ಕೊಡಗು: ವರದಕ್ಷಿಣೆ ಕೊಡಲಿಲ್ಲ ಎಂದು ಮದುವೆ ದಿನವೇ ವರನೊಬ್ಬ ಮದುವೆ ಬೇಡ (Marriage Cancel) ಎಂದಿದ್ದಾನೆ. ಮದುವೆ ಬೇಡ ಎನ್ನಲು ಮೊದಲು ಕಾರಣ ಕೊಟ್ಟಿದ್ದು, ವರನ ಕಡೆಯವರಿಗೆ ಸಿಹಿತಿಂಡಿ ನೀಡಿಲ್ಲದ ಕಾರಣ ಹೇಳಿ ನನಗೆ ಈ ಮದುವೆ ಬೇಡ ಎಂದು ಗಲಾಟೆ ಮಾಡಿದ್ದಾನೆ.
ಕೊಡಗು ಜಿಲ್ಲೆಯಲ್ಲಿ ಸೋಮವಾರ ಪೇಟೆಯ ಜಾನಕಿ ಕನ್ವೆನ್ಶನ್ ಹಾಲ್‌ನಲ್ಲಿ ಘಟನೆ ನಡೆದಿದೆ. ಹಾನಗಲ್ಲು ಗ್ರಾಮದ ಸಿದ್ಧಾರ್ಥ ಬಡಾವಣೆಯ ಯುವತಿ ಮತ್ತು ತುಮಕೂರು ಜಿಲ್ಲೆಯ ಯುವಕ ನೊಂದಿಗೆ ಮೇ 5ರಂದು ಮದುವೆ ನಿಶ್ಚಯಾಗಿವಾಗಿತ್ತು. ಆದರೆ ರಾತ್ರೋ ರಾತ್ರಿ ವರ ಉಂಗುರ ಕಳಚಿಕೊಟ್ಟು ಹೋಗಿದ್ದಾನೆ.
ವಿವಾಹಕ್ಕೂ ಮೊದಲು ವರನ ಕಡೆಯವರಿಂದ ವರದಕ್ಷಿಣೆ ಕೊಡುವಂತೆ ಒತ್ತಾಯವು ಕೇಳಿ ಬಂದಿತ್ತು ಎನ್ನಲಾಗಿದೆ. ಚಿನ್ನಾಭರಣ ಮತ್ತು ಬೆಂಗಳೂರಿನಲ್ಲಿ ಸೈಟ್ ಕೊಡುವಂತೆ ವರನ ಪೋಷಕರು ಒತ್ತಾಯಿಸಿದ್ದರು. ಮದುವೆ ದಿನ ಚಿನ್ನ ಕೊಟ್ಟಿಲ್ಲ ಎಂದು ಊಟದ ನೆಪ ಹೇಳಿ ಗಲಾಟೆ ತೆಗೆದು ಮದುವೆ ಬೇಡ ಎಂದು ಬಿಟ್ಟು ಹೋಗಿದ್ದಾರೆ ಎಂದು ವಧುವಿನ ಪೋಷಕರು ಆರೋಪಿಸಿದ್ದಾರೆ.
ವರನ ಕಡೆಯವರು ಶನಿವಾರ ಸಂಜೆಯೇ ತುಮಕೂರಿನಿಂದ ಮಂಟಪಕ್ಕೆ ಆಗಮಿಸಿದ್ದರು. ಮದುವೆಯ ಹಿಂದಿನ ದಿನ ಚಪ್ಪರ ಶಾಸ್ತ್ರದಲ್ಲಿ ವರ ಕಡೆಯವರಿಗೆ ಊಟದಲ್ಲಿ ಸಿಹಿತಿಂಡಿ ನೀಡಿಲ್ಲ, ಎಂದು ಸಣ್ಣ ಗಲಾಟೆ ತೆಗೆದಿದ್ದಾರೆ. ನಂತರ ಈ ಮದುವೆ ಗಲಾಟೆಯು ಪೊಲೀಸ್ ಠಾಣೆಯ ಮೆಟ್ಟಿಲೇರಿದಾಗ, ರಾತ್ರಿ ಮದುವೆಯೇ ಬೇಡ ಎಂದು ಉಂಗುರ ಕಳಚಿಕೊಟ್ಟಿದ್ದಾನೆ.
ಇದೆಲ್ಲ ಘಟನೆಯಿಂದ ಬೇಸತ್ತ ವಧು ಕೂಡ ಈ ಮದುವೆಯೇ ಬೇಡ, ಈಗಲೇ ಈ ರೀತಿ ವರ್ತಿಸುವ ಗಂಡು ನನಗೂ ಬೇಡಪ್ಪಾ ಎಂದು ಪೊಲೀಸರೆದುರು ಹೇಳಿಕೆ ನೀಡಿದ್ದಾಳೆ. ಹೀಗಾಗಿ ಗುರು ಹಿರಿಯರೆಲ್ಲರೂ ಸೇರಿ ನಿಶ್ಚಯಿಸಿದ ವಿವಾಹ ಕಾರ್ಯವು ಸಿಹಿ ತಿಂಡಿ ವಿಚಾರವಾಗಿ ಮುರಿದು ಬಿದ್ದಿದೆ.
ಇದನ್ನೂ ಓದಿ: 12 ತಾಸು, 6 ಮಷೀನ್‌ಗಳಿಂದ 30 ಕೋಟಿ ರೂ. ಎಣಿಕೆ; ಕಾಂಗ್ರೆಸ್ ಮುಖಂಡನ ಪಿಎ ಮನೆಯಲ್ಲಿ ಹಣದ ರಾಶಿ!
Namma Metro : ದೆಹಲಿ ನಂತರ ನಮ್ಮ ಮೆಟ್ರೋದಲ್ಲೂ ಯುವಕ-ಯುವತಿಯ ಡಿಂಗ್ ಡಾಂಗ್!
ಬೆಂಗಳೂರು: ನಮ್ಮ ಮೆಟ್ರೋ ರೈಲಿನ ಬಾಗಿಲ ಬಳಿ ಬಿಗಿದಪ್ಪಿ ನಿಂತಿದ್ದ ಯುವಕ- ಯುವತಿಯ ವರ್ತನೆಗೆ ಸಹ ಪ್ರಯಾಣಿಕರು ಕಿಡಿಕಾರಿದ್ದಾರೆ. ದೆಹಲಿ ಮೆಟ್ರೋದಂತೆ ಬೆಂಗಳೂರಲ್ಲಿ ನಮ್ಮ ಮೆಟ್ರೋ ಪರಿವರ್ತನೆ ಆಗುತ್ತಿದೆ ಎಂದು ಅಸಮಾಧಾನ (Namma Metro) ತೋರಿದ್ದಾರೆ.
ಸಾರ್ವಜನಿಕರ ಎದುರಿನಲ್ಲಿ ಈ ರೀತಿ ಅಸಭ್ಯವಾಗಿ ವರ್ತನೆ ಮಾಡುತ್ತಿರುವುದಕ್ಕೆ ಆಕ್ರೋಶಗಳು ಕೇಳಿ ಬಂದಿವೆ. ಸಹ ಪ್ರಯಾಣಿಕರೊಬ್ಬರು ಯುವಕ-ಯುವತಿಯ ವಿಡಿಯೊ ಸೆರೆಹಿಡಿದು ಎಕ್ಸ್‌ನ ಸ್ಯಾಮ್ (Sam459om) ಎಂಬುವವರ ಖಾತೆಯಿಂದ ಪೋಸ್ಟ್ ಆಗಿದೆ. ಯುವಕನನ್ನು ಒಪ್ಪಿಕೊಂಡಿದ್ದ ಯುವತಿ ಅಕ್ಷರಶಃ ಚುಂಬಿಸುತ್ತಿದ್ದಳು ಎಂದು ಬಿಎಂಆರ್‌ಸಿಎಲ್, ನಮ್ಮ ಮೆಟ್ರೋ ಹಾಗೂ ನಗರ ಪೊಲೀಸರಿಗೆ ಟ್ಯಾಗ್ ಮಾಡಿ ದೂರು ನೀಡಿದ್ದಾರೆ. ಇತ್ತ ಬೆಂಗಳೂರು ನಗರ ಪೊಲೀಸರು ಈ ಬಗ್ಗೆ ಕ್ರಮವಹಿಸಲಾಗುವುದು, ಘಟನೆ ಸಂಬಂಧ ಮಾಹಿತಿ ನೀಡಿ ಎಂದು ರೀ ಟ್ವೀಟ್ ಮಾಡಿದ್ದಾರೆ.
ಈ ವಿಡಿಯೊ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆದ ಬೆನ್ನಲ್ಲೇ, ನೆಟ್ಟಿಗರಿಂದ ಮಿಶ್ರ ಪ್ರತಿಕ್ರಿಯೆ ಬಂದಿದೆ. ನಮ್ಮ ಮೆಟ್ರೋದಲ್ಲಿ ಮಕ್ಕಳು, ಶಾಲಾ-ಕಾಲೇಜು ವಿದ್ಯಾರ್ಥಿಗಳು ಸೇರಿ ಎಲ್ಲ ವಯೋಮಾನದವರು ಪ್ರಯಾಣಿಸುತ್ತಾರೆ. ಈ ರೀತಿಯ ನಡವಳಿಕೆಯು ಸರಿಯಲ್ಲ ಎಂದಿದ್ದಾರೆ.
Hey @OfficialBMRCL @NammaMetro_ @BlrCityPolice
— KPSB 52 (@Sam459om) May 5, 2024
what happening in Namma metro
slowly Bangalore metro are turning into Delhi metro
Take some action on them
The girl was literally kissing the boy pic.twitter.com/p3pdi2vM7I
ಕೆಲವರು ಪ್ರೀತಿ-ಪ್ರೇಮ, ಪ್ರಣಯವೆಲ್ಲ ಮನೆಯಲ್ಲಿದ್ದರೆ ಚೆನ್ನ ಎಂದಿದ್ದಾರೆ. ಹಾಗೇ, ಸಾರ್ವಜನಿಕ ಪ್ರದೇಶದಲ್ಲಿ ಹೀಗೆ ಮಾಡುವುದರಿಂದ ಉಳಿದವರಿಗೆ ಮುಜುಗರ ಆಗುತ್ತದೆ ಎಂದೂ ಹೇಳಿದ್ದಾರೆ. ಆದರೆ ಇನ್ನೂ ಕೆಲವರು. ಇದರಲ್ಲಿ ಅಸಭ್ಯ ವರ್ತನೆ ಏನಿದೆ. ಪರಸ್ಪರ ಅಪ್ಪಿಕೊಂಡು ನಿಂತಿದ್ದರಷ್ಟೇ. ಬೇರೆ ಯಾವುದೇ ತಪ್ಪು ಮಾಡಿಲ್ಲ ಎಂದಿದ್ದಾರೆ.
ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