ದು ಅತ್ಯಾಚಾರಕ್ಕೆ (Harrassment) ಯತ್ನಿಸಿದ ಘಟನೆ ಮಂಗಳವಾರ ರಾತ್ರಿ ನಡೆದಿದೆ. ಆದರೆ, ಯುವತಿ ಕಿರುಚಿಕೊಂಡ ಹಿನ್ನೆಲೆಯಲ್ಲಿ ಆರೋಪಿಗಳು ಆಕೆಯನ್ನು ಬಿಟ್ಟು ಓಡಿದ್ದಾರೆ. ಆಗ ಒಬ್ಬನನ್ನು ಸ್ಥಳೀಯರು ಹಿಡಿದಿದ್ದಾರೆ, ಇತರ ಇಬ್ಬರು ತಪ್ಪಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ.
ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲೂಕಿನ ತಾಕೇರಿ ಸಮೀಪದ ಬಿಳಿಗೇರಿಯಲ್ಲಿ 19 ವರ್ಷ ವಯಸ್ಸಿನ ದಲಿತ ವಿವಾಹಿತ ಯುವತಿಯ ಮೇಲೆ ದೌರ್ಜನ್ಯ ನಡೆದಿದೆ. ರಾತ್ರಿ 9.30ರ ಹೊತ್ತಿಗೆ ಆಕೆ ನಡೆದುಕೊಂಡು ಹೋಗುತ್ತಿದ್ದಾಗ ಮೂವರು ದುಷ್ಟರು ಆಕೆಯನ್ನು ಬಲಾತ್ಕಾರವಾಗಿ ಕಾಫಿ ತೋಟದೊಳಗೆ ಎಳೆದೊಯ್ಯಲು ಪ್ರಯತ್ನಿಸಿದರು. ಯುವತಿ ಜೋರಾಗಿ ಕಿರುಚಿಕೊಂಡಾಗ ಯುವತಿಯ ಸಂಬಂಧಿಕರು ಗಮನಿಸಿದರು. ಅವರು ಕೂಡಲೇ ಸ್ಥಳೀಯರು ಹಾಗೂ ಹಿಂದು ಜಾಗರಣ ವೇದಿಕೆಯ ಪ್ರಮುಖರಿಗೆ ಕರೆ ಮಾಡಿ ತಿಳಿಸಿದರು.
ಕ್ಷಣಾರ್ಧದಲ್ಲಿ ಘಟನಾ ಸ್ಥಳಕ್ಕಾಗಮಿಸಿದ ಸ್ಥಳೀಯರು ಹಾಗೂ ಹಿಂದು ಜಾಗರಣ ವೇದಿಕೆಯ ಕಾರ್ಯಕರ್ತರು ಓರ್ವ ಆರೋಪಿಯಾದ ನಂದಿ ಮೊಟ್ಟೆಯ ರಾಜ ಹಾಗೂ ದುಷ್ಕೃತ್ಯಕ್ಕೆ ಬಳಸಿದ ಎರಡು ಆಟೋಗಳನ್ನು ವಶಕ್ಕೆ ಪಡೆದರು.
ದುಷ್ಕೃತ್ಯದ ನಡೆಸಿದ ಪ್ರಮುಖ ಆರೋಪಿಗಳಾದ ಹಟ್ಟಿಹೊಳೆಯ ನೌಶದ್ ಹಾಗೂ ಇಗ್ಗೋಡ್ಲು ಆಶ್ರಯ ಕಾಲೋನಿಯ ನಿವಾಸಿ ಹಾಗೂ ಮಾದಾಪುರದಲ್ಲಿ ಮೊಬೈಲ್ ಅಂಗಡಿ ಇಟ್ಟುಕೊಂಡಿರುವ ಫಾರೂಕ್ ಕತ್ತಲಲ್ಲಿ ಓಡಿ ಪರಾರಿಯಾಗಿದ್ದಾರೆ ಎನ್ನಲಾಗಿದೆ. ದುಷ್ಕೃತ್ಯಕ್ಕೆ ಬಳಸಿರುವ ಎರಡು ಆಟೋ ರಿಕ್ಷಾಗಳು ಇಗ್ಗೋಡ್ಲು ಆಶ್ರಯ ಕಾಲೋನಿಯ ನೌಶದ್ ಹಾಗೂ ರಶೀದ್ ಎಂಬವರಿಗೆ ಸೇರಿದ್ದೆಂದು ತಿಳಿದುಬಂದಿದೆ.
