Site icon Vistara News

Kodagu News : ಕೆಲಸ ಮಾಡುವಾಗ ಆಕಸ್ಮಿಕವಾಗಿ ಕಟ್ಟಡದಿಂದ ಬಿದ್ದು ಕಾರ್ಮಿಕ ಸಾವು

Labourer dies after falling from newly constructed hospital building

ಕೊಡಗು: ನೂತನವಾಗಿ ನಿರ್ಮಾಣವಾಗಿದ್ದ ಆಸ್ಪತ್ರೆಯ ಕಟ್ಟಡದಿಂದ ಬಿದ್ದು ಕಾರ್ಮಿಕ (Kodagu News) ಮೃತಪಟ್ಟಿದ್ದಾರೆ. ಕೊಡಗಿನ ಮಡಿಕೇರಿಯಲ್ಲಿ ಈ ಘಟನೆ ನಡೆದಿದೆ. ಕೊಲ್ಕತ್ತ ಮೂಲದ ಕಾರ್ಮಿಕ ರಾಕಿಬ್ (22) ಮೃತ ದುರ್ದೈವಿ.

ರಾಕಿಬ್‌ ಮುಂಜಾನೆ ಆಸ್ಪತ್ರೆ ಕಿಟಕಿ ಕೆಲಸ ಮಾಡಲು ಮುಂದಾಗಿದ್ದ. ಹೊರ ಭಾಗದಲ್ಲಿ ಹಾಕಿದ್ದ ಸ್ಟೇಜ್‌‌ನಿಂದ ಬಿದ್ದಿದ್ದಾರೆ. 30 ಅಡಿ ಎತ್ತರದಿಂದ ಸಿಮೆಂಟ್ ನೆಲಕ್ಕೆ ಬಿದ್ದ ಪರಿಣಾಮ ತೀವ್ರ ರಕ್ತಸ್ರಾವವಾಗಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

Labourer dies after falling from newly constructed hospital building

ಸ್ಥಳಕ್ಕೆ ಮಡಿಕೇರಿ ನಗರ ಪೊಲೀಸರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸುರಕ್ಷತಾ ಕ್ರಮಗಳನ್ನು ತೆಗೆದುಕೊಳ್ಳದೇ ಇರುವುದೇ ಈ ಅನಾಹುತಕ್ಕೆ ಕಾರಣ ಎಂಬ ಆರೋಪ ಕೇಳಿ ಬಂದಿದೆ. ಪೊಲೀಸರು ಮೃತದೇಹವನ್ನು ಶವಗಾರಕ್ಕೆ ರವಾನಿಸಿದ್ದಾರೆ. ಈ ಸಂಬಂಧ ಪ್ರಕರಣ ದಾಖಲಾಗಿದ್ದು, ತನಿಖೆಯನ್ನು ಮುಂದುವರಿಸಿದ್ದಾರೆ.

ಇದನ್ನೂ ಓದಿ: Blast in Bengaluru: ರಾಮೇಶ್ವರಂ ಕೆಫೆ ಬ್ಲಾಸ್ಟ್; ಮಂಗಳೂರು ಕುಕ್ಕರ್ ಬ್ಲಾಸ್ಟ್‌ಗೆ ಸಂಬಂಧ ಇಲ್ಲ; ಬಿಜೆಪಿ ಅವಧಿ‌ ಬಗ್ಗೆ ಸಿಎಂ ಪ್ರಶ್ನೆ

ಬೈಕ್‌ – ಟ್ಯಾಂಕರ್‌ ನಡುವೆ ಭೀಕರ ಅಪಘಾತ; ದಂಪತಿ ದಾರುಣ ಮರಣ

ಮೈಸೂರು: ಮೈಸೂರು ಜಿಲ್ಲೆಯ (Mysore News) ಹುಣಸೂರಿನಲ್ಲಿ ಸಂಭವಿಸಿದ ಬೈಕ್‌ ಮತ್ತು ಕ್ಯಾಂಟರ್‌ (Bike-Canter accident) ನಡುವಿನ ಭೀಕರ ಅಪಘಾತದಲ್ಲಿ (Road Accident) ದಂಪತಿ ಪ್ರಾಣ ಕಳೆದುಕೊಂಡಿದ್ದಾರೆ (Road accident couple dead). ದಂಪತಿ ಬೈಕ್‌ನಲ್ಲಿ ಸಾಗುತ್ತಿದ್ದಾಗ ಈ ಅವಘಡ ಸಂಭವಿಸಿದೆ.

ಹುಣಸೂರು ಕನಕ ಭವನ ಬಳಿ ನಡೆದ ಅಪಘಾತದಲ್ಲಿ ಮೃತಪಟ್ಟವರನ್ನು ಮಂಜುನಾಥ ಬಡಾವಣೆಯ ನಿವಾಸಿ ರಾಜು (64) ಮತ್ತು ಅವರ ಪತ್ನಿ ಸುನಂದಾ (55) ಎಂದು ಗುರುತಿಸಲಾಗಿದೆ.

ಮಂಜುನಾಥ್‌ ಅವರು ಬೈಕ್‌ನಲ್ಲಿ ಸಾಗುತ್ತಿದ್ದಾಗ ಹುಣಸೂರು ಕಡೆಯಿಂದ ವೇಗವಾಗಿ ಬಂದ ಕ್ಯಾಂಟರ್ ಗೂಡ್ಸ್ ವಾಹನ ಬೈಕ್‌ಗೆ ಬಡಿದಿದೆ. ಅಪಘಾತ ನಡೆಸಿ ವಾಹನ ನಿಲ್ಲಿಸದೆಯೇ ಗೂಡ್ಸ್‌ ಚಾಲಕ ಪರಾರಿಯಾಗಿದ್ದಾನೆ. ಬಳಿಕ ಸಾರ್ವಜನಿಕರೇ ಬೆನ್ನಟ್ಟಿ ವಾಹನವನ್ನು ತಡೆದು ಪೊಲೀಸರ ವಶಕ್ಕೆ ಒಪ್ಪಿಸಿದ್ದಾರೆ. ಹುಣಸೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಚಲಿಸುತ್ತಿರುವ ಟಿಪ್ಪರ್ ಲಾರಿ ಕೆಳಗೆ ಬಿದ್ದು ವ್ಯಕ್ತಿ ಸಾವು

ಚಿಕ್ಕಬಳ್ಳಾಪುರ: ಬಾಗೇಪಲ್ಲಿ ತಾಲ್ಲೂಕಿನ ಜೂಲಪಾಳ್ಯ ಗ್ರಾಮ ಪಂಚಾಯಿತಿ ಕಾರ್ಯದರ್ಶಿಯಾಗಿರುವ ಗೋಪಾಲಯ್ಯ ಎಂಬವರು ಚಲಿಸುತ್ತಿರುವ ಟಿಪ್ಪರ್‌ ಕೆಳಗೆ ಬಿದ್ದು ಪ್ರಾಣ ಕಳೆದುಕೊಂಡಿದ್ದಾರೆ. ಅವರಿಗೆ 59 ವರ್ಷ ವಯಸ್ಸಾಗಿದೆ. ರಸ್ತೆ ಕಾಮಗಾರಿ ನಡೆಯುತ್ತಿದ್ದ ಸ್ಥಳದಲ್ಲಿ ಗೋಪಾಲಯ್ಯ ಅವರು ಟಿಪ್ಪರ್‌ನಲ್ಲಿ ಸಾಗುತ್ತಿದ್ದರು. ಆಗ ದುರಂತ ನಡೆದಿದೆ. ಸ್ಥಳಕ್ಕೆ ಶಾಸಕ ಎಸ್ ಎನ್ ಸುಬ್ಬಾರೆಡ್ಡಿ ಭೇಟಿ ನೀಡಿದ್ದಾರೆ. ಬಾಗೇಪಲ್ಲಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Exit mobile version