ಚಿಕ್ಕಬಳ್ಳಾಪುರ: ಎರಡು ಬೈಕ್‌ಗಳ ನಡುವೆ ಭೀಕರ ಅಪಘಾತ ಸಂಭವಿಸಿ (Road accident) ಇಬ್ಬರು ಸ್ಥಳದಲ್ಲೇ (Two youngsters died on spot) ಮೃತಪಟ್ಟಿದ್ದಾರೆ. ಚಿಂತಾಮಣಿ ತಾಲ್ಲೂಕಿನ ದೊಡ್ಡಗಂಜೂರು ಗ್ರಾಮದ ಬಳಿ ದುರ್ಘಟನೆ ಸಂಭವಿಸಿದ್ದು, ಮಧುಸೂಧನ್ (28) ಹಾಗೂ ರಾಜೇಶ್ (26) ಮೃತ ದುರ್ದೈವಿಗಳು.
ಮೃತರಲ್ಲಿ ಮಧುಸೂದನ್ ಕೋಲಾರ ಜಿಲ್ಲೆಯ ಬಂಗಾರಪೇಟೆ ತಾಲ್ಲೂಕಿನ ತಿಮ್ಮಾಪುರ ಗ್ರಾಮದವರಾದರೆ, ರಾಜೇಶ್ ಶ್ರೀನಿವಾಸಪುರ ತಾಲ್ಲೂಕಿನ ಯಮನಪಲ್ಲಿ ಗ್ರಾಮದವರು.
ಗುರುವಾರ ರಾತ್ರಿ ಎರಡು ಬೈಕ್‌ಗಳು ಪರಸ್ಪರ ಮುಖಾಮುಖಿ ಡಿಕ್ಕಿ ಹೊಡೆದು ಈ ದುರಂತ ಸಂಭವಿಸಿದೆ. ಹಿಂಬದಿ ಸವಾರರಾದ ಮಧುಸೂದನ್ ಹಾಗೂ ಪವನ್ ಗೆ ಕೂಡ ಗಂಭೀರ ಗಾಯಗಳಾಗಿವೆ.
ಗಾಯಾಳುಗಳನ್ನು ಕೋಲಾರದ ಆರ್ ಜಾಲಪ್ಟ ಆಸ್ಪತ್ರೆಗೆ ಸೇರಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಸ್ಥಳಕ್ಕೆ ಚಿಂತಾಮಣಿ ಗ್ರಾಮಾಂತರ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಚಿಕ್ಕಬಳ್ಳಾಪುರ: ನದಿಯಲ್ಲಿ ಮುಳುಗಿ ಬಾಲಕಿ ಆತ್ಮಹತ್ಯೆ
ಚಿಕ್ಕಬಳ್ಳಾಪುರದ ಉತ್ತರ ಪಿನಾಕಿನಿ ನದಿಯಲ್ಲಿ ಮುಳುಗಿ ಬಾಲಕಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ವಿದ್ಯಾ (15) ನದಿಯಲ್ಲಿ ಮುಳುಗಿ ಸಾವನ್ನಪ್ಪಿದ ಬಾಲಕಿ.
ಈಕೆ ಒಂಬತ್ತನೇ ತರಗತಿಯಲ್ಲಿ ಓದುತ್ತಿದ್ದು, ಚೆನ್ನಾಗಿ ಕಲಿಯುವಂತೆ ಪೋಷಕರು ಬುದ್ಧಿಮಾತು ಹೇಳಿದ್ದರಿಂದ ಆಕೆ ಸಿಟ್ಟುಗೊಂಡು ತನ್ನ ಜೀವನವನ್ನೇ ಅಂತ್ಯಗೊಳಿಸಿಕೊಂಡಿದ್ದಾಳೆ. ಗೌರಿಬಿದನೂರಿನಲ್ಲಿರುವ ಉತ್ತರ ಪೀನಾಕಿನಿ ನದಿ ದಡಕ್ಕೆ ಹೋದ ಆಕೆ ನೀರಿಗೆ ಹಾಕಿ ಪ್ರಾಣ ಕಳೆದುಕೊಂಡಿದ್ದಾಳೆ. ಗೌರಿಬಿದನೂರು ನಗರ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು ಪ್ರಕರಣ ದಾಖಲಾಗಿದೆ.