ಹಿಂದು ಜಾಗರಣ ವೇದಿಕೆಯ ಕಾರ್ಯಕರ್ತರು ಒಬ್ಬ ಆರೋಪಿ ಹಾಗೂ ಎರಡು ಆಟೋ ರಿಕ್ಷಾಗಳನ್ನು ಸೋಮವಾರಪೇಟೆ ಪೋಲೀಸರಿಗೊಪ್ಪಿಸಿದರು. ಆರೋಪಿಗಳು ಹೊರದೇಶಗಳಿಗೆ ಪಲಾಯನ ಮಾಡುವ ಸಾಧ್ಯತೆಯಿರುವುದರಿಂದ ಅವರನ್ನು ಕೂಡಲೇ ಬಂಧಿಸಿ ಕಠಿಣ ಕಾನೂನು ಕ್ರಮಕೈಗೊಳ್ಳುವಂತೆ ಆಗ್ರಹಿಸಿದರು.
ತಪ್ಪಿದ್ದಲ್ಲಿ ಅನ್ಯಾಯಕ್ಕೊಳಗಾದ ಯುವತಿ ಹಾಗೂ ಅವರ ಕುಟುಂಬ ವರ್ಗಕ್ಕೆ ನ್ಯಾಯ ದೊರಕಿಸಲು ಸಂಘಟನೆಯ ನೇತೃತ್ವದಲ್ಲಿ ಉಗ್ರ ಹೋರಾಟ ನಡೆಸುವುದಾಗಿ ಎಚ್ಚರಿಕೆ ನೀಡಿದ್ದಾರೆ. ಸೋಮವಾರಪೇಟೆ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಆರೊಪಿಗಳಿಗಾಗಿ ಪೊಲೀಸರು ಬಲೆ ಬಿಸಿದ್ದಾರೆ.
ಇದನ್ನೂ ಓದಿ : Harrassment : ಹಾಸನದ ವಸತಿ ಶಾಲೆಯಲ್ಲಿ ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ; ಪ್ರಿನ್ಸಿಪಾಲ್ ಸೇರಿ ಐವರ ಸೆರೆ
-
ಕರ್ನಾಟಕ15 hours ago
High Court order: ತುಮಕೂರು ಗ್ರಾಮಾಂತರ ಜೆಡಿಸ್ ಶಾಸಕ ಗೌರಿಶಂಕರ್ ಶಾಸಕತ್ವದಿಂದ ಅನರ್ಹ: ಕೋರ್ಟ್ ಆದೇಶ
-
ಕ್ರಿಕೆಟ್16 hours ago
IND VS PAK: ಏಕದಿನ ವಿಶ್ವಕಪ್; ತಟಸ್ಥ ತಾಣದಲ್ಲಿ ನಡೆಯಲಿದೆ ಪಾಕಿಸ್ತಾನದ ಪಂದ್ಯಗಳು!
-
ಕರ್ನಾಟಕ12 hours ago
Karnataka BJP: ಸಿದ್ದರಾಮಯ್ಯ ವಿರುದ್ಧ ವಿಜಯೇಂದ್ರ ಸ್ಪರ್ಧೆಗೆ ಬಿಜೆಪಿ ಚಿಂತನೆ: ಖಚಿತಪಡಿಸಿದ ಬಿ.ಎಸ್. ಯಡಿಯೂರಪ್ಪ
-
ಕ್ರಿಕೆಟ್13 hours ago
ICC World Cup 2023: ಭಾರತದಲ್ಲೇ ನಡೆಯಲಿದೆ ವಿಶ್ವ ಕಪ್ ಪಂದ್ಯ; ಐಸಿಸಿ ಸ್ಪಷ್ಟನೆ
-
ಕರ್ನಾಟಕ13 hours ago
Anjanadri Hill: 101 ಕೆಜಿ ಜೋಳದ ಚೀಲ ಹೊತ್ತು ಅಂಜನಾದ್ರಿ ಬೆಟ್ಟ ಹತ್ತಿದ ಹನುಮನ ಭಕ್ತ
-
ಕ್ರಿಕೆಟ್10 hours ago
IPL 2023: ಗುಜರಾತ್ vs ಚೆನ್ನೈ ಪಂದ್ಯದ ಪಿಚ್ ರಿಪೋರ್ಟ್, ಸಂಭಾವ್ಯ ತಂಡ
-
ಕರ್ನಾಟಕ14 hours ago
Karnataka BJP: ಮುಸ್ಲಿಂ ಬಾಂಧವರಿಗೆ ಬಿಜೆಪಿ ಅನ್ಯಾಯ ಮಾಡಿಲ್ಲ: ಮನವೊಲಿಸುತ್ತೇವೆ ಎಂದ ಬಿ.ಎಸ್. ಯಡಿಯೂರಪ್ಪ
-
ದೇಶ14 hours ago
ಸ್ಮೃತಿ ಇರಾನಿಯನ್ನು ಡಾರ್ಲಿಂಗ್ ಎಂದು ಬಿಜೆಪಿ ನಾಯಕ ಟ್ವೀಟ್, ಮಾನಹಾನಿ ನೋಟಿಸ್ ಕಳುಹಿಸಿದ ಕೈ ನಾಯಕ!