Site icon Vistara News

Yadgir News: ಸ್ವಾತಂತ್ರ್ಯ ಹೋರಾಟಗಾರರ ಹಿತಕಾಯಲು ಜಿಲ್ಲಾಡಳಿತ ಸದಾ ಬದ್ಧ: ಡಿಸಿ ಡಾ.ಸುಶೀಲಾ

Kodekal village freedom fighter Sangappa Mante was honored by the Yadgiri district administration

ಯಾದಗಿರಿ: ದೇಶದ ಸ್ವಾತಂತ್ರ್ಯಕ್ಕಾಗಿ ಹೋರಾಡಿದವರ ಇತಿಹಾಸವೇ ಅತ್ಯಂತ ರೋಚಕ ಮತ್ತು ಪ್ರೇರಣದಾಯಕವಾಗಿದೆ. ಜಿಲ್ಲಾಡಳಿತವು (District administration) ಸ್ವಾತಂತ್ರ್ಯ ಹೋರಾಟಗಾರರ (Freedom fighter) ಹಿತಕಾಯುವಲ್ಲಿ ಸದಾ ಬದ್ಧವಾಗಿರುತ್ತದೆ ಎಂದು ಜಿಲ್ಲಾಧಿಕಾರಿ ಡಾ.ಸುಶೀಲಾ ಬಿ. ತಿಳಿಸಿದರು.

ಕ್ವಿಟ್ ಇಂಡಿಯಾ ಚಳವಳಿಯ ವರ್ಷಾಚರಣೆ ಅಂಗವಾಗಿ ಜಿಲ್ಲೆಯ ಹುಣಸಗಿ ತಾಲೂಕಿನ ಕೊಡೇಕಲ್ ಗ್ರಾಮದಲ್ಲಿ ಸ್ವಾತಂತ್ರ್ಯ ಹೋರಾಟಗಾರ ಸಂಗಪ್ಪ ಮಂಟೆ ಅವರನ್ನು ಜಿಲ್ಲಾಡಳಿತದ ವತಿಯಿಂದ ಸನ್ಮಾನಿಸಿದ ಬಳಿಕ ಅವರು ಮಾತನಾಡಿದರು.

ಇದನ್ನೂ ಓದಿ: Hardik Pandya: ಸಿಕ್ಸರ್​ ಬಾರಿಸಿ ವಿರಾಟ್​ ಕೊಹ್ಲಿಯ ದಾಖಲೆ ಸರಿಗಟ್ಟಿದ ಹಾರ್ದಿಕ್​ ಪಾಂಡ್ಯ

ಬ್ರಿಟಿಷರ ವಿರುದ್ಧ ಹೋರಾಡಿ ಅವರ ದಾಸ್ಯದಿಂದ ಮುಕ್ತ ಮಾಡಿದ ಸ್ವಾತಂತ್ರ್ಯ ಸೇನಾನಿಗಳ ಆದರ್ಶ ವಿಚಾರಗಳನ್ನು ಇಂದಿನ ಯುವ ಪೀಳಿಗೆಯು ಮಾದರಿಯಾಗಿ ಸ್ವೀಕರಿಸಿ, ಬಲಿಷ್ಠ ಭಾರತ ನಿರ್ಮಾಣಕ್ಕೆ ಕೊಡುಗೆ ನೀಡಬೇಕು ಎಂದು ಹೇಳಿದರು.

ಸ್ವಾತಂತ್ರ್ಯ ಹೋರಾಟದಲ್ಲಿ ಭಾಗಿಯಾದ ಸಂಗಪ್ಪ ಅವರ ಯೋಗಕ್ಷೇಮವನ್ನು ವಿಚಾರಿಸಿದ ಜಿಲ್ಲಾಧಿಕಾರಿ, ಅವರಿಂದ ಸ್ವಾತಂತ್ರ್ಯ ಸಂಗ್ರಾಮದ ಸನ್ನಿವೇಶ, ಯೋಧರ ತ್ಯಾಗ ಬಲಿದಾನ ಇನ್ನಿತರ ವಿಷಯಗಳ ಕುರಿತು ಕುತೂಹಲದಿಂದ ಆಲಿಸಿದರು.‌

ಇದನ್ನೂ ಓದಿ: Viral Video : ಆಗಸದಲ್ಲಿ ಹಾರುವ ಮಹಿಳೆ! ಭಯವೇ ಇಲ್ಲದ ಇವರ ನೆಗೆತ ನೋಡಿ…

ಈ ಸಂದರ್ಭದಲ್ಲಿ ಹುಣಸಗಿ ತಹಸೀಲ್ದಾರ್‌ ಬಸಲಿಂಗಪ್ಪ ನಾಯ್ಕೋಡಿ ಹಾಗೂ ಸಿಬ್ಬಂದಿ, ಗ್ರಾಮಸ್ಥರು ಉಪಸ್ಥಿತರಿದ್ದರು.

Exit mobile version