HD Kumaraswamy road show | ಕೋಲಾರದಲ್ಲಿ ಜೆಡಿಎಸ್‌ನ ಪಂಚರತ್ನ ಯಾತ್ರೆ ಇಂದು ಸಂಚಾರ - Vistara News

ಕೋಲಾರ

HD Kumaraswamy road show | ಕೋಲಾರದಲ್ಲಿ ಜೆಡಿಎಸ್‌ನ ಪಂಚರತ್ನ ಯಾತ್ರೆ ಇಂದು ಸಂಚಾರ

ಜೆಡಿಎಸ್‌ ಆಯೋಜಿಸಿರುವ ಪಂಚರತ್ನ ರಥಯಾತ್ರೆ ಇಂದು ಕೋಲಾರದಲ್ಲಿ ಸಂಚರಿಸಲಿದ್ದು, ಪಕ್ಷದ ಕಾರ್ಯಕರ್ತರು ಸಂಭ್ರಮದಿಂದ (HD Kumaraswamy road show) ಸ್ವಾಗತಿಸಿದ್ದಾರೆ.

VISTARANEWS.COM


on

Former CM HD Kumaraswamy is critically ill, Admitted to Manipal Hospital in bangalore
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಕೋಲಾರ: ಕೋಲಾರದ ಮಾಲೂರು ಪಟ್ಟಣಕ್ಕೆ ಜೆಡಿಎಸ್‌ನ ಪಂಚರತ್ನ ರಥಯಾತ್ರೆ (HD Kumaraswamy road show) ಆಗಮಿಸಿದೆ.

ಮಾಲೂರು ಪಟ್ಟಣದಲ್ಲಿ ತೆರದ ವಾಹನದಲ್ಲಿ HDK ರೋಡ್ ಶೋ ನಡೆಸಿದ್ದಾರೆ. ಅಭಿಮಾನಿಗಳಿಂದ ರಥಯಾತ್ರೆಗೆ ಅದ್ದೂರಿ ಸ್ವಾಗತ ಕೋರಲಾಯಿತು. ಅಭಿಮಾನಿಗಳು ಕ್ರೇನ್ ಮೂಲಕ ಬೃಹತ್ ಹೂವಿನ ಹಾರ ಹಾಕಿ, ಹೂ ಮಳೆ ಸುರಿಸಿದರು.

ತೆನೆ ಹೊತ್ತ ಮಹಿಳೆಯರಿಂದಲೂ ಭವ್ಯ ಸ್ವಾಗತ ಕೋರಲಾಯಿತು. ಮಾಲೂರು ಪಟ್ಡಣದ ಕೆಂಪೇಗೌಡ ವೃತ್ತದಲ್ಲಿ ಎಚ್‌ಡಿಕೆ ಭಾಷಣ ಮಾಡಿದರು. ಮಾಲೂರು ಪಟ್ಟಣದ ಜಾಮಿಯಾ ಮಸೀದಿಗೆ ಭೇಟಿ ನೀಡಿದರು. ಮುಸ್ಲಿಂ ಸಮುದಾಯದ ಮುಖಂಡರ ಜೊತೆಗೆ ಚರ್ಚೆ ನಡೆಸಿದರು. ಮಾಲೂರು ತಾಲ್ಲೂಕು ಶಿವಾರಪಟ್ಟಣ ಗ್ರಾಮದಲ್ಲಿ ಗ್ರಾಮ ವಾಸ್ತವ್ಯ ಮಾಡಿದರು.

ಪಂಚರತ್ನ ರಥಯಾತ್ರೆ ಮೂರನೇ ದಿನ ಮುಕ್ತಾಯವಾಗಿದ್ದು, ನನಗೆ ಜ್ವರ ಬಂದಿದೆಯೆಂಬ ಮಾಹಿತಿ ಹರಿದಾಡುತ್ತಿರುವ ಸುದ್ದಿ ಬಂದಿದೆ. ಆದರೆ ನನಗೆ ಯಾವುದೆ ಜ್ವರ ಬಂದಿಲ್ಲ, ಇನ್ನೂ 100 ದಿನಗಳ ಕಾಲ ಸಂಚರಿಸಿದ್ರು, ನಿಮ್ಮ ಆಶೀರ್ವಾದದಿಂದ ಯಾವುದೇ ಸಮಸ್ಯೆ ಎದುರಾಗದು ಎಂದು ಮಾಜಿ ಸಿಎಂ ಕುಮಾರಸ್ವಾಮಿಯವರು ತಿಳಿಸಿದರು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಮಳೆ

Karnataka Weather : ಕರಾವಳಿಯಲ್ಲಿ ಮುಂಗಾರು ಪ್ರಬಲ; ಮುಂದುವರಿಯಲಿದೆ ಮಳೆ ಅಬ್ಬರ

Karnataka Weather Forecast : ಕರಾವಳಿ ಭಾಗದಲ್ಲಿ ಮಳೆ ಅಬ್ಬರ (Rain News) ಮುಂದುವರಿದಿದೆ. ವೀಕೆಂಡ್‌ನಲ್ಲೂ ವ್ಯಾಪಕ ಮಳೆಯಾಗುವ ಎಚ್ಚರಿಕೆ ಇದ್ದು, ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್‌ (Yellow alert) ನೀಡಲಾಗಿದೆ.

VISTARANEWS.COM


on

By

karnataka weather Forecast
Koo

ಬೆಂಗಳೂರು: ರಾಜ್ಯಾದ್ಯಂತ ಭಾರಿ ಮಳೆಯೊಂದಿಗೆ (Rain News) ಪ್ರತ್ಯೇಕ ಸ್ಥಳಗಳಲ್ಲಿ ಗುಡುಗು ಮಿಂಚು ಸಹಿತ 30-40 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ನಿರೀಕ್ಷೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು (Karnataka Weather Forecast) ನೀಡಿದೆ.

