Site icon Vistara News

Bengaluru-Chennai Expressway | ಬೆಂಗಳೂರು-ಚೆನ್ನೈ ಎಕ್ಸ್‌ಪ್ರೆಸ್‌ವೇ ವೈಮಾನಿಕ ಸಮೀಕ್ಷೆ ನಡೆಸಿದ ಗಡ್ಕರಿ

Bengaluru-Chennai Expressway

ಬೆಂಗಳೂರು: ₹16,730 ಕೋಟಿ ವೆಚ್ಚದಲ್ಲಿ ನಿರ್ಮಾಣ ಮಾಡಲಾಗುತ್ತಿರುವ, 262 ಕಿಮೀ 8 ಲೇನ್ ಬೆಂಗಳೂರು-ಚೆನ್ನೈ ಎಕ್ಸ್‌ಪ್ರೆಸ್ ವೇ (Bengaluru-Chennai Expressway) ಕಾಮಗಾರಿಯನ್ನು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರು ಗುರುವಾರ ವೈಮಾನಿಕ ಸಮೀಕ್ಷೆ ನಡೆಸಿದರು.

ಬೆಂಗಳೂರು-ಚೆನ್ನೈ ಎಕ್ಸ್‌ಪ್ರೆಸ್‌ ಹೆದ್ದಾರಿಯಲ್ಲಿ ಗಂಟೆಗೆ 120 ಕಿಮೀ ವೇಗದಲ್ಲಿ ವಾಹನಗಳನ್ನು ಚಲಾಯಿಸುವ ರೀತಿಯಲ್ಲಿ ವಿನ್ಯಾಸಗೊಳಿಸಲಾಗಿದೆ. ಅಲ್ಲದೇ, ಬೆಂಗಳೂರು ಮತ್ತು ಚೆನ್ನೈ ನಡುವಿನ ಅಂತರವನ್ನು 300 ಕಿಮೀ ನಿಂದ 262 ಕಿಮೀಗೆ ಕಡಿಮೆ ಮಾಡಲಾಗಿದೆ.

ಈ ಯೋಜನೆಯು ವಾಹನ ನಿರ್ವಹಣೆಗೆ ವೆಚ್ಚ-ಪರಿಣಾಮಕಾರಿಯಾಗಿದೆ. ಇಂಧನ ಬಳಕೆಯನ್ನು ಕಡಿಮೆ ಮಾಡುತ್ತದೆ. ಈ ಮರುನಿರ್ಮಾಣಗೊಂಡಿರುವ ಹೆದ್ದಾರಿಯಿಂದ ಬೆಂಗಳೂರು ಮತ್ತು ಚೆನ್ನೈನಲ್ಲಿನ ಆರ್ಥಿಕ ಚಟುವಟಿಕೆಗಳನ್ನು ಬಲಪಡಿಸುತ್ತದೆ. ಕರ್ನಾಟಕ ಮತ್ತು ಆಂಧ್ರಪ್ರದೇಶದ ಕೈಗಾರಿಕಾ ಕೇಂದ್ರಗಳನ್ನು ಚೆನ್ನೈ ಬಂದರಿಗೆ ಸಂಪರ್ಕಿಸುತ್ತದೆ.

ಬೆಂಗಳೂರು-ಚೆನ್ನೈ ಎಕ್ಸ್‌ಪ್ರೆಸ್‌ವೇ ಯೋಜನೆಯು ಈ 262 ಕಿಮೀ ವಿಸ್ತಾರವು ಬೆಂಗಳೂರು ರಿಂಗ್ ರಸ್ತೆಯನ್ನು ಚೆನ್ನೈ ಹೊರ ವರ್ತುಲ ರಸ್ತೆಯೊಂದಿಗೆ ಸಂಪರ್ಕಿಸುತ್ತದೆ. ಲಾಜಿಸ್ಟಿಕ್ ದಕ್ಷತೆಯನ್ನು ಹೆಚ್ಚಿಸುತ್ತಿದೆ. 16730 ಕೋಟಿ ವೆಚ್ಚದಲ್ಲಿ ಯೋಜನೆ ಅನುಷ್ಠಾನಗೊಳಿಸಲಾಗುತ್ತಿದ್ದು, ಕರ್ನಾಟಕ, ಆಂಧ್ರಪ್ರದೇಶ ಮತ್ತು ತಮಿಳುನಾಡು ಮೂಲಕ ಈ ರಸ್ತೆ ಹಾದುಹೋಗುತ್ತದೆ.

ವೈಮಾನಿಕ ಸಮೀಕ್ಷೆ ವೇಳೆ, ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರ ಜತೆಗೆ, ಕೋಲಾರ ಸಂಸದ ಎಸ್ ಮುನಿಸ್ವಾಮಿ, ಸಚಿವ ಸಿ ಸಿ ಪಾಟೀಲ್ ಸೇರಿದಂತೆ ಹಿರಿಯ ಅಧಿಕಾರಿಗಳ ಇದ್ದರು.

ಇದನ್ನೂ ಓದಿ | SM Krishna | ಬೆಂಗಳೂರು-ಮೈಸೂರು ದಶಪಥಕ್ಕೆ ನಾಲ್ವಡಿ ಕೃಷ್ಣರಾಜರ ಹೆಸರಿಡಿ: ಕೇಂದ್ರಕ್ಕೆ ಎಸ್ ಎಂ ಕೃಷ್ಣ ಒತ್ತಾಯ

Exit mobile version