Site icon Vistara News

ಮಡಿಕೇರಿಯಲ್ಲಿ ಅನಧಿಕೃತ ಫೋಟೊ ಗ್ಯಾಲರಿ ತೆರವಿಗೆ ಆಕ್ರೋಶ ವ್ಯಕ್ತಪಡಿಸಿದ ಕಲಾವಿದರ ಕುಟುಂಬ

ಮಡಿಕೇರಿ: ಶುಕ್ರವಾರ ಮಡಿಕೇರಿ ತಹಶೀಲ್ದಾರ್ ಮಹೇಶ್, ನಗರಸಭೆ ಆಯುಕ್ತ ರಾಮದಾಸ್ ನೇತೃತ್ವದಲ್ಲಿ ಅನಧಿಕೃತ ಫೋಟೋ ಗ್ಯಾಲರಿ ತೆರವು ಕಾರ್ಯಚರಣೆ ಮಾಡಲಾಯಿತು. ಬೆಳಿಗ್ಗೆ 6:30ರ ಸುಮಾರಿಗೆ ನೂರಾರು ಪೊಲೀಸರೊಂದಿಗೆ ಅಧಿಕಾರಿಗಳು ಆಗಮಿಸಿದ್ದರು. ಮಡಿಕೇರಿ ನಗರದ ಚೈನ್ ಗೇಟ್ ಬಳಿ ಅನಧಿಕೃತವಾಗಿ ನಿರ್ಮಾಣ ಮಾಡಿಕೊಂಡಿದ ಚಿತ್ರ ಕಲಾವಿದ ಹಾಗೂ ಕುಟುಂಬ ವರ್ಗದವರು ತೆರವು ಕಾರ್ಯಚರಣೆ ನಡೆಸುವ ಸಂದರ್ಭದಲ್ಲಿ ಹೈಡ್ರಾಮ ನಡೆಯಿತು.

ಕಳೆದ ಬಾರಿಯು ತೆರವು ಕಾರ್ಯಚರಣೆ ಮಾಡಲು ಮುಂದಾಗಿದ್ದ ಸಂದರ್ಭದಲ್ಲಿ ಚಿತ್ರಕಲಾವಿದ ಸಂದೀಪ್ ಮತ್ತು ಕುಟುಂಬದಿಂದ ಗ್ಯಾಸ್ ಆನ್ ಮಾಡಿ ಬೆಂಕಿ ಹಚ್ಚಿಕೊಳ್ಳುತ್ತೇವೆ ಎಂದು ನಗರಸಭೆ ಅಧಿಕಾರಿಗಳಿಗೆ ಬೆದರಿಕೆ ಹಾಕಿದ್ದರು. ಅನಧಿಕೃತವಾಗಿ ಸರ್ಕಾರಿ ಜಾಗದಲ್ಲಿ ಕಟ್ಟಡ ನಿರ್ಮಾಣ ಮಾಡಿಕೊಂಡು ನಗರಸಭೆ ಅಧಿಕಾರಿಗಳಿಗೆ ಜೀವ ಬೆದರಿಕೆ ಹಾಕಿದ್ದರು. ಶುಕ್ರವಾರ ಬೆಳ್ಳಂಬೆಳಗ್ಗೆ ನಗರಸಭೆಯ ಅಧಿಕಾರಿಗಳು ಕೊನೆಗೂ ತೆರವು ಮಾಡಿದರು.

ನಗರಸಭೆಯ ಅಧಿಕಾರಿಗಳು ಯಾವುದೇ ಮಾಹಿತಿ ಹಾಗೂ ನೋಟಿಸ್ ನೀಡದೆ ಏಕಾಎಕಿ ಬಂದು ದೌರ್ಜನ್ಯ ನಡೆಸಿದ್ದಾರೆ ಎಂದು ಕಲಾವಿದನ ಕುಟುಂಬಸ್ಥರು ಆಕ್ರೋಶ ವ್ಯಕ್ತಪಡಿಸಿದರು.

ಇದನ್ನೂ ಓದಿ | ಕೊಟ್ಟ ಹಣ ವಾಪಸ್‌ ಬಾರದ್ದಕ್ಕೆ ಬೇಸರ ಮೊಬೈಲ್‌ ಮಳಿಗೆ ಮಾಲೀಕ ಆತ್ಮಹತ್ಯೆ

Exit mobile version