ಕರ್ನಾಟಕ ಕರಾವಳಿಯಲ್ಲಿ ಸಾಧಾರಣದಿಂದ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಮಲೆನಾಡಿನಲ್ಲಿ ಚದುರಿದಂತೆ ಹಗುರದಿಂದ ಮಧ್ಯಮ ಮಳೆಯೊಂದಿಗೆ ಕೆಲವೊಮ್ಮೆ ವ್ಯಾಪಕ ಮಳೆಯಾಗುವ ಸಾಧ್ಯತೆ ಇದೆ. ದಕ್ಷಿಣ ಒಳನಾಡು ಹಾಗೂ ಉತ್ತರ ಒಳನಾಡಿನಲ್ಲಿ ಪ್ರತ್ಯೇಕವಾಗಿ ಚದುರಿದಂತೆ ಹಗುರದಿಂದ ಮಧ್ಯಮ ಮಳೆಯಾಗುವ ನಿರೀಕ್ಷೆಯಿದೆ.

ಉತ್ತರ ಒಳನಾಡಿನ ಬೀದರ್‌, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ಯಾದಗಿರಿ ಸುತ್ತಮುತ್ತ ಹಗುರದಿಂದ ಕೂಡಿದ ಮಳೆಯಾದರೆ, ಬೆಳಗಾವಿ, ಧಾರವಾಡ, ಬಾಗಲಕೋಟೆ ಮತ್ತು ವಿಜಯಪುರ ಜಿಲ್ಲೆಗಳಲ್ಲಿ ಚದುರಿದಂತೆ ಸಾಧಾರಣ ಮಳೆಯಾಗಲಿದೆ. ಬೆಳಗಾವಿ ಜಿಲ್ಲೆಯಲ್ಲಿ ಪ್ರತ್ಯೇಕವಾಗಿ ಭಾರಿ ಮಳೆಯಾಗುವ ನಿರೀಕ್ಷೆಯಿದೆ.

ದಕ್ಷಿಣ ಒಳನಾಡಿನ ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ಮೈಸೂರು ಸೇರಿದಂತೆ ರಾಮನಗರ, ತುಮಕೂರು, ವಿಜಯನಗರದಲ್ಲಿ ಸಣ್ಣ ಪ್ರಮಾಣದಲ್ಲಿ ಮಳೆಯಾಗಲಿದೆ.

ಮಲೆನಾಡಿನ ಚಿಕ್ಕಮಗಳೂರು, ಹಾಸನ, ಕೊಡಗಿನಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಶಿವಮೊಗ್ಗ ಜಿಲ್ಲೆಯಲ್ಲಿ ಭಾರಿ ಮಳೆಯಾಗುವ ನಿರೀಕ್ಷೆಯಿದೆ. ಕರಾವಳಿ ದಕ್ಷಿಣಕನ್ನಡ, ಉತ್ತರ ಕನ್ನಡ, ಉಡುಪಿಯಲ್ಲಿ ವ್ಯಾಪಕ ಸಾಧಾರಣದಿಂದ ಭಾರಿ ಮಳೆಯಾಗುವ ಸಾಧ್ಯತೆಯಿದೆ.

ಇದನ್ನೂ ಓದಿ: Karnataka Rain : ಭಾರಿ ಮಳೆಗೆ ಪಾತಾಳ ಸೇರಿದ ಬಾವಿ; ಅಲೆಗಳ ಹೊಡೆತಕ್ಕೆ ಸಮುದ್ರಪಾಲಾದ ಮನೆ

ಬೆಂಗಳೂರಲ್ಲಿ ತುಂತುರು ಮಳೆ

ಶನಿವಾರ ಬೆಂಗಳೂರು ಸುತ್ತಮುತ್ತ ತುಂತುರು ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಉಷ್ಣಾಂಶ 27 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ಉಷ್ಣಾಂಶ 21 ಡಿಗ್ರಿ ಸೆಲ್ಸಿಯಸ್ ಇರಲಿದೆ.

ಕರಾವಳಿಗೆ ಯೆಲ್ಲೋ ಅಲರ್ಟ್‌

ಗುಡುಗು ಸಹಿತ ಭಾರಿ ಮಳೆಯಾಗಲಿದ್ದು, 45-55 ಕಿ.ಮೀ ವೇಗದಲ್ಲಿ ಗಾಳಿ ಬೀಸಲಿದೆ. ಹೀಗಾಗಿ ಕರಾವಳಿಯ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಕರ್ನಾಟಕ ಕರಾವಳಿಯಲ್ಲಿ ಗಂಟೆಗೆ 35 ಕಿ.ಮೀ ನಿಂದ 45 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯಿದೆ. ಹೀಗಾಗಿ ಜುಲೈ 2 ರವರೆಗೆ ಮೀನುಗಾರರು ಸಮುದ್ರಕ್ಕೆ ತೆರಳದಂತೆ ಸೂಚಿಸಲಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಕರ್ನಾಟಕ

Congress government: ಕೈ ಶಾಸಕರಿಂದಲೇ ರಾಜ್ಯ ಸರ್ಕಾರ ಪತನವಾಗಲಿದೆ ಎಂದ ಆರ್.ಅಶೋಕ್‌

Congress government: ರಾಜ್ಯ ಸರ್ಕಾರ ಅವರ ಶಾಸಕರಿಂದಲೇ ಪತನವಾಗಲಿದೆ, ಇದರಲ್ಲಿ ನಮ್ಮ ಹಸ್ತಕ್ಷೇಪವಿರುವುದಿಲ್ಲ. ಈ ಸರ್ಕಾರ ಬಹಳ ದಿನ ಉಳಿಯಲ್ಲ ಎಂದು ವಿಪಕ್ಷ ನಾಯಕ ಆರ್‌.ಅಶೋಕ್‌ ಹೇಳಿದ್ದಾರೆ.

