KM Cariappa College : ವಿಶ್ವದ ಅತ್ಯುನ್ನತ ವಿಜ್ಞಾನಿಗಳ ಪಟ್ಟಿಯಲ್ಲಿ ಸತತ 5ನೇ ಬಾರಿ ಸ್ಥಾನ ಪಡೆದ ಡಾ.ಜೆ.ಜಿ.ಮಂಜುನಾಥ - Vistara News

ಕೊಡಗು

KM Cariappa College : ವಿಶ್ವದ ಅತ್ಯುನ್ನತ ವಿಜ್ಞಾನಿಗಳ ಪಟ್ಟಿಯಲ್ಲಿ ಸತತ 5ನೇ ಬಾರಿ ಸ್ಥಾನ ಪಡೆದ ಡಾ.ಜೆ.ಜಿ.ಮಂಜುನಾಥ

KM Cariappa College : ಸ್ಟ್ಯಾನ್‌ಫೋರ್ಡ್ ವಿ.ವಿ. ಮತ್ತು ಎಲ್ಸ್ವಿಯರ್ ಸಂಸ್ಥೆಯ ವಿಶ್ವದ ಅತ್ಯುನ್ನತ ಪ್ರಭಾವಿ ವಿಜ್ಞಾನಿಗಳ ಪಟ್ಟಿಯಲ್ಲಿ ಡಾ.ಜೆ.ಜಿ.ಮಂಜುನಾಥ ಸತತ 5ನೇ ಬಾರಿಗೆ ಸ್ಥಾನ ಪಡೆದಿದ್ದಾರೆ.

VISTARANEWS.COM


on

Dr JG Manjunatha has been ranked among the world's top scientists for the fifth time in a row
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಕೊಡಗು: ಯು.ಎಸ್.ಎ.ಯ ಸ್ಟ್ಯಾನ್‌ಫೋರ್ಡ್ ವಿ.ವಿ. ಮತ್ತು ಎಲ್ಸ್ವಿಯರ್ ಸಂಸ್ಥೆಯ ಸಹಯೋಗದೊಂದಿಗೆ ಪ್ರಕಟಿಸಿರುವ ವಿಶ್ವದ ಅತ್ಯುನ್ನತ ವಿಜ್ಞಾನಿಗಳ ಪಟ್ಟಿಯಲ್ಲಿ ಡಾ.ಜೆ.ಜಿ.ಮಂಜುನಾಥ (Dr JG Manjunatha) ಅವರು ಸತತ 5ನೇ ಬಾರಿ ಸ್ಥಾನ ಪಡೆದಿದ್ದಾರೆ.

ಮಡಿಕೇರಿಯ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜಿನ ರಸಾಯನ ಶಾಸ್ತ್ರ ವಿಭಾಗದ ಸಹಾಯಕ ಪ್ರಾಧ್ಯಾಪಕರಾಗಿ ಕಾರ್ಯ ನಿರ್ವಹಿಸುತ್ತಿರುವ ಡಾ.ಜೆ.ಜಿ.ಮಂಜುನಾಥ ಅವರು “Analytical Chemistry and Energy” ವಿಷಯಗಳಲ್ಲಿ ಅಂತರಾಷ್ಟ್ರೀಯ ಮಟ್ಟದಲ್ಲಿ ಪ್ರಕಟಿಸಿರುವ ಸಂಶೋಧನಾ ಲೇಖನಗಳ ಆಧಾರದ ಮೇಲೆ ಇವರು 2024ರ ಸಾಲಿನ ಅತ್ಯುನ್ನತ ವಿಜ್ಞಾನಿಗಳ ಪಟ್ಟಿಯಲ್ಲಿ 8257ನೇ ಸ್ಥಾನವನ್ನು ಮತ್ತು ವಿಶ್ವದ ವೃತ್ತಿಜೀವಮಾನ ಸಾಧಕರ ಪಟ್ಟಿಯಲ್ಲಿ 65119ನೇ ಸ್ಥಾನವನ್ನು ಪಡೆದಿದ್ದಾರೆ (ಸಂಯೋಜಿತ ಅಂಕಗಳ ಆಧಾರದ ಮೇಲೆ ಶ್ರೇಣಿ).

ಇವರು 194 ಅಂತರಾಷ್ಟ್ರೀಯ ಲೇಖನಗಳನ್ನು ಅತ್ಯಂತ ಪ್ರತಿಷ್ಟಿತ ಜರ್ನಲ್‌ಗಳಲ್ಲಿ ಪ್ರಕಟಿಸಿದ್ದು, 25 ಪುಸ್ತಕಗಳನ್ನು ಹೊರ ತಂದಿದ್ದಾರೆ. 27 ಜರ್ನಲ್‌ಗಳಲ್ಲಿ ಎಡಿಟೋರಿಯಲ್ ಬೋರ್ಡ್ಮೆಂಬರ್ ಆಗಿಯೂ ಹಾಗೂ Sensing technology (Taylor and francis) ಜರ್ನಲ್‌ನ ಸಂಪಾದಕರಾಗಿ ಕಾರ್ಯನಿರ್ವಹಿಸುತ್ತಿರುತ್ತಾರೆ.

Dr JG Manjunatha has been ranked among the world's top scientists for the fifth time in a row
Dr JG Manjunatha has been ranked among the world's top scientists for the fifth time in a row

ಇವರ ಈ ಸಾಧನೆಯೂ ಫೀಲ್ಡ್‌ ಮಾರ್ಷಲ್‌ ಕೆ.ಎಂ.ಕಾರ್ಯಪ್ಪ ಕಾಲೇಜ್ ಗೆ ಹೆಮ್ಮೆ ತಂದಿದೆ ಎಂದು ಮಂಗಳೂರು ವಿಶ್ವವಿದ್ಯಾಲಯ ಮತ್ತು ಕೊಡಗು ವಿಶ್ವವಿದ್ಯಾಲಯದ ಕುಲಪತಿಯವರು, ಕುಲಸಚಿವರು, ಕಾಲೇಜಿನ ಪ್ರಾಂಶುಪಾಲರು, ಬೋಧಕ ಮತ್ತು ಬೋಧಕೇತರ ಸಿಬ್ಬಂದಿಗಳು ಹಾಗೂ ವಿದ್ಯಾರ್ಥಿಗಳು ಅಭಿನಂದಿಸಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

ಮಳೆ

Karnataka Weather : ರಾಜ್ಯಾದ್ಯಂತ ವ್ಯಾಪಕ ಮಳೆ ; ಉಡುಪಿ, ಉತ್ತರ ಕನ್ನಡಕ್ಕೆ ರೆಡ್‌ ಅಲರ್ಟ್‌

Karnataka Weather Forecast : ರಾಜ್ಯಾದ್ಯಂತ ವ್ಯಾಪಕ ಮಳೆಯಾಗಲಿದ್ದು, ಉಡುಪಿ, ಉತ್ತರ ಕನ್ನಡ ಜಿಲ್ಲೆಗೆ ರೆಡ್‌ ಅಲರ್ಟ್‌ ಘೋಷಣೆ ಮಾಡಲಾಗಿದೆ.

VISTARANEWS.COM


on

By

karnataka weather Forecast
ಸಾಂದರ್ಭಿಕ ಚಿತ್ರ
Koo

ಬೆಂಗಳೂರು: ಬುಧವಾರದಂದು (ಸೆ.25) ಕರ್ನಾಟಕದ ಕರಾವಳಿ ಮತ್ತು ಉತ್ತರ ಒಳನಾಡಿನಲ್ಲಿ ಭಾರಿ ಮಳೆಯಾಗುವ (Heavy Rain) ಸಾಧ್ಯತೆಯಿದೆ. ಮಲೆನಾಡು ಸುತ್ತಮುತ್ತ ಚದುರಿದಂತೆ ಹಗುರದಿಂದ ಸಾಧಾರಣ ಮಳೆಯೊಂದಿಗೆ ವ್ಯಾಪಕ ಮಳೆಯಾಗುವ ಸಾಧ್ಯತೆ ಇದೆ. ದಕ್ಷಿಣ ಒಳನಾಡಿನಲ್ಲಿ ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು (Karnataka Weather Forecast) ನೀಡಿದೆ.

ದಕ್ಷಿಣ ಒಳನಾಡಿನ ಸುತ್ತಮುತ್ತ ಚದುರಿದಂತೆ ವ್ಯಾಪಕವಾಗಿ ಹಗುರದಿಂದ ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಒಳನಾಡಿನಲ್ಲಿ ವ್ಯಾಪಕವಾಗಿ ಹಗುರದಿಂದ ಮಧ್ಯಮ ಮಳೆಯಾಗಲಿದ್ದು, ಪ್ರತ್ಯೇಕವಾಗಿ ಚದುರಿದಂತೆ ಭಾರಿ ಮಳೆಯಾಗುವ ಸಾಧ್ಯತೆಯಿದೆ.

ಮಲೆನಾಡು ಭಾಗದ ಹಾಸನ, ಕೊಡಗು ಚದುರಿದಂತೆ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಶಿವಮೊಗ್ಗ ಮತ್ತು ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಪ್ರತ್ಯೇಕವಾಗಿ ಭಾರಿ ಮಳೆಯಾಗಲಿದೆ. ಕರ್ನಾಟಕದ ಕರಾವಳಿಯ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿಯಲ್ಲಿ ಭಾರಿ ಮಳೆಯಾಗುವ ನಿರೀಕ್ಷೆ ಇದೆ.

ಬೆಂಗಳೂರಿನಲ್ಲಿ ಗುಡುಗು ಸಹಿತ ಮಳೆ

ಬೆಂಗಳೂರಿನಲ್ಲಿ ಗುಡುಗು ಸಹಿತ ಮಳೆಯಾಗಲಿದೆ. ಗರಿಷ್ಠ ಉಷ್ಣಾಂಶ 29 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ಉಷ್ಣಾಂಶ 20 ಡಿಗ್ರಿ ಸೆಲ್ಸಿಯಸ್ ಇರಲಿದೆ. ಕೆಲವೊಮ್ಮೆ ಮೋಡ ಕವಿದ ವಾತಾವರಣ ಇರಲಿದೆ.

ರೆಡ್‌ ಅಲರ್ಟ್‌ ಘೋಷಣೆ

ಗುಡುಗು ಸಹಿತ ಭಾರೀ ಮಳೆಯೊಂದಿಗೆ ಗಾಳಿ ವೇಗವು 30-40 ಕಿ.ಮೀ ಇರಲಿದೆ. ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಲಾಗಿದೆ. ದಕ್ಷಿಣ ಕನ್ನಡ, ಬೀದರ್, ಕಲಬುರಗಿ, ಯಾದಗಿರಿ ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಧಾರವಾಡ, ಗದಗ, ಹಾವೇರಿ, ವಿಜಯಪುರ, ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗ ಮತ್ತು ತುಮಕೂರು ಜಿಲ್ಲೆಗಳಿಗೆ ಯೆಲ್ಲೋ ನೀಡಲಾಗಿದೆ.

ಇದನ್ನೂ ಓದಿ: MLA Muniratna: ಅತ್ಯಾಚಾರ ಕೇಸ್‌; ಶಾಸಕ ಮುನಿರತ್ನಗೆ 12 ದಿನ ಎಸ್‌ಐಟಿ ಕಸ್ಟಡಿಗೆ ನೀಡಿ ಕೋರ್ಟ್‌ ಆದೇಶ

ದಾವಣಗೆರೆಯಲ್ಲಿ ಮನೆಗಳಿಗೆ ನುಗ್ಗಿದ ನೀರು

ದಾವಣಗೆರೆಯಲ್ಲೂ ಮಂಗಳವಾರ ಸತತ ಒಂದು ಗಂಟೆಗೂ ಹೆಚ್ಚು ಮಳೆ ಸುರಿದಿತ್ತು. ಪಿ ಬಿ ರಸ್ತೆ, ಪಿಜೆ ಬಡಾವಣೆ, ಗಾಂಧಿ ವೃತ್ತ ಸೇರಿದಂತೆ ಹಲವೆಡೆ ಮಳೆಯಿಂದ ವಾಹನ ಸವಾರರು ಪರದಾಡಿದರು. ದಾವಣಗೆರೆ, ಮಾಯಕೊಂಡ, ಹರಿಹರ ಸೇರಿದಂತೆ ರಸ್ತೆಯ ಮೇಲೆ ನೀರು ಹರಿದಿತ್ತು. ವಾಹನ ಸವಾರಿಗೆ ತೊಂದರೆ ಉಂಟಾಗಿತ್ತು. ಕಳೆದ ಮೂರು ದಿನಗಳಿಂದ ಸಂಜೆ ವೇಳೆ ವರುಣನ ಆಗಮಿಸುತ್ತಿದ್ದು, ರೈತರ ಮುಖದಲ್ಲಿ ಮಂದಹಾಸ ಮೂಡಿದೆ. ರೈತರು ಬೆಳೆದ ಬೆಳೆಗಳಿಗೆ ಮಳೆಯಿಂದ ಅನುಕೂಲವಾಗಲಿದೆ.

ಕೊಡಗಿನಲ್ಲೂ ಜಿಟಿ ಜಿಟಿ ಮಳೆ

ಬಂಗಾಳಕೊಲ್ಲಿಯಲ್ಲಿ ವಾಯುವಭಾರ ಕುಸಿತ ಹಿನ್ನೆಲೆಯಲ್ಲಿ ಕೊಡಗು ಜಿಲ್ಲೆಯ ವಿವಿಧೆಡೆ ಜಿಟಿ ಜಿಟಿ ಮಳೆಯಾಗಿತ್ತು. ಕಳೆದ ಎರಡು ದಿನಗಳಿಂದ ಜಿಲ್ಲೆಯಲ್ಲಿ ಮಳೆಯ ವಾತವರಣದಿಂದಾಗಿ ವಿದ್ಯಾರ್ಥಿಗಳು ಹಾಗೂ ಬೈಕ್ ಸವಾರರು ಕಿರಿಕಿರಿ ಅನುಭವಿಸಿದರು. ಇನ್ನು ಎರಡು ಮೂರು ದಿನ ಮಳೆ ಮುಂದುವರೆಯುವ ಸಾಧ್ಯತೆ ಇದೆ. ಮೈಸೂರಿನಲ್ಲೂ ಸಾಧಾರಣ ಮಳೆಯಾಗಿದೆ. ಸುಮಾರು ಅರ್ಧ ಗಂಟೆಗೂ ಸುರಿದ ವರ್ಷಧಾರೆಗೆ ವಾಹನ ಸಂಚಾರಕ್ಕೆ ಅಡ್ಡಿ ಆಯಿತು.

ಯಾದಗಿರಿಯಲ್ಲಿ ಮುಂದುವರಿದ ಮಳೆ ಅಬ್ಬರ

ಯಾದಗಿರಿ ಜಿಲ್ಲೆಯಲ್ಲಿ ಮಳೆಯ ಅಬ್ಬರ ಮುಂದುವರಿದಿದೆ. ಮಳೆ ಅರ್ಭಟಕ್ಕೆ ಭತ್ತದ ಜಮೀನಿಗೆ ನೀರು ನುಗ್ಗಿದೆ. ಭೀಮಾನದಿ ತೀರದ ರೈತರ ಜಮೀನಿಗೆ ಮಳೆ ನೀರು ನುಗ್ಗಿ, ಭತ್ತದ ಬೆಳೆ ಜಲಾವೃತಗೊಂಡಿತ್ತು. ಯಾದಗಿರಿ ಜಿಲ್ಲೆಯ ವಡಗೇರಾ ಜೋಳದಡಗಿ ಗ್ರಾಮದಲ್ಲಿ ಘಟನೆ ನಡೆದಿದೆ. ಗೇಟ್ ಎತ್ತದೆ ಕೆಬಿಜೆಎನ್‌ಎಲ್ ಅಧಿಕಾರಿಗಳು ನಿರ್ಲಕ್ಷ್ಯ ಮಾಡಿದ್ದಾರೆ. ಜೋಳದಡಗಿ ಗ್ರಾಮದ ಭೀಮಾನದಿಗೆ ಅಡ್ಡಲಾಗಿರುವ ಬ್ರಿಡ್ಜ್ ಕಂ ಬ್ಯಾರೇಜ್‌ನ ಗೇಟ್ ಎತ್ತದೇ ನಿರ್ಲಕ್ಷ್ಯ ವಹಿಸಿದ್ದಾರೆ. ಭಾರಿ ಮಳೆಯಿಂದ ಭೀಮಾನದಿಗೆ ನೀರಿನ ಒಳಹರಿವು ಹೆಚ್ಚಳವಾಗಿತ್ತು. ಆದರೆ, ಗೇಟ್ ಎತ್ತದಕ್ಕೆ ಭೀಮಾನದಿಯ ನೀರು ಜಮೀನಿಗೆ ನುಗ್ಗಿ ಅಪಾರಪ್ರಮಾಣದ ಬೆಳೆ ಹಾನಿಯಾಗಿದೆ ಎಂದು ರೈತರ ಕಂಗಾಲಾದರು.

ಜಮಖಂಡಿಯಲ್ಲಿ ಮಳೆ ಅವಾಂತರ

ಬಾಗಲಕೋಟೆಯ ಜಮಖಂಡಿಯಲ್ಲಿ ರಾತ್ರಿ ಸುರಿದ ಮಳೆಯು ಅವಾಂತರವೇ ಸೃಷ್ಟಿಯಾಗಿದೆ. ತಗ್ಗುಪ್ರದೇಶದ ಮನೆಗಳಿಗೆ ನೀರು ನುಗ್ಗಿದ್ದರಿಂದ ಜನರು ಪರದಾಡಿದರು. ಜಲಾವೃತವಾದ ಮನೆಗಳಿಗೆ ಮಾಜಿ ಶಾಸಕ ಆನಂದ್ ನ್ಯಾಮಗೌಡ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಲಕ್ಕನಕೇರೆ ಬೈಪಾಸ್ ರಸ್ತೆ ಅಕ್ಕಪಕ್ಕದ ಮನೆಗಳಿಗೆ ನೀರು ನುಗ್ಗಿತ್ತು. ನಿವಾಸಿಗಳಿಗೆ ಆದ ಹಾನಿ ಭರಿಸುವ ಭರವಸೆಯನ್ನು ಮಾಜಿ ಶಾಸಕ ಆನಂದ್ ನ್ಯಾಮಗೌಡ ನೀಡಿದರು. ಶಿಥಿಲಗೊಂಡ ಹಳೆ ಮನೆಯವರಿಗೆ ಸುರಕ್ಷಿತ ಸ್ಥಳದಲ್ಲಿ ವಾಸಿಸುವಂತೆ ಮನವಿ ಮಾಡಿದರು. ಜಮಖಂಡಿ ಎಸಿ ಶ್ವೇತಾ ಸಾಥ್‌ ನೀಡಿದರು.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಮಳೆ

Karnataka Weather : ಈ 14 ಜಿಲ್ಲೆಗಳಿಗೆ ಭಾರಿ ಮಳೆ! ಕರಾವಳಿಗೆ ಆರೆಂಜ್‌, ಉತ್ತರ ಒಳನಾಡಿಗೆ ಯೆಲ್ಲೋ ಅಲರ್ಟ್‌

Karnataka Weather : 14 ಜಿಲ್ಲೆಗಳಿಗೆ ಭಾರಿ ಮಳೆಯಾಗುವ ಸಾಧ್ಯತೆ ಇದ್ದು, ಕರಾವಳಿಗೆ ಆರೆಂಜ್‌, ಉತ್ತರ ಒಳನಾಡಿಗೆ ಯೆಲ್ಲೋ ಅಲರ್ಟ್‌ ನೀಡಲಾಗಿದೆ.

VISTARANEWS.COM


on

By

karnataka Weather Forecast
Koo

ಬೆಂಗಳೂರು: ಕರ್ನಾಟಕದ ಕರಾವಳಿಯಲ್ಲಿ ಭಾರಿ ಮಳೆಯಾಗುವ (Rain News) ಸಾಧ್ಯತೆ ಇದೆ. ಮಲೆನಾಡು ಮತ್ತು ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಭಾರೀ ಮಳೆಯಾಗಲಿದ್ದು, ಉತ್ತರ ಒಳನಾಡಿನಲ್ಲಿ ಪ್ರತ್ಯೇಕವಾಗಿ ಭಾರಿ ಮಳೆಯಾಗಲಿದ್ದು, ಉಳಿದೆಡೆ ವ್ಯಾಪಕವಾಗಿ ಅತ್ಯಂತ ಹಗುರದಿಂದ ಮಧ್ಯಮ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು (Karnataka Weather Forecast) ನೀಡಿದೆ.

ದಕ್ಷಿಣ ಒಳನಾಡಿನಲ್ಲಿ ಚದುರಿದಂತೆ ವ್ಯಾಪಕವಾಗಿ ಹಗುರದಿಂದ ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ. ಚಿತ್ರದುರ್ಗ, ತುಮಕೂರು, ಮಂಡ್ಯ, ರಾಮನಗರ ಮತ್ತು ಕೋಲಾರ ಜಿಲ್ಲೆಗಳಲ್ಲಿ ಚದುರಿದಂತೆ ಭಾರಿ ಮಳೆಯಾಗಲಿದೆ. ಉತ್ತರ ಒಳನಾಡಿನ ಪ್ರದೇಶದಲ್ಲಿ ವ್ಯಾಪಕವಾಗಿ ಹಗುರದಿಂದ ಮಧ್ಯಮ ಮಳೆಯಾಗಲಿದ್ದು, ಪ್ರತ್ಯೇಕವಾಗಿ ಚದುರಿದಂತೆ ಭಾರಿ ಮಳೆಯಾಗುವ ಸಾಧ್ಯತೆಯಿದೆ.

ಮಲೆನಾಡಿನಲ್ಲಿ ಸಾಧಾರಣ ಮಳೆಯಾಗಲಿದೆ. ಶಿವಮೊಗ್ಗ ಮತ್ತು ಚಿಕ್ಕಮಗಳೂರು ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗುವ ಸಾಧ್ಯತೆಯಿದೆ. ಕರ್ನಾಟಕದ ಕರಾವಳಿಯ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿಯಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ.

ಆರೆಂಜ್‌ ಅಲರ್ಟ್‌

ಗುಡುಗು ಸಹಿತ ಭಾರಿ ಮಳೆಯಾಗಲಿದ್ದು, ಗಾಳಿ 30-40 ಕಿ.ಮೀ ವೇಗದಲ್ಲಿ ಬೀಸುವ ಸಾಧ್ಯತೆ ಇದೆ. ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.

ಯೆಲ್ಲೋ ಅಲರ್ಟ್‌

ಬೀದರ್, ಕಲಬುರಗಿ, ಯಾದಗಿರಿ, ರಾಯಚೂರು, ಕೊಪ್ಪಳ, ಬೆಳಗಾವಿ, ಶಿವಮೊಗ್ಗ, ಚಿಕ್ಕಮಗಳೂರು, ತುಮಕೂರು ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ ನೀಡಲಾಗಿದೆ.

ಇದನ್ನೂ ಓದಿ: Karnataka Rain : ಯಾದಗಿರಿಯಲ್ಲಿ ಭಯಂಕರ ಮಳೆ; ಸಿಡಿಲಿಗೆ ಒಂದೇ ದಿನ ನಾಲ್ವರು ಬಲಿ

ಸಿಡಿಲು ಬಡಿದು ನಾಲ್ವರು ಸಾವು

ಸೋಮವಾರ ಯಾದಗಿರಿ ಜಿಲ್ಲೆಯಾದ್ಯಂತ ಗುಡುಗು ಸಹಿತ ಭಾರಿ ಮಳೆಯಾಗಿದೆ. ಸಿಡಿಲು ಬಡಿದು ಮೂವರು ಸ್ಥಳದಲ್ಲೇ ಮೃತಪಟ್ಟರೆ, ಮತ್ತೋರ್ವ ಮಾರ್ಗ ಮಧ್ಯೆ ಮೃತಪಟ್ಟಿದ್ದಾನೆ. ಇಬ್ಬರು ಸಹೋದರರು ಹಾಗೂ ಸಹೋದರಿ ದುರ್ಮರಣ ಹೊಂದಿದ್ದಾರೆ. ಯಾದಗಿರಿ ತಾಲೂಕಿನ ಜೀನಕೇರಾ ತಾಂಡದಲ್ಲಿ ಘಟನೆ ನಡೆದಿದೆ.

ಕೀಶನ್ ಜಾಧವ್ ( 25), ಚನ್ನಪ್ಪ ಜಾಧವ್ (18) ಹಾಗೂ ಸುನೀಬಾಯಿ ರಾಠೋಡ (27), ನೇನು ಜಾಧವ್ (15) ಮೃತ ದುರ್ದೈವಿ. ಸಿಡಿಲು ಬಡಿದು ತೀವ್ರ ಅಸ್ವಸ್ಥಗೊಂಡ ಬಾಲಕನನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗುವಾಗ ಮೃತಪಟ್ಟಿದ್ದಾನೆ. ಸಿಡಿಲು ಬಡಿದು ಒಂದೇ ಕುಟುಂಬದ ಮೂವರು ಮೃತಪಟ್ಟಿದ್ದಾರೆ.

ಯಾದಗಿರಿ ತಾಲ್ಲೂಕಿನ ಜೀನಕೇರಾ ತಾಂಡಾದಲ್ಲಿ ಕುಟುಂಬಸ್ಥರ ಜತೆ ಉಳ್ಳಾಗಡ್ಡಿ ಹಚ್ಚಲು ತೆರಳಿದರು. ಈ ವೇಳೆ ಭಾರಿ ಮಳೆಯಿಂದ ರಕ್ಷಣೆ‌ ಮಾಡಿಕೊಳ್ಳಲು ದೇವಸ್ಥಾನದೊಳಗೆ ತೆರಳಿದರು. ಜೀನಕೇರಾ ತಾಂಡಾದ ದುರ್ಗಮ್ಮ ದೇವಸ್ಥಾನದೊಳಗೆ ತೆರಳಿದ್ದರು. ಈ ವೇಳೆ ಸಿಡಿಲು ಬಡಿದಿದೆ. ಯಾದಗಿರಿ ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಯಾದಗಿರಿಯಲ್ಲಿ ಅಬ್ಬರಿಸಿದ್ದ ಮಳೆ

ಯಾದಗಿರಿ ಜಿಲ್ಲೆಯಲ್ಲಿ ಸೋಮವಾರ ಮಳೆಯು ಅಬ್ಬರಿಸಿದೆ. ಕಳೆದ ಒಂದು ಗಂಟೆಗೂ ಹೆಚ್ಚು ಮಳೆ ಸುರಿದಿದೆ. ಯಾದಗಿರಿ ನಗರ, ವಡಗೇರಾ ಸೇರಿದಂತೆ ಮೊದಲಾದ ಕಡೆ ಮಳೆ ಅರ್ಭಟ ಜೋರಾಗಿತ್ತು. ವರುಣನ ಅಬ್ಬರಕ್ಕೆ ರಸ್ತೆ ಜಲಾವೃತಗೊಂಡಿತ್ತು. ಕೇಂದ್ರ ಬಸ್ ನಿಲ್ದಾಣ ಮುಂಭಾಗ ರಸ್ತೆ ಕರೆಯಂತಾಗಿತ್ತು. ಊರಿಗೆ ತೆರಳಲು ಜನರು ಸಂಕಷ್ಟ ಪಡಬೇಕಾಯಿತು.

ಕಲಬುರಗಿಯಲ್ಲೂ ಒಂದು ಗಂಟೆಯಿಂದ ಧಾರಾಕಾರ ಮಳೆಯಾಗಿದೆ. ಕಲಬುರಗಿ ನಗರ, ಗ್ರಾಮೀಣ , ಔರಾದ್ ಸೇರಿ ಹಲವು ಭಾಗದಲ್ಲಿ ಭಾರಿ ಮಳೆಯಾಗಿದ್ದು, ರಿಂಗ್ ರಸ್ತೆಯಲ್ಲೂ ಗುಡುಗು ಸಹಿತ ಸುರಿದ ಮಳೆಯಿಂದಾಗಿ ರಸ್ತೆ ಜಲಾವೃತಗೊಂಡು, ಕಾಲುವೆಯಂತಾಗಿತ್ತು. ವಾಹನ ಸವಾರರು ಪರದಾಡಿದರು.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಮಳೆ

Karnataka Rain : ಯಾದಗಿರಿಯಲ್ಲಿ ಭಯಂಕರ ಮಳೆ; ಸಿಡಿಲಿಗೆ ಒಂದೇ ದಿನ ನಾಲ್ವರು ಬಲಿ

Karnataka Rain : ಯಾದಗಿರಿಯಲ್ಲಿ ಭಯಂಕರ ಮಳೆಯಾಗುತ್ತಿದ್ದು, ಸಿಡಿಲಿಗೆ ಒಂದೇ ದಿನ ನಾಲ್ವರು ಬಲಿಯಾಗಿದ್ದಾರೆ.

VISTARANEWS.COM


on

By

karnataka rain
Koo

ಯಾದಗಿರಿ: ಸೋಮವಾರ ಯಾದಗಿರಿ ಜಿಲ್ಲೆಯಾದ್ಯಂತ ಗುಡುಗು ಸಹಿತ ಭಾರಿ ಮಳೆಯಾಗಿದೆ. ಸಿಡಿಲು ಬಡಿದು ಮೂವರು ಸ್ಥಳದಲ್ಲೇ ಮೃತಪಟ್ಟರೆ, ಮತ್ತೋರ್ವ ಮಾರ್ಗ ಮಧ್ಯೆ ಮೃತಪಟ್ಟಿದ್ದಾನೆ. ಇಬ್ಬರು ಸಹೋದರರು ಹಾಗೂ ಸಹೋದರಿ ದುರ್ಮರಣ ಹೊಂದಿದ್ದಾರೆ. ಯಾದಗಿರಿ ತಾಲೂಕಿನ ಜೀನಕೇರಾ ತಾಂಡದಲ್ಲಿ ಘಟನೆ ನಡೆದಿದೆ.

ಕೀಶನ್ ಜಾಧವ್ ( 25), ಚನ್ನಪ್ಪ ಜಾಧವ್ (18) ಹಾಗೂ ಸುನೀಬಾಯಿ ರಾಠೋಡ (27), ನೇನು ಜಾಧವ್ (15) ಮೃತ ದುರ್ದೈವಿ. ಸಿಡಿಲು ಬಡಿದು ತೀವ್ರ ಅಸ್ವಸ್ಥಗೊಂಡ ಬಾಲಕನನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗುವಾಗ ಮೃತಪಟ್ಟಿದ್ದಾನೆ. ಸಿಡಿಲು ಬಡಿದು ಒಂದೇ ಕುಟುಂಬದ ಮೂವರು ಮೃತಪಟ್ಟಿದ್ದಾರೆ. ಯಾದಗಿರಿ ತಾಲ್ಲೂಕಿನ ಜೀನಕೇರಾ ತಾಂಡಾದಲ್ಲಿ ಕುಟುಂಬಸ್ಥರ ಜತೆ ಉಳ್ಳಾಗಡ್ಡಿ ಹಚ್ಚಲು ತೆರಳಿದರು. ಈ ವೇಳೆ ಭಾರಿ ಮಳೆಯಿಂದ ರಕ್ಷಣೆ‌ ಮಾಡಿಕೊಳ್ಳಲು ದೇವಸ್ಥಾನದೊಳಗೆ ತೆರಳಿದರು. ಜೀನಕೇರಾ ತಾಂಡಾದ ದುರ್ಗಮ್ಮ ದೇವಸ್ಥಾನದೊಳಗೆ ತೆರಳಿದ್ದರು. ಈ ವೇಳೆ ಸಿಡಿಲು ಬಡಿದಿದೆ. ಯಾದಗಿರಿ ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಗದಗದಲ್ಲಿ ಸಿಡಿಲು ಬಡಿದು ಕುರಿಗಳು ಸಾವು

ಗದಗ ಜಿಲ್ಲೆಯ ಮುಂಡರಗಿ ತಾಲೂಕಿನ ವೆಂಕಟಾಪುರ ಗ್ರಾಮದಲ್ಲಿ ಮಳೆ ಜತೆಗೆ ಸಿಡಿಲು ಬಡಿದು ಕುರಿಗಳು ಮೃತಪಟ್ಟಿವೆ. ನಿಪ್ಪಾಣಿ ಮೂಲದ ಕುರಿಗಾಹಿಗೆ ಸೇರಿದ ನಾಲ್ಕು ಕುರಿಗಳು ಮೃತಪಟ್ಟಿವೆ. ಮಳೆಗಾಲದಲ್ಲಿ ತಮ್ಮ ಕುರಿಗಳನ್ನು ಮೇಯಿಸುತ್ತಾ ಸಂಚಾರ ಮಾಡುವ ಕುರಿಗಾಹಿಗಳು, ನಿನ್ನೆ ರಾತ್ರಿ ಗ್ರಾಮದ ಹೊರವಲಯದಲ್ಲಿ ತಂಗಿದ್ದರು. ನಿ‌ನ್ನೆ ರಾತ್ರಿ ಸುರಿದ ಭಾರಿ ಮಳೆ ವೇಳೆ ಸಿಡಿಲು ಬಡಿದು ಕುರಿಗಳು ಮೃತಪಟ್ಟಿವೆ. ಕುರಿಗಾಹಿಗಳಿಗೆ ಪಶು ಸಂಗೋಪನಾ ಇಲಾಖೆ ಪರಿಹಾರ ನೀಡಲಿ ಎಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ.

ಸಿಡಿಲಿಗೆ ರೈತ ಬಲಿ

ಧಾರವಾಡ ಜಿಲ್ಲೆಯಲ್ಲಿ ಸಿಡಿಲಿನ ಹೊಡೆತಕ್ಕೆ ರೈತರೊಬ್ಬರು ಬಲಿಯಾಗಿದ್ದಾರೆ. ಧಾರವಾಡ ತಾಲೂಕಿನ ಹನುಮನಾಳ ಗ್ರಾಮದ ರೈತ ಭೀಮನಗೌಡ ಪಾಟೀಲ(65)ಮೃತ ದುರ್ದೈವಿ. ಹೊಲದಿಂದ ಮನೆಗೆ ಬರುವಾಗ ಸಿಡಿಲು ಬಡಿದು ಭೀಮನಗೌಡ ಮೃತಪಟ್ಟಿದ್ದಾರೆ. ಸ್ಥಳಕ್ಕೆ ಗರಗ ಪೊಲೀಸರು ಭೇಟಿ ನೀಡಿ ಪ್ರಕರಣ ದಾಖಲಾಗಿದೆ.

ಮಳೆಗೆ ಮನೆ ಗೋಡೆ ಕುಸಿದು ಬಿದ್ದು ವ್ಯಕ್ತಿ ಸಾವು

ಉತ್ತರ ಒಳನಾಡಿನಲ್ಲಿ ಮಳೆಯು (Karnataka Rain) ಅಬ್ಬರಿಸುತ್ತಿದ್ದು, ಧಾರಾಕಾರವಾಗಿ ಸುರಿದ ಮಳೆಗೆ ಮನೆ ಗೋಡೆ ಕುಸಿದು ಸ್ಥಳದಲ್ಲೆ ವ್ಯಕ್ತಿಯೊಬ್ಬರು ದಾರುಣವಾಗಿ ಮೃತಪಟ್ಟಿದ್ದಾರೆ. ಕಲಬುರಗಿ ಜಿಲ್ಲೆಯ ಸೇಡಂ ತಾಲೂಕಿನ ಕುರುಕುಂಟಾ ಗ್ರಾಮದಲ್ಲಿ ಘಟನೆ ನಡೆದಿದೆ. ರಾಜೇಂದ್ರ ಪಾಟೀಲ್ (62) ಮೃತ ದುದೈವಿ.

ರಾಜೋಳ ಗ್ರಾಮದಿಂದ ಮಗಳ ಮನೆ ಕುರುಕುಂಟಾ ಗ್ರಾಮಕ್ಕೆ ತೆರಳಿದ್ದರು. ಮನೆಯಲ್ಲಿ ಮಲಗಿದ್ದ ವೇಳೆ ಗೋಡೆ ಕುಸಿದಿದೆ. ಪರಿಣಾಮ ರಾಜೇಂದ್ರ ಅವರು ರಕ್ತಸ್ರಾವವಾಗಿ ಮೃತಪಟ್ಟಿದ್ದಾರೆ. ಕುರುಕುಂಟಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Continue Reading

ಮಳೆ

Karnataka weather: ತಿಂಗಳಾಂತ್ಯದವರೆಗೆ ಬಿರುಗಾಳಿ ಸಹಿತ ಭಾರಿ ಮಳೆ ಮುನ್ಸೂಚನೆ; ಈ ಜಿಲ್ಲೆಗಳಿಗೆ ಅಲರ್ಟ್

Karnataka Weather Forecast : ಗುಡುಗು ಸಹಿತ ಭಾರೀ ಮಳೆಯೊಂದಿಗೆ (Heavy Rain) ಬಿರುಗಾಳಿ ಮತ್ತು ಜೋರಾದ ಗಾಳಿ 30-40 ಕಿ.ಮೀ ವ್ಯಾಪ್ತಿಯಲ್ಲಿ ಬೀಸಲಿದೆ. ಹೀಗಾಗಿ ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ ಘೋಷಣೆ ಮಾಡಲಾಗಿದೆ.

VISTARANEWS.COM


on

By

karnataka weather forecast
ಸಾಂದರ್ಭಿಕ ಚಿತ್ರ
Koo

ಬೆಂಗಳೂರು: ರಾಜ್ಯಾದ್ಯಂತ ಚದುರಿದಂತೆ ಅಲ್ಲಲ್ಲಿ ಹಗುರದಿಂದ ಸಾಧಾರಣ ಮಳೆಯಾಗಲಿದ್ದು, ಪ್ರತ್ಯೇಕ ಸ್ಥಳಗಳಲ್ಲಿ ಗುಡುಗು ಸಹಿತ ಭಾರೀ ಮಳೆಯಾಗುವ (Rain News) ಸಂಭವವಿದೆ. ಉತ್ತರ ಹಾಗೂ ದಕ್ಷಿಣ ಒಳನಾಡು, ಕರಾವಳಿ ಜಿಲ್ಲೆಗಳ ಕೆಲವು ಭಾಗಗಳಲ್ಲಿ ವ್ಯಾಪಕವಾಗಿ ಹಗುರದಿಂದ ಸಾಧಾರಣ ಮಳೆಯಾಗುತ್ತದೆ. ಮಲೆನಾಡಿನಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಮಾನ ಇಲಾಖೆ (Karnataka weather Forecast) ಮುನ್ಸೂಚನೆಯನ್ನು ನೀಡಿದೆ.

ದಕ್ಷಿಣ ಒಳನಾಡಿನ ತುಮಕೂರು, ಕೋಲಾರ, ಚಿತ್ರದುರ್ಗ, ಮಂಡ್ಯ ಮತ್ತು ದಾವಣಗೆರೆ ಜಿಲ್ಲೆಗಳಲ್ಲಿ ಸಾಧಾರಣದೊಂದಿಗೆ ಭಾರಿ ಮಳೆಯಾಗುವ ಎಚ್ಚರಿಕೆಯನ್ನು ನೀಡಲಾಗಿದೆ. ಉಳಿದ ಜಿಲ್ಲೆಗಳಲ್ಲಿ ಅಲ್ಲಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.

ಉತ್ತರ ಒಳನಾಡಿನಲ್ಲಿ ಬೆಳಗಾವಿ, ಬಾಗಲಕೋಟೆ, ಕೊಪ್ಪಳ, ಗದಗ, ವಿಜಯಪುರ, ರಾಯಚೂರು ಮತ್ತು ಗದಗ ಜಿಲ್ಲೆಗಳಲ್ಲಿ ವ್ಯಾಪಕವಾಗಿ ಚದುರಿದಂತೆ ಮಳೆಯಾಗಲಿದ್ದು, ಪ್ರತ್ಯೇಕ ಸ್ಥಳಗಳಲ್ಲಿ ಸಿಕ್ಕಾಪಟ್ಟೆ ಮಳೆಯಾಗುವ ಸಾಧ್ಯತೆಯಿದೆ.

ಮಲೆನಾಡಿನ ಸುತ್ತಮುತ್ತ ಅಲ್ಲಲ್ಲಿ ತಕ್ಕಮಟ್ಟಿಗೆ ವ್ಯಾಪಕವಾಗಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಚಿಕ್ಕಮಗಳೂರು ಮತ್ತು ಶಿವಮೊಗ್ಗ, ಕೊಡಗು ಸೇರಿ ಹಾಸನದ ಹಲವೆಡೆ ಅತಿ ಹಗುರದೊಂದಿಗೆ ಭಾರಿ ಮಳೆಯಾಗಲಿದೆ. ಕರಾವಳಿಯ ಉತ್ತರ ಕನ್ನಡ, ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಲಘುವಾಗಿ ಸಾಧಾರಣ ಮಳೆಯೊಂದಿಗೆ ಭಾರೀ ಮಳೆಯಾಗುವ ಸಾಧ್ಯತೆಯಿದೆ.

ಬೆಂಗಳೂರಿನಲ್ಲಿ ಸಾಧಾರಣ ಮಳೆ

ಬೆಂಗಳೂರು ಸುತ್ತಮುತ್ತ ಅಲ್ಲಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 30 ಮತ್ತು 20 ಡಿ.ಸೆ ಇರಲಿದೆ. ಆಗಾಗ ಮೋಡ ಕವಿದ ವಾತಾವರಣ ಇರಲಿದೆ.

ಯೆಲ್ಲೋ ಅಲರ್ಟ್‌ ಘೋಷಣೆ

ಗುಡುಗು ಸಹಿತ ಭಾರೀ ಮಳೆಯೊಂದಿಗೆ ಬಿರುಗಾಳಿ ಮತ್ತು ಜೋರಾದ ಗಾಳಿ 30-40 ಕಿ.ಮೀ ವ್ಯಾಪ್ತಿಯಲ್ಲಿ ಬೀಸಲಿದೆ. ಹೀಗಾಗಿ ವಿಜಯಪುರ, ಬೆಳಗಾವಿ, ಧಾರವಾಡ, ಹಾವೇರಿ, ಶಿವಮೊಗ್ಗ, ತುಮಕೂರು, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ ಮತ್ತು ಕೋಲಾರ ಜಿಲ್ಲೆಗಳಿಗೆ ಐಎಂಡಿ ಹಳದಿ ಎಚ್ಚರಿಕೆಯನ್ನು ನೀಡಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading
Advertisement
Murder case
ಬೆಂಗಳೂರು2 ಗಂಟೆಗಳು ago

Bengaluru Murder : ಮಹಿಳೆಯನ್ನು 50 ತುಂಡಾಗಿ ಕತ್ತರಿಸಿದವನು ಒಡಿಶಾದ ಸ್ಮಶಾನದಲ್ಲಿ ನೇಣಿಗೆ ಶರಣು!

assault case
ಹಾವೇರಿ3 ಗಂಟೆಗಳು ago

Assault Case : ಮನೆಗೆ ಬಾರದ ಪತ್ನಿ; ಸಿಟ್ಟಾಗಿ ಮಾವ ಬೆಳೆದ ಅಡಿಕೆ ಗಿಡಗಳನ್ನು ನಾಶ ಮಾಡಿದ ಅಳಿಯ!

Murder case
ದಾವಣಗೆರೆ3 ಗಂಟೆಗಳು ago

Murder Case : ಪತಿಗೆ ನಿದ್ರೆ ಮಾತ್ರೆ ಕೊಟ್ಟು ರಾತ್ರಿ ಹೊತ್ತು ಪ್ರಿಯಕರನ ಸೇರುತ್ತಿದ್ದಳು ಮಳ್ಳಿ! ಪತ್ನಿಯ ಅಕ್ರಮ ಸಂಬಂಧಕ್ಕೆ ಪತಿ ಬಲಿ

new serial
ಬೆಂಗಳೂರು6 ಗಂಟೆಗಳು ago

New Serial : ಡಿಫರೆಂಟ್ ಕಥೆಯೊಂದಿಗೆ ಕಿರುತೆರೆಯಲ್ಲಿ ಶುರುವಾಗ್ತಿದೆ ʻನಿನ್ನ ಜೊತೆ ನನ್ನ ಕಥೆʼ

World Retinal Day 2024
ಪ್ರಮುಖ ಸುದ್ದಿ7 ಗಂಟೆಗಳು ago

World Retinal Day 2024 : ಶಾಕಿಂಗ್‌ ನ್ಯೂಸ್‌; ಜಾಗತಿಕವಾಗಿ 1 ಬಿಲಿಯನ್ ಜನರು ತಮ್ಮ ದೃಷ್ಟಿಯನ್ನು ಕಳೆದುಕೊಳ್ಳುತ್ತಿದ್ದರಂತೆ!

MUda Scam
ರಾಜಕೀಯ7 ಗಂಟೆಗಳು ago

Muda Scam : ಸಿದ್ದರಾಮಯ್ಯ ರಾಜೀನಾಮೆಗೆ ಹೆಚ್ಚಾದ ಒತ್ತಡ; ಫ್ರೀಡಂ ಪಾರ್ಕ್‌ನಲ್ಲಿ ಜೆಡಿಎಸ್‌ ಪ್ರತಿಭಟನೆ

Cancer Treatment AI
ಆರೋಗ್ಯ7 ಗಂಟೆಗಳು ago

Cancer Treatment : ವೈದ್ಯಕೀಯ ಲೋಕದಲ್ಲಿ ಎಐ; ಕ್ಯಾನ್ಸರ್‌ಕಾರಕ ಗಡ್ಡೆ ಪತ್ತೆಗೂ ಬಂದಿದೆ ಎಐ ಚಾಲಿತ ಸೈಬರ್‌ನೈಫ್‌-ಎಸ್7 ಸಿಸ್ಟಮ್‌!

Dina Bhavishya
ಭವಿಷ್ಯ8 ಗಂಟೆಗಳು ago

Dina Bhavishya :ಅಪರಿಚಿತರೊಂದಿಗೆ ಅತಿಯಾದ ಸಲುಗೆ ಅಪಾಯ ತಂದಿತು ಎಚ್ಚರ

Self Harming
ಕೋಲಾರ1 ದಿನ ago

Self Harming : ಹೆಂಡ್ತಿ ಮನೆಯವರ ಕಿರುಕುಳ; ವಿಡಿಯೊ ಮಾಡಿ ಮಾರ್ಕಂಡೇಶ್ವರ ಬೆಟ್ಟದಲ್ಲಿ ನೇಣಿಗೆ ಶರಣು

karnataka weather Forecast
ಮಳೆ2 ದಿನಗಳು ago

Karnataka Weather : ರಾಜ್ಯಾದ್ಯಂತ ವ್ಯಾಪಕ ಮಳೆ ; ಉಡುಪಿ, ಉತ್ತರ ಕನ್ನಡಕ್ಕೆ ರೆಡ್‌ ಅಲರ್ಟ್‌

Kannada Serials
ಕಿರುತೆರೆ12 ತಿಂಗಳುಗಳು ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Sharmitha Gowda in bikini
ಕಿರುತೆರೆ12 ತಿಂಗಳುಗಳು ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ12 ತಿಂಗಳುಗಳು ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Bigg Boss- Saregamapa 20 average TRP
ಕಿರುತೆರೆ11 ತಿಂಗಳುಗಳು ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ10 ತಿಂಗಳುಗಳು ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ12 ತಿಂಗಳುಗಳು ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ11 ತಿಂಗಳುಗಳು ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ10 ತಿಂಗಳುಗಳು ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ1 ವರ್ಷ ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ10 ತಿಂಗಳುಗಳು ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Sudeep's birthday location shift
ಸ್ಯಾಂಡಲ್ ವುಡ್4 ವಾರಗಳು ago

Kichcha Sudeepa: ಸುದೀಪ್‌ ಬರ್ತ್‌ ಡೇ ಲೊಕೇಶನ್‌ ಶಿಫ್ಟ್; ದರ್ಶನ್‌ ಭೇಟಿಗೆ ಬಳ್ಳಾರಿ ಜೈಲಿಗೆ ಹೋಗ್ತಾರಾ ಕಿಚ್ಚ

Actor Darshan
ಸ್ಯಾಂಡಲ್ ವುಡ್4 ವಾರಗಳು ago

Actor Darshan : ಬಿಗಿ ಭದ್ರತೆಯಲ್ಲಿ ಪರಪ್ಪನ ಅಗ್ರಹಾರದಿಂದ ದರ್ಶನ್‌ ಬಳ್ಳಾರಿಗೆ ಸ್ಥಳಾಂತರ; ಸೆಲ್‌ನಲ್ಲಿ ಏನೆಲ್ಲ ವ್ಯವಸ್ಥೆ ಇದೆ ಗೊತ್ತಾ?

ಮಳೆ1 ತಿಂಗಳು ago

Karnataka rain : ವಿಜಯನಗರದಲ್ಲಿ ಮಳೆ ಅವಾಂತರ; ಹರಿಯುವ ಹಳ್ಳದಲ್ಲೇ ಶವ ಸಾಗಿಸಿದ ಗ್ರಾಮಸ್ಥರು

karnataka Weather Forecast
ಮಳೆ2 ತಿಂಗಳುಗಳು ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ2 ತಿಂಗಳುಗಳು ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ2 ತಿಂಗಳುಗಳು ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು2 ತಿಂಗಳುಗಳು ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ2 ತಿಂಗಳುಗಳು ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ2 ತಿಂಗಳುಗಳು ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

karnataka rain
ಮಳೆ2 ತಿಂಗಳುಗಳು ago

Karnataka Rain : ಕಾರವಾರದ ಸುರಂಗ ಮಾರ್ಗದಲ್ಲಿ ಕುಸಿದ ಕಲ್ಲು; ಟನೆಲ್‌ ಬಂದ್‌ ಮಾಡಿದ ಪೊಲೀಸರು

ಟ್ರೆಂಡಿಂಗ್‌