Site icon Vistara News

Love Case : ಮನೆಗೆ ಬಂದ ಪ್ರೇಮಿಗೆ ಕೊತ ಕೊತ ಕುದಿಯುವ ನೀರು ಎರಚಿದ ಯುವತಿ ತಂದೆ!

Love Case Father throws hot water on man who loved his daughter for coming home

ಕೊಡಗು: ಮಗಳನ್ನು ಪ್ರೀತಿಸುತ್ತಿದ್ದ (Love Case) ಯುವಕನಿಗೆ ಬಿಸಿ ನೀರು ಎರಚಿ ಯುವತಿ ತಂದೆ ವಿಕೃತಿ ಮೆರೆದಿದ್ದಾರೆ. ಕೊಡಗು ಜಿಲ್ಲೆ ಮಡಿಕೇರಿ ಸಮೀಪದ ಮದೆನಾಡಿನಲ್ಲಿ ಘಟನೆ ನಡೆದಿದೆ. ಗಣಪತಿ ಬೀದಿ ನಿವಾಸಿ ಸುಹೇಲ್ ಎಂಬಾತ ಆಸ್ಪತ್ರೆಗೆ ದಾಖಲಾದ ಪ್ರೇಮಿಯಾಗಿದ್ದಾನೆ.

ಸುಹೇಲ್‌ಗೆ ಮದೆನಾಡಿನ ಯುವತಿಯೊಂದಿಗೆ ಪ್ರೇಮಾಂಕುರವಾಗಿತ್ತು. ಇಬ್ಬರು ಕೈ-ಕೈ ಹಿಡಿದು ಊರೆಲ್ಲ ಓಡಾಡಿದ್ದರು. ಇವರಿಬ್ಬರ ಪ್ರೀತಿ ವಿಚಾರವು ಯುವತಿ ಮನೆಯವರಿಗೆ ತಿಳಿದುಹೋಗಿತ್ತು. ಇವರಿಬ್ಬರ ಪ್ರೀತಿಗೆ ನಿರಾಕರಿಸಿದ್ದರು. ಇತ್ತ ಯುವತಿ ಸುಹೇಲ್‌ಗೆ ಫೋನ್‌ ಮಾಡಿ ಮನೆಯಲ್ಲಿ ಹಿಂಸೆಯಾಗುತ್ತಿದೆ. ಮನೆಗೆ ಬಂದು ನನ್ನನ್ನು ಕರೆದುಕೊಂಡು ಹೋಗು ಎಂದಿದ್ದಾಳೆ.

ಪ್ರೀತಿಸಿದವಳು ಈ ಪರಿ ಹಿಂಸೆ ಪಡುತ್ತಿರುವ ವಿಷಯ ತಿಳಿದ ಸುಹೇಲ್‌ ಗಟ್ಟಿ ಮನಸ್ಸು ಮಾಡಿ, ಆಕೆಯ ಮನೆಗೆ ಹೋಗಿದ್ದಾನೆ. ಸುಹೇಲ್‌ ಮನೆಯೊಳಗೆ ಕಾಲಿಡುತ್ತಿದ್ದಂತೆ ಸಿಟ್ಟಾದ ಯುವತಿ ತಂದೆ ಏಕಾಏಕಿ ಕೊತ ಕೊತ ಅಂತ ಕುದಿಯುತ್ತಿದ್ದ ನೀರನ್ನು ಎರಚಿದ್ದಾರೆ. ಬಿಸಿ ನೀರು ಎರಚಿದ್ದರಿಂದ ಸುಹೇಲ್‌ನ ಮುಖ ಹಾಗೂ ಕುತ್ತಿಗೆ ಭಾಗವೆಲ್ಲ ಸುಟ್ಟು ಹೋಗಿದೆ.

ಸದ್ಯ ಸುಹೇಲ್‌ಗೆ ಮಡಿಕೇರಿಯ ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಅದೃಷ್ಟವಾಶತ್‌ ಸುಹೇಲ್‌ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಸುಟ್ಟುಗಾಯಗಳಿಗೆ ಚಿಕಿತ್ಸೆ ಮುಂದುವರಿದಿದೆ. ಸದ್ಯ ಈ ಸಂಬಂಧ ಮಡಿಕೇರಿ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.