VISTARANEWS.COM


on

Congress government
Koo

ಕೋಲಾರ: ಡಿ.ಕೆ. ಸುರೇಶ್ ಅವರನ್ನು ಸೋಲಿಸಿ ಸಿದ್ದರಾಮಯ್ಯ ಅವರು ಸಿಎಂ ಸ್ಥಾನ (Congress government) ಭದ್ರಪಡಿಸಿಕೊಂಡಿದ್ದಾರೆ, ಈ ಹಿಂದೆ ಪರಮೇಶ್ವರ್ ಸೋಲಿಸಿ ಸಿಎಂ ಸ್ಥಾನ ಭದ್ರಪಡಿಸಿಕೊಂಡಿದ್ದರು. ಇದೀಗ ಅಣ್ಣ-ತಮ್ಮಂದಿರ ಕಾಟ ತಪ್ಪಿಸಲು, ಡಿ.ಕೆ. ಸುರೇಶ್‌ರನ್ನು ಸೋಲಿಸಿದ್ದಾರೆ. ಅದಕ್ಕೆ ಡಿಕೆಶಿ ಸಹ ಅವರದೇ ರೀತಿ ಚದುರಂಗದಾಟ ಆಡುತ್ತಿದ್ದು, ಸಿಎಂ ಸ್ಥಾನ ಬಿಟ್ಟುಕೊಡುವಂತೆ ಸಿದ್ದರಾಮಯ್ಯಗೆ ಸ್ವಾಮೀಜಿಗಳಿಂದ ಹೇಳಿಸಿದ್ದಾರೆ ಎಂದು ವಿಪಕ್ಷ ನಾಯಕ ಆರ್‌.ಅಶೋಕ್‌ ಹೇಳಿದ್ದಾರೆ.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯ ಸರ್ಕಾರ ಅವರ ಶಾಸಕರಿಂದಲೇ ಪತನವಾಗಲಿದೆ, ಇದರಲ್ಲಿ ನಮ್ಮ ಹಸ್ತಕ್ಷೇಪವಿರುವುದಿಲ್ಲ. ಡಿಸಿಎಂಗೆ ಎಕ್ಸ್ಪೈರಿ ಡೇಟ್‌ ಆಗಿದೆ. ಧರ್ಮಾತ್ಮನಾಗಿದ್ದರೆ ಸಿಎಂ ಸ್ಥಾನ ಬಿಟ್ಟುಕೊಡಿ ಎಂದು ಸ್ವಾಮೀಜಿ ಕೇಳಿದ್ದಾರೆ. ಹಾಗಾದರೆ ಸಿಎಂ ಪಾಪಾತ್ಮನಾ? ದಿನನಿತ್ಯ ಮೂರು ಡಿಸಿಎಂ ಹುದ್ದೆ ಸೃಷ್ಟಿಸಿ ಎಂಬ ಕೂಗು ಕೇಳಿಬರುತ್ತಿದೆ. ಈ ಸರ್ಕಾರ ಬಹಳ ದಿನ ಉಳಿಯಲ್ಲ, ಅವರ ಶಾಸಕರೇ ಸರ್ಕಾರವನ್ನು ಬೀಳಿಸುತ್ತಾರೆ. ಇಲ್ಲದಿದ್ದರೆ ಡಿ.ಕೆ. ಶಿವಕುಮಾರ್ ಅವರೇ ಸರ್ಕಾರವನ್ನು ಬೀಳಿಸುತ್ತಾರೆ ಎಂದ ತಿಳಿಸಿದರು.

ಇದನ್ನೂ ಓದಿ | CM Siddaramaiah: ನಿತಿನ್‌ ಗಡ್ಕರಿ ಭೇಟಿಯಾದ ಸಿಎಂ ಸಿದ್ದರಾಮಯ್ಯ; ಪ್ರಮುಖ ಹೆದ್ದಾರಿ ಯೋಜನೆಗಳ ಬಗ್ಗೆ ಚರ್ಚೆ

ವಾಲ್ಮೀಕಿ ನಿಗಮ ಹಗರಣದಲ್ಲಿ ಸಿದ್ದರಾಮಯ್ಯ ರಾಜೀನಾಮೆ ನೀಡುವವರೆಗೂ ಹೋರಾಟ; ಆರ್‌. ಅಶೋಕ್‌

ಕೋಲಾರ: ವಾಲ್ಮೀಕಿ ಅಭಿವೃದ್ಧಿ ನಿಗಮದ 187 ಕೋಟಿ ರೂ. ಹಗರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರೇ ಭಾಗಿಯಾಗಿದ್ದು, ಅವರು ಕೂಡಲೇ ರಾಜೀನಾಮೆ ನೀಡಬೇಕು ಎಂದು ಪ್ರತಿಪಕ್ಷ ನಾಯಕ ಆರ್‌. ಅಶೋಕ್‌ (R Ashok) ಆಗ್ರಹಿಸಿದರು.

ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣದ ವಿರುದ್ಧ ಬಿಜೆಪಿಯಿಂದ ಹಮ್ಮಿಕೊಂಡಿದ್ದ ಪ್ರತಿಭಟನೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಸಚಿವ ಬಿ. ನಾಗೇಂದ್ರ 20% ತಿಂದಿದ್ದಾರೆ. ಆದರೆ ಮುಖ್ಯಮಂತ್ರಿ ಸಿದ್ದರಾಮಯ್ಯ 80% ತಿಂದಿದ್ದಾರೆ ಎಂದು ಆರೋಪಿಸಿದ ಅವರು, ಆದ್ದರಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ ನೀಡಬೇಕು. ಈ ಕುರಿತು ಸದನದಲ್ಲೂ ಆಗ್ರಹಿಸುತ್ತೇವೆ. ಸಿಎಂ ರಾಜೀನಾಮೆ ನೀಡುವವರೆಗೂ ಹೋರಾಡುತ್ತೇವೆ ಎಂದು ತಿಳಿಸಿದರು.

ಕೂಲಿ ಮಾಡಿ ದುಡಿದು ಮದ್ಯ ಸೇವಿಸಲು ಹೋದರೆ ಅದಕ್ಕೂ ದರ ಏರಿಕೆ ಮಾಡಿದ್ದಾರೆ. ಶ್ರೀಮಂತರು ಕುಡಿಯುವ ಮದ್ಯದ ದರವನ್ನು ಇಳಿಕೆ ಮಾಡಿದ್ದಾರೆ. ರಾಜ್ಯದಲ್ಲಿ ಅಭಿವೃದ್ಧಿ ನಡೆಯುತ್ತಿಲ್ಲ. ಆದರೆ ಸೋನಿಯಾ ಗಾಂಧಿ ಮತ್ತು ರಾಹುಲ್‌ ಗಾಂಧಿ ಮಾತ್ರ ಅಭಿವೃದ್ಧಿಯಾಗುತ್ತಿದ್ದಾರೆ ಎಂದು ದೂರಿದರು.

