Site icon Vistara News

Elephant Attack : ಕೊಡಗಿನಲ್ಲಿ ಆನೆ ದಾಳಿಗೆ ಮತ್ತೊಂದು ಬಲಿ, ಕಾಫಿ ತೋಟದಲ್ಲಿ ಮಹಿಳೆ ದಾರುಣ ಸಾವು

Elephant Attack kodagu news

ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ (Kodagu News) ಆನೆ ದಾಳಿಗೆ (Elephant Attack) ಮತ್ತೊಂದು ಸಾವು ಸಂಭವಿಸಿದೆ. ಜಿಲ್ಲೆ ಹಲವು ಭಾಗಗಳಲ್ಲಿ ನಿರಂತರವಾಗಿ ನಡೆಯುತ್ತಿರುವ ಆನೆ ದಾಳಿಯಿಂದ ಜನರು ಕಂಗಾಲಾಗಿರುವ ನಡುವೆಯೇ ಕಾಫಿ ತೋಟದಲ್ಲಿ (Coffee Plantation) ಕೆಲಸ ಮಾಡುತ್ತಿದ್ದ ಮಹಿಳೆಯೊಬ್ಬರನ್ನು ಆನೆ ಬಲಿ ಪಡೆದಿದೆ.

ಕೊಡಗು ಜಿಲ್ಲೆ ವಿರಾಜಪೇಟೆ ತಾಲೂಕಿನ ಚೆನ್ನಂಗಿ ಬಳಿಯ ಅಬ್ಬೂರು ಗ್ರಾಮದ ಬೀಚ್ ಲ್ಯಾಂಡ್ ಕಾಫಿ ತೋಟಕ್ಕೆ ನುಗ್ಗಿದ ಆನೆ ಅಸ್ಸಾಂ ಮೂಲದ ಮಹಿಳೆ (Woman from Assam dead) ಅಜಬಾನು(37) ಎಂಬವರ ಮೇಲೆ ದಾಳಿ ಮಾಡಿದೆ. ಅಜಬಾನು ಅವರು ಇತರ ಕಾರ್ಮಿಕರೊಂದಿಗೆ ಕೆಲಸ ನಿರ್ವಹಿಸುತ್ತಿದ್ದರು. ಆಗ ಆನೆ ದಾಳಿ ಮಾಡಿದೆ. ದಾಳಿ ಮಾಡಿದಾಗ ಅಜಬಾನು ಆನೆಯ ದಾಳಿಗೆ ಸಿಲುಕಿದ್ದಾರೆ. ದಾಳಿ ಮಾಡಿದ ಆನೆ ಬಳಿಕ ಅಲ್ಲಿಂದ ಹೋಗಿದೆ.

ಕೂಡಲೇ ಗಾಯಾಳು ಮಹಿಳೆಯನ್ನು ಪಾಲಿಬೆಟ್ಟ ಆಸ್ಪತ್ರೆಗೆ ದಾಖಲು ಮಾಡಲಾಯಿತಾದರೂ ಅವರು ಅಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.

ಮಹಿಳೆ ಸಾವನ್ನಪ್ಪುತ್ತಿದ್ದಂತೆಯೇ ಅಲ್ಲಿನ ಜನರು ಆಕ್ರೋಶಿತರಾಗಿದ್ದಾರೆ. ಆನೆಗಳು ನಿರಂತರ ದಾಳಿ ನಡೆಸಿ ಪ್ರಾಣಗಳನ್ನೇ ಕಿತ್ತುಕೊಳ್ಳುತ್ತಿದ್ದರೂ ಅರಣ್ಯ ಇಲಾಖೆ ಯಾವುದೇ ಕ್ರಮಗಳನ್ನು ಕೈಗೊಳ್ಳುತ್ತಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಪಾಲಿಬೆಟ್ಟ ಆಸ್ಪತ್ರೆ ಮುಂದೆ ಜಮಾಯಿಸಿರುವ ಸ್ಥಳೀಯರು ಅರಣ್ಯ ಇಲಾಖೆ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಸ್ಥಳಕ್ಕೆ ಪೊಲೀಸರು, ಅರಣ್ಯ ಅಧಿಕಾರಿಗಳು ಭೇಟಿ ನೀಡಿ ಜನರಿಗೆ ಧೈರ್ಯ ತುಂಬಿದ್ದಾರೆ.

ಕಾಡಾನೆ ದಾಳಿಯಿಂದ ಕೊಡಗಿನಲ್ಲಿ ನಿರಂತರ ಸಾವು ನೋವು

ಕೊಡಗು ಜಿಲ್ಲೆ ಮಡಿಕೇರಿ ಸಮೀಪದ ಗಾಳಿಬೀಡು ಗ್ರಾಮದ ನಿಶಾನಿಬೆಟ್ಟದಲ್ಲಿ ಗಾಳಿಬೀಡು ಗ್ರಾಮದ ವರಡ ನಿವಾಸಿ ಅಪ್ಪಚ್ಚ(60) ಅವರ ಶವ (Man dies of Elephant Attack) ಕಳೆದ ಭಾನುವಾರ (ಮಾರ್ಚ್‌ 10) ಪತ್ತೆಯಾಗಿತ್ತು. ಅವರು ಕಾಡಾನೆ ತುಳಿದು ವ್ಯಕ್ತಿ ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗಿದೆ.

ಇದನ್ನೂ ಓದಿ : Elephant Attack: 15 ಲಕ್ಷ ರೂ. ಪರಿಹಾರ ತಿರಸ್ಕರಿಸಿದ ಕೇರಳ ಕಟುಂಬ; ಬಿಜೆಪಿ ವಿರೋಧಿಸಿದ್ದೇ ಕಾರಣ ಎಂದ ಖಂಡ್ರೆ

ಆನೆ ಹಾವಳಿ ನಿಯಂತ್ರಿಸಬೇಕಾದ ಆರ್‌ಆರ್‌ಟಿ ಸದಸ್ಯರೇ ಆನೆ ದಾಳಿಗೆ ಬಲಿ

ಕೊಡಗಿನ ಆನೆಕಾಡು ಅರಣ್ಯ ಪ್ರದೇಶದಲ್ಲಿ ಕಳೆದ ಸೆಪ್ಟೆಂಬರ್‌ 4ರಂದು ಆನೆಗಳ ಹಾವಳಿಯನ್ನು ನಿಯಂತ್ರಿಸುವುದಕ್ಕಾಗಿ ರೂಪಿಸಲಾದ ರ‍್ಯಾಪಿಡ್‌ ರೆಸ್ಪಾನ್ಸ್‌ ಟೀಮ್‌ನ (Rapid Response Team- RRT) ಸದಸ್ಯರೊಬ್ಬರನ್ನೇ ಆನೆ ದಾಳಿ ಮಾಡಿ ಕೊಂದಿತ್ತು. RRT ಸಿಬ್ಬಂದಿಯಾಗಿ ಕಾರ್ಯ ನಿರ್ವಹಿಸುತ್ತಿದ್ದ ಗಿರೀಶ್ (35) ಅವರೇ ದಾಳಿಗೆ ಒಳಗಾಗಿ ಪ್ರಾಣ ಕಳೆದುಕೊಂಡಿದ್ದರು.

ಆಗಸ್ಟ್‌ 27ಕ್ಕೆ ಹಸುವನ್ನು ಹುಡುಕಲು ಹೋದ ರೈತ ಸಾವು

ಕಳೆದ ಆಗಸ್ಟ್‌ 27ರಂದು ಸೋಮವಾಪೇಟೆ ತಾಲ್ಲೂಕಿನ ಅಡಿಯನಾಡೂರು ಗ್ರಾಮದಲ್ಲಿ ಶುಕ್ರವಾರ ಮುಂಜಾನೆ ಆನೆಯೊಂದು 60 ವರ್ಷದ ಕೃಷಿಕ ಈರಪ್ಪ ಎಂಬವರನ್ನು ಆನೆ ಕೊಂದು ಹಾಕಿತ್ತು.

ಅಂದು ಮುಂಜಾನೆ ಈರಪ್ಪ ತಮ್ಮ‌‌ ಮನೆಯ ಹಾಲು ಕರೆಯುವ ಹಸು ಕಾಣುತ್ತಿಲ್ಲ ಅಂತ ಹುಡುಕಿಕೊಂಡು ಹೋಗಿದ್ದರು. ಈ ಸಂದರ್ಭದಲ್ಲಿ ಗೌರಿ ಗದ್ದೆಯ ಸಮೀಪ ಏಕಾಏಕಿ ನುಗ್ಗಿ ಬಂದ ಕಾಡಾನೆ ಈರಪ್ಪ ಮೇಲೆ ದಾಳಿ ನಡೆಸಿದೆ.‌ ಆನೆ ಈರಪ್ಪ ಅವರ ಎದೆಯ ಮೇಲೆಯೇ ನೇರವಾಗಿ ಕಾಲಿಟ್ಟಿದೆ. ದಾಳಿಗೆ ಸಿಲುಕಿದ ಈರಪ್ಪ ಅವರು ಸ್ಥಳದಲ್ಲೇ ಮೃತಪಟ್ಟಿದ್ದರು.

ಆಗಸ್ಟ್‌ 20ರಂದು ವಾಕಿಂಗ್‌ ಮಾಡುತ್ತಿದ್ದ ಮಹಿಳೆ ಮೃತ್ಯು

ಕಳೆದ ಆಗಸ್ಟ್‌ 2೦ರಂದು ವಿರಾಜಪೇಟೆ ತಾಲೂಕಿನ ಬಾಡಗ ಬಾಣಂಗಾಲ ಗ್ರಾಮದಲ್ಲಿ ಮನೆ ಸಮೀಪ ವಾಕಿಂಗ್‌ ಮಾಡುತ್ತಿದ್ದ ಆಯಿಶಾ (63) ಎಂಬವರು ಆನೆ ದಾಳಿಗೆ ಒಳಗಾಗಿ ಸ್ಥಳದಲ್ಲಿಯೇ ಮೃತಪಟ್ಟಿದ್ದರು.

ಅದಕ್ಕಿಂತ ಒಂದು ವಾರದ ಹಿಂದೆ ಕೂಡ ಆನೆ ದಾಳಿಗೆ ಟ್ರಾಕ್ಟರ್ ಚಾಲಕರೊಬ್ಬರು ಮೃತ ಪಟ್ಟಿದ್ದರು. ಕಳೆದ ಒಂದು ತಿಂಗಳಲ್ಲಿ ಮರಗೋಡು, ಸಿದ್ದಾಪುರ ಸಮೀಪದ ಬಾಣಂಗಾಲ ಇದೀಗ ಸೋಮವಾರಪೇಟೆ ಭಾಗದಲ್ಲಿ ಕಾಡಾನೆ ದಾಳಿಯಾಗಿದ್ದು ಕಾಡಾನೆ ದಾಳಿಯಲ್ಲಿ ಮೂರು ಜನ ಮೃತಪಟ್ಟಂತಾಗಿದೆ.

ಕೆಲವು ತಿಂಗಳ ಹಿಂದೆ ಕೊಡಗಿನಲ್ಲಿ ಒಂದೇ ದಿನ ಅಜ್ಜ ಮತ್ತು ಮೊಮ್ಮಗನನ್ನು ಆನೆ ಬಲಿ ಪಡೆದಿತ್ತು.

Exit mobile version