ಕೊಡಗು ಜಿಲ್ಲೆಯ ಕುಶಾಲನಗರ ತಾಲೂಕಿನ ಸುಂಟಿಕೊಪ್ಪ ಠಾಣಾ ವ್ಯಾಪ್ತಿಯ ಸಂದೇಶ್ ಎಂಬುವವರಿಗೆ ಸೇರಿದ ಪನ್ಯ ಕಾಫಿ ತೋಟದಲ್ಲಿ ವ್ಯಕ್ತಿಯನ್ನು ಕೊಲೆ (murder case) ಮಾಡಿ, ಸುಟ್ಟು ಹಾಕಿದ ಪ್ರಕರಣವನ್ನು ಸುಂಟಿಕೊಪ್ಪ ಪೊಲೀಸರು ಕಾರ್ಯಾಚರಣೆ ನಡೆಸಿ ಭೇದಿಸಿದ್ದರು. ಹೀಗಾಗಿ ಸುಂಟಿಕೊಪ್ಪ ಪೊಲೀಸರ ಕಾರ್ಯವನ್ನು ಶ್ಲಾಘಿಸಿ ಪನ್ಯತೋಟದ ಪನ್ಯ ಎಫ್.ಸಿ. ತಂಡದ ಸದಸ್ಯರು ಸುಂಟಿಕೊಪ್ಪ ಠಾಣೆಗೆ ತೆರಳಿ ಕುಶಾಲನಗರ ವೃತ್ತ ನಿರೀಕ್ಷಕ ಮುದ್ದು ಮಾದೇವ, ಸುಂಟಿಕೊಪ್ಪದ ಠಾಣಾಧಿಕಾರಿ ಚಂದ್ರಶೇಖರ ಹಾಗೂ ಕಾರ್ಯಾಚರಣೆಯಲ್ಲಿ ಭಾಗಿಯಾದ ಸಿಬ್ಬಂದಿಯನ್ನು ಸನ್ಮಾನಿಸಿ ಗೌರವಿಸಿದರು.
ಯಾವುದೆ ಸುಳಿವು ಇಲ್ಲದಿರೋ ಈ ಪ್ರಕರಣವನ್ನು ಪೊಲೀಸರು ಭೇದಿಸಿರೋದಕ್ಕೆ ಪನ್ಯ ಎಫ್.ಸಿ ತಂಡ ಶ್ಲಾಘನೆ ವ್ಯಕ್ತಪಡಿಸಿತ್ತು. ಪನ್ಯ ಎಫ್.ಸಿ. ತಂಡದ ಸುಮಾರು 25ಕ್ಕೂ ಅಧಿಕ ಸದಸ್ಯರು ಪಾಲ್ಗೊಂಡಿದ್ದರು. ಗ್ರಾ.ಪಂ. ಸದಸ್ಯ ಪ್ರಸಾದ್ ಕುಟ್ಟಪ್ಪ ಅವರ ನೇತೃತ್ವದಲ್ಲಿ ಈ ಸನ್ಮಾನ ಕಾರ್ಯಕ್ರಮ ನಡೆಯಿತು
ಆಸ್ತಿಗಾಗಿ ಪ್ರಿಯಕರನ ಜತೆ ಸೇರಿ ಗಂಡನಿಗೆ ಚಟ್ಟ ಕಟ್ಟಿದ್ದಳು
ಕೊಡಗು: ಅಕ್ಟೋಬರ್ 8ರಂದು ಕೊಡಗಿನ ಸುಂಟಿಕೊಪ್ಪ ಸಮೀಪ ಸುಟ್ಟ ಸ್ಥಿತಿಯಲ್ಲಿ ವ್ಯಕ್ತಿಯೊಬ್ಬರ ಮೃತದೇಹ (Murder case) ಪತ್ತೆಯಾಗಿತ್ತು. ಪ್ರಕರಣ ದಾಖಲಿಸಿಕೊಂಡು ತನಿಖೆಗಿಳಿದ ಪೊಲೀಸರು ಪ್ರಕರಣವನ್ನು ಬೇಧಿಸಿದ್ದು, ತೆಲಂಗಾಣ ಮೂಲದ ಮೂವರು ಆರೋಪಿಗಳನ್ನು ಬಂಧಿಸಿದ್ದರು. ಪ್ರಮುಖ ಆರೋಪಿ ನಿಹಾರಿಕ (29), ಪಶು ವೈದ್ಯ ನಿಖಿಲ್ ಹಾಗೂ ಹರಿಯಾಣದ ಅಂಕುರ್ ಎಂಬುವವರು ಬಂಧಿತರು.
