ನವದೆಹಲಿ: ಕರ್ನಾಟಕ ವಿಧಾನ ಪರಿಷತ್ ವಿರೋಧ ಪಕ್ಷದ ಮುಖ್ಯ ಸಚೇತಕ ಎನ್. ರವಿಕುಮಾರ್ ಅವರ ನೇತೃತ್ವದ ನಿಯೋಗವು ರಾಜ್ಯದ ಕೋಲಿ, ಕಬ್ಬಲಿಗ, ಗಂಗಾಮತಸ್ಥ ಸೇರಿ ಇತರೆ ಸಮುದಾಯಗಳನ್ನು ಪರಿಶಿಷ್ಟ ಪಂಗಡಕ್ಕೆ ಸೇರ್ಪಡೆ ಮಾಡುವ ಕುರಿತು ನವದೆಹಲಿಯಲ್ಲಿ ಕೇಂದ್ರ ಬುಡಕಟ್ಟು ಸಚಿವ ಅರ್ಜುನ್ ಮುಂಡಾ, ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಹಾಗೂ ರಿಜಿಸ್ಟ್ರಾರ್ ಜನರಲ್ ಆಫ್ ಇಂಡಿಯಾ ನಿರ್ದೇಶಕರನ್ನು ಭೇಟಿ ಮಾಡಿ, ಕೇಂದ್ರ ಸರ್ಕಾರವು ಕೇಳಿದ್ದ ಕೆಲ ಸ್ಪಷ್ಟನೆ ಮತ್ತು ಇತರೆ ಹೆಚ್ಚಿನ ಮಾಹಿತಿಯನ್ನು ನೀಡಿತು.
ಭೇಟಿ ವೇಳೆ ಆದಷ್ಟು ಬೇಗ ರಾಜ್ಯದ ಕೋಲಿ, ಕಬ್ಬಲಿಗ, ಗಂಗಾಮತಸ್ಥ ಸಮುದಾಯವನ್ನು ಪರಿಶಿಷ್ಟ ಪಂಗಡಕ್ಕೆ ಸೇರ್ಪಡೆಗೊಳಿಸಬೇಕೆಂದು ಕೇಂದ್ರ ಸರ್ಕಾರಕ್ಕೆ ರಾಜ್ಯದ ನಿಯೋಗದ ಎನ್. ರವಿಕುಮಾರ್ ಅವರು ಮನವಿ ಮಾಡಿದರು.
ಇದನ್ನೂ ಓದಿ | Narendra Modi: ಮೋದಿ ಭೇಟಿ; ಜ. 19ರಂದು ಕಲಬುರಗಿ ಏರ್‌ಪೋರ್ಟ್ ಸುತ್ತ ಡ್ರೋನ್ ಹಾರಾಟ ನಿಷೇಧ