Site icon Vistara News

Accident | ಬೈಕ್‌ಗೆ ಕ್ಯಾಂಟರ್ ಡಿಕ್ಕಿಯಾಗಿ ಇಬ್ಬರು ಸವಾರರ ಸಾವು

Accident

ಕೋಲಾರ: ಜಿಲ್ಲೆಯ ಶ್ರೀನಿವಾಸಪುರ ತಾಲೂಕು ಹೂಹಳ್ಳಿ ಬಳಿ ಬೈಕ್‌ಗೆ ಕ್ಯಾಂಟರ್ ಡಿಕ್ಕಿಯಾಗಿ(Accident) ಇಬ್ಬರು ಸವಾರರು ಸ್ಥಳದಲ್ಲೇ ಮೃತಪಟ್ಟಿದ್ದು, ಮತ್ತೊಬ್ಬರಿಗೆ ಗಂಭೀರ ಗಾಯಗಳಾಗಿವೆ.

ಹೂಹಳ್ಳಿ ಗ್ರಾಮದ ರತ್ನಮ್ಮ (42), ವೆಂಕಟರಾಮಪ್ಪ (47) ಮೃತರು. ಸುರೇಶ್ ಎಂಬಾತನಿಗೆ ಗಂಭೀರ ಗಾಯಗಳಾಗಿವೆ. ಹೂಹಳ್ಳಿಯಿಂದ ಜೊನ್ನಪಲ್ಲಿ ಗ್ರಾಮಕ್ಕೆ ಶನಿವಾರ ಹೋಗುತ್ತಿದ್ದಾಗ ಅಪಘಾತ ನಡೆದಿದೆ. ಅಪಘಾತದ ಬಳಿಕ ಕ್ಯಾಂಟರ್ ಚಾಲಕ ಪರಾರಿಯಾಗಿದ್ದಾನೆ. ಶ್ರೀನಿವಾಸಪುರ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ಪರಿಶೀಲನೆ ನಡೆಸಿದ್ದು, ಗಾಯಾಳುವನ್ನು ಶ್ರೀನಿವಾಸಪುರ ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ.

ಇದನ್ನೂ ಓದಿ | Electric shock | ನಾಮಫಲಕ ಅಳವಡಿಸುವಾಗ ವಿದ್ಯುತ್‌ ಸ್ಪರ್ಶ: ಇಬ್ಬರು ಛಾಯಾಗ್ರಾಹಕರ ದುರ್ಮರಣ

Exit mobile version