ಮಡಿಕೇರಿ: ಮುಸ್ಲಿಂ ಪ್ರದೇಶಗಳಲ್ಲಿ ಸಾವರ್ಕರ್ ಫೋಟೊವನ್ನು (Savarkar Issue) ಯಾಕೆ ಹಾಕಬೇಕಿತ್ತು ಎಂಬ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿಕೆ ವಿರೋಧಿಸಿ ಅವರ ಕಾರಿನ ಮೇಲೆ ಮೊಟ್ಟೆ ಎಸೆದು ಪ್ರತಿಭಟಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಹತ್ತು ಮಂದಿ ಬಿಜೆಪಿ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದಿದ್ದು, ಅವರನ್ನು ಬಿಡುಗಡೆ ಮಾಡುವಂತೆ ಕಾರ್ಯಕರ್ತರು ಠಾಣೆಯ ಮುಂದೆ ಸೇರಿ ಒತ್ತಾಯಿಸುತ್ತಿದ್ದಾರೆ.
ಮಳೆಯಿಂದ ಹಾನಿಗೊಳಗಾದ ಪ್ರದೇಶಕ್ಕೆ ಭೇಟಿ ನೀಡಲು ವಿಪಕ್ಷ ನಾಯಕ ಸಿದ್ದರಾಮಯ್ಯ ಆಗಮಿಸಿದ ಸಂದರ್ಭದಲ್ಲಿ ಕುಶಾಲನಗರ ಬಳಿ ಗುಡ್ಡೆಹೊಸೂರುವಿನಲ್ಲಿ ಅವರ ಕಾರಿಗೆ ಮೊಟ್ಟೆ ಎಸೆದು ಪ್ರತಿಭಟನೆ ನಡೆಸಲಾಗಿತ್ತು.
ಈ ಪ್ರತಿಭಟನೆಗೆ ಸಂಬಂಧಿಸಿದಂತೆ ಗುರುವಾರ ಸಂಜೆ ಕುಶಾಲನಗರ ಪೊಲೀಸರು ಹತ್ತು ಬಿಜೆಪಿ ಕಾರ್ಯಕರ್ತರನ್ನು ವಶಕ್ಕೆ ಪಡೆದಿದ್ದರು. ಸುದ್ದಿ ತಿಳಿಯುತ್ತಿದ್ದಂತೆಯೇ ಹಿಂದೂ ಸಂಘಟನೆಯ ಕಾರ್ಯಕರ್ತರು ಠಾಣೆ ಎದುರು ಜಮಾಯಿಸಿದ್ದಾರೆ. ಶಾಸಕರಾದ ಅಪ್ಪಚ್ಚು ರಂಜನ್,ಕೆ.ಜಿ.ಬೋಪಯ್ಯ ಕೂಡ ಕುಶಾಲನಗರಕ್ಕೆ ಆಗಮಿಸಿದ್ದಾರೆ.
ಇದನ್ನೂ ಓದಿ| ಪ್ರತಿಭಟನೆಯ ಬಿಸಿ| ಸರಣಿ ಟ್ವೀಟ್ ಮಾಡಿ ಎಚ್ಚರಿಸಿದ ಸಿದ್ದರಾಮಯ್ಯ; ದೈಹಿಕ ವಿರೋಧ ಸಲ್ಲ ಎಂದು ಸಿಎಂ