ಮಡಿಕೇರಿ: ನಗರದ ಫೀಲ್ಡ್ ಮಾರ್ಷಲ್ ಕೆ.ಎಂ. ಕಾರ್ಯಪ್ಪ ಕಾಲೇಜಿನಲ್ಲಿ ಗುರುವಾರ ಮತದಾನ ಜಾಗೃತಿ ಅಭಿಯಾನ ಅಂಗವಾಗಿ ರಂಗೋಲಿ ಮತ್ತು ಚಿತ್ರಕಲೆ ಸ್ಪರ್ಧೆಯನ್ನು (Kodagu News) ಹಮ್ಮಿಕೊಳ್ಳಲಾಗಿತ್ತು.
ಭಾರತೀಯ ಚುನಾವಣಾ ಆಯೋಗ, ಜಿಲ್ಲಾಡಳಿತ ಹಾಗೂ ಮಡಿಕೇರಿ ನಗರಸಭೆಯ ಸಹಯೋಗದಲ್ಲಿ ಹಮ್ಮಿಕೊಳ್ಳಲಾಗಿದ್ದ ಕಾರ್ಯಕ್ರಮದಲ್ಲಿ ಮಡಿಕೇರಿ ನಗರಸಭೆಯ ಆಯುಕ್ತ ವಿಜಯ್, ಮತದಾನ ಪ್ರತಿಜ್ಞಾ ವಿಧಿಯನ್ನು ಬೋಧಿಸಿದರು.
ಇದನ್ನೂ ಓದಿ: Job Alert: ಬಿಎಂಟಿಸಿ 2,500 ಕಂಡಕ್ಟರ್ ಹುದ್ದೆಯ ಪರಿಷ್ಕೃತ ಅಧಿಸೂಚನೆ ಪ್ರಕಟ; ಇಲ್ಲಿ ಪರಿಶೀಲಿಸಿ
ಕಾಲೇಜಿನ ಪದವಿ ಮತ್ತು ಸ್ನಾತಕೋತ್ತರ ಪದವಿ ವಿದ್ಯಾರ್ಥಿಗಳು ಸ್ಪರ್ಧೆಯಲ್ಲಿ ಸಕ್ರೀಯವಾಗಿ ಪಾಲ್ಗೊಂಡರು.
ಈ ಸಂದರ್ಭದಲ್ಲಿ ಮುಖ್ಯ ಲೆಕ್ಕಾಧಿಕಾರಿ ಜುವೆಲ್ ಖಾನ್, ಎಇಇ ಸೌಮ್ಯ, ಕಂದಾಯ ಅಧಿಕಾರಿ ತಾಹಿರ್ ಎಂ.ಎ., ಕಾಲೇಜಿನ ಪ್ರಾಂಶುಪಾಲ ಮೇಜರ್ ಪ್ರೊ. ರಾಘವ ಬಿ., ಸಹ ಪಠ್ಯ ಚಟುವಟಿಕೆಯ ಸಂಯೋಜಕಿ ಡಾ. ರೇಣುಶ್ರೀ ಹಾಗೂ ಬೂತ್ ಮಟ್ಟದ ಅಧಿಕಾರಿಗಳು, ನಗರಸಭೆ ಸಿಬ್ಬಂದಿ, ಕಾಲೇಜಿನ ಸಿಬ್ಬಂದಿ ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ರಂಗೋಲಿ ಸ್ಪರ್ಧೆ
ರಂಗೋಲಿ ಸ್ಪರ್ಧೆಯಲ್ಲಿ ದ್ವಿತೀಯ ವರ್ಷದ ಎಂಕಾಂ ವಿದ್ಯಾರ್ಥಿ ಶಿವ ಪ್ರಥಮ ಸ್ಥಾನ, ಬಿಕಾಂ ದ್ವಿತೀಯ ವರ್ಷದ ವಿದ್ಯಾರ್ಥಿನಿ ಯೋಗಿನಿ ದ್ವಿತೀಯ, ಎಂ.ಎ. ದ್ವಿತೀಯ ವರ್ಷದ ವಿದ್ಯಾರ್ಥಿನಿ ಯಶೋಧ ತೃತೀಯ ಸ್ಥಾನ ಪಡೆದಿದ್ದಾರೆ.
ಇದನ್ನೂ ಓದಿ: Coconut oil massage: ಮುಖದ ಕಾಂತಿ ಹೆಚ್ಚಿಸಿಕೊಳ್ಳಬೇಕೆ? ತೆಂಗಿನೆಣ್ಣೆ ಹಚ್ಚಿಕೊಂಡರೆ ಸಾಕು!
ಚಿತ್ರಕಲೆ ಸ್ಪರ್ಧೆ
ಚಿತ್ರಕಲೆ ಸ್ಪರ್ಧೆಯಲ್ಲಿ ಬಿಸಿಎ ದ್ವಿತೀಯ ವರ್ಷದ ವಿದ್ಯಾರ್ಥಿ ರೋಹಿತ್ ಪಿ.ವಿ. ಪ್ರಥಮ ಸ್ಥಾನ, ಬಿ.ಎ. ಪ್ರಥಮ ವರ್ಷದ ವಿದ್ಯಾರ್ಥಿ ಭೀಮಾ ದ್ವಿತೀಯ, ಬಿಸಿಎ ದ್ವಿತೀಯ ವರ್ಷದ ವಿದ್ಯಾರ್ಥಿನಿ ಮೋನಿಕಾ ತೃತೀಯ ಸ್ಥಾನ ಪಡೆದಿದ್ದಾರೆ.