ಈ ಮೂವರು ರಿಯಲ್ ಎಸ್ಟೇಟ್ ಉದ್ಯಮಿ ರಮೇಶ್ (54) ಎಂಬಾತನನ್ನು ತೆಲಂಗಾಣದಲ್ಲಿ ಕೊಲೆ ಮಾಡಿ, ಕೊಡಗಿನಲ್ಲಿ ಸುಟ್ಟು ಹಾಕಿ ಕಾಲ್ಕಿತ್ತಿದ್ದರು. ಆಸ್ತಿಗಾಗಿ ನಿಹಾರಿಕ ಪ್ರಿಯಕರರ ಜತೆ ಸೇರಿ ತನ್ನ ಪತಿಯನ್ನೇ ಹತ್ಯೆ ಮಾಡಿದ್ದಳು. ಹತ್ಯೆ ಮಾಡಿ ನಂತರ ಕೊಡಗಿನ ಸುಂಟಿಕೊಪ್ಪದಲ್ಲಿ ಸುಟ್ಟು ಹಾಕಿದ್ದರು. ಪ್ರಕರಣ ಸಂಬಂಧ ಪೊಲೀಸರು ಸಿಸಿ ಕ್ಯಾಮೆರಾ ಸುಳಿವು ಆಧಾರಿಸಿ, ರೆಡ್ ಕಲರ್ ಬೆಂಜ್ ಕಾರಿನ ಹಿಂದೆ ಬಿದ್ದಿದ್ದರು. ಕಾರುಪತ್ತೆ ಮಾಡಿ ಆರೋಪಿಯನ್ನು ಬಂಧಿಸಲಾಗಿತ್ತು.
ನಿಹಾರಿಕ ತಾನು 10ನೇ ತರಗತಿಯಲ್ಲಿ ಇರುವಾಗಲೇ ಮದುವೆಯಾಗಿದ್ದಳು. ಎರಡು ಮಕ್ಕಳಾದ ಮೇಲೆ ಪತಿಗೆ ಡಿವೋಸ್ ಕೊಟ್ಟು ದೂರವಾಗಿದ್ದಳು. ಬಳಿಕ ಜೈಲಿನಲ್ಲಿದ್ದ ಅಂಕುರ್ ಎಂಬಾತನ ಪರಿಚಯವಾಗಿತ್ತು. ಈ ಅಂಕುರ್ ಮೂಲಕ ರಮೇಶ್‌ನ ಪರಿಚಯವಾಗಿ ಮದುವೆಯಾಗಿದ್ದಳು. ರಮೇಶ್ ರಿಯಲ್ ಎಸ್ಟೇಟ್ ಬ್ಯುಸಿನೆಸ್ ಮಾಡುತ್ತಿದ್ದರು. ಈ ನಡುವೆ ನಿಹಾರಿಕ, ನಿಖಿಲ್ ಜತೆಗೂ ಲಿವಿಂಗ್ ರಿಲೇಶನ್ ಶಿಪ್‌ನಲ್ಲಿ ಇದ್ದಳು.
ನಿಹಾರಿಕ ಅಂಕುರ್‌ನೊಂದಿಗೆ ಸೇರಿ ಆಸ್ತಿ ನೀಡುವಂತೆ ರಮೇಶ್‌ನಿಗೆ ಕಿರುಕುಳ ನೀಡುತ್ತಿದ್ದರು. ಆಸ್ತಿ ನೀಡದೇ ಇದ್ದದ್ದಕ್ಕೆ ಹೈದರಾಬಾದ್ ಸಮೀಪ ಹಗ್ಗದಿಂದ ಬಿಗಿದು ರಮೇಶ್‌ನ ಕೊಲೆ ಮಾಡಿದ್ದರು. ಕೊಲೆ ಮಾಡಿ ಬಳಿಕ ರಮೇಶ್‌ನ ಕಾರಿನಲ್ಲೇ ಆತನ ಅಪಾರ್ಟ್ಮೆಂಟ್‌ಗೆ ಹೋಗಿ ಹಣ, ಆಸ್ತಿ ದಾಖಲೆ ದೋಚಿದ್ದರು. ನಂತರ ಬೆಂಗಳೂರಿಗೆ ಬಂದು ಪೆಟ್ರೋಲ್ ಖರೀದಿಸಿ, ಕೊಡಗಿಗೆ ತಂದು ರಮೇಶ್ ಬಾಡಿಯನ್ನು ಸುಟ್ಟು ಹಾಕಿದ್ದರು. ಕೊಲೆ ಬಳಿಕ ಅಂಕುರ್ ದೆಹಲಿ, ಹರಿಯಾಣ ಅಂತ ಸುತ್ತಾಡಿದ್ದ.