ವಿದ್ಯುತ್ ಕಂಬಕ್ಕೆ ಗುದ್ದಿದ ವಾಹನ, ಇಬ್ಬರ ಸಾವು
ಮೈಸೂರು: ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿಯಾಗಿ ಬಳಿಕ ವಿದ್ಯುತ್ ಆಘಾತಕ್ಕೆ ಒಳಗಾಗಿ ಇಬ್ಬರು ಪ್ರಾಣ ಕಳೆದುಕೊಂಡ ದಾರುಣ ಘಟನೆ ಮೈಸೂರಿನ ನಾಚನಹಳ್ಳಿ ಪಾಳ್ಯದ ಬಳಿ ನಡೆದಿದೆ. ಕಾಂಪೌಂಡ್ ಹಾಗೂ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಕಾರನ್ನು ಹೊರತರಲು ಯತ್ನಿಸುವ ವೇಳೆ ಈ ದುರಂತ ಸಂಭವಿಸಿದೆ.
ಮೈಸೂರಿನ ನಾಚನಹಳ್ಳಿ ಪಾಳ್ಯದ ಮಾನಂದವಾಡಿ ರಸ್ತೆಯಲ್ಲಿ ನಡೆದ ಘಟನೆಯಲ್ಲಿ ಅಶೋಕಪುರಂ ನಿವಾಸಿಗಳಾದ ಕಿರಣ್ ಹಾಗೂ ರವಿಕುಮಾರ್ ಮೃತಪಟ್ಟಿದ್ದಾರೆ. ಇವರ ನೆರವಿಗೆ ಬಂದ ರವಿ, ಸಂದೇಶ್, ಶಿವಕುಮಾರ್ ವಿದ್ಯುತ್ ಶಾಕ್ ನಿಂದ ಗಾಯ. ಕೆ.ಆರ್.ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಗುರುವಾರ ತಡರಾತ್ರಿ ಘಟನೆ ನಡೆದಿದೆ.
ಸಂಸದ ಶ್ರೀನಿವಾಸ್ ಪ್ರಸಾದ್ ರವರ ಸಂಬಂಧಿಕರಿಗೆ ಸೇರಿದ ಇನೋವಾ ಕಾರನ್ನು ಟ್ರಯಲ್ ನೋಡುವುದಾಗಿ ರವಿಕುಮಾರ್ ಪಡೆದಿದ್ದರು. ಮಾನಂದವಾಡಿ ರಸ್ತೆಯಲ್ಲಿ ರವಿಕುಮಾರ್, ಭಾಸ್ಕರ್, ರವಿ,ಸಂದೇಶ್ ಹಾಗೂ ಶಿವಕುಮಾರ್ ಆಶೋಕಪುರಂ ನತ್ತ ತೆರಳುತ್ತಿದ್ದ ವೇಳೆ ನಿಯಂತ್ರಣ ತಪ್ಪಿದ ಕಾರು ಕಾಂಪೌಂಡ್ ಗೆ ಡಿಕ್ಕಿ.
ಹೊಡೆದು ನಂತರ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದಿದೆ.
ಕಾರಿನಿಂದ ನಾಲ್ವರೂ ಹೊರಬಂದ ಅವರು ಕಾಂಪೌಂಡ್ ಹಾಗೂ ಕಂಬದ ನಡುವೆ ಸಿಲುಕಿದ ಕಾರನ್ನು ಹೊರತರಲು ಯತ್ನಿಸಿದ್ದಾರೆ. ಈ ವೇಳೆ ಆಟೋದಲ್ಲಿ ಬರುತ್ತಿದ್ದ ಡ್ರೈವರ್ ಕಿರಣ್ ಕುಮಾರ್ ನೆರವಿಗೆ ಬಂದಿದ್ದಾರೆ.
ಕಾರನ್ನು ಹೊರತರುವ ಯತ್ನದಲ್ಲಿದ್ದ ಇವರಿಗೆ ವಿದ್ಯುತ್ ಶಾಕ್ ಹೊಡೆದಿದೆ. ಹೈವೋಲ್ಟೇಜ್ ತಂತಿ ಸಂಪರ್ಕ ಸಾಧಿಸಿದ ಪರಿಣಾಮ ರವಿಕುಮಾರ್ ಕುಸಿದುಬಿದ್ದಿದ್ದಾರೆ. ನೆರವಿಗೆ ಬಂದ ಆಟೋ ಡ್ರೈವರ್ ಕಿರಣ್ ಸಹ ಮೃತಪಟ್ಟಿದ್ದಾರೆ. ಇವರಿಬ್ಬರ ನೆರವಿಗೆ ಬಂದ ರವಿ, ಸಂದೇಶ್, ಶಿವಕುಮಾರ್‌ಗೂ ಶಾಕ್ ಹೊಡೆದಿದೆ. ಕೆ.ಆರ್.ಟ್ರಾಫಿಕ್ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಇದನ್ನೂ ಓದಿ : Rain News : ಸೋರುವ ಮನೆಗೆ ಪ್ಲಾಸ್ಟಿಕ್ ಹಾಸಲು ಹೋದ ವ್ಯಕ್ತಿ ಮೇಲ್ಚಾವಣಿ ಕುಸಿದು ಸಾವು