ಇದನ್ನೂ ಓದಿ: Uttara Kannada News: ಕಾರವಾರದ ಎನ್.ಕೆ. ಬೈಲು ಸಂತ್ರಸ್ತರಿಗೆ ತಕ್ಷಣ ಪರಿಹಾರಕ್ಕೆ ಸೂಚನೆ

ರೈತರಿಗೆ 800 ಕೋಟಿ ರೂ. ಹಾಲಿನ ಪ್ರೋತ್ಸಾಹಧನ ನೀಡಬೇಕಿದೆ. ರೈತರು ಬರ ಪರಿಹಾರ, ಪ್ರೋತ್ಸಾಹಧನ ಇಲ್ಲದೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಸರ್ಕಾರಕ್ಕೆ ಕುಡಿಯುವ ನೀರು ಕೊಡಲು ಕೂಡ ಯೋಗ್ಯತೆ ಇಲ್ಲದೆ ಕಲುಷಿತ ನೀರು ಕುಡಿದು ಜನರು ಸತ್ತಿದ್ದಾರೆ. ಡೆಂಘೀ ರೋಗ ಹರಡುತ್ತಿದ್ದು, ಅದಕ್ಕೆ ಚಿಕಿತ್ಸೆ ನೀಡಲು ಸರ್ಕಾರದ ಬಳಿ ಹಣವಿಲ್ಲ. ಮುಂದಿನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಜನರು ಕಾಂಗ್ರೆಸ್‌ಗೆ ಬುದ್ಧಿ ಕಲಿಸಬೇಕು ಎಂದು ತಿಳಿಸಿದರು.

ತೈಲ ದರ ಏರಿಕೆಯಾಗಿ ಎಲ್ಲ ದರಗಳು ಏರಿದೆ. ಹಾಲು ಉತ್ಪಾದನೆ ಹೆಚ್ಚಳವಾದರೆ ಅದನ್ನು ಬೇರೆ ರೀತಿ ಬಳಸಿಕೊಳ್ಳಬಹುದು. ಅದನ್ನು ಬಿಟ್ಟು ಹಾಲಿನ ದರ ಏರಿಸಿದ್ದಾರೆ. ಇನ್ನು ಲಿಕ್ಕರ್‌ ದರ ಕೂಡ ಏರಿಸುತ್ತಾರೆ. ಅವೈಜ್ಞಾನಿಕ ಗ್ಯಾರಂಟಿಗಳನ್ನು ಜಾರಿ ಮಾಡಿ, ಅದಕ್ಕೆ ಹಣ ಹೊಂದಿಸಲು ಸಾಧ್ಯವಾಗದೆ ತೆರಿಗೆ ವಿಧಿಸಿ ಜನರ ರಕ್ತ ಹೀರುತ್ತಿದ್ದಾರೆ ಎಂದು ದೂರಿದರು.

Continue Reading

ಮಳೆ

Karnataka Weather : ಅಬ್ಬಬ್ಬಾ.. ಮುಲ್ಕಿಯಲ್ಲಿ 30 ಸೆಂ.ಮೀ ಮಳೆ ದಾಖಲು; ವಾರಾಂತ್ಯದಲ್ಲೂ ಭಾರಿ ವರ್ಷಧಾರೆ

Rain News : ಮುಲ್ಕಿ, ಉಡುಪಿ, ಭಾಗಮಂಡಲದಲ್ಲಿ ಭಾರಿ ಮಳೆಯಾಗಿದೆ. ವಾರಾಂತ್ಯದಲ್ಲೂ ಭಾರಿ ವರ್ಷಧಾರೆಯ (Heavy rain) ಎಚ್ಚರಿಕೆಯನ್ನು ಹವಾಮಾನ ಇಲಾಖೆ (Karnataka Weather Forecast) ನೀಡಿದೆ.

VISTARANEWS.COM


on

By

karnataka Weather Forecast
Koo

ಬೆಂಗಳೂರು: ಒಮ್ಮೆ ಬಾರಿ ಜೋರಾಗಿ ಮಳೆ (Heavy Rain) ಬಂದರೂ ಜನರಿಗೆ ಕಷ್ಟ ಕಷ್ಟ ಎನ್ನುವ ಪರಿಸ್ಥಿತಿ ಇದೆ. ಈ ನಡುವೆ ಎಂದಿಗಿಂತ ತುಸು ಜೋರಾಗಿ ಹಾಗೂ ಹೆಚ್ಚಾಗಿಯೇ ಮಳೆಯಾಗುತ್ತಿರುವುದು (Rain News) ಜನರನ್ನು ಹೈರಣಾಗಿಸಿದೆ. ಸದ್ಯ ಇನ್ನೊಂದು ವಾರಕ್ಕೂ ಮಳೆ ಎಚ್ಚರಿಕೆಯನ್ನು ಹವಾಮಾನ ಇಲಾಖೆ (Karnataka Weather Forecast) ನೀಡಿದೆ. ವಾರಾಂತ್ಯದಲ್ಲಿ ಕರಾವಳಿಯ ಪ್ರತ್ಯೇಕವಾಗಿ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಜತೆಗೆ ನಿರಂತರ ಗಾಳಿ ಬೀಸಲಿದ್ದು ಗಂಟೆಗೆ 40-50 ಕಿ.ಮೀನಲ್ಲಿ ವೇಗ ಇರಲಿದೆ. ಉಳಿದೆಡೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.

ಕರಾವಳಿ-ಮಲೆನಾಡಿನಲ್ಲಿ ವಿಪರೀತ ಮಳೆ

ನೈರುತ್ಯ ಮುಂಗಾರು ಕರಾವಳಿಯಲ್ಲಿ ಸಕ್ರಿಯವಾಗಿದ್ದು, ದಕ್ಷಿಣ ಒಳನಾಡಿನಲ್ಲಿ ಸಾಧಾರಣವಾಗಿತ್ತು. ಉತ್ತರ ಒಳನಾಡಿನಲ್ಲಿ ದುರ್ಬಲವಾಗಿತ್ತು. ಇನ್ನೂ ಅತಿ ಹೆಚ್ಚು ಮಳೆಯು ದಕ್ಷಿಣ ಕನ್ನಡದ ಮುಲ್ಕಿಯಲ್ಲಿ 30 ಸೆಂ.ಮೀ, ಉಡುಪಿ ಹಾಗೂ ಕೊಡಗಿನ ಭಾಗಮಂಡಲದಲ್ಲಿ ತಲಾ 21 ಸೆಂ.ಮೀ ಮಳೆಯಾಗಿದೆ.

