Site icon Vistara News

Murder Case : ಪತ್ನಿಗೆ ಗುಂಡು ಹಾರಿಸಿ ಕೊಂದು ಪೊಲೀಸರಿಗೆ ಶರಣಾದ ಪತಿ!

Murder case

ಕೊಡಗು: ಪತಿಯೇ ಪತ್ನಿಯನ್ನು ಗುಂಡಿಕ್ಕಿ ಹತ್ಯೆ (Murder case) ಮಾಡಿದ್ದಾನೆ. ಕೊಡಗಿನ (Kodagu news) ವಿರಾಜಪೇಟೆ ಸಮೀಪದ ಬೆಟೋಳಿಯಲ್ಲಿ ಈ ಘಟನೆ ನಡೆದಿದೆ. ಶಿಲ್ಪ (36)ಮೃತಪಟ್ಟ ದುರ್ದೈವಿ.

ನಾಯಕಂಡ ಬೋಪಣ್ಣ (45) ಎಂಬಾತನಿಂದ ಈ ಕೃತ್ಯ ನಡೆದಿದೆ. ಪತ್ನಿಯೊಂದು ಕೊಂದ ಬಳಿಕ ಬೋಪಣ್ಣ ಕೋವಿಯೊಂದಿಗೆ ಪೊಲೀಸ್ ಠಾಣೆಗೆ ಶರಣಾಗಿದ್ದಾನೆ. ಸ್ಥಳಕ್ಕೆ ವಿರಾಜಪೇಟೆ ಗ್ರಾಮಾಂತರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ.

ಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಸದ್ಯ ಆರೋಪಿಯನ್ನು ವಶಕ್ಕೆ ಪಡೆದುಕೊಂಡಿರುವ ಪೊಲೀಸರು ಈ ಸಂಬಂಧ ಪ್ರಕರಣ ದಾಖಲಿಸಿಕೊಂಡು, ತನಿಖೆಯನ್ನು ನಡೆಸುತ್ತಿದ್ದಾರೆ. ಈ ಹತ್ಯೆಗೆ ಬೆಟೋಳಿ ಗ್ರಾಮಸ್ಥರು ಬೆಚ್ಚಿಬಿದ್ದಿದ್ದಾರೆ.

ಇದನ್ನೂ ಓದಿ: Viral News: 25 ಬೆರಳುಗಳಿರುವ ಮಗು ಜನನ! ನೋಡಲು ಮುಗಿಬಿದ್ದ ಜನ

ರಸ್ತೆಯಲ್ಲಿ ಗೂಂಡಾಗಿರಿ, ಇನೋವಾ ಚಾಲಕನ ಮೇಲೆ ಫಾರ್ಚುನರ್‌ನಲ್ಲಿದ್ದ ತಂಡದಿಂದ ತೀವ್ರ ಹಲ್ಲೆ

ಬೆಂಗಳೂರು: ತಮ್ಮ ಐಷಾರಾಮಿ ಫಾರ್ಚುನರ್ ಕಾರು (Fortuner Car) ಹೋಗೋಕೆ ದಾರಿ ಬಿಡಲಿಲ್ಲ ಎಂದು ಬಾಡಿಗೆ ಇನೋವಾ ಕಾರಿನ (Innova Car) ಚಾಲಕನ ಮೇಲೆ ಒಂದು ತಂಡ ಯದ್ವಾತದ್ವಾ ಹಲ್ಲೆ (Assault Case) ನಡೆಸಿದ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ರಾಜಧಾನಿಯಲ್ಲಿ ನಡೆಯುತ್ತಿರುವ ರೋಡ್‌ ರೇಜ್‌ (Road Rage) ಪ್ರಕರಣಗಳಿಗೆ ಇದು ಇನ್ನೊಂದು ಸೇರ್ಪಡೆ.

ರಸ್ತೆಯಲ್ಲಿ ಸಿನಿಮೀಯ ರೀತಿಯಲ್ಲಿ ಚಾಲಕನ ಮೇಲೆ ತಂಡ ಹಲ್ಲೆ ನಡೆಸಿದೆ. ಕಾಲಿನಿಂದ ತುಳಿದು, ಕರಾಟೆ ಕಿಕ್‌ ನೀಡಿ ಡ್ರೈವರ್‌ನನ್ನು ಗಾಯಗೊಳಿಸಲಾಗಿದೆ. ಈ ಘಟನೆ ಬೊಮ್ಮನಹಳ್ಳಿಯಲ್ಲಿ ನಡೆದಿದೆ. ಫಾರ್ಚುನರ್ ಕಾರಿನಲ್ಲಿ ಇದ್ದ ಪುಂಡರ ಗುಂಪು, ಮುಂದೆ ಇದ್ದ ಇನೋವಾ ಕಾರು ಚಾಲಕ ತಮ್ಮ ವಾಹನ ಮುಂದೆ ಹೋಗಲು ಬಿಟ್ಟಿಲ್ಲ ಎಂದು ಆತನನ್ನು ಹೊರಗೆಳೆದು ಅವನ ಮೇಲೆ ಹಲ್ಲೆ ನಡೆಸಿದೆ.

