ಗಂಗಾವತಿ: ತಾಲೂಕಿನ ಪ್ರಮುಖ ಧಾರ್ಮಿಕ ತಾಣವಾಗಿರುವ ಚಿಕ್ಕರಾಂಪುರದ ಅಂಜನಾದ್ರಿ (Anjanadri) ಬೆಟ್ಟದ ಆಂಜನೇಯನ ದೇವಸ್ಥಾನದಲ್ಲಿನ (Anjaneya Temple) ಕಾಣಿಕೆ ಹುಂಡಿಯಲ್ಲಿ (Koppala News) ಸಂಗ್ರಹವಾಗಿರುವ ಹಣ ಎಣಿಕೆ ಮಾಡಿದಾಗ ಐದು ದೇಶಗಳ ನಾಣ್ಯಗಳು ಪತ್ತೆಯಾಗಿವೆ.
ಸಹಾಯಕ ಆಯುಕ್ತ ಕ್ಯಾಪ್ಟನ್ ಮಹೇಶ ಮಾಲಗಿತ್ತಿ ಸೂಚನೆ ಮೆರೆಗೆ, ತಹಸೀಲ್ದಾರ್ ಯು. ನಾಗರಾಜ್ ನೇತೃತ್ವದಲ್ಲಿ ಕಂದಾಯ ಇಲಾಖೆ ಹಾಗೂ ದೇಗುಲ ಸಿಬ್ಬಂದಿ ಮಂಗಳವಾರ ಕಾಣಿಕೆ ಪೆಟ್ಟಿಗೆಯಲ್ಲಿ ಸಂಗ್ರಹವಾದ ಹಣ ಎಣಿಕೆ ನಡೆಸಿದರು. ಈ ಸಂದರ್ಭದಲ್ಲಿ ಪಾಕಿಸ್ತಾನ, ಮೊರಾಕ್ಕೊ, ಶ್ರೀಲಂಕಾ, ಅಮೆರಿಕಾ ಮತ್ತು ನೇಪಾಳ ದೇಶದ ನಾಣ್ಯಗಳು ಪತ್ತೆಯಾಗಿವೆ.
ಇದನ್ನೂ ಓದಿ: Bengaluru News: ಸಮಾಜಕ್ಕೆ ಸಂತೋಷ ನೀಡುವ ವ್ಯಕ್ತಿತ್ವ ರೂಪಿಸಿಕೊಳ್ಳಿ: ಪೇಜಾವರ ಶ್ರೀ
ಪಾಕಿಸ್ತಾನದ ಐದು ರೂಪಾಯಿ ಮುಖ ಬೆಲೆಯ ನಾಣ್ಯ, ಯುನೈಟೆಡ್ ಸ್ಟೇಟ್ ಆಫ್ ಆಮೆರಿಕಾದ ಒಂದು ಸೆಂಟ್, ಮೊರಾಕ್ಕೊದಾ ಒಂದು ದಿರಮ್, ನೇಪಾಳದ ಒಂದು ನಾಣ್ಯ ಹಾಗೂ ಶ್ರೀಲಂಕದ ಐದು ರೂಪಾಯಿ ನಾಣ್ಯಗಳು ಹುಂಡಿಯಲ್ಲಿ ಪತ್ತೆಯಾಗಿವೆ.
30.21 ಲಕ್ಷ ರೂ. ಸಂಗ್ರಹ
ಐದು ವಿದೇಶಿ ನಾಣ್ಯ ಸೇರಿದಂತೆ ಅಂಜನಾದ್ರಿ ದೇಗುಲದ ಕಾಣಿಕೆ ಹುಂಡಿಯಲ್ಲಿ ಒಟ್ಟು 31.21 ಲಕ್ಷ ರೂಪಾಯಿ ಮೊತ್ತದ ನಗದು ಹಣ ಸಂಗ್ರಹವಾಗಿದೆ. ಕಳೆದ ಮಾರ್ಚ್ 27 ರಿಂದ ಇಲ್ಲಿವರೆಗೂ ಅಂದರೆ ಮೇ 21ರ ವರೆಗಿನ ಒಟ್ಟು 56 ದಿನಗಳಲ್ಲಿ 31.21 ಲಕ್ಷ ಮೊತ್ತದ ಹಣ ಸಂಗ್ರಹವಾಗಿದೆ.
ಹುಂಡಿ ಎಣಿಕೆಯ ವೇಳೆ ಶಿರಸ್ತೇದಾರ್ ರವಿಕುಮಾರ ನಾಯಕ್ವಾಡಿ, ಕೃಷ್ಣವೇಣಿ, ಕಂದಾಯ ನಿರೀಕ್ಷಕರಾದ ಮಂಜುನಾಥ ಹಿರೇಮಠ್, ಮಹೇಶ್ ದಲಾಲ, ಹಾಲೇಶ ಗುಂಡಿ, ದೇಗುಲದ ವ್ಯವಸ್ಥಾಪಕ ವೆಂಕಟೇಶ ಹಾಗೂ ಸಿಬ್ಬಂದಿ ಇದ್ದರು.