ಮಂಗಳೂರು ವಿಮಾನ ನಿಲ್ದಾಣ , ಮಣಿ , ಕಾರ್ಕಳ, ಆಗುಂಬೆಯಲ್ಲಿ ತಲಾ 17 ಸೆಂ.ಮೀ, ಪಣಂಬೂರು , ಬೆಳ್ತಂಗಡಿ, ಹೊನ್ನಾವರ, ಧರ್ಮಸ್ಥಳದಲ್ಲಿ ತಲಾ 15 ಸೆಂ.ಮೀ ಮಳೆಯಾಗಿದೆ. ಶಿರಾಲಿ, ಕೋಟ, ಉಪ್ಪಿನಂಗಡಿ, ಕೊಟ್ಟಿಗೆಹಾರದಲ್ಲಿ ತಲಾ 14 ಸೆಂ.ಮೀ, ನಾಪೋಕ್ಲು13, ಪೊನ್ನಂಪೇಟೆ 12 ಸೆಂ.ಮೀ ಮಳೆಯಾಗಿದೆ. ಪುತ್ತೂರು , ಕೊಲ್ಲೂರು, ಸುಳ್ಯ, ಮೂರ್ನಾಡು, ವಿರಾಜಪೇಟೆಯಲ್ಲಿ 11 ಸೆಂ.ಮೀ, ಮಂಗಳೂರು 10 ಸೆಂ.ಮೀ, ಮಂಕಿ, ಕಳಸ, ಶೃಂಗೇರಿಯಲ್ಲಿ 9 ಸೆಂ.ಮೀ, ಕುಂದಾಪುರ, ಕುಮಟಾ, ಅಂಕೋಲಾದಲ್ಲಿ 8 ಸೆಂ.ಮೀ ಮಳೆಯಾಗಿರುವ ವರದಿ ಆಗಿದೆ.

ಗೋಕರ್ಣ, ಕೊಪ್ಪ6 ಸೆಂ.ಮೀ, ಸಿದ್ದಾಪುರ , ಜಯಪುರ 5 ಸೆಂ.ಮೀ, ಕದ್ರಾ , ತಾಳಗುಪ್ಪ , ಬಂಡೀಪುರದಲ್ಲಿ 4 ಸೆಂ.ಮೀ ಮಳೆಯಾಗಿದೆ. ಲೋಂಡಾ, ಕುಶಾಲನಗರ, ಸೋಮವಾರಪೇಟೆ, ಹಾರಂಗಿ, ಹುಣಸೂರಿನಲ್ಲಿ 3 ಸೆಂ.ಮೀ ಮಳೆಯಾಗಿದೆ. ಜೋಯಿಡಾ, ಯಲ್ಲಾಪುರ, ಬಾಳೆಹೊನ್ನೂರು, ಹುಂಚದಕಟ್ಟೆ , ಸರಗೂರು 2 ಸೆಂ.ಮೀ, ಮುಂಡಗೋಡ , ಕಾರವಾರ , ಬನವಾಸಿ, ಹಳಿಯಾಳ, ಕಿರವತ್ತಿ , ತ್ಯಾಗರ್ತಿ, ಹಾಸನ , ಕೃಷ್ಣರಾಜಸಾಗರ, ಆನವಟ್ಟಿ, ಎನ್ ಆರ್ ಪುರ, ಗುಂಡ್ಲುಪೇಟೆ, ನಂಜನಗೂಡು, ಕೆ ಆರ್ ನಗರದಲ್ಲಿ 1 ಸೆಂ.ಮೀ ಮಳೆಯಾಗಿದೆ.

ಇದನ್ನೂ ಓದಿ: Road Accident : ಅಂತ್ಯಸಂಸ್ಕಾರ ಮುಗಿಸಿ ಬರುತ್ತಿದ್ದ ದಂಪತಿ ಮೇಲೆ ಮುರಿದು ಬಿದ್ದ ಬೃಹತ್‌ ಮರ!

ಚಿಕ್ಕಮಗಳೂರಲ್ಲಿ ಭಾರಿ ಮಳೆಗೆ ರಸ್ತೆ ಕಾಣದೆ ನದಿಗೆ ಬಿದ್ದ ಕಾರು

ಭಾರಿ ಮಳೆಯಿಂದಾಗಿ ರಸ್ತೆ ಕಾಣದೆ ಕಾರೊಂದು ನದಿಗೆ ಬಿದ್ದಿದೆ. ಕಾರಿನಲ್ಲಿದ್ದ ಪ್ರಯಾಣಿಕರು ಅದೃಷ್ಟವಶಾತ್ ಪಾರಾಗಿದ್ದಾರೆ. ಜೂ 28ರಂದು ಚಿಕ್ಕಮಗಳೂರಿನ ಮೂಡಿಗೆರೆ ತಾಲೂಕಿನ ಬಣಕಲ್ ಬಳಿ ಘಟನೆ ನಡೆದಿದೆ. ನೋಡ ನೋಡುತ್ತಿದ್ದಂತೆ ‌ಕಾರು ಹೇಮಾವತಿ ನದಿಗೆ ಹಾರಿದೆ.

ರಾಷ್ಟ್ರೀಯ ಹೆದ್ದಾರಿಯಲ್ಲಿ ಮಳೆ ನೀರು ನಿಂತ ಹಿನ್ನೆಲೆಯಲ್ಲಿ ರಸ್ತೆ ಕಾಣದೆ ಕಾರು ನಿಯಂತ್ರಣ ತಪ್ಪಿರುವ ಶಂಕೆ ವ್ಯಕ್ತವಾಗಿದೆ. ಏಕಾಏಕಿ ಚಾಲಕನ ನಿಯಂತ್ರಣ ತಪ್ಪಿ ತಡೆಗೋಡೆಯಿಂದ ಜಿಗಿದು ನದಿಗೆ ಕಾರು ಬಿದ್ದಿದೆ. ಕಳೆದ ಎರಡು ತಿಂಗಳ ಹಿಂದೆ ನಾಲ್ವರು ಅಪಘಾತದಲ್ಲಿ ಮೃತಪಟ್ಟಿದ್ದರು. ಇದೀಗ ಇದೆ ಸ್ಥಳದಲ್ಲೇ ಮತ್ತೊಂದು ಅಪಘಾತ ಸಂಭವಿಸಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಕರ್ನಾಟಕ

