ಕೋಲಾರ: ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದ ಉಂಟಾಗಿರುವ ಮಾಂಡೌಸ್ ಚಂಡಮಾರುತದ (Cyclone Mandous) ಪರಿಣಾಮ ಧಾರಾಕಾರ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ಕೋಲಾರ ಹಾಗೂ ಚಿಕ್ಕಬಳ್ಳಾಪುರ ಜಿಲ್ಲೆಗಳ ಸರ್ಕಾರಿ ಹಾಗೂ ಖಾಸಗಿ ಶಾಲಾ ಕಾಲೇಜುಗಳಿಗೆ ಡಿ.12ರಂದು ರಜೆ ಘೋಷಿಸಲಾಗಿದೆ. ಗಡಿ ಜಿಲ್ಲೆಗಳಲ್ಲಿ ಎಡೆ ಬಿಡದೆ ಮಳೆ ಸುರಿಯುತ್ತಿರುವುದರಿಂದ ಮಕ್ಕಳ ಹಿತ ದೃಷ್ಟಿಯಿಂದ ರಜೆ ಘೋಷಣೆ ಮಾಡಲಾಗಿದೆ.
ಇದನ್ನೂ ಓದಿ | Cyclone Mandous | ಮಾಂಡೌಸ್ ದುರ್ಬಲವಾಗಿದ್ದರೂ ನಿಲ್ಲುತ್ತಿಲ್ಲ ಮಳೆ; ಆಂಧ್ರಪ್ರದೇಶದಲ್ಲಿ ಒಬ್ಬ ಸಾವು, ಪ್ರವಾಹ ಪರಿಸ್ಥಿತಿ