Site icon Vistara News

Road Accident: ಆಂಧ್ರಪ್ರದೇಶದಲ್ಲಿ ಆಟೋಗೆ ಬಸ್‌ ಡಿಕ್ಕಿ, 6 ಸಾವು

accident at Hubballi

ಕೋಲಾರ: ಆಂಧ್ರಪ್ರದೇಶದ ಕಾಕಿನಾಡ ಜಿಲ್ಲೆಯ ತಾಳರೇವು ಬೈಪಾಸ್ ರಸ್ತೆಯಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಆರು ಮಂದಿ ಸಾವಿಗೀಡಾಗಿದ್ದಾರೆ.

ಆಟೋಗೆ ಖಾಸಗಿ ಬಸ್ ಡಿಕ್ಕಿ ಹೊಡೆದು ಈ ದುರ್ಘಟನೆ ನಡೆದಿದೆ. ಅಪಘಾತದಲ್ಲಿ ಆರು ಮಂದಿ ಸಾವನ್ನಪ್ಪಿದ್ದು, ಐವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಗೊಂಡವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ.

ಭಾನುವಾರ ರಾತ್ರಿ ತಾಳರೇವು ಬೈಪಾಸ್ ರಸ್ತೆಯಲ್ಲಿ ಆಟೋ ಸಂಚರಿಸುತ್ತಿದ್ದಾಗ ಖಾಸಗಿ ಬಸ್ ಡಿಕ್ಕಿ ಹೊಡೆದಿದೆ. ಆಟೋದಲ್ಲಿ ಪ್ರಯಾಣಿಸುತ್ತಿದ್ದ ಆರು ಮಂದಿ ಸತ್ತಿದ್ದಾರೆ. ಬಸ್ ಅತಿವೇಗದಲ್ಲಿ ಬಂದು ಗುದ್ದಿದ್ದರಿಂದ ಆಟೋ ನಜ್ಜುಗುಜ್ಜಾಗಿದೆ. ಮೃತದೇಹಗಳು ಚೆಲ್ಲಾಪಿಲ್ಲಿಯಾಗಿ ಬಿದ್ದಿವೆ. ಬಸ್ ಡಿಕ್ಕಿ ಹೊಡೆದಾಗ ಆಟೋದಲ್ಲಿ ಎಂಟು ಮಂದಿ ಇದ್ದರು. ಮಾಹಿತಿ ಪಡೆದ ಪೊಲೀಸರು ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯಾಚರಣೆ ಆರಂಭಿಸಿದ್ದಾರೆ. ಮೃತರ ವಿವರಗಳು ಇನ್ನಷ್ಟೇ ತಿಳಿಯಬೇಕಿದೆ.

ಇದನ್ನೂ ಓದಿ: Road Accident: ಬೈಕ್‌ಗೆ ಆಂಬ್ಯುಲೆನ್ಸ್ ಡಿಕ್ಕಿ; ಸವಾರ ಸ್ಥಳದಲ್ಲೇ ಸಾವು

Exit mobile version