Site icon Vistara News

Drowned in River : ಕಾವೇರಿ ನದಿಗಿಳಿದ ವಿದ್ಯಾರ್ಥಿ ಈಜಲು ಬಾರದೆ ನೀರುಪಾಲು

Student falls into Cauvery river unable to swim

ಕೊಡಗು: ಸ್ನೇಹಿತರೊಂದಿಗೆ ಈಜಲು ತೆರಳಿದ್ದ ಬಾಲಕ (Drowned in River) ನೀರುಪಾಲಾಗಿದ್ದಾನೆ. ವಿದ್ಯಾರ್ಥಿ ಹೃತ್ವಿಕ್ (16) ಮೃತ ದುರ್ದೈವಿ. ಕೊಡಗು ಜಿಲ್ಲೆಯ ಕುಶಾಲನಗರದ ಕಣಿವೆ ಗ್ರಾಮದ ಕಾವೇರಿ ನದಿಯಲ್ಲಿ ಘಟನೆ ನಡೆದಿದೆ.

ಮೈಸೂರು ಮೂಲದ ಹೃತ್ವಿಕ್ ನಿನ್ನೆ ಭಾನುವಾರ ಕುಶಾಲನಗರದ ಸ್ನೇಹಿತನ ಮನೆಗೆ ಬಂದಿದ್ದ. ಸ್ನೇಹಿತರ ಜತೆ ಕಾವೇರಿ ನದಿಯಲ್ಲಿ ಈಜಲು ತೆರಳಿದ್ದ. ನೀರಿನ ಆಳಕ್ಕೆ ಜಿಗಿದ ಹೃತ್ವಿಕ್‌ ಈಜು ಬಾರದೆ ನೀರಿನಲ್ಲಿ ಮುಳುಗಿದ್ದಾನೆ. ಘಟನೆ ಸಂಭವಿಸಿದಾಗ ಹೃತ್ವಿಕ್‌ನನ್ನು ರಕ್ಷಿಸಲು ಸಾಧ್ಯವಾಗಿಲ್ಲ.

ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ ಭೇಟಿ ನೀಡಿ, ಮೃತದೇಹವನ್ನು ಹೊರತೆಗೆದಿದ್ದಾರೆ. ಕೊಡಗು ಜಿಲ್ಲೆ ಕುಶಾಲನಗರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಇದನ್ನೂ ಓದಿ: Road Accident : ಬೈಕ್‌-ಕಾರು ಡಿಕ್ಕಿ; ಹಿಂಬದಿ ಕುಳಿತಿದ್ದ ಮಹಿಳೆ ಸಾವು

ಪಣಂಬೂರು ಬೀಚ್‌ನಲ್ಲಿ ಸ್ನಾನಕ್ಕೆ ತೆರಳಿದ್ದ ಬಾಲಕ ನಾಪತ್ತೆ

ಮಂಗಳೂರು: ನಗರದ ಪಣಂಬೂರು ಬೀಚ್‌ನಲ್ಲಿ ಸ್ನಾನಕ್ಕೆ ತೆರಳಿದ್ದ ಬಾಲಕ ಸಮುದ್ರದಲ್ಲಿ ಮುಳುಗಿ ನಾಪತ್ತೆಯಾಗಿರುವ ಘಟನೆ ಭಾನುವಾರ ನಡೆದಿದೆ. ಬಾಗಲಕೋಟೆ ಮೂಲದ, ಪ್ರಸ್ತುತ ಮೀನಕಳಿಯಲ್ಲಿ (Mangalore News) ವಾಸವಾಗಿರುವ ತುಕರಾಮ (13) ನಾಪತ್ತೆಯಾದ ಬಾಲಕ.

ಸ್ಥಳೀಯ ಶಾಲೆಯಲ್ಲಿ ವ್ಯಾಸಂಗ ಮಾಡುತ್ತಿದ್ದ ತುಕರಾಮ, ಸಂಜೆ ಗೆಳೆಯರೊಡನೆ ಈಜಾಡಲು ತೆರಳಿದ್ದ ಎನ್ನಲಾಗಿದೆ. ನೀರಿನಲ್ಲಿ ಆಟವಾಡುತ್ತಿದ್ದ ವೇಳೆ ಅಲೆಗಳ ರಭಸಕ್ಕೆ ಸಿಲುಕಿ ಬಾಲಕ ನಾಪತ್ತೆಯಾಗಿದ್ದಾನೆ. ಜೀವರಕ್ಷಕ ದಳ, ಸ್ಥಳೀಯರಿಂದ ಬಾಲಕನಿಗಾಗಿ ಶೋಧ ಕಾರ್ಯ ನಡೆಯುತ್ತಿದೆ. ಪಣಂಬೂರು ಪೋಲಿಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ಇದನ್ನೂ ಓದಿ: Namma Metro : ಬಟ್ಟೆ ಕ್ಲೀನ್‌ ಇಲ್ಲ ಎಂದು ರೈತನಿಗೆ ಪ್ರವೇಶ ನಿರಾಕರಿಸಿದ ಮೆಟ್ರೋ; ನೆಟ್ಟಿಗರ ಆಕ್ರೋಶ

ಚಾರಣಕ್ಕೆ ಹೋಗಿ ನಾಪತ್ತೆಯಾಗಿದ್ದ ಯುವಕರು ಪತ್ತೆ

ಮಂಗಳೂರು: ಚಾರಣಕ್ಕೆ ಹೋದ ಇಬ್ಬರು ಯುವಕರು ನಾಪತ್ತೆಯಾಗಿರುವ ಘಟನೆ ಚಾರ್ಮಾಡಿ ಅರಣ್ಯ ಪ್ರದೇಶದಲ್ಲಿ ನಡೆದಿತ್ತು. ಬೆಂಗಳೂರು ಮೂಲದ 10 ಯುವಕರ ತಂಡ ಚಾರಣಕ್ಕೆ ತೆರಳಿತ್ತು. ಸಂಜೆ ದುರ್ಗದ ಹಳ್ಳಿಯಿಂದ ಚಾರಣಕ್ಕೆ ತೆರಳಿದ್ದರು. ಈ ವೇಳೆ ಇಬ್ಬರು ನಾಪತ್ತೆಯಾಗಿದ್ದು, ಅರಣ್ಯ ಅಧಿಕಾರಿಗಳು ಹುಡುಕಾಟ ಆರಂಭಿಸಿದ್ದರು.

ಮೂಡಿಗೆರೆಯ ಬಲ್ಲಾಳರಾಯನ ದುರ್ಗದಿಂದ ಬೆಳ್ತಂಗಡಿ ಭಂಡಾಜೆ ಫಾಲ್ಸ್‌ಗೆ ಚಾರಣಕ್ಕೆ ತೆರಳಿದ್ದರು. ಧನುಷ್ ಎಂಬಾತ ಸುಮಾರು 8ಕಿ.ಮೀ ಕಾಡಿನ ಮಧ್ಯೆ ಹೋದಾಗ ಮೊಬೈಲ್ ಸ್ವಿಚ್ ಆಫ್ ಆಗಿತ್ತು. ರಾತ್ರಿ 3 ಗಂಟೆವರೆಗೆ ಕಾಡಿನ ಮಧ್ಯೆ ಪೊಲೀಸರು ಹಾಗೂ ಸ್ಥಳೀಯರ ಸಹಾಯದಿಂದ ಕಾರ್ಯಚರಣೆ ನಡೆಸಿ, ಕಾಡಿನ ಮಧ್ಯ ಭಾಗ 700 ಅಡಿ ಆಳದಲ್ಲಿ ಸಿಲುಕಿದ್ದ ಧನುಷ್‌ನನ್ನು ಹುಡುಕಿ ರಕ್ಷಣೆ ಮಾಡಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Exit mobile version