ಕೊಡಗು: ಕೊಡಗಿನಲ್ಲಿ ಭೀಕರ ಜಲ ದುರಂತವೊಂದು (Water Tragedy) ಸಂಭವಿಸಿದೆ. ಕಾವೇರಿ ನದಿಯಲ್ಲಿ (Drowned in River Cauvery) ಮುಳುಗಿ ಮೂವರು ಯುವಕರು ಮೃತಪಟ್ಟಿದ್ದಾರೆ (Three youngsters dead). ಕೊಡಗು ಜಿಲ್ಲೆ (Kodagu News) ಕುಶಾಲ ನಗರ ಸಮೀಪದ ಕೂಡಿಗೆಯಲ್ಲಿ ಈ ದುರಂತ ಸಂಭವಿಸಿದೆ.
ಕುಶಾಲ ನಗರದ ಕೂಡಿಗೆಯಲ್ಲಿ ಕಾವೇರಿ ನದಿಗೆ ಈಜಲು ತೆರಳಿದ್ದ ಮೂವರು ಯುವಕರಾದ ವಿನೋದ್, ಸಚಿನ್, ಶ್ರೀನಿವಾಸ್ ಎಂಬ ಯುವಕರು ಮೃತಪಟ್ಟಿದ್ದಾರೆ.
ಈ ಮೂವರು ಯುವಕರು ಮುಳ್ಳುಸೋಗೆ, ಚಿಕ್ಕತ್ತೂರು, ಹೆಬ್ಬಾಲೆ ಮೂಲದದವರು ಎಂದು ತಿಳಿದುಬಂದಿದೆ. ಜತೆಯಾಗಿ ಈಜಲು ತೆರಳಿದ್ದ ಮೂವರು ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ಶಂಕೆ ಇದೆ.
ಸ್ಥಳಕ್ಕೆ ಕುಶಾಲನಗರ ಗ್ರಾಮಾಂತರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ದುಬಾರೆಯ ರ‍್ಯಾಫ್ಟಿಂಗ್ ಸಿಬಂದಿ ಹಾಗೂ ಅಗ್ನಿಶಾಮಕ ಸಿಬ್ಬಂದಿಗಳು ನಾಪತ್ತೆಯಾದವರ ಹುಡುಕಾಟ ನಡೆಸುತ್ತಿದ್ದಾರೆ. ಯುವಕರು ಒಂದೇ ಕಾರಿನಲ್ಲಿ ಬಂದಿದ್ದರು ಎನ್ನಲಾಗಿದೆ. ಕಾರು ನದಿಯ ಬದಿಯಲ್ಲಿ ನಿಂತಿದೆ.
ಸಿದ್ದಗಂಗಾ ಜಾತ್ರೆಗೆ ಬಂದಿದ್ದ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ; ಆರೋಪಿಗಳು ಅರೆಸ್ಟ್
ತುಮಕೂರು: ಸಿದ್ದಗಂಗಾ ಮಠದ ಜಾತ್ರೆಗೆ ಬಂದಿದ್ದ 17 ವರ್ಷದ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ (Physical Abuse) ನಡೆದಿದೆ. ಬಾಲಕಿಯು ತನ್ನ ಸ್ನೇಹಿತನೊಟ್ಟಿಗೆ ಬೆಟ್ಟದ ಬಳಿ ಕುಳಿತಿದ್ದಳು. ಅಲ್ಲಿಗೆ ಬಂದ ಮೂವರು ಕಿರಾತಕರು ಬಾಲಕಿಯನ್ನು ಬೆದರಿಸಿ ಲೈಂಗಿಕ ಕಿರುಕುಳ ನೀಡಿದ್ದಾರೆ.
ಸ್ನೇಹಿತನ ಜತೆಗೆ ಸಿದ್ದಗಂಗಾ ಮಠದ ಜಾತ್ರೆಗೆ ಬಾಲಕಿ ಬಂದಿದ್ದಳು. ಈ ವೇಳೆ ಮೂವರು ಕಿರಾತಕರು ಮೊಬೈಲ್‌ನಲ್ಲಿ ವಿಡಿಯೊವನ್ನು ರೆಕಾರ್ಡ್ ಮಾಡಿಕೊಂಡಿದ್ದಾರೆ. ಬಳಿಕ ಆ ವಿಡಿಯೊವನ್ನು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಮಾಡುವುದಾಗಿ ಬಾಲಕಿಗೆ ಬೆದರಿಕೆ ಹಾಕಿದ್ದಾರೆ. ಇದರಿಂದ ಬಾಲಕಿ ಭಯಗೊಂಡಿದ್ದಾಳೆ. ಈ ವೇಳೆ ಬಾಲಕಿಯನ್ನು ಬಲವಂತವಾಗಿ ಬೈಕ್‌ನಲ್ಲಿ ಕರೆದುಕೊಂಡು ಹೋಗಿದ್ದಾರೆ. ಬಳಿಕ ಮಠದ ಪಕ್ಕದಲ್ಲಿರುವ ಬಂಡೆಪಾಳ್ಯದ ರೂಂನಲ್ಲೇ ಅತ್ಯಾಚಾರ ಮಾಡಿದ್ದಾರೆ ಎನ್ನಲಾಗಿದೆ.
ಅತ್ಯಾಚಾರವೆಸಗಿದ ನಂತರ ಬಾಲಕಿಯನ್ನು ಮತ್ತೆ ಮಠದ ಹತ್ತಿರ ಕರೆತಂದು ಅಲ್ಲಿಂದ ಕಾಲ್ಕಿತ್ತಿದ್ದಾರೆ. ನಂತರ ಬಾಲಕಿಯ ಸ್ನೇಹಿತ ಆಸ್ಪತ್ರೆಗೆ ಸೇರಿಸಿದ್ದಾನೆ. ತುಮಕೂರು ಮಹಿಳಾ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿತ್ತು. ಅತ್ಯಾಚಾರದ ದೂರು ದಾಖಲಾಗುತ್ತಿದ್ದಂತೆ ಅಲರ್ಟ್ ಆದ ಪೊಲೀಸರು ಬಂಡೆಪಾಳ್ಯದಲ್ಲಿ ವಾಸವಿದ್ದ ಅಮೋಘ, ಹನುಮಂತ, ಪ್ರತಾಪ್ ಎಂಬ ಆರೋಪಿಗಳನ್ನು ಬಂಧಿಸಿದ್ದಾರೆ.
ಪೋಸ್ಕೋ ಕಾಯ್ದೆಯಡಿ ಪ್ರಕರಣ ದಾಖಲಿಸಿದ್ದು, ಆರೋಪಿಗಳನ್ನು ಗುರುವಾರ ಕೋರ್ಟ್‌ಗೆ ಹಾಜರು ಪಡಿಸುವ ಸಾಧ್ಯತೆ ಇದೆ. ಮೂವರನ್ನು ಬಂಧಿಸಿರುವ ಬಗ್ಗೆ ಗೃಹ ಸಚಿವ ಪರಮೇಶ್ವರ್ ಮಾಹಿತಿ ನೀಡಿದ್ದಾರೆ.