Site icon Vistara News

Car Accident | ನಿಯಂತ್ರಣ ತಪ್ಪಿ ಕೆರೆಗೆ ಬಿದ್ದ ಕಾರು; ಚಾಲಕ ಪ್ರಾಣಾಪಾಯದಿಂದ ಪಾರು

car accidnet

ಕೋಲಾರ: ಇಲ್ಲಿನ ಮಾಲೂರು ತಾಲೂಕಿನ ಲಕ್ಕೂರು ಗ್ರಾಮದಲ್ಲಿ ಬೆಳಗಿನ ಜಾವ ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಕೆರೆಗೆ (Car Accident) ಬಿದ್ದ ಘಟನೆ ನಡೆದಿದೆ. ಅದೃಷ್ಟವಶಾತ್‌ ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದಾನೆ.

ಕಾರು ಅಪಘಾತವಾಗುತ್ತಿದ್ದಂತೆ (Car Accident) ಚಾಲಕ ಕಾರಿನಿಂದ ಜಿಗಿದು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಆದರೆ, ಅಷ್ಟರಲ್ಲಿ ಕಾರು ನೀರಿನಲ್ಲಿ ಮುಳುಗಿತ್ತು.

ವಿಷಯ ತಿಳಿದು ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಹಾಗೂ ಪೊಲೀಸರು, ಕಾರ್ಯಾಚರಣೆ ನಡೆಸಿದ್ದಾರೆ. ಬಳಿಕ ಕಾರಿನ ಇರುವಿಕೆಯನ್ನು ಪತ್ತೆ ಮಾಡಲಾಗಿದೆ. ಕಾರನ್ನು ಮೇಲೆತ್ತುವ ಸಂಬಂಧ ಕ್ರೈನ್‌ ಅನ್ನು ತರಿಸಿದ್ದು, ಮುಳುಗು ತಜ್ಞರು ಕಾರಿಗೆ ರೋಪ್‌ ಕಟ್ಟಲು ಸಹಕರಿಸಿದ್ದಾರೆ. ಬಳಿಕ ಕಾರನ್ನು ಕೆರೆಯಿಂದ ಮೇಲಕ್ಕೆತ್ತಲಾಗಿದೆ.

ಮಾಲೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಅತಿ ವೇಗದಲ್ಲಿರುವುದು ಹಾಗೂ ಮಳೆಯ ಕಾರಣಕ್ಕಾಗಿ ಕಾರು ಸ್ಕಿಡ್‌ ಆಗಿ ಅಪಘಾತ ಸಂಭವಿಸಿರಬಹುದು ಎಂದು ಅಂದಾಜಿಸಲಾಗಿದೆ.

ಇದನ್ನೂ ಓದಿ | ಕೆಎಸ್‌ಆರ್‌ಟಿಸಿ ಸಿಬ್ಬಂದಿಗೆ 50 ಲಕ್ಷ ರೂಪಾಯಿ ಅಪಘಾತ ವಿಮೆ; ಎಸ್‌ಬಿಐ ಜತೆ ಒಡಂಬಡಿಕೆಗೆ ಸಹಿ

Exit mobile version