R Ashok: ವಾಲ್ಮೀಕಿ ನಿಗಮ ಹಗರಣದಲ್ಲಿ ಸಿದ್ದರಾಮಯ್ಯ ರಾಜೀನಾಮೆ ನೀಡುವವರೆಗೂ ಹೋರಾಟ; ಆರ್‌. ಅಶೋಕ್‌

R Ashok: ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಸಚಿವ ಬಿ.ನಾಗೇಂದ್ರ 20% ತಿಂದಿದ್ದಾರೆ. ಆದರೆ ಮುಖ್ಯಮಂತ್ರಿ ಸಿದ್ದರಾಮಯ್ಯ 80% ತಿಂದಿದ್ದಾರೆ ಎಂದು ಆರೋಪಿಸಿದ ಪ್ರತಿಪಕ್ಷ ನಾಯಕ ಆರ್‌. ಅಶೋಕ್‌, ಆದ್ದರಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ ನೀಡಬೇಕು. ಈ ಕುರಿತು ಸದನದಲ್ಲೂ ಆಗ್ರಹಿಸುತ್ತೇವೆ. ಸಿಎಂ ರಾಜೀನಾಮೆ ನೀಡುವವರೆಗೂ ಹೋರಾಡುತ್ತೇವೆ ಎಂದು ಅವರು ತಿಳಿಸಿದ್ದಾರೆ.

VISTARANEWS.COM


on

Valmiki Development Corporation Scam R. Ashok demands CM Siddaramaiah resignation
Koo

ಕೋಲಾರ: ವಾಲ್ಮೀಕಿ ಅಭಿವೃದ್ಧಿ ನಿಗಮದ 187 ಕೋಟಿ ರೂ. ಹಗರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರೇ ಭಾಗಿಯಾಗಿದ್ದು, ಅವರು ಕೂಡಲೇ ರಾಜೀನಾಮೆ ನೀಡಬೇಕು ಎಂದು ಪ್ರತಿಪಕ್ಷ ನಾಯಕ ಆರ್‌. ಅಶೋಕ್‌ (R Ashok) ಆಗ್ರಹಿಸಿದರು.

ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣದ ವಿರುದ್ಧ ಬಿಜೆಪಿಯಿಂದ ಹಮ್ಮಿಕೊಂಡಿದ್ದ ಪ್ರತಿಭಟನೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಸಚಿವ ಬಿ. ನಾಗೇಂದ್ರ 20% ತಿಂದಿದ್ದಾರೆ. ಆದರೆ ಮುಖ್ಯಮಂತ್ರಿ ಸಿದ್ದರಾಮಯ್ಯ 80% ತಿಂದಿದ್ದಾರೆ ಎಂದು ಆರೋಪಿಸಿದ ಅವರು, ಆದ್ದರಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ ನೀಡಬೇಕು. ಈ ಕುರಿತು ಸದನದಲ್ಲೂ ಆಗ್ರಹಿಸುತ್ತೇವೆ. ಸಿಎಂ ರಾಜೀನಾಮೆ ನೀಡುವವರೆಗೂ ಹೋರಾಡುತ್ತೇವೆ ಎಂದು ತಿಳಿಸಿದರು.

ಕಾಂಗ್ರೆಸ್‌ ಸರ್ಕಾರ ಉಚಿತಗಳ ಹೆಸರಲ್ಲಿ ಬೆಲೆ ಏರಿಕೆ ಮಾಡಿದೆ. ಹಾಲಿನ ಬೆಲೆ ಏರಿಕೆ ಮಾಡಿದ್ದು ಏಕೆ ಎಂದು ಪ್ರಶ್ನೆ ಮಾಡಿದರೆ ಹೆಚ್ಚು ಹಾಲು ನೀಡಿದ್ದೇವೆ ಎನ್ನುತ್ತಾರೆ. ಆದರೆ ಹೆಚ್ಚಾದ ಹಣವನ್ನು ರೈತರಿಗೆ ಕೊಡುವುದಿಲ್ಲ. ಬಡವರು ಕೂಲಿ ಮಾಡಿ ದುಡಿದು ಮದ್ಯ ಸೇವಿಸಲು ಹೋದರೆ ಅದಕ್ಕೂ ದರ ಏರಿಕೆ ಮಾಡಿದ್ದಾರೆ. ಶ್ರೀಮಂತರು ಕುಡಿಯುವ ಮದ್ಯದ ದರವನ್ನು ಇಳಿಕೆ ಮಾಡಿದ್ದಾರೆ. ರಾಜ್ಯದಲ್ಲಿ ಅಭಿವೃದ್ಧಿ ನಡೆಯುತ್ತಿಲ್ಲ. ಆದರೆ ಸೋನಿಯಾ ಗಾಂಧಿ ಮತ್ತು ರಾಹುಲ್‌ ಗಾಂಧಿ ಮಾತ್ರ ಅಭಿವೃದ್ಧಿಯಾಗುತ್ತಿದ್ದಾರೆ ಎಂದು ದೂರಿದರು.

ಇದನ್ನೂ ಓದಿ: Uttara Kannada News: ಕಾರವಾರದ ಎನ್.ಕೆ. ಬೈಲು ಸಂತ್ರಸ್ತರಿಗೆ ತಕ್ಷಣ ಪರಿಹಾರಕ್ಕೆ ಸೂಚನೆ

ರೈತರಿಗೆ 800 ಕೋಟಿ ರೂ. ಹಾಲಿನ ಪ್ರೋತ್ಸಾಹಧನ ನೀಡಬೇಕಿದೆ. ರೈತರು ಬರ ಪರಿಹಾರ, ಪ್ರೋತ್ಸಾಹಧನ ಇಲ್ಲದೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಸರ್ಕಾರಕ್ಕೆ ಕುಡಿಯುವ ನೀರು ಕೊಡಲು ಕೂಡ ಯೋಗ್ಯತೆ ಇಲ್ಲದೆ ಕಲುಷಿತ ನೀರು ಕುಡಿದು ಜನರು ಸತ್ತಿದ್ದಾರೆ. ಡೆಂಘೀ ರೋಗ ಹರಡುತ್ತಿದ್ದು, ಅದಕ್ಕೆ ಚಿಕಿತ್ಸೆ ನೀಡಲು ಸರ್ಕಾರದ ಬಳಿ ಹಣವಿಲ್ಲ. ಮುಂದಿನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಜನರು ಕಾಂಗ್ರೆಸ್‌ಗೆ ಬುದ್ಧಿ ಕಲಿಸಬೇಕು ಎಂದು ತಿಳಿಸಿದರು.

ತೈಲ ದರ ಏರಿಕೆಯಾಗಿ ಎಲ್ಲ ದರಗಳು ಏರಿದೆ. ಹಾಲು ಉತ್ಪಾದನೆ ಹೆಚ್ಚಳವಾದರೆ ಅದನ್ನು ಬೇರೆ ರೀತಿ ಬಳಸಿಕೊಳ್ಳಬಹುದು. ಅದನ್ನು ಬಿಟ್ಟು ಹಾಲಿನ ದರ ಏರಿಸಿದ್ದಾರೆ. ಇನ್ನು ಲಿಕ್ಕರ್‌ ದರ ಕೂಡ ಏರಿಸುತ್ತಾರೆ. ಅವೈಜ್ಞಾನಿಕ ಗ್ಯಾರಂಟಿಗಳನ್ನು ಜಾರಿ ಮಾಡಿ, ಅದಕ್ಕೆ ಹಣ ಹೊಂದಿಸಲು ಸಾಧ್ಯವಾಗದೆ ತೆರಿಗೆ ವಿಧಿಸಿ ಜನರ ರಕ್ತ ಹೀರುತ್ತಿದ್ದಾರೆ ಎಂದು ದೂರಿದರು.

ಮರ್ಯಾದೆ ಇದ್ದಿದ್ದರೆ ರಾಜೀನಾಮೆ ಕೊಡಬೇಕಿತ್ತು

ಒಕ್ಕಲಿಗ ಸ್ವಾಮೀಜಿಯವರು ಡಿ.ಕೆ. ಶಿವಕುಮಾರ್‌ ಅವರನ್ನು ಮುಖ್ಯಮಂತ್ರಿ ಮಾಡಲು ಹೇಳಿದ್ದಾರೆ. ಸಿದ್ದರಾಮಯ್ಯ ಧರ್ಮಾತ್ಮ ಅಲ್ಲ ಎಂದೇ ಸ್ವಾಮೀಜಿ ಪರೋಕ್ಷವಾಗಿ ಹೇಳಿದ್ದರೂ, ಡಿ.ಕೆ.ಶಿವಕುಮಾರ್‌ ಮೌನವಾಗಿದ್ದರು. ಸಿದ್ದರಾಮಯ್ಯ ಚಾಕು ಹಾಕಿದರೆ, ಡಿ.ಕೆ. ಶಿವಕುಮಾರ್‌ ಚೂರಿ ಹಾಕುತ್ತಾರೆ. ಮಾನ ಮರ್ಯದೆ ಇದ್ದಿದ್ದರೆ ಸಿದ್ದರಾಮಯ್ಯ ವೇದಿಕೆಯಲ್ಲೇ ರಾಜೀನಾಮೆ ನೀಡಿ ಹೋಗಬೇಕಿತ್ತು ಎಂದು ಟೀಕಿಸಿದರು.

ಇದನ್ನೂ ಓದಿ: Bengaluru Power Cut: ಬೆಂಗಳೂರು ನಿವಾಸಿಗಳೇ ಗಮನಿಸಿ; ಜೂ.29ರಂದು ಈ ಪ್ರದೇಶಗಳಲ್ಲಿ ಕರೆಂಟ್‌ ಇರಲ್ಲ

ಸಿಎಂ ಸಿದ್ದರಾಮಯ್ಯ, ಡಿ.ಕೆ. ಶಿವಕುಮಾರ್‌ ಕಾಟದಿಂದ ತಪ್ಪಿಸಿಕೊಳ್ಳಲು ಡಿ.ಕೆ. ಸುರೇಶ್‌ ಅವರನ್ನು ಸೋಲಿಸಿದ್ದಾರೆ. ಅದಕ್ಕೆ ಪ್ರತಿಯಾಗಿ ಡಿ.ಕೆ. ಶಿವಕುಮಾರ್‌ ಸ್ವಾಮೀಜಿ ಕೈಯಲ್ಲಿ ಹೇಳಿಕೆ ಕೊಡಿಸಿದ್ದಾರೆ. ಇದರ ನಡುವೆ ಮೂರು ಡಿಸಿಎಂ ಬೇಕೆಂದು ಸಚಿವರು ಹೇಳುತ್ತಿದ್ದಾರೆ. ಕಾಂಗ್ರೆಸ್‌ ಶಾಸಕರ ಶಾಪದಿಂದಲೇ ಸರ್ಕಾರ ಬೀಳಲಿದೆ ಎಂದರು.

Continue Reading
Advertisement
karnataka weather Forecast
ಮಳೆ51 seconds ago

Karnataka Weather : ಕರಾವಳಿಯಲ್ಲಿ ಮುಂಗಾರು ಪ್ರಬಲ; ಮುಂದುವರಿಯಲಿದೆ ಮಳೆ ಅಬ್ಬರ

Bridge Collapse
ದೇಶ4 mins ago

Bridge Collapse: ಬಿಹಾರದಲ್ಲಿ ಮತ್ತೊಂದು ನಿರ್ಮಾಣ ಹಂತದ ಸೇತುವೆ ಕುಸಿತ; 9 ದಿನದಲ್ಲಿ 5ನೇ ಪ್ರಕರಣ!

Muhammad Usman
ಪ್ರಮುಖ ಸುದ್ದಿ2 hours ago

Muhammad Usman : ಅಂತಾರಾಷ್ಟ್ರೀಯ ಕ್ರಿಕೆಟ್​ಗೆ ವಿದಾಯ ಹೇಳಿದ ಯುಎಇ ಕ್ರಿಕೆಟಿಗ ಉಸ್ಮಾನ್​

Dina Bhavishya
ಭವಿಷ್ಯ2 hours ago

Dina Bhavishya : ಈ ದಿನ ಆತ್ಮೀಯರೊಂದಿಗೆ ಕಾಲ ಕಳೆಯುವಿರಿ

UGC NET Exam
ದೇಶ6 hours ago

UGC NET Exam: ರದ್ದಾಗಿದ್ದ ಯುಜಿಸಿ ನೆಟ್‌ ಪರೀಕ್ಷೆಗೆ ಹೊಸ ದಿನಾಂಕ ಘೋಷಣೆ; ಪರೀಕ್ಷೆಗೆ ಹೊಸ ವಿಧಾನ, ಇಲ್ಲಿದೆ ವಿವರ‌

Vodafone Idea
ದೇಶ7 hours ago

Vodafone Idea: ಜಿಯೋ, ಏರ್‌ಟೆಲ್‌ ಬೆನ್ನಲ್ಲೇ ವೋಡಾಫೋನ್‌ ಐಡಿಯಾ ಪ್ಲಾನ್‌ ಬೆಲೆ ಏರಿಕೆ; ಹೀಗಿದೆ ವಿವರ

T20 World Cup 2024
ಪ್ರಮುಖ ಸುದ್ದಿ7 hours ago

T20 World Cup 2024 : ಭಾರತ ತಂಡವನ್ನು ಟೀಕಿಸಿದ ಮೈಕೆಲ್​ ವಾನ್​ಗೆ ತಿರುಗೇಟು ಕೊಟ್ಟ ಗಂಗೂಲಿ

CM SIddaramaiah
ಪ್ರಮುಖ ಸುದ್ದಿ7 hours ago

Siddaramaiah: ಅಮಿತ್‌ ಶಾ-ಸಿದ್ದರಾಮಯ್ಯ ಭೇಟಿ; ರಾಜ್ಯದ 5 ನಗರಗಳಲ್ಲಿ ಸೇಫ್‌ ಸಿಟಿ ಯೋಜನೆ ಜಾರಿಗೆ ಒತ್ತಾಯ

Religious Freedom
ದೇಶ9 hours ago

Religious Freedom: ಧಾರ್ಮಿಕ ಸ್ವಾತಂತ್ರ್ಯದ ಕುರಿತು ಅಮೆರಿಕ ಹುಸಿ ಕಳವಳ; ಭಾರತ ತಿರುಗೇಟು

Virat Kohli
ಪ್ರಮುಖ ಸುದ್ದಿ9 hours ago

Virat Kohli : ಫಾರ್ಮ್​ ಕಳೆದುಕೊಂಡಿರುವ ವಿರಾಟ್​ ಕೊಹ್ಲಿಯ ಬೆಂಬಲಕ್ಕೆ ನಿಂತ ಗಂಗೂಲಿ

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka Weather Forecast
ಮಳೆ12 hours ago

Karnataka Weather : ಅಬ್ಬಬ್ಬಾ.. ಮುಲ್ಕಿಯಲ್ಲಿ 30 ಸೆಂ.ಮೀ ಮಳೆ ದಾಖಲು; ವಾರಾಂತ್ಯದಲ್ಲೂ ಭಾರಿ ವರ್ಷಧಾರೆ

karnataka Rain
ಮಳೆ19 hours ago

Karnataka Rain : ಭಾರಿ ಮಳೆಗೆ ಪಾತಾಳ ಸೇರಿದ ಬಾವಿ; ಅಲೆಗಳ ಹೊಡೆತಕ್ಕೆ ಸಮುದ್ರಪಾಲಾದ ಮನೆ

Karnataka Weather Forecast
ಮಳೆ1 day ago

Karnataka Weather : ಭಾರಿ ಮಳೆ ಹಿನ್ನೆಲೆ ದಕ್ಷಿಣ ಕನ್ನಡಕ್ಕೆ ರೆಡ್ ಅಲರ್ಟ್; ಶುಕ್ರವಾರವೂ ಶಾಲೆಗಳಿಗೆ ರಜೆ ಘೋಷಣೆ

karnataka Weather Forecast
ಮಳೆ2 days ago

Karnataka Weather : ಭಾರಿ ಮಳೆಗೆ ಸೇತುವೆಯಿಂದ ಹೊಳೆಗೆ ಬಿದ್ದ ಕಾರು; ಮರ ಹಿಡಿದು ಪ್ರಾಣ ಉಳಿಸಿಕೊಂಡ ಸವಾರರು

Heart Attack
ಕೊಡಗು2 days ago

Heart Attack : ಕೊಡಗಿನಲ್ಲಿ ಹೃದಯಾಘಾತಕ್ಕೆ ಯುವತಿ ಬಲಿ; ಹೆಚ್ಚಾಯ್ತು ಅಲ್ಪಾಯುಷ್ಯದ ಭಯ

karnataka Rains Effected
ಮಳೆ2 days ago

Karnataka Rain : ಧಾರಾಕಾರ ಮಳೆಗೆ ಸಡಿಲಗೊಂಡ ಗುಡ್ಡಗಳು; ಧರೆ ಕುಸಿದು ಮಣ್ಣಿನಡಿ ಸಿಲುಕಿದ ಇಬ್ಬರು ಮಕ್ಕಳು

karnataka Weather Forecast
ಮಳೆ4 days ago

Karnataka Weather : ಕರಾವಳಿಯಲ್ಲಿ ಮುಂದುವರಿದ ವರುಣಾರ್ಭಟ; ಸಾಂಪ್ರದಾಯಿಕ ಮೀನುಗಾರಿಕೆಗೂ ಬ್ರೇಕ್

karnataka weather Forecast
ಮಳೆ1 week ago

Karnataka Weather : ರಭಸವಾಗಿ ಹರಿಯುವ ನೀರಲ್ಲಿ ಸಿಲುಕಿದ ಬೊಲೆರೋ; ಬಿರುಗಾಳಿ ಸಹಿತ ಮಳೆ ಎಚ್ಚರಿಕೆ

International Yoga Day 2024
ಕರ್ನಾಟಕ1 week ago

International Yoga Day 2024: ಎಲ್ಲೆಲ್ಲೂ ಯೋಗಾಯೋಗ‌ಕ್ಕೆ ಮಂಡಿಯೂರಿದ ಜನತೆ

Karnataka Weather Forecast
ಮಳೆ1 week ago

Karnataka Weather : ಬಾಗಲಕೋಟೆ, ಬೆಂಗಳೂರು ಸೇರಿ ಚಿಕ್ಕಮಗಳೂರಲ್ಲಿ ಸುರಿದ ಗಾಳಿ ಸಹಿತ ಮಳೆ

ಟ್ರೆಂಡಿಂಗ್‌