ಈ ಬಗ್ಗೆ ಎಕ್ಸ್‌ನಲ್ಲಿ ಡಾ. ಪ್ರಜ್ವಿತ್ ರೈ ಎಂಬವರು ಪೋಸ್ಟ್ ಮಾಡಿ ಪೊಲೀಸರಿಗೆ ದೂರು ನೀಡಿದ್ದಾರೆ. ಅಸಹಾಯಕನ ಮೇಲೆ ಹೀಗೆ ಹಲ್ಲೆ ಮಾಡಲಾಗಿದೆ. ಈ ರೀತಿ ಅಸಹಾಯಕರ ಮೇಲೆ ದರ್ಪ ತೋರುವವರಿಗೆ ಶಿಕ್ಷೆ ಆಗಬೇಕು ಎಂದು ಪೋಸ್ಟ್ ಹಾಕಿದ್ದಾರೆ. ಪೋಸ್ಟ್‌ಗೆ ʼದರ್ಶನ್ʼ ಮತ್ತು ʼರೇಣುಕಾಸ್ವಾಮಿʼ ಹೆಸರಿನ ಹ್ಯಾಶ್‌ಟ್ಯಾಗ್ ಹಾಕಲಾಗಿದೆ. ಸದ್ಯ ಘಟನೆ ಸಂಬಂಧ ಪೊಲೀಸರು ಮಾಹಿತಿ ಪಡೆದಿದ್ದಾರೆ.

Dengue fever: ಶಂಕಿತ ಡೆಂಗ್ಯು ಜ್ವರಕ್ಕೆ ಯುವತಿ ಸಾವು

ದಾವಣಗೆರೆ: ಜ್ವರದಿಂದ ಬಳಲುತ್ತಿದ್ದ ಯುವತಿಯೊಬ್ಬರು ಸಾವಿಗೀಡಾಗಿದ್ದಾರೆ. ಡೆಂಗ್ಯು ಜ್ವರದಿಂದ ಸಾವನ್ನಪ್ಪಿರುವ ಶಂಕೆ ಇದ್ದು, ಪರೀಕ್ಷಾ ವರದಿ ಬರಬೇಕಿದೆ.

ರೇಖಾ ಎನ್ (19) ಸಾವನ್ನಪ್ಪಿದ ಯುವತಿ. ದಾವಣಗೆರೆ ಜಿಲ್ಲೆಯ‌ ಜಗಳೂರ ಪಟ್ಟಣದ ರಾಮಾಲಯ ರಸ್ತೆ ನಿವಾಸಿ ರೇಖಾ ಕಳೆದ ಕೆಲ ದಿನಗಳ ಹಿಂದೆ ನಾಮಕರಣ ಶಾಸ್ತ್ರ ಕಾರ್ಯಕ್ರಮಕ್ಕೆ ಬಳ್ಳಾರಿಗೆ ತೆರಳಿದ್ದರು. ಅಲ್ಲಿ ತೀವ್ರ ಜ್ವರದಿಂದ ಬಳಲಿದ್ದ ರೇಖಾಗೆ ಬಳ್ಳಾರಿ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಸಾವಿಗೀಡಾಗಿದ್ದಾರೆ. ಬಳ್ಳಾರಿಯಲ್ಲಿ ಸಾವನ್ನಪ್ಪಿದ ಹಿನ್ನೆಲೆಯಲ್ಲಿ ಅಧಿಕೃತ ವರದಿ‌ ನಿರೀಕ್ಷಿಸಲಾಗಿದೆ. ಈ ಬಗ್ಗೆ ಜಗಳೂರು ತಾಲೂಕು ವೈದ್ಯಾಧಿಕಾರಿ ಡಾ. ವಿಶ್ವನಾಥ ಮಾಹಿತಿ ನೀಡಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Exit mobile version