ಇದನ್ನೂ ಓದಿ: Murder Case : ಪತ್ನಿಯನ್ನು ಕೊಡಲಿಯಿಂದ ಕೊಚ್ಚಿ, ಶವದ ಪಕ್ಕದಲ್ಲೇ ನಿದ್ರೆಗೆ ಜಾರಿದ ಕುಡುಕ ಪತಿ

ಅಬ್ಬಾ…ಇವರೆಂಥಾ ರಾಕ್ಷಸರು! ಸೊಸೆ ಮೇಲೆ ಅತ್ತೆ, ನಾದಿನಿಯಿಂದ ಅಟ್ಯಾಕ್‌

ಉತ್ತರಪ್ರದೇಶ: ಸೊಸೆ ಮೇಲೆ ಅತ್ತೆ ಮತ್ತು ನಾದಿನಿ ಸೇರಿಕೊಂಡು ಮಾರಣಾಂತಿಕವಾಗಿ ಹಲ್ಲೆ ನಡೆಸಿರುವ ಘಟನೆ ಉತ್ತರಪ್ರದೇಶ(Uttar Pradesh)ದ ಇಟಾ ಪ್ರದೇಶದಲ್ಲಿ ನಡೆದಿದೆ. ವಿಚಿತ್ರವೆಂದರೆ ಮಹಿಳೆಯ ಪತಿ, ತನ್ನ ತಾಯಿ ಮತ್ತು ತಂಗಿಯನ್ನು ತಡೆಯುವ ಬದಲು ವಿಡಿಯೋ ರೆಕಾರ್ಡ್‌(Video record) ಮಾಡಿದ್ದಾನೆ. ಬಿಟ್ಟು ಬಿಡುವಂತೆ ಎಷ್ಟೇ ಗೋಗರೆದರೂ ಕೇಳದೆ ಮಹಿಳೆ ಮೇಲೆ ಬಹಳ ಕ್ರೂರವಾಗಿ ಹಲ್ಲೆ ನಡೆಸಿರುವ ವಿಡಿಯೋ ಸಾಮಾಜಿಕ ಜಾಲತಾಣ(Social Media)ದಲ್ಲಿ ವೈರಲ್‌(Viral Video) ಆಗಿದೆ.

ಇಟಾದಲ್ಲಿ ಈ ಘಟನೆ ನಡೆದಿದ್ದು, ಸೊಸೆಯನ್ನು ಅತ್ತೆ ಮತ್ತು ನಾದಿನಿ ಸೇರಿಕೊಂಡು ಚೆನ್ನಾಗಿ ಥಳಿಸಿದ್ದು, ಬಳಿಕ ಆಕೆಯನ್ನು ನೆಲದಲ್ಲಿ ಎಳೆದಾಡಿದ್ದಾರೆ. ಅಲ್ಲೇ ಇದ್ದ ಪತಿ ಮತ್ತು ಮಾವನ ಬಳಿ ಸಹಾಯಕ್ಕಾಗಿ ಆಕೆ ಎಷ್ಟೇ ಅಂಗಲಾಚಿದರೂ ಆಕೆ ಮೇಲೆ ನಡೆಯುತ್ತಿದ್ದ ಮಾರಣಾಂತಿಕ ಹಲ್ಲೆ ಮಾತ್ರ ನಿಲ್ಲುವುದೇ ಇಲ್ಲ. ಮಹಿಳೆಯ ಜೋರಾಗಿ ಕಿರುಚಿಕೊಂಡು ಬಿಟ್ಟು ಬಿಡಿ ಎಂದು ಬೇಡುತ್ತಿರುವುದನ್ನು ವಿಡಿಯೋದಲ್ಲಿ ಕಾಣಬಹುದಾಗಿದೆ. ಇನ್ನು ಕೈಹಿಡಿದು ರಕ್ಷಿಸಬೇಕಿದ್ದ ಪತಿಯೇ ಆಕೆಯ ಸಹಾಯಕ್ಕೆ ಬಾರದೇ ಬರೀ ವಿಡಿಯೋ ಮಾಡುತ್ತಾ ನಿಂತಿದ್ದ.

ಇನ್ನು ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದ್ದು, ಹಲವರಿಂದ ಖಂಡನೆ ವ್ಯಕ್ತವಾಗಿದೆ. ಇಂತಹ ಕ್ರೂರಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ. ಇನ್ನು ಘಟನೆಗೆ ಸಂಬಂಧಿಸಿದಂತೆ ಇದುವರೆಗೆ ಯಾವುದೇ ಪ್ರಕರಣ ದಾಖಲಾಗಿಲ್ಲ. ಪೊಲೀಸರು ಸ್ವಯಂಪ್ರೇರಿತರಾಗಿ ದೂರ ದಾಖಲಿಸಿಕೊಂಡು ಆರೋಪಿಗಳನ್ನು ತಕ್ಷಣ ಅರೆಸ್ಟ್‌ ಮಾಡಬೇಕೆಂದು ಒತ್ತಾಯಿಸಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